logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹುಳಿಯಾರು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಡಗರದ 'ಚಾಮುಂಡೇಶ್ವರಿ ವರ್ಧಂತಿ' ಆಚರಣೆ ಹುಳಿಯಾರು: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವದ ಪ್ರಯುಕ್ತ, ಮಂಗಳವಾರ ಪಟ್ಟಣದ ಗ್ರಾಮ ದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಅತ್ಯಂತ ಶ್ರದ್ಧಾ-ಭಕ್ತಿಗಳಿಂದ ಜರುಗಿದವು. ದೇವಸ್ಥಾನದಲ್ಲಿ ಎಲ್ಲಾ ಧಾರ್ಮಿಕ ವಿಧಿವಿಧಾನಗಳು ಸಾಂಗವಾಗಿ ನೆರವೇರಿದವು. ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಭಕ್ತರ ದಂಡು ನೆರೆದಿತ್ತು. ಬೆಳಗಿನ ವಿಶೇಷ ಪೂಜೆಗಳು: ಮುಂಜಾನೆ ಅಮ್ಮನವರಿಗೆ ವಿಶೇಷ ಅಭಿಷೇಕ ಹಾಗೂ ಕುಂಕುಮಾರ್ಚನೆ ನೆರವೇರಿತು. ಪೂಜಾ ಸಮಯದಲ್ಲಿ 'ಲಲಿತಾ ಸಹಸ್ರನಾಮ' ಪಠಣ ನಡೆಯಿತು. ನಂತರ ನಡೆದ ಮಹಾಮಂಗಳಾರತಿಯಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಪೂಜಾ ಕೈಂಕರ್ಯಗಳ ನಂತರ ನೆರೆದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ವಿಶೇಷ ಅಲಂಕಾರ:ವರ್ಧಂತಿ ಮಹೋತ್ಸವದ ಅಂಗವಾಗಿ ಅಮ್ಮನವರಿಗೆ ವಿಶೇಷವಾಗಿ ಸಿಂಹವಾಹಿನಿ ಅಲಂಕಾರ ಮಾಡಲಾಗಿದ್ದಯ ಭಕ್ತರ ಮನಸೆಳೆಯುವಂತಿತ್ತು. ಸಂಜೆ ಸ್ಥಳೀಯ ಭಜನಾ ತಂಡದಿಂದ ಸುಮಧುರವಾದ ಭಜನಾ ಕಾರ್ಯಕ್ರಮ ಜರುಗಿತು. ತದನಂತರ ಅಮ್ಮನವರ 'ಮದಾಲ್‌ಸಿ ಉತ್ಸವ'ವು ವಿಜೃಂಭಣೆಯಿಂದ ನಡೆಯಿತು. ಉತ್ಸವದ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ಗಣ್ಯರ ಉಪಸ್ಥಿತಿ:ಈ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಸ್ಥಾನದ ಧರ್ಮದರ್ಶಿಗಳಾದ ಎಸ್. ಆರ್. ಎಸ್. ದಯಾನಂದ್, ಕನ್ವಿನಿಯರ್ ಪಟೇಲ್ ರಾಜಣ್ಣ, ಹಾಗೂ ದೇವಾಲಯದ ಗೌಡರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು, ದೇವರ ಕೃಪೆಗೆ ಪಾತ್ರರಾದರು. ದಿನಪೂರ್ತಿ ನಡೆದ ಈ ಎಲ್ಲಾ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

2 hrs ago
user_Huliyarkiran
Huliyarkiran
ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
2 hrs ago

ಹುಳಿಯಾರು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಡಗರದ 'ಚಾಮುಂಡೇಶ್ವರಿ ವರ್ಧಂತಿ' ಆಚರಣೆ ಹುಳಿಯಾರು: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವದ ಪ್ರಯುಕ್ತ, ಮಂಗಳವಾರ ಪಟ್ಟಣದ ಗ್ರಾಮ ದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಅತ್ಯಂತ ಶ್ರದ್ಧಾ-ಭಕ್ತಿಗಳಿಂದ ಜರುಗಿದವು. ದೇವಸ್ಥಾನದಲ್ಲಿ ಎಲ್ಲಾ ಧಾರ್ಮಿಕ ವಿಧಿವಿಧಾನಗಳು ಸಾಂಗವಾಗಿ ನೆರವೇರಿದವು. ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಭಕ್ತರ ದಂಡು ನೆರೆದಿತ್ತು. ಬೆಳಗಿನ ವಿಶೇಷ ಪೂಜೆಗಳು: ಮುಂಜಾನೆ ಅಮ್ಮನವರಿಗೆ ವಿಶೇಷ ಅಭಿಷೇಕ ಹಾಗೂ ಕುಂಕುಮಾರ್ಚನೆ ನೆರವೇರಿತು. ಪೂಜಾ ಸಮಯದಲ್ಲಿ 'ಲಲಿತಾ ಸಹಸ್ರನಾಮ' ಪಠಣ ನಡೆಯಿತು. ನಂತರ ನಡೆದ ಮಹಾಮಂಗಳಾರತಿಯಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಪೂಜಾ ಕೈಂಕರ್ಯಗಳ ನಂತರ ನೆರೆದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ವಿಶೇಷ ಅಲಂಕಾರ:ವರ್ಧಂತಿ ಮಹೋತ್ಸವದ ಅಂಗವಾಗಿ ಅಮ್ಮನವರಿಗೆ ವಿಶೇಷವಾಗಿ ಸಿಂಹವಾಹಿನಿ ಅಲಂಕಾರ ಮಾಡಲಾಗಿದ್ದಯ ಭಕ್ತರ ಮನಸೆಳೆಯುವಂತಿತ್ತು. ಸಂಜೆ ಸ್ಥಳೀಯ ಭಜನಾ ತಂಡದಿಂದ ಸುಮಧುರವಾದ ಭಜನಾ ಕಾರ್ಯಕ್ರಮ ಜರುಗಿತು. ತದನಂತರ ಅಮ್ಮನವರ 'ಮದಾಲ್‌ಸಿ ಉತ್ಸವ'ವು ವಿಜೃಂಭಣೆಯಿಂದ ನಡೆಯಿತು. ಉತ್ಸವದ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ಗಣ್ಯರ ಉಪಸ್ಥಿತಿ:ಈ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಸ್ಥಾನದ ಧರ್ಮದರ್ಶಿಗಳಾದ ಎಸ್. ಆರ್. ಎಸ್. ದಯಾನಂದ್, ಕನ್ವಿನಿಯರ್ ಪಟೇಲ್ ರಾಜಣ್ಣ, ಹಾಗೂ ದೇವಾಲಯದ ಗೌಡರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು, ದೇವರ ಕೃಪೆಗೆ ಪಾತ್ರರಾದರು. ದಿನಪೂರ್ತಿ ನಡೆದ ಈ ಎಲ್ಲಾ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

More news from ಕರ್ನಾಟಕ and nearby areas
  • ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದ ಆರನೇ ದಿನದ ರಾತ್ರಿ ಹೋರಾಟಗಾರರು ಭಜನೆಯಲ್ಲಿ ತಲ್ಲಿನರಾಗಿರುವುದು
    1
    ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದ ಆರನೇ ದಿನದ ರಾತ್ರಿ ಹೋರಾಟಗಾರರು ಭಜನೆಯಲ್ಲಿ ತಲ್ಲಿನರಾಗಿರುವುದು
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    1 hr ago
