ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಯಾದಗಿರಿ ವತಿಯಿಂದ ದಿನಾಂಕ: 29-08-2026 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೇರ ಸಂದರ್ಶನ ಯಾದಗಿರಿ, ಆಗಸ್ಟ್.25 (ಕ.ವಾ): ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಯಾದಗಿರಿ ವತಿಯಿಂದ ದಿನಾಂಕ: 29-08-2026 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೇರ ಸಂದರ್ಶನವನ್ನು ಅಯೋಜಿಸಲಾಗಿದೆ. ಸ್ವತಂತ್ರ ಮೈಕ್ರೋಫೀನ್ ಪ್ರೆöÊ.ಲಿ. ನಲ್ಲಿ ಕಲೆಕ್ಷನ್ ಆಫೀಸರ್ 15 ಮತ್ತು ಫೀಲ್ಡ್ ಆಫೀಸರ್ 20 ಹುದ್ದೆಗಳು ಖಾಲಿ ಇದ್ದು, ಎಸ್,ಎಸ್,ಎಲ್,ಸಿ,, ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಯಾದಗಿರಿ, ಗುರುಮಠಕಲ್, ಕೆಂಭಾವಿ, ಸೈದಾಪೂರು, ಶಹಾಪೂರು, ಸೇಡಂ, ಕಲಬುರಗಿ, ದೇವಗುರ್ಗ ಉದ್ಯೋಗ ಸ್ಥಳವಾಗಿದೆ. ವಯೋಮಿತಿ 18 ರಿಂದ 35 ವರ್ಷ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಬೈಕ್ ಮತ್ತು ಡಿ.ಎಲ್. ಹೊಂದಿದವರಿಗೆ ಅಧ್ಯತೆ. ಪಿ.ಎಫ್/ಇಎಸ್‌ಐ/ಉಚಿತ ವಸತಿ ಸೌಲಭ್ಯವಿರುತ್ತದೆ. ಈ ನೇರ ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ದಾಖಲಾತಿಗಳೊಂದಿಗೆ ವ್ಯಕ್ತಿ ಪರಿಚಯ ರಿಸ್ಯೂಮ್/ಬಯೋಡಾಟಾದೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ನೇರ ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ನೇರ ಸಂದರ್ಶನ ನಡೆಯುವ ಸ್ಥಳ ಹಾಗೂ ಹೆಚ್ಚಿನ ಮಾಹಿತಿಗಾಗಿ ಚಿತ್ತಾಪೂರು ರೋಡ್ (ಮಿನಿ ವಿಧಾನ ಸೌಧ) ಜಿಲ್ಲಾಡಳಿತ ಭವನ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬಿ-ಬ್ಲಾಕ್ ರೂ.ನಂ. ಬಿ1 ಮತ್ತು ಬಿ2 2ನೇ ಮಹಡಿ ಯಾದಗಿರಿ ಇವರ ದೂರವಾಣಿ ಸಂಖ್ಯೆ: 08473-253718 ಹಾಗೂ ಮೊಬೈಲ್ ಸಂಖ್ಯೆ: 9448566765 ಗೆ ಕಛೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ****
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಯಾದಗಿರಿ ವತಿಯಿಂದ ದಿನಾಂಕ: 29-08-2026 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೇರ ಸಂದರ್ಶನ ಯಾದಗಿರಿ, ಆಗಸ್ಟ್.25 (ಕ.ವಾ): ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಯಾದಗಿರಿ ವತಿಯಿಂದ ದಿನಾಂಕ: 29-08-2026 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೇರ ಸಂದರ್ಶನವನ್ನು ಅಯೋಜಿಸಲಾಗಿದೆ. ಸ್ವತಂತ್ರ ಮೈಕ್ರೋಫೀನ್ ಪ್ರೆöÊ.