*ಪಿ.ಬಿ. ಚಾರಿ* *ಅಳ್ನಾವರದ ೫ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ* *ಕನ್ನಡ ಸಾಹಿತ್ಯದಲ್ಲಿ ಧಾರ್ಮಿಕ ನೆಲೆಗಳ ಮಹತ್ವ ಚರ್ಚೆ* *ಅಳ್ಳಾವರ(ಧಾರವಾಡ):* ತಾಲ್ಲೂಕಿನ ೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆದ ಘೋಷ್ಠಿಯಲ್ಲಿ ಕನ್ನಡ ಸಾಹಿತ್ಯದಲ್ಲಿ ಧಾರ್ಮಿಕ ನೆಲೆಗಳು ವಿಷಯದ ಕುರಿತು ಅರ್ಥಪೂರ್ಣ ಚರ್ಚೆ ನಡೆಯಿತು. ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಲಘಟಗಿಯ ಉಪನ್ಯಾಸಕ ಪಿ.ಬಿ. ಚಾರಿ ಅವರು ಉಪನ್ಯಾಸ ನೀಡಿದರು. ಅವರು ಮಾತನಾಡಿ, ಧಾರ್ಮಿಕ ಹಾಗೂ ಸಾಹಿತ್ಯಕ ಮೌಲ್ಯಗಳು ಭಕ್ತಿ, ಸಮಾನತೆ ಮತ್ತು ಮಾನವೀಯತೆಯನ್ನು ಸಾರುತ್ತವೆ ಎಂದರು. ಧಾರ್ಮಿಕ ಪ್ರಭಾವಗಳು ಕನ್ನಡ ಸಾಹಿತ್ಯವನ್ನು ಸಮೃದ್ಧ ಹಾಗೂ ವೈವಿಧ್ಯಮಯವಾಗಿಸಲು ಕಾರಣವಾಗಿವೆ ಎಂದು ತಿಳಿಸಿ, ವಿವಿಧ ಧಾರ್ಮಿಕ ಪರಂಪರೆಗಳು ಸಾಹಿತ್ಯಕ್ಕೆ ಹೊಸ ದಿಕ್ಕುಗಳನ್ನು ನೀಡಿರುವುದನ್ನು ಅವರು ಒತ್ತಿಹೇಳಿದರು. ಮಲೆನಾಡಿನ ಸೊಬಗು ಹೊಂದಿರುವ ಅಳ್ನಾವರ ಬಹುಭಾಷಾ, ಬಹುಧರ್ಮಗಳ ನೆಲೆಯಾಗಿ ಗುರುತಿಸಿಕೊಂಡಿದ್ದು, ಇಲ್ಲಿ ಬಹುತ್ವದ ಸಂಸ್ಕೃತಿ ಗಾಢವಾಗಿ ಬೇರೂರಿದೆ. ವಿವಿಧ ಆಹಾರ ಪದ್ಧತಿ, ವೇಷಭೂಷಣ, ಸಂಸ್ಕೃತಿಗಳೊAದಿಗೆ ಜನರು ಒಗ್ಗಟ್ಟಿನ ಬದುಕು ನಡೆಸುತ್ತಿರುವುದು ಶ್ಲಾಘನೀಯವೆಂದರು. ಇತ್ತೀಚಿನ ದಿನಗಳಲ್ಲಿ ಧರ್ಮದ ಸ್ಥಳವನ್ನು ಜಾತಿ ಆಕ್ರಮಿಸುತ್ತಿರುವುದು ವಿಷಾದನೀಯ ಎಂದು ಚಾರಿ ಅಭಿಪ್ರಾಯಪಟ್ಟರು. ಮಾನವಧರ್ಮವೇ ಅತ್ಯಂತ ಶ್ರೇಷ್ಠ ಎಂಬುದನ್ನು ಎಲ್ಲರೂ ಅರಿತುಕೊಳ್ಳುವ ಅಗತ್ಯ ಇದೆ. ರಾಮಾಯಣ, ಮಹಾಭಾರತದಂತಹ ಪ್ರಾಚೀನ ಕಾವ್ಯಗಳು ಆದರ್ಶ ಧರ್ಮದ ಮಾರ್ಗವನ್ನು ತೋರಿಸಿವೆ ಎಂದು ವಿವರಿಸಿದರು. ಈ ರೀತಿಯ ಗೋಷ್ಟಿಗಳು ವಿಚಾರ ವಿನಿಮಯ ಮತ್ತು ವಿಮರ್ಶೆಗೆ ವೇದಿಕೆ ಒದಗಿಸುತ್ತಿದ್ದು, ಸಮಾಜದ ಆರೋಗ್ಯಕರ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಹೇಳಿದರು. ಪಿ.ಬಿ. ಚಾರಿ, ಉಪನ್ಯಾಸಕರು , ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಲಘಟಗಿ

- ಕುಂದಗೋಳ: ಗ್ರಾಮೀಣ ಭಾಗದ ಜನರಿಗೆ ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗುವ ಸಂಚಾರದ ಸಂಕಷ್ಟಗಳನ್ನು ತಪ್ಪಿಸಲು, ಗ್ರಾಮದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣಕ್ಕೆ ನನ್ನ ಅಧಿಕಾರ ಅವಧಿಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಪ್ರತಿಪಾದಿಸಿದರು. ಮಂಗಳವಾರದಂದು ತಾಲ್ಲೂಕಿನ ಕಳಸ-ಸಂಕ್ಲೀಪೂರ ರಸ್ತೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಮನವಿ ಸಲ್ಲಿಸಿದಾಗ ಉತ್ತಮ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದೆ. ಅದರಂತೆ ಇಂದು ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಲೆಕ್ಕ ಶೀರ್ಷಿಕೆ 5054ರ ಅಡಿಯಲ್ಲಿ ಅಂದಾಜು 1 ಕೋಟಿ 50 ಲಕ್ಷ ರೂಪಾಯಿಗಳ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ರಸ್ತೆ ಬೇಡಿಕೆ ಈಗ ಈಡೇರುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ತಂದಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಅಲಿ ಚಾಂದಖಾನವರ, ಮಲ್ಲಿಕಾರ್ಜುನ ಪ್ಯಾಟಿ, ಯಲ್ಲರೆಡ್ಡಿ ಯರಗುಪ್ಪಿ, ಅಖಂಡಪ್ಪ ಕಳಸೂರ, ಯಲ್ಲಪ್ಪ ಹೊಸಮನಿ, ಬಸವರಾಜ ಅಂಗಡಿ, ಅಶೋಕ ದೊಡ್ಡಮಲ್ಲಪ್ಪನವರ, ಸತೀಶ್ ಪಾಟೀಲ್ ಸೇರಿದಂತೆ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು1
- ಧಾರವಾಡ: ಎಲ್ಲ ಶಾಸಕರು ಸಚಿವರಾಗಲು ಅರ್ಹತೆ ಪಡೆದಿದ್ದಾರೆ. ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ. ಅದು ಹೊಸಬರಿರಲಿ, ಫಸ್ಟ್ ಟೈಮ್ ಶಾಸಕರಾದವರಿರಲಿ. ಅವರಿಗೆ ಸಚಿವರಾಗಬೇಕು ಎಂಬ ಆಸೆ ಇದೆ. ಡಿಕೆಶಿ ಅವರ ಹೇಳಿಕೆ ಕೂಡ ನಾನು ನೋಡಿದೆ. ಏನೇ ಮಾಡಿದರೂ ಒಂದು ಲಿಮಿಟ್ಸ್ ಹಾಗೂ ಪಾರ್ಟಿ ಚೌಕಟ್ಟಿನಲ್ಲೇ ಎಲ್ಲವನ್ನೂ ಮಾತನಾಡಬೇಕು ಎಂದಿದ್ದಾರೆ. ಪಾರ್ಟಿ ಚೌಕಟ್ಟು ಬಿಟ್ಟು ವಿಷಯಗಳು ಹೊರ ಹೋಗಬಾರದು ಎಂದು ಅವರು ಹೇಳಿದ್ದಾರೆ. ಹೈಕಮಾಂಡ್‌ಗೆ ನಮ್ಮನ್ನೂ ಸಚಿವರನ್ನಾಗಿ ಮಾಡಲಿ ಎಂದು ಶಾಸಕರು ಹೋಗಿದ್ದಾರೆ. ಕೇಳುವ ಅಧಿಕಾರ ಎಲ್ಲರಿಗೂ ಇದೆ. ಅದೇ ಕಾರಣಕ್ಕೆ ಶಾಸಕರು ಹೋಗಿದ್ದಾರೆ ಅದೇನು ತಪ್ಪಲ್ಲ ಎಂದು ತಿಳಿಸಿದರು.1
- ನಡೆಸಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಪ್ರಜಾಪ್ರಭುತ್ವದ ದಲ್ಲಿಪ್ರಶ್ನೆ ಕೇಳಿಕೊಂಡು ಪತ್ರ ಕೊಡಲು ಬಂದಿರುವ ಕೆಆರ್‌ಎಸ್ ಪಕ್ಷದ ಸೈನಿಕರು1
- Post by Onlinetv24x71
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- ಗುಳೇದಗುಡ್ಡ: ಪಟ್ಟಣದ ಶ್ರೀಕಾಡಸಿದ್ದೇಶ್ವರ ಮರಡಿಮಠದ ಮೌನಯೋಗಿ 10ನೇ ಶ್ರೀ ಕಾಡಸಿದ್ದೇಶ್ವರರ ಪುಣ್ಯಸ್ಮರಣೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಮರಡಿಮಠದಲ್ಲಿ ಜಂಗಮ ಸಮಾಜದ ವಟುಗಳಿಗೆ ಅಯ್ಯಾಚಾರ ಹಾಗೂ ಶಿವಧೀಕ್ಷೆ ನಡೆಯಿತು. ಕಾರ್ಯಕ್ರಮದಲ್ಲಿ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ರುದ್ರಮುನಿ ದೇವರು, ಚರಮೂರ್ತಿ ದೇವರು ನಿರುಪಾದಿ,ದೇವರು, ಶಿವಾನಂದ ದೇವರು ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಗಂಗಯ್ಯ ಪೂಜಾರಿ, ವಿ.ಎಸ್ ಹಿರೇಮಠ, ಸಿದ್ದಲಿಂಗಯ್ಯ ಬೂದಿಹಾಳಮಠ, ಚಂದ್ರಶೇಖರ ಜಂಗಮರ ಮತ್ತಿತರರು ಇದ್ದರು.1
- "ಸಂಗೊಂದಿ ಡಾಕ್ಟರ್. ಬಿ .ಆರ್. ಅಂಬೇಡ್ಕರ್ ಅವರ 135 ನೇ ಜಯಂತಿಯ ಆಚರಣೆ" ಭೀಮ ಬಲ ನ್ಯೂಸ್ 24×7 ಕನ್ನಡ ಸುದ್ದಿ: ಬಾಗಲಕೋಟೆ : ಏಪ್ರಿಲ್ 14 ಬಾಗಲಕೋಟೆ ಜಿಲ್ಲೆಯ ಸಂಗೊಂದಿ ಗ್ರಾಮದಲ್ಲಿ ನಡೆದ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಜೈ ಭೀಮ ಯುವ ಘರ್ಜನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ.ಆರ್. ಮಾದರ ಅವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆಯ ಸಂಘಟನೆಯ ಎಲ್ಲ ಪದಾಧಿಕಾರಿಗಳು ಭಾಗಿಯಾಗಿದ್ದರು ಹಾಗೂ ಜಿಲ್ಲಾ ಅಧ್ಯಕ್ಷ ಮಂಜುನಾಥ್ .ಆರ್ .ಮಾದರ, ಮಲ್ಲು ಬಡಿಗೇರ, ಮಾತನಾಡಿ ಸಂಗೊಂದಿ ಗ್ರಾಮದಲ್ಲಿ ಬಿ .ಆರ್ .ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ಸಂಗೊಂದಿ ಗ್ರಾಮದ ಗುರು ಹಿರಿಯರು ಹಾಗೂ ಮಕ್ಕಳು ಪುಷ್ಪ ನಮನ ಸಲ್ಲಿಸಿದರು.ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟವನ್ನು ಸ್ಮರಿಸಿದರು. ಜಾತಿ ವ್ಯವಸ್ಥೆಯ ವಿರುದ್ಧ ಅವರು ನಡೆದ ಹೋರಾಟ ಮತ್ತು ಸಮಾನತೆಯ ಸಂದೇಶವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು "ಶಿಕ್ಷಣ ಸಂಘಟನೆ ಮತ್ತು ಹೋರಾಟ"ಎಂಬ ಅವರ ತತ್ವಗಳು ಇಂದಿಗೂ ಯುವಕರಿಗೆ ದಾರಿದೀಪವಾಗಿದೆ ಎಂದು ಹೇಳಿದರು. ದಲಿತ ಮುಖಂಡರು ಮಂಜುನಾಥ .ಆರ್.ಮಾದರ ,ಮಲ್ಲು ಬಡಿಗೇರ, ಆನಂದ ಮೂಗನೂರು, ಹರೀಶ್ ಮಾದರ, ದಾಳಪ್ಪ ಮಾದರ, ದುರ್ಗಪ್ಪ ಕೆರೂರು, ಮಹಾಂತೇಶ್ ಮಾದರ, ಚಂದ್ರು ಮಾದರ,ಯಮನಪ್ಪ ಮಾದರ, ಲಕ್ಷ್ಮಣ್ ಚಲವಾದಿ, ಬೆನ್ನಪ್ಪ ಮಾದರ, ಬೋಜು ಲಮಾಣಿ, ಹಾಗೂ ಯಲ್ಲಪ್ಪ ಮಾದರ ಹಾಗೂ ಗಣ್ಯರು ಪುಷ್ಪ ನಮನ ಸಲ್ಲಿಸಿದರು.1
- ಧಾರವಾಡ: ಮನೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಎರಡೂ ಬೈಕ್‌ಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಧಾರವಾಡದ ಮೆಹಬೂಬ್‌ನಗರದಲ್ಲಿ ನಡೆದಿದೆ. ಸಾದಿಕ್ ಶೆರೆವಾಡ ಎಂಬುವವರ ಮನೆ ಎದುರು ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಮೊದಲು ಮನೆ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು ಆನಂತರ ಎರಡೂ ಬೈಕ್‌ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ತಡರಾತ್ರಿ ಏಳೆಂಟು ಜನರ ತಂಡದಿಂದ ಈ ಕೃತ್ಯ ನಡೆದಿದೆ. ಸದ್ಯ ಸ್ಥಳಕ್ಕೆ ಎಸಿಪಿ ಪ್ರಶಾಂತ ಸಿದ್ಧನಗೌಡರ, ಸಿಪಿಐ ಪ್ರಭು ಗಂಗೇನಳ್ಳಿ ಅವರು ಭೇಟಿ ನೀಡಿ ಸಿಸಿಟಿವಿ ದೃಶ್ಯ ಸೇರಿದಂತೆ ಇತರ ಸಾಕ್ಷ್ಯಗಳ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.1