logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಳ್ಳಾರಿ: ಶ್ರದ್ಧಾಭಕ್ತಿಯಿಂದ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ ಬಳ್ಳಾರಿ: ಜಿಲ್ಲಾಡಳಿತದ ವತಿಯಿಂದ ಮಹಾಮಾನವತಾವಾದಿ, ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರರ ಜನ್ಮದಿನೋತ್ಸವವನ್ನು ಸೋಮವಾರ ನಗರದಲ್ಲಿ ಅತ್ಯಂತ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಗರದ ಹೆಚ್.ಆರ್. ಗವಿಯಪ್ಪ ವೃತ್ತದ ಬಳಿಯಿರುವ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸುವ ಮೂಲಕ ಜಿಲ್ಲಾಡಳಿತದ ಪರವಾಗಿ ಗೌರವ ಸಮರ್ಪಿಸಲಾಯಿತು. ​ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ ಅವರು, 12ನೇ ಶತಮಾನದಲ್ಲೇ ಸಮಾನತೆ, ಏಕತೆ ಮತ್ತು 'ಕಾಯಕವೇ ಕೈಲಾಸ' ಎಂಬ ಉದಾತ್ತ ತತ್ವಗಳನ್ನು ಸಾರಿದ ಬಸವಣ್ಣನವರು ವಿಶ್ವಕ್ಕೆ ಮಾದರಿಯಾಗಿದ್ದಾರೆ. ಬಸವಣ್ಣನವರು ಹಾಕಿ ಕೊಟ್ಟ ಸಮಾನತೆಯ ಹಾದಿಯಲ್ಲಿ ಇಂದು ನಾವೆಲ್ಲರೂ ಸಾಗಬೇಕಾದ ಅಗತ್ಯವಿದೆ ಎಂದು ಕರೆ ನೀಡಿದರು. ​ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಮಾತನಾಡಿ, ವಿಶ್ವಗುರು, ಶ್ರೇಷ್ಠ ವಚನಕಾರ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲ್ಪಟ್ಟಿರುವ ಬಸವಣ್ಣನವರ ಜನ್ಮದಿನೋತ್ಸವವನ್ನು ಇಂದು ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ, ಮಾನವಕುಲವೆಲ್ಲ ಒಂದೇ ಎಂಬ ಏಕತಾ ಭಾವ ಮೂಡಿಸಿದ ಪುಣ್ಯಾತ್ಮರು ಬಸವಣ್ಣನವರು ಎಂದು ಸ್ಮರಿಸುತ್ತಾ ಜಿಲ್ಲೆಯ ಸಮಸ್ತ ಜನತೆಗೆ ಬಸವ ಜಯಂತಿಯ ಶುಭಾಶಯಗಳನ್ನು ಕೋರಿದರು. ​ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಉಪಸ್ಥಿತರಿದ್ದರು. ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ಸಮಾಜದ ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಬಸವಣ್ಣನವರಿಗೆ ನಮನ ಸಲ್ಲಿಸಿದರು.

5 hrs ago
user_Girish Ghatage
Girish Ghatage
Local News Reporter ಧಾರವಾಡ, ಧಾರವಾಡ, ಕರ್ನಾಟಕ•
5 hrs ago
f489e366-80c1-4353-ac28-15f1f347b2ed

ಬಳ್ಳಾರಿ: ಶ್ರದ್ಧಾಭಕ್ತಿಯಿಂದ ಜಗಜ್ಯೋತಿ ಬಸವೇಶ್ವರ ಜಯಂತಿ ಆಚರಣೆ ಬಳ್ಳಾರಿ: ಜಿಲ್ಲಾಡಳಿತದ ವತಿಯಿಂದ ಮಹಾಮಾನವತಾವಾದಿ, ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರರ ಜನ್ಮದಿನೋತ್ಸವವನ್ನು ಸೋಮವಾರ ನಗರದಲ್ಲಿ ಅತ್ಯಂತ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಗರದ ಹೆಚ್.ಆರ್. ಗವಿಯಪ್ಪ ವೃತ್ತದ ಬಳಿಯಿರುವ ಜಗಜ್ಯೋತಿ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸುವ ಮೂಲಕ ಜಿಲ್ಲಾಡಳಿತದ ಪರವಾಗಿ ಗೌರವ ಸಮರ್ಪಿಸಲಾಯಿತು. ​ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ ಅವರು, 12ನೇ ಶತಮಾನದಲ್ಲೇ ಸಮಾನತೆ, ಏಕತೆ ಮತ್ತು 'ಕಾಯಕವೇ ಕೈಲಾಸ' ಎಂಬ ಉದಾತ್ತ ತತ್ವಗಳನ್ನು ಸಾರಿದ ಬಸವಣ್ಣನವರು ವಿಶ್ವಕ್ಕೆ ಮಾದರಿಯಾಗಿದ್ದಾರೆ. ಬಸವಣ್ಣನವರು ಹಾಕಿ ಕೊಟ್ಟ ಸಮಾನತೆಯ ಹಾದಿಯಲ್ಲಿ ಇಂದು ನಾವೆಲ್ಲರೂ ಸಾಗಬೇಕಾದ ಅಗತ್ಯವಿದೆ ಎಂದು ಕರೆ ನೀಡಿದರು. ​ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಮಾತನಾಡಿ, ವಿಶ್ವಗುರು, ಶ್ರೇಷ್ಠ

715745ca-a859-48c4-b257-6ac3bb8abe85

ವಚನಕಾರ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲ್ಪಟ್ಟಿರುವ ಬಸವಣ್ಣನವರ ಜನ್ಮದಿನೋತ್ಸವವನ್ನು ಇಂದು ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ, ಮಾನವಕುಲವೆಲ್ಲ ಒಂದೇ ಎಂಬ ಏಕತಾ ಭಾವ ಮೂಡಿಸಿದ ಪುಣ್ಯಾತ್ಮರು ಬಸವಣ್ಣನವರು ಎಂದು ಸ್ಮರಿಸುತ್ತಾ ಜಿಲ್ಲೆಯ ಸಮಸ್ತ ಜನತೆಗೆ ಬಸವ ಜಯಂತಿಯ ಶುಭಾಶಯಗಳನ್ನು ಕೋರಿದರು. ​ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಉಪಸ್ಥಿತರಿದ್ದರು. ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ಸಮಾಜದ ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಬಸವಣ್ಣನವರಿಗೆ ನಮನ ಸಲ್ಲಿಸಿದರು.