  • ತಾಲ್ಲೂಕಿನ  ಹೇಮಾವತಿ ನಾಲೆಗಳಲ್ಲಿ ನೀರು ಹರಿಸಲು ಒತ್ತಾಯಿಸಿ ಎನ್.ಡಿ.ಎ ಮೈತ್ರಿಕೂಟದ ಬೃಹತ್ ಪ್ರತಿಭಟನೆ  ತುರುವೇಕೆರೆ, ಆಗಸ್ಟ್ 4: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ಈ ವರ್ಷ ತೀವ್ರ ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಕ್ಷೇತ್ರದಲ್ಲಿ ಕೇವಲ ಶೇಕಡಾ 30ರಷ್ಟು ಮಾತ್ರ ಮಳೆಯಾಗಿದ್ದು, ರೈತರು ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬೋರ್‌ವೆಲ್‌ಗಳು ಒಣಗಿ ಹೋಗಿದ್ದು, ಅಡಿಕೆ ಹಾಗೂ ತೆಂಗಿನ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಬೆಳೆಯಲು ಸಹ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಹೇಮಾವತಿ ನಾಲೆಯಿಂದ ನೀರನ್ನು ಹರಿಸಿ ಕ್ಷೇತ್ರದ ಕೆರೆಗಳನ್ನು ತುಂಬಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಜೆ.ಡಿ.ಎಸ್.–ಬಿಜೆಪಿ ಎನ್.ಡಿ.ಎ ಮೈತ್ರಿಕೂಟವು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪನವರು ಕ್ಷೇತ್ರದಲ್ಲಿ ಕೇವಲ ಶೇಕಡಾ 30ರಷ್ಟು ಮಾತ್ರ ಮಳೆಯಾಗಿದ್ದು, ಯಾವುದೇ ರೈತರು ಬಿತ್ತನೆ ಮಾಡಿಲ್ಲ ಎಂದು ತಿಳಿಸಿದರು. ತುರುವೇಕೆರೆಯು ಬರಗಾಲ ಪೀಡಿತ ಪ್ರದೇಶವಾಗಿದೆ. ಕ್ಷೇತ್ರದ ಅನೇಕ ರೈತರ ಬೋರ್‌ವೆಲ್‌ಗಳು ಒಣಗಿ ಹೋಗಿದ್ದು, ಅಡಿಕೆ ಹಾಗೂ ತೆಂಗಿನ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಬೆಳೆಯಲು ಸಹ ನೀರಿಲ್ಲದಂತಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಒಳಪಟ್ಟಿದ್ದಾರೆ ಎಂದರು.ಟಿ.ಬಿ.ಸಿ. ಚಾನೆಲ್‌ಗೆ ಲಿಂಕ್ ಕೆನಾಲ್ ಕಾಮಗಾರಿಯನ್ನು ಅನುಷ್ಠಾನಕ್ಕೆ ಹೊರಟಿರುವುದು ಖಂಡನೀಯ ಎಂದು ಹೇಳಿದ ಅವರು, ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಕೈಗೊಳ್ಳಬಾರದು ಎಂದು ಒತ್ತಾಯಿಸಿದರು. ಸರ್ಕಾರ ತಕ್ಷಣ ಬರಗಾಲ ಎಂದು ಘೋಷಣೆ ಮಾಡಬೇಕು. ತಾಲೂಕಿನ ರೈತರು ಅಡಿಕೆ ಹಾಗೂ ತೆಂಗನ್ನು ನೆಚ್ಚಿಕೊಂಡಿದ್ದಾರೆ. ಕ್ಷೇತ್ರದಲ್ಲಿರುವ ಕೆರೆಗಳನ್ನು ಕೂಡಲೇ ತುಂಬಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಲಿಂಕ್ ಕೆನಾಲ್ ಯೋಜನೆಯನ್ನು ಹಿಂದೆ ಯಡಿಯೂರಪ್ಪನವರು ಕ್ಯಾಬಿನೆಟ್‌ನಲ್ಲಿ ರದ್ದು ಮಾಡಿದ್ದರು. ಕುಣಿಗಲ್‌ಗೆ ನಾಲೆಯನ್ನು ಅಗಲೀಕರಣ ಮಾಡಿ ನೀರು ಹರಿಸುವ ಬದಲು, ಅದನ್ನು ಬಿಟ್ಟು ರಾಮನಗರಕ್ಕೆ ನೀರನ್ನು ಹರಿಸಲು ಲಿಂಕ್ ಯೋಜನೆಯನ್ನು ಕೈಗೆತ್ತಿಕೊಂಡಿದ್ದೀರಿ. ಈ ಯೋಜನೆಯನ್ನು ನಾವು ಮಾಡಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಿಕಟಪೂರ್ವ ಶಾಸಕ ಮಸಾಲ ಜೈರಾಮ್ ಮಾತನಾಡಿ, ಕ್ಷೇತ್ರದ ಕೆರೆ, ಬಾವಿ, ಕಟ್ಟೆಗಳೆಲ್ಲವೂ ಬರಿದಾಗಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೂ ಸಹ ತೊಂದರೆಯಾಗಿದೆ ಎಂದರು. ಈ ಸರ್ಕಾರ ರೈತರಿಗೆ ಆತ್ಮಹತ್ಯೆಯ ಭಾಗ್ಯವನ್ನು ನೀಡಿದೆ ಎಂದು ಟೀಕಿಸಿದರು. ನಮ್ಮ ಸರ್ಕಾರದಲ್ಲಿ ಗೋಶಾಲೆಗಳನ್ನು ತೆರೆದಿದ್ದೆವು, ಅದನ್ನು ಈ ಸರ್ಕಾರ ಮುಚ್ಚಿದೆ. ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಬರಗಾಲ ಬಂದಿರುವುದರಿಂದ ಕೂಡಲೇ ಗೋಶಾಲೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದರು.ಹೇಮಾವತಿ ಡ್ಯಾಂನಲ್ಲಿ ಈಗಾಗಲೇ 25 ಟಿ.ಎಂ.ಸಿ. ನೀರು ಕ್ರೂಢೀಕರಣವಾಗಿದೆ. ಕೊನೆಪಕ್ಷ ಕ್ಷೇತ್ರದ ಕೆರೆಗಳಿಗೆ ನೀರು ಬಿಡಲು ಸರ್ಕಾರ ಕ್ರಮ ಕೈಗೊಳ್ಳದೇ ಇರುವುದರಿಂದ, ದಿನಾಂಕ 10-8-2026ರೇ ಸೋಮವಾರ ಬೆಳಿಗ್ಗೆ 11.30ಕ್ಕೆ ಹೇಮಾವತಿ ಸೂಪರಿಂಟೆಂಡಿಂಗ್ ಇಂಜಿನಿಯರ್ ಕಛೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅಹೋರಾತ್ರಿ ಧರಣಿಯನ್ನು ಎನ್.ಡಿ.ಎ ಮೈತ್ರಿಕೂಟದಿಂದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪಾದಯಾತ್ರೆಯನ್ನು ಮಾಡಿಯಾದರೂ ನೀರನ್ನು ಬಿಡಿಸಿಕೊಳ್ಳುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ರೈತರು ಪಕ್ಷಾತೀತವಾಗಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು. ಮಾಜಿ ಶಾಸಕ ಎಂ.ಡಿ. ಲಕ್ಷ್ಮಿನಾರಾಯಣ್ ಮಾತನಾಡಿ, ಬರಗಾಲದಂತಹ ಕಷ್ಟದ ಸಂದರ್ಭದಲ್ಲಿ ಈ ಕಾಂಗ್ರೆಸ್ ಸರ್ಕಾರ ರೈತರ ತೋಟಗಳಿಗೆ ಸಮರ್ಪಕವಾಗಿ ತ್ರಿಫೇಸ್ ವಿದ್ಯುತ್ ಅನ್ನು ನೀಡುತ್ತಿಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ಹೇಮಾವತಿ ಡ್ಯಾಂನಿಂದ ನಮ್ಮ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಬೇಕೆಂದು ಒತ್ತಾಯಿಸುತ್ತೇವೆ. ಆದ್ದರಿಂದ ಈ ಕ್ಷೇತ್ರದ ಸಮಸ್ತ ರೈತ ಬಾಂಧವರು ಈ ಬೃಹತ್ ಪ್ರತಿಭಟನೆಗೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಪರವಾದ ಹೋರಾಟಕ್ಕೆ ಶಕ್ತಿ ತುಂಬಿಸಬೇಕಾಗಿ ಮನವಿ ಮಾಡಿದರು. ತಾಲೂಕಿನ ಎನ್.ಡಿ.ಎ ಮೈತ್ರಿಕೂಟದ ಸಮಸ್ತ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜಿ.ವಿ. ಪ್ರಕಾಶ್, ಜೆ.ಡಿ.ಎಸ್ ತಾಲೂಕು ಅಧ್ಯಕ್ಷ ದೊಡ್ಡೇಗೌಡ, ಹೆಡಗಿಹಳ್ಳಿ ವಿಶ್ವನಾಥ್, ವೆಂಕಟಾಪುರ ಯೋಗೀಶ್, ಎನ್.ಆರ್ ಸುರೇಶ್, ಗುಂಡ ಸುರೇಶ್, ಚಿದಾನಂದ, ಸಂತೋಷ್ ಡಿ, ಕೊಂಡಜ್ಜಿ ವಿಶ್ವನಾಥ್, ಹರಿಕಾರನಹಳ್ಳಿ ಪ್ರಸಾದ್, ಸಿದ್ದಪ್ಪಾಜಿ, ಮುತ್ತಣ್ಣ, ಮುನಿಯೂರು ರಂಗಸ್ವಾಮಿ, ಗೊಟ್ಟಿಕೆರೆ ಕಾಂತರಾಜು ಸೇರಿದಂತೆ ಎನ್.ಡಿ.ಎ ಮೈತ್ರಿಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    4