ಲಿ. ನಲ್ಲಿ ಕಲೆಕ್ಷನ್ ಆಫೀಸರ್ 15 ಮತ್ತು ಫೀಲ್ಡ್ ಆಫೀಸರ್ 20 ಹುದ್ದೆಗಳು ಖಾಲಿ ಇದ್ದು, ಎಸ್,ಎಸ್,ಎಲ್,ಸಿ,, ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಯಾದಗಿರಿ, ಗುರುಮಠಕಲ್, ಕೆಂಭಾವಿ, ಸೈದಾಪೂರು, ಶಹಾಪೂರು, ಸೇಡಂ, ಕಲಬುರಗಿ, ದೇವಗುರ್ಗ ಉದ್ಯೋಗ ಸ್ಥಳವಾಗಿದೆ. ವಯೋಮಿತಿ 18 ರಿಂದ 35 ವರ್ಷ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಬೈಕ್ ಮತ್ತು ಡಿ.ಎಲ್. ಹೊಂದಿದವರಿಗೆ ಅಧ್ಯತೆ. ಪಿ.ಎಫ್/ಇಎಸ್‌ಐ/ಉಚಿತ ವಸತಿ ಸೌಲಭ್ಯವಿರುತ್ತದೆ. ಈ ನೇರ ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ದಾಖಲಾತಿಗಳೊಂದಿಗೆ ವ್ಯಕ್ತಿ ಪರಿಚಯ ರಿಸ್ಯೂಮ್/ಬಯೋಡಾಟಾದೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ನೇರ ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ನೇರ ಸಂದರ್ಶನ ನಡೆಯುವ ಸ್ಥಳ ಹಾಗೂ ಹೆಚ್ಚಿನ ಮಾಹಿತಿಗಾಗಿ ಚಿತ್ತಾಪೂರು ರೋಡ್ (ಮಿನಿ ವಿಧಾನ ಸೌಧ) ಜಿಲ್ಲಾಡಳಿತ ಭವನ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಬಿ-ಬ್ಲಾಕ್ ರೂ.ನಂ. ಬಿ1 ಮತ್ತು ಬಿ2 2ನೇ ಮಹಡಿ ಯಾದಗಿರಿ ಇವರ ದೂರವಾಣಿ ಸಂಖ್ಯೆ: 08473-253718 ಹಾಗೂ ಮೊಬೈಲ್ ಸಂಖ್ಯೆ: 9448566765 ಗೆ ಕಛೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ****
- ಜಯರಾಜ್ ಅಧ್ಯಕ್ಷರು ರಕ್ಷಣಾ ವೇದಿಕೆ ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ1
- ಆಗಸ್ಟ್ 27ರಂದು ಬರಗಾಲ ಪ್ರಯುಕ್ತ ಹುಟ್ಟುಹಬ್ಬ ಆಚರಣೆ ಮಾಡದಿರುವುದಾಗಿ ನಿರ್ಧಾರ ಶ್ರೀಮತಿ ಕರೆಮ್ಮ ಜಿ ನಾಯಕ ದೇವದುರ್ಗ ಶಾಸಕರು1
- "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*1
- ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ. ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.1
- ಸಿಂಧನೂರು ಕ್ಷೇತ್ರದಲ್ಲಿ 43,115 ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಸಿಂಧನೂರು: ರಾಷ್ಟ್ರೀಯ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದ ಬಳಿಕ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 43,115 