logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ 25 ಎಕರೆ ಜಮೀನಿನ ವಿವಾದದಿಂದಾಗಿ ಆರು ಜನರು ಹತ್ಯೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಈ ಘಟನೆ ಕುರಿತು ಮಾಹಿತಿ ನೀಡಿದರು. ಘಟನೆ ನಡೆದಾಗ ಜಮೀನಿನಲ್ಲಿ ಎಂಟು ಜನರು ಕೆಲಸ ಮಾಡುತ್ತಿದ್ದರು. ಈ ವೇಳೆ, ಬೈಕ್‌ಗಳಲ್ಲಿ ಏಕಾಏಕಿ 28 ಜನರು ಆಗಮಿಸಿ, ಮಚ್ಚು ಹಾಗೂ ಇನ್ನಿತರ ಆಯುಧಗಳಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಈ ದಾಳಿಯಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ. ಆದರೂ, ಸಂಪೂರ್ಣ ಮಾಹಿತಿ ಪೋಸ್ಟ್‌ಮಾರ್ಟಮ್ ವರದಿ ಬಂದ ನಂತರವೇ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಘಟನೆಗೆ ಕಾರಣರಾದ ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಲಾಗಿದೆ ಎಂದು ಎಸ್ಪಿ ಹೇಳಿದರು.

2 hrs ago
user_T NEWS BIJAPUR
T NEWS BIJAPUR
ವಿಜಯಪುರ, ವಿಜಯಪುರ, ಕರ್ನಾಟಕ•
2 hrs ago

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ 25 ಎಕರೆ ಜಮೀನಿನ ವಿವಾದದಿಂದಾಗಿ ಆರು ಜನರು ಹತ್ಯೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಈ ಘಟನೆ ಕುರಿತು ಮಾಹಿತಿ ನೀಡಿದರು. ಘಟನೆ ನಡೆದಾಗ ಜಮೀನಿನಲ್ಲಿ ಎಂಟು ಜನರು ಕೆಲಸ ಮಾಡುತ್ತಿದ್ದರು. ಈ ವೇಳೆ, ಬೈಕ್‌ಗಳಲ್ಲಿ ಏಕಾಏಕಿ 28 ಜನರು ಆಗಮಿಸಿ, ಮಚ್ಚು ಹಾಗೂ ಇನ್ನಿತರ ಆಯುಧಗಳಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಈ ದಾಳಿಯಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ. ಆದರೂ, ಸಂಪೂರ್ಣ ಮಾಹಿತಿ ಪೋಸ್ಟ್‌ಮಾರ್ಟಮ್ ವರದಿ ಬಂದ ನಂತರವೇ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಘಟನೆಗೆ ಕಾರಣರಾದ ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಲಾಗಿದೆ ಎಂದು ಎಸ್ಪಿ ಹೇಳಿದರು.

More news from ಕರ್ನಾಟಕ and nearby areas
  • ವಿಜಯಪುರ/ಹುಬ್ಬಳ್ಳಿ: ಜಿ.ಎಸ್.ಸಿ.ಎಸ್.ಟಿ.ಇ.ಓ (GSCSTEO) ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಬೃಹತ್ ಸಮಾವೇಶವು ಅತ್ಯಂತ ಯಶಸ್ವಿಯಾಗಿ ಮತ್ತು ಐತಿಹಾಸಿಕವಾಗಿ ನೆರವೇರಿತು. ಸತತ ಎರಡನೇ ವರ್ಷವೂ ಇಂತಹ ಬೃಹತ್ ಸಮಾಜಮುಖಿ ಕಾರ್ಯಕ್ರಮವನ್ನು ಅತ್ಯಂತ ಅದ್ದೂರಿಯಾಗಿ ಆಯೋಜಿಸಿ, 650ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೆರವು ನೀಡಿದ ಸಂಘಟನೆಯ ಕಾರ್ಯವೈಖರಿಯನ್ನು ಗಣ್ಯರು ಮುಕ್ತಕಂಠದಿಂದ ಶ್ಲಾಘಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಚಿತ್ರದುರ್ಗದ ಶ್ರೀ ಜಗದ್ಗುರು ಚಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಶರಣರು ಹಾಗೂ ನೀಲಜಿ ಆಶ್ರಮದ ಶ್ರೀ ಪೂಜ್ಯ ಮಹಾದೇವ ಮಹಾರಾಜರು ವಹಿಸಿ ಆಶೀರ್ವಚನ ನೀಡಿದರು. ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕರಾದ ಶ್ರೀ ಪ್ರಸಾದ್ ಅಬ್ಬಯ್ಯ ಮತ್ತು ಬೆಳಗಾವಿಯ ಯುವ ಮುಖಂಡರಾದ ಶ್ರೀ ರಾಹುಲ್ ಸತೀಶ್ ಜಾರಕಿಹೊಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಚಿದಾನಂದ ಎಮ್. ಕಾಂಬಳೆ ಮತ್ತು ಸಂಘಟಕ ಶ್ರೀ ವಿಲಾಸ್ ಶಿವಪೂಜಿ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಸಮಾರಂಭದಲ್ಲಿ ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಇಷ್ಟು ಅದ್ದೂರಿ ಮತ್ತು ಶಿಸ್ತುಬದ್ಧ ಕಾರ್ಯಕ್ರಮ ಆಯೋಜಿಸಿದ್ದು ಐತಿಹಾಸಿಕ ದಾಖಲೆಯಾಗಿದೆ ಎಂದು ಬಣ್ಣಿಸಿದರು. ನೌಕರರ ಹಿತರಕ್ಷಣೆ ಮಾತ್ರವಲ್ಲದೆ, ವಧು-ವರರ ಕಲ್ಯಾಣ ಹಾಗೂ ವಿದ್ಯಾರ್ಥಿಗಳ ಉನ್ನತಿಗಾಗಿ ಸಂಘಟನೆ ಮಾಡುತ್ತಿರುವ ಕೆಲಸಗಳು ಮಾದರಿಯಾಗಿವೆ ಎಂದು ಶ್ಲಾಘಿಸಿದರು. ವಿವಿಧ ಜಿಲ್ಲೆಗಳಿಂದ ಬಂದಿದ್ದ ವಿದ್ಯಾರ್ಥಿಗಳು ಹಾಗೂ ಪಾಲಕರ ತಾಳ್ಮೆಯನ್ನು ಮೆಚ್ಚಿದ ಅವರು, ಮುಂದಿನ ವರ್ಷವೂ ಸಂಘಟನೆಯೊಂದಿಗೆ ಸದಾ ಇರುವುದಾಗಿ ಭರವಸೆ ನೀಡಿದರು. ಇದಲ್ಲದೆ, ಸಂಘಕ್ಕೆ ವೈಯಕ್ತಿಕವಾಗಿ ಧನಸಹಾಯ ಘೋಷಿಸಿದರು. ಸಮುದಾಯಕ್ಕಾಗಿ ಸಂಘವು ಮಾಡುತ್ತಿರುವ ನಿರಂತರ ಸೇವೆ ಹಾಗೂ ಸತತ 2ನೇ ವರ್ಷವೂ 650 ವಿದ್ಯಾರ್ಥಿಗಳಿಗೆ ಇಂತಹ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡಿರುವುದನ್ನು ಗಮನಿಸಿ, ಸಂಘದ ಮುಂದಿನ ಸ್ವಂತ ಸೌಲಭ್ಯಗಳಿಗಾಗಿ ಸರ್ಕಾರದಿಂದ ಒಂದು ಸಿಎ (Civic Amenity) ಸೈಟ್ ಮಂಜೂರು ಮಾಡಿಕೊಡಲಾಗುವುದು ಎಂದು ಶಾಸಕ ಶ್ರೀ ಪ್ರಸಾದ್ ಅಬ್ಬಯ್ಯ ಘೋಷಿಸಿದರು. ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಹೇಶ್ ಪೋತದಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶ್ರೀ ರಾಹುಲ್ ಭಾವಿದೊಡ್ಡಿ, ಹುಬ್ಬಳ್ಳಿ ನಿರ್ದೇಶಕರಾದ ಶ್ರೀ ಸುಭಾಷಚಂದ್ರ ನಾಟೀಕಾರ್, ಹಾರೂಗೇರಿ ಮುಖ್ಯಾಧಿಕಾರಿ ಶ್ರೀ ಬಸವರಾಜ ಮನಗೂಳಿ, ಹೆಸ್ಕಾಂ ಎಇಇ ಶ್ರೀ ರಾಜಶೇಖರ ಹಾದಿಮನಿ, ಕೆಬಿಜೆಎನ್‌ಎಲ್ ಎಇಇ ಶ್ರೀ ಪ್ರಕಾಶ್ ಕಾಂಬಳೆ ಉಪಸ್ಥಿತರಿದ್ದರು. ಇವರೊಂದಿಗೆ ವಿಜಯಪುರ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಪರಶುರಾಮ ಲಂಬು, ಜಿಲ್ಲಾಧ್ಯಕ್ಷರಾದ ಶ್ರೀ ರಾಜಶೇಖರ ಯಡಹಳ್ಳಿ, ಶ್ರೀ ದಿಲೀಪ ಪ್ರಭಾಕರ, ಶ್ರೀ ಉಮೇಶ ಸಿಂಗೆ, ಶ್ರೀ ರಮೇಶ ಗಂಜಾಳ ಹಾಗೂ ಸಂಘದ ನೂರಾರು ಪ್ರಮುಖ ಪದಾಧಿಕಾರಿಗಳು, ರಾಜ್ಯದ ವಿವಿಧ ಜಿಲ್ಲೆಗಳ ಸಾವಿರಾರು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    1
    ವಿಜಯಪುರ/ಹುಬ್ಬಳ್ಳಿ: ಜಿ.ಎಸ್.ಸಿ.ಎಸ್.ಟಿ.ಇ.