ಪಾವಗಡದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಗೆ ಬೆಂಕಿ; ಕಂಪ್ಯೂಟರ್, ದಾಖಲೆಗಳು ಸುಟ್ಟು ಭಸ್ಮ ಪಾವಗಡದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಗೆ ಬೆಂಕಿ; ಕಂಪ್ಯೂಟರ್, ದಾಖಲೆಗಳು ಸುಟ್ಟು ಭಸ್ಮ ಪಾವಗಡ: ಪಟ್ಟಣದ ಬಸ್ ನಿಲ್ದಾಣದ ಎದುರಿನಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಪಾವಗಡ ಶಾಖೆಯ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ಸುಮಾರು 9 ಗಂಟೆಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವಘಡದಲ್ಲಿ ಕಚೇರಿಯಲ್ಲಿದ್ದ ಕಂಪ್ಯೂಟರ್‌ಗಳು, ಪ್ರಮುಖ ದಾಖಲೆಗಳು ಸೇರಿದಂತೆ ಕೆಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆ ಪಾವಗಡ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ಇಲಾಖೆ ಹಾಗೂ ಬೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಈ ಘಟನೆ ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಗ್ನಿ ಅವಘಡದ ನಿಖರ ಕಾರಣ ಹಾಗೂ ಸಂಭವಿಸಿದ ಹಾನಿಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಪಾವಗಡದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಗೆ ಬೆಂಕಿ; ಕಂಪ್ಯೂಟರ್, ದಾಖಲೆಗಳು ಸುಟ್ಟು ಭಸ್ಮ ಪಾವಗಡದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಗೆ ಬೆಂಕಿ; ಕಂಪ್ಯೂಟರ್, ದಾಖಲೆಗಳು ಸುಟ್ಟು ಭಸ್ಮ ಪಾವಗಡ: ಪಟ್ಟಣದ ಬಸ್ ನಿಲ್ದಾಣದ ಎದುರಿನಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಪಾವಗಡ ಶಾಖೆಯ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ಸುಮಾರು 9 ಗಂಟೆಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವಘಡದಲ್ಲಿ ಕಚೇರಿಯಲ್ಲಿದ್ದ ಕಂಪ್ಯೂಟರ್‌ಗಳು, ಪ್ರಮುಖ ದಾಖಲೆಗಳು ಸೇರಿದಂತೆ ಕೆಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆ ಪಾವಗಡ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ಇಲಾಖೆ ಹಾಗೂ ಬೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಈ ಘಟನೆ ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಗ್ನಿ ಅವಘಡದ ನಿಖರ ಕಾರಣ ಹಾಗೂ ಸಂಭವಿಸಿದ ಹಾನಿಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
