ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲ್ ಭೀಮಸೇನ ಬಾಗಡಿ ಅವರು, ಸಮಾಜದಿಂದ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಶಿಕ್ಷಣ ಬಲವಾದ ಆಯುಧ ಎಂದು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮವನ್ನು ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ದೊಡ್ಡಬಳ್ಳಾಪುರ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿತ್ತು. ಬಡತನ ಮತ್ತು ಅನಕ್ಷರತೆಯಿಂದ ಬಾಲಕಾರ್ಮಿಕ ಪದ್ಧತಿ ಹೆಚ್ಚಾಗುತ್ತಿದ್ದು, ಪ್ರತಿಯೊಂದು ಮಗುವಿಗೆ ಪೋಷಕರು ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಎಂದು ಶ್ರೀಶೈಲ್ ಭೀಮಸೇನ ಬಾಗಡಿ ಕರೆ ನೀಡಿದರು. ಕಾರ್ಖಾನೆ ಮಾಲೀಕರು ಅಡ್ಡದಾರಿಯಲ್ಲಿ ಬಾಲ ಕಾರ್ಮಿಕರ ಆಧಾರ್ ಕಾರ್ಡ್‌ನಲ್ಲಿ ವಯಸ್ಸು ತಿದ್ದುಪಡಿ ಮಾಡಿ, ದುಡಿಮೆಗೆ ಪಡೆಯುತ್ತಿರುವುದು ಕಾನೂನು ಬಾಹಿರ ಎಂದು ಅವರು ಎಚ್ಚರಿಸಿದರು. ಅಲ್ಲದೆ, ಕಾರ್ಖಾನೆಗಳಲ್ಲಿ ಮಹಿಳಾ ಸುರಕ್ಷತೆ ಮತ್ತು ದೌರ್ಜನ್ಯ ನಡೆಯದಂತೆ ಆಂತರಿಕ ದೂರ ಸಮಿತಿ ಕಡ್ಡಾಯವಾಗಿ ಇರಬೇಕು; ಇಲ್ಲದಿದ್ದರೆ ಅಂತಹ ಕಾರ್ಖಾನೆಗಳ ವಿರುದ್ಧ ದೂರು ದಾಖಲಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು, 14 ವರ್ಷದೊಳಗಿನ ಬಾಲಕಾರ್ಮಿಕರನ್ನು ದುಡಿಮೆಗೆ ತೆಗೆದುಕೊಳ್ಳಬಾರದು ಹಾಗೂ ಅಪಾಯಕಾರಿ ಕಾರ್ಖಾನೆಗಳಲ್ಲಿ ದುಡಿಯುವ 18 ವರ್ಷದೊಳಗಿನ ಬಾಲಕಾರ್ಮಿಕರ ರಕ್ಷಣೆಗೆ ಅಧಿಕಾರಿಗಳು ಮುಂದಾಗಿ, ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ಯಾವುದೇ ಮಗು ಶಾಲೆಯಿಂದ ಹೊರಗುಳಿಯಬಾರದು, ಪ್ರತಿಯೊಂದು ಮಗುವಿಗೆ ಕಡ್ಡಾಯವಾಗಿ ಶಿಕ್ಷಣ ಸಿಗುವಂತೆ ಪೋಷಕರು ಜವಾಬ್ದಾರಿ ವಹಿಸಬೇಕು ಹಾಗೂ ಮಕ್ಕಳ ದೌರ್ಜನ್ಯ ಅಥವಾ ಬಾಲಕಾರ್ಮಿಕ ದುಡಿಮೆ ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಮಾಹಿತಿ ನೀಡಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜಿಲ್ಲೆಯಲ್ಲಿರುವ 