ಯಾದಗಿರಿ ಜಿಲ್ಲೆಯಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಯಶಸ್ವಿಯಾಗಿ ಸಾಗುತ್ತಿದ್ದು, ಮತದಾರರಿಗೆ ಎಣಿಕೆ ನಮೂನೆ (ಇಎಫ್) ವಿತರಿಸುವ ಕಾರ್ಯವನ್ನು ಶೇ.100ರಷ್ಟು ಪೂರ್ಣಗೊಳಿಸಲಾಗಿದೆ. ಜೂನ್ 16, 2026ರ ಅಂತ್ಯದ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 10,53,236 ಮತದಾರರು ನೋಂದಣಿಯಾಗಿದ್ದು, ಜೂನ್ 30ರಿಂದ ಬಿಎಲ್‌ಒಗಳ ಮೂಲಕ ಮನೆ–ಮನೆಗೆ ತೆರಳಿ ಈ ನಮೂನೆಗಳನ್ನು ವಿತರಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಮತದಾರರ ಪಟ್ಟಿಯನ್ನು ನಿಖರ ಹಾಗೂ ದೋಷರಹಿತಗೊಳಿಸುವ ಉದ್ದೇಶದಿಂದ ಜುಲೈ 29ರವರೆಗೆ ಈ ಅಭಿಯಾನ ಮುಂದುವರಿಯಲಿದ್ದು, ಸಾರ್ವಜನಿಕರು ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಅಗತ್ಯ ದಾಖಲೆಗಳು ಹಾಗೂ ಮಾಹಿತಿ ನೀಡಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ರಾಹುಲ್ ತುಕಾರಾಮ ಪಾಂಡ್ವೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. ಜಿಲ್ಲೆಯಲ್ಲಿ ಮುದ್ರಿಸಲಾಗಿದ್ದ ಎಲ್ಲಾ 10,53,236 ಎಣಿಕೆ ನಮೂನೆಗಳನ್ನು ಯಶಸ್ವಿಯಾಗಿ ವಿತರಿಸಲಾಗಿದ್ದು, ಇದುವರೆಗೆ ಒಟ್ಟು 1,86,796 (ಶೇ.17.74) ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಇದಲ್ಲದೆ 1,645 (ಶೇ.0.16) ನಮೂನೆಗಳನ್ನು ಆನ್‌ಲೈನ್ ಮೂಲಕ ಸ್ವೀಕರಿಸಲಾಗಿದೆ. ಪರಿಶೀಲನಾ ಪ್ರಕ್ರಿಯೆಯಲ್ಲಿ ವಿವಿಧ ಕಾರಣಗಳಿಂದ ಒಟ್ಟು 2,598 ಮತದಾರರನ್ನು ಗುರುತಿಸಲಾಗಿದ್ದು, ಇವರಲ್ಲಿ 1,213 ಮಂದಿ ಮೃತಪಟ್ಟವರು, 875 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡವರು, 440 ಮಂದಿ ಬೇರೆಡೆ ನೋಂದಾಯಿಸಿಕೊಂಡವರು, 53 ಮಂದಿ ಗೈರುಹಾಜರಾಗಿರುವವರು ಹಾಗೂ 17 ಇತರೆ ಪ್ರಕರಣಗಳಿಗೆ ಸೇರಿದವರಾಗಿದ್ದಾರೆ. ತಾಲ್ಲೂಕುವಾರು ಪ್ರಗತಿಯನ್ನು ಗಮನಿಸಿದರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಶೇ.100ರಷ್ಟು ವಿತರಣೆ ಪೂರ್ಣಗೊಂಡಿದೆ. ಈ ಪೈಕಿ ಶಹಾಪುರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂದರೆ ಶೇ.24.17ರಷ್ಟು ಡಿಜಿಟಲೀಕರಣದೊಂದಿಗೆ ಜಿಲ್ಲೆಯಲ್ಲೇ ಹೆಚ್ಚಿನ ಪ್ರಗತಿ ದಾಖಲಾಗಿದೆ. ಉಳಿದಂತೆ ಹುನಸಗಿ ತಾಲ್ಲೂಕಿನಲ್ಲಿ ಶೇ.20.93, ಗುರುಮಿಠಕಲ್ ತಾಲ್ಲೂಕಿನಲ್ಲಿ ಶೇ.20.76, ಶೋರಾಪುರ ತಾಲ್ಲೂಕಿನಲ್ಲಿ ಶೇ.14.78, ವಡಗೇರಾ ತಾಲ್ಲೂಕಿನಲ್ಲಿ ಶೇ.13.53 ಹಾಗೂ ಯಾದಗಿರಿ ತಾಲ್ಲೂಕಿನಲ್ಲಿ ಶೇ.12.14ರಷ್ಟು ಡಿಜಿಟಲೀಕರಣ ಕಾರ್ಯ ನಡೆದಿದೆ. ಮತದಾರರ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಲು ಸಾರ್ವಜನಿಕರು ಬಿಎಲ್‌ಒಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ ಸಹಕರಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಮನವಿ ಮಾಡಿದ್ದಾರೆ.

- ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಸಾಮಾನುಗಳು ಬಂದಿದ್ದರೂ ರೈತರಿಗೆ ಸಿಗುತ್ತಿಲ್ಲ. ಸಾಮಾನುಗಳು ಬಂದಿದ್ದರೂ ಅವುಗಳನ್ನು ತಲುಪಿಸದ ಪೋಸ್ಟ್ ಆಫೀಸ್ ಅಧಿಕಾರಿಗಳ ವಿರುದ್ಧ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.1
- ಯಾದಗಿರಿ ಜಿಲ್ಲೆಯಾದ್ಯಂತ ಮನೆಗಳು, ದ್ವಿಚಕ್ರ ವಾಹನಗಳು, ದನ-ಕರುಗಳು ಹಾಗೂ ಕುರಿಗಳ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಬೀಗ ಹಾಕಿದ ಮನೆಗಳು, ಬೈಕ್‌ಗಳು ಹಾಗೂ ಜಾನುವಾರುಗಳ ಕಳ್ಳತನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಾನುವಾರುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಅವುಗಳನ್ನು ಕಳವು ಮಾಡಿ ಮಾರಾಟ ಮಾಡುವ ಸಂಘಟಿತ ಜಾಲ ಕಾರ್ಯನಿರ್ವಹಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ರೈತರು ಮತ್ತು ಸಾರ್ವಜನಿಕರು ಭಯದ ನಡುವೆಯೇ ಜೀವನ ನಡೆಸುವಂತಾಗಿದೆ. ಕಳ್ಳತನ ಪ್ರಕರಣಗಳಿಗೆ ಶಾಶ್ವತವಾಗಿ ಕಡಿವಾಣ ಹಾಕಲು ಅನುಭವಿ ಹಾಗೂ ನುರಿತ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ, ಸಂಘಟಿತ ಕಳ್ಳರ ಜಾಲವನ್ನು ಬೇರು ಸಮೇತ ಪತ್ತೆಹಚ್ಚಿ, ಆರೋಪಿಗಳನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಬಳಿಚಕ್ರ ಗ್ರಾಮದಲ್ಲಿ ಮಧ್ಯರಾತ್ರಿ ಸುಮಾರು 3 ಗಂಟೆಯವರೆಗೆ ಜೀವದ ಹಂಗು ತೊರೆದು ಬೈಕ್ ಕಳ್ಳತನಕ್ಕೆ ಬಂದಿದ್ದ ಒಬ್ಬ ಕಳ್ಳನನ್ನು ಗ್ರಾಮಸ್ಥರು ಧೈರ್ಯದಿಂದ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ವೇಳೆ ಇತರ ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗಾಗಿ ಸಮಗ್ರ ತನಿಖೆ ನಡೆಸಿ ಈ ಕೃತ್ಯದ ಹಿಂದಿರುವ ಜಾಲವನ್ನು ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆಯ ಕೆಳಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಅವರು ಮನವಿ ಮಾಡಿದ್ದಾರೆ. ಈ ಮನವಿಯ ಪ್ರತಿಯನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರು, ಕಲಬುರಗಿ ಪ್ರಾದೇಶಿಕ ಆಯುಕ್ತರು ಹಾಗೂ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಮಾಹಿತಿಗಾಗಿ ಮತ್ತು ಅಗತ್ಯ ಕ್ರಮಕ್ಕಾಗಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ವೀರಭದ್ರಪ್ಪ, ಪರಸಪ್ಪ, ಈರಪ್ಪಗೌಡ, ಮಲ್ಲಿಕಾರ್ಜುನ, ಸಾಯಿಬಣ್ಣ, ಗನ್ ಶಾಮ್, ಆಕಾಶ, ಅಕ್ರಮ, ನಯಿಮ್, ಅಜೀಜ್, ವೆಂಕಟೇಶ, ಅಯ್ಯಣ್ಣ, ಬನ್ನಪ್ಪ ಶರಣಪ್ಪ, ಗಣೇಶ್, ಸಲಿಂ, ಮಹೇಶ್, ವಿನೋದ, ಮೌನೇಶ, ಅಜಯ, ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.1
- ಗುರುಮಠಕಲ್ ತಾಲೂಕಿನ ನೀಲಹಳ್ಳಿ ಮತ್ತು ಕಿಲ್ಲನಕೇರಾ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಅವರು, ಈ ಹಿಂದೆಯೇ ಅಧಿಕಾರಿಗಳು ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಈ ಕುರಿತು ಎಚ್ಚರಿಕೆ ನೀಡಿರುವ ಅವರು, ಬೇಡಿಕೆಗಳು ಈಡೇರದಿದ್ದಲ್ಲಿ ಜುಲೈ 16ರಂದು ಬೆಳಿಗ್ಗೆ 9 ಗಂಟೆಗೆ ಕಿಲ್ಲನಕೇರಾ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಈ ವೇಳೆ ಸ್ಥಳೀಯ ಗ್ರಾಮಸ್ಥರು ಮತ್ತು ಮಹಿಳೆಯರು ಉಪಸ್ಥಿತರಿದ್ದರು.4
- ಕಲಬುರಗಿ ಜಿಲ್ಲೆಯ ಸೇಡಂ ಇತಿಹಾಸದಲ್ಲೇ ಹೊಸ ಮೈಲಿಗಲ್ಲನ್ನು ಸ್ಥಾಪಿಸಲು ಪಿಎಸ್ಐ ಉಪೇಂದ್ರಕುಮಾರ ಅವರು ಮುಂದಾಗಿದ್ದು, ಪಟ್ಟಣದ ಗಲ್ಲಿ ಗಲ್ಲಿಯಲ್ಲೂ ಸಿಸಿ ಕ್ಯಾಮರಾ ಅಳವಡಿಸುವ ಕಾರ್ಯವು ಅತ್ಯಂತ ಜೋರಾಗಿ ನಡೆದಿದೆ. ಪಟ್ಟಣದ ಮುಖ್ಯ ರಸ್ತೆಗಳು ಸೇರಿದಂತೆ ರೆಹಮತನಗರ, ವೆಂಕಟೇಶ ನಗರ, ವಿದ್ಯಾನಗರ, ದೊಡ್ಡ ಅಗಸಿ ಹಾಗೂ ಸಣ್ಣ ಅಗಸಿ ಪ್ರದೇಶಗಳಲ್ಲಿ ಈ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಕಳ್ಳತನ, ಅಪಘಾತ, ದೌರ್ಜನ್ಯ ಹಾಗೂ ಸಂಚಾರದ ಮೇಲೆ ಹದ್ದಿನ ಕಣ್ಣಿಡಲು ಪೊಲೀಸರು ಸಜ್ಜಾಗುತ್ತಿದ್ದು, ಇದಕ್ಕಾಗಿ ಪಟ್ಟಣದಾದ್ಯಂತ ಒಟ್ಟು 80 ಕ್ಕೂ ಅಧಿಕ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಸೇಡಂ ಇತಿಹಾಸದಲ್ಲೇ ಇದೊಂದು ಹೊಸ ಪ್ರಯೋಗವಾಗಿದ್ದು, ಪ್ರತಿಯೊಂದು ಗಲ್ಲಿ ಗಲ್ಲಿಯಲ್ಲೂ ಸಿಸಿ ಕ್ಯಾಮರಾ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.1
- ರಾಯಚೂರು ಜಿಲ್ಲೆಯ ದೇವದುರ್ಗದ ಕೆಬಿ (KB) ಕಚೇರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಚುನಪ್ಪ ಪೂಜೇರಿ ಬಣದ ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಯಿತು. ಹೂವಿನಹಡಿಗಿ ಮತ್ತು ವಗಡಂಬಳಿ ಗ್ರಾಮಗಳ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂಬುದು ಈ ಹೋರಾಟಕ್ಕೆ ಪ್ರಮುಖ ಕಾರಣವಾಗಿದೆ. ಗ್ರಾಮಗಳಿಗೆ ಹಾಗೂ ಜಮೀನುಗಳಿಗೆ ಸರಿಯಾದ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ನೀರಾವರಿ ವ್ಯವಸ್ಥೆ ಸಂಪೂರ್ಣವಾಗಿ ಕುಂಠಿತಗೊಂಡಿದೆ, ಇದರಿಂದಾಗಿ ನೀರಿಗಾಗಿ ರೈತರು ಪರದಾಡುವಂತಾಗಿದೆ. ಈ ಗಂಭೀರ ಸಮಸ್ಯೆಯನ್ನು ಪರಿಗಣಿಸಿ ಅಧಿಕಾರಿಗಳ ವಿರುದ್ಧ ರೈತರು ತಮ್ಮ ಆಕ್ರೋಶವನ್ನು ಹೊರಹಾಕಿದರು.1
- ಕಾಳಗಿ ತಾಲೂಕಿನವರೇ ಆದ, ಪೂರ್ಣಾವಧಿಗೆ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ತಿಪ್ಪಣಪ್ಪ ಕಮಕನೂರ ಅವರಿಗೆ ಜುಲೈ 19ರಂದು ಅವರ ತವರೂರಿನ ತಾಲೂಕು ಕೋಲಿ ಸಮಾಜದ ವತಿಯಿಂದ ಅದ್ದೂರಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೋಲಿ ಸಮಾಜದ ತಾಲೂಕಾಧ್ಯಕ್ಷ ಜಗನ್ನಾಥ ತೇಲಿ ಈ ಮಾಹಿತಿ ನೀಡಿದ್ದಾರೆ. ಜುಲೈ 19ರಂದು ಬೆಳಗ್ಗೆ 10 ಗಂಟೆಗೆ ಕಾಳಗಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ನೀಲಕಂಠ ಕಾಳೇಶ್ವರ ದೇವಸ್ಥಾನದವರೆಗೆ ಡೊಳ್ಳು ಮತ್ತು ಹಲಗೆ ವಾದ್ಯಗಳೊಂದಿಗೆ ತೆರೆದ ವಾಹನದಲ್ಲಿ ತಿಪ್ಪಣಪ್ಪ ಕಮಕನೂರ ಅವರ ಅದ್ದೂರಿ ಮೆರವಣಿಗೆ ನಡೆಯಲಿದ್ದು, ಬಳಿಕ ನೀಲಕಂಠ ಕಾಳೇಶ್ವರ ಮಂಗಲ ಮಂಟಪದಲ್ಲಿ ಅಭಿನಂದನಾ ಸಮಾರಂಭ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ರಟಕಲ್ ಗೌರಿಗುಡ್ಡದ ಸಿದ್ಧಶಿವಯೋಗಿ ಶರಣರು, ಭರತನೂರ ಪೂಜ್ಯ ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು, ರಟಕಲ್ ಪೂಜ್ಯ ರೇವಣಸಿದ್ಧ ಶಿವಾಚಾರ್ಯರು, ನೀಲಕಂಠ ಮಹಾಸ್ವಾಮಿಗಳು ಹಾಗೂ ಕಾಳಗಿಯ ನೀಲಕಂಠ ಮರಿದೇವರು ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ, ಮುಖಂಡ ರವಿರಾಜ ಕೊರವಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಇದೇ ವೇಳೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 85ರಷ್ಟು ಅಂಕ ಪಡೆದ ತಾಲೂಕಿನ ಕೋಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಜರುಗಲಿದ್ದು, ಅರ್ಹ ವಿದ್ಯಾರ್ಥಿಗಳು ದಾಖಲೆಗಳೊಂದಿಗೆ ಜುಲೈ 16ರ ಒಳಗೆ ಗುಂಡಪ್ಪ ಕರೆಮನೊರ (9741681146) ಅಥವಾ ರಾಘವೇಂದ್ರ ಹಲಚೇರಾ (9731155080) ಅವರನ್ನು ಸಂಪರ್ಕಿಸಲು ಕೋರಲಾಗಿದೆ. ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಕೋಲಿ ಸಮಾಜದ ಯುವ ಘಟಕ ತಾಲೂಕಾಧ್ಯಕ್ಷ ಪ್ರವೀಣ ನಾಮದಾರ, ಮುಖಂಡರಾದ ಭೀಮರಾವ ಮಾಲಿಪಾಟೀಲ, ಮಲ್ಲಪ್ಪ ದಿಗ್ಗಾಂವ, ಸಿದ್ದು ಕೇಶ್ವರ, ಮಾರುತಿ ನೈಕೋಡಿ, ಜಯರಾಜ ಮುದಿರಾಜ, ಶಿವಕುಮಾರ್ ಕಮಕನೂರ, ಮಲ್ಲಿಕಾರ್ಜುನ ಮರಗುತ್ತಿ, ಪ್ರಸಾದ ರಟಕಲ್, ರಾಹುಲ್ ಚಿತ್ತಾಪೂರ, ನೀಲಕಂಠಪ್ಪ ಮಾಸ್ತಾರ, ಮಹೇಶ ಗೋಟೂರ, ಶರಣು ಬಂಕಲಗಿ, ರಾಘವೇಂದ್ರ ಬೆಳಗುಂಪಿ, ಪವಾನ ನಾಮದಾರ, ದತ್ತು ಸಾವಳಗಿ, ಭಾಗೇಶ ಕೋಡ್ಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.1
- ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಶಿಕ್ಷಣ, ವಸತಿ ನಿಲಯ ಮತ್ತು ಮೂಲಸೌಕರ್ಯಗಳ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಭಾಗದಲ್ಲಿ ಕಾಲೇಜುಗಳಿದ್ದರೂ ಮೂಲಭೂತ ಸೌಕರ್ಯಗಳಿಲ್ಲದಿರುವುದು ಸಮಸ್ಯೆಯಾಗಿದ್ದು, ವಿದ್ಯಾರ್ಥಿಗಳ ಬೇಡಿಕೆಯಂತೆ ಕಲಬುರಗಿಯ ಮಾದರಿಯಲ್ಲೇ ರಾಯಚೂರಿನಲ್ಲಿಯೂ ಐಎಎಸ್ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಸಂಬಂಧ ನಗರ ಆಯುಕ್ತರೊಂದಿಗೆ ಮಾತುಕತೆ ನಡೆಸಲಾಗಿದ್ದು, ತಕ್ಷಣವೇ ವರದಿ ಸಿದ್ಧಪಡಿಸಿ ಸಂಬಂಧಿತ ಇಲಾಖೆಗೆ ಸಲ್ಲಿಸಲು ಸೂಚಿಸಲಾಗಿದೆ. ಸಿದ್ರಾಂಪುರದಲ್ಲಿರುವ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ ವೇಳೆ ಅಲ್ಲಿನ ದುಸ್ಥಿತಿಯನ್ನು ಕಂಡು ಡಾ. ನಾಗಲಕ್ಷ್ಮೀ ಚೌಧರಿ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿರುವ ಕಟ್ಟಡ ಮೂರು ವರ್ಷಗಳಿಂದ ಆರಂಭವಾಗಿಲ್ಲ, ಜೊತೆಗೆ ಅಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ. ಕಟ್ಟಡದ ಮಂಚ, ಬೀರು, ವಿದ್ಯುತ್ ಸಂಪರ್ಕ ಮತ್ತು ಪೈಪ್‌ಗಳಂತಹ ಸಾಮಗ್ರಿಗಳು ಕಳುವಾಗಿವೆ ಅಥವಾ ಹಾಳಾಗಿವೆ. ಅಲ್ಲದೆ, ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲದೆ ವಿದ್ಯಾರ್ಥಿಗಳು ಖಾಸಗಿ ವಸತಿಗಳಲ್ಲಿ ಹಣ ನೀಡಿ ಉಳಿಯುವ ಅನಿವಾರ್ಯತೆ ಸೃಷ್ಟಿಯಾಗಿದೆ. ಸಾರ್ವಜನಿಕ ಹಣದ ಇಂತಹ ದುರ್ಬಳಕೆಯನ್ನು ತಡೆದು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಹಾಗೂ ಸುರಕ್ಷಿತ ಸೌಲಭ್ಯಗಳು ದೊರೆಯುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ತಿಳಿಸಿದ್ದಾರೆ.1
- ಯಾದಗಿರಿ ಜಿಲ್ಲೆಯಾದ್ಯಂತ ಬೀಗ ಹಾಕಿದ ಮನೆಗಳು, ದ್ವಿಚಕ್ರ ವಾಹನಗಳು, ದನ-ಕರುಗಳು ಹಾಗೂ ಕುರಿಗಳ ಕಳ್ಳತನ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಜಾನುವಾರುಗಳ ಬೆಲೆ ಏರಿಕೆಯಾಗಿರುವುದರಿಂದ ಅವುಗಳನ್ನು ಕಳವು ಮಾಡಿ ಮಾರಾಟ ಮಾಡುವ ಸಂಘಟಿತ ಜಾಲ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದ್ದು, ರೈತರು ಭಯದಲ್ಲೇ ಜೀವನ ಸಾಗಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಕಳ್ಳತನ ಪ್ರಕರಣಗಳಿಗೆ ಶಾಶ್ವತ ಕಡಿವಾಣ ಹಾಕಲು ಮತ್ತು ಆರೋಪಿಗಳನ್ನು ಪತ್ತೆಹಚ್ಚಲು ಅನುಭವಿ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಸಾಮಾಜಯಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಇತ್ತೀಚೆಗೆ ಜಿಲ್ಲೆಯ ಬಳಿಚಕ್ರ ಗ್ರಾಮದಲ್ಲಿ ಮಧ್ಯರಾತ್ರಿ ಸುಮಾರು 3 ಗಂಟೆಗೆ ಬೈಕ್ ಕಳ್ಳತನ ಮಾಡಲು ಬಂದಿದ್ದ ಕಳ್ಳನನ್ನು ಗ್ರಾಮಸ್ಥರು ಪ್ರಾಣದ ಹಂಗು ತೊರೆದು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯನ್ನು ಶ್ಲಾಘಿಸಿರುವ ಮುದ್ನಾಳ, ಈ ವೇಳೆ ಪರಾರಿಯಾದ ಇತರ ಆರೋಪಿಗಳ ಪತ್ತೆಗಾಗಿ ಸಮಗ್ರ ತನಿಖೆ ನಡೆಸಿ ಜಾಲವನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೆಳಮಟ್ಟದ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸುವಂತೆ ಮನವಿ ಮಾಡಲಾಗಿದ್ದು, ಇದರ ಪ್ರತಿಯನ್ನು ರಾಜ್ಯದ ಗೃಹ ಸಚಿವರು, ಕಲಬುರಗಿ ಪ್ರಾದೇಶಿಕ ಆಯುಕ್ತರು ಹಾಗೂ ಯಾದಗಿರಿ ಜಿಲ್ಲಾಧಿಕಾರಿಗಳಿಗೂ ಸಲ್ಲಿಸಲಾಗಿದೆ. ಮನವಿ ಸಲ್ಲಿಸುವ ವೇಳೆ ವೀರಭದ್ರಪ್ಪ, ಪರಸಪ್ಪ, ಈರಪ್ಪಗೌಡ, ಮಲ್ಲಿಕಾರ್ಜುನ, ಸಾಯಿಬಣ್ಣ, ಗನ್ ಶಾಮ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.1