    ತಾಲ್ಲೂಕಿನ  ಹೇಮಾವತಿ ನಾಲೆಗಳಲ್ಲಿ ನೀರು ಹರಿಸಲು ಒತ್ತಾಯಿಸಿ ಎನ್.ಡಿ.ಎ ಮೈತ್ರಿಕೂಟದ ಬೃಹತ್ ಪ್ರತಿಭಟನೆ 
ತುರುವೇಕೆರೆ, ಆಗಸ್ಟ್ 4: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ಈ ವರ್ಷ ತೀವ್ರ ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಕ್ಷೇತ್ರದಲ್ಲಿ ಕೇವಲ ಶೇಕಡಾ 30ರಷ್ಟು ಮಾತ್ರ ಮಳೆಯಾಗಿದ್ದು, ರೈತರು ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬೋರ್‌ವೆಲ್‌ಗಳು ಒಣಗಿ ಹೋಗಿದ್ದು, ಅಡಿಕೆ ಹಾಗೂ ತೆಂಗಿನ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಬೆಳೆಯಲು ಸಹ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಹೇಮಾವತಿ ನಾಲೆಯಿಂದ ನೀರನ್ನು ಹರಿಸಿ ಕ್ಷೇತ್ರದ ಕೆರೆಗಳನ್ನು ತುಂಬಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಜೆ.ಡಿ.ಎಸ್.–ಬಿಜೆಪಿ ಎನ್.ಡಿ.ಎ ಮೈತ್ರಿಕೂಟವು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪನವರು ಕ್ಷೇತ್ರದಲ್ಲಿ ಕೇವಲ ಶೇಕಡಾ 30ರಷ್ಟು ಮಾತ್ರ ಮಳೆಯಾಗಿದ್ದು, ಯಾವುದೇ ರೈತರು ಬಿತ್ತನೆ ಮಾಡಿಲ್ಲ ಎಂದು ತಿಳಿಸಿದರು. ತುರುವೇಕೆರೆಯು ಬರಗಾಲ ಪೀಡಿತ ಪ್ರದೇಶವಾಗಿದೆ. ಕ್ಷೇತ್ರದ ಅನೇಕ ರೈತರ ಬೋರ್‌ವೆಲ್‌ಗಳು ಒಣಗಿ ಹೋಗಿದ್ದು, ಅಡಿಕೆ ಹಾಗೂ ತೆಂಗಿನ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಬೆಳೆಯಲು ಸಹ ನೀರಿಲ್ಲದಂತಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಒಳಪಟ್ಟಿದ್ದಾರೆ ಎಂದರು.ಟಿ.ಬಿ.ಸಿ. ಚಾನೆಲ್‌ಗೆ ಲಿಂಕ್ ಕೆನಾಲ್ ಕಾಮಗಾರಿಯನ್ನು ಅನುಷ್ಠಾನಕ್ಕೆ ಹೊರಟಿರುವುದು ಖಂಡನೀಯ ಎಂದು ಹೇಳಿದ ಅವರು, ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಕೈಗೊಳ್ಳಬಾರದು ಎಂದು ಒತ್ತಾಯಿಸಿದರು. ಸರ್ಕಾರ ತಕ್ಷಣ ಬರಗಾಲ ಎಂದು ಘೋಷಣೆ ಮಾಡಬೇಕು. ತಾಲೂಕಿನ ರೈತರು ಅಡಿಕೆ ಹಾಗೂ ತೆಂಗನ್ನು ನೆಚ್ಚಿಕೊಂಡಿದ್ದಾರೆ. ಕ್ಷೇತ್ರದಲ್ಲಿರುವ ಕೆರೆಗಳನ್ನು ಕೂಡಲೇ ತುಂಬಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಲಿಂಕ್ ಕೆನಾಲ್ ಯೋಜನೆಯನ್ನು ಹಿಂದೆ ಯಡಿಯೂರಪ್ಪನವರು ಕ್ಯಾಬಿನೆಟ್‌ನಲ್ಲಿ ರದ್ದು ಮಾಡಿದ್ದರು. ಕುಣಿಗಲ್‌ಗೆ ನಾಲೆಯನ್ನು ಅಗಲೀಕರಣ ಮಾಡಿ ನೀರು ಹರಿಸುವ ಬದಲು, ಅದನ್ನು ಬಿಟ್ಟು ರಾಮನಗರಕ್ಕೆ ನೀರನ್ನು ಹರಿಸಲು ಲಿಂಕ್ ಯೋಜನೆಯನ್ನು ಕೈಗೆತ್ತಿಕೊಂಡಿದ್ದೀರಿ. ಈ ಯೋಜನೆಯನ್ನು ನಾವು ಮಾಡಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿಕಟಪೂರ್ವ ಶಾಸಕ ಮಸಾಲ ಜೈರಾಮ್ ಮಾತನಾಡಿ, ಕ್ಷೇತ್ರದ ಕೆರೆ, ಬಾವಿ, ಕಟ್ಟೆಗಳೆಲ್ಲವೂ ಬರಿದಾಗಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೂ ಸಹ ತೊಂದರೆಯಾಗಿದೆ ಎಂದರು. ಈ ಸರ್ಕಾರ ರೈತರಿಗೆ ಆತ್ಮಹತ್ಯೆಯ ಭಾಗ್ಯವನ್ನು ನೀಡಿದೆ ಎಂದು ಟೀಕಿಸಿದರು. ನಮ್ಮ ಸರ್ಕಾರದಲ್ಲಿ ಗೋಶಾಲೆಗಳನ್ನು ತೆರೆದಿದ್ದೆವು, ಅದನ್ನು ಈ ಸರ್ಕಾರ ಮುಚ್ಚಿದೆ. ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಬರಗಾಲ ಬಂದಿರುವುದರಿಂದ ಕೂಡಲೇ ಗೋಶಾಲೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದರು.ಹೇಮಾವತಿ ಡ್ಯಾಂನಲ್ಲಿ ಈಗಾಗಲೇ 25 ಟಿ.ಎಂ.ಸಿ. ನೀರು ಕ್ರೂಢೀಕರಣವಾಗಿದೆ. ಕೊನೆಪಕ್ಷ ಕ್ಷೇತ್ರದ ಕೆರೆಗಳಿಗೆ ನೀರು ಬಿಡಲು ಸರ್ಕಾರ ಕ್ರಮ ಕೈಗೊಳ್ಳದೇ ಇರುವುದರಿಂದ, ದಿನಾಂಕ 10-8-2026ರೇ ಸೋಮವಾರ ಬೆಳಿಗ್ಗೆ 11.30ಕ್ಕೆ ಹೇಮಾವತಿ ಸೂಪರಿಂಟೆಂಡಿಂಗ್ ಇಂಜಿನಿಯರ್ ಕಛೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅಹೋರಾತ್ರಿ ಧರಣಿಯನ್ನು ಎನ್.ಡಿ.ಎ ಮೈತ್ರಿಕೂಟದಿಂದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪಾದಯಾತ್ರೆಯನ್ನು ಮಾಡಿಯಾದರೂ ನೀರನ್ನು ಬಿಡಿಸಿಕೊಳ್ಳುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ರೈತರು ಪಕ್ಷಾತೀತವಾಗಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.
ಮಾಜಿ ಶಾಸಕ ಎಂ.ಡಿ. ಲಕ್ಷ್ಮಿನಾರಾಯಣ್ ಮಾತನಾಡಿ, ಬರಗಾಲದಂತಹ ಕಷ್ಟದ ಸಂದರ್ಭದಲ್ಲಿ ಈ ಕಾಂಗ್ರೆಸ್ ಸರ್ಕಾರ ರೈತರ ತೋಟಗಳಿಗೆ ಸಮರ್ಪಕವಾಗಿ ತ್ರಿಫೇಸ್ ವಿದ್ಯುತ್ ಅನ್ನು ನೀಡುತ್ತಿಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ಹೇಮಾವತಿ ಡ್ಯಾಂನಿಂದ ನಮ್ಮ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಬೇಕೆಂದು ಒತ್ತಾಯಿಸುತ್ತೇವೆ. ಆದ್ದರಿಂದ ಈ ಕ್ಷೇತ್ರದ ಸಮಸ್ತ ರೈತ ಬಾಂಧವರು ಈ ಬೃಹತ್ ಪ್ರತಿಭಟನೆಗೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಪರವಾದ ಹೋರಾಟಕ್ಕೆ ಶಕ್ತಿ ತುಂಬಿಸಬೇಕಾಗಿ ಮನವಿ ಮಾಡಿದರು. ತಾಲೂಕಿನ ಎನ್.ಡಿ.ಎ ಮೈತ್ರಿಕೂಟದ ಸಮಸ್ತ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜಿ.ವಿ. ಪ್ರಕಾಶ್, ಜೆ.ಡಿ.ಎಸ್ ತಾಲೂಕು ಅಧ್ಯಕ್ಷ ದೊಡ್ಡೇಗೌಡ, ಹೆಡಗಿಹಳ್ಳಿ ವಿಶ್ವನಾಥ್, ವೆಂಕಟಾಪುರ ಯೋಗೀಶ್, ಎನ್.ಆರ್ ಸುರೇಶ್, ಗುಂಡ ಸುರೇಶ್, ಚಿದಾನಂದ, ಸಂತೋಷ್ ಡಿ, ಕೊಂಡಜ್ಜಿ ವಿಶ್ವನಾಥ್, ಹರಿಕಾರನಹಳ್ಳಿ ಪ್ರಸಾದ್, ಸಿದ್ದಪ್ಪಾಜಿ, ಮುತ್ತಣ್ಣ, ಮುನಿಯೂರು ರಂಗಸ್ವಾಮಿ, ಗೊಟ್ಟಿಕೆರೆ ಕಾಂತರಾಜು ಸೇರಿದಂತೆ ಎನ್.ಡಿ.ಎ ಮೈತ್ರಿಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    20 min ago
  • ಬರಗಾಲ ಪರಿಹಾರ ವೀಕ್ಷಿಸಿದ ಬಿಜೆಪಿ ಅಧ್ಯಕ್ಷರು ಜೊತೆಯಲ್ಲಿ ಯಾರ್ ಯಾರಿದ್ರು ಗೊತ್ತಾ *ಕೊರಟಗೆರೆ ಬ್ರೇಕಿಂಗ್ ನ್ಯೂಸ್:-* *ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ* *"ದೇಶದ ಬೆನ್ನೆಲುಬು ರೈತ - ರಾಜ್ಯ ಸರ್ಕಾರ ಕೂಡಲೇ 10,000 ಕೋಟಿ ಪರಿಹಾರ ನೀಡಲಿ"* ರಾಜ್ಯದಲ್ಲಿನ ಬರ ಪರಿಸ್ಥಿತಿ ಪರಿಶೀಲನೆ ಅಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ರೈತರ ಸಂಕಷ್ಟವನ್ನು ಖುದ್ದು ಆಲಿಸಿದರು. ಇರಕಸಂದ್ರ ಕಾಲೋನಿ, ತಣ್ಣೇನಹಳ್ಳಿ, ಜೋನಿಗರಹಳ್ಳಿ, ಎಲೆರಾಂಪುರದ ಶ್ರೀ ಕುಂಚಿಟಿಗರ ಮಹಾ ಸಂಸ್ಥಾನ ಮಠ ಸೇರಿದಂತೆ ವಿವಿಧ ಭಾಗಗಳಿಗೆ ತೆರಳಿದ ಅವರು ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆ ಹಾನಿ ಬಗ್ಗೆ ಮಾಹಿತಿ ಪಡೆದುಕೊಂಡರು. ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ,"ದೇಶದ ಬೆನ್ನೆಲುಬು ರೈತ. ಈಗ ರಾಜಕೀಯ ಬದಿಗಿಟ್ಟು ರಾಜ್ಯ ಸರ್ಕಾರ ರೈತರ ಸಂಕಷ್ಟಕ್ಕೆ ಕೂಡಲೇ ಸ್ಪಂದಿಸಬೇಕು. ಕೇವಲ ಕೇಂದ್ರಕ್ಕೆ ಪತ್ರ ಬರೆದು ಕೈಕಟ್ಟಿ ಕುಳಿತುಕೊಳ್ಳದೆ, ಸಂಕಷ್ಟದಲ್ಲಿರುವ ನಮ್ಮ ರೈತರ ನೆರವಿಗೆ ರಾಜ್ಯ ಸರ್ಕಾರ ತಕ್ಷಣ *10,000 ಕೋಟಿ ರೂ. ಪರಿಹಾರ* ಬಿಡುಗಡೆ ಮಾಡಬೇಕು" ಎಂದು ಒತ್ತಾಯಿಸಿದರು. "ರೈತರ ಅನುಕೂಲಕ್ಕಾಗಿ ಪ್ರತಿದಿನ *7 ಗಂಟೆಗಳ ಕಾಲ ನಿರಂತರ 3-ಫೇಸ್ ವಿದ್ಯುತ್* ನೀಡುವುದೂ ಸೇರಿದಂತೆ ಅನ್ನದಾತರ ನೆರವಿಗೆ ತಕ್ಷಣ ಧಾವಿಸಬೇಕು. ತಮ್ಮ ರಾಜಕೀಯ ಮೇಲಾಟಗಳನ್ನು ಬದಿಗಿಟ್ಟು ಅನ್ನದಾತರ ಹಿತ ಕಾಯುವುದೇ ರಾಜ್ಯ ಸರ್ಕಾರದ ಮೊದಲ ಆದ್ಯತೆಯಾಗಬೇಕು" ಎಂದು ಅವರು ಹೇಳಿದರು. "ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈಗಲೂ ಸ್ಪಂದಿಸದಿದ್ದರೆ ರೈತರ ಪರವಾಗಿ ನಮ್ಮ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ" ಎಂದು ವಿಜಯೇಂದ್ರ ಎಚ್ಚರಿಸಿದರು. ಈ ವೇಳೆ ಶಾಸಕರಾದ ಶ್ರೀ ಸುರೇಶ್ ಗೌಡ, ಶ್ರೀ ಜ್ಯೋತಿ ಗಣೇಶ್, ಶ್ರೀ ಧೀರಜ್ ಮುನಿರಾಜು, ವಿಧಾನ ಪರಿಷತ್ ಸದಸ್ಯ ಹಾಗೂ ಮಧುಗಿರಿ ಜಿಲ್ಲಾ ಅಧ್ಯಕ್ಷ ಶ್ರೀ ಚಿದಾನಂದ ಗೌಡ, ಕೊರಟಗೆರೆ ಬಿಜೆಪಿ ಮುಖಂಡ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ.ಎಚ್. ಅನಿಲ್ ಕುಮಾರ್, ಮಂಡಲ ಅಧ್ಯಕ್ಷ ರುದ್ರೇಶ್, ಜಿಲ್ಲಾ ಪದಾಧಿಕಾರಿಗಳಾದ ದಯಾಮಣಿ, ದರ್ಶನ್, ಶ್ರೀಧರ್, ಶಿವಕುಮಾರ ಸ್ವಾಮಿ, ಅರುಣ್, ಯುವ ಮೋರ್ಚಾ ಅಧ್ಯಕ್ಷ ಚೇತನ್ ದಾಸರಹಳ್ಳಿ, ಓಬಿಸಿ ಮೋರ್ಚಾ, ರೈತ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಸೇರಿದಂತೆ ಹಲವಾರು ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.
    1
    ಬರಗಾಲ ಪರಿಹಾರ ವೀಕ್ಷಿಸಿದ ಬಿಜೆಪಿ ಅಧ್ಯಕ್ಷರು  ಜೊತೆಯಲ್ಲಿ ಯಾರ್ ಯಾರಿದ್ರು ಗೊತ್ತಾ 
*ಕೊರಟಗೆರೆ ಬ್ರೇಕಿಂಗ್ ನ್ಯೂಸ್:-* 
*ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ*  
*"ದೇಶದ ಬೆನ್ನೆಲುಬು ರೈತ - ರಾಜ್ಯ ಸರ್ಕಾರ ಕೂಡಲೇ 10,000 ಕೋಟಿ ಪರಿಹಾರ ನೀಡಲಿ"*
ರಾಜ್ಯದಲ್ಲಿನ ಬರ ಪರಿಸ್ಥಿತಿ ಪರಿಶೀಲನೆ ಅಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ರೈತರ ಸಂಕಷ್ಟವನ್ನು ಖುದ್ದು ಆಲಿಸಿದರು.
ಇರಕಸಂದ್ರ ಕಾಲೋನಿ, ತಣ್ಣೇನಹಳ್ಳಿ, ಜೋನಿಗರಹಳ್ಳಿ, ಎಲೆರಾಂಪುರದ ಶ್ರೀ ಕುಂಚಿಟಿಗರ ಮಹಾ ಸಂಸ್ಥಾನ ಮಠ ಸೇರಿದಂತೆ ವಿವಿಧ ಭಾಗಗಳಿಗೆ ತೆರಳಿದ ಅವರು ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆ ಹಾನಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ,"ದೇಶದ ಬೆನ್ನೆಲುಬು ರೈತ. ಈಗ ರಾಜಕೀಯ ಬದಿಗಿಟ್ಟು ರಾಜ್ಯ ಸರ್ಕಾರ ರೈತರ ಸಂಕಷ್ಟಕ್ಕೆ ಕೂಡಲೇ ಸ್ಪಂದಿಸಬೇಕು. ಕೇವಲ ಕೇಂದ್ರಕ್ಕೆ ಪತ್ರ ಬರೆದು ಕೈಕಟ್ಟಿ ಕುಳಿತುಕೊಳ್ಳದೆ, ಸಂಕಷ್ಟದಲ್ಲಿರುವ ನಮ್ಮ ರೈತರ ನೆರವಿಗೆ ರಾಜ್ಯ ಸರ್ಕಾರ ತಕ್ಷಣ *10,000 ಕೋಟಿ ರೂ. ಪರಿಹಾರ* ಬಿಡುಗಡೆ ಮಾಡಬೇಕು" ಎಂದು ಒತ್ತಾಯಿಸಿದರು.
"ರೈತರ ಅನುಕೂಲಕ್ಕಾಗಿ ಪ್ರತಿದಿನ *7 ಗಂಟೆಗಳ ಕಾಲ ನಿರಂತರ 3-ಫೇಸ್ ವಿದ್ಯುತ್* ನೀಡುವುದೂ ಸೇರಿದಂತೆ ಅನ್ನದಾತರ ನೆರವಿಗೆ ತಕ್ಷಣ ಧಾವಿಸಬೇಕು. ತಮ್ಮ ರಾಜಕೀಯ ಮೇಲಾಟಗಳನ್ನು ಬದಿಗಿಟ್ಟು ಅನ್ನದಾತರ ಹಿತ ಕಾಯುವುದೇ ರಾಜ್ಯ ಸರ್ಕಾರದ ಮೊದಲ ಆದ್ಯತೆಯಾಗಬೇಕು" ಎಂದು ಅವರು ಹೇಳಿದರು.
"ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈಗಲೂ ಸ್ಪಂದಿಸದಿದ್ದರೆ ರೈತರ ಪರವಾಗಿ ನಮ್ಮ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ" ಎಂದು ವಿಜಯೇಂದ್ರ ಎಚ್ಚರಿಸಿದರು.
ಈ ವೇಳೆ 
ಶಾಸಕರಾದ ಶ್ರೀ ಸುರೇಶ್ ಗೌಡ, ಶ್ರೀ ಜ್ಯೋತಿ ಗಣೇಶ್, ಶ್ರೀ ಧೀರಜ್ ಮುನಿರಾಜು, ವಿಧಾನ ಪರಿಷತ್ ಸದಸ್ಯ ಹಾಗೂ ಮಧುಗಿರಿ ಜಿಲ್ಲಾ ಅಧ್ಯಕ್ಷ ಶ್ರೀ ಚಿದಾನಂದ ಗೌಡ, ಕೊರಟಗೆರೆ ಬಿಜೆಪಿ ಮುಖಂಡ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ.ಎಚ್. ಅನಿಲ್ ಕುಮಾರ್, ಮಂಡಲ ಅಧ್ಯಕ್ಷ ರುದ್ರೇಶ್, ಜಿಲ್ಲಾ ಪದಾಧಿಕಾರಿಗಳಾದ ದಯಾಮಣಿ, ದರ್ಶನ್, ಶ್ರೀಧರ್, ಶಿವಕುಮಾರ ಸ್ವಾಮಿ, ಅರುಣ್, ಯುವ ಮೋರ್ಚಾ ಅಧ್ಯಕ್ಷ ಚೇತನ್ ದಾಸರಹಳ್ಳಿ, ಓಬಿಸಿ ಮೋರ್ಚಾ, ರೈತ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಸೇರಿದಂತೆ ಹಲವಾರು ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    2 hrs ago
  • ಲಿಂಕ್ ಕೆನಾಲ್ ಕಾಮಗಾರಿ ಬಿಡುವ ಪ್ರಶ್ನೆಯೇ ಇಲ್ಲ ಮಾಡಿಯೇ ತೀರುತ್ತೇವೆ ನೂತನ ಸಚಿವ ಹೆಚ್ ಸಿ ಬಾಲಕೃಷ್ಣ ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ಜೋಡಿ ಹೊಸಳ್ಳಿ ಗ್ರಾಮದ ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಹೆಚ್ ಸಿ ಬಾಲಕೃಷ್ಣ , ಶಾಸಕ ಡಾಕ್ಟರ್ ಎಚ್ ಡಿ ರಂಗನಾಥ್, ಯಾವುದೆ ಖಾತೆ ಕೊಟ್ಟರು ನಿಭಾಯಿಸುವೆ ಎಂದು ನೂತನ ಸಚಿವ ಹೆಚ್.ಸಿ ಬಾಲಕೃಷ್ಣ ತಿಳಿಸಿದರು. ಲಿಂಕ್ ಕೆನಾಲ್ ಯೋಜನೆಯ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
    1
    ಲಿಂಕ್ ಕೆನಾಲ್  ಕಾಮಗಾರಿ ಬಿಡುವ ಪ್ರಶ್ನೆಯೇ ಇಲ್ಲ ಮಾಡಿಯೇ ತೀರುತ್ತೇವೆ ನೂತನ ಸಚಿವ ಹೆಚ್ ಸಿ ಬಾಲಕೃಷ್ಣ 
ಕುಣಿಗಲ್ ತಾಲೂಕಿನ ಹುತ್ರಿದುರ್ಗ ಹೋಬಳಿಯ ಜೋಡಿ ಹೊಸಳ್ಳಿ ಗ್ರಾಮದ   ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಹೆಚ್ ಸಿ ಬಾಲಕೃಷ್ಣ , ಶಾಸಕ ಡಾಕ್ಟರ್  ಎಚ್ ಡಿ ರಂಗನಾಥ್,  ಯಾವುದೆ ಖಾತೆ ಕೊಟ್ಟರು ನಿಭಾಯಿಸುವೆ ಎಂದು ನೂತನ ಸಚಿವ ಹೆಚ್.ಸಿ ಬಾಲಕೃಷ್ಣ  ತಿಳಿಸಿದರು. ಲಿಂಕ್ ಕೆನಾಲ್ ಯೋಜನೆಯ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
    user_ಎಚ್ ಎಮ್ ಅಶೋಕ
    ಎಚ್ ಎಮ್ ಅಶೋಕ
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    1 hr ago
  • ಚಳ್ಳಕೆರೆ ನಗರದಲ್ಲಿ ‘ಹೋಳಿಗೆ ಅಮ್ಮ’ ಹಬ್ಬ ಶ್ರದ್ಧಾ–ಭಕ್ತಿಯಿಂದ ಆಚರಣೆ ನಗರದ ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ರೋಗ ರುಜೀನಗಳ ಹರಡದಿರಲಿ ಹಾಗೂ ಊರಿನ ಒಳಿತಿಗಾಗಿ ಪ್ರಾರ್ಥಿಸಿ ಆಷಾಢ ಮಾಸದ ಮಂಗಳವಾರ ಚಳ್ಳಕೆರೆ ನಗರದಲ್ಲಿ ‘ಹೋಳಿಗೆ ಅಮ್ಮ’ ಹಬ್ಬವನ್ನು ಭಕ್ತರು ಶ್ರದ್ಧಾ–ಭಕ್ತಿಯಿಂದ ಆಚರಿಸಿದರು.. ಯಾವುದೇ ಜಾತಿ ಭೇದವಿಲ್ಲದೆ ಹೋಳಿಗೆ ಅಮ್ಮನನ್ನು ಶತಮಾನಗಳಿಂದಲೂ ಬುಡಕಟ್ಟು ಸಂಪ್ರದಾಯ, ಸಂಸ್ಕೃತಿಯ ನೆಲದಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ ಭಾಗದಲ್ಲಿ ಅಷ್ಟೇ ಅಲ್ಲದೆ ನಗರದಲ್ಲೂ ಸಹ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಗುತ್ತದೆ. . ಪ್ರತಿಯೊಂದು ಹಬ್ಬ, ಆಚರಣೆಗೆ ಅದರದೇ ಆದ ನಂಬಿಕೆ ಇದೆ. ಸಂಪ್ರದಾಯ ಹಾಗೂ ಸಂಸ್ಕೃತಿಯ ನೆಲೆಯಿದೆ. ಅದರಲ್ಲಿ ಹೋಳಿಗೆ ಅಮ್ಮ ಹಬ್ಬ ಕೂಡ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ.‌ ಮಂಗಳವಾರ ಬೆಳಿಗ್ಗೆಯಿಂದಲೇ ನಗರದಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತು ಚಳ್ಳಕೆರೆ ನಗರದ ಅಂಬೇಡ್ಕರ್ ನಗರ ಗಾಂಧಿನಗರ ಸೋಮುಗುದ್ದು ರಸ್ತೆ ತ್ಯಾಗರಾಜನಗರ ಹಳೆ ಟೌನ್ ಹೌಸಿಂಗ್ ಬೋರ್ಡ.ಸೇರಿದಂತೆ ನಗರದಲ್ಲಿ ಹೋಳಿಗೆ ತಯಾರಿಸಿ ಅದನ್ನು ಅರಿಸಿಣ, ಕುಂಕುಮ, ಬಳೆ, ಬೇವಿನ ಸೊಪ್ಪು, ತೆಂಗಿನಕಾಯಿ ಹೋಳುಗಳನ್ನು ಮೊರದಲ್ಲಿ ಇಟ್ಟು ಮನೆಯಲ್ಲಿ ಪೂಜೆ ಸಲ್ಲಿಸಿದರು. ಬಳಿಕ ನಿಗದಿಪಡಿಸಿದ ಮಾರಮ್ಮನ ದೇವಸ್ಥಾನ ಎಲ್ಲಮ್ಮನ. ದೇವಸ್ಥಾನ. ಕಡಿಮೆ ಮಾರಮ್ಮನ ದೇವಸ್ಥಾನ . ಸುಂಕುದ್ ರಸ್ತೆಯ ಮಾರಮ್ಮನ ದೇವಸ್ಥಾನ ಗಳಲ್ಲಿ ಅವುಗಳನ್ನು ಇಟ್ಟು ಸಾಂಕ್ರಾಮಿಕ ರೋಗ ರಜಿನಾ ಬಾರದಂತೆ ಉತ್ತಮ ಮಳೆ ಬೆಳೆಯಾಗಲಿ ಚಿಕ್ಕ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಮಕ್ಕಳನ್ನು ಕಾಪಾಡು ತಾಯಿ ಎಂದು ನಮಿಸಿದರು. ಇನ್ನು ಎಲ್ಲರೂ ಪ್ರಸಾದವನ್ನು ತಾಯಿಗೆ ಅರ್ಪಿಸಿದ ನಂತರ ಒಂದು ಬಿದುರಿನ ಬುಟ್ಟಿಯಲ್ಲಿ ಹೋಳಿಗೆ ಮತ್ತೊಂದು ಬುಟ್ಟಿಯಲ್ಲಿ ಅನ್ನ ಸಾಂಬಾರು ಹಾಗೂ ತೆಂಗಿನಕಾಯಿ ಬಾಳೆಹಣ್ಣು ತುಂಬಿಕೊಂಡು ಊರ ಹೊರಗಿನ ಹಸಿರು ಮರದ ಕೆಳಗೆ ಇಟ್ಟುಮನೆಯಲ್ಲಿರುವ ಮಕ್ಕಳಿಗೆ ಅಮ್ಮ, ಧಡಾರ, ಸಿಡುಬು ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ, ದುಷ್ಟಶಕ್ತಿ ಊರೊಳಗೆ ಬರದಂತೆ ಹಾಗೂ ಕಾಲಕಾಲಕ್ಕೆ ಮಳೆಯಾಗಿ ಊರು ಸಮೃದ್ಧವಾಗಲಿ ಎಂದು ಬೇಡಿಕೊಳ್ಳಾಯಿತು. ಈ ಹೋಳಿಗಮ್ಮ ಹಬ್ಬದಲ್ಲಿ ದಿನಕರ ಹಾಗೂ ಅಂಬೇಡ್ಕರ್ ನಗರದ ಯುವಕರು ವಾಲಗ ವಾಧ್ಯಕ್ಕೆ.ತಕ್ಕ ಹೆಜ್ಜೆ ಹಾಕಿದ್ದರು.
