ಸಹಪಾಠಿ ಹತ್ಯೆಗೈದ ಬಾಲಕ ಪೊಲೀಸರ ಸುಪರ್ದಿಗೆ ಬಳ್ಳಾರಿಯ ಖಾಸಗಿ ವಸತಿ ಶಾಲೆಯಲ್ಲಿ ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಒಬ್ಬನ ಸಾವಿಗೆ ಕಾರಣವಾದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಪೊಲೀಸರು ಸೋಮವಾರ ತಮ್ಮ ಸುಪರ್ದಿಗೆ ಪಡೆದಿದ್ದಾರೆ. ಬಾಲಕನು ಹತಾಶೆಯಿಂದ ಈ ಕೃತ್ಯವೆಸಗಿರುವುದು ಗೊತ್ತಾಗಿದೆ. ಆತನನ್ನು ನಗರದ ಶ್ರೀರಾಮಪುರ ಕಾಲೊನಿಯ ರೂಪನಗುಡಿ ರಸ್ತೆಯಲ್ಲಿ ವಶಕ್ಕೆ ಪಡೆಯಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹಾಸ್ಟೆಲ್ ವಾತಾವರಣ ತನಗೆ ಸಹ್ಯವಾಗಿರಲಿಲ್ಲ ಎಂದು ಬಾಲಕ ಪ್ರಾಥಮಿಕ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. 'ಬಾಲಕನ ವಿಚಾರಣೆಯನ್ನು ಅತ್ಯಂತ ಎಚ್ಚರಿಕೆಯಿಂದ ಮಾಡುತ್ತಿದ್ದೇವೆ. ಇದಕ್ಕಾಗಿ ವೈದ್ಯಕೀಯ ತಜ್ಞರು, ಅಧಿಕಾರಿಗಳ ತಂಡ ರಚನೆ ಮಾಡಿಕೊಳ್ಳುತ್ತಿದ್ದೇವೆ. ಇದರಲ್ಲಿ ಪೊಲೀಸರು, ಮಾನಸಿಕ ತಜ್ಞರು, ವೈದ್ಯರು, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಇರಲಿದ್ದಾರೆ. ಈ ಬಗ್ಗೆ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ವಿಮ್ಸ್) ಜತೆಗೆ ಮಾತನಾಡಿದ್ದೇವೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ ತಿಳಿಸಿದರು. 'ಘಟನೆಗೆ ಕಾರಣವೇನು ಎಂಬುದರ ತನಿಖೆ ನಡೆಯುತ್ತಿದೆ. ಶಾಲೆಯವರು ಹಾಸ್ಟೆಲ್‌ಗೆ ಅನುಮತಿ ಪಡೆದಿದ್ದರೇ ಎಂಬುದರ ಬಗ್ಗೆ ಪರಿಶೀಲಿಸಲು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಪತ್ರ ಬರೆಯಲಾಗಿದೆ. ಶಾಲೆಯ ವೈಫಲ್ಯದ ಬಗ್ಗೆಯೂ ತನಿಖೆ ಮಾಡುತ್ತೇವೆ' ಎಂದು ಹೇಳಿದರು. ಘಟನೆ ಬಳಿಕ ಬಾಲಕ ಬಳ್ಳಾರಿ ನಗರದಲ್ಲೇ ಇದ್ದ. ದೇವಸ್ಥಾನಗಳಲ್ಲಿ ನೀಡುವ ಪ್ರಸಾದ ಸೇವಿಸುತ್ತಾ ಎರಡು ದಿನ ಕಳೆದಿದ್ದ ಎನ್ನಲಾಗಿದೆ. ಕರ್ನೂಲ್ ಆಸ್ಪತ್ರೆಗೆ: ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಬಾಲಕನನ್ನು ಕರ್ನೂಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನುಳಿದವರು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

- ಗದಗ ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.1
- ಬಸ್ ನಿಲ್ದಾಣದ ಹತ್ತಿರ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ನಿಮಿತ್ತವಾಗಿ ಸತತ 10ನೇ ವರ್ಷದಿಂದ ಸೇವೆ ಮಾಡುತ್ತಿರುವ ನಗರದ ಸಮಾಜಸೇವಕ ರಿಯಾಜ್ ಮಕಾಂದರ ಸೇವೆಯ ಕುಡಿಯುವ ನೀರಿನ ಅರವಟ್ಟಿಗೆಗೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.1