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ದೇಸಾಯಿ ತಿಳಿಸಿದ್ದಾರೆ. ಮಂಗಳವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕ್ಷೇತ್ರದಲ್ಲಿ 2,40,941 ಮತದಾರರಿದ್ದರು. ಪರಿಷ್ಕರಣೆ ವೇಳೆ ಮೃತಪಟ್ಟ 6,778, ಶಾಶ್ವತವಾಗಿ ಸ್ಥಳಾಂತರಗೊಂಡ 31,954, ಗೈರುಹಾಜರಿದ್ದ 1,555 ಹಾಗೂ ಡಬಲ್ ಮತದಾರರಾಗಿದ್ದ 2,805 ಮಂದಿಯ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇತರ ಕಾರಣಗಳಿಂದ 23 ಮತದಾರರ ಹೆಸರನ್ನೂ ಡಿಲೀಟ್ ಮಾಡಲಾಗಿದೆ. 2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಒಟ್ಟು 17.90ರಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪೈಕಿ ನಗರ ವ್ಯಾಪ್ತಿಯಲ್ಲಿ 20,799 ಹಾಗೂ ಗ್ರಾಮೀಣ ಪ್ರದೇಶದಲ್ಲಿ 22,351 ಮತದಾರರ ಹೆಸರುಗಳು ಡಿಲೀಟ್ ಆಗಿವೆ. ಅರ್ಹ ಮತದಾರರ ಹೆಸರು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದರೆ, ನಿಗದಿತ 13 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಸಲ್ಲಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿದೆ ಎಂದು ಅವರು ತಿಳಿಸಿದರು. ಈ ಹಿಂದೆ ಕ್ಷೇತ್ರದಲ್ಲಿ 269 ಮತಗಟ್ಟೆಗಳಿದ್ದವು. 1,200ಕ್ಕೂ ಅಧಿಕ ಮತದಾರರಿರುವ ಕಾರಣ ಮಾಡಶಿರವಾರ, ಪಗಡದಿನ್ನಿ ಹಾಗೂ ಬೂದಿಹಾಳ ಗ್ರಾಮಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ವಿ.ಹೆಚ್.ಎ. ಆ್ಯಪ್ ಮೂಲಕ ಮತದಾರರ ಸೇರ್ಪಡೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅರುಣ್ ಕುಮಾರ್ ದೇಸಾಯಿ ಹೇಳಿದರು.1
- ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.4
- ಕಾಳಗಿಯಲ್ಲಿ ಕ್ರಾಪ್ ಕಟಿಂಗ್‌ನಲ್ಲಿ ಲೋಪ ದೋಷ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಹುಲಸಗುಡ್ ಗ್ರಾಮದಲ್ಲಿ ರೈತರ ಹಾಗೂ ರೈತನ ಮುಖಂಡರು ಗೆರಾವ್–ಪ್ರತಿಭಟನೆ. ಕ್ರಾಪ್ ಕಟಿಂಗ್‌ನಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಾರ್ಟಿಕಲ್ಚರ್ ಅಧಿಕಾರಿಗಳು, ಬೆಳೆ ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ವಿರುದ್ಧ ಹುಲಸಗುಡ್ ಗ್ರಾಮದ ರೈತರು ಹಾಗೂ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಗೆರಾವ್ ಹಾಕಿ ಪ್ರತಿಭಟನೆ ನಡೆಸಿದರು. ರೈತರ ಬೆಳೆಗಳಿಗೆ ಸಂಬಂಧಿಸಿದಂತೆ ಸರಿಯಾದ ಕ್ರಾಪ್ ಕಟಿಂಗ್ ಮಾಡದೆ ಇರುವುದರಿಂದ ಬೆಳೆ ವಿಮೆ ಹಾಗೂ ಪರಿಹಾರ ಪಡೆಯುವಲ್ಲಿ ರೈತರಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋದ ವರ್ಷ ಅತಿವೃಷ್ಟಿಯಾಗಿ ಹಾಳಾಗಿರ್ತಕ್ಕಂತ ಬೆಳೆ ಇನ್ಸೂರೆನ್ಸ್ ಸರಿಯಾಗಿ ಬರದೇ ರೈತ ಸಂಕಷ್ಟದಲ್ಲಿದ್ದಾನೆ. ಈ ವರ್ಷ ಮಳೆ ಇಲ್ಲದೆ ಬೆಳೆದೆ ಬೆಳೆ ಇಲ್ಲದೆ ರೈತ ಕಷ್ಟದಲ್ಲಿದ್ದಾನೆ ಬರದ ಛಾಯ ಮೂಡಿದೆ. ಹೀಗಿರುವಾಗ ಮತ್ತೆ ಇನ್ಸೂರೆನ್ಸ್ ಕಂಪನಿ ದವರು ಅದೇ ರಾಗ ಅದೇ ಹಾಡು ಹಾಡುತ್ತಿದ್ದಾರೆ. ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ತಹಸೀಲ್ದಾರ್ ಆಗಮಿಸಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದರು. ಸರಿಯಾದ ರೀತಿಯಲ್ಲಿ ಕ್ರಾಪ್ ಕಟಿಂಗ್ ಮಾಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ತಹಸೀಲ್ದಾರ್ ಅವರ ಭರವಸೆ ಹಾಗೂ ಅಧಿಕಾರಿಗಳಿಂದ ಸಮಸ್ಯೆ ಪರಿಶೀಲಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ತಿಳಿಗೊಳಿಸಿದರು. ರೈತರ ಬೆಳೆ ವಿಮೆ ಮತ್ತು ಬೆಳೆ ಪರಿಹಾರದಲ್ಲಿ ಯಾವುದೇ ರೀತಿಯ ತಾರತಮ್ಯವಾಗಬಾರದು. ಸರಿಯಾದ ಕ್ರಾಪ್ ಕಟಿಂಗ್ ನಡೆಸಿ ಅರ್ಹ ಪ್ರತಿಯೊಬ್ಬ ರೈತನಿಗೂ ನ್ಯಾಯ ಒದಗಿಸಬೇಕು ಎಂದು ಹುಲಸಗುಡ್ ಗ್ರಾಮದ ರೈತರು ಹಾಗೂ ಸುಂಟಾಣ್ಣ ಗ್ರಾಮದ ರೈತರು, ರೈತ ಸೇನೆ ಮುಖಂಡರು ಆಗ್ರಹಿಸಿದ್ದಾರೆ. “ರೈತರ ಬೆವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ರೈತ ನಾಯಕ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ತಾಲೂಕ ದಂಡಾಧಿಕಾರಿಗಳಾದ ಪೃಥ್ವಿರಾಜ್ ಪಾಟೀಲ್ ರವರು ಎರಡು ಮೂರು ದಿವಸಗಳಲ್ಲಿ ಮುಖಂಡರನ್ನು ಕರೆದು ಸಭೆ ಮಾಡಿ ನಂತರ ಖುದ್ದಾಗಿ ನಾವೇ ಬಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೊಲಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಟಿಕಲ್ಚರ್ ಅಧಿಕಾರಿ ನಸ್ಸೀರ್ ಹೊಸಳ್ಳಿ, ಇನ್ಸೂರೆನ್ಸ್ ಕಂಪನಿ ಅಧಿಕಾರಿ ಯುವರಾಜ್, ರೈತರದ ಸಂತೋಷ್ ನಾಯ್ಕೋಡಿ,ಶಿವಶರಣಪ್ಪ ನಿಗದಳಿ, ವಿಠಲ ಸನದಿ, ಪಾಂಡುರಂಗ ರುಮ್ಮನಗೂಡ. ಸೈದಪ್ಪ ಕೊಡಡೂರ, ಸಜೀದಾಪಟೇಲ್ ಬಿರಾದಾರ್, ಸಿದಪ್ಪ ಕಂದಗುಳ, ಶಿವಪ್ಪ ಸನದಿ, ನಾಮದೇವ ರಾಠೋಡ್, ಉದಯ ಸನದಿ, ನಾಗೇಶ್ ಸನದಿ, ವಿಠ್ಠಲ್ ರೂಮನಗುಡ, ಸಂತೋಷ ಮಠಪತಿ, ಪೀರಪ್ಪ ಯಾದವ, ನಾಗಪ್ಪ ಜಡಗಿ, ಅನೇಕ ರೈತರು ಉಪಸ್ಥಿತರಿದ್ದರು1
- ಕರೆಮ್ಮ ಜಿ ನಾಯಕ್ ಶಾಸಕರು ವಿಧಾನ ಸಭಾ ಕ್ಷೇತ್ರ ಇವರಿಂದ ನಮ್ಮ ಚಾನೆಲ್2