ಹೇಮಾವತಿ ನೀರಿಗಾಗಿ ಆ. 29 ಕ್ಕೆ ಸೋಮಲಾಪುರದ ಕಟ್ಟಿ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ರೈತರ ಬೃಹತ್ ಸಭೆ ಹೇಮಾವತಿ ನೀರಿಗಾಗಿ ಆ. 29 ಕ್ಕೆ ಸೋಮಲಾಪುರದ ಕಟ್ಟಿ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ರೈತರ ಬೃಹತ್ ಸಭೆ --------------------- ಚಿಕ್ಕನಾಯಕನಹಳ್ಳಿ: ತಾಲೂಕಿನ 26 ಕೆರೆಗಳಿಗೆ ಹೇಮಾವತಿ ಕುಡಿಯುವ ನೀರು ಹರಿಸುವ ಯೋಜನೆ ಮಂಜೂರಾಗಿ ದಶಕ ಕಳೆದರೂ, ಕಾಮಗಾರಿ ಪೂರ್ಣಗೊಳ್ಳದೆ ಇರುವುದನ್ನು ಖಂಡಿಸಿ ಹಾಗೂ ಬಾಕಿ ಉಳಿದ ಕೆರೆಗಳಿಗೆ ತಕ್ಷಣ ನೀರು ಹರಿಸಲು ಆಗ್ರಹಿಸಿ ಬೃಹತ್ ರೈತರ ಸಭೆಯು ಆಗಸ್ಟ್ 29 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಸೋಮಲಾಪುರದ ಕಟ್ಟಿ ಶ್ರೀ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಡೆಯಲಿದೆ. ಸರ್ಕಾರವು 2013 ರಲ್ಲೇ ತಾಲೂಕಿನ 26 ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಮಂಜೂರಾತಿ ನೀಡಿದ್ದರೂ, ಇದುವರೆಗೆ ಶೆಟ್ಟೀಕೆರೆ, ಸಾಸಲು, ದಬ್ಬೇಘಟ್ಟ, ಮೇಲನಹಳ್ಳಿ ಮತ್ತು ನವಿಲೆ ಕೆರೆಗಳಿಗೆ ಮಾತ್ರ ನೀರು ತಲುಪಿಸಲಾಗಿದೆ. ಆದರೆ, ಸಾಸಲು ಪೆಮ್ಮಲದೇವರಹಳ್ಳಿ ಕೆರೆಯಿಂದ ಗೋಪಾಲನಹಳ್ಳಿ, ಪಟ್ಟದದೇವರಕೆರೆ, ಹಾಲ್ಯುರಿಕೆರೆ, ಮಾದಿಹಳ್ಳಿ, ನೆಲಕೆರೆ, ಮಂಚಸಂದ್ರ, ಬೆನಕನಕಟ್ಟೆ ಹಾಗೂ ಕುಮೂರು ಕೆರೆಗಳಿಗೆ ನೀರು ಹರಿಸುವ ಕಾಮಗಾರಿಯನ್ನು ಮಾಡದೆ ನಿರ್ಲಕ್ಷಿಸಲಾಗಿದೆ ಎಂದು ಸಮಗ್ರ ನೀರಾವರಿ ಅಭಿವೃದ್ಧಿ ಸಮಿತಿ ಆರೋಪಿಸಿದೆ. ಬರದಿಂದ ತತ್ತರಿಸಿದ ಗ್ರಾಮಗಳು: ಈ ಭಾಗದಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತಗೊಂಡಿದ್ದು, ಕುಡಿಯುವ ನೀರಿಗೂ ತೊಂದರೆಯಾಗಿದೆ. ಸರಿಯಾದ ನೀರಿಲ್ಲದೆ ಜನ ಮತ್ತು ಜಾನುವಾರುಗಳು ಕಷ್ಟಪಡುತ್ತಿದ್ದು, ಸತತ ಹಲವು ವರ್ಷಗಳಿಂದ ಈ ಭಾಗದ ಜನರು ಭೀಕರ ಬರಗಾಲದ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದಾರೆ. ಸಭೆಯಲ್ಲಿ ಅಧಿಕಾರಿ ಭಾಗಿ: ರೈತರ ಸಂಕಟವನ್ನು ಹೋಗಲಾಡಿಸಲು ನೀರಾವರಿ ಇಲಾಖೆ ಹಾಗೂ ಕಾಲುವೆ ಕಾಮಗಾರಿ ಇಲಾಖೆಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯ ದಿನದಂದೇ ಅಧಿಕಾರಿಗಳೊಂದಿಗೆ ಸ್ಥಳ ತಪಾಸಣೆ ನಡೆಸಿ, ಉಳಿದಿರುವ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಿ ನಾಲೆಯಲ್ಲಿ ನೀರು ಹರಿಸುವಂತೆ ಒತ್ತಾಯಿಸಲು ನಿರ್ಧರಿಸಲಾಗಿದೆ. ಈ ರೈತ ಹೋರಾಟದ ಸಭೆಗೆ ತಾಲೂಕಿನ ರೈತರು, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬೆಂಬಲಿಸಬೇಕಾಗಿ ಸಮಗ್ರ ನೀರಾವರಿ ಅಭಿವೃದ್ಧಿ ಸಮಿತಿಯು ವಿನಂತಿಸಿದೆ. ಸಭೆಯ ವಿವರ: ದಿನಾಂಕ: 29-08-2026, ಶನಿವಾರ ಸಮಯ: ಬೆಳಿಗ್ಗೆ 11:00 ಗಂಟೆಗೆ ಸ್ಥಳ: ಸೋಮಲಾಪುರ ಶ್ರೀ ಕಟ್ಟಿ ರಂಗನಾಥಸ್ವಾಮಿ ದೇವಾಲಯ (ಶೆಟ್ಟೀಕೆರೆ, ತಿಪಟೂರು ರಸ್ತೆ)

- ಹೇಮಾವತಿ ನೀರಿಗಾಗಿ ಆ. 29 ಕ್ಕೆ ಸೋಮಲಾಪುರದ ಕಟ್ಟಿ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ರೈತರ ಬೃಹತ್ ಸಭೆ ಹೇಮಾವತಿ ನೀರಿಗಾಗಿ ಆ. 29 ಕ್ಕೆ ಸೋಮಲಾಪುರದ ಕಟ್ಟಿ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ರೈತರ ಬೃಹತ್ ಸಭೆ --------------------- ಚಿಕ್ಕನಾಯಕನಹಳ್ಳಿ: ತಾಲೂಕಿನ 26 ಕೆರೆಗಳಿಗೆ ಹೇಮಾವತಿ ಕುಡಿಯುವ ನೀರು ಹರಿಸುವ ಯೋಜನೆ ಮಂಜೂರಾಗಿ ದಶಕ ಕಳೆದರೂ, ಕಾಮಗಾರಿ ಪೂರ್ಣಗೊಳ್ಳದೆ ಇರುವುದನ್ನು ಖಂಡಿಸಿ ಹಾಗೂ ಬಾಕಿ ಉಳಿದ ಕೆರೆಗಳಿಗೆ ತಕ್ಷಣ ನೀರು ಹರಿಸಲು ಆಗ್ರಹಿಸಿ ಬೃಹತ್ ರೈತರ ಸಭೆಯು ಆಗಸ್ಟ್ 29 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಸೋಮಲಾಪುರದ ಕಟ್ಟಿ ಶ್ರೀ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಡೆಯಲಿದೆ. ಸರ್ಕಾರವು 2013 ರಲ್ಲೇ ತಾಲೂಕಿನ 26 ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಮಂಜೂರಾತಿ ನೀಡಿದ್ದರೂ, ಇದುವರೆಗೆ ಶೆಟ್ಟೀಕೆರೆ, ಸಾಸಲು, ದಬ್ಬೇಘಟ್ಟ, ಮೇಲನಹಳ್ಳಿ ಮತ್ತು ನವಿಲೆ ಕೆರೆಗಳಿಗೆ ಮಾತ್ರ ನೀರು ತಲುಪಿಸಲಾಗಿದೆ. ಆದರೆ, ಸಾಸಲು ಪೆಮ್ಮಲದೇವರಹಳ್ಳಿ ಕೆರೆಯಿಂದ ಗೋಪಾಲನಹಳ್ಳಿ, ಪಟ್ಟದದೇವರಕೆರೆ, ಹಾಲ್ಯುರಿಕೆರೆ, ಮಾದಿಹಳ್ಳಿ, ನೆಲಕೆರೆ, ಮಂಚಸಂದ್ರ, ಬೆನಕನಕಟ್ಟೆ ಹಾಗೂ ಕುಮೂರು ಕೆರೆಗಳಿಗೆ ನೀರು ಹರಿಸುವ ಕಾಮಗಾರಿಯನ್ನು ಮಾಡದೆ ನಿರ್ಲಕ್ಷಿಸಲಾಗಿದೆ ಎಂದು ಸಮಗ್ರ ನೀರಾವರಿ ಅಭಿವೃದ್ಧಿ ಸಮಿತಿ ಆರೋಪಿಸಿದೆ. ಬರದಿಂದ ತತ್ತರಿಸಿದ ಗ್ರಾಮಗಳು: ಈ ಭಾಗದಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತಗೊಂಡಿದ್ದು, ಕುಡಿಯುವ ನೀರಿಗೂ ತೊಂದರೆಯಾಗಿದೆ. ಸರಿಯಾದ ನೀರಿಲ್ಲದೆ ಜನ ಮತ್ತು ಜಾನುವಾರುಗಳು ಕಷ್ಟಪಡುತ್ತಿದ್ದು, ಸತತ ಹಲವು ವರ್ಷಗಳಿಂದ ಈ ಭಾಗದ ಜನರು ಭೀಕರ ಬರಗಾಲದ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದಾರೆ. ಸಭೆಯಲ್ಲಿ ಅಧಿಕಾರಿ ಭಾಗಿ: ರೈತರ ಸಂಕಟವನ್ನು ಹೋಗಲಾಡಿಸಲು ನೀರಾವರಿ ಇಲಾಖೆ ಹಾಗೂ ಕಾಲುವೆ ಕಾಮಗಾರಿ ಇಲಾಖೆಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯ ದಿನದಂದೇ ಅಧಿಕಾರಿಗಳೊಂದಿಗೆ ಸ್ಥಳ ತಪಾಸಣೆ ನಡೆಸಿ, ಉಳಿದಿರುವ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಿ ನಾಲೆಯಲ್ಲಿ ನೀರು ಹರಿಸುವಂತೆ ಒತ್ತಾಯಿಸಲು ನಿರ್ಧರಿಸಲಾಗಿದೆ. ಈ ರೈತ ಹೋರಾಟದ ಸಭೆಗೆ ತಾಲೂಕಿನ ರೈತರು, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬೆಂಬಲಿಸಬೇಕಾಗಿ ಸಮಗ್ರ ನೀರಾವರಿ ಅಭಿವೃದ್ಧಿ ಸಮಿತಿಯು ವಿನಂತಿಸಿದೆ. ಸಭೆಯ ವಿವರ: ದಿನಾಂಕ: 29-08-2026, ಶನಿವಾರ ಸಮಯ: ಬೆಳಿಗ್ಗೆ 11:00 ಗಂಟೆಗೆ ಸ್ಥಳ: ಸೋಮಲಾಪುರ ಶ್ರೀ ಕಟ್ಟಿ ರಂಗನಾಥಸ್ವಾಮಿ ದೇವಾಲಯ (ಶೆಟ್ಟೀಕೆರೆ, ತಿಪಟೂರು ರಸ್ತೆ)1
- ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಶಿರಾ : ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಭಾರತೀಯ ಸಂಸ್ಕೃತಿಯಲ್ಲಿ ಧಾರ್ಮಿಕ ದೇವತಾ ಕಾರ್ಯಗಳಿಗೆ ಅತ್ಯಂತ ಉನ್ನತವಾದ ಸ್ಥಾನವಿದೆ. ಅನಾದಿ ಕಾಲದಿಂದಲೂ ಮಾನವನು ತನ್ನ ದೈನಂದಿನ ಜೀವನದ ಭಾಗವಾಗಿ ದೇವರನ್ನು ಆರಾಧಿಸುತ್ತಾ ಬಂದಿದ್ದಾನೆ. ದೇವತಾ ಕಾರ್ಯಗಳು ಎಂದರೆ ಕೇವಲ ಆಚರಣೆಗಳಲ್ಲ, ಅವು ಮಾನವನ ಮನಸ್ಸನ್ನು ಶುದ್ಧೀಕರಿಸುವ ಮತ್ತು ಸಮಾಜವನ್ನು ಒಟ್ಟಾಗಿ ಜೋಡಿಸುವ ಪವಿತ್ರ ವಿಧಿ ವಿಧಾನಗಳಾಗಿವೆ,ಧಾರ್ಮಿಕ ದೇವತಾ ಕಾರ್ಯಗಳು ಮನುಷ್ಯನಲ್ಲಿ ಭಕ್ತಿ, ಶ್ರದ್ಧೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತವೆ. ಇವುಗಳನ್ನು ಕೇವಲ ಮೂಢನಂಬಿಕೆಯಾಗಿ ನೋಡದೆ, ಅವುಗಳ ಹಿಂದಿರುವ ವೈಜ್ಞಾನಿಕ ಮತ್ತು ಸಾಮಾಜಿಕ ಮಹತ್ವವನ್ನು ಅರಿತು ಆಚರಿಸಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ಮತ್ತು ಸುಖ-ಸಮೃದ್ಧಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಹನುಮಂತನಾಥ ಸ್ವಾಮೀಜಿ ಹೇಳಿದರು. ಶಿರಾ ತಾಲೂಕಿನ ಗೌಡಗೆರೆ ಹೋಬಳಿ ಕಳವರಹಳ್ಳಿ ಗ್ರಾಮದಲ್ಲಿ ಬುಧವಾರ ಶ್ರೀಜುಂಜಪ್ಪ ಸ್ವಾಮಿ ನೂತನ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಐತಿಹಾಸಿಕ ಪ್ರಸಿದ್ಧ ಶ್ರೀ ಜುಂಜಪ್ಪ ಸ್ವಾಮಿಗೆ ಎಲ್ಲರೂ ಒಗ್ಗೂಡಿ ಭವ್ಯ ದೇಗುಲ ನಿರ್ಮಾಣ ಮಾಡುತ್ತಿರುವುದು, ಕಳವರಹಳ್ಳಿಗೆ ದೊಡ್ಡ ಕಳಸವಿದ್ದಂತೆ. ನಾವು ಎಲ್ಲರೂ ಒಗ್ಗಟ್ಟಾಗಿ ದೇಗುಲ ನಿರ್ಮಾಣ ಮಾಡುವಂತ ಸಂಕಲ್ಪ ಮಾಡಬೇಕು. ರಾಜ್ಯದಲ್ಲಿ ಹಾಗೂ ಸಿರಾ ತಾಲೂಕಿನಲ್ಲಿ ಇನ್ನು ಮುಂದೆ ಯಾದರು ಉತ್ತಮ ಮಳೆಯಾಗಿ ಎಲ್ಲ ರೈತರ ಬದುಕು ಸುಂದರವಾಗಿರಲಿ ಎಂದು ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿಯಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು. ಶ್ರೀ ಮದ್ದಮ್ಮ ದೇವಿ ದೇವಸ್ಥಾನದ ಪಟ್ಟದ ಪೂಜಾರ್ ದೊಡ್ಡರಾಜಪ್ಪ, ಹುಣಸೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹುಣಸೆಹಳ್ಳಿ ಶಶಿಧರ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣ, ಸಂಕಾಪುರ ಚಿದಾನಂದ, ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಮುದ್ದು ಕೃಷ್ಣೆಗೌಡ, ಕಾರ್ಯದರ್ಶಿ ನರಸಿಂಹಮೂರ್ತಿ, ಭೂಕಾಂತೇ ಗೌಡ, ಕೃಷ್ಣಪ್ಪ, ಹೊಸೂರು ಮಂಜೇಗೌಡ, ಸಿದ್ದಣ್ಣ, ದೊಡ್ಡಯ್ಯ, ಸಿದ್ದಾಪುರ ಮಂಜುನಾಥ್, ನಾಗೇಂದ್ರ ಗೌಡ, ಭೂತಣ್ಣ ಸೇರಿದಂತೆ ಅಕ್ಕ ಪಕ್ಕದ ಗ್ರಾಮಸ್ಥರು, 12 ಜನ ಕೈವಾಡಸ್ತರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.1
- ವಿಜೃಂಭಣೆಯಿಂದ ಗಡಿಭಾಗದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ KODIGENAHALLI ಮಧುಗಿರಿ ತಾಲೂಕಿನ ಗಡಿಭಾಗವಾದ ಕೊಡಿಗೇನಹಳ್ಳಿ ಜಾಮೀಯ ಮಸ್ಜಿದ್ ಸುನ್ನತ್ ಹುಲ್ ಜಮಾತ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಹುಟ್ಟುಹಬ್ಬ ಈದ್ ಮಿಲಾದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.1
- ಭದ್ರಾ ನೀರು ಹರಿಸದ ರಾಜ್ಯ ಸರ್ಕಾರದ ವಿರುದ್ಧ ಹೊಸದುರ್ಗದಲ್ಲಿ ಬೃಹತ್ ಪ್ರತಿಭಟನೆ ಶೀಘ್ರ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ನೀರು ಹರಿಸಲು ಆಗ್ರಹಿಸಿ ಹೊಸದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇನ್ನೂ ಬಿಜೆಪಿ ಪಕ್ಷ ಹಾಗೂ ಜೆ ಡಿ ಎಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಿದ್ದು ಹೊಸದುರ್ಗ ಬಿಜೆಪಿ ಮುಖಂಡರು ಹಾಗೂ ಖನಿಜ ನಿಗಮದ ಮಾಜಿ ಅಧ್ಯಕ್ಷರಾದ ಲಿಂಗಮೂರ್ತಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಎಂ ಎಲ್ ಸಿ ಕೆ ಎಸ್ ನವೀನ್ ಅವರು ಸಹ ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇನ್ನೂ ಎಸ್ ಲಿಂಗಮೂರ್ತಿ ಅವರು ಅಹ ಆಗಮಿಸಿ ಬಿಸಿಲನ್ನೂ ಸಹ ಲೆಕ್ಕಿಸದೆ ಪ್ರತಿಭಟನೆ ನೇತೃತ್ವ ವಹಿಸಿದ್ದು ಹುಳಿಯಾರು ರಸ್ತೆಯ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಿಂದ ತಾಲ್ಲೂಕು ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಷ ಹೊರ ಹಾಕಿದ್ದು ಶೀಘ್ರ ಭದ್ರಾ ಮೇಲ್ದಂಡೆ ಯೋಜನೆ ಜಾರಿ ಮಾಡಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಆಗ್ರಹ ಮಾಡಿದರು. ತಕ್ಷಣವೇ ಹೊಸದುರ್ಗ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡಿ ಕುಡಿಯುವ ನೀರಿನ ಯೋಜನೆಯನ್ನ ಶೀಘ್ರ ಜಾರಿಗೊಳಿಸಲು ಪ್ರತಿಭಟನೆ ಮೂಲಕ ಒತ್ತಾಯ ಮಾಡಿದರು. ಇದೇ ವೇಳೆ ಎಸ್ ಲಿಂಮೂರ್ತಿ ಅವರು ಮಾತನಾಡಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ಸರ್ಕಾರ ಈ ಬರದ ನಾಡು ಹೊಸದುರ್ಗಕ್ಕೆ ನೀರು ಕೊಡುವ ಬರವಸೆ ಇಟ್ಟಿದ್ದು ಬರವಸೆ ಹುಸಿಯಾಗಿದೆ. ಮೂರು ವರ್ಷಗಳು ಕಳೆದರು ಸಹ ಸರ್ಕಾರ ನೀರು ಹರಿಸುವ ಬಗ್ಗೆ ಸುಳ್ಳು ಬರವಸೆಯನ್ನ ಕೊಡುತ್ತಾ ಬಂದಿದೆ. ಈ ತಾಲ್ಲೂಕಿನ ಶಾಸಕರು ಕೂಡ ಬೆಂಬಲ ಕೋರಿದ್ದು ಕೈ ಜೋಡಿಸಿದ್ದೆವು. ಆದರೆ ಆಡಳಿತ ಪಕ್ಷದ ಶಾಸಕರಿಗೆ ಮಾನವೀಯತೆಯಿಂದ ಬೆಂಬಲ ಕೊಟ್ಟಿದ್ದೇವೆ. ಕಳೆದ ಆರೆಂಟು ತಿಂಗಳಾದರು ಸಹ ಸ್ಥಳೀಯ ಶಾಸಕರು ನೀರು ಕೊಡುವಲ್ಲಿ ವಿಫಲವಾಗಿದ್ದಾರೆ. ಆದ್ದರಿಂದ ನಾವು ಹೋರಾಟ ಮಾಡುತ್ತಿದ್ದೇವೆ. ನೀರಿಗಾಗಿ ಹೋರಾಟ ಮಾಡುವ ಸಮಯ ಬಂದಿದ್ದು ಈ ಮೂಲಕ ಸರ್ಕಾರದ ಕಣ್ಣನ್ನ ತೆರಯಬೇಕಿದೆ. ನಮ್ಮ ಸರ್ಕಾರದ ಅವದಿಯಲ್ಲಿ ಅರವತ್ತರಷ್ಟು ಹಣ ಮೀಸಲಿಟ್ಟು ಕೆಲಸ ಆಗಿದ್ದು ಈ ಸರ್ಕಾರ ಬಂದ ನಂತರ ಇಪ್ಪತ್ತರಷ್ಟು ಸಹ ಹಣ ಬಿಡುಗಡೆ ಮಾಡಿಲ್ಲ ಎಂದು