More news from Karnataka and nearby areas
  • ಭಾಲ್ಕಿಯಲ್ಲಿ ಬೃಹತ್ ಆರೋಗ್ಯ ಶಿಬಿರ: 180 ಜನರಿಗೆ ತಪಾಸಣೆ, 101 ಯುವಕರಿಂದ ರಕ್ತದಾನ ಆರೋಗ್ಯವೇ ಭಾಗ್ಯ: ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಮಾನವೀಯತೆಯ ಮೆರಗು; 101 ಯುನಿಟ್ ರಕ್ತ ಸಂಗ್ರಹ #JB_News_Kannada
    1
    ಭಾಲ್ಕಿಯಲ್ಲಿ ಬೃಹತ್ ಆರೋಗ್ಯ ಶಿಬಿರ: 180 ಜನರಿಗೆ ತಪಾಸಣೆ, 101 ಯುವಕರಿಂದ ರಕ್ತದಾನ
ಆರೋಗ್ಯವೇ ಭಾಗ್ಯ: ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಮಾನವೀಯತೆಯ ಮೆರಗು; 101 ಯುನಿಟ್ ರಕ್ತ ಸಂಗ್ರಹ
#JB_News_Kannada
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Belagavi, Karnataka•
    8 hrs ago
  • *ರಾಯಬಾಗದಲ್ಲಿ ಬಸವ ಜಯಂತಿಯ ಹಳ್ಳಿ ಸೊಬಗು: ಶಿಕ್ಷಣ ಪ್ರೇಮಿ ಪಾಟೀಲ ಪರಿವಾರದ ಜನಸೇವೆಗೆ ಸಾಕ್ಷಿಯಾದ ಶೋಭಾಯಾತ್ರೆ* ಕಾಯಕವೇ ಕೈಲಾಸ ಎಂದು ಸಾರಿದ ಜಗಜ್ಯೋತಿ ಬಸವಣ್ಣನವರ ಜಯಂತಿಯ ನಿಮಿತ್ತ ಇಂದು ರಾಯಬಾಗ ಪಟ್ಟಣ ಭಕ್ತಿ ಮತ್ತು ಸಂಭ್ರಮದ ಕಡಲಲ್ಲಿ ತೇಲಿತು. ಪಟ್ಟಣದಾದ್ಯಂತ ಹಮ್ಮಿಕೊಳ್ಳಲಾಗಿದ್ದ ಭವ್ಯ ಶೋಭಾಯಾತ್ರೆಯು ಹಳ್ಳಿಯ ಸೊಬಗನ್ನು ಮರುಸೃಷ್ಟಿಸಿ ನೋಡುಗರ ಕಣ್ಮನ ಸೆಳೆಯಿತು. ​ಹಿಂದೂ ಧರ್ಮದಲ್ಲಿ ಬಸವಣ್ಣ ಅಥವಾ ನಂದಿ ಎಂದು ಪೂಜಿಸಲ್ಪಡುವ ಸುಮಾರು 170ಕ್ಕೂ ಹೆಚ್ಚು ಎತ್ತುಗಳನ್ನು ಅತ್ಯಂತ ಸುಂದರವಾಗಿ ಅಲಂಕರಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗಿತ್ತು. ಸಾಲು ಸಾಲಾಗಿ ಸಾಗುತ್ತಿದ್ದ ಈ ಎತ್ತುಗಳ ಗಾಂಭೀರ್ಯವು ಗ್ರಾಮೀಣ ಸೊಬಗನ್ನು ಎತ್ತಿ ತೋರಿಸುವಂತಿತ್ತು. ಮೆರವಣಿಗೆಯ ಮುಂಚೂಣಿಯಲ್ಲಿ ಕಂಗೊಳಿಸುತ್ತಿದ್ದ ಬಸವಣ್ಣನವರ ಬೃಹತ್ ಪುತ್ಥಳಿಯು ಭಕ್ತರ ಪಾಲಿಗೆ ದರ್ಶನ ಭಾಗ್ಯವನ್ನೇ ನೀಡಿತು. ರಾಯಬಾಗದ ಇತಿಹಾಸದಲ್ಲಿ ವಸಂತರಾವ್ ಪಾಟೀಲ್ ಅವರ ಕುಟುಂಬದ ಹೆಸರು ಅಚ್ಚಳಿಯದಂತದ್ದು. ಅಜ್ಜನ ಕಾಲದಿಂದಲೂ ಬಡವರಿಗೆ ಅಕ್ಷರ ದಾಸೋಹ ಮಾಡುತ್ತಾ ಬಂದಿರುವ ಈ ಕುಟುಂಬ, ಸಾವಿರಾರು ಜನ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ. ಇಂದಿಗೂ ಶಿಕ್ಷಣ ಪ್ರೇಮಿಯಾಗಿ ಬಡ ಮಕ್ಕಳ ಪಾಲಿನ ಆಶಾಕಿರಣವಾಗಿರುವ ವಸಂತರಾವ್ ಪಾಟೀಲ್ ಅವರ ಸರಳತೆ ಎಲ್ಲರಿಗೂ ಮಾದರಿ. ಈ ಮೆರವಣಿಗೆಯ ವಿಶೇಷ ಆಕರ್ಷಣೆಯೆಂದರೆ, ಹಿರಿಯರು ಮತ್ತು ಯುವಕರ ಹೃದಯದಲ್ಲಿ ಸ್ಥಾನ ಪಡೆದಿರುವ ಯುವ ನಾಯಕ ಪ್ರಣಯ್ ಅಣ್ಣ ಪಾಟೀಲ್ ಅವರ ಮೇಲಿನ ಅಭಿಮಾನ. ಸಮಾಜ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಅವರ ಭಾವಚಿತ್ರವನ್ನು ಎತ್ತುಗಳ ಮೇಲೆ ಕಲಾತ್ಮಕವಾಗಿ ಬಿಡಿಸಿದ್ದು, ಜನರ ವಿಶೇಷ ಗಮನ ಸೆಳೆಯಿತು. ​"ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ಹಿರಿಯರು ಒಂದೆಡೆಯಾದರೆ, ಸಮಾಜ ಸೇವೆಯ ಮೂಲಕ ಯುವ ಶಕ್ತಿಯನ್ನು ಸಂಘಟಿಸುತ್ತಿರುವ ಪ್ರಣಯ್ ಅಣ್ಣ ಪಾಟೀಲ್ ಅವರ ನಾಯಕತ್ವ ರಾಯಬಾಗಕ್ಕೆ ಹೆಮ್ಮೆ."
    1
    *ರಾಯಬಾಗದಲ್ಲಿ ಬಸವ ಜಯಂತಿಯ ಹಳ್ಳಿ ಸೊಬಗು: ಶಿಕ್ಷಣ ಪ್ರೇಮಿ ಪಾಟೀಲ ಪರಿವಾರದ ಜನಸೇವೆಗೆ ಸಾಕ್ಷಿಯಾದ ಶೋಭಾಯಾತ್ರೆ*
ಕಾಯಕವೇ ಕೈಲಾಸ ಎಂದು ಸಾರಿದ ಜಗಜ್ಯೋತಿ ಬಸವಣ್ಣನವರ ಜಯಂತಿಯ ನಿಮಿತ್ತ ಇಂದು ರಾಯಬಾಗ ಪಟ್ಟಣ ಭಕ್ತಿ ಮತ್ತು ಸಂಭ್ರಮದ ಕಡಲಲ್ಲಿ ತೇಲಿತು. ಪಟ್ಟಣದಾದ್ಯಂತ ಹಮ್ಮಿಕೊಳ್ಳಲಾಗಿದ್ದ ಭವ್ಯ ಶೋಭಾಯಾತ್ರೆಯು ಹಳ್ಳಿಯ ಸೊಬಗನ್ನು ಮರುಸೃಷ್ಟಿಸಿ ನೋಡುಗರ ಕಣ್ಮನ ಸೆಳೆಯಿತು.
​ಹಿಂದೂ ಧರ್ಮದಲ್ಲಿ ಬಸವಣ್ಣ ಅಥವಾ ನಂದಿ ಎಂದು ಪೂಜಿಸಲ್ಪಡುವ ಸುಮಾರು 170ಕ್ಕೂ ಹೆಚ್ಚು ಎತ್ತುಗಳನ್ನು ಅತ್ಯಂತ ಸುಂದರವಾಗಿ ಅಲಂಕರಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗಿತ್ತು. ಸಾಲು ಸಾಲಾಗಿ ಸಾಗುತ್ತಿದ್ದ ಈ ಎತ್ತುಗಳ ಗಾಂಭೀರ್ಯವು ಗ್ರಾಮೀಣ ಸೊಬಗನ್ನು ಎತ್ತಿ ತೋರಿಸುವಂತಿತ್ತು. ಮೆರವಣಿಗೆಯ ಮುಂಚೂಣಿಯಲ್ಲಿ ಕಂಗೊಳಿಸುತ್ತಿದ್ದ ಬಸವಣ್ಣನವರ ಬೃಹತ್ ಪುತ್ಥಳಿಯು ಭಕ್ತರ ಪಾಲಿಗೆ ದರ್ಶನ ಭಾಗ್ಯವನ್ನೇ ನೀಡಿತು.
ರಾಯಬಾಗದ ಇತಿಹಾಸದಲ್ಲಿ ವಸಂತರಾವ್ ಪಾಟೀಲ್ ಅವರ ಕುಟುಂಬದ ಹೆಸರು ಅಚ್ಚಳಿಯದಂತದ್ದು. ಅಜ್ಜನ ಕಾಲದಿಂದಲೂ ಬಡವರಿಗೆ ಅಕ್ಷರ ದಾಸೋಹ ಮಾಡುತ್ತಾ ಬಂದಿರುವ ಈ ಕುಟುಂಬ, ಸಾವಿರಾರು ಜನ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ. ಇಂದಿಗೂ ಶಿಕ್ಷಣ ಪ್ರೇಮಿಯಾಗಿ ಬಡ ಮಕ್ಕಳ ಪಾಲಿನ ಆಶಾಕಿರಣವಾಗಿರುವ ವಸಂತರಾವ್ ಪಾಟೀಲ್ ಅವರ ಸರಳತೆ ಎಲ್ಲರಿಗೂ ಮಾದರಿ.
ಈ ಮೆರವಣಿಗೆಯ ವಿಶೇಷ ಆಕರ್ಷಣೆಯೆಂದರೆ, ಹಿರಿಯರು ಮತ್ತು ಯುವಕರ ಹೃದಯದಲ್ಲಿ ಸ್ಥಾನ ಪಡೆದಿರುವ ಯುವ ನಾಯಕ ಪ್ರಣಯ್ ಅಣ್ಣ ಪಾಟೀಲ್ ಅವರ ಮೇಲಿನ ಅಭಿಮಾನ. ಸಮಾಜ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಅವರ ಭಾವಚಿತ್ರವನ್ನು ಎತ್ತುಗಳ ಮೇಲೆ ಕಲಾತ್ಮಕವಾಗಿ ಬಿಡಿಸಿದ್ದು, ಜನರ ವಿಶೇಷ ಗಮನ ಸೆಳೆಯಿತು.
​"ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ಹಿರಿಯರು ಒಂದೆಡೆಯಾದರೆ, ಸಮಾಜ ಸೇವೆಯ ಮೂಲಕ ಯುವ ಶಕ್ತಿಯನ್ನು ಸಂಘಟಿಸುತ್ತಿರುವ ಪ್ರಣಯ್ ಅಣ್ಣ ಪಾಟೀಲ್ ಅವರ ನಾಯಕತ್ವ ರಾಯಬಾಗಕ್ಕೆ ಹೆಮ್ಮೆ."
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    9 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    ಮನಶ್ಶಾಸ್ತ್ರಜ್ಞ ಹಾನಗಲ್, ಹಾವೇರಿ, ಕರ್ನಾಟಕ•
    4 hrs ago
  • ಏ. 20 : ಅರಸೀಕೆರೆ ತಾಲೂಕು ರಾಮಸಾಗರ ಗ್ರಾಮದ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಶರಣ ಸಿದ್ದಪ್ಪ ಶರಣೆ ಮಲ್ಲಮ್ಮನವರು ಸ್ಥಾಪಿಸಿರುವ ಶ್ರೀ ಬಸವ ತತ್ವ ಪ್ರಸಾರ ಕೇಂದ್ರವನ್ನು 2013ರಲ್ಲಿ 12ನೇ ಶತಮಾನದ ಆಗಿಹೋದ ಶರಣರ ಆಚರಣೆ ಅನುಭಾವ, ಅನುಕರಣೆ, ಪ್ರಚಾರಕ್ಕೋಸ್ಕರ ಸ್ಥಾಪಿಸಲಾಯಿತು. ಅಂದಿನಿಂದ ಇಂದಿನವರೆಗೆ ಯಾರ ಸಹಾಯವಿಲ್ಲದೆ ತನು-ಮನ ಧನವನ್ನು ಬಸವ ತತ್ವ ಪ್ರಚಾರಕ್ಕೆ ಮುಡುಪಾಗಿಟ್ಟಂತಹ ದಂಪತಿಗಳಿವರು. ಈವರು ಸ್ಥಾಪಿಸಲ್ಪಟ್ಟ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಅದ್ದೂರಿಯಾಗಿ ಬಸವ ಜಯಂತಿ ಆಚರಣೆ ಮಾಡಲಾಯಿತು. ಪ್ರತಿ ತಿಂಗಳು ಒಂದರಂದು ಲಿಂಗ ಪೂಜೆ, ಅನುಭಾವ, ಪ್ರಸಾದ, ಪ್ರಚಾರ ಈತರ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದಾರೆ. ಅವರ ಈ ಕಾರ್ಯಕ್ರಮಗಳಿಗೆ ನಾವೆಲ್ಲರೂ ಅಭಿನಂದಿಸೋಣ. ಇಂದು ಈ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀ ಶರಣ ಹಾಲಪ್ಪ ಹಿರಿಯೂರ್, ಶರಣ ಸಿದ್ದೇಶ, ಪುಟಾಣಿ ಮಕ್ಕಳು ಹಾಗೂ ಶರಣ ಶ್ರೀ ವಿನಯ್ ಪಾಟೀಲ್ ರವರು ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ರಾಮಸಾಗರ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    2
