logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಧುವನಹಳ್ಳಿ ಗ್ರಾಮದಲ್ಲಿ ಶಾಲಾ ಮಕ್ಕಳಿಗೆ ಬಾಲ್ಯ ವಿವಾಹ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಅರಿವು ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ಕ ಪಡೆ ತಂಡವು ಮಧುವನಹಳ್ಳಿ ಗ್ರಾಮದಲ್ಲಿ ಶಾಲಾ ಮಕ್ಕಳಿಗೆ ಬಾಲ್ಯ ವಿವಾಹ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸಿ, ಪೊಲೀಸ್ ಸಹಾಯವಾಣಿ 112, ಮಹಿಳಾ ಸಹಾಯವಾಣಿ 181 ಮತ್ತು ಮಕ್ಕಳ ಸಹಾಯವಾಣಿ 1098 ಸಂಖ್ಯೆಗಳ ಬಗ್ಗೆ ಅರಿವು ಮೂಡಿಸಿದರು

2 hrs ago
user_S.Puttaswamyhonnur
S.Puttaswamyhonnur
Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
2 hrs ago
54536aa6-0a8b-4df2-8177-e852ddb37ac5

ಮಧುವನಹಳ್ಳಿ ಗ್ರಾಮದಲ್ಲಿ ಶಾಲಾ ಮಕ್ಕಳಿಗೆ ಬಾಲ್ಯ ವಿವಾಹ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಅರಿವು ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ಕ ಪಡೆ ತಂಡವು ಮಧುವನಹಳ್ಳಿ ಗ್ರಾಮದಲ್ಲಿ ಶಾಲಾ ಮಕ್ಕಳಿಗೆ ಬಾಲ್ಯ ವಿವಾಹ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸಿ, ಪೊಲೀಸ್ ಸಹಾಯವಾಣಿ 112, ಮಹಿಳಾ ಸಹಾಯವಾಣಿ 181 ಮತ್ತು ಮಕ್ಕಳ ಸಹಾಯವಾಣಿ 1098 ಸಂಖ್ಯೆಗಳ ಬಗ್ಗೆ ಅರಿವು ಮೂಡಿಸಿದರು

More news from ಕರ್ನಾಟಕ and nearby areas
  • ಚಾಮರಾಜನಗರದಲ್ಲಿ ಇಂದು ಕಾವೇರಿ ನೀರು ಬಿಡುವ CWRC ಆದೇಶವನ್ನು ಖಂಡಿಸಿ ಜಿಲ್ಲಾ ರೈತ ಹಿತ ರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು
    4
    ಚಾಮರಾಜನಗರದಲ್ಲಿ ಇಂದು ಕಾವೇರಿ ನೀರು ಬಿಡುವ CWRC ಆದೇಶವನ್ನು ಖಂಡಿಸಿ ಜಿಲ್ಲಾ ರೈತ ಹಿತ ರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು
    user_ಇರಸವಾಡಿ ಸಿದ್ದಪ್ಪಾಜಿ
    ಇರಸವಾಡಿ ಸಿದ್ದಪ್ಪಾಜಿ
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    10 hrs ago
  • ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿಯಿಂದ ಪ್ರತಿಭಟನೆ ಚಾಮರಾಜನಗರ: ಕಾವೇರಿ ನೀರು ಬಿಡುಗಡೆ ಮಾಡುವ ಆದೇಶವನ್ನು ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿಯ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರು ತಮಿಳುನಾಡು ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ನೀರು ಬಿಡುಗಡೆ ಆದೇಶದಿಂದ ರಾಜ್ಯದ ರೈತರಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ಸರ್ಕಾರವು ರೈತರ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
    1
    ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿಯಿಂದ ಪ್ರತಿಭಟನೆ
ಚಾಮರಾಜನಗರ: ಕಾವೇರಿ ನೀರು ಬಿಡುಗಡೆ ಮಾಡುವ ಆದೇಶವನ್ನು ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿಯ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನಾಕಾರರು ತಮಿಳುನಾಡು ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ನೀರು ಬಿಡುಗಡೆ ಆದೇಶದಿಂದ ರಾಜ್ಯದ ರೈತರಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ಸರ್ಕಾರವು ರೈತರ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
    user_ಚಾಮರಾಜನಗರ ಸುದ್ದಿ ಮನೆ
    ಚಾಮರಾಜನಗರ ಸುದ್ದಿ ಮನೆ
    ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    10 hrs ago
  • ಪಟ್ಟಣದಲ್ಲಿ ನಡೆದ ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಳವಳ್ಳಿ : ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ 2026 - 27 ನೇ ಸಾಲಿ‌ನ ನೂತನ ಪದಾಧಿಕಾರಿ ಗಳ ಪದಗ್ರಹಣ ಸಮಾರಂಭ ಶುಕ್ರವಾರ ಜರುಗಿತು. ಮಧ್ಯಾಹ್ನ 1.30 ರ ಸಮಯದಲ್ಲಿ ಪಟ್ಟಣದ ಹೊರ ವಲಯದ ಮೂಗನ ಕೊಪ್ಪಲು ಗ್ರಾಮದ ಬಳಿ ನಡೆದ ಆಕರ್ಷಕ ಸಮಾ ರಂಭದಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಲ. ಟಿ ಎಸ್ ಚಂದ್ರು, ಕಾರ್ಯದರ್ಶಿಯಾಗಿ ಈರೇಶ್, ಖಜಾಂಚಿಯಾಗಿ ಎನ್ ರವಿ, ಉಪಾಧ್ಯಕ್ಷರಾಗಿ ಗಿರೀಶ್, ರಾಜೇಶ್ ಗೌಡ, ಕ್ಲಬ್ ನ‌ ಕೋ ಆರ್ಡಿನೇಟರ್ ಆಗಿ ಅಣ್ಣೇಗೌಡರು, ಮೆಂಬರ್ ಶಿಫ್ ಛೇರ್ಮೆನ್ ಆಗಿ ಆರ್ ಎನ್ ಮಹೇಶ್, ಸರ್ವೀಸ್ ಛೇರ್ಮೆನ್ ಆಗಿ ಶಾಬುಲಿಂಗ ಸ್ವಾಮಿ, ಮಾರುಕಟ್ಟೆ ಹಾಗೂ ಕಮ್ಯೂನಿಕೇಷನ್ ಮುಖ್ಯಸ್ಥ ರಾಗಿ ರಘು, ನಿರ್ಧೇಶಕರಾಗಿ ಮಲ್ಲಿಕಾರ್ಜುಯ್ಯ, ಅಣ್ಣೇ ಗೌಡ್ರು, ಕೆ ಚಂದ್ರು ಎನ್ ನಂದೀಶ್ ಅಧಿಕಾರ ವಹಿಸಿ ಕೊಂಡರು. ಕ್ಲಬ್ ನ ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ. ಜಿ ಎ ರಮೇಶ್ ಅವರು ನೂತನ‌ ಪದಾಧಿಕಾರಿಗಳಿಗೆ ಪದಗ್ರಹಣ ಭೋದಿಸಿದರು. ಈ ವೇಳೆ ಮಾತನಾಡಿದ ಅವರು ಲಯನ್ಸ್ ಕ್ಲಬ್ ನ್ನು ಪ್ರತ್ಯೇಕ ವಿಭಾಗಗ ಳಾಗಿ ಮಾಡಿಕೊಂಡು ಸದಸ್ಯರ ಸಂಖ್ಯೆಗಳನ್ನು ಕಡಿಮೆ ಮಾಡಿ ಕೊಳ್ಳುವ ಬದಲಾಗಿ ಎಲ್ಲಾ ಕ್ಲಬ್ ಗಳು ಒಟ್ಟಾಗಿ ಸೇರಿದರೆ ಸದಸ್ಯ ರ ಬಲ ಹೆಚ್ಚಳದ ಜೊತೆಗೆ ದೊಡ್ಡ ಮಟ್ಟದಲ್ಲಿ ಕ್ಲಬ್ ನ ಸೇವಾ ಕಾರ್ಯಗಳನ್ನು ಸಹಕಾರಿಯಾಗುವುದರಿಂದ ಈ ನಿಟ್ಟಿನ ಎಲ್ಲಾ ಕ್ಲಬ್ ನ ಮುಖಂ ಡರು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಲ್ಟಿಪಲ್ ಕೌನ್ಸಿಲ್ ಛೇರ್ಮೆನ್ ಡಾ. ಎನ್ ಕೃಷ್ಣೇ ಗೌಡ ಅವರು ಕ್ಲಬ್ ನ ಸೇವಾ ಕಾರ್ಯಗಳು ಸದಸ್ಯರು ಹಾಗೂ ದಾನಿಗಳ ಧನಸಹಾಯದಿಂದ ನಡೆಯಬೇಕೆ ಹೊರತು ಯಾವುದೇ ಸರ್ಕಾರಿ ಹಾಗೂ ಸಂಸ್ಥೆಗಳ ನೆರವು ದೊರಕುವು ದಿಲ್ಲ ಹೀಗಾಗಿ ಸದಸ್ಯರು ತಮ್ಮ ದುಡಿಮೆಯ ಅಲ್ಪ ಭಾಗವನ್ನು ಸಂಸ್ಥೆಯ ಸೇವಾ ಚಟುವಟಿಕೆ ಗಳಿಗೆ ಮೀಸಲಿಡಬೇಕು ಎಂದರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟಿ ಎಸ್ ಚಂದ್ರು ಅವರು ಮಾತನಾಡಿ ತಮ್ಮ ಅಧಿಕಾರವ ಧಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಸಮಾಜ ಸೇವಾ ಕಾರ್ಯಗ ಳನ್ನು ನಡೆಸುವ ಗುರಿ ಹೊಂದಿದ್ದು ಇದಕ್ಕೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದು ಕೋರಿದರು. ನೂತನ ಸದಸ್ಯರಿಗೆ ಜಿಲ್ಲಾ ಉಪ ರಾಜ್ಯಪಾಲರಾದ ಎಂ ಸಿದ್ದೇಗೌಡ ಪ್ರತಿಜ್ಞಾವಿಧಿ ಬೋಧಿಸಿ ಸ್ವಾಗತಿಸಿದರು. ಇದೇ ವೇಳೆ ಸಮಾಜ ಸೇವಕ ಚಿಕ್ಕ ಮರಿಗೌಡ ಅವರನ್ನು ಸನ್ಮಾನಿಸ ಲಾಯಿತು. ಆರ್ಗೆನಿಕ್ ಫಾರಂ ನ ಜಿಲ್ಲಾ ಛೇರ್ಮೆನ್ ಲ. ಅಣ್ಣೇಗೌಡ, ನಿರ್ಗಮಿತ ಅಧ್ಯಕ್ಷರಾದ ಮಂಚಯ್ಯ, ಜಿಲ್ಲಾ ಕೋ ಆರ್ಡಿನೇಟರ್ ಎಂ ವಿ ನಂದೀಶ್, ಜಯಕುಮಾರ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.
    1
    ಪಟ್ಟಣದಲ್ಲಿ ನಡೆದ ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಮಳವಳ್ಳಿ : ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ  2026 - 27 ನೇ ಸಾಲಿ‌ನ ನೂತನ ಪದಾಧಿಕಾರಿ ಗಳ  ಪದಗ್ರಹಣ ಸಮಾರಂಭ ಶುಕ್ರವಾರ ಜರುಗಿತು. ಮಧ್ಯಾಹ್ನ 1.30 ರ ಸಮಯದಲ್ಲಿ ಪಟ್ಟಣದ ಹೊರ ವಲಯದ ಮೂಗನ ಕೊಪ್ಪಲು ಗ್ರಾಮದ ಬಳಿ ನಡೆದ ಆಕರ್ಷಕ ಸಮಾ ರಂಭದಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಲ. ಟಿ ಎಸ್ ಚಂದ್ರು, ಕಾರ್ಯದರ್ಶಿಯಾಗಿ ಈರೇಶ್, ಖಜಾಂಚಿಯಾಗಿ ಎನ್ ರವಿ, ಉಪಾಧ್ಯಕ್ಷರಾಗಿ ಗಿರೀಶ್, ರಾಜೇಶ್ ಗೌಡ, ಕ್ಲಬ್ ನ‌ ಕೋ ಆರ್ಡಿನೇಟರ್ ಆಗಿ ಅಣ್ಣೇಗೌಡರು, ಮೆಂಬರ್ ಶಿಫ್ ಛೇರ್ಮೆನ್ ಆಗಿ ಆರ್ ಎನ್ ಮಹೇಶ್, ಸರ್ವೀಸ್ ಛೇರ್ಮೆನ್ ಆಗಿ ಶಾಬುಲಿಂಗ ಸ್ವಾಮಿ, ಮಾರುಕಟ್ಟೆ ಹಾಗೂ ಕಮ್ಯೂನಿಕೇಷನ್ ಮುಖ್ಯಸ್ಥ ರಾಗಿ ರಘು, ನಿರ್ಧೇಶಕರಾಗಿ ಮಲ್ಲಿಕಾರ್ಜುಯ್ಯ, ಅಣ್ಣೇ ಗೌಡ್ರು, ಕೆ ಚಂದ್ರು ಎನ್ ನಂದೀಶ್ ಅಧಿಕಾರ ವಹಿಸಿ ಕೊಂಡರು. ಕ್ಲಬ್ ನ ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ. ಜಿ ಎ ರಮೇಶ್ ಅವರು ನೂತನ‌ ಪದಾಧಿಕಾರಿಗಳಿಗೆ ಪದಗ್ರಹಣ ಭೋದಿಸಿದರು. ಈ ವೇಳೆ ಮಾತನಾಡಿದ ಅವರು ಲಯನ್ಸ್ ಕ್ಲಬ್ ನ್ನು ಪ್ರತ್ಯೇಕ ವಿಭಾಗಗ ಳಾಗಿ  ಮಾಡಿಕೊಂಡು ಸದಸ್ಯರ ಸಂಖ್ಯೆಗಳನ್ನು ಕಡಿಮೆ ಮಾಡಿ ಕೊಳ್ಳುವ ಬದಲಾಗಿ ಎಲ್ಲಾ ಕ್ಲಬ್ ಗಳು ಒಟ್ಟಾಗಿ ಸೇರಿದರೆ ಸದಸ್ಯ ರ ಬಲ ಹೆಚ್ಚಳದ ಜೊತೆಗೆ ದೊಡ್ಡ ಮಟ್ಟದಲ್ಲಿ ಕ್ಲಬ್ ನ ಸೇವಾ ಕಾರ್ಯಗಳನ್ನು ಸಹಕಾರಿಯಾಗುವುದರಿಂದ ಈ ನಿಟ್ಟಿನ ಎಲ್ಲಾ ಕ್ಲಬ್ ನ ಮುಖಂ ಡರು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಲ್ಟಿಪಲ್ ಕೌನ್ಸಿಲ್ ಛೇರ್ಮೆನ್ ಡಾ. ಎನ್ ಕೃಷ್ಣೇ ಗೌಡ ಅವರು ಕ್ಲಬ್ ನ ಸೇವಾ  ಕಾರ್ಯಗಳು ಸದಸ್ಯರು ಹಾಗೂ ದಾನಿಗಳ ಧನಸಹಾಯದಿಂದ ನಡೆಯಬೇಕೆ ಹೊರತು ಯಾವುದೇ ಸರ್ಕಾರಿ ಹಾಗೂ ಸಂಸ್ಥೆಗಳ ನೆರವು ದೊರಕುವು ದಿಲ್ಲ ಹೀಗಾಗಿ ಸದಸ್ಯರು ತಮ್ಮ ದುಡಿಮೆಯ ಅಲ್ಪ ಭಾಗವನ್ನು ಸಂಸ್ಥೆಯ ಸೇವಾ ಚಟುವಟಿಕೆ ಗಳಿಗೆ ಮೀಸಲಿಡಬೇಕು ಎಂದರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟಿ ಎಸ್ ಚಂದ್ರು ಅವರು ಮಾತನಾಡಿ ತಮ್ಮ ಅಧಿಕಾರವ ಧಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಸಮಾಜ ಸೇವಾ ಕಾರ್ಯಗ ಳನ್ನು ನಡೆಸುವ ಗುರಿ ಹೊಂದಿದ್ದು ಇದಕ್ಕೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದು ಕೋರಿದರು.  ನೂತನ ಸದಸ್ಯರಿಗೆ ಜಿಲ್ಲಾ ಉಪ ರಾಜ್ಯಪಾಲರಾದ ಎಂ ಸಿದ್ದೇಗೌಡ ಪ್ರತಿಜ್ಞಾವಿಧಿ ಬೋಧಿಸಿ ಸ್ವಾಗತಿಸಿದರು. ಇದೇ ವೇಳೆ ಸಮಾಜ ಸೇವಕ ಚಿಕ್ಕ ಮರಿಗೌಡ ಅವರನ್ನು ಸನ್ಮಾನಿಸ ಲಾಯಿತು.
ಆರ್ಗೆನಿಕ್ ಫಾರಂ ನ ಜಿಲ್ಲಾ ಛೇರ್ಮೆನ್ ಲ. ಅಣ್ಣೇಗೌಡ, ನಿರ್ಗಮಿತ ಅಧ್ಯಕ್ಷರಾದ ಮಂಚಯ್ಯ, ಜಿಲ್ಲಾ ಕೋ ಆರ್ಡಿನೇಟರ್ ಎಂ ವಿ ನಂದೀಶ್, ಜಯಕುಮಾರ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    14 hrs ago
  • *ಅರ್ಹ ಮತದಾರರು ಹೊರಗುಳಿಯದಂತೆ, ಅನರ್ಹರು ಸೇರ್ಪಡೆಯಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ- ಡಾ. ಕುಮಾರ ಮಂಡ್ಯ, ಜುಲೈ 31: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕಾರ್ಯವನ್ನು ನಿಗದಿತ ವೇಳಾಪಟ್ಟಿಯಂತೆ ಪಾರದರ್ಶಕ ಹಾಗೂ ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ಮತದಾರರು ಪಟ್ಟಿಗೆ ಸೇರ್ಪಡೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿಯ ಶುದ್ಧತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವುದು ಚುನಾವಣಾ ಆಯೋಗದ ಪ್ರಮುಖ ಆದ್ಯತೆಯಾಗಿದ್ದು, ಪ್ರತಿಯೊಂದು ಮಾಹಿತಿಯನ್ನು ನಿಖರವಾಗಿ ಪರಿಶೀಲಿಸಿ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಮನೆ ಮನೆಗೆ ಭೇಟಿ ನೀಡಿ ವಿತರಿಸಲಾದ ಗಣತಿ ನಮೂನೆಗಳನ್ನು ಹಿಂಪಡೆಯುವ ಕಾರ್ಯ ಪ್ರಗತಿಯಲ್ಲಿದ್ದು, ಆಗಸ್ಟ್ 8, 2026 ನಮೂನೆ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮತದಾರರು ಭರ್ತಿ ಮಾಡಿದ ನಮೂನೆಗಳನ್ನು ನಿಗದಿತ ಅವಧಿಯೊಳಗೆ ಹಿಂದಿರುಗಿಸುವ ಮೂಲಕ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಕಸ ವಿಲೇವಾರಿ ವಾಹನಗಳಲ್ಲಿ ಜಿಂಗಲ್‌ಗಳನ್ನು ಅಳವಡಿಸಿ ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜಿಲ್ಲೆಯಲ್ಲಿ ಒಟ್ಟು 15,75,849 ಮತದಾರರ ಪೈಕಿ ಇದುವರೆಗೆ 13,94,203 (88.47%) ಮತದಾರರ ಗಣತಿ ನಮೂನೆಗಳನ್ನು ಗಣಕೀಕರಣ ಮಾಡಲಾಗಿದೆ. ಜೊತೆಗೆ 1,49,347 (9.48%) ಮತದಾರರನ್ನು ASDDO (Absent, Shifted, Death, Duplicate, Others) ವಿಭಾಗದಡಿ ಗುರುತಿಸಲಾಗಿದೆ ಎಂದು ಮಾಹಿತಿ ನೀಡಲಾಯಿತು. ಗುರುತಿಸಲಾದವರ ಪೈಕಿ 41,589 ಮಂದಿ ಮೃತ ಮತದಾರರು, 17,240 ಮಂದಿ ಗೈರು ಮತದಾರರು, 76,720 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿರುವ ಮತದಾರರು, 13,377 ಮಂದಿ ಪುನರಾವರ್ತಿತ ಮತದಾರರು ಹಾಗೂ 421 ಮಂದಿ ಗಣತಿ ನಮೂನೆಯನ್ನು ಹಿಂದಿರುಗಿಸಲು ನಿರಾಕರಿಸಿರುವ ಮತದಾರರಾಗಿದ್ದಾರೆ ಎಂದು ಸಭೆಯಲ್ಲಿ ವಿವರಿಸಿದರು. ಮನೆ ಮನೆ ಸಮೀಕ್ಷೆಯಲ್ಲಿ ಈಗಾಗಲೇ ವಿತರಿಸಲಾದ ನಮೂನೆಗಳ ಪೈಕಿ 32,299 (2.05%) ನಮೂನೆಗಳ ಸಂಗ್ರಹಣೆ ಹಾಗೂ ಗಣಕೀಕರಣ ಬಾಕಿಯಿದ್ದು, ಮುಂದಿನ ಮೂರುರಿಂದ ನಾಲ್ಕು ದಿನಗಳೊಳಗೆ ಈ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಪ್ರತಿ ದಿನದ ಪ್ರಗತಿ ವಿವರವನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಮಾಧ್ಯಮಗಳಿಗೆ ನಿಯಮಿತವಾಗಿ ನೀಡಲಾಗುತ್ತಿದ್ದು, ಸಂಪೂರ್ಣ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯೊಂದಿಗೆ ಈ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಇದೇ ವೇಳೆ, ASDDO ವಿಭಾಗದಡಿ ಗುರುತಿಸಲಾದ ಮತದಾರರ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಲು ವಿಶೇಷ ತಂಡಗಳನ್ನು ರಚಿಸಿ ಮರುಪರಿಶೀಲನೆ ನಡೆಸುವಂತೆ ಮೇಲ್ವಿಚಾರಕರಿಗೆ ಸೂಚನೆ ನೀಡಲಾಗುತ್ತದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ತಪ್ಪದೇ ಉಳಿಯುವಂತೆ ಹಾಗೂ ಅನರ್ಹರ ಸೇರ್ಪಡೆಯಾಗದಂತೆ ನಿಖರ ಪರಿಶೀಲನೆಗೆ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು. ಆಗಸ್ಟ್ 17, 2026ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಬಳಿಕ ಆಗಸ್ಟ್ 17ರಿಂದ ಸೆಪ್ಟೆಂಬರ್ 16, 2026ರವರೆಗೆ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುವುದು. ಈ ಅವಧಿಯನ್ನು ಸದುಪಯೋಗಪಡಿಸಿಕೊಂಡು ಮತದಾರರು ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ,ಜಿಲ್ಲಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ರಾದ ರವಿಶಂಕರ್ ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಉಪಸ್ಥಿತರಿದ್ದರು.