ಓ (GSCSTEO) ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಬೃಹತ್ ಸಮಾವೇಶವು ಅತ್ಯಂತ ಯಶಸ್ವಿಯಾಗಿ ಮತ್ತು ಐತಿಹಾಸಿಕವಾಗಿ ನೆರವೇರಿತು. ಸತತ ಎರಡನೇ ವರ್ಷವೂ ಇಂತಹ ಬೃಹತ್ ಸಮಾಜಮುಖಿ ಕಾರ್ಯಕ್ರಮವನ್ನು ಅತ್ಯಂತ ಅದ್ದೂರಿಯಾಗಿ ಆಯೋಜಿಸಿ, 650ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೆರವು ನೀಡಿದ ಸಂಘಟನೆಯ ಕಾರ್ಯವೈಖರಿಯನ್ನು ಗಣ್ಯರು ಮುಕ್ತಕಂಠದಿಂದ ಶ್ಲಾಘಿಸಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಚಿತ್ರದುರ್ಗದ ಶ್ರೀ ಜಗದ್ಗುರು ಚಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಶರಣರು ಹಾಗೂ ನೀಲಜಿ ಆಶ್ರಮದ ಶ್ರೀ ಪೂಜ್ಯ ಮಹಾದೇವ ಮಹಾರಾಜರು ವಹಿಸಿ ಆಶೀರ್ವಚನ ನೀಡಿದರು. ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕರಾದ ಶ್ರೀ ಪ್ರಸಾದ್ ಅಬ್ಬಯ್ಯ ಮತ್ತು ಬೆಳಗಾವಿಯ ಯುವ ಮುಖಂಡರಾದ ಶ್ರೀ ರಾಹುಲ್ ಸತೀಶ್ ಜಾರಕಿಹೊಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಚಿದಾನಂದ ಎಮ್. ಕಾಂಬಳೆ ಮತ್ತು ಸಂಘಟಕ ಶ್ರೀ ವಿಲಾಸ್ ಶಿವಪೂಜಿ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಸಮಾರಂಭದಲ್ಲಿ ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಇಷ್ಟು ಅದ್ದೂರಿ ಮತ್ತು ಶಿಸ್ತುಬದ್ಧ ಕಾರ್ಯಕ್ರಮ ಆಯೋಜಿಸಿದ್ದು ಐತಿಹಾಸಿಕ ದಾಖಲೆಯಾಗಿದೆ ಎಂದು ಬಣ್ಣಿಸಿದರು. ನೌಕರರ ಹಿತರಕ್ಷಣೆ ಮಾತ್ರವಲ್ಲದೆ, ವಧು-ವರರ ಕಲ್ಯಾಣ ಹಾಗೂ ವಿದ್ಯಾರ್ಥಿಗಳ ಉನ್ನತಿಗಾಗಿ ಸಂಘಟನೆ ಮಾಡುತ್ತಿರುವ ಕೆಲಸಗಳು ಮಾದರಿಯಾಗಿವೆ ಎಂದು ಶ್ಲಾಘಿಸಿದರು. ವಿವಿಧ ಜಿಲ್ಲೆಗಳಿಂದ ಬಂದಿದ್ದ ವಿದ್ಯಾರ್ಥಿಗಳು ಹಾಗೂ ಪಾಲಕರ ತಾಳ್ಮೆಯನ್ನು ಮೆಚ್ಚಿದ ಅವರು, ಮುಂದಿನ ವರ್ಷವೂ ಸಂಘಟನೆಯೊಂದಿಗೆ ಸದಾ ಇರುವುದಾಗಿ ಭರವಸೆ ನೀಡಿದರು. ಇದಲ್ಲದೆ, ಸಂಘಕ್ಕೆ ವೈಯಕ್ತಿಕವಾಗಿ ಧನಸಹಾಯ ಘೋಷಿಸಿದರು. ಸಮುದಾಯಕ್ಕಾಗಿ ಸಂಘವು ಮಾಡುತ್ತಿರುವ ನಿರಂತರ ಸೇವೆ ಹಾಗೂ ಸತತ 2ನೇ ವರ್ಷವೂ 650 ವಿದ್ಯಾರ್ಥಿಗಳಿಗೆ ಇಂತಹ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡಿರುವುದನ್ನು ಗಮನಿಸಿ, ಸಂಘದ ಮುಂದಿನ ಸ್ವಂತ ಸೌಲಭ್ಯಗಳಿಗಾಗಿ ಸರ್ಕಾರದಿಂದ ಒಂದು ಸಿಎ (Civic Amenity) ಸೈಟ್ ಮಂಜೂರು ಮಾಡಿಕೊಡಲಾಗುವುದು ಎಂದು ಶಾಸಕ ಶ್ರೀ ಪ್ರಸಾದ್ ಅಬ್ಬಯ್ಯ ಘೋಷಿಸಿದರು.

ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಹೇಶ್ ಪೋತದಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶ್ರೀ ರಾಹುಲ್ ಭಾವಿದೊಡ್ಡಿ, ಹುಬ್ಬಳ್ಳಿ ನಿರ್ದೇಶಕರಾದ ಶ್ರೀ ಸುಭಾಷಚಂದ್ರ ನಾಟೀಕಾರ್, ಹಾರೂಗೇರಿ ಮುಖ್ಯಾಧಿಕಾರಿ ಶ್ರೀ ಬಸವರಾಜ ಮನಗೂಳಿ, ಹೆಸ್ಕಾಂ ಎಇಇ ಶ್ರೀ ರಾಜಶೇಖರ ಹಾದಿಮನಿ, ಕೆಬಿಜೆಎನ್‌ಎಲ್ ಎಇಇ ಶ್ರೀ ಪ್ರಕಾಶ್ ಕಾಂಬಳೆ ಉಪಸ್ಥಿತರಿದ್ದರು. ಇವರೊಂದಿಗೆ ವಿಜಯಪುರ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಪರಶುರಾಮ ಲಂಬು, ಜಿಲ್ಲಾಧ್ಯಕ್ಷರಾದ ಶ್ರೀ ರಾಜಶೇಖರ ಯಡಹಳ್ಳಿ, ಶ್ರೀ ದಿಲೀಪ ಪ್ರಭಾಕರ, ಶ್ರೀ ಉಮೇಶ ಸಿಂಗೆ, ಶ್ರೀ ರಮೇಶ ಗಂಜಾಳ ಹಾಗೂ ಸಂಘದ ನೂರಾರು ಪ್ರಮುಖ ಪದಾಧಿಕಾರಿಗಳು, ರಾಜ್ಯದ ವಿವಿಧ ಜಿಲ್ಲೆಗಳ ಸಾವಿರಾರು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    user_ಪುಲಿಯನ್ ಸಾಮ್ರಾಜ್ಯ ಪತ್ರಿಕೆ
