logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿಕ್ಕನಾಯಕನಹಳ್ಳಿ: ತಾಲ್ಲೂಕು ಕಚೇರಿಯಲ್ಲಿ ನಾರಾಯಣಗುರು ಹಾಗೂ ನುಲಿಯ ಚಂದಯ್ಯ ಜಯಂತಿ ಆಚರಣೆ ಚಿಕ್ಕನಾಯಕನಹಳ್ಳಿ: ತಾಲ್ಲೂಕು ಕಚೇರಿಯಲ್ಲಿ ನಾರಾಯಣಗುರು ಹಾಗೂ ನುಲಿಯ ಚಂದಯ್ಯ ಜಯಂತಿ ಆಚರಣೆ --------------------- ಚಿಕ್ಕನಾಯಕನಹಳ್ಳಿ:ಇಲ್ಲಿನ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಆರ್ಯ ಈಡಿಗರ ಸಂಘ ಹಾಗೂ ಕೊರಚ ಮಹಾಸಭಾದ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅವರ 272ನೇ ಜಯಂತಿ ಹಾಗೂ ಶರಣ ವಚನಕಾರ ನುಲಿಯ ಚಂದಯ್ಯ ಅವರ 919ನೇ ಜಯಂತಿ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ದಂಡಾಧಿಕಾರಿ (ತಹಶೀಲ್ದಾರ್) ಎಂ. ಮಮತಾ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಸಿ.ಡಿ. ಚಂದ್ರಶೇಖರ್, "ಸಾಮಾಜಿಕ ಸಮಾನತೆ ಮತ್ತು ಕಾಯಕ ತತ್ವದ ಮೂಲಕ ಮಹನೀಯರಿಬ್ಬರೂ ಸಮಾಜಕ್ಕೆ ನೀಡಿದ ಕೊಡುಗೆ ಅನನ್ಯ. ಅವರು ತೋರಿದ ಸಮ ಸಮಾಜದ ಪರಿಕಲ್ಪನೆ ಪ್ರತಿಯೊಬ್ಬರಿಗೂ ಮಾದರಿ" ಎಂದರು. ವಿಶೇಷ ಉಪನ್ಯಾಸ ನೀಡಿದ ನಿವೃತ್ತ ಶಿಕ್ಷಕ ದಿಬ್ಬದಹಳ್ಳಿ ಶ್ಯಾಮ್‌ಸುಂದರ್, ನಾರಾಯಣಗುರು ಹಾಗೂ ಶರಣ ನುಲಿಯ ಚಂದಯ್ಯ ಅವರ ಜೀವನ, ಸಿದ್ಧಾಂತ ಮತ್ತು ಸಮಾಜ ಸುಧಾರಣಾ ಚಿಂತನೆಗಳ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ತಾಲ್ಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ನಾಗರಾಜಪ್ಪ (ಎನ್‌ಜಿ), ಕೊರಚ ಸಮಾಜದ ಮಹಾಸಭಾ ಅಧ್ಯಕ್ಷ ಲಕ್ಷ್ಮೀಪುರ ಮಂಜುನಾಥ್, ಕೊರಮ ಸಮಾಜದ ಅಧ್ಯಕ್ಷ ರಂಗಸ್ವಾಮಿ, ಡಿಎಸ್‌ಎಸ್ ಸಂಚಾಲಕ ಯರೇಕಟ್ಟೆ ರಮೇಶ್, ಬೆಳ್ಳಾರ ಮಲ್ಲಿಕಾರ್ಜುನಯ್ಯ, ನರವಗಲ್ ನರಸಿಂಹಮೂರ್ತಿ, ಮಹಬೂಬ್ ಸಾಬ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ನಾಗರಿಕರು ಉಪಸ್ಥಿತರಿದ್ದರು.