    ಏ. 20 : ಅರಸೀಕೆರೆ ತಾಲೂಕು ರಾಮಸಾಗರ ಗ್ರಾಮದ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಶರಣ ಸಿದ್ದಪ್ಪ ಶರಣೆ ಮಲ್ಲಮ್ಮನವರು ಸ್ಥಾಪಿಸಿರುವ  ಶ್ರೀ ಬಸವ ತತ್ವ ಪ್ರಸಾರ ಕೇಂದ್ರವನ್ನು 2013ರಲ್ಲಿ 12ನೇ ಶತಮಾನದ ಆಗಿಹೋದ ಶರಣರ ಆಚರಣೆ ಅನುಭಾವ, ಅನುಕರಣೆ, ಪ್ರಚಾರಕ್ಕೋಸ್ಕರ ಸ್ಥಾಪಿಸಲಾಯಿತು. ಅಂದಿನಿಂದ ಇಂದಿನವರೆಗೆ ಯಾರ ಸಹಾಯವಿಲ್ಲದೆ ತನು-ಮನ ಧನವನ್ನು ಬಸವ ತತ್ವ ಪ್ರಚಾರಕ್ಕೆ ಮುಡುಪಾಗಿಟ್ಟಂತಹ ದಂಪತಿಗಳಿವರು. ಈವರು ಸ್ಥಾಪಿಸಲ್ಪಟ್ಟ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ  ಅದ್ದೂರಿಯಾಗಿ ಬಸವ ಜಯಂತಿ ಆಚರಣೆ ಮಾಡಲಾಯಿತು. ಪ್ರತಿ ತಿಂಗಳು ಒಂದರಂದು ಲಿಂಗ ಪೂಜೆ, ಅನುಭಾವ, ಪ್ರಸಾದ, ಪ್ರಚಾರ ಈತರ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದಾರೆ. ಅವರ ಈ ಕಾರ್ಯಕ್ರಮಗಳಿಗೆ ನಾವೆಲ್ಲರೂ ಅಭಿನಂದಿಸೋಣ. ಇಂದು ಈ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀ ಶರಣ ಹಾಲಪ್ಪ ಹಿರಿಯೂರ್, ಶರಣ ಸಿದ್ದೇಶ,  ಪುಟಾಣಿ ಮಕ್ಕಳು ಹಾಗೂ ಶರಣ ಶ್ರೀ ವಿನಯ್ ಪಾಟೀಲ್ ರವರು ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ರಾಮಸಾಗರ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    user_Top 1 Digital Marketing
    Top 1 Digital Marketing
    Digital Marketing Specialist ಹಾಸನ, ಹಾಸನ, ಕರ್ನಾಟಕ•
    7 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    8 hrs ago
  • ಗುಳೇದಗುಡ್ಡ: ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಪಟ್ಟಣದ ಜನರಿಗೆ ಸೋಮವಾರ ಸಂಜೆ ಸುರಿದ ಆನೆಕಲ್ಲು ಮಳೆ ತಂಪೆರೆಯಿತು. ಚಿಕ್ಕ ಚಿಕ್ಕ ಮಕ್ಕಳು ಆನೆಕಲ್ಲು ಹಿಡಿದು ಸವಿದರು.
    1
    ಗುಳೇದಗುಡ್ಡ: ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಪಟ್ಟಣದ  ಜನರಿಗೆ ಸೋಮವಾರ ಸಂಜೆ  ಸುರಿದ ಆನೆಕಲ್ಲು ಮಳೆ ತಂಪೆರೆಯಿತು. ಚಿಕ್ಕ ಚಿಕ್ಕ ಮಕ್ಕಳು ಆನೆಕಲ್ಲು ಹಿಡಿದು ಸವಿದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    4 hrs ago
  • ಮಹಿಳಾ ಮೀಸಲಾತಿ ಬಿಲ್ ವಿಚಾರದಲ್ಲಿ ದಕ್ಷಿಣ ಭಾರತದ ಸೀಟ್ ಕಡಿಮೆ ಮಾಡಲು ಇದು ಷಡ್ಯಂತ್ರ. ಒಬ್ಬನೇ ಒಬ್ಬ ಬಿಜೆಪಿಯವರು ಮಾತಾಡುತ್ತಿಲ್ಲ. ದಕ್ಷಿಣ ಭಾರತದವರು ಇಲ್ಲದೇ ಇದ್ದರೂ ಅವರದೇ ಸರ್ಕಾರ ತರೋ ಹುನ್ನಾರ ಮಾಡಿದ್ದಾರೆ ಎಂದು ಹುಬ್ಬಳ್ಳಿ ವಿಮಾನನಿಲ್ದಾಣದಲ್ಲಿ ಡಿಸಿಎಂ ಡಿ ಕೆ ಶಿವಕುಮಾ‌ರ್ ಹೇಳಿದರು. ಹುಬ್ಬಳ್ಳಿ ನಗರದಲ್ಲಿ ಭಾನುವಾರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಬಿಲ್‌ ಅನ್ನು ನಾವು ಸೋಲಿಸಿದ್ದೇವೆ. ಇದು ಅವರ ಸೋಲಿನ ಆರಂಭ, ಇದು ಮುಂದುವರಿಯಲಿದೆ ಎಂದರು. ಮಹದಾಯಿ ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಸರ್ಕಾರ ಪರವಾನಗಿ ಕೊಡಿಸುತ್ತಿಲ್ಲ, ಬಿಜೆಪಿ ಎಂಪಿ ಗಳು ಕರ್ನಾಟಕ ನೀರಾವರಿಗೆ ಯಾವುದೇ ಕೊಡುಗೆ ನೀಡುತ್ತಿಲ್ಲ. ಎಲ್ಲರೂ ಅಡ್ವಾಂಟೇಜ್ ತೆಗೆದುಕೊಳ್ಳಲು ಹೋಗುತ್ತಿದ್ದಾರೆ. ನಮ್ಮ ಕರ್ತವ್ಯ ನಾವು ಮಾಡಿದ್ದೇವೆ. ಬಿಜೆಪಿ ಈ ವಿಚಾರದಲ್ಲಿ ಪೇಲ್ ಆಗಿದೆ. ಪಿಎಂ ಭೇಟಿ ಮಾಡಿ ಮಾತಾಡುವಷ್ಟು ಶಕ್ತಿ ಬಿಜೆಪಿ ಎಂಪಿ ಗಳಿಗೆ ಇಲ್ಲ ಎಂದು ಕಿಡಿಕಾರಿದರು.
    1
    ಮಹಿಳಾ ಮೀಸಲಾತಿ ಬಿಲ್ ವಿಚಾರದಲ್ಲಿ ದಕ್ಷಿಣ ಭಾರತದ ಸೀಟ್ ಕಡಿಮೆ ಮಾಡಲು ಇದು ಷಡ್ಯಂತ್ರ. ಒಬ್ಬನೇ ಒಬ್ಬ ಬಿಜೆಪಿಯವರು ಮಾತಾಡುತ್ತಿಲ್ಲ. ದಕ್ಷಿಣ ಭಾರತದವರು ಇಲ್ಲದೇ ಇದ್ದರೂ ಅವರದೇ ಸರ್ಕಾರ ತರೋ ಹುನ್ನಾರ ಮಾಡಿದ್ದಾರೆ ಎಂದು ಹುಬ್ಬಳ್ಳಿ ವಿಮಾನನಿಲ್ದಾಣದಲ್ಲಿ ಡಿಸಿಎಂ ಡಿ ಕೆ ಶಿವಕುಮಾ‌ರ್ ಹೇಳಿದರು.
ಹುಬ್ಬಳ್ಳಿ ನಗರದಲ್ಲಿ ಭಾನುವಾರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಬಿಲ್‌ ಅನ್ನು ನಾವು ಸೋಲಿಸಿದ್ದೇವೆ. ಇದು ಅವರ ಸೋಲಿನ ಆರಂಭ, ಇದು ಮುಂದುವರಿಯಲಿದೆ ಎಂದರು. ಮಹದಾಯಿ ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಸರ್ಕಾರ ಪರವಾನಗಿ ಕೊಡಿಸುತ್ತಿಲ್ಲ, ಬಿಜೆಪಿ ಎಂಪಿ ಗಳು ಕರ್ನಾಟಕ ನೀರಾವರಿಗೆ ಯಾವುದೇ ಕೊಡುಗೆ ನೀಡುತ್ತಿಲ್ಲ. ಎಲ್ಲರೂ ಅಡ್ವಾಂಟೇಜ್ ತೆಗೆದುಕೊಳ್ಳಲು ಹೋಗುತ್ತಿದ್ದಾರೆ. ನಮ್ಮ ಕರ್ತವ್ಯ ನಾವು ಮಾಡಿದ್ದೇವೆ. ಬಿಜೆಪಿ ಈ ವಿಚಾರದಲ್ಲಿ ಪೇಲ್ ಆಗಿದೆ. ಪಿಎಂ ಭೇಟಿ ಮಾಡಿ ಮಾತಾಡುವಷ್ಟು  ಶಕ್ತಿ ಬಿಜೆಪಿ ಎಂಪಿ ಗಳಿಗೆ  ಇಲ್ಲ ಎಂದು ಕಿಡಿಕಾರಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    9 hrs ago
  • ಗುಳೇದಗುಡ್ಡ: ಸ್ಥಳೀಯ ಬಸವ ಕೇಂದ್ರದ ವತಿಯಿಂದ ಬಸವ ಸ್ಮರಣೋತ್ಸವ ಕಾರ್ಯಕ್ರಮದ ಅಂಗವಾಗಿ ಸೋಮವಾರ ಪಟ್ಟಣದ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 7ಗಂಟೆಗೆ ಮುರುಗೇಶ ಶೇಖಾ ಅವರು ಸಾಮೂಹಿಕ ಸಹಜ ಶಿವಯೋಗ ನಡೆಸಿಕೊಟ್ಟರು.