    ಪುಲಿಯನ್ ಸಾಮ್ರಾಜ್ಯ ಪತ್ರಿಕೆ
    Newspaper publisher ಅಳಮೇಲ, ವಿಜಯಪುರ, ಕರ್ನಾಟಕ•
    2 hrs ago
  • ಬಾಗೇವಾಡಿ ತಾಲೂಕಿನ ಹಂಗರಗಿ ಕ್ರಾಸ್ ಬಳಿ ನಾಗರಬೆಟ್ಟ ಗ್ರಾಮದ ದಲಿತ ಯುವಕ ರವಿಚಂದ್ರ ಮಾದರ ಅವರನ್ನು ಬರ್ಬರವಾಗಿ ಕೊಲೆ ಮಾಡಿದ ಅಮಾನುಷ ಘಟನೆಯನ್ನು ತೀವ್ರವಾಗಿ ಖಂಡಿಸಿ, ಅಂಬೇಡ್ಕರ್ ಸೇನೆ ನೇತೃತ್ವದಲ್ಲಿ ದಲಿತ ಸಂಘಟನೆಗಳ ಪದಾಧಿಕಾರಿಗಳು ತಾಳಿಕೋಟಿಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿದರು. ಜೂನ್ 1 ರಂದು ನಡೆಸಲಿರುವ ಪ್ರತಿಭಟನಾ ಮೆರವಣಿಗೆಯ ಕುರಿತು ಈ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಂಬೇಡ್ಕರ್ ಸೇನೆ ಜಿಲ್ಲಾ ಉಪಾಧ್ಯಕ್ಷ ಬಸ್ಸು ಮಾದರ, ಈ ಅಮಾನುಷ ಹತ್ಯೆಯನ್ನು ಮಾಡಿದ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ನೀಡುವಂತಾಗಲು ಎಲ್ಲ ದಲಿತ ಸಂಘಟನೆಗಳು ಒಂದಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಜೂನ್ 1 ರಂದು ಹಮ್ಮಿಕೊಳ್ಳಲಾಗುತ್ತಿರುವ ಪ್ರತಿಭಟನೆಗೆ ಎಲ್ಲರ ಸಹಕಾರ ಇರಬೇಕು ಎಂದು ಅವರು ಮನವಿ ಮಾಡಿದರು. ಡಿಎಸ್ಎಸ್ (ನಾಗವಾರ ಬಣ) ಬೆಳಗಾಂವಿ ವಿಭಾಗದ ಸಂಚಾಲಕ ದೇವೇಂದ್ರ ಹಾದಿಮನಿ ಅವರು, ಈ ಬರ್ಬರ ಹತ್ಯೆಯನ್ನು ನಡೆಸಿದ ಕೊಲೆಗೆಡಕರಿಗೆ ಕಠಿಣ ಶಿಕ್ಷೆ ನೀಡುವುದರ ಜೊತೆಗೆ, ನೊಂದ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ ಎಂದು ಆಗ್ರಹಿಸಿದರು. ಇದಕ್ಕಾಗಿ ಸರ್ಕಾರದ ವಿರುದ್ಧ ನಾವೆಲ್ಲರೂ ಒಂದಾಗಿ ಹೋರಾಟ ನಡೆಸೋಣ ಎಂದು ಅವರು ಕರೆ ನೀಡಿದರು. ಡಿ.ಎಸ್.ಎಸ್. ಅಂಬೇಡ್ಕರ್ ಧ್ವನಿ (ಚಂದ್ರಕಾಂತ್ ಕಾದ್ರೊಳ್ಳಿ ಬಣ)ದ ತಾಲೂಕಾಧ್ಯಕ್ಷ ರಮೇಶ ದೊಡಮನಿ (ಸಾಸನೂರ) ಮಾತನಾಡಿ, ಇದೊಂದು ಅತ್ಯಂತ ಅಮಾನವೀಯವಾದ ಕೊಲೆ ಘಟನೆಯಾಗಿದ್ದು, ಇದನ್ನು ಜಾತಿ ಮತ ಭೇದವಿಲ್ಲದೆ ಎಲ್ಲರೂ ಖಂಡಿಸಬೇಕಾಗಿದೆ ಎಂದು ಹೇಳಿದರು. ಆದ್ದರಿಂದ ಜೂನ್ 1 ರಂದು ನಡೆಯಲಿರುವ ಪ್ರತಿಭಟನೆಗೆ ಪಟ್ಟಣದ ಎಲ್ಲ ಬಾಂಧವರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಅಂಬೇಡ್ಕರ್ ಸೇನೆ ತಾಲೂಕ ಘಟಕದ ತಾಲೂಕಾಧ್ಯಕ್ಷ ಗೋಪಾಲ ಕಟ್ಟಿಮನಿ ಅವರು ಕಾರ್ಯಕ್ರಮದ ರೂಪ-ರೇಷೆ ಕುರಿತು ವಿವರಿಸಿದರು. ಸಭೆಯಲ್ಲಿ ಅಂಬೇಡ್ಕರ್ ಸೇನೆ ತಾಲೂಕ ಘಟಕದ ಖಜಾಂಚಿ ಪರಶುರಾಮ ತಳವಾರ, ಹಾಗೂ ಗಣ್ಯರಾದ ಯಮನಪ್ಪ ಕಟ್ಟಿಮನಿ, ಹುಲಿಗೆಪ್ಪ ಕಟ್ಟಿಮನಿ, ದ್ಯಾಮಣ್ಣ ಸೋಮನಾಳ, ರಮೇಶ ಮಾದರ, ದೇವಪ್ಪ ತುಂಬಗಿ ಮಾದರ, ಶಂಕ್ರಪ್ಪ ದೊಡ್ಡಮನಿ, ಅಯ್ಯಪ್ಪ ಸಾಹಸನೂರ, ನಿಂಗಪ್ಪ ಮಾದರ, ಬಸವರಾಜ ಸಾಸನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    1
    ಬಾಗೇವಾಡಿ ತಾಲೂಕಿನ ಹಂಗರಗಿ ಕ್ರಾಸ್ ಬಳಿ ನಾಗರಬೆಟ್ಟ ಗ್ರಾಮದ ದಲಿತ ಯುವಕ ರವಿಚಂದ್ರ ಮಾದರ ಅವರನ್ನು ಬರ್ಬರವಾಗಿ ಕೊಲೆ ಮಾಡಿದ ಅಮಾನುಷ ಘಟನೆಯನ್ನು ತೀವ್ರವಾಗಿ ಖಂಡಿಸಿ, ಅಂಬೇಡ್ಕರ್ ಸೇನೆ ನೇತೃತ್ವದಲ್ಲಿ ದಲಿತ ಸಂಘಟನೆಗಳ ಪದಾಧಿಕಾರಿಗಳು ತಾಳಿಕೋಟಿಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿದರು. ಜೂನ್ 1 ರಂದು ನಡೆಸಲಿರುವ ಪ್ರತಿಭಟನಾ ಮೆರವಣಿಗೆಯ ಕುರಿತು ಈ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಂಬೇಡ್ಕರ್ ಸೇನೆ ಜಿಲ್ಲಾ ಉಪಾಧ್ಯಕ್ಷ ಬಸ್ಸು ಮಾದರ, ಈ ಅಮಾನುಷ ಹತ್ಯೆಯನ್ನು ಮಾಡಿದ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ನೀಡುವಂತಾಗಲು ಎಲ್ಲ ದಲಿತ ಸಂಘಟನೆಗಳು ಒಂದಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಜೂನ್ 1 ರಂದು ಹಮ್ಮಿಕೊಳ್ಳಲಾಗುತ್ತಿರುವ ಪ್ರತಿಭಟನೆಗೆ ಎಲ್ಲರ ಸಹಕಾರ ಇರಬೇಕು ಎಂದು ಅವರು ಮನವಿ ಮಾಡಿದರು. ಡಿಎಸ್ಎಸ್ (ನಾಗವಾರ ಬಣ) ಬೆಳಗಾಂವಿ ವಿಭಾಗದ ಸಂಚಾಲಕ ದೇವೇಂದ್ರ ಹಾದಿಮನಿ ಅವರು, ಈ ಬರ್ಬರ ಹತ್ಯೆಯನ್ನು ನಡೆಸಿದ ಕೊಲೆಗೆಡಕರಿಗೆ ಕಠಿಣ ಶಿಕ್ಷೆ ನೀಡುವುದರ ಜೊತೆಗೆ, ನೊಂದ ಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ ಎಂದು ಆಗ್ರಹಿಸಿದರು. ಇದಕ್ಕಾಗಿ ಸರ್ಕಾರದ ವಿರುದ್ಧ ನಾವೆಲ್ಲರೂ ಒಂದಾಗಿ ಹೋರಾಟ ನಡೆಸೋಣ ಎಂದು ಅವರು ಕರೆ ನೀಡಿದರು.

ಡಿ.ಎಸ್.ಎಸ್. ಅಂಬೇಡ್ಕರ್ ಧ್ವನಿ (ಚಂದ್ರಕಾಂತ್ ಕಾದ್ರೊಳ್ಳಿ ಬಣ)ದ ತಾಲೂಕಾಧ್ಯಕ್ಷ ರಮೇಶ ದೊಡಮನಿ (ಸಾಸನೂರ) ಮಾತನಾಡಿ, ಇದೊಂದು ಅತ್ಯಂತ ಅಮಾನವೀಯವಾದ ಕೊಲೆ ಘಟನೆಯಾಗಿದ್ದು, ಇದನ್ನು ಜಾತಿ ಮತ ಭೇದವಿಲ್ಲದೆ ಎಲ್ಲರೂ ಖಂಡಿಸಬೇಕಾಗಿದೆ ಎಂದು ಹೇಳಿದರು. ಆದ್ದರಿಂದ ಜೂನ್ 1 ರಂದು ನಡೆಯಲಿರುವ ಪ್ರತಿಭಟನೆಗೆ ಪಟ್ಟಣದ ಎಲ್ಲ ಬಾಂಧವರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಅಂಬೇಡ್ಕರ್ ಸೇನೆ ತಾಲೂಕ ಘಟಕದ ತಾಲೂಕಾಧ್ಯಕ್ಷ ಗೋಪಾಲ ಕಟ್ಟಿಮನಿ ಅವರು ಕಾರ್ಯಕ್ರಮದ ರೂಪ-ರೇಷೆ ಕುರಿತು ವಿವರಿಸಿದರು. ಸಭೆಯಲ್ಲಿ ಅಂಬೇಡ್ಕರ್ ಸೇನೆ ತಾಲೂಕ ಘಟಕದ ಖಜಾಂಚಿ ಪರಶುರಾಮ ತಳವಾರ, ಹಾಗೂ ಗಣ್ಯರಾದ ಯಮನಪ್ಪ ಕಟ್ಟಿಮನಿ, ಹುಲಿಗೆಪ್ಪ ಕಟ್ಟಿಮನಿ, ದ್ಯಾಮಣ್ಣ ಸೋಮನಾಳ, ರಮೇಶ ಮಾದರ, ದೇವಪ್ಪ ತುಂಬಗಿ ಮಾದರ, ಶಂಕ್ರಪ್ಪ ದೊಡ್ಡಮನಿ, ಅಯ್ಯಪ್ಪ ಸಾಹಸನೂರ, ನಿಂಗಪ್ಪ ಮಾದರ, ಬಸವರಾಜ ಸಾಸನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    12 hrs ago
  • ಗುಳೇದಗುಡ್ಡ ಪಟ್ಟಣದ ತಹಶೀಲ್ದಾರರ ಕಚೇರಿಯಲ್ಲಿ ಶುಕ್ರವಾರ ನಡೆದ ತಾಲೂಕು ಮಟ್ಟದ ವಿಕಲಚೇತನರ ಕುಂದುಕೊರತೆ ಸಭೆಯಲ್ಲಿ, ತಹಶೀಲ್ದಾರ ಎಸ್.ಎಫ್. ಬೊಮ್ಮಣ್ಣವರ ಅವರು ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡಿದರು. ಸರಕಾರದ ಆದೇಶದಂತೆ, ಇಲಾಖೆಗಳಿಗೆ ನಿಗದಿಪಡಿಸಿದ ಒಟ್ಟು ಅನುದಾನದಲ್ಲಿ ಶೇಕಡಾ 5 ರಷ್ಟನ್ನು ಕಡ್ಡಾಯವಾಗಿ ಖರ್ಚು ಮಾಡಬೇಕು ಹಾಗೂ ಅಗತ್ಯ ಮಾಹಿತಿಯೊಂದಿಗೆ ಮುಂದಿನ ಸಭೆಗೆ ಹಾಜರಾಗಬೇಕು ಎಂದು ಅವರು ಸೂಚಿಸಿದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು ಮತ್ತು ಕಾಟಾಚಾರಕ್ಕೆ ಸಭೆಗೆ ಹಾಜರಾಗಬಾರದು ಎಂದು ಎಚ್ಚರಿಕೆ ನೀಡಿದರು. ವಿಕಲಚೇತನರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ಅಥವಾ ನೇರವಾಗಿ ತಮ್ಮನ್ನು ಸಂಪರ್ಕಿಸುವಂತೆ ತಹಶೀಲ್ದಾರರು ತಿಳಿಸಿದರು. ಇದುವರೆಗೆ ಮೂರು ತಿಂಗಳ ವಿಕಲಚೇತನರ ಪೋಷಣಾ ಭತ್ಯೆ ಅನುದಾನ ಜಮಾ ಆಗದಿರುವ ಬಗ್ಗೆ ಸಭೆಯಲ್ಲಿ ಗಮನ ಸೆಳೆಯಲಾಯಿತು. ಕೃಷಿ, ಪಶುಸಂಗೋಪನೆ, ಮತ್ತು ಹೆಸ್ಕಾಂ ಇಲಾಖೆಯವರು ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ನಿಯಮಾನುಸಾರ ವಿಕಲಚೇತನರಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಲಾಯಿತು. ಇದೇ ವೇಳೆ, ಬಸ್ ನಿಲ್ದಾಣದಲ್ಲಿ ವಿಶೇಷ ಶೌಚಾಲಯ ನಿರ್ಮಿಸಲು ಹಾಗೂ ಬಸ್‌ನಲ್ಲಿ ವಾಸಸ್ಥಳದಿಂದ 100 ಕಿ.ಮೀ. ಪ್ರಯಾಣಿಸಲು ಅವಕಾಶ ಕಲ್ಪಿಸಿ, ಮಾನವೀಯತೆಯಿಂದ ವರ್ತಿಸಲು ಮತ್ತು ನಿಗದಿಪಡಿಸಿದ ಆಸನದಲ್ಲಿ ಕೂರಲು ಅವಕಾಶ ಮಾಡಿಕೊಡುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಅಲ್ಲದೆ, ವಾರದಲ್ಲಿ ಒಂದು ದಿನ ಗುಳೇದಗುಡ್ಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಯುಡಿಐಡಿ ಮೆಡಿಕಲ್ ಕ್ಯಾಂಪ್ ನಡೆಸಲು ಕ್ರಮವಹಿಸುವಂತೆ ಸೂಚಿಸಲಾಯಿತು. ಈ ಸಭೆಗೆ ತಾಲ್ಲೂಕು ಪಂಚಾಯತ್, ಅರಣ್ಯ, ಖಜಾನೆ, ಪೊಲೀಸ್, ತೋಟಗಾರಿಕೆ, ಸಮಾಜ ಕಲ್ಯಾಣ ಸೇರಿದಂತೆ ಬಹುತೇಕ ಇಲಾಖೆಗಳ ಅಧಿಕಾರಿಗಳು ಗೈರು ಹಾಜರಾಗಿದ್ದರು. ಇದರಿಂದ ಆಕ್ರೋಶಗೊಂಡ ವಿಕಲಚೇತನರು, ಮುಂದಿನ ಸಭೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಜರಾಗದಿದ್ದರೆ ಸಭೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಮಾತನಾಡಿದ ವಿಕಲಚೇತನರ ಸಂಘದ ತಾಲ್ಲೂಕು ಅಧ್ಯಕ್ಷ ಹುಚ್ಚೇಶ ಯಂಡಿಗೇರಿ ಅವರು, ವಿಕಲಚೇತನರ ಕುಂದುಕೊರತೆ ಸಭೆಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಬೇಕು, ಇದು ಕಾಟಾಚಾರದ ಸಭೆಯಾಗಬಾರದು, ಹಾಗೂ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದರೊಂದಿಗೆ ಗುಳೇದಗುಡ್ಡದಲ್ಲಿ ವಿಕಲಚೇತನರ ಸಮುದಾಯ ಭವನ ನಿರ್ಮಿಸುವಂತೆ ಒತ್ತಾಯಿಸಿದರು. ತಹಶೀಲ್ದಾರ ಬೊಮ್ಮಣ್ಣವರ ಅವರು, ಸಭೆಗೆ ಗೈರಾದ ಇಲಾಖಾ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಮತ್ತೊಮ್ಮೆ ಸೂಚಿಸಿದರು.
    4
    ಗುಳೇದಗುಡ್ಡ ಪಟ್ಟಣದ ತಹಶೀಲ್ದಾರರ ಕಚೇರಿಯಲ್ಲಿ ಶುಕ್ರವಾರ ನಡೆದ ತಾಲೂಕು ಮಟ್ಟದ ವಿಕಲಚೇತನರ ಕುಂದುಕೊರತೆ ಸಭೆಯಲ್ಲಿ, ತಹಶೀಲ್ದಾರ ಎಸ್.ಎಫ್. ಬೊಮ್ಮಣ್ಣವರ ಅವರು ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡಿದರು. ಸರಕಾರದ ಆದೇಶದಂತೆ, ಇಲಾಖೆಗಳಿಗೆ ನಿಗದಿಪಡಿಸಿದ ಒಟ್ಟು ಅನುದಾನದಲ್ಲಿ ಶೇಕಡಾ 5 ರಷ್ಟನ್ನು ಕಡ್ಡಾಯವಾಗಿ ಖರ್ಚು ಮಾಡಬೇಕು ಹಾಗೂ ಅಗತ್ಯ ಮಾಹಿತಿಯೊಂದಿಗೆ ಮುಂದಿನ ಸಭೆಗೆ ಹಾಜರಾಗಬೇಕು ಎಂದು ಅವರು ಸೂಚಿಸಿದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು ಮತ್ತು ಕಾಟಾಚಾರಕ್ಕೆ ಸಭೆಗೆ ಹಾಜರಾಗಬಾರದು ಎಂದು ಎಚ್ಚರಿಕೆ ನೀಡಿದರು.

ವಿಕಲಚೇತನರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ಅಥವಾ ನೇರವಾಗಿ ತಮ್ಮನ್ನು ಸಂಪರ್ಕಿಸುವಂತೆ ತಹಶೀಲ್ದಾರರು ತಿಳಿಸಿದರು. ಇದುವರೆಗೆ ಮೂರು ತಿಂಗಳ ವಿಕಲಚೇತನರ ಪೋಷಣಾ ಭತ್ಯೆ ಅನುದಾನ ಜಮಾ ಆಗದಿರುವ ಬಗ್ಗೆ ಸಭೆಯಲ್ಲಿ ಗಮನ ಸೆಳೆಯಲಾಯಿತು. ಕೃಷಿ, ಪಶುಸಂಗೋಪನೆ, ಮತ್ತು ಹೆಸ್ಕಾಂ ಇಲಾಖೆಯವರು ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ನಿಯಮಾನುಸಾರ ವಿಕಲಚೇತನರಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಲಾಯಿತು. ಇದೇ ವೇಳೆ, ಬಸ್ ನಿಲ್ದಾಣದಲ್ಲಿ ವಿಶೇಷ ಶೌಚಾಲಯ ನಿರ್ಮಿಸಲು ಹಾಗೂ ಬಸ್‌ನಲ್ಲಿ ವಾಸಸ್ಥಳದಿಂದ 100 ಕಿ.ಮೀ. ಪ್ರಯಾಣಿಸಲು ಅವಕಾಶ ಕಲ್ಪಿಸಿ, ಮಾನವೀಯತೆಯಿಂದ ವರ್ತಿಸಲು ಮತ್ತು ನಿಗದಿಪಡಿಸಿದ ಆಸನದಲ್ಲಿ ಕೂರಲು ಅವಕಾಶ ಮಾಡಿಕೊಡುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಅಲ್ಲದೆ, ವಾರದಲ್ಲಿ ಒಂದು ದಿನ ಗುಳೇದಗುಡ್ಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಯುಡಿಐಡಿ ಮೆಡಿಕಲ್ ಕ್ಯಾಂಪ್ ನಡೆಸಲು ಕ್ರಮವಹಿಸುವಂತೆ ಸೂಚಿಸಲಾಯಿತು.

ಈ ಸಭೆಗೆ ತಾಲ್ಲೂಕು ಪಂಚಾಯತ್, ಅರಣ್ಯ, ಖಜಾನೆ, ಪೊಲೀಸ್, ತೋಟಗಾರಿಕೆ, ಸಮಾಜ ಕಲ್ಯಾಣ ಸೇರಿದಂತೆ ಬಹುತೇಕ ಇಲಾಖೆಗಳ ಅಧಿಕಾರಿಗಳು ಗೈರು ಹಾಜರಾಗಿದ್ದರು. ಇದರಿಂದ ಆಕ್ರೋಶಗೊಂಡ ವಿಕಲಚೇತನರು, ಮುಂದಿನ ಸಭೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಜರಾಗದಿದ್ದರೆ ಸಭೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಮಾತನಾಡಿದ ವಿಕಲಚೇತನರ ಸಂಘದ ತಾಲ್ಲೂಕು ಅಧ್ಯಕ್ಷ ಹುಚ್ಚೇಶ ಯಂಡಿಗೇರಿ ಅವರು, ವಿಕಲಚೇತನರ ಕುಂದುಕೊರತೆ ಸಭೆಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಬೇಕು, ಇದು ಕಾಟಾಚಾರದ ಸಭೆಯಾಗಬಾರದು, ಹಾಗೂ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದರೊಂದಿಗೆ ಗುಳೇದಗುಡ್ಡದಲ್ಲಿ ವಿಕಲಚೇತನರ ಸಮುದಾಯ ಭವನ ನಿರ್ಮಿಸುವಂತೆ ಒತ್ತಾಯಿಸಿದರು. ತಹಶೀಲ್ದಾರ ಬೊಮ್ಮಣ್ಣವರ ಅವರು, ಸಭೆಗೆ ಗೈರಾದ ಇಲಾಖಾ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಮತ್ತೊಮ್ಮೆ ಸೂಚಿಸಿದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    12 hrs ago
  • ಇಳಕಲ್ ತಾಲೂಕು ಅಹಿಂದ ಸಂಘಟನೆಯು ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದೆ. ಇದರೊಂದಿಗೆ, ಸಂಘಟನೆಯು ತಮ್ಮ ಸಂಪುಟದಲ್ಲಿ ರಾಜ್ಯದ ಅಹಿಂದ ನಾಯಕರಾದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದೆ. ಜೊತೆಗೆ, ಅಹಿಂದ ತತ್ವಗಳ ಆದರ್ಶಗಳನ್ನು ಹೊಂದಿರುವ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದೂ ಅಹಿಂದ ಸಂಘಟನೆಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಅಹಿಂದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ರಫೀಕ್ ಮುಲ್ಲಾ, ಅಹಿಂದ ರಾಜ್ಯ ಅಲ್ಪಸಂಖ್ಯಾತ ಯುವ ಘಟಕದ ಅಧ್ಯಕ್ಷ ಮೈಹಿನು ಕಂದಗಲ್ಲ, ಅಹಿಂದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪರಶುರಾಮ ತಂಬಲಗಡ್ಡಿ, ಚಂದ್ರಶೇಖರ್ ಬಸರಗಿಡದ, ಸಂಗಪ್ಪ ಕುರಿ, ರಾಜು ಭಾಗವಾನ್, ಮತ್ತು ಸಂಗಪ್ಪ ತೊಂಡಿಹಾಳ ಸೇರಿದಂತೆ ಇತರ ಅಹಿಂದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇಳಕಲ್ ತಾಲೂಕು ಅಹಿಂದ ಸಂಘಟನೆಯು ಈ ಬೇಡಿಕೆಗಳನ್ನು ಪುನರುಚ್ಚರಿಸಿದೆ.