    1
    *ಅರ್ಹ ಮತದಾರರು ಹೊರಗುಳಿಯದಂತೆ, ಅನರ್ಹರು ಸೇರ್ಪಡೆಯಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ- ಡಾ. ಕುಮಾರ
ಮಂಡ್ಯ, ಜುಲೈ 31: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕಾರ್ಯವನ್ನು ನಿಗದಿತ ವೇಳಾಪಟ್ಟಿಯಂತೆ ಪಾರದರ್ಶಕ ಹಾಗೂ ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ಮತದಾರರು ಪಟ್ಟಿಗೆ ಸೇರ್ಪಡೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿಯ ಶುದ್ಧತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವುದು ಚುನಾವಣಾ ಆಯೋಗದ ಪ್ರಮುಖ ಆದ್ಯತೆಯಾಗಿದ್ದು, ಪ್ರತಿಯೊಂದು ಮಾಹಿತಿಯನ್ನು ನಿಖರವಾಗಿ ಪರಿಶೀಲಿಸಿ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಮನೆ ಮನೆಗೆ ಭೇಟಿ ನೀಡಿ ವಿತರಿಸಲಾದ ಗಣತಿ ನಮೂನೆಗಳನ್ನು ಹಿಂಪಡೆಯುವ ಕಾರ್ಯ ಪ್ರಗತಿಯಲ್ಲಿದ್ದು, ಆಗಸ್ಟ್ 8, 2026 ನಮೂನೆ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮತದಾರರು ಭರ್ತಿ ಮಾಡಿದ ನಮೂನೆಗಳನ್ನು ನಿಗದಿತ ಅವಧಿಯೊಳಗೆ ಹಿಂದಿರುಗಿಸುವ ಮೂಲಕ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಕಸ ವಿಲೇವಾರಿ ವಾಹನಗಳಲ್ಲಿ ಜಿಂಗಲ್‌ಗಳನ್ನು ಅಳವಡಿಸಿ ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 15,75,849 ಮತದಾರರ ಪೈಕಿ ಇದುವರೆಗೆ 13,94,203 (88.47%) ಮತದಾರರ ಗಣತಿ ನಮೂನೆಗಳನ್ನು ಗಣಕೀಕರಣ ಮಾಡಲಾಗಿದೆ. ಜೊತೆಗೆ 1,49,347 (9.48%) ಮತದಾರರನ್ನು ASDDO (Absent, Shifted, Death, Duplicate, Others) ವಿಭಾಗದಡಿ ಗುರುತಿಸಲಾಗಿದೆ ಎಂದು ಮಾಹಿತಿ ನೀಡಲಾಯಿತು.
ಗುರುತಿಸಲಾದವರ ಪೈಕಿ 41,589 ಮಂದಿ ಮೃತ ಮತದಾರರು, 17,240 ಮಂದಿ ಗೈರು ಮತದಾರರು, 76,720 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿರುವ ಮತದಾರರು, 13,377 ಮಂದಿ ಪುನರಾವರ್ತಿತ ಮತದಾರರು ಹಾಗೂ 421 ಮಂದಿ ಗಣತಿ ನಮೂನೆಯನ್ನು ಹಿಂದಿರುಗಿಸಲು ನಿರಾಕರಿಸಿರುವ ಮತದಾರರಾಗಿದ್ದಾರೆ ಎಂದು ಸಭೆಯಲ್ಲಿ ವಿವರಿಸಿದರು.
ಮನೆ ಮನೆ ಸಮೀಕ್ಷೆಯಲ್ಲಿ ಈಗಾಗಲೇ ವಿತರಿಸಲಾದ ನಮೂನೆಗಳ ಪೈಕಿ 32,299 (2.05%) ನಮೂನೆಗಳ ಸಂಗ್ರಹಣೆ ಹಾಗೂ ಗಣಕೀಕರಣ ಬಾಕಿಯಿದ್ದು, ಮುಂದಿನ ಮೂರುರಿಂದ ನಾಲ್ಕು ದಿನಗಳೊಳಗೆ ಈ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಪ್ರತಿ ದಿನದ ಪ್ರಗತಿ ವಿವರವನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಮಾಧ್ಯಮಗಳಿಗೆ ನಿಯಮಿತವಾಗಿ ನೀಡಲಾಗುತ್ತಿದ್ದು, ಸಂಪೂರ್ಣ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯೊಂದಿಗೆ ಈ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ, ASDDO ವಿಭಾಗದಡಿ ಗುರುತಿಸಲಾದ ಮತದಾರರ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಲು ವಿಶೇಷ ತಂಡಗಳನ್ನು ರಚಿಸಿ ಮರುಪರಿಶೀಲನೆ ನಡೆಸುವಂತೆ ಮೇಲ್ವಿಚಾರಕರಿಗೆ ಸೂಚನೆ ನೀಡಲಾಗುತ್ತದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ತಪ್ಪದೇ ಉಳಿಯುವಂತೆ ಹಾಗೂ ಅನರ್ಹರ ಸೇರ್ಪಡೆಯಾಗದಂತೆ ನಿಖರ ಪರಿಶೀಲನೆಗೆ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಆಗಸ್ಟ್ 17, 2026ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಬಳಿಕ ಆಗಸ್ಟ್ 17ರಿಂದ ಸೆಪ್ಟೆಂಬರ್ 16, 2026ರವರೆಗೆ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುವುದು. ಈ ಅವಧಿಯನ್ನು ಸದುಪಯೋಗಪಡಿಸಿಕೊಂಡು ಮತದಾರರು ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ,ಜಿಲ್ಲಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ರಾದ ರವಿಶಂಕರ್ ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಉಪಸ್ಥಿತರಿದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    1 hr ago
  • All About,Anyone when if question them for Transparency they will Anytime Speak Contridectary Statements and blaming the Residents *ಭಾರತ ನಲ್ಲಿ ವೈರಲ್*
    1
    All About,Anyone when if question them for Transparency they will Anytime Speak Contridectary Statements and blaming the Residents 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
  • ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ
    1
    ಕನ್ನಡ ಸ್ಯಾಂಡಲ್ ವುಡ್ ಹೀರೋ  ರಾವಣ ಪಾತ್ರದಲ್ಲಿ  ಯಶ್ ಅವರು  ಕಂಡುಬಂದ ದೃಶ್ಯ  
ಕನ್ನಡ ಸ್ಯಾಂಡಲ್ ವುಡ್ ಹೀರೋ  ರಾವಣ ಪಾತ್ರದಲ್ಲಿ  ಯಶ್ ಅವರು  ಕಂಡುಬಂದ ದೃಶ್ಯ
    user_ವೇದಾ ರಣ್ಯಾ
    ವೇದಾ ರಣ್ಯಾ
    ಮೈಸೂರು, ಮೈಸೂರು, ಕರ್ನಾಟಕ•
    2 hrs ago
  • ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹಿಂಪಡೆಯುವಂತೆ ಮಲ್ಲುಯರಗಂಬಳ್ಳಿ, ಆಗ್ರಹ ಚಾಮರಾಜನಗರ : ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ತಮಿಳುನಾಡು ಸರ್ಕಾರ, ಕಾವೇರಿ ನೀರು ವಿಯಂತ್ರಣ ಸಮಿತಿ, ತಮಿಳುನಾಡು ಮುಖ್ಯಮಂತ್ರಿ ವಿಜಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ವೇದಿಕೆ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಮಾತನಾಡಿ, ಕಾವೇರಿ ನೀರು ನಿಯಂತ್ರಣ ಸಮಿತಿಯು ಕಾವೇರಿಯಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3.500 ಕ್ಯೂಸೆಕ್‌ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದು ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಕುಡಿಯುವುದಕ್ಕೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನಲ್ಲಿ ಬೆಳೆ ಬೆಳೆಯುವುದಕ್ಕೆ ನೀರು ಹರಿಸುವುದು ಎಷ್ಟು ಸರಿ ? ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಒಪ್ಪಿಕೊಳ್ಳಬಾದರು, ಒಂದು ಹನಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿದರು. ಕರ್ನಾಟಕ ಬಂದ್‌ ಸಂಪೂರ್ಣ ಬೆಂಬಲ್ಲ: ಜಿಲ್ಲಾ ಗೌರವಾಧ್ಯಕ್ಷ ಪಿ.ಲಿಂಗರಾಜು ಮಾತನಾಡಿ, ರಾಜ್ಯ ಸರ್ಕಾರ ಕಳೆದ ನಾಲೈದು ದಿನಗಳಿಂದ ಕದ್ದು ಮುಚ್ಚಿ, ರಾತ್ರೋರಾತ್ರಿಗೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಅತ್ಯಂತ ಖಂಡನೀಯವಾದದ್ದು, ರಾಜ್ಯದಲ್ಲಿ ಬರಗಾಲ ಆವರಿಸಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ರಾಜ್ಯದ ಜನತೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಇದು. ರಾಜ್ಯದ ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು. ಇದನ್ನು ಖಂಡಿಸಿ ಕನ್ನಡ ಚಳವಳಿ ಕರೆ ನೀಡಿರುವ ಕರ್ನಾಟಕ ಬಂದ್‌ ಸಂಪೂರ್ಣ ಬೆಂಬಲವನ್ನು ನಮ್ಮ ಸಂಘಟನೆ ನೀಡಲಿದೆ. ಮುಖ್ಯಮಂತ್ರಿಗಳು ತಮಿಳುನಾಡಿಗೆ ನೀರು ಬಿಟ್ಟರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಶಬಾಜ್‌ ಷರೀಫ್, ಗೌರವ ಸಲಹೆಗಾರ ಸೈಯದ್ ಮುಜಾಮಿಲ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಮೋಹನ್‌ಕುಮಾ‌ರ್. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಾಲಿಕ್, ಶಿವಮೂರ್ತಿ, ಸೋಯಿಬ್, ಪ್ರಧಾನ ಕಾರ್ಯದರ್ಶಿ ಶಿವಮ್ಮ, ತಾಲೂಕು ಅಧ್ಯಕ್ಷ ಮಹದೇವಪ್ರಸಾದ್, ಪ್ರಧಾನಕಾರ್ಯದರ್ಶಿ ಸೋಮು, ಸಹ ಕಾರ್ಯದರ್ಶಿ ಅಜಯ್, ಮೊಹಮ್ಮದ್, ಸೈಯದ್ ರಿಯಾಜ್‌ ಅಹಮದ್‌, ನಾಸೀರ್‌ಉಲ್ಲಾ, ಅಬ್ದುಲ್ ಸುಭಾನ್, ಚಿಕ್ಕಅಂಕಶೆಟ್ಟಿ ಇತರರು ಭಾಗವಹಿಸಿದ್ದರು.
    4
    ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ 
ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ 
ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹಿಂಪಡೆಯುವಂತೆ ಮಲ್ಲುಯರಗಂಬಳ್ಳಿ, ಆಗ್ರಹ
ಚಾಮರಾಜನಗರ : ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆ ನಡೆಸಿ, ತಮಿಳುನಾಡು ಸರ್ಕಾರ, ಕಾವೇರಿ ನೀರು ವಿಯಂತ್ರಣ ಸಮಿತಿ, ತಮಿಳುನಾಡು ಮುಖ್ಯಮಂತ್ರಿ ವಿಜಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ವೇದಿಕೆ ಜಿಲ್ಲಾಧ್ಯಕ್ಷ ಮಲ್ಲು ಯರಗಂಬಳ್ಳಿ ಮಾತನಾಡಿ, ಕಾವೇರಿ ನೀರು ನಿಯಂತ್ರಣ ಸಮಿತಿಯು ಕಾವೇರಿಯಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3.500 ಕ್ಯೂಸೆಕ್‌ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿರುವುದು ಖಂಡನೀಯ. ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕುಡಿಯುವುದಕ್ಕೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿನಲ್ಲಿ ಬೆಳೆ ಬೆಳೆಯುವುದಕ್ಕೆ ನೀರು ಹರಿಸುವುದು ಎಷ್ಟು ಸರಿ ? ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಒಪ್ಪಿಕೊಳ್ಳಬಾದರು, ಒಂದು ಹನಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿದರು.
ಕರ್ನಾಟಕ ಬಂದ್‌ ಸಂಪೂರ್ಣ ಬೆಂಬಲ್ಲ: ಜಿಲ್ಲಾ ಗೌರವಾಧ್ಯಕ್ಷ ಪಿ.ಲಿಂಗರಾಜು ಮಾತನಾಡಿ, ರಾಜ್ಯ ಸರ್ಕಾರ ಕಳೆದ ನಾಲೈದು ದಿನಗಳಿಂದ ಕದ್ದು ಮುಚ್ಚಿ, ರಾತ್ರೋರಾತ್ರಿಗೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಅತ್ಯಂತ ಖಂಡನೀಯವಾದದ್ದು, ರಾಜ್ಯದಲ್ಲಿ ಬರಗಾಲ ಆವರಿಸಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ರಾಜ್ಯದ ಜನತೆ ಸಂಕಷ್ಟದಲ್ಲಿ ಸಿಲುಕಿದ್ದಾರೆ ಇದು. ರಾಜ್ಯದ ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು. ಇದನ್ನು ಖಂಡಿಸಿ ಕನ್ನಡ ಚಳವಳಿ ಕರೆ ನೀಡಿರುವ ಕರ್ನಾಟಕ ಬಂದ್‌ ಸಂಪೂರ್ಣ ಬೆಂಬಲವನ್ನು ನಮ್ಮ ಸಂಘಟನೆ ನೀಡಲಿದೆ. ಮುಖ್ಯಮಂತ್ರಿಗಳು ತಮಿಳುನಾಡಿಗೆ ನೀರು ಬಿಟ್ಟರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಶಬಾಜ್‌ ಷರೀಫ್, ಗೌರವ ಸಲಹೆಗಾರ ಸೈಯದ್ ಮುಜಾಮಿಲ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಮೋಹನ್‌ಕುಮಾ‌ರ್. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಾಲಿಕ್, ಶಿವಮೂರ್ತಿ, ಸೋಯಿಬ್, ಪ್ರಧಾನ ಕಾರ್ಯದರ್ಶಿ ಶಿವಮ್ಮ, ತಾಲೂಕು ಅಧ್ಯಕ್ಷ ಮಹದೇವಪ್ರಸಾದ್, ಪ್ರಧಾನಕಾರ್ಯದರ್ಶಿ ಸೋಮು, ಸಹ ಕಾರ್ಯದರ್ಶಿ ಅಜಯ್, ಮೊಹಮ್ಮದ್, ಸೈಯದ್ ರಿಯಾಜ್‌ ಅಹಮದ್‌, ನಾಸೀರ್‌ಉಲ್ಲಾ, ಅಬ್ದುಲ್ ಸುಭಾನ್, ಚಿಕ್ಕಅಂಕಶೆಟ್ಟಿ ಇತರರು ಭಾಗವಹಿಸಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    5 hrs ago
  • ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತ ಕೈಜೋಡಿಸಬೇಕು-ವೆಂಕಟೇಶ್ ಸಮಾಜವನ್ನು ಡ್ರಗ್ಸ್ ಹಾಗೂ ಮಾದಕ ವಸ್ತುಗಳ ಹಾವಳಿಯಿಂದ ಮುಕ್ತಗೊಳಿಸಲು ಯುವಜನತೆ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವ್ಯಸನಗಳಿಂದ ದೂರವಿರುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯವೆಂಕಟೇಶ್ ತಿಳಿಸಿದರು. ಇಂದು ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಡ್ಯ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಡ್ಯ. ಪೊಲೀಸ್‌ ಇಲಾಖೆ ಹಾಗೂ ಮಂಡ್ಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ಮ.ನಿ.ಪ್ರ.ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ* ವ್ಯಸನ ಮುಕ್ತ ದಿನಾಚರಣೆ ಮಾದಕ (ಡ್ರಗ್ಸ್) ವ್ಯಸನ ವಿರೋಧಿ, ಬಾಲ್ಯವಿವಾಹ, ಪೋಕೋ ಕಾಯ್ದೆ ಬಾಲಗರ್ಭಿಣಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು. ಮಾದಕ ವಸ್ತು ಬಳಕೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯ ಹಾಳಾಗುತ್ತದೆ. ಇಂದಿನ ಯುವ ಜನತೆ ಭಗತ್ ಸಿಂಗ್.