7 hrs ago
user_Huliyarkiran
Huliyarkiran
ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
7 hrs ago
af7072a2-a074-4dc1-846f-2c91fd9cb680

ಚಿಕ್ಕನಾಯಕನಹಳ್ಳಿ: ತಾಲ್ಲೂಕು ಕಚೇರಿಯಲ್ಲಿ ನಾರಾಯಣಗುರು ಹಾಗೂ ನುಲಿಯ ಚಂದಯ್ಯ ಜಯಂತಿ ಆಚರಣೆ ಚಿಕ್ಕನಾಯಕನಹಳ್ಳಿ: ತಾಲ್ಲೂಕು ಕಚೇರಿಯಲ್ಲಿ ನಾರಾಯಣಗುರು ಹಾಗೂ ನುಲಿಯ ಚಂದಯ್ಯ ಜಯಂತಿ ಆಚರಣೆ --------------------- ಚಿಕ್ಕನಾಯಕನಹಳ್ಳಿ:ಇಲ್ಲಿನ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಆರ್ಯ ಈಡಿಗರ ಸಂಘ ಹಾಗೂ ಕೊರಚ ಮಹಾಸಭಾದ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅವರ 272ನೇ ಜಯಂತಿ

5aa7b5f8-4656-4a06-b105-00a274d50681

ಹಾಗೂ ಶರಣ ವಚನಕಾರ ನುಲಿಯ ಚಂದಯ್ಯ ಅವರ 919ನೇ ಜಯಂತಿ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ದಂಡಾಧಿಕಾರಿ (ತಹಶೀಲ್ದಾರ್) ಎಂ. ಮಮತಾ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಸಿ.ಡಿ. ಚಂದ್ರಶೇಖರ್, "ಸಾಮಾಜಿಕ ಸಮಾನತೆ ಮತ್ತು

7d79dbd5-b492-44e0-af8f-c455788372e3

ಕಾಯಕ ತತ್ವದ ಮೂಲಕ ಮಹನೀಯರಿಬ್ಬರೂ ಸಮಾಜಕ್ಕೆ ನೀಡಿದ ಕೊಡುಗೆ ಅನನ್ಯ. ಅವರು ತೋರಿದ ಸಮ ಸಮಾಜದ ಪರಿಕಲ್ಪನೆ ಪ್ರತಿಯೊಬ್ಬರಿಗೂ ಮಾದರಿ" ಎಂದರು. ವಿಶೇಷ ಉಪನ್ಯಾಸ ನೀಡಿದ ನಿವೃತ್ತ ಶಿಕ್ಷಕ ದಿಬ್ಬದಹಳ್ಳಿ ಶ್ಯಾಮ್‌ಸುಂದರ್, ನಾರಾಯಣಗುರು ಹಾಗೂ ಶರಣ ನುಲಿಯ ಚಂದಯ್ಯ ಅವರ ಜೀವನ, ಸಿದ್ಧಾಂತ ಮತ್ತು ಸಮಾಜ ಸುಧಾರಣಾ ಚಿಂತನೆಗಳ ಕುರಿತು ಮಾಹಿತಿ

6c679cbc-cc3a-42b9-896e-59eb8b0ebf8f

ನೀಡಿದರು. ಸಭೆಯಲ್ಲಿ ತಾಲ್ಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ನಾಗರಾಜಪ್ಪ (ಎನ್‌ಜಿ), ಕೊರಚ ಸಮಾಜದ ಮಹಾಸಭಾ ಅಧ್ಯಕ್ಷ ಲಕ್ಷ್ಮೀಪುರ ಮಂಜುನಾಥ್, ಕೊರಮ ಸಮಾಜದ ಅಧ್ಯಕ್ಷ ರಂಗಸ್ವಾಮಿ, ಡಿಎಸ್‌ಎಸ್ ಸಂಚಾಲಕ ಯರೇಕಟ್ಟೆ ರಮೇಶ್, ಬೆಳ್ಳಾರ ಮಲ್ಲಿಕಾರ್ಜುನಯ್ಯ, ನರವಗಲ್ ನರಸಿಂಹಮೂರ್ತಿ, ಮಹಬೂಬ್ ಸಾಬ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ನಾಗರಿಕರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಹುಳಿಯಾರು ಹೋಬಳಿ ದಸೂಡಿ ಸೊಸೈಟಿಯಲ್ಲಿ ಸರ್ವರ್ ಸಮಸ್ಯೆ ತಿಂಗಳು ಮುಗಿಯುತ್ತಾ ಬಂದಿದ್ದರು ಅಕ್ಕಿ ಇನ್ನೂ ಸಿಕ್ಕಿಲ್ಲ ಹುಳಿಯಾರು ಹೋಬಳಿ ದಸೂಡಿ ಸೊಸೈಟಿಯಲ್ಲಿ ಸರ್ವರ್ ಸಮಸ್ಯೆ ತಿಂಗಳು ಮುಗಿಯುತ್ತಾ ಬಂದಿದ್ದರು ಅಕ್ಕಿ ಇನ್ನೂ ಸಿಕ್ಕಿಲ್ಲ
    1