    1
    ಇಳಕಲ್ ತಾಲೂಕು ಅಹಿಂದ ಸಂಘಟನೆಯು ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದೆ. ಇದರೊಂದಿಗೆ, ಸಂಘಟನೆಯು ತಮ್ಮ ಸಂಪುಟದಲ್ಲಿ ರಾಜ್ಯದ ಅಹಿಂದ ನಾಯಕರಾದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದೆ. ಜೊತೆಗೆ, ಅಹಿಂದ ತತ್ವಗಳ ಆದರ್ಶಗಳನ್ನು ಹೊಂದಿರುವ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದೂ ಅಹಿಂದ ಸಂಘಟನೆಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ.

ಈ ಪತ್ರಿಕಾಗೋಷ್ಠಿಯಲ್ಲಿ ಅಹಿಂದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ರಫೀಕ್ ಮುಲ್ಲಾ, ಅಹಿಂದ ರಾಜ್ಯ ಅಲ್ಪಸಂಖ್ಯಾತ ಯುವ ಘಟಕದ ಅಧ್ಯಕ್ಷ ಮೈಹಿನು ಕಂದಗಲ್ಲ, ಅಹಿಂದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪರಶುರಾಮ ತಂಬಲಗಡ್ಡಿ, ಚಂದ್ರಶೇಖರ್ ಬಸರಗಿಡದ, ಸಂಗಪ್ಪ ಕುರಿ, ರಾಜು ಭಾಗವಾನ್, ಮತ್ತು ಸಂಗಪ್ಪ ತೊಂಡಿಹಾಳ ಸೇರಿದಂತೆ ಇತರ ಅಹಿಂದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇಳಕಲ್ ತಾಲೂಕು ಅಹಿಂದ ಸಂಘಟನೆಯು ಈ ಬೇಡಿಕೆಗಳನ್ನು ಪುನರುಚ್ಚರಿಸಿದೆ.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    45 min ago
  • ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ 25 ಎಕರೆ ಜಮೀನಿನ ವಿವಾದದಿಂದಾಗಿ ಆರು ಜನರು ಹತ್ಯೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಈ ಘಟನೆ ಕುರಿತು ಮಾಹಿತಿ ನೀಡಿದರು. ಘಟನೆ ನಡೆದಾಗ ಜಮೀನಿನಲ್ಲಿ ಎಂಟು ಜನರು ಕೆಲಸ ಮಾಡುತ್ತಿದ್ದರು. ಈ ವೇಳೆ, ಬೈಕ್‌ಗಳಲ್ಲಿ ಏಕಾಏಕಿ 28 ಜನರು ಆಗಮಿಸಿ, ಮಚ್ಚು ಹಾಗೂ ಇನ್ನಿತರ ಆಯುಧಗಳಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಈ ದಾಳಿಯಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ. ಆದರೂ, ಸಂಪೂರ್ಣ ಮಾಹಿತಿ ಪೋಸ್ಟ್‌ಮಾರ್ಟಮ್ ವರದಿ ಬಂದ ನಂತರವೇ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಘಟನೆಗೆ ಕಾರಣರಾದ ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಲಾಗಿದೆ ಎಂದು ಎಸ್ಪಿ ಹೇಳಿದರು.
    1
    ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ 25 ಎಕರೆ ಜಮೀನಿನ ವಿವಾದದಿಂದಾಗಿ ಆರು ಜನರು ಹತ್ಯೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಈ ಘಟನೆ ಕುರಿತು ಮಾಹಿತಿ ನೀಡಿದರು. ಘಟನೆ ನಡೆದಾಗ ಜಮೀನಿನಲ್ಲಿ ಎಂಟು ಜನರು ಕೆಲಸ ಮಾಡುತ್ತಿದ್ದರು. ಈ ವೇಳೆ, ಬೈಕ್‌ಗಳಲ್ಲಿ ಏಕಾಏಕಿ 28 ಜನರು ಆಗಮಿಸಿ, ಮಚ್ಚು ಹಾಗೂ ಇನ್ನಿತರ ಆಯುಧಗಳಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಈ ದಾಳಿಯಲ್ಲಿ ಆರು ಜನರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೇಲ್ನೋಟಕ್ಕೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ. ಆದರೂ, ಸಂಪೂರ್ಣ ಮಾಹಿತಿ ಪೋಸ್ಟ್‌ಮಾರ್ಟಮ್ ವರದಿ ಬಂದ ನಂತರವೇ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಘಟನೆಗೆ ಕಾರಣರಾದ ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಲಾಗಿದೆ ಎಂದು ಎಸ್ಪಿ ಹೇಳಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
  • ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಉದ್ಯಾನವನ ನಗರದಲ್ಲಿ ಏಳು ಜನರಿದ್ದ ಕಳ್ಳರ ಗುಂಪೊಂದು ಎರಡು ಮನೆಗಳಲ್ಲಿ ಕಳ್ಳತನ ನಡೆಸಿದೆ. ಪುಂಡಲೀಕ ಬಿರಾದಾರ ಮತ್ತು ಮರ್ತೋವ ಎಂಬುವರ ಮನೆಗಳಿಗೆ ನುಗ್ಗಿದ ಕಳ್ಳರು ಚಿನ್ನ, ನಗದು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿದ್ದಾರೆ. ಕಳ್ಳರ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    1
    ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಉದ್ಯಾನವನ ನಗರದಲ್ಲಿ ಏಳು ಜನರಿದ್ದ ಕಳ್ಳರ ಗುಂಪೊಂದು ಎರಡು ಮನೆಗಳಲ್ಲಿ ಕಳ್ಳತನ ನಡೆಸಿದೆ. ಪುಂಡಲೀಕ ಬಿರಾದಾರ ಮತ್ತು ಮರ್ತೋವ ಎಂಬುವರ ಮನೆಗಳಿಗೆ ನುಗ್ಗಿದ ಕಳ್ಳರು ಚಿನ್ನ, ನಗದು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿದ್ದಾರೆ. ಕಳ್ಳರ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    21 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.