logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜೃಂಭಣೆಯಿಂದ ಜರುಗಿದ ಜಂಬೂ ಸವಾರಿ. ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾದ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಂಜೆ 4.42ರಿಂದ 5.06 ವರೆಗಿನ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ, ಚಿನ್ನದ ಅಂಬಾರಿಯಲ್ಲಿ ಆಸೀನಳಾಗಿರುವ ಚಾಮುಂಡೇಶ್ವರಿ ತಾಯಿಗೆ ಸಿಎಂ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಆರಂಭಗೊಂಡಿದೆ. ಜಂಬೂ ಸವಾರಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಂಸದ ಯದುವೀರ್ ಒಡೆಯರ್ ಉಪಸ್ಥಿತರಿದ್ದರು. 6ನೇ ಬಾರಿಗೆ ಅಭಿಮನ್ಯು ಆನೆ ಚಿನ್ನದ ಅಂಬಾರಿಯನ್ನು ಹೊತ್ತಿದ್ದು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಹೆಜ್ಜೆ ಹಾಕಿದೆ. ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪಾ ಸಾಥ್ ನೀಡಿವೆ. ಜಂಬೂ ಸವಾರಿ ವೀಕ್ಷಣೆಗಾಗಿ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸುಮಾರು 45 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಪಂಜಿನ ಕವಾಯತಿನ ಮೂಲಕ ಮೈಸೂರು ದಸರಾದ ಆಕರ್ಷಣೆ ಜಂಬೂ ಸವಾರಿಗೆ ಅಧಿಕೃತ ತೆರೆ ಬೀಳಲಿದೆ.

on 2 October
user_Vijay kumar
Vijay kumar
Journalist Chamarajanagara, Karnataka•
on 2 October
274801cc-9a47-4c28-9386-d806f9af8948
874c589c-647c-4b16-b307-64be3ba67231

ವಿಜೃಂಭಣೆಯಿಂದ ಜರುಗಿದ ಜಂಬೂ ಸವಾರಿ. ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾದ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಂಜೆ 4.42ರಿಂದ 5.06 ವರೆಗಿನ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ, ಚಿನ್ನದ ಅಂಬಾರಿಯಲ್ಲಿ ಆಸೀನಳಾಗಿರುವ ಚಾಮುಂಡೇಶ್ವರಿ ತಾಯಿಗೆ ಸಿಎಂ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಆರಂಭಗೊಂಡಿದೆ. ಜಂಬೂ ಸವಾರಿಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಂಸದ ಯದುವೀರ್ ಒಡೆಯರ್ ಉಪಸ್ಥಿತರಿದ್ದರು. 6ನೇ ಬಾರಿಗೆ ಅಭಿಮನ್ಯು ಆನೆ ಚಿನ್ನದ ಅಂಬಾರಿಯನ್ನು ಹೊತ್ತಿದ್ದು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಹೆಜ್ಜೆ ಹಾಕಿದೆ. ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪಾ ಸಾಥ್ ನೀಡಿವೆ. ಜಂಬೂ ಸವಾರಿ ವೀಕ್ಷಣೆಗಾಗಿ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸುಮಾರು 45 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಪಂಜಿನ ಕವಾಯತಿನ ಮೂಲಕ ಮೈಸೂರು ದಸರಾದ ಆಕರ್ಷಣೆ ಜಂಬೂ ಸವಾರಿಗೆ ಅಧಿಕೃತ ತೆರೆ ಬೀಳಲಿದೆ.

More news from Karnataka and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    11 hrs ago
  • ಹೆಚ್ ಟಿ ಎಂ ಹಕೀಮ್ ನೌಷದ್ ಖಾನ್ (ಪಾರಂಪರಿಕ )
    1
    ಹೆಚ್ ಟಿ ಎಂ 
ಹಕೀಮ್ ನೌಷದ್ ಖಾನ್ (ಪಾರಂಪರಿಕ )
    user_Naushad khan Vahab khan
    Naushad khan Vahab khan
    Ayurvedic clinic Bengaluru South, Bengaluru Urban•
    23 min ago
  • Post by SRI RABINDRANATH TAGORE HIGH SCHOOL BIJAPUR
    1
    Post by SRI RABINDRANATH TAGORE HIGH SCHOOL BIJAPUR
    user_SRI RABINDRANATH TAGORE HIGH SCHOOL BIJAPUR
    SRI RABINDRANATH TAGORE HIGH SCHOOL BIJAPUR
    School Vijayapura, Vijayapura, Karnataka•
    12 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    18 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    22 hrs ago
  • Post by SRI RABINDRANATH TAGORE HIGH SCHOOL BIJAPUR
    1
    Post by SRI RABINDRANATH TAGORE HIGH SCHOOL BIJAPUR
    user_SRI RABINDRANATH TAGORE HIGH SCHOOL BIJAPUR
    SRI RABINDRANATH TAGORE HIGH SCHOOL BIJAPUR
    School Vijayapura, Vijayapura, Karnataka•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.