120 ವಸತಿಶಾಲೆ ಹಾಗೂ ಹಾಸ್ಟೆಲ್‌ಗಳನ್ನು ಬಡ ಪೋಷಕರು ತಮ್ಮ ಮಕ್ಕಳಿಗೆ ಸೇರಿಸಿ, ಶೈಕ್ಷಣಿಕ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಕೆ. ಚಿತ್ರಾವತಿ ಅವರು ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಕಾನೂನು ಪ್ರಾಧಿಕಾರ ಸೇವಾ ಅಧಿಕಾರೇತರ ಸದಸ್ಯರಾದ ವೆಂಕಟೇಶ್ ಅವರು ಮಾತನಾಡಿ, ಮಕ್ಕಳು ದೇಶದ ಸಂಪತ್ತು, ಆ ಸಂಪತ್ತು ಬೆಳೆಸುವ ಕೆಲಸ ಪ್ರತಿಯೊಬ್ಬ ಪೋಷಕರು ಮಾಡಬೇಕು ಎಂದರು. ಬಾಲಕಾರ್ಮಿಕ ಪದ್ಧತಿ ತಡೆಯುವಲ್ಲಿ ನಮ್ಮೆಲ್ಲರ ಜವಾಬ್ದಾರಿಯು ಮಹತ್ವದ್ದಾಗಿದ್ದು, ಪಂಚಾಯತ್ ಮಟ್ಟದಿಂದಲೇ ಮಕ್ಕಳ ಹಕ್ಕುಗಳು, ಬಾಲಕಾರ್ಮಿಕ ಪದ್ಧತಿ ನಿಷೇಧ ಹಾಗೂ ಬಾಲ್ಯವಿವಾಹ ತಡೆ ಬಗ್ಗೆ ನಿರಂತರ ಅರಿವು ಮೂಡಿಸಬೇಕು ಎಂದು ತಿಳಿಸಿದರು. ಇದಕ್ಕೂ ಮುನ್ನ, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್‌ನಿಂದ ಸರ್ಕಾರಿ ಪ್ರೌಢಶಾಲೆ ವರೆಗೂ ವಿದ್ಯಾರ್ಥಿಗಳಿಂದ ‘ಜಾಗೃತಿ ಜಾಥಾ ಕಾರ್ಯಕ್ರಮ’ ಕೂಡ ನಡೆಯಿತು.
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಶೈಲ್ ಭೀಮಸೇನ ಬಾಗಡಿ ಅವರು, ಸಮಾಜದಿಂದ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಶಿಕ್ಷಣ ಬಲವಾದ ಆಯುಧ ಎಂದು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮವನ್ನು ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ದೊಡ್ಡಬಳ್ಳಾಪುರ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿತ್ತು. ಬಡತನ ಮತ್ತು ಅನಕ್ಷರತೆಯಿಂದ ಬಾಲಕಾರ್ಮಿಕ ಪದ್ಧತಿ ಹೆಚ್ಚಾಗುತ್ತಿದ್ದು, ಪ್ರತಿಯೊಂದು ಮಗುವಿಗೆ ಪೋಷಕರು ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಎಂದು ಶ್ರೀಶೈಲ್ ಭೀಮಸೇನ ಬಾಗಡಿ ಕರೆ ನೀಡಿದರು.