- ಇಳಕಲ್ಲ : ಇಲ್ಲಿನ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ಜಯಂತ್ಯೋತ್ಸವ ಭಾವಿಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರ ಆಚರಿಸಲಾಯಿತು. ಅಂಬೇಡ್ಕರ ಭಾವಚಿತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪುಷ್ಪನಮನ ಸಲ್ಲಿಸಿದರು. ಮಾತನಾಡಿದ ಅವರು ಶಿಕ್ಷಣ ಪಡೆಯಿರಿ ಸಂಘಟಿತರಾಗಿ, ಹೋರಾಟ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಈ ಮಂತ್ರವನ್ನು ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಮಯದಲ್ಲಿ ಸಮಾಜದ ಮುಖಂಡರು,ಹಿರಿಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು,ಹಿರಿಯರು ಕಾರ್ಯಕರ್ತರು ಇದ್ದರು.1
- Post by Onlinetv24x71
- Gadag Jilla snake Raheman1
- ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು1
- Post by Suresh Belagere1
- ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ದಿನಾಂಕ 14/04/2026 ರ ಮಂಗಳವಾರದಂದು ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ 135 ನೇ ಜಯಂತೋತ್ಸವವನ್ನು ಬೆಳಿಗ್ಗೆ 10:30 ಕ್ಕೆ ತಹಶಿಲ್ದಾರರವರ ಕಛೇರಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಸದರಿ ಕಾರ್ಯಕ್ರಮಕ್ಕೆ ತಾವೆಲ್ಲ ಆಗಮಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉದಯಕುಮಾರ ಎಲಿವಾಳ ರವರು ತಿಳಿಸಿದ್ದಾರೆ1
- ಇಳಕಲ್ಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ೧೩೫ ನೇ ಜಯಂತ್ಯೋತ್ಸವ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಧ್ವಜಾರೋಹಣವನ್ನು ಮಾಡುವ ಮೂಲಕ ಬೈಕ್ ರ‍್ಯಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಚಾಲನೆ ನೀಡಿ ತೆರೆದ ವಾಹನ ರ‍್ಯಾಲಿಯಲ್ಲಿ ಭಾಗಿಯಾದರು. ಅಂಬೇಡ್ಕರ ವೃತ್ತದಿಂದ ಆರಂಭವಾದ ಮೆರವಣಿಗೆ, ಕಂಠಿ ಸರ್ಕಲ್, ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್‌ಗೆ ಆಗಮಿಸಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮರಳಿ ಕಂಠಿ ಸರ್ಕಲ್‌ಗೆ ಆಗಮಿಸಿ ಎಸ್.ಆರ್.ಕಂಠಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಸ್.ಆರ್.ಕೆ ವೃತ್ತವಾಗಿ ಮಾರ್ಗವಾಗಿ ಮರಳಿ ಅಂಬೇಡ್ಕರ ವೃತ್ತವನ್ನು ತಲುಪಿತು. ಮೆರವಣಿಗೆಯಲ್ಲಿ ದಲಿತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಶರಣಪ್ಪ ಆಮದಿಹಾಳ, ಯಮನೂರ ಚಲವಾದಿ, ಆನಂದ ಚಲವಾದಿ, ಸುರೇಶ ಜಂಗ್ಲಿ, ಅಂಬಣ್ಣ ಚಲವಾದಿ, ಅಶೋಕ ಚಲವಾದಿ, ಪವಾಡೆಪ್ಪ ಚಲವಾದಿ, ಸವಿತಾ ಚಲವಾದಿ, ದೀಲೀಪ ಕಲ್ಮನಿ, ಪ್ರವೀಣ ಹೊಳಿ, ಸಿದ್ದಾರ್ಥ ಚಲವಾದಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಮೌಲೇಶ ಬಂಡಿವಡ್ಡರ ಸೇರಿದಂತೆ ಸಮಾಜದ ಮುಖಂಡರು, ಯುವಕರು ಇದ್ದರು.1