ಲಿಂಗಮೂರ್ತಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬರಗಾಲ ಬಂದಿದ್ದರು ಸಹ ಸರ್ಕಾರ ಜವಾಬ್ದಾರಿ ತೋರದೆ ಅನ್ಯಾಯ ಮಾಡಿದೆ. ಕೇವಲ ಮಂತ್ರಿ ಸ್ಥಾನಕ್ಕಾಗಿ ಹೊಡೆದಾಟ ನಡೆಸುತ್ತಿದ್ದು ಬರಗಾಲದಿಂದ ಕಂಗೆಟ್ಟ ಜನರಿಗೆ ನೀರು ಕೊಡುವ ಕೆಲಸ ಮಾಡದೆ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡದೆ ಇದ್ದು ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಎಸ್ ಲಿಂಗಮೂರ್ತಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.1
- ಕೋಟೆ ನಾಡು ಚಿತ್ರದುರ್ಗದಲ್ಲಿ ರಾಕಿಂಗ್ ಸ್ಟಾರ್ ಯಶು ಅಭಿಮಾನಿಗಳ ಸಂಭ್ರಮ1
- ಸಿಂಪಲ್ ಮ್ಯಾಚ್..1
- ತವರು-ಕೊಟ್ಟ ಮನೆಗಳ ಬೆಸುಗೆಯ ಗೌರಿ ಹಬ್ಬ: ಹೆಣ್ಣುಮಕ್ಕಳ ಮೊಗದಲ್ಲಿ ಹರಸುವ ಸಂಭ್ರಮ ತವರು-ಕೊಟ್ಟ ಮನೆಗಳ ಬೆಸುಗೆಯ ಗೌರಿ ಹಬ್ಬ: ಹೆಣ್ಣುಮಕ್ಕಳ ಮೊಗದಲ್ಲಿ ಹರಸುವ ಸಂಭ್ರಮ --------------------- ಹುಳಿಯಾರು ಪೇಪರ್ ಕಿರಣ್ ನ್ಯೂಸ್: ಗೌರಿ ಹಬ್ಬವೆಂದರೆ ಸಾಕು ಭಾರತೀಯ ಪರಂಪರೆಯಲ್ಲಿ ಹೆಣ್ಣು ಮಕ್ಕಳಿಗೆ ಎಲ್ಲಿಲ್ಲದ ಸಂಭ್ರಮ-ಸಂತೋಷ. ಅದರಲ್ಲೂ ಮದುವೆಯಾಗಿ ಹೊಸ ಮನೆಗೆ ತೆರಳಿರುವ ಹೆಣ್ಣು ಮಕ್ಕಳಿಗೆ ಈ ಹಬ್ಬದ ತವರಿನ ನೆನಪುಗಳು ದುಪ್ಪಟ್ಟು ಖುಷಿ ನೀಡುತ್ತವೆ. ವರ್ಷಕ್ಕೊಮ್ಮೆ ತವರು ಮನೆಯಿಂದ ತಂದೆ-ತಾಯಿ, ಅಣ್ಣ-ತಮ್ಮಂದಿರು ಪ್ರೀತಿಯಿಂದ ಬಂದು ಬಾಗಿನ ನೀಡುವುದು, ಅಥವಾ ಹೆಣ್ಣು ಮಗಳನ್ನು ತವರಿಗೆ ಕರೆತಂದು ಉಪಚರಿಸುವುದು ಯುಗಯುಗಗಳಿಂದ ಬೆಳೆದುಬಂದ ಭಾವನಾತ್ಮಕ ಪರಂಪರೆಯಾಗಿದೆ. ಬಡತನವಿರಲಿ, ಸಿರಿತನವಿರಲಿ; ಪ್ರತಿಯೊಂದು ಕುಟುಂಬವೂ ತಮ್ಮ ಶಕ್ತಿಸಾರವಾಗಿ ಗೌರಿ ಹಬ್ಬವನ್ನು ಆಚರಿಸಿ ಮಗಳ ಸಂತೋಷಕ್ಕಾಗಿ ಶ್ರಮಿಸುತ್ತದೆ. ಈ ಹಬ್ಬವು ಹುಟ್ಟಿದ ಮನೆ ಹಾಗೂ ಕೊಟ್ಟ ಮನೆಗಳ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಕೊಂಡಿಯಾಗಿದೆ. ಬಾಗಿನದ ಮಹತ್ವ ಮತ್ತು ಶ್ರೀಮಂತ ಸಂಸ್ಕೃತಿ ಗೌರಿ ಹಬ್ಬದಲ್ಲಿ ನೀಡುವ 'ಬಾಗಿನ' ಕೇವಲ ವಸ್ತುಗಳ ಮೂಟೆಯಲ್ಲ, ಅದು ತವರಿನ ಅಕ್ಷಯ ಪ್ರೀತಿ ಮತ್ತು ಆಶೀರ್ವಾದದ ಸಂಕೇತ. ಬಾಗಿನದ ಸಾಮಗ್ರಿಗಳು: ಮೊರದಲ್ಲಿ ಅರಿಶಿನ, ಕುಂಕುಮ, ಬಳೆ, ಕನ್ನಡಿ, ಬಾಚಣಿಕೆ, ಕಪ್ಪು ದಾರ, ಅಕ್ಕಿ, ಬೇಳೆ ಧಾನ್ಯಗಳು, ಬೆಲ್ಲ, ತೆಂಗಿನಕಾಯಿ ಹಾಗೂ ಮಂಗಳ ದ್ರವ್ಯಗಳನ್ನು ಜೋಡಿಸಿ ಪೂಜಿಸಲಾಗುತ್ತದೆ. ಮಂಗಳ ಗೌರಿ ಪೂಜೆ: ಸುಮಂಗಲಿಯರು ತಮ್ಮ ಮುತ್ತೈದೆತನ, ಕುಟುಂಬದ ಕ್ಷೇಮ ಹಾಗೂ ಐಶ್ವರ್ಯಕ್ಕಾಗಿ ಸ್ವರ್ಣ ಗೌರಿಯನ್ನು ನಿಷ್ಠೆಯಿಂದ ಪೂಜಿಸಿ, ಹಿರಿಯ ಮುತ್ತೈದೆಯರಿಗೆ ಹಾಗೂ ತಾಯಿಗೆ ಬಾಗಿನ ನೀಡಿ ಆಶೀರ್ವಾದ ಪಡೆಯುತ್ತಾರೆ. ಭಾವನಾತ್ಮಕ ಬೆಸುಗೆ: ಮದುವೆಯಾಗಿ ಬೇರೆ ಮನೆಗೆ ಹೋದ ಮಗಳು ಕ್ಷೇಮವಾಗಿರಲಿ, ಆಕೆಯ ಸಂಸಾರದಲ್ಲಿ ಧಾನ್ಯ-ಧನ ಸಂಪತ್ತು ಸದಾ ಸಮೃದ್ಧವಾಗಿರಲಿ ಎಂಬ ಹಾರೈಕೆ ಈ ಬಾಗಿನದ ಹಿಂದಿರುವ ಮುಖ್ಯ ಉದ್ದೇಶ. ಸಂಪ್ರದಾಯದ ಉಳಿವಿಗೆ ಗ್ರಾಮೀಣ ಜನರ ಶ್ರಮ ಬದಲಾಗುತ್ತಿರುವ ಆಧುನಿಕ ಯುಗದಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ನಗರಗಳಲ್ಲಿ ಗೌರಿ ಹಬ್ಬದ ಕಳೆ ಕುಂದಿಲ್ಲ. ಹಬ್ಬದ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆ, ಆಭರಣ ಹಾಗೂ ತವರಿನ ತಿನಿಸುಗಳನ್ನು ನೀಡಿ ಸತ್ಕರಿಸುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯವೆಂದೇ ಭಾವಿಸಲಾಗಿದೆ. ಸಾಮಾಜಿಕವಾಗಿ ಎಷ್ಟೇ ಆಧುನಿಕತೆ ಬಂದರೂ, ತವರು ಮನೆಯಿಂದ ಬರುವ ಬಾಗಿನಕ್ಕಾಗಿ ಕಾಯುವ ಹೆಣ್ಣು ಮಗಳ ಕಣ್ಣಿನ ಕಾತುರ ಮತ್ತು ಅದನ್ನು ನೀಡುವಾಗ ಹೆತ್ತವರ ಮೊಗದಲ್ಲಿ ಮೂಡುವ ತೃಪ್ತಿ ನಮ್ಮ ಸಂಸ್ಕೃತಿಯ ಸಜೀವ ಸಾಕ್ಷಿಯಾಗಿದೆ. ಬಾಂಧವ್ಯದ ಬೆಸುಗೆಯಾಗಿರುವ ಈ ಗೌರಿ ಹಬ್ಬವು ನಾಡಿನಾದ್ಯಂತ ಸೌಹಾರ್ದತೆ ಮತ್ತು ಪ್ರೀತಿಯನ್ನು ಪಸರಿಸುತ್ತಿದೆ.1
- ನೇಪಾಳದಲ್ಲಿ ಭೀಕರ ಪ್ರವಾಹ: ಕ್ಷಣಾರ್ಧದಲ್ಲೇ ಕೊಚ್ಚಿಹೋದ ಮನೆ, ವಾಹನಗಳು1