    ಹುಳಿಯಾರು ಹೋಬಳಿ ದಸೂಡಿ ಸೊಸೈಟಿಯಲ್ಲಿ ಸರ್ವರ್ ಸಮಸ್ಯೆ ತಿಂಗಳು ಮುಗಿಯುತ್ತಾ ಬಂದಿದ್ದರು ಅಕ್ಕಿ ಇನ್ನೂ ಸಿಕ್ಕಿಲ್ಲ 
ಹುಳಿಯಾರು ಹೋಬಳಿ ದಸೂಡಿ ಸೊಸೈಟಿಯಲ್ಲಿ ಸರ್ವರ್ ಸಮಸ್ಯೆ ತಿಂಗಳು ಮುಗಿಯುತ್ತಾ ಬಂದಿದ್ದರು ಅಕ್ಕಿ ಇನ್ನೂ ಸಿಕ್ಕಿಲ್ಲ
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    4 hrs ago
  • ಕೊಡಗೀಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಶ್ರೀ ಕೃಷ್ಣ (ಅಜ್ಜಪ್ಪ) ಅವಿರೋಧ ಅಧ್ಯಕ್ಷರಾಗಿ ಆಯ್ಕೆ ಉಪಾಧ್ಯಕ್ಷೆಯಾಗಿ ಮಂಜಮ್ಮ ಆಯ್ಕೆ; ಬೆಂಬಲಿಗರಿಂದ ಪಟಾಕಿ, ಸಿಹಿ ಹಂಚಿಕೆ. ತುರುವೇಕೆರೆ, ಆ.27: ತಾಲೂಕಿನ ಕೊಡಗೀಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಕೃಷ್ಣ (ಅಜ್ಜಪ್ಪ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಸಂಘದ ಅಧ್ಯಕ್ಷರಾಗಿದ್ದ ಗುಡ್ಡೇನಹಳ್ಳಿಯ ನಂಜುಂಡಪ್ಪನವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶ್ರೀ ಕೃಷ್ಣ (ಅಜ್ಜಪ್ಪ) ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಅದೇ ರೀತಿ, ಹಿಂದಿನ ಉಪಾಧ್ಯಕ್ಷೆ ಎಂ.ಬಿ. ಜಯಲಕ್ಷ್ಮಮ್ಮನವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷೆ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಜಮ್ಮನವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಉಪಾಧ್ಯಕ್ಷೆಯಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎನ್. ಮಹೇಶ್ವರ್ ಅವರು ಘೋಷಣೆ ಮಾಡಿದರು. ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಶ್ರೀ ಕೃಷ್ಣ (ಅಜ್ಜಪ್ಪ) ಅವರು, ತಮ್ಮನ್ನು ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ, ಸಹಕಾರ ಸಂಘದ ಯಶಸ್ಸಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪ, ಮಂಜಮ್ಮ, ಯದುಕುಮಾರ್, ಪಾಂಡುರಂಗಯ್ಯ, ಚಿಕ್ಕಹನುಮಯ್ಯ, ವೆಂಕಟೇಶ್, ಯೋಗಾನಂದ, ರುದ್ರೇಶ್, ಮೋಹನ್, ಮುನಿರಾಜು, ದೇವರಾಜು, ಯಜಮಾನ್ ಮಹೇಶ್, ಪುಟ್ಟಸ್ವಾಮಿ ಗೌಡ, ಟಿ.ಡಿ.ಸಿ.ಸಿ.ಬಿ ಮೇಲ್ವಿಚಾರಕ ಭರತ್ ಹಾಗೂ ಸಿಬ್ಬಂದಿಗಳಾದ ರಘು, ಸವಿತಾ, ಮಹದೇವಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    4
    ಕೊಡಗೀಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಶ್ರೀ ಕೃಷ್ಣ (ಅಜ್ಜಪ್ಪ) ಅವಿರೋಧ ಅಧ್ಯಕ್ಷರಾಗಿ ಆಯ್ಕೆ

ಉಪಾಧ್ಯಕ್ಷೆಯಾಗಿ ಮಂಜಮ್ಮ ಆಯ್ಕೆ; ಬೆಂಬಲಿಗರಿಂದ ಪಟಾಕಿ, ಸಿಹಿ ಹಂಚಿಕೆ.