ವಿವೇಕಾನಂದ. ಅಂಬೇಡ್ಕರ್ ರವರ ಆದರ್ಶವನ್ನು ಪಾಲಿಸಬೇಕು ಡ್ರಗ್ಸ್ ಮುಕ್ತ ಭಾರತಕ್ಕೆ ಯುವ ಜನತೆ ಸಂಕಲ್ಪ ಮಾಡಬೇಕು ಎಂದರು ಯುವಕರು ಯಾವುದೇ ರೀತಿಯ ಮಾದಕ ವಸ್ತುಗಳಿಗೆ ಬಲಿಯಾಗದೆ ಆರೋಗ್ಯಕರ, ಶಿಸ್ತುಬದ್ಧ ಹಾಗೂ ಜವಾಬ್ದಾರಿಯುತ ಜೀವನ ನಡೆಸುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು. ಡ್ರಗ್ಸ್ ಎಂಬ ಮಾದಕ ವಸ್ತುಗಳು ವಿಶ್ವದಾದ್ಯಂತ ಯುವಜನತೆಯ ಭವಿಷ್ಯವನ್ನು ಹಾಳುಮಾಡುತ್ತಿರುವ ಗಂಭೀರ ಸಾಮಾಜಿಕ ಸಮಸ್ಯೆಯಾಗಿ ಬೆಳೆಯುತ್ತಿವೆ. ಕ್ಷಣಿಕ ಸುಖ ಮತ್ತು ದುಷ್ಟ ಸಹವಾಸದ ಕಾರಣದಿಂದ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತದೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಅತ್ಯಂತ ಕಷ್ಟಕರವಾಗಿರುವುದರಿಂದ ಪ್ರತಿಯೊಬ್ಬ ಯುವಕ-ಯುವತಿಯೂ ವ್ಯಸನಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು. ಮಾದಕ ವಸ್ತುಗಳು ಮಾನವನ ಮೆದುಳು, ನರಮಂಡಲ ಹಾಗೂ ದೇಹದ ವಿವಿಧ ಅಂಗಾಂಗಗಳ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನೂ ಹಾಳುಮಾಡುತ್ತವೆ. ಆದ್ದರಿಂದ ಯುವಜನತೆ ವ್ಯಸನದ ದುಷ್ಪರಿಣಾಮಗಳ ಬಗ್ಗೆ ತಮ್ಮ ಸ್ನೇಹಿತರು, ಸಹಪಾಠಿಗಳು ಹಾಗೂ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಸಾಮಾಜಿಕ ಜವಾಬ್ದಾರಿಯನ್ನು ವಹಿಸಬೇಕು ಎಂದು ತಿಳಿಸಿದರು. ವ್ಯಸನಮುಕ್ತ ಮನಸ್ಸಿನಿಂದಲೇ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ. ದೈಹಿಕವಾಗಿ ಸದೃಢರಾಗಿದ್ದರೆ ಮಾನಸಿಕವಾಗಿಯೂ ಸದೃಢರಾಗಲು ಸಾಧ್ಯ. ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಡ್ರಗ್ಸ್ ಹಾಗೂ ಇತರೆ ದುಶ್ಚಟಗಳಿಂದ ಸಂಪೂರ್ಣವಾಗಿ ದೂರವಿರಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಶಾಲಾ-ಕಾಲೇಜುಗಳ ಸುತ್ತಮುತ್ತ ಅಥವಾ ಸಮಾಜದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟ ನಡೆಯುತ್ತಿರುವುದು ಕಂಡುಬಂದರೆ ಮೌನವಾಗಿರದೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕು. ಹದಿಹರೆಯದ ಮಕ್ಕಳು ವ್ಯಸನದ ಬಲೆಗೆ ಸಿಲುಕದಂತೆ ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಜಾಗರೂಕರಾಗಿರಬೇಕು ಎಂದು ತಿಳಿಸಿದರು. ಯುವಜನತೆ ವ್ಯಸನಮುಕ್ತ ಜೀವನವನ್ನು ಅಳವಡಿಸಿಕೊಂಡು ದೇಶಪ್ರೇಮ, ಕಾನೂನು ಪಾಲನೆ, ಪೋಷಕರಿಗೆ ಗೌರವ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ಯುವಕ-ಯುವತಿಯ ಸಂಕಲ್ಪದಿಂದಲೇ ಡ್ರಗ್ಸ್ ಮುಕ್ತ, ಆರೋಗ್ಯವಂತ ಹಾಗೂ ಸುರಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ವೆಂಕಟೇಶ್ ಅಭಿಪ್ರಾಯಪಟ್ಟರು. ಪ್ರಾಸ್ತವಿಕ ನುಡಿಗಳನ್ನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಎನ್. ಟಿ. ಯೋಗೇಶ್ ಮಾತನಾಡಿ ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಜಾಗೃತಿ ಹಾಗೂ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಭಿಕ್ಷೆಯ ರೂಪದಲ್ಲಿ ವ್ಯಸನ ಮುಕ್ತ ಮಾಡಲು ಪ್ರತಿಜ್ಞೆಯನ್ನು ಮಾಡಿದವರು ಮಹಾಂತ ಶಿವಯೋಗಿ ಸ್ವಾಮೀಜಿಗಳು ಅವರ ಜಯಂತಿ ಆಚರಣೆ ಆದರ್ಶನಿಯ ಎಂದರು. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ನಿರ್ದೇಶಕ ಮಹದೇವ್ ರವರು ಮಾತನಾಡಿ ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆಯುವ ಯಾವುದೇ ದೌರ್ಜನ್ಯವನ್ನು ಸಮಾಜ ಮುಂದೆ ಧೈರ್ಯವಾಗಿ ಎದುರಿಸುವ ಸಾಮರ್ಥ್ಯವನ್ನು ರೂಡಿಸಿಕೊಳ್ಳಬೇಕು. ಹೊರಗೆ ಹೋದ ಹೆಣ್ಣು ಮಕ್ಕಳು ಜಾಗೃತಿಯಿಂದ ಇರುವುದು ಸೂಕ್ತ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಮೊಹಮದ್ ಸುಹೇಲ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದರ ಬಗ್ಗೆ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಧೂಮಪಾನ, ಮದ್ಯಪಾನ ಹಾಗೂ ಇತರೆ ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಡೋಪಮೀನ್ ಸೇರಿದಂತೆ ಕೆಲವು ರಾಸಾಯನಿಕಗಳ ಉತ್ಪತ್ತಿಯಾಗಿ ತಾತ್ಕಾಲಿಕ ಸಂತೋಷದ ಅನುಭವ ಉಂಟಾಗುತ್ತದೆ. ಆದರೆ ಇದೇ ಕ್ರಮೇಣ ಚಟವಾಗಿ ವ್ಯಕ್ತಿಯನ್ನು ವ್ಯಸನಕ್ಕೆ ದೂಡುತ್ತದೆ. ವ್ಯಸನವು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು. ಇಂದಿನ ಸ್ಪರ್ಧಾತ್ಮಕ ಜೀವನ, ಮಾನಸಿಕ ಒತ್ತಡ, ಆತಂಕ, ಸ್ನೇಹಿತರ ಪ್ರಭಾವ ಹಾಗೂ ಸಾಮಾಜಿಕ ಜಾಲತಾಣಗಳ ಪರಿಣಾಮದಿಂದ ಕೆಲ ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ. ಯಾವುದೇ ಸಮಸ್ಯೆಗೆ ಮಾದಕ ವಸ್ತುಗಳು ಪರಿಹಾರವಲ್ಲ. ಒತ್ತಡ ನಿವಾರಣೆಗೆ ಯೋಗ, ಧ್ಯಾನ, ಕ್ರೀಡೆ, ಸಂಗೀತ, ಪುಸ್ತಕ ಓದು ಹಾಗೂ ಕುಟುಂಬದವರೊಂದಿಗೆ ಮುಕ್ತ ಸಂವಾದ ನಡೆಸುವಂತಹ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಸಂಪೂರ್ಣ ದೂರವಿದ್ದು ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣದತ್ತ ಗಮನಹರಿಸಬೇಕು. ಪೋಷಕರು ಮಕ್ಕಳ ವರ್ತನೆ, ಸ್ನೇಹ ಬಳಗ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ, ಯಾವುದೇ ಅನುಮಾನಾಸ್ಪದ ಲಕ್ಷಣಗಳು ಕಂಡುಬಂದರೆ ತಕ್ಷಣ ತಜ್ಞರ ಸಲಹೆ ಪಡೆಯಬೇಕು ಎಂದು ಅವರು ತಿಳಿಸಿದರು. ಇದೆ ಸಂದರ್ಭದಲ್ಲಿ ವ್ಯಸನ ಮುಕ್ತ ಸಮಾಜಕ್ಕೆ ಕೈಜೋಡಿಸುವುದಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು. ವೇದಿಕೆಯಲ್ಲಿ ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಪುಷ್ಪಲತಾ ಎಂ. ಸಿ.ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳಾದ ತಿಮ್ಮರಾಜು. ಸಿ ಡಬ್ಲ್ಯೂ ಸಿ ಅಧ್ಯಕ್ಷರಾದ ಸುಮಿತ್ರ. ಮುಖಂಡರಾದ ಚಿಕ್ಕಯ್ಯ. ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಬಿ. ಎಸ್. ಅನುಪಮಾ. ರಕ್ಷಣಾ ಅಧಿಕಾರಿ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    1
    ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತ ಕೈಜೋಡಿಸಬೇಕು-ವೆಂಕಟೇಶ್
ಸಮಾಜವನ್ನು ಡ್ರಗ್ಸ್ ಹಾಗೂ ಮಾದಕ ವಸ್ತುಗಳ ಹಾವಳಿಯಿಂದ ಮುಕ್ತಗೊಳಿಸಲು ಯುವಜನತೆ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವ್ಯಸನಗಳಿಂದ ದೂರವಿರುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯವೆಂಕಟೇಶ್ ತಿಳಿಸಿದರು.