    1
    ಚಳ್ಳಕೆರೆ  ನಗರದಲ್ಲಿ ‘ಹೋಳಿಗೆ ಅಮ್ಮ’ ಹಬ್ಬ ಶ್ರದ್ಧಾ–ಭಕ್ತಿಯಿಂದ ಆಚರಣೆ
ನಗರದ ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ರೋಗ  ರುಜೀನಗಳ ಹರಡದಿರಲಿ ಹಾಗೂ ಊರಿನ ಒಳಿತಿಗಾಗಿ ಪ್ರಾರ್ಥಿಸಿ ಆಷಾಢ ಮಾಸದ  ಮಂಗಳವಾರ ಚಳ್ಳಕೆರೆ  ನಗರದಲ್ಲಿ ‘ಹೋಳಿಗೆ ಅಮ್ಮ’ ಹಬ್ಬವನ್ನು ಭಕ್ತರು ಶ್ರದ್ಧಾ–ಭಕ್ತಿಯಿಂದ ಆಚರಿಸಿದರು..
ಯಾವುದೇ ಜಾತಿ ಭೇದವಿಲ್ಲದೆ ಹೋಳಿಗೆ ಅಮ್ಮನನ್ನು ಶತಮಾನಗಳಿಂದಲೂ ಬುಡಕಟ್ಟು ಸಂಪ್ರದಾಯ, ಸಂಸ್ಕೃತಿಯ ನೆಲದಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ ಭಾಗದಲ್ಲಿ ಅಷ್ಟೇ ಅಲ್ಲದೆ ನಗರದಲ್ಲೂ ಸಹ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಗುತ್ತದೆ.
. ಪ್ರತಿಯೊಂದು ಹಬ್ಬ, ಆಚರಣೆಗೆ ಅದರದೇ ಆದ ನಂಬಿಕೆ ಇದೆ. ಸಂಪ್ರದಾಯ ಹಾಗೂ ಸಂಸ್ಕೃತಿಯ ನೆಲೆಯಿದೆ. ಅದರಲ್ಲಿ ಹೋಳಿಗೆ ಅಮ್ಮ ಹಬ್ಬ ಕೂಡ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ.‌
ಮಂಗಳವಾರ ಬೆಳಿಗ್ಗೆಯಿಂದಲೇ ನಗರದಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತು
ಚಳ್ಳಕೆರೆ ನಗರದ ಅಂಬೇಡ್ಕರ್ ನಗರ ಗಾಂಧಿನಗರ ಸೋಮುಗುದ್ದು ರಸ್ತೆ ತ್ಯಾಗರಾಜನಗರ ಹಳೆ ಟೌನ್ ಹೌಸಿಂಗ್ ಬೋರ್ಡ.ಸೇರಿದಂತೆ ನಗರದಲ್ಲಿ 
ಹೋಳಿಗೆ ತಯಾರಿಸಿ ಅದನ್ನು ಅರಿಸಿಣ, ಕುಂಕುಮ, ಬಳೆ, ಬೇವಿನ ಸೊಪ್ಪು, ತೆಂಗಿನಕಾಯಿ ಹೋಳುಗಳನ್ನು ಮೊರದಲ್ಲಿ ಇಟ್ಟು ಮನೆಯಲ್ಲಿ ಪೂಜೆ ಸಲ್ಲಿಸಿದರು. ಬಳಿಕ ನಿಗದಿಪಡಿಸಿದ ಮಾರಮ್ಮನ ದೇವಸ್ಥಾನ ಎಲ್ಲಮ್ಮನ. ದೇವಸ್ಥಾನ. ಕಡಿಮೆ ಮಾರಮ್ಮನ ದೇವಸ್ಥಾನ . ಸುಂಕುದ್ ರಸ್ತೆಯ ಮಾರಮ್ಮನ ದೇವಸ್ಥಾನ ಗಳಲ್ಲಿ ಅವುಗಳನ್ನು ಇಟ್ಟು ಸಾಂಕ್ರಾಮಿಕ ರೋಗ ರಜಿನಾ ಬಾರದಂತೆ ಉತ್ತಮ ಮಳೆ ಬೆಳೆಯಾಗಲಿ ಚಿಕ್ಕ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಮಕ್ಕಳನ್ನು ಕಾಪಾಡು ತಾಯಿ ಎಂದು
ನಮಿಸಿದರು.
ಇನ್ನು ಎಲ್ಲರೂ ಪ್ರಸಾದವನ್ನು ತಾಯಿಗೆ ಅರ್ಪಿಸಿದ ನಂತರ ಒಂದು ಬಿದುರಿನ ಬುಟ್ಟಿಯಲ್ಲಿ ಹೋಳಿಗೆ ಮತ್ತೊಂದು ಬುಟ್ಟಿಯಲ್ಲಿ ಅನ್ನ ಸಾಂಬಾರು ಹಾಗೂ ತೆಂಗಿನಕಾಯಿ ಬಾಳೆಹಣ್ಣು  ತುಂಬಿಕೊಂಡು ಊರ ಹೊರಗಿನ ಹಸಿರು ಮರದ ಕೆಳಗೆ ಇಟ್ಟುಮನೆಯಲ್ಲಿರುವ ಮಕ್ಕಳಿಗೆ ಅಮ್ಮ, ಧಡಾರ, ಸಿಡುಬು ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ, ದುಷ್ಟಶಕ್ತಿ ಊರೊಳಗೆ ಬರದಂತೆ ಹಾಗೂ ಕಾಲಕಾಲಕ್ಕೆ ಮಳೆಯಾಗಿ ಊರು ಸಮೃದ್ಧವಾಗಲಿ ಎಂದು ಬೇಡಿಕೊಳ್ಳಾಯಿತು.