ತುರುವೇಕೆರೆ, ಆ.27: ತಾಲೂಕಿನ ಕೊಡಗೀಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಕೃಷ್ಣ (ಅಜ್ಜಪ್ಪ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಸಂಘದ ಅಧ್ಯಕ್ಷರಾಗಿದ್ದ ಗುಡ್ಡೇನಹಳ್ಳಿಯ ನಂಜುಂಡಪ್ಪನವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶ್ರೀ ಕೃಷ್ಣ (ಅಜ್ಜಪ್ಪ) ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಅದೇ ರೀತಿ, ಹಿಂದಿನ ಉಪಾಧ್ಯಕ್ಷೆ ಎಂ.ಬಿ. ಜಯಲಕ್ಷ್ಮಮ್ಮನವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷೆ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಜಮ್ಮನವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಉಪಾಧ್ಯಕ್ಷೆಯಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎನ್. ಮಹೇಶ್ವರ್ ಅವರು ಘೋಷಣೆ ಮಾಡಿದರು.
ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಶ್ರೀ ಕೃಷ್ಣ (ಅಜ್ಜಪ್ಪ) ಅವರು, ತಮ್ಮನ್ನು ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ, ಸಹಕಾರ ಸಂಘದ ಯಶಸ್ಸಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪ, ಮಂಜಮ್ಮ, ಯದುಕುಮಾರ್, ಪಾಂಡುರಂಗಯ್ಯ, ಚಿಕ್ಕಹನುಮಯ್ಯ, ವೆಂಕಟೇಶ್, ಯೋಗಾನಂದ, ರುದ್ರೇಶ್, ಮೋಹನ್, ಮುನಿರಾಜು, ದೇವರಾಜು, ಯಜಮಾನ್ ಮಹೇಶ್, ಪುಟ್ಟಸ್ವಾಮಿ ಗೌಡ, ಟಿ.ಡಿ.ಸಿ.ಸಿ.ಬಿ ಮೇಲ್ವಿಚಾರಕ ಭರತ್ ಹಾಗೂ ಸಿಬ್ಬಂದಿಗಳಾದ ರಘು, ಸವಿತಾ, ಮಹದೇವಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    1 day ago
  • ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ವಾಗ್ದಾಳಿ ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಹರಿಹಾಯ್ದಿದ್ದಾರೆ. ನಾಯಕನಹಟ್ಟಿ ಪಟ್ಟಣದಲ್ಲಿ ಅವರು ಮಾತನಾಡಿದ್ದು ನಾಯಕನಹಟ್ಟಿ ಸಂಡೂರು, ಮೊಳಕಾಲ್ಮೂರು ,ಕೂಡ್ಲಿಗಿ, ಬರಪಿಡಿತ ಪ್ರದೇಶವೆಂದು ಘೋಷಣೆ ಮಾಡಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಮೀಸಲಿಡಿ ಹಾಗೂ ಎಲ್ಲಾ ಕೆರೆಗಳಿಗೆ ನೀರು ತರುವಂತಹ ಕೆಲಸ ಕೆಲಸ ಮಾಡಿ ಹಾಗೂ ದನ ಕರೆಗಳಿಗೆ ಮೇವು ಕೊಡುವಂತ ಕೆಲಸ ಮಾಡಿ ಮಾಜಿ ಶಾಸಕ ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಬರಗಾಲ ಪ್ರದೇಶವೆಂದು ಘೋಷಣೆ ಮಾಡಬಹುದಾಗಿತ್ತಲ್ಲ ಯಾಕೆ ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡಲಿಲ್ಲ ಕಾಂಗ್ರೆಸ್ನವರು ಕ್ಷೇತ್ರವನ್ನು ಕಡೆಗಣಿಸಿದ್ದಾರೆ ಎಂದು ಆರೋಪ ಮಾಡಿದರು. ಮೊಳಕಾಲ್ಮೂರು ಶಾಸಕ ಗೋಪಾಲಕೃಷ್ಣರವರೆ ರಾಜ್ಯದಲ್ಲಿ ನಿಮ್ಮ ಸರ್ಕಾರ ಇದೆ ಯಲ್ಲ ಯಾಕೆ ಬರಗಾಲ ಪ್ರದೇಶವೆಂದು ಘೋಷಣೆ ಮಾಡಲಿಲ್ಲ. ಮೊಳಕಾಲ್ಮೂರು ಕ್ಷೇತ್ರವನ್ನು ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡದೆ ಹೋದರೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಅತ್ಯಂತ ಹಿಂದುಳಿದಂತ ಕ್ಷೇತ್ರವಾಗಿದೆ ರೈತರು ತೀರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸಾಲ ಮಾಡಿ ಬಿತ್ತನೆ ಮಾಡಿದ್ದಾರೆ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರಿಂದ ರೈತರ ಆರ್ಥಿಕ ಪರಿಸ್ಥಿತಿ ಅದೇಗೆಟ್ಟಿದೆ ಬೆಳೆ ಕೈಗೆ ಸಿಗುವುದು ಅನುಮಾನವಾಗಿದ್ದು ಈ ಹಿನ್ನೆಲೆ ಶಾಸಕರು ಆದಷ್ಟು ಬೇಗ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡುವಂತೆ ಆಗ್ರಹ ಮಾಡಿದ್ದಾರೆ.