ಇಂದು ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಡ್ಯ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಡ್ಯ. ಪೊಲೀಸ್‌ ಇಲಾಖೆ ಹಾಗೂ ಮಂಡ್ಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ಮ.ನಿ.ಪ್ರ.ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ* ವ್ಯಸನ ಮುಕ್ತ ದಿನಾಚರಣೆ
ಮಾದಕ (ಡ್ರಗ್ಸ್) ವ್ಯಸನ ವಿರೋಧಿ, ಬಾಲ್ಯವಿವಾಹ, ಪೋಕೋ ಕಾಯ್ದೆ ಬಾಲಗರ್ಭಿಣಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು.
ಮಾದಕ ವಸ್ತು ಬಳಕೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯ ಹಾಳಾಗುತ್ತದೆ. ಇಂದಿನ ಯುವ ಜನತೆ ಭಗತ್ ಸಿಂಗ್.ವಿವೇಕಾನಂದ. ಅಂಬೇಡ್ಕರ್ ರವರ ಆದರ್ಶವನ್ನು ಪಾಲಿಸಬೇಕು ಡ್ರಗ್ಸ್ ಮುಕ್ತ ಭಾರತಕ್ಕೆ ಯುವ ಜನತೆ ಸಂಕಲ್ಪ ಮಾಡಬೇಕು ಎಂದರು
ಯುವಕರು ಯಾವುದೇ ರೀತಿಯ ಮಾದಕ ವಸ್ತುಗಳಿಗೆ ಬಲಿಯಾಗದೆ ಆರೋಗ್ಯಕರ, ಶಿಸ್ತುಬದ್ಧ ಹಾಗೂ ಜವಾಬ್ದಾರಿಯುತ ಜೀವನ ನಡೆಸುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು.
ಡ್ರಗ್ಸ್ ಎಂಬ ಮಾದಕ ವಸ್ತುಗಳು ವಿಶ್ವದಾದ್ಯಂತ ಯುವಜನತೆಯ ಭವಿಷ್ಯವನ್ನು ಹಾಳುಮಾಡುತ್ತಿರುವ ಗಂಭೀರ ಸಾಮಾಜಿಕ ಸಮಸ್ಯೆಯಾಗಿ ಬೆಳೆಯುತ್ತಿವೆ. ಕ್ಷಣಿಕ ಸುಖ ಮತ್ತು ದುಷ್ಟ ಸಹವಾಸದ ಕಾರಣದಿಂದ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತದೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಅತ್ಯಂತ ಕಷ್ಟಕರವಾಗಿರುವುದರಿಂದ ಪ್ರತಿಯೊಬ್ಬ ಯುವಕ-ಯುವತಿಯೂ ವ್ಯಸನಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು.
ಮಾದಕ ವಸ್ತುಗಳು ಮಾನವನ ಮೆದುಳು, ನರಮಂಡಲ ಹಾಗೂ ದೇಹದ ವಿವಿಧ ಅಂಗಾಂಗಗಳ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನೂ ಹಾಳುಮಾಡುತ್ತವೆ. ಆದ್ದರಿಂದ ಯುವಜನತೆ ವ್ಯಸನದ ದುಷ್ಪರಿಣಾಮಗಳ ಬಗ್ಗೆ ತಮ್ಮ ಸ್ನೇಹಿತರು, ಸಹಪಾಠಿಗಳು ಹಾಗೂ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಸಾಮಾಜಿಕ ಜವಾಬ್ದಾರಿಯನ್ನು ವಹಿಸಬೇಕು ಎಂದು ತಿಳಿಸಿದರು.
ವ್ಯಸನಮುಕ್ತ ಮನಸ್ಸಿನಿಂದಲೇ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ. ದೈಹಿಕವಾಗಿ ಸದೃಢರಾಗಿದ್ದರೆ ಮಾನಸಿಕವಾಗಿಯೂ ಸದೃಢರಾಗಲು ಸಾಧ್ಯ. 
ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಡ್ರಗ್ಸ್ ಹಾಗೂ ಇತರೆ ದುಶ್ಚಟಗಳಿಂದ ಸಂಪೂರ್ಣವಾಗಿ ದೂರವಿರಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಶಾಲಾ-ಕಾಲೇಜುಗಳ ಸುತ್ತಮುತ್ತ ಅಥವಾ ಸಮಾಜದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟ ನಡೆಯುತ್ತಿರುವುದು ಕಂಡುಬಂದರೆ ಮೌನವಾಗಿರದೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕು. ಹದಿಹರೆಯದ ಮಕ್ಕಳು ವ್ಯಸನದ ಬಲೆಗೆ ಸಿಲುಕದಂತೆ ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಜಾಗರೂಕರಾಗಿರಬೇಕು ಎಂದು ತಿಳಿಸಿದರು.
ಯುವಜನತೆ ವ್ಯಸನಮುಕ್ತ ಜೀವನವನ್ನು ಅಳವಡಿಸಿಕೊಂಡು ದೇಶಪ್ರೇಮ, ಕಾನೂನು ಪಾಲನೆ, ಪೋಷಕರಿಗೆ ಗೌರವ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ಯುವಕ-ಯುವತಿಯ ಸಂಕಲ್ಪದಿಂದಲೇ ಡ್ರಗ್ಸ್ ಮುಕ್ತ, ಆರೋಗ್ಯವಂತ ಹಾಗೂ ಸುರಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ವೆಂಕಟೇಶ್ ಅಭಿಪ್ರಾಯಪಟ್ಟರು.