    2
    ಗುಳೇದಗುಡ್ಡ: ಸ್ಥಳೀಯ ಬಸವ ಕೇಂದ್ರದ ವತಿಯಿಂದ ಬಸವ ಸ್ಮರಣೋತ್ಸವ ಕಾರ್ಯಕ್ರಮದ  ಅಂಗವಾಗಿ ಸೋಮವಾರ ಪಟ್ಟಣದ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ  7ಗಂಟೆಗೆ ಮುರುಗೇಶ ಶೇಖಾ ಅವರು ಸಾಮೂಹಿಕ ಸಹಜ ಶಿವಯೋಗ ನಡೆಸಿಕೊಟ್ಟರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    5 hrs ago
  • ದಲಿತ ಮಹಿಳೆ ಎನ್ನುವ ಕಾರಣಕ್ಕೆ ನನ್ನನ್ನು ಮಾಜಿ ಶಾಸಕ ಕೆ. ಶರಣಪ್ಪ ವಕೀಲರು ಅವಮಾನಿಸಿದ್ದಾರೆ. ಶಾರಾದಾ ಕಟ್ಟಿಮನಿ ಆರೋಪ? ಕುಷ್ಟಗಿ: ಪಟ್ಟಣದ ಬಸವೇಶ್ವರ ಜಯಂತಿ ಕಾರ್ಯಕ್ರಮ ಮೆರವಣಿಗೆಯಲ್ಲಿ ಮಾಜಿ ಶಾಸಕ ಕೆ.ಶರಣಪ್ಪ ವಕೀಲರಿಂದ ನಾನು ಒಬ್ಬ ದಲಿತ ಮಹಿಳೆ ಎನ್ನುವ ಕಾರಣಕ್ಕೆ ಜಯಂತಿ ವೇಳೆ ಮೆರಣಿಗೆಯಲ್ಲಿ ಪುರುಷರ ಹತ್ತಿರ ಹೆಣ್ಣು ಮಕ್ಕಳ ಕೆಲಸವೇನು ಇಲ್ಲಿಂದ ನಡೆಯಿರಿ ಎಂದು ಅಮಾನಿಸಲಾಗಿದೆ ಇದು ಅತ್ಯಂತ ಖಂಡನೆವಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಯೋಜನೆ ಜಿಲ್ಲಾ ಸಮಿತಿ ಸದಸ್ಯೆ ಶಾರದಾ ಕಟ್ಟಿಮನಿ ಆರೋಪಿಸಿದರು. ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಸೋಮವಾರ ಮಾತನಾಡಿದ ಅವರು ಇಲ್ಲಿನ ಪ್ರಮುಖ ರಸ್ತೆಯ ಮೂಲಕ ಬೆಳಗ್ಗೆ ಬಸವೇಶ್ವರ ಜಯಂತಿ ಮೆರವಣಿಗೆ ಕಾರ್ಯಕ್ರಮ ವೇಳೆ ವಚನ ಕಟ್ಟುವ ಪುಸ್ತಕ ಹೊತ್ತ ಮಹಿಳೆಯರು ಸಾಗಿಬರುವ ವೇಳೆ ಮಾಜಿ ಶಾಸಕರು ಏಕಾಏಕಿ ಪುರುಷರ ಹತ್ತಿರ ಏಕೆ? ಇದ್ದೀರಾ ಮಹಿಳೆಯರು ಹತ್ರ ಹೋಗಿ ಎಂದು ಏರುಧ್ವನಿಯಲ್ಲಿ ಅಪಮಾನಿಸಿದ್ದಾರೆ.ಆದರೆ ಹಿರಿಯರಾದ ಇವರು ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡವರಾಗಿದ್ದು ಮತ್ತು ಬಸವ ತತ್ವದ ಹಾಗೂ ತಮ್ಮ ಭಾಷಣದ್ದಕ್ಕೂ ಮಹಿಳೆಯರ ಬಗ್ಗೆ ಮಾತನಾಡುವ ಮಾಜಿ ಶಾಸಕರು ಮಹಿಳೆಯರ ಬಗ್ಗೆ ಅವಮಾನಿಸಿದ್ದು, ಸರಿಯೇ ಎಂದು ತಿಳಿಸಬೇಕಾಗಿದೆ ಇದು ನನಗೆ ತೀವ್ರ ನೋವುಂಟಾಗಿದೆ. ನಮ್ಮ ಮತಕ್ಷೇತ್ರದಲ್ಲಿ ಹಿರಿಯ ರಾಜಕಾರಣಿರ ಮೇಲೆ ನನಗೆ ಸಾಕಷ್ಟ ಗೌರವ ಇತ್ತು. ತಾವು ಅನುಭವಿ ರಾಜಕಾರಣಿ ದಲಿತ ಮಹಿಳೆಯರು ಎನ್ನುವ ಕಾರಣಕ್ಕೆ ಅಗೌರವಿಸಲಾಗಿದೆ. ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುವುದು ತಪ್ಪೆಂದು ಪ್ರಶ್ನಿಸಿದರು. ಈ ಹಿರಿಯರು ಮಳೆಯರು ಯಾವುದೇ ಕಾರ್ಯಕ್ರಮಕ್ಕೆ ಬಾರದಂತೆ ಅವಮಾನ ಮಾಡಿದ್ದಾರೆ. ದಲಿತ ಮಹಿಳೆಗೆ ಅಗೌರವ ತೋರಿಸಿರುವ ಇವರು ಕ್ಷೇಮೆಯಾಚಿಸುವ ಮೂಲಕ ಮಹಿಳೆಯರಿಗೆ ಗೌರವ ಕೊಡವುದು ಕಲಿಯಬೇಕು ಎಂದು ಆರೋಪಿಸಿದರು. ---
    4
    ದಲಿತ ಮಹಿಳೆ ಎನ್ನುವ ಕಾರಣಕ್ಕೆ ನನ್ನನ್ನು ಮಾಜಿ ಶಾಸಕ ಕೆ. ಶರಣಪ್ಪ ವಕೀಲರು ಅವಮಾನಿಸಿದ್ದಾರೆ. ಶಾರಾದಾ ಕಟ್ಟಿಮನಿ ಆರೋಪ? 