ಈ ಹೋಳಿಗಮ್ಮ ಹಬ್ಬದಲ್ಲಿ ದಿನಕರ ಹಾಗೂ ಅಂಬೇಡ್ಕರ್ ನಗರದ ಯುವಕರು ವಾಲಗ ವಾಧ್ಯಕ್ಕೆ.ತಕ್ಕ ಹೆಜ್ಜೆ ಹಾಕಿದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಕುರುಬ ಸಮಾಜಕ್ಕೆ ಸಚಿವ ಸ್ಥಾನ ನೀಡ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ ಮುಖಂಡರು ಹೊಸದುರ್ಗದ ಹಿರಿಯ ಶಾಸಕ ಬಿ ಜಿ ಗೋವಿಂದಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಕುರುಬರ ಸಂಘದ ವತಿಯಿಂದ ಆಗ್ರಹ ಮಾಡಿದ್ದಾರೆ. ಈ ಕುರಿತು ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕುರುಬರ ಸಂಘದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿದ್ದು ಈ ವೇಳೆ ಜಿಲ್ಲಾ ಕುರುಭರ ಸಂಘದ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಿ ಟಿ ಜಗದೀಶ್ ಅವರು ಮಾತನಾಡಿದ್ದು ಡಿ ಕೆ ಶಿವಕುಮಾರ್ ಅವರ ನೂತನ ಸಂಪುಟದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದು ನಮ್ಮ ಕುರುಬರ ಸಂಘದ ಶಾಸಕರನ್ನ ಕಡೆಗಣನೆ ಮಾಡಲಾಗಿದೆ. ಇಪ್ಪತ್ತು ನೂತನ ಸಚಿವರ ಪ್ರಮಾಣ ವಚನಕ್ಕೆ ಅಂತಿಮ ಪಟ್ಟಿ ಸಿದ್ದಪಡಿಸಿದ್ದು ಇದರಲ್ಲಿ ನಮ್ಮ ಸಮುದಾಯವನ್ನ ಸರ್ಕಾರ ಕಡೆಗಣನೆ ಮಾಡಲಾಗಿದೆ. ರಾಜ್ಯದ ಕುರುಬರ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯವನ್ನ ಸರ್ಕಾರ ಕೊಟ್ಟಿಲ್ಲ. ಸಚಿವ ಸಂಪುಟ ವಿಸ್ತರಣೆ ವೇಳೆ ಗಾಯತ್ರಿ ಶಾಂತೇಗೌಡ ಅವರ ಹೆಸರು ಪ್ರಸ್ತಾಪ ಆಗಿದ್ದು ಕೊನೆ ಹಂತದಲ್ಲಿ ಸಚಿವ ಸ್ಥಾನವನ್ನ ಕೊಡದೆ ಅನ್ಯಾಯವಾಗಿದೆ. ಇಪ್ಪತ್ತರ ಪೈಕಿ ಕೇವಲ ಹತ್ತೊಂಬತ್ತು ಶಾಸಕರಿಗೆ ಸಚಿವ ಸ್ಥಾನ ನೀಡಿ ಒಂದನ್ನ ಹಾಗೆ ಉಳಿಸಿಕೊಂಡಿದ್ದು ಆ ಸ್ಥಾನವನ್ನ ತಾಲ್ಲೂಕು ಪಂಚಾಯತಿ ಅಧ್ಯಕ್ಷರಾಗಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರಾಗಿ ಕೆಳಮಟ್ಟದಿಂದ ಪಕ್ಷ ಸಂಘಟನೆ ಮಾಡಿಕೊಂಡು ಬಂದು ನಾಲ್ಕು ಬಾರಿ ಶಾಸಕರಾದ ನಮ್ಮ ಸಮುದಾಯದ ಹಿರಿಯ ಶಾಸಕ ಹೊಸದುರ್ಗದ ಬಿಜಿ ಗೋವಿಂದಪ್ಪ ಅವರಿಗೆ ಕೊಡಬೇಕು ಹಾಗೂ ಈ ಕುರಿತು ಮುಖ್ಯಮಂತ್ರಿಗಳ ಬಳಿ ನಿಯೋಗವನ್ನ ಸಹ ತೆಗೆದುಕೊಂಡು ಹೋಗಬೇಕು ಹಾಗೂ ನಮ್ಮ ಸಮುದಾಯದ ಮುಖಂಡರಿಗೆ ಹೆಚ್ಚಿನ ನಿಗಮ ಮಂಡಳಿ ಸ್ಥಾನವನ್ನ ಸಹ ನೀಡಬೇಕು ಎಂದು ಬಿ ಟಿ ಜಗದೀಶ್ ಅವರು ತಿಳಿಸಿದ್ದು ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆ ಹಾಗೂ ರಾಜ್ಯಾದ್ಯಂತ ಸಮುದಾಯವನ್ನ ಒಗ್ಗೂಡಿಸಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ಕೂಡ ನೀಡಿದ್ದಾರೆ.
    1
    ಕುರುಬ ಸಮಾಜಕ್ಕೆ ಸಚಿವ ಸ್ಥಾನ ನೀಡ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ ಮುಖಂಡರು
ಹೊಸದುರ್ಗದ ಹಿರಿಯ ಶಾಸಕ ಬಿ ಜಿ ಗೋವಿಂದಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಕುರುಬರ ಸಂಘದ ವತಿಯಿಂದ ಆಗ್ರಹ ಮಾಡಿದ್ದಾರೆ. ಈ ಕುರಿತು ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕುರುಬರ ಸಂಘದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿದ್ದು ಈ ವೇಳೆ ಜಿಲ್ಲಾ ಕುರುಭರ ಸಂಘದ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಿ ಟಿ ಜಗದೀಶ್ ಅವರು ಮಾತನಾಡಿದ್ದು ಡಿ ಕೆ ಶಿವಕುಮಾರ್ ಅವರ ನೂತನ ಸಂಪುಟದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದು ನಮ್ಮ ಕುರುಬರ ಸಂಘದ ಶಾಸಕರನ್ನ ಕಡೆಗಣನೆ ಮಾಡಲಾಗಿದೆ. ಇಪ್ಪತ್ತು ನೂತನ ಸಚಿವರ ಪ್ರಮಾಣ ವಚನಕ್ಕೆ ಅಂತಿಮ ಪಟ್ಟಿ ಸಿದ್ದಪಡಿಸಿದ್ದು ಇದರಲ್ಲಿ ನಮ್ಮ ಸಮುದಾಯವನ್ನ ಸರ್ಕಾರ ಕಡೆಗಣನೆ ಮಾಡಲಾಗಿದೆ. ರಾಜ್ಯದ ಕುರುಬರ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯವನ್ನ ಸರ್ಕಾರ ಕೊಟ್ಟಿಲ್ಲ. ಸಚಿವ ಸಂಪುಟ ವಿಸ್ತರಣೆ ವೇಳೆ ಗಾಯತ್ರಿ ಶಾಂತೇಗೌಡ ಅವರ ಹೆಸರು ಪ್ರಸ್ತಾಪ ಆಗಿದ್ದು ಕೊನೆ ಹಂತದಲ್ಲಿ ಸಚಿವ ಸ್ಥಾನವನ್ನ ಕೊಡದೆ ಅನ್ಯಾಯವಾಗಿದೆ. ಇಪ್ಪತ್ತರ ಪೈಕಿ ಕೇವಲ ಹತ್ತೊಂಬತ್ತು ಶಾಸಕರಿಗೆ ಸಚಿವ ಸ್ಥಾನ ನೀಡಿ ಒಂದನ್ನ ಹಾಗೆ ಉಳಿಸಿಕೊಂಡಿದ್ದು ಆ ಸ್ಥಾನವನ್ನ ತಾಲ್ಲೂಕು ಪಂಚಾಯತಿ ಅಧ್ಯಕ್ಷರಾಗಿ ಹಾಗೂ ಗ್ರಾಮ ಪಂಚಾಯತಿ ಸದಸ್ಯರಾಗಿ ಕೆಳಮಟ್ಟದಿಂದ ಪಕ್ಷ ಸಂಘಟನೆ ಮಾಡಿಕೊಂಡು ಬಂದು ನಾಲ್ಕು ಬಾರಿ ಶಾಸಕರಾದ ನಮ್ಮ ಸಮುದಾಯದ ಹಿರಿಯ ಶಾಸಕ ಹೊಸದುರ್ಗದ ಬಿಜಿ ಗೋವಿಂದಪ್ಪ ಅವರಿಗೆ ಕೊಡಬೇಕು ಹಾಗೂ ಈ ಕುರಿತು ಮುಖ್ಯಮಂತ್ರಿಗಳ ಬಳಿ ನಿಯೋಗವನ್ನ ಸಹ ತೆಗೆದುಕೊಂಡು ಹೋಗಬೇಕು ಹಾಗೂ ನಮ್ಮ ಸಮುದಾಯದ ಮುಖಂಡರಿಗೆ ಹೆಚ್ಚಿನ ನಿಗಮ ಮಂಡಳಿ ಸ್ಥಾನವನ್ನ ಸಹ ನೀಡಬೇಕು ಎಂದು ಬಿ ಟಿ ಜಗದೀಶ್ ಅವರು ತಿಳಿಸಿದ್ದು ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆ ಹಾಗೂ ರಾಜ್ಯಾದ್ಯಂತ ಸಮುದಾಯವನ್ನ ಒಗ್ಗೂಡಿಸಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ಕೂಡ ನೀಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ವಿದ್ಯಾಗಣಪತಿ ದೇವಾಲಯದಲ್ಲಿ ಚಾಮುಂಡೇಶ್ವರಿ ವರ್ಧಂತಿ, ಚಂಢಿಕಾ ಹೋಮ ಅಷ್ಟೋತ್ತರ ಪಾರಾಯಣ ಮಂಡ್ಯ ಆಷಾಢ ಮಾಸದ ಬಹುಳ ಷಷ್ಠಿ ದಿನವಾದ ಇಂದು ಚಾಮುಂಡೇಶ್ವರಿ ವರ್ದಂತಿ ಪ್ರಯುಕ್ತ ಮಂಡ್ಯದ ವಿದ್ಯಾನಗರದ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮಾತ ಸೇವಾ ಟ್ರಸ್ಟ್ ನಿಂದ ಇಂದು ಚಂಡಿಕಾಯಾಗ,ಅಷ್ಟೋತ್ತರ ಪಾರಾಯಣ ಜರುಗಿತು. ಕಾರ್ಯಕ್ರಮದಲ್ಲಿ ಮಾತಾ ಟ್ರಸ್ಟ್ ನ ಪದಾದಿಕಾರಿ ಗಳಾದಪ್ರತಿಮಾರಮೇಶ್,ಮಾಲಾನಾಗೇಶ್,ಭಾರತೀಅಡಿಗ ಮತ್ತು ಟ್ರಸ್ಟಿಗಳು ಬಾಗವಹಿಸಿದ್ದರು. ದೇವಿಕೃಪೆಗೆ‌ಪಾತ್ರರಾಗಲು ಬಂದ ಭಕ್ತಾಧಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
    1
    ವಿದ್ಯಾಗಣಪತಿ ದೇವಾಲಯದಲ್ಲಿ ಚಾಮುಂಡೇಶ್ವರಿ ವರ್ಧಂತಿ, ಚಂಢಿಕಾ ಹೋಮ ಅಷ್ಟೋತ್ತರ ಪಾರಾಯಣ 
ಮಂಡ್ಯ ಆಷಾಢ ಮಾಸದ ಬಹುಳ ಷಷ್ಠಿ ದಿನವಾದ ಇಂದು ಚಾಮುಂಡೇಶ್ವರಿ ವರ್ದಂತಿ ಪ್ರಯುಕ್ತ ಮಂಡ್ಯದ ವಿದ್ಯಾನಗರದ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮಾತ ಸೇವಾ ಟ್ರಸ್ಟ್ ನಿಂದ ಇಂದು ಚಂಡಿಕಾಯಾಗ,ಅಷ್ಟೋತ್ತರ ಪಾರಾಯಣ ಜರುಗಿತು.
ಕಾರ್ಯಕ್ರಮದಲ್ಲಿ ಮಾತಾ ಟ್ರಸ್ಟ್ ನ ಪದಾದಿಕಾರಿ ಗಳಾದಪ್ರತಿಮಾರಮೇಶ್,ಮಾಲಾನಾಗೇಶ್,ಭಾರತೀಅಡಿಗ ಮತ್ತು ಟ್ರಸ್ಟಿಗಳು ಬಾಗವಹಿಸಿದ್ದರು. ದೇವಿಕೃಪೆಗೆ‌ಪಾತ್ರರಾಗಲು ಬಂದ ಭಕ್ತಾಧಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    1 hr ago
  • ಹುಳಿಯಾರು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಡಗರದ 'ಚಾಮುಂಡೇಶ್ವರಿ ವರ್ಧಂತಿ' ಆಚರಣೆ ಹುಳಿಯಾರು: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವದ ಪ್ರಯುಕ್ತ, ಮಂಗಳವಾರ ಪಟ್ಟಣದ ಗ್ರಾಮ ದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಅತ್ಯಂತ ಶ್ರದ್ಧಾ-ಭಕ್ತಿಗಳಿಂದ ಜರುಗಿದವು. ದೇವಸ್ಥಾನದಲ್ಲಿ ಎಲ್ಲಾ ಧಾರ್ಮಿಕ ವಿಧಿವಿಧಾನಗಳು ಸಾಂಗವಾಗಿ ನೆರವೇರಿದವು. ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಭಕ್ತರ ದಂಡು ನೆರೆದಿತ್ತು. ಬೆಳಗಿನ ವಿಶೇಷ ಪೂಜೆಗಳು: ಮುಂಜಾನೆ ಅಮ್ಮನವರಿಗೆ ವಿಶೇಷ ಅಭಿಷೇಕ ಹಾಗೂ ಕುಂಕುಮಾರ್ಚನೆ ನೆರವೇರಿತು. ಪೂಜಾ ಸಮಯದಲ್ಲಿ 'ಲಲಿತಾ ಸಹಸ್ರನಾಮ' ಪಠಣ ನಡೆಯಿತು. ನಂತರ ನಡೆದ ಮಹಾಮಂಗಳಾರತಿಯಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಪೂಜಾ ಕೈಂಕರ್ಯಗಳ ನಂತರ ನೆರೆದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ವಿಶೇಷ ಅಲಂಕಾರ:ವರ್ಧಂತಿ ಮಹೋತ್ಸವದ ಅಂಗವಾಗಿ ಅಮ್ಮನವರಿಗೆ ವಿಶೇಷವಾಗಿ ಸಿಂಹವಾಹಿನಿ ಅಲಂಕಾರ ಮಾಡಲಾಗಿದ್ದಯ ಭಕ್ತರ ಮನಸೆಳೆಯುವಂತಿತ್ತು. ಸಂಜೆ ಸ್ಥಳೀಯ ಭಜನಾ ತಂಡದಿಂದ ಸುಮಧುರವಾದ ಭಜನಾ ಕಾರ್ಯಕ್ರಮ ಜರುಗಿತು. ತದನಂತರ ಅಮ್ಮನವರ 'ಮದಾಲ್‌ಸಿ ಉತ್ಸವ'ವು ವಿಜೃಂಭಣೆಯಿಂದ ನಡೆಯಿತು. ಉತ್ಸವದ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ಗಣ್ಯರ ಉಪಸ್ಥಿತಿ:ಈ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಸ್ಥಾನದ ಧರ್ಮದರ್ಶಿಗಳಾದ ಎಸ್. ಆರ್. ಎಸ್. ದಯಾನಂದ್, ಕನ್ವಿನಿಯರ್ ಪಟೇಲ್ ರಾಜಣ್ಣ, ಹಾಗೂ ದೇವಾಲಯದ ಗೌಡರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು, ದೇವರ ಕೃಪೆಗೆ ಪಾತ್ರರಾದರು. ದಿನಪೂರ್ತಿ ನಡೆದ ಈ ಎಲ್ಲಾ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    1
    ಹುಳಿಯಾರು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಡಗರದ 'ಚಾಮುಂಡೇಶ್ವರಿ ವರ್ಧಂತಿ' ಆಚರಣೆ

ಹುಳಿಯಾರು: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವದ ಪ್ರಯುಕ್ತ, ಮಂಗಳವಾರ ಪಟ್ಟಣದ ಗ್ರಾಮ ದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಅತ್ಯಂತ ಶ್ರದ್ಧಾ-ಭಕ್ತಿಗಳಿಂದ ಜರುಗಿದವು.
ದೇವಸ್ಥಾನದಲ್ಲಿ ಎಲ್ಲಾ ಧಾರ್ಮಿಕ ವಿಧಿವಿಧಾನಗಳು ಸಾಂಗವಾಗಿ ನೆರವೇರಿದವು. ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಭಕ್ತರ ದಂಡು ನೆರೆದಿತ್ತು.
ಬೆಳಗಿನ ವಿಶೇಷ ಪೂಜೆಗಳು: ಮುಂಜಾನೆ ಅಮ್ಮನವರಿಗೆ ವಿಶೇಷ ಅಭಿಷೇಕ ಹಾಗೂ ಕುಂಕುಮಾರ್ಚನೆ ನೆರವೇರಿತು. ಪೂಜಾ ಸಮಯದಲ್ಲಿ 'ಲಲಿತಾ ಸಹಸ್ರನಾಮ' ಪಠಣ ನಡೆಯಿತು. ನಂತರ ನಡೆದ ಮಹಾಮಂಗಳಾರತಿಯಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಪೂಜಾ ಕೈಂಕರ್ಯಗಳ ನಂತರ ನೆರೆದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ವಿಶೇಷ ಅಲಂಕಾರ:ವರ್ಧಂತಿ ಮಹೋತ್ಸವದ ಅಂಗವಾಗಿ ಅಮ್ಮನವರಿಗೆ ವಿಶೇಷವಾಗಿ ಸಿಂಹವಾಹಿನಿ  ಅಲಂಕಾರ ಮಾಡಲಾಗಿದ್ದಯ ಭಕ್ತರ ಮನಸೆಳೆಯುವಂತಿತ್ತು.
ಸಂಜೆ  ಸ್ಥಳೀಯ ಭಜನಾ ತಂಡದಿಂದ ಸುಮಧುರವಾದ ಭಜನಾ ಕಾರ್ಯಕ್ರಮ ಜರುಗಿತು. ತದನಂತರ ಅಮ್ಮನವರ 'ಮದಾಲ್‌ಸಿ ಉತ್ಸವ'ವು ವಿಜೃಂಭಣೆಯಿಂದ ನಡೆಯಿತು. ಉತ್ಸವದ ಬಳಿಕ ಭಕ್ತಾದಿಗಳಿಗೆ  ಪ್ರಸಾದ ವಿತರಣೆ ಮಾಡಲಾಯಿತು.
ಗಣ್ಯರ ಉಪಸ್ಥಿತಿ:ಈ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಸ್ಥಾನದ ಧರ್ಮದರ್ಶಿಗಳಾದ ಎಸ್. ಆರ್. ಎಸ್. ದಯಾನಂದ್, ಕನ್ವಿನಿಯರ್ ಪಟೇಲ್ ರಾಜಣ್ಣ, ಹಾಗೂ ದೇವಾಲಯದ ಗೌಡರುಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು, ದೇವರ ಕೃಪೆಗೆ ಪಾತ್ರರಾದರು. ದಿನಪೂರ್ತಿ ನಡೆದ ಈ ಎಲ್ಲಾ ಕಾರ್ಯಕ್ರಮಗಳಲ್ಲಿ  ನೂರಾರು ಭಕ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.