ಪ್ರಾಸ್ತವಿಕ ನುಡಿಗಳನ್ನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಎನ್. ಟಿ. ಯೋಗೇಶ್ ಮಾತನಾಡಿ ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಜಾಗೃತಿ ಹಾಗೂ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಭಿಕ್ಷೆಯ ರೂಪದಲ್ಲಿ ವ್ಯಸನ ಮುಕ್ತ ಮಾಡಲು ಪ್ರತಿಜ್ಞೆಯನ್ನು ಮಾಡಿದವರು ಮಹಾಂತ ಶಿವಯೋಗಿ ಸ್ವಾಮೀಜಿಗಳು ಅವರ ಜಯಂತಿ ಆಚರಣೆ ಆದರ್ಶನಿಯ ಎಂದರು.
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ನಿರ್ದೇಶಕ ಮಹದೇವ್ ರವರು ಮಾತನಾಡಿ ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆಯುವ ಯಾವುದೇ ದೌರ್ಜನ್ಯವನ್ನು ಸಮಾಜ ಮುಂದೆ ಧೈರ್ಯವಾಗಿ ಎದುರಿಸುವ ಸಾಮರ್ಥ್ಯವನ್ನು ರೂಡಿಸಿಕೊಳ್ಳಬೇಕು. ಹೊರಗೆ ಹೋದ ಹೆಣ್ಣು ಮಕ್ಕಳು ಜಾಗೃತಿಯಿಂದ ಇರುವುದು ಸೂಕ್ತ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಮೊಹಮದ್ ಸುಹೇಲ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದರ ಬಗ್ಗೆ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಧೂಮಪಾನ, ಮದ್ಯಪಾನ ಹಾಗೂ ಇತರೆ ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಡೋಪಮೀನ್ ಸೇರಿದಂತೆ ಕೆಲವು ರಾಸಾಯನಿಕಗಳ ಉತ್ಪತ್ತಿಯಾಗಿ ತಾತ್ಕಾಲಿಕ ಸಂತೋಷದ ಅನುಭವ ಉಂಟಾಗುತ್ತದೆ. ಆದರೆ ಇದೇ ಕ್ರಮೇಣ ಚಟವಾಗಿ ವ್ಯಕ್ತಿಯನ್ನು ವ್ಯಸನಕ್ಕೆ ದೂಡುತ್ತದೆ. ವ್ಯಸನವು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.
ಇಂದಿನ ಸ್ಪರ್ಧಾತ್ಮಕ ಜೀವನ, ಮಾನಸಿಕ ಒತ್ತಡ, ಆತಂಕ, ಸ್ನೇಹಿತರ ಪ್ರಭಾವ ಹಾಗೂ ಸಾಮಾಜಿಕ ಜಾಲತಾಣಗಳ ಪರಿಣಾಮದಿಂದ ಕೆಲ ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ. ಯಾವುದೇ ಸಮಸ್ಯೆಗೆ ಮಾದಕ ವಸ್ತುಗಳು ಪರಿಹಾರವಲ್ಲ. ಒತ್ತಡ ನಿವಾರಣೆಗೆ ಯೋಗ, ಧ್ಯಾನ, ಕ್ರೀಡೆ, ಸಂಗೀತ, ಪುಸ್ತಕ ಓದು ಹಾಗೂ ಕುಟುಂಬದವರೊಂದಿಗೆ ಮುಕ್ತ ಸಂವಾದ ನಡೆಸುವಂತಹ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಸಂಪೂರ್ಣ ದೂರವಿದ್ದು ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣದತ್ತ ಗಮನಹರಿಸಬೇಕು. ಪೋಷಕರು ಮಕ್ಕಳ ವರ್ತನೆ, ಸ್ನೇಹ ಬಳಗ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ, ಯಾವುದೇ ಅನುಮಾನಾಸ್ಪದ ಲಕ್ಷಣಗಳು ಕಂಡುಬಂದರೆ ತಕ್ಷಣ ತಜ್ಞರ ಸಲಹೆ ಪಡೆಯಬೇಕು ಎಂದು ಅವರು ತಿಳಿಸಿದರು.
ಇದೆ ಸಂದರ್ಭದಲ್ಲಿ ವ್ಯಸನ ಮುಕ್ತ ಸಮಾಜಕ್ಕೆ ಕೈಜೋಡಿಸುವುದಾಗಿ ವಿದ್ಯಾರ್ಥಿಗಳಿಗೆ 
ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು.
ವೇದಿಕೆಯಲ್ಲಿ ವಾರ್ತಾ ಇಲಾಖೆಯ  ವಾರ್ತಾ ಸಹಾಯಕರಾದ ಪುಷ್ಪಲತಾ ಎಂ. ಸಿ.ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳಾದ ತಿಮ್ಮರಾಜು. ಸಿ ಡಬ್ಲ್ಯೂ ಸಿ ಅಧ್ಯಕ್ಷರಾದ ಸುಮಿತ್ರ. ಮುಖಂಡರಾದ ಚಿಕ್ಕಯ್ಯ. ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಬಿ. ಎಸ್. ಅನುಪಮಾ. ರಕ್ಷಣಾ ಅಧಿಕಾರಿ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    1 hr ago
  • ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ,ಪ್ರತಿಭಟನೆ ಮದ್ದೂರು-ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವ ರಾಜ್ಯ ಸರ್ಕಾರದ ಆದೇಶವನ್ನು ವಿರೋಧಿಸಿ ಹಾಗೂ ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ, ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ವಿನೋದ್ ಬಾಬಾ ನೇತೃತ್ವದಲ್ಲಿ ಕೆಸ್ತೂರು ವೃತ್ತ ಘಟಕದ ವತಿಯಿಂದ ಶನಿವಾರ ರಸ್ತೆತಡೆ ಪ್ರತಿಭಟನೆ ನಡೆಸಲಾಯಿತು. ಬೆಳಿಗ್ಗೆ 11 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ ರೈತರು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು. ಪರಿಣಾಮ ಸುಮಾರು ಎರಡು ಕಿಲೋಮೀಟರ್ವರೆಗೆ ವಾಹನಗಳ ಸಂಚಾರ ದಟ್ಟಣೆ ಉಂಟಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ವಿನೋದ್ ಬಾಬಾ, ಕೆಆರ್ಎಸ್ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಕಬ್ಬು ಹಾಗೂ ವಿವಿಧ ತೋಟಗಾರಿಕೆ ಬೆಳೆಗಳು ನೀರಿನ ಕೊರತೆಯಿಂದ ಒಣಗುತ್ತಿವೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದು ರಾಜ್ಯದ ರೈತರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    1
    ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ,ಪ್ರತಿಭಟನೆ
ಮದ್ದೂರು-ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವ ರಾಜ್ಯ ಸರ್ಕಾರದ ಆದೇಶವನ್ನು ವಿರೋಧಿಸಿ ಹಾಗೂ ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ, ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ವಿನೋದ್ ಬಾಬಾ ನೇತೃತ್ವದಲ್ಲಿ ಕೆಸ್ತೂರು ವೃತ್ತ ಘಟಕದ ವತಿಯಿಂದ ಶನಿವಾರ ರಸ್ತೆತಡೆ ಪ್ರತಿಭಟನೆ ನಡೆಸಲಾಯಿತು.
ಬೆಳಿಗ್ಗೆ 11 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ ರೈತರು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು. ಪರಿಣಾಮ ಸುಮಾರು ಎರಡು ಕಿಲೋಮೀಟರ್ವರೆಗೆ ವಾಹನಗಳ ಸಂಚಾರ ದಟ್ಟಣೆ ಉಂಟಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ವಿನೋದ್ ಬಾಬಾ, ಕೆಆರ್ಎಸ್ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಕಬ್ಬು ಹಾಗೂ ವಿವಿಧ ತೋಟಗಾರಿಕೆ ಬೆಳೆಗಳು ನೀರಿನ ಕೊರತೆಯಿಂದ ಒಣಗುತ್ತಿವೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದು ರಾಜ್ಯದ ರೈತರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    user_Vanitha
    Vanitha
    ಮದ್ದೂರು, ಮಂಡ್ಯ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.