ಕಾರ್ಖಾನೆ ಮಾಲೀಕರು ಅಡ್ಡದಾರಿಯಲ್ಲಿ ಬಾಲ ಕಾರ್ಮಿಕರ ಆಧಾರ್ ಕಾರ್ಡ್‌ನಲ್ಲಿ ವಯಸ್ಸು ತಿದ್ದುಪಡಿ ಮಾಡಿ, ದುಡಿಮೆಗೆ ಪಡೆಯುತ್ತಿರುವುದು ಕಾನೂನು ಬಾಹಿರ ಎಂದು ಅವರು ಎಚ್ಚರಿಸಿದರು. ಅಲ್ಲದೆ, ಕಾರ್ಖಾನೆಗಳಲ್ಲಿ ಮಹಿಳಾ ಸುರಕ್ಷತೆ ಮತ್ತು ದೌರ್ಜನ್ಯ ನಡೆಯದಂತೆ ಆಂತರಿಕ ದೂರ ಸಮಿತಿ ಕಡ್ಡಾಯವಾಗಿ ಇರಬೇಕು; ಇಲ್ಲದಿದ್ದರೆ ಅಂತಹ ಕಾರ್ಖಾನೆಗಳ ವಿರುದ್ಧ ದೂರು ದಾಖಲಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು, 14 ವರ್ಷದೊಳಗಿನ ಬಾಲಕಾರ್ಮಿಕರನ್ನು ದುಡಿಮೆಗೆ ತೆಗೆದುಕೊಳ್ಳಬಾರದು ಹಾಗೂ ಅಪಾಯಕಾರಿ ಕಾರ್ಖಾನೆಗಳಲ್ಲಿ ದುಡಿಯುವ 18 ವರ್ಷದೊಳಗಿನ ಬಾಲಕಾರ್ಮಿಕರ ರಕ್ಷಣೆಗೆ ಅಧಿಕಾರಿಗಳು ಮುಂದಾಗಿ, ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ಯಾವುದೇ ಮಗು ಶಾಲೆಯಿಂದ ಹೊರಗುಳಿಯಬಾರದು, ಪ್ರತಿಯೊಂದು ಮಗುವಿಗೆ ಕಡ್ಡಾಯವಾಗಿ ಶಿಕ್ಷಣ ಸಿಗುವಂತೆ ಪೋಷಕರು ಜವಾಬ್ದಾರಿ ವಹಿಸಬೇಕು ಹಾಗೂ ಮಕ್ಕಳ ದೌರ್ಜನ್ಯ ಅಥವಾ ಬಾಲಕಾರ್ಮಿಕ ದುಡಿಮೆ ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಮಾಹಿತಿ ನೀಡಲು ವಿದ್ಯಾರ್ಥಿಗಳಿಗೆ
ಕರೆ ನೀಡಿದರು. ಜಿಲ್ಲೆಯಲ್ಲಿರುವ 120 ವಸತಿಶಾಲೆ ಹಾಗೂ ಹಾಸ್ಟೆಲ್‌ಗಳನ್ನು ಬಡ ಪೋಷಕರು ತಮ್ಮ ಮಕ್ಕಳಿಗೆ ಸೇರಿಸಿ, ಶೈಕ್ಷಣಿಕ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಕೆ. ಚಿತ್ರಾವತಿ ಅವರು ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಕಾನೂನು ಪ್ರಾಧಿಕಾರ ಸೇವಾ ಅಧಿಕಾರೇತರ ಸದಸ್ಯರಾದ ವೆಂಕಟೇಶ್ ಅವರು ಮಾತನಾಡಿ, ಮಕ್ಕಳು ದೇಶದ ಸಂಪತ್ತು, ಆ ಸಂಪತ್ತು ಬೆಳೆಸುವ ಕೆಲಸ ಪ್ರತಿಯೊಬ್ಬ ಪೋಷಕರು ಮಾಡಬೇಕು ಎಂದರು. ಬಾಲಕಾರ್ಮಿಕ ಪದ್ಧತಿ ತಡೆಯುವಲ್ಲಿ ನಮ್ಮೆಲ್ಲರ ಜವಾಬ್ದಾರಿಯು ಮಹತ್ವದ್ದಾಗಿದ್ದು, ಪಂಚಾಯತ್ ಮಟ್ಟದಿಂದಲೇ ಮಕ್ಕಳ ಹಕ್ಕುಗಳು, ಬಾಲಕಾರ್ಮಿಕ ಪದ್ಧತಿ ನಿಷೇಧ ಹಾಗೂ ಬಾಲ್ಯವಿವಾಹ ತಡೆ ಬಗ್ಗೆ ನಿರಂತರ ಅರಿವು ಮೂಡಿಸಬೇಕು ಎಂದು ತಿಳಿಸಿದರು. ಇದಕ್ಕೂ ಮುನ್ನ, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್‌ನಿಂದ ಸರ್ಕಾರಿ ಪ್ರೌಢಶಾಲೆ ವರೆಗೂ ವಿದ್ಯಾರ್ಥಿಗಳಿಂದ ‘ಜಾಗೃತಿ ಜಾಥಾ ಕಾರ್ಯಕ್ರಮ’ ಕೂಡ ನಡೆಯಿತು.
- ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ದೊಡ್ಡಣ್ಣ ಅವರು ತಾವು ಬದುಕಿರುವಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ನಿಧನದ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವಿನ್ನೂ ಸಂಪೂರ್ಣ ಆರೋಗ್ಯವಾಗಿದ್ದೇನೆ ಎಂದು ವಿಡಿಯೋ ಮೂಲಕ ಸ್ಪಷ್ಟಪಡಿಸಿರುವ ಅವರು, ಇಂತಹ ನೀಚ ಕೃತ್ಯ ಎಸಗಿದವರನ್ನು ಸುಮ್ಮನೆ ಬಿಡುವುದಿಲ್ಲ ಹಾಗೂ ಅವರಿಗೆ ತಕ್ಕ ಶಿಕ್ಷೆ ಕೊಡಿಸುತ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ಹರಿದಾಡಿದ ಈ ಸುಳ್ಳು ಸುದ್ದಿಯಿಂದ ಕಂಗಾಲಾಗಿದ್ದ ಅಭಿಮಾನಿಗಳು ಮತ್ತು ಆಪ್ತರಿಗೆ ವಿಡಿಯೋ ಸಂದೇಶದ ಮೂಲಕ ಅವರು ಸ್ಪಷ್ಟನೆ ನೀಡಿದರು. ವಿಡಿಯೋದಲ್ಲಿ ದೊಡ್ಡಣ್ಣ ಅವರು, "ಇಂದು ಬೆಳಿಗ್ಗೆ ನಾನು ನಿದ್ರೆಯಿಂದ ಏಳುವ ಮೊದಲೇ ಯಾರೋ ಅವಿವೇಕಿಗಳು ನಾನು ತೀರಿಹೋಗಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಆದರೆ ಅದು ನೂರಕ್ಕೆ ನೂರರಷ್ಟು ಸುಳ್ಳು. ನಾನು ಪ್ರಸ್ತುತ ಆರೋಗ್ಯವಾಗಿದ್ದೇನೆ ಮತ್ತು ನೆಮ್ಮದಿಯಾಗಿದ್ದೇನೆ. ಬೆಳಿಗ್ಗೆಯಿಂದ ನನ್ನ ಮಕ್ಕಳು, ಮೊಮ್ಮಕ್ಕಳು ಹಾಗೂ ಆಪ್ತರಿಂದ ಆತಂಕದ ಕರೆಗಳು ಬರುತ್ತಿವೆ. ಜನರ ಆಶೀರ್ವಾದ ಇರುವವರೆಗೆ ನಾನು ನೂರು ವರ್ಷ ಚೆನ್ನಾಗಿರುತ್ತೇನೆಂಬ ನಂಬಿಕೆ ನನಗಿದೆ" ಎಂದು ಹೇಳಿಕೊಂಡಿದ್ದಾರೆ. ಬದುಕಿರುವ ವ್ಯಕ್ತಿಯ ಬಗ್ಗೆ ಇಂತಹ ಸೂಕ್ಷ್ಮ ಮತ್ತು ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ದೊಡ್ಡಣ್ಣ ತಿಳಿಸಿದ್ದಾರೆ. "ಈ ರೀತಿ ವಿಕೃತ ಆನಂದ ಪಡೆಯುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಕಾನೂನುಬದ್ಧವಾಗಿ ತಕ್ಕ ಶಾಸ್ತಿ ನೀಡಿಯೇ ತೀರುತ್ತೇನೆ" ಎಂದು ಆಕ್ರೋಶದಿಂದ ಅವರು ಸವಾಲು ಹಾಕಿದ್ದಾರೆ.1
- ಚಳ್ಳಕೆರೆ ತಾಲೂಕಿನಲ್ಲಿ ಈ ಬಾರಿ ವಾಡಕಿಗಿಂತ ಹೆಚ್ಚು ಮಳೆಯಾಗಿದ್ದು, ಮುಂಗಾರು ಬಿತ್ತನೆ ಕಾರ್ಯವು ಈಗಾಗಲೇ ಆರಂಭಗೊಂಡಿದೆ. ಕೆಲವು ರೈತರು ಈಗಾಗಲೇ ತೊಗರಿ ಬಿತ್ತನೆಯಲ್ಲಿ ನಿರತರಾಗಿದ್ದು, ಬಿತ್ತನೆ ಬೀಜಗಳ ಜೊತೆಗೆ ರಸಗೊಬ್ಬರ ಖರೀದಿಗಾಗಿ ನಗರದ ವ್ಯವಸಾಯೋತ್ಪನ್ನಗಳ ಮಾರಾಟ ಮಳಿಗೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಸ್ವಲ್ಪ ಸಮಯ ಗೊಂದಲದ ವಾತಾವರಣ ಉಂಟಾದರೂ, ಮಳಿಗೆಯ ಮಾರಾಟಗಾರರು ರೈತರಿಗೆ ಯಾವುದೇ ಕೊರತೆಯಾಗದಂತೆ ರಸಗೊಬ್ಬರವನ್ನು ಮಾರಾಟ ಮಾಡಿದ್ದಾರೆ. ಚಳ್ಳಕೆರೆ ವ್ಯವಸಾಯೋತ್ಪನ್ನಗಳ ಮಾರಾಟ ಮಳಿಗೆಯಲ್ಲಿ ಸಾಕಷ್ಟು ಗೊಬ್ಬರ ದಾಸ್ತಾನು ಇದ್ದು, ರೈತರು ಆತಂಕಪಡದೆ ಗೊಬ್ಬರವನ್ನು ಪಡೆಯಬಹುದು ಎಂದು ತಿಳಿಸಲಾಗಿದೆ.1
- ಧರ್ಮಸ್ಥಳ ಪ್ರಕರಣದಲ್ಲಿ ಚಿತ್ರದುರ್ಗದ ರಮಾ ನಾಗರಾಜ್ ಅವರ ಹೆಸರು ಕೇಳಿಬಂದಿದ್ದು, ಚಿತ್ರದುರ್ಗದಿಂದ ರಮಾ ನಾಗರಾಜ್ ಫಂಡಿಂಗ್ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಧರ್ಮಸ್ಥಳದ 'ಬುರುಡೆ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ರಮಾ ನಾಗರಾಜ್ ಅವರು ಈ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರಮಾ ನಾಗರಾಜ್ ಅವರು, ಧರ್ಮಸ್ಥಳದ 'ಬುರುಡೆ ಪ್ರಕರಣ'ದಲ್ಲಿ ಚಿನ್ನಯ್ಯ ಹೇಳಿದ ಮಾತುಗಳು ಸತ್ಯಕ್ಕೆ ದೂರವಾದವು ಎಂದು ಸ್ಪಷ್ಟಪಡಿಸಿದ್ದಾರೆ. ಚಿನ್ನಯ್ಯ ಅವರು ರಮಾ ನಾಗರಾಜ್ ಫಂಡಿಂಗ್ ಮಾಡುತ್ತಿದ್ದರು ಎಂದು ಹೇಳಿರುವುದು ಸುಳ್ಳು ಎಂದೂ ಅವರು ಖಚಿತಪಡಿಸಿದ್ದಾರೆ. ಚಿನ್ನಯ್ಯ ಯಾರು ಎಂದೇ ತನಗೆ ಗೊತ್ತಿಲ್ಲ ಎಂದು ರಮಾ ನಾಗರಾಜ್ ಹೇಳಿದ್ದು, ಅವರ ಹೆಂಡತಿಗೆ ಹಣ ಸಂದಾಯ ಮಾಡಿದ್ದಾಗಿ ಚಿನ್ನಯ್ಯ ಹೇಳಿರುವುದು ಸಹ ಸುಳ್ಳು ಎಂದು ಅವರು ತಳ್ಳಿಹಾಕಿದ್ದಾರೆ. ಯಾವುದೇ ಕಾರಣವಿಲ್ಲದೆ ತನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ ಎಂದು ರಮಾ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಪ ಮಾಡಿದ ತಕ್ಷಣ ತಾನು ಆರೋಪಿ ಆಗುವುದಿಲ್ಲ, ಬೇಕಿದ್ದರೆ ಸಾಬೀತು ಮಾಡಲಿ ಎಂದು ಅವರು ಸವಾಲು ಹಾಕಿದ್ದಾರೆ. ಒಂದು ವೇಳೆ ತಾನು ಹಣ ಸಂದಾಯ ಮಾಡಿದ್ದರೆ, ಎಸ್.ಐ.ಟಿ.ಗೆ ಸಾಕ್ಷ್ಯ ಒದಗಿಸಲಿ ಎಂದು ರಮಾ ನಾಗರಾಜ್ ಆಗ್ರಹಿಸಿದ್ದಾರೆ. ನಾವು ಮಾಡಬೇಕಿದ್ದ ಕೆಲಸವನ್ನು ಚಿನ್ನಯ್ಯ ಅವರು ಮಾಡುತ್ತಿದ್ದಾರೆ ಎಂದು ರಮಾ ನಾಗರಾಜ್ ಹೇಳಿಕೆ ನೀಡಿದ್ದಾರೆ.1
- ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ರಾಜಕೀಯ ಬಿರುಗಾಳಿ ಎದ್ದಿದೆ. ಯುವ ನಾಯಕ ಸಮರ್ಥ್ ರಾಯ್ ತೀವ್ರವಾಗಿ ಸಿಡಿದೆದ್ದಿದ್ದು, ಇದು ಪಕ್ಷದೊಳಗೆ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯು ಆಂತರಿಕ ಪಕ್ಷದ ಸಂಘರ್ಷ ಮತ್ತು ರಾಜಕೀಯ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.1
- ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 13ನೇ ವರ್ಷದ ಆಡಳಿತಕ್ಕೆ ಕಾಲಿಟ್ಟ ಸಂದರ್ಭದಲ್ಲಿ, ಶಿಡ್ಲಘಟ್ಟ ನಗರದ ಶ್ರೀರಾಮ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಹಾಲಿನ ಅಭಿಷೇಕವನ್ನು ನೆರವೇರಿಸಲಾಯಿತು. ಈ ಧಾರ್ಮಿಕ ಕಾರ್ಯಕ್ರಮವು ಪ್ರಧಾನಿಯವರ ಈ ಮೈಲಿಗಲ್ಲನ್ನು ಸ್ಮರಿಸಲು ಆಯೋಜಿಸಲಾಗಿತ್ತು.1
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ದೇವನಹಳ್ಳಿಯಲ್ಲಿ ಜಿಲ್ಲಾ ಪಂಚಾಯಿತಿ (ಜಿ.ಪಂ.) ಮತ್ತು ತಾಲ್ಲೂಕು ಪಂಚಾಯಿತಿ (ತಾ.ಪಂ.) ಚುನಾವಣೆಗಳ ಕುರಿತು ಪ್ರಮುಖ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳನ್ನು ಖಂಡಿತವಾಗಿಯೂ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಚುನಾವಣೆಗಳನ್ನು ನಡೆಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಶೀಘ್ರದಲ್ಲಿಯೇ ಗ್ರಾಮ ಪಂಚಾಯಿತಿ, ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳನ್ನು ನಡೆಸುವುದಾಗಿ ಸಚಿವ ಈಶ್ವರ್ ಖಂಡ್ರೆ ಪುನರುಚ್ಚರಿಸಿದ್ದಾರೆ.1
- ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.1
- ಚಿತ್ರದುರ್ಗದ ಕಣಿವೆ ಮಾರಮ್ಮ ದೇವಸ್ಥಾನದ ಬಳಿ ಚಿತ್ರದುರ್ಗ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ 115 ತೆಂಗಿನಕಾಯಿ ಒಡೆಯುವ ಮೂಲಕ ಹರಕೆ ತೀರಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲಿ ಮತ್ತು ಬಿ.ಕೆ. ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಲಿ ಎಂದು ಈ ಹಿಂದೆ ಹರಕೆ ಹೊತ್ತಿದ್ದರು. ಈ ಹರಕೆ ಪೂರೈಸಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ನಗರ ದೇವತೆ ಕಣಿವೆ ಮಾರಮ್ಮ ದೇವಿಗೆ 115 ತೆಂಗಿನಕಾಯಿಗಳನ್ನು ಒಡೆಯುವ ಮೂಲಕ ತಮ್ಮ ಸಂಕಲ್ಪವನ್ನು ಈಡೇರಿಸಿದ್ದಾರೆ.1