    1
    ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ವಾಗ್ದಾಳಿ
ಮೊಳಕಾಲ್ಮೂರು ಶಾಸಕರ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ಹರಿಹಾಯ್ದಿದ್ದಾರೆ.  ನಾಯಕನಹಟ್ಟಿ ಪಟ್ಟಣದಲ್ಲಿ ಅವರು ಮಾತನಾಡಿದ್ದು
ನಾಯಕನಹಟ್ಟಿ ಸಂಡೂರು, ಮೊಳಕಾಲ್ಮೂರು ,ಕೂಡ್ಲಿಗಿ, ಬರಪಿಡಿತ ಪ್ರದೇಶವೆಂದು ಘೋಷಣೆ ಮಾಡಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಮೀಸಲಿಡಿ ಹಾಗೂ ಎಲ್ಲಾ ಕೆರೆಗಳಿಗೆ ನೀರು ತರುವಂತಹ ಕೆಲಸ ಕೆಲಸ ಮಾಡಿ ಹಾಗೂ ದನ ಕರೆಗಳಿಗೆ ಮೇವು ಕೊಡುವಂತ ಕೆಲಸ ಮಾಡಿ ಮಾಜಿ ಶಾಸಕ ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಬರಗಾಲ ಪ್ರದೇಶವೆಂದು ಘೋಷಣೆ ಮಾಡಬಹುದಾಗಿತ್ತಲ್ಲ ಯಾಕೆ ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡಲಿಲ್ಲ ಕಾಂಗ್ರೆಸ್ನವರು ಕ್ಷೇತ್ರವನ್ನು ಕಡೆಗಣಿಸಿದ್ದಾರೆ ಎಂದು ಆರೋಪ ಮಾಡಿದರು. ಮೊಳಕಾಲ್ಮೂರು ಶಾಸಕ ಗೋಪಾಲಕೃಷ್ಣರವರೆ ರಾಜ್ಯದಲ್ಲಿ ನಿಮ್ಮ ಸರ್ಕಾರ ಇದೆ ಯಲ್ಲ ಯಾಕೆ ಬರಗಾಲ ಪ್ರದೇಶವೆಂದು ಘೋಷಣೆ ಮಾಡಲಿಲ್ಲ. ಮೊಳಕಾಲ್ಮೂರು ಕ್ಷೇತ್ರವನ್ನು ಬರಪಿಡಿತ ಪ್ರದೇಶ ಒಂದು ಘೋಷಣೆ ಮಾಡದೆ ಹೋದರೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಅತ್ಯಂತ ಹಿಂದುಳಿದಂತ ಕ್ಷೇತ್ರವಾಗಿದೆ ರೈತರು ತೀರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸಾಲ ಮಾಡಿ ಬಿತ್ತನೆ ಮಾಡಿದ್ದಾರೆ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇದರಿಂದ ರೈತರ ಆರ್ಥಿಕ ಪರಿಸ್ಥಿತಿ ಅದೇಗೆಟ್ಟಿದೆ ಬೆಳೆ ಕೈಗೆ ಸಿಗುವುದು ಅನುಮಾನವಾಗಿದ್ದು ಈ ಹಿನ್ನೆಲೆ ಶಾಸಕರು ಆದಷ್ಟು ಬೇಗ ತಾಲ್ಲೂಕನ್ನ ಬರಪೀಡಿತ ಎಂದು ಘೋಷಣೆ ಮಾಡುವಂತೆ ಆಗ್ರಹ ಮಾಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 min ago
  • ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು. ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ನಗರದ ಕುವೆಂಪು ಆಂಗ್ಲ ಮಾಧ್ಯಮ ಪ್ರೌಢಶಾಲೆ ಆವರಣದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಹೈನುಗಾರಿಕೆಯಿಂದ ಜೀವನೋಪಾಯ’ ವಿಷಯದ ಚಿತ್ರಕಲಾ ಸ್ಪರ್ಧೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಮಾತನಾಡಿ ಶಿವಮೊಗ್ಗ ಹಾಲು ಒಕ್ಕೂಟದ ಚಿತ್ರದುರ್ಗ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಂದಿನಿ ಉತ್ಪನ್ನಗಳ ಪರಿಚಯ ಮಾಡಿಸುವುದು, ಹೈನುಗಾರಿಕೆಯಿಂದ ರೈತರಿಗೆ ಆಗುವ ಪ್ರಯೋಜನಗಳ ಕುರಿತು ಅರಿವು ಮೂಡಿಸುವುದು ಹಾಗೂ ವಿದ್ಯಾರ್ಥಿಗಳ ಅನಿಸಿಕೆಗಳನ್ನು ಚಿತ್ರಗಳ ಮೂಲಕ ಅಭಿವ್ಯಕ್ತಿಗೊಳಿಸಲು ವೇದಿಕೆ ಕಲ್ಪಿಸುವುದು ಸ್ಪರ್ಧೆಯ ಮುಖ್ಯ ಉದ್ದೇಶವಾಗಿದೆ.