ಶ್ರೀಮಂತ ವ್ಯಕ್ತಿಗಳನ್ನು ಹನಿಟ್ಯಾಪ್ ಮಾಡಿ ಲೂಟಿ ಮಾಡುತ್ತಿದ್ದ ಮಹಿಳೆಯ ಬಂಧನ ಬೆಳಗಾವಿ : ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹನಿ ಟ್ರ್ಯಾಪ್ ನಡೆಸುತ್ತಿದ್ದ ಫ್ಯಾಶನ್ ಡಿಸೈನರ್ ಮಹಿಳೆಯನ್ನು ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಬಂಧಿತ ಆರೋಪಿಯಾಗಿದ್ದು, ಆಕೆಯ ಸ್ನೇಹಿತ ಶಿವಾನಂದ ಮಠಪತಿ ಪರಾರಿಯಾಗಿದ್ದಾನೆ. ಶಿವಾನಂದನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿವಾಸಿಯಾಗಿದ್ದು, ಶ್ರೀಮಂತ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ದೀಪಾಗೆ ನೀಡುತ್ತಿದ್ದ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್ ಮೂಲಕ ಶ್ರೀಮಂತ ವ್ಯಕ್ತಿಗಳೊಂದಿಗೆ ಪರಿಚಯ ಬೆಳೆಸಿ ಅವರನ್ನು ದೀಪಾ ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದಳು. ಬಳಿಕ ಅಶ್ಲೀಲ ಚಾಟ್ ನಡೆಸಿ, ಬೆಳಗಾವಿ ನಗರದ ಲಾಡ್ಜ್‌ಗೆ ಭೇಟಿ ನೀಡುವಂತೆ ಆಹ್ವಾನಿಸುತ್ತಿದ್ದಳು. ಲಾಡ್ಜ್‌ಗೆ ಬಂದ ವ್ಯಕ್ತಿಗೆ ಸ್ನಾನ ಮಾಡಿ ಬರಲು ಹೇಳಿ, ಆತ ಬಾತ್‌ರೂಮ್‌ಗೆ ಹೋದ ತಕ್ಷಣ ಹೊರಗಿನಿಂದ ಬಾಗಿಲು ಹಾಕಿ ಲಾಕ್ ಮಾಡುತ್ತಿದ್ದಳು. ನಂತರ ಆತನ ಬಳಿ ಇದ್ದ ಮೊಬೈಲ್, ಹಣ ಹಾಗೂ ಕಾರಿನ ಕೀಲಿಗಳನ್ನು ಕಳ್ಳತನ ಮಾಡಿ ಪರಾರಿಯಾಗುತ್ತಿದ್ದಳು. ಈ ಘಟನೆಗಳ ಕೆಲವು ದೃಶ್ಯಗಳು ಲಾಡ್ಜ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಬಳಿಕ ಬಾತ್‌ರೂಮ್‌ನಲ್ಲಿ ಸಿಲುಕಿದ್ದ ವ್ಯಕ್ತಿಗೆ ಬೇರೆ ಸಂಖ್ಯೆಯಿಂದ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟು, ಹಣ ಕೊಡದಿದ್ದರೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್ಪೆಕ್ಟರ್ ಪರಶುರಾಮ ಪೂಜೇರಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ. ಆರೋಪಿ ದೀಪಾಳಿಂದ ಒಟ್ಟು 32. 86 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಒಂದು ಫಾರ್ಚುನರ್ ಕಾರು, ಒಂದು ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು, 11 ಮೊಬೈಲ್ ಫೋನ್‌ಗಳು, ಒಂದು ಟ್ಯಾಬ್, ಒಂದು ಡೊಂಗಲ್, ಮೂರು ಕಾರಿನ ಕೀಗಳು ಹಾಗೂ 14 ಸಾವಿರ ರೂಪಾಯಿ ನಗದು ವಶಪಡಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಶ್ರೀಮಂತ ವ್ಯಕ್ತಿಗಳನ್ನು ಹನಿಟ್ಯಾಪ್ ಮಾಡಿ ಲೂಟಿ ಮಾಡುತ್ತಿದ್ದ ಮಹಿಳೆಯ ಬಂಧನ ಬೆಳಗಾವಿ : ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹನಿ ಟ್ರ್ಯಾಪ್ ನಡೆಸುತ್ತಿದ್ದ ಫ್ಯಾಶನ್ ಡಿಸೈನರ್ ಮಹಿಳೆಯನ್ನು ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದ ದೀಪಾ ಅವಟಗಿ (33) ಬಂಧಿತ ಆರೋಪಿಯಾಗಿದ್ದು, ಆಕೆಯ ಸ್ನೇಹಿತ ಶಿವಾನಂದ ಮಠಪತಿ ಪರಾರಿಯಾಗಿದ್ದಾನೆ. ಶಿವಾನಂದನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿವಾಸಿಯಾಗಿದ್ದು, ಶ್ರೀಮಂತ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ದೀಪಾಗೆ ನೀಡುತ್ತಿದ್ದ
ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್ ಮೂಲಕ ಶ್ರೀಮಂತ ವ್ಯಕ್ತಿಗಳೊಂದಿಗೆ ಪರಿಚಯ ಬೆಳೆಸಿ ಅವರನ್ನು ದೀಪಾ ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದಳು. ಬಳಿಕ ಅಶ್ಲೀಲ ಚಾಟ್ ನಡೆಸಿ, ಬೆಳಗಾವಿ ನಗರದ ಲಾಡ್ಜ್‌ಗೆ ಭೇಟಿ ನೀಡುವಂತೆ ಆಹ್ವಾನಿಸುತ್ತಿದ್ದಳು. ಲಾಡ್ಜ್‌ಗೆ ಬಂದ ವ್ಯಕ್ತಿಗೆ ಸ್ನಾನ ಮಾಡಿ ಬರಲು ಹೇಳಿ, ಆತ ಬಾತ್‌ರೂಮ್‌ಗೆ ಹೋದ ತಕ್ಷಣ ಹೊರಗಿನಿಂದ ಬಾಗಿಲು ಹಾಕಿ ಲಾಕ್ ಮಾಡುತ್ತಿದ್ದಳು. ನಂತರ ಆತನ ಬಳಿ
ಇದ್ದ ಮೊಬೈಲ್, ಹಣ ಹಾಗೂ ಕಾರಿನ ಕೀಲಿಗಳನ್ನು ಕಳ್ಳತನ ಮಾಡಿ ಪರಾರಿಯಾಗುತ್ತಿದ್ದಳು. ಈ ಘಟನೆಗಳ ಕೆಲವು ದೃಶ್ಯಗಳು ಲಾಡ್ಜ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಬಳಿಕ ಬಾತ್‌ರೂಮ್‌ನಲ್ಲಿ ಸಿಲುಕಿದ್ದ ವ್ಯಕ್ತಿಗೆ ಬೇರೆ ಸಂಖ್ಯೆಯಿಂದ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟು, ಹಣ ಕೊಡದಿದ್ದರೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್ಪೆಕ್ಟರ್ ಪರಶುರಾಮ
ಪೂಜೇರಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ. ಆರೋಪಿ ದೀಪಾಳಿಂದ ಒಟ್ಟು 32. 86 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಒಂದು ಫಾರ್ಚುನರ್ ಕಾರು, ಒಂದು ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು, 11 ಮೊಬೈಲ್ ಫೋನ್‌ಗಳು, ಒಂದು ಟ್ಯಾಬ್, ಒಂದು ಡೊಂಗಲ್, ಮೂರು ಕಾರಿನ ಕೀಗಳು ಹಾಗೂ 14 ಸಾವಿರ ರೂಪಾಯಿ ನಗದು ವಶಪಡಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
- Post by ನಾಗರಾಜ3
- ಬಳ್ಳಾರಿ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ನಿರ್ಮಾಣ ಹಾಗೂ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಡ್ಡರಬಂಡೆ ಪ್ರದೇಶದಲ್ಲಿ ಶೀಘ್ರದಲ್ಲೇ ಶಾದಿ ಮಹಲ್ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು. ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸಿರ್ ಹುಸೇನ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರ ಸಹಯೋಗದಲ್ಲಿ ನಗರದಲ್ಲಿ ಎರಡು ಶಾದಿ ಮಹಲ್ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಬಡ ಕುಟುಂಬಗಳ ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ಶಾದಿ ಮಹಲ್ ಸಹಾಯಕವಾಗಲಿದೆ ಎಂದರು. ಇದೇ ವೇಳೆ ಈದ್ಗಾ ಮತ್ತು ಖಬರಸ್ತಾನದ ಸ್ವಚ್ಛತೆ ಹಾಗೂ ಹಸೀರಿಕರಣದಲ್ಲಿ ತೊಡಗಿದ್ದ ಯುವಕರ ಕಾರ್ಯವನ್ನು ಮೆಚ್ಚಿ ಯೂತ್ ರೆವಲ್ಯೂಷನ್ ತಂಡದ ಸದಸ್ಯರನ್ನು ಸನ್ಮಾನಿಸಿದರು.1
- ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು. ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.1
- ಬಳ್ಳಾರಿ ಕೋಟೆಯ ಪ್ರದೇಶದಲ್ಲಿ ಬೆಂಕಿ ಅವಘಡ.1
- ಹೌದು ಹೋಳಿ ಹಬ್ಬದ ವೇಳೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಗಲಕೋಟ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಕೊಲೆಯಾದ ದುರ್ದೈವಿ, ಹೋಳಿ ಹಬ್ಬದಂದು ರಾಹುಲ ಹಾಗೂ ಆತನ ಸ್ನೇಹಿತನ ಕ್ಷುಲ್ಲಕ ಕಾರಣಕ್ಕೆ ಜಗಳವುಂಟಾಗಿತ್ತು. ಇದೇ ವಿಷಯವಾಗಿ ಮಾತನಾಡಲು ಸ್ನೇಹಿತರೆಲ್ಲ ದೇವಸ್ಥಾನ ಒಂದರ ಬಳಿ ಸೇರಿದ್ದ ವೇಳೆಯಲ್ಲಿ ಮಾತಿಗೆ ಮಾತು ಬೆಳೆದು ರಾಹುಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.1
- ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕೆ ಭಕ್ತರ ಹರಿವು – ಕಾಯಿನ್ ಅಂಟಿಸಿ ಬೇಡಿಕೆ ಈಡೇರಿಕೆಗಾಗಿ ಪ್ರಾರ್ಥನೆ ಹೌದು ಇದು ಚಳ್ಳಕೆರೆ ತಾಲೂಕಿನ ಮಧ್ಯಾಹ್ನದ ಮಾರಮ್ಮ ಎಂದೇ ಖ್ಯಾತಿ ಪಡೆದ ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕಾಗಿ ಮಂಗಳವಾರ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿದರು. ತಮ್ಮ ಇಷ್ಟಾರ್ಥಗಳು ಈಡೇರಲಿ ಎಂಬ ನಂಬಿಕೆಯಿಂದ ಭಕ್ತರು ದೇವಿಯ ಗರ್ಭಗುಡಿಯ ಹಿಂಭಾಗದಲ್ಲಿ ಕಾಯಿನ್ ಅಂಟಿಸುವ ಮೂಲಕ ಅರಕೆ ತೀರಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿತು. ದೇವಿಯ ಕೃಪೆಯಿಂದ ಮನಸಿನ ಬೇಡಿಕೆಗಳು ಈಡೇರುತ್ತವೆ ಎಂಬ ನಂಬಿಕೆಯಿಂದ ಹಲವರು ಈ ವಿಧಿ ಪಾಲಿಸುತ್ತಿದ್ದಾರೆ. ಇದೇ ವೇಳೆ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ತಮ್ಮ ಇಷ್ಟಾರ್ಥಗಳು ಈಡೇರಿದ ಹಿನ್ನೆಲೆಯಲ್ಲಿ ಮಕ್ಕಳ ಜವಳ, ನಾಮಕರಣ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿ ಬಾಡೂಟ ಮಾಡಿಸುವ ಸಂಪ್ರದಾಯವೂ ನಡೆಯುತ್ತಿತ್ತು. ಬಂಧು-ಬಳಗ ಹಾಗೂ ಸ್ನೇಹಿತರನ್ನು ಆಹ್ವಾನಿಸಿ ಊಟ ಬಡಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.1
- Post by Harisha Y1
- ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರದ ಗೋವು ಶಾಲೆಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಗಲವಾಡ ಗ್ರಾಮದ ಶ್ರೀಅಮರೇಗೌಡ್ರ ಬಿಳಿ ಜೋಳದ ಮೇವು ಪೆಂಡಿಗಳನ್ನು ಶಿವಯೋಗಮಂದಿರಕ್ಕೆ ನೀಡಿದ್ದಾರೆ. ಅಮರೇಗೌಡ್ರ ಅವರನ್ನು ಶಿವಯೋಗಮಂದಿರದ ಮ್ಯಾನೇಜರ್ ಅವರು ಸತ್ಕರಿಸಿ ಗೌರವಿಸಿದರು.1