- ಹುಳಿಯಾರು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಡಗರದ 'ಚಾಮುಂಡೇಶ್ವರಿ ವರ್ಧಂತಿ' ಆಚರಣೆ ಹುಳಿಯಾರು: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವದ ಪ್ರಯುಕ್ತ, ಮಂಗಳವಾರ ಪಟ್ಟಣದ ಗ್ರಾಮ ದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಅತ್ಯಂತ ಶ್ರದ್ಧಾ-ಭಕ್ತಿಗಳಿಂದ ಜರುಗಿದವು. ದೇವಸ್ಥಾನದಲ್ಲಿ ಎಲ್ಲಾ ಧಾರ್ಮಿಕ ವಿಧಿವಿಧಾನಗಳು ಸಾಂಗವಾಗಿ ನೆರವೇರಿದವು. ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಭಕ್ತರ ದಂಡು ನೆರೆದಿತ್ತು. ಬೆಳಗಿನ ವಿಶೇಷ ಪೂಜೆಗಳು: ಮುಂಜಾನೆ ಅಮ್ಮನವರಿಗೆ ವಿಶೇಷ ಅಭಿಷೇಕ ಹಾಗೂ ಕುಂಕುಮಾರ್ಚನೆ ನೆರವೇರಿತು. ಪೂಜಾ ಸಮಯದಲ್ಲಿ 'ಲಲಿತಾ ಸಹಸ್ರನಾಮ' ಪಠಣ ನಡೆಯಿತು. ನಂತರ ನಡೆದ ಮಹಾಮಂಗಳಾರತಿಯಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಪೂಜಾ ಕೈಂಕರ್ಯಗಳ ನಂತರ ನೆರೆದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ವಿಶೇಷ ಅಲಂಕಾರ:ವರ್ಧಂತಿ ಮಹೋತ್ಸವದ ಅಂಗವಾಗಿ ಅಮ್ಮನವರಿಗೆ ವಿಶೇಷವಾಗಿ ಸಿಂಹವಾಹಿನಿ ಅಲಂಕಾರ ಮಾಡಲಾಗಿದ್ದಯ ಭಕ್ತರ ಮನಸೆಳೆಯುವಂತಿತ್ತು. ಸಂಜೆ ಸ್ಥಳೀಯ ಭಜನಾ ತಂಡದಿಂದ ಸುಮಧುರವಾದ ಭಜನಾ ಕಾರ್ಯಕ್ರಮ ಜರುಗಿತು. ತದನಂತರ ಅಮ್ಮನವರ 'ಮದಾಲ್‌ಸಿ ಉತ್ಸವ'ವು ವಿಜೃಂಭಣೆಯಿಂದ ನಡೆಯಿತು. ಉತ್ಸವದ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ಗಣ್ಯರ ಉಪಸ್ಥಿತಿ:ಈ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಸ್ಥಾನದ ಧರ್ಮದರ್ಶಿಗಳಾದ ಎಸ್. ಆರ್. ಎಸ್. ದಯಾನಂದ್, ಕನ್ವಿನಿಯರ್ ಪಟೇಲ್ ರಾಜಣ್ಣ, ಹಾಗೂ ದೇವಾಲಯದ ಗೌಡರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು, ದೇವರ ಕೃಪೆಗೆ ಪಾತ್ರರಾದರು. ದಿನಪೂರ್ತಿ ನಡೆದ ಈ ಎಲ್ಲಾ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.1
- ಮಳೆ ಕೊರತೆಯಿಂದ ಬೆಳೆ ಹಾನಿ – ಕೊರಟಗೆರೆಯಲ್ಲಿ ರೈತರನ್ನು ಭೇಟಿ ಮಾಡಿ ಪರಿಸ್ಥಿತಿ ಪರಿಶೀಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ" ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ದುರ್ಗದಹಳ್ಳಿ, ವಡ್ಡರಹಳ್ಳಿ ಕ್ರಾಸ್ ಇರಕ ಸಂದ್ರ ಕಾಲೋನಿ ತಣ್ಣೆನಹಳ್ಳಿ ಜೋನಿಗರ ಹಳ್ಳಿ ತೋವಿನಕೆರೆ ಗ್ರಾಮಗಳಿಗೆ ಭೇಟಿ ನೀಡಿ ಮತ್ತು ಎಲೇರಾಂಪುರ ನರಸಿಹಂಗಿರಿ ಕ್ಷೇತ್ರ ಪೀಠಾಧ್ಯಕ್ಷರಾದ ಹನುಮಂತನಾಥಸ್ವಾಮೀಜಿಯವರನ್ನು ಭೇಟಿಮಾಡಿ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ. ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ರೈತರ ಸಮಸ್ಯೆಗಳನ್ನು ಆಲಿಸಿದರು. ರೈತರೊಂದಿಗೆ ನೇರವಾಗಿ ಸಂವಾದ ನಡೆಸಿದ ಅವರು, ಬೆಳೆ ನಷ್ಟದ ಕುರಿತು ಮಾಹಿತಿ ಪಡೆದು ಹೊಲಗಳ ಪರಿಸ್ಥಿತಿಯನ್ನು ವೀಕ್ಷಿಸಿದರು. ಈ ವೇಳೆ ರೈತರು ಮಳೆ ಅಭಾವದಿಂದ ಬೆಳೆಗಳು ಸಂಪೂರ್ಣವಾಗಿ ಒಣಗಿದ್ದು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದಾಗಿ ತಮ್ಮ ಅಳಲನ್ನು ವ್ಯಕ್ತಪಡಿಸಿದರು. ಸರ್ಕಾರ ತಕ್ಷಣವೇ ಬೆಳೆ ಹಾನಿ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರ ಹಾಗೂ ಪರಿಹಾರ ಧನವನ್ನು ಬಿಡುಗಡೆ ಮಾಡಬೇಕು ಎಂದು ರೈತರು ಮನವಿ ಮಾಡಿದರು. ರೈತರ ಮನವಿಯನ್ನು ಆಲಿಸಿದ ಬಿ.ವೈ. ವಿಜಯೇಂದ್ರ ಅವರು, ರೈತರ ಸಮಸ್ಯೆಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು, ಬೆಳೆ ಹಾನಿಗೆ ತುರ್ತು ಪರಿಹಾರ, ಬರ ಪರಿಹಾರ ಪ್ಯಾಕೇಜ್ ಹಾಗೂ ಅಗತ್ಯ ನೆರವು ನೀಡುವಂತೆ ಒತ್ತಾಯಿಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಮತ್ತು ತುಮಕುರು ನಗರ ಶಾಸಕ ಶ್ಯೋತಿ ಗಣೇಶ್ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ರೈತರು ಉಪಸ್ಥಿತರಿದ್ದರು.1
- *ವಿಬಿ-ಜಿ ರಾಮ್ ಜಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಅನುಷ್ಠಾನ ಇಲಾಖೆಗಳೊಂದಿಗೆ ಸಮನ್ವಯ ಸಭೆ* ಮಂಡ್ಯ, ಆಗಸ್ಟ್ 3: ಪ್ರಸಕ್ತ ಸಾಲಿನಲ್ಲಿ ವಿಕಸಿತ ಭಾರತ್ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) [VB-G RAM G] ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಅನುಷ್ಠಾನ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು CEO ನಂದಿನಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾ ಪಂಚಾಯತ್‌ನ ಕೆಸ್ವಾನ್ ಸಭಾಂಗಣದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಕ್ರಿಯಾ ಯೋಜನೆ ಸಿದ್ಧಪಡಿಸುವ ಕುರಿತು ನಡೆದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೃಷಿ, ಅರಣ್ಯ ಇಲಾಖೆ ಸೇರಿದಂತೆ ಎಲ್ಲಾ ಅನುಷ್ಠಾನ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಜಲ ಸಂರಕ್ಷಣೆ (Water Conservation) ಹಾಗೂ ಮಣ್ಣಿನ ತೇವಾಂಶ ಸಂರಕ್ಷಣೆ (Soil Moisture Conservation) ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ, ರೈತರಿಗೆ ದೀರ್ಘಾವಧಿಯಲ್ಲಿ ಅನುಕೂಲವಾಗುವ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ಅವರು ತಿಳಿಸಿದರು. ಇಲಾಖಾವಾರು ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚನೆ: ಎಲ್ಲಾ ಇಲಾಖೆಗಳ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಇಲಾಖಾವಾರು ಹಾಗೂ ಗ್ರಾಮ ಪಂಚಾಯಿತಿವಾರು ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಬೇಕು. ಹಿಂದಿನ ಮಾದರಿ ಅಂದಾಜುಪಟ್ಟಿಗಳ ಆಧಾರದ ಮೇಲೆ ಎಸ್ಟಿಮೇಟ್ ತಯಾರಿಸಿ, ಜಿಲ್ಲಾ ಡಿಪಿಸಿ (District Planning Cell) ಲಾಗಿನ್ ಮೂಲಕ ಅನುಮೋದನೆ ಪಡೆದು, ನಂತರ ಹೊಸ ವಿಬಿ-ಜಿ ರಾಮ್ ಜಿ ಸಾಫ್ಟ್‌ವೇರ್‌ನಲ್ಲಿ ಅಪ್‌ಲೋಡ್ ಮಾಡಿ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸುವಂತೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ಧಿ) ಲಕ್ಷ್ಮಿ ಪಿ., ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಹಾಯಕ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.1
- ಯಾರೇ ರಾಜೀನಾಮೆ ಕೊಟ್ಟರು 5 ನಿಮಿಷದಲ್ಲಿ ಸ್ವೀಕರಿಸುತ್ತೇನೆ:ಸಿಎಂ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶಾಸಕರ ರಾಜೀನಾಮೆ ಹೈಡ್ರಾಮಾಗಳು ಹಾಗೂ ಅಸಮಾಧಾನದ ಹೊಗೆಯಾಡುತ್ತಿರುವ ಬೆನ್ನಲ್ಲೇ, ಸಿಎಂ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನಿನ್ನೆ ರಾತ್ರಿಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಹೊಸದಾಗಿ ಹೇಳಲು ಏನೂ ಇಲ್ವ ಯಾರಾದರೂ ರಾಜೀನಾಮೆ ನೀಡಲು ಮುಂದಾದರೆ ಅದನ್ನು ಕೇವಲ 5 ನಿಮಿಷಗಳಲ್ಲಿ ಸ್ವೀಕರಿಸುವುದಾಗಿ ಖಡಕ್ ಸಂದೇಶ ರವಾನಿಸಿದ್ದಾರೆ. ಬೋರ್ಡ್ ಮತ್ತು ಕಾರ್ಪೊರೇಷನ್ ಸಂಸ್ಥೆಗಳಿಗೆ ಮೊದಲೇ ಹೇಳಿದಂತೆ 2.5 ವರ್ಷಗಳ ಅಧಿಕಾರಾವಧಿ ಮುಗಿದಿದ್ದು, ತಕ್ಷಣವೇ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ರಾಜಕೀಯದಲ್ಲಿ ರಾಜೀನಾಮೆ ನೀಡುವ ನಿರ್ಧಾರಗಳು ಸಾಮಾನ್ಯವಾಗಿದ್ದು, ಹೋಗುವವರನ್ನು ತಡೆಯಲು ಸಾಧ್ಯವಿಲ್ಲ. ಆದರೆ ಪಕ್ಷ ಮತ್ತು ರಾಜಕೀಯ ಭವಿಷ್ಯ ಮುಖ್ಯ ಎಂದುಕೊಳ್ಳುವವರು ತಾಳ್ಮೆಯಿಂದ ಇರಬೇಕು. ಪ್ರತಿಯೊಬ್ಬರಿಗೂ ಪಕ್ಷವೇ ತಾಯಿ ಇದ್ದಂತೆ, ಪಕ್ಷವಿದ್ದರೆ ಮಾತ್ರ ಅಧಿಕಾರ ಮತ್ತು ಭವಿಷ್ಯ ಸಾಧ್ಯ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.1
- ಸಚಿವ ಸ್ಥಾನದ ಭರವಸೆ ಈಡೇರಿದೆ, ಉಪಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ: ರುದ್ರಪ್ಪ ಲಮಾಣಿ ಬೆಂಗಳೂರು: "ಆರಂಭದಲ್ಲೇ ನನಗೆ ನೀಡಲಾಗಿದ್ದ ಸಚಿವ ಸ್ಥಾನದ ಭರವಸೆಯನ್ನು ಹೈಕಮಾಂಡ್ ಹಾಗೂ ರಾಜ್ಯ ನಾಯಕರು ಈಗ ಈಡೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ವಿಧಾನಸಭೆಯ ಉಪಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ" ಎಂದು ನೂತನ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ರಾಜೀನಾಮೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಉಪಸಭಾಪತಿ ಹುದ್ದೆಯನ್ನು ನೀಡುವ ಮುನ್ನವೇ ನನಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಈಗ ನನ್ನನ್ನು ಸಚಿವನನ್ನಾಗಿ ಮಾಡಲಾಗಿದೆ. ಈವರೆಗೆ ಉಪಸಭಾಪತಿಯಾಗಿ ಕಾರ್ಯನಿರ್ವಹಿಸಲು ಸಹಕರಿಸಿದ ಪ್ರತಿಯೊಬ್ಬರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು" ಎಂದರು. ತಮ್ಮ ಸಮುದಾಯದ ಪ್ರಾತಿನಿಧ್ಯದ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, "ನಮ್ಮ ಸಮುದಾಯದಿಂದ ಉಪಸಭಾಪತಿಯಾಗಿದ್ದ ಏಕೈಕ ವ್ಯಕ್ತಿ ನಾನಾಗಿದ್ದೆ. ಇದೀಗ ಉಪಸಭಾಪತಿ ಹುದ್ದೆಯ ನಂತರ ಮಂತ್ರಿಯಾಗುತ್ತಿರುವುದು ನನಗೆ ಅತ್ಯಂತ ಸಂತೋಷ ತಂದಿದೆ" ಎಂದು ಹರ್ಷ ಹಂಚಿಕೊಂಡರು.1
- ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದ್ದು ಈ ದಿನ ಸಂಜೆಯ ಸ್ನಾಕ್ಸ್ ಆಗಿ ಅಣೆಕಟ್ಟೆಯ ರೈತರು ಕಾರಪುರಿ, ಬೋಂಡಾ, ಬೆಂಡಿ ಮಸಾಲ ನೀಡಿದರು1
- ಮಂಡ್ಯ ದಲ್ಲಿ ವಿಶ್ವ ಸ್ತನ್ಯ ಪಾನದಿನಾಚರಣೆ ತಾಯಿಯ ಹಾಲೇ ಮಗುವಿನ ಮೊದಲ ನೈಸರ್ಗಿಕ ಲಸಿಕೆ ಮಂಡ್ಯ-ತಾಯಿಯ ಹಾಲು ಮಗುವಿನ ಮೊದಲ ಅತ್ಯುತ್ತಮ ಆಹಾರವಾಗಿದ್ದು, ಜನನವಾದ ಮೊದಲ ಒಂದು ಗಂಟೆಯೊಳಗೆ ಸ್ತನ್ಯಪಾನ ಆರಂಭಿಸಿ, ಮೊದಲ ಆರು ತಿಂಗಳು ಕೇವಲ ತಾಯಿಯ ಹಾಲನ್ನೇ ನೀಡುವುದು ಮಗುವಿನ ಆರೋಗ್ಯ, ಬೆಳವಣಿಗೆ ಹಾಗೂ ರೋಗನಿರೋಧಕ ಶಕ್ತಿಗೆ ಅತ್ಯಂತ ಅಗತ್ಯ ಎಂದು CEO ನಂದಿನಿ ಹೇಳಿದ್ರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಂದಿನಿ, ಈ ವರ್ಷದ ಘೋಷವಾಕ್ಯ "ಸುಸ್ಥಿರ ಜೀವನದ ಭದ್ರ ಅಡಿಪಾಯಕ್ಕಾಗಿ ಸ್ತನ್ಯಪಾನ ಪರಿಣಾಮಕಾರಿ ವಿಧಾನಗಳನ್ನು ಸದೃಢಗೊಳಿಸೋಣ ಎಂಬುದಾಗಿದ್ದು, ತಾಯಿಯ ಹಾಲಿನ ಮಹತ್ವದ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶ ಹೊಂದಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಸಿ. ಬೆಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗೀತಾಲಕ್ಷ್ಮಿ ಸಿ. ಜಿಲ್ಲಾ ಕ್ಷಯ ರೋಗ ಹಾಗೂ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಎಂ. ಎನ್ ಆಶಾಲತಾ ರವರು ಉಪಸ್ಥಿತರಿದ್ದರು1
- ಸಿನಿಮಾ ಕಥೆ ಹೇಳಿದ್ದಕ್ಕೆ ಗಲಾಟೆ! ಚಿತ್ರಮಂದಿರದಲ್ಲೇ ಕೈಕೈ ಮಿಲಾಯಿಸಿದ ಪ್ರೇಕ್ಷಕರು ಸಿನಿಮಾ ಕಥೆ ಹೇಳಿದ್ದಕ್ಕೆ ಗಲಾಟೆ! ಚಿತ್ರಮಂದಿರದಲ್ಲೇ ಕೈಕೈ ಮಿಲಾಯಿಸಿದ ಪ್ರೇಕ್ಷಕರು1