ಇಂದು ಗ್ರಾಮೀಣ ಭಾಗದ ಅನೇಕ ರೈತ ಕುಟುಂಬಗಳು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಹಲವರಿಗೆ ಇದು ಪ್ರಮುಖ ಜೀವನೋಪಾಯವಾಗಿದೆ. ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು. ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದರು. ಚಿತ್ರಕಲಾ ಸ್ಪರ್ಧೆಯಲ್ಲಿ ಗ್ರಾಮಾಂತರ ಪ್ರೌಢಶಾಲೆ, ಪರಶುರಾಂಪುರದ ಈಶ್ವರಮ್ಮ ಜೆ. ಪ್ರಥಮ, ಆದರ್ಶ ಶಾಲೆಯ ದ್ರಾಕ್ಷಾಯಿಣಿ ಎಲ್. ದ್ವಿತೀಯ ಹಾಗೂ ಸಾಗರ್ ಎಂ.ಡಿ. ತೃತೀಯ ಸ್ಥಾನ ಪಡೆದು ಬಹುಮಾನ ಗಳಿಸಿದರು. .
    1
    ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು.

ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ

ನಗರದ ಕುವೆಂಪು ಆಂಗ್ಲ ಮಾಧ್ಯಮ ಪ್ರೌಢಶಾಲೆ ಆವರಣದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಹೈನುಗಾರಿಕೆಯಿಂದ ಜೀವನೋಪಾಯ’ ವಿಷಯದ ಚಿತ್ರಕಲಾ ಸ್ಪರ್ಧೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ  ಅಧ್ಯಕ್ಷತೆ ವಹಿಸಿದ್ದ  ಮಾತನಾಡಿ ಶಿವಮೊಗ್ಗ ಹಾಲು ಒಕ್ಕೂಟದ ಚಿತ್ರದುರ್ಗ ಜಿಲ್ಲಾ ನಿರ್ದೇಶಕ ಬಿ.ಸಿ. ಸಂಜೀವಮೂರ್ತಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಂದಿನಿ ಉತ್ಪನ್ನಗಳ ಪರಿಚಯ ಮಾಡಿಸುವುದು, ಹೈನುಗಾರಿಕೆಯಿಂದ ರೈತರಿಗೆ ಆಗುವ ಪ್ರಯೋಜನಗಳ ಕುರಿತು ಅರಿವು ಮೂಡಿಸುವುದು ಹಾಗೂ ವಿದ್ಯಾರ್ಥಿಗಳ ಅನಿಸಿಕೆಗಳನ್ನು ಚಿತ್ರಗಳ ಮೂಲಕ ಅಭಿವ್ಯಕ್ತಿಗೊಳಿಸಲು ವೇದಿಕೆ ಕಲ್ಪಿಸುವುದು ಸ್ಪರ್ಧೆಯ ಮುಖ್ಯ ಉದ್ದೇಶವಾಗಿದೆ.ಇಂದು ಗ್ರಾಮೀಣ ಭಾಗದ ಅನೇಕ ರೈತ ಕುಟುಂಬಗಳು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಹಲವರಿಗೆ ಇದು ಪ್ರಮುಖ ಜೀವನೋಪಾಯವಾಗಿದೆ. ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ನಂದಿನಿ ಸಂಸ್ಥೆಯು ನೂರಾರು ಉತ್ಪನ್ನಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ಸೇರಿದಂತೆ ಬರಪೀಡಿತ ಪ್ರದೇಶಗಳಲ್ಲಿಯೂ ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ತೋರುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು.