ಕುಷ್ಟಗಿ: ಪಟ್ಟಣದ  ಬಸವೇಶ್ವರ ಜಯಂತಿ  ಕಾರ್ಯಕ್ರಮ ಮೆರವಣಿಗೆಯಲ್ಲಿ  ಮಾಜಿ ಶಾಸಕ ಕೆ.ಶರಣಪ್ಪ ವಕೀಲರಿಂದ ನಾನು ಒಬ್ಬ ದಲಿತ ಮಹಿಳೆ ಎನ್ನುವ ಕಾರಣಕ್ಕೆ ಜಯಂತಿ ವೇಳೆ ಮೆರಣಿಗೆಯಲ್ಲಿ ಪುರುಷರ ಹತ್ತಿರ ಹೆಣ್ಣು  ಮಕ್ಕಳ ಕೆಲಸವೇನು ಇಲ್ಲಿಂದ ನಡೆಯಿರಿ ಎಂದು ಅಮಾನಿಸಲಾಗಿದೆ ಇದು ಅತ್ಯಂತ ಖಂಡನೆವಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಯೋಜನೆ ಜಿಲ್ಲಾ ಸಮಿತಿ ಸದಸ್ಯೆ ಶಾರದಾ ಕಟ್ಟಿಮನಿ ಆರೋಪಿಸಿದರು.
ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಸೋಮವಾರ ಮಾತನಾಡಿದ ಅವರು 
ಇಲ್ಲಿನ ಪ್ರಮುಖ ರಸ್ತೆಯ ಮೂಲಕ ಬೆಳಗ್ಗೆ ಬಸವೇಶ್ವರ ಜಯಂತಿ ಮೆರವಣಿಗೆ ಕಾರ್ಯಕ್ರಮ ವೇಳೆ ವಚನ ಕಟ್ಟುವ ಪುಸ್ತಕ ಹೊತ್ತ ಮಹಿಳೆಯರು ಸಾಗಿಬರುವ ವೇಳೆ ಮಾಜಿ ಶಾಸಕರು ಏಕಾಏಕಿ ಪುರುಷರ ಹತ್ತಿರ ಏಕೆ? ಇದ್ದೀರಾ ಮಹಿಳೆಯರು ಹತ್ರ ಹೋಗಿ ಎಂದು ಏರುಧ್ವನಿಯಲ್ಲಿ ಅಪಮಾನಿಸಿದ್ದಾರೆ.ಆದರೆ ಹಿರಿಯರಾದ ಇವರು ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡವರಾಗಿದ್ದು ಮತ್ತು ಬಸವ ತತ್ವದ ಹಾಗೂ ತಮ್ಮ ಭಾಷಣದ್ದಕ್ಕೂ ಮಹಿಳೆಯರ ಬಗ್ಗೆ ಮಾತನಾಡುವ ಮಾಜಿ ಶಾಸಕರು ಮಹಿಳೆಯರ ಬಗ್ಗೆ ಅವಮಾನಿಸಿದ್ದು, ಸರಿಯೇ ಎಂದು ತಿಳಿಸಬೇಕಾಗಿದೆ ಇದು ನನಗೆ ತೀವ್ರ ನೋವುಂಟಾಗಿದೆ. 
ನಮ್ಮ ಮತಕ್ಷೇತ್ರದಲ್ಲಿ ಹಿರಿಯ ರಾಜಕಾರಣಿರ ಮೇಲೆ ನನಗೆ ಸಾಕಷ್ಟ ಗೌರವ ಇತ್ತು. ತಾವು ಅನುಭವಿ ರಾಜಕಾರಣಿ ದಲಿತ ಮಹಿಳೆಯರು ಎನ್ನುವ ಕಾರಣಕ್ಕೆ  ಅಗೌರವಿಸಲಾಗಿದೆ. ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುವುದು ತಪ್ಪೆಂದು ಪ್ರಶ್ನಿಸಿದರು. 
ಈ ಹಿರಿಯರು ಮಳೆಯರು ಯಾವುದೇ ಕಾರ್ಯಕ್ರಮಕ್ಕೆ ಬಾರದಂತೆ ಅವಮಾನ ಮಾಡಿದ್ದಾರೆ. ದಲಿತ  ಮಹಿಳೆಗೆ ಅಗೌರವ ತೋರಿಸಿರುವ ಇವರು ಕ್ಷೇಮೆಯಾಚಿಸುವ ಮೂಲಕ ಮಹಿಳೆಯರಿಗೆ ಗೌರವ ಕೊಡವುದು ಕಲಿಯಬೇಕು ಎಂದು  ಆರೋಪಿಸಿದರು.
---
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.