ಮಕ್ಕಳಲ್ಲಿ ಹಾಲಿನ ಮಹತ್ವ ಹಾಗೂ ಪೌಷ್ಟಿಕಾಂಶದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕ್ಷೀರ ಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ವಿತರಿಸುತ್ತಿದೆ. ನಂದಿನಿ ಉತ್ಪನ್ನಗಳ ಬಳಕೆ ಹೆಚ್ಚಿದಂತೆ ಹೈನುಗಾರಿಕೆ ಅವಲಂಬಿಸಿರುವ ರೈತರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದರು.
ಚಿತ್ರಕಲಾ ಸ್ಪರ್ಧೆಯಲ್ಲಿ ಗ್ರಾಮಾಂತರ ಪ್ರೌಢಶಾಲೆ, ಪರಶುರಾಂಪುರದ ಈಶ್ವರಮ್ಮ ಜೆ. ಪ್ರಥಮ, ಆದರ್ಶ ಶಾಲೆಯ ದ್ರಾಕ್ಷಾಯಿಣಿ ಎಲ್. ದ್ವಿತೀಯ ಹಾಗೂ ಸಾಗರ್ ಎಂ.ಡಿ. ತೃತೀಯ ಸ್ಥಾನ ಪಡೆದು ಬಹುಮಾನ ಗಳಿಸಿದರು.
.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಬರದ ನಾಡಿನಲ್ಲಿ ಬಡ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ವೇದ ಸಂಸ್ಥೆಯ ಕಾರ್ಯ ಶ್ಲಾಘನೀಯ: ಸಚಿವ ಟಿ. ರಘುಮೂರ್ತಿ ಬಣ್ಣನೆ ಚಳ್ಳಕೆರೆ:ನಮ್ಮ ಈ ಬರದ ನಾಡಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ವೇದ ಶಿಕ್ಷಣ ಸಂಸ್ಥೆಯ ಕಾರ್ಯ ನಿಜಕ್ಕೂ ಶ್ಲಾಘನೀಯ. ಗ್ರಾಮೀಣ ಭಾಗದ ಬಡವರ ಮಕ್ಕಳಿಗೆ ಅತ್ಯಂತ ಕಡಿಮೆ ಶುಲ್ಕದಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವುದು ನಮ್ಮೆಲ್ಲರ ಭಾಗ್ಯವಾಗಿದೆ. ಶೈಕ್ಷಣಿಕವಾಗಿ ಈ ಭಾಗದ ಅಭಿವೃದ್ಧಿಗೆ ಸಂಸ್ಥೆಯ ಕೊಡುಗೆ ಅಪಾರ ಎಂದು ರಾಜ್ಯ ಸರ್ಕಾರದ ಸಚಿವ ಟಿ. ರಘುಮೂರ್ತಿ ಅವರು ಮುಕ್ತಕಂಠದಿಂದ ಪ್ರಶಂಸಿಸಿದರು. ಚಳ್ಳಕೆರೆ ತಾಲೂಕಿನ ಸಾಣಿಕೆರೆಯಲ್ಲಿರುವ ವೇದ ಶೈಕ್ಷಣಿಕ ಅಭಿವೃದ್ಧಿ ಅಕಾಡೆಮಿ ಹಾಗೂ ವೇದ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಶುಕ್ರವಾರ ವಿಜೃಂಭಣೆಯಿಂದ ಜರುಗಿದ ನೂತನ 'ಆದಿಯೋಗಿ' ಶಿಲಾಮೂರ್ತಿ ಪ್ರತಿಷ್ಠಾಪನೆ ಹಾಗೂ ಸಂಸ್ಥಾಪಕರ ದಿನಾಚರಣೆ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಗ್ರಾಮೀಣ ಮಟ್ಟದಲ್ಲಿ ಸಂಸ್ಥೆಯು ನೀಡುತ್ತಿರುವ ಶೈಕ್ಷಣಿಕ ಸೇವೆಯನ್ನು ಸಚಿವರು ಈ ಸಂದರ್ಭದಲ್ಲಿ ವಿಶೇಷವಾಗಿ ಶ್ಲಾಘಿಸಿದರು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ತುಮಕೂರು ಸಿದ್ದಗಂಗಾ ಮಠದ ಪರಮ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, "ಶಿಕ್ಷಣವು ಸಮಾಜದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಒದಗಿಸುವ ಏಕೈಕ ಮಾರ್ಗವಾಗಿದೆ. ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬವೇ ಸುಶಿಕ್ಷಿತವಾಗುತ್ತದೆ. ವಿದ್ಯಾರ್ಥಿಗಳು ಅಕ್ಷರ ಜ್ಞಾನದ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳಿಗೆ ಒತ್ತು ನೀಡಬೇಕು" ಎಂದು ಕಿವಿಮಾತು ಹೇಳಿದರು. ಸಿದ್ದರಬೆಟ್ಟದ ಶ್ರೀ ವೀರಭದ್ರ ಮಹಾಸ್ವಾಮಿಗಳು ಸಹ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಶಾಸಕ ವೀರೇಂದ್ರ ಪಪ್ಪಿ ಅವರು ಸಹ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಈ ಸಮಾರಂಭದ ಅಧ್ಯಕ್ಷತೆಯನ್ನು ವೇದ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಿ.ಟಿ. ರವೀಂದ್ರ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಕಿರಣ್, ಅಧೀಕ್ಷಕರಾದ ವಿರೂಪಾಕ್ಷಪ್ಪ ಸಿ., ಪ್ರಾಂಶುಪಾಲರಾದ ಸಂದೀಪ್, ಮುಖ್ಯೋಪಾಧ್ಯಾಯಿನಿಯಾದ ಪುಷ್ಪರಾಣಿ, ಹಾಗೂ ಪ್ರಮುಖರಾದ ರವಿಕುಮಾರ್, ಯೋಗೇಶ್, ಸತೀಶ್, ಸಾಗರ್ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ನೂರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
    1
    ಬರದ ನಾಡಿನಲ್ಲಿ ಬಡ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ವೇದ ಸಂಸ್ಥೆಯ ಕಾರ್ಯ ಶ್ಲಾಘನೀಯ: ಸಚಿವ ಟಿ. ರಘುಮೂರ್ತಿ ಬಣ್ಣನೆ

ಚಳ್ಳಕೆರೆ:ನಮ್ಮ ಈ ಬರದ ನಾಡಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ವೇದ ಶಿಕ್ಷಣ ಸಂಸ್ಥೆಯ ಕಾರ್ಯ ನಿಜಕ್ಕೂ ಶ್ಲಾಘನೀಯ. ಗ್ರಾಮೀಣ ಭಾಗದ ಬಡವರ ಮಕ್ಕಳಿಗೆ ಅತ್ಯಂತ ಕಡಿಮೆ ಶುಲ್ಕದಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವುದು ನಮ್ಮೆಲ್ಲರ ಭಾಗ್ಯವಾಗಿದೆ. ಶೈಕ್ಷಣಿಕವಾಗಿ ಈ ಭಾಗದ ಅಭಿವೃದ್ಧಿಗೆ ಸಂಸ್ಥೆಯ ಕೊಡುಗೆ ಅಪಾರ ಎಂದು ರಾಜ್ಯ ಸರ್ಕಾರದ ಸಚಿವ ಟಿ. ರಘುಮೂರ್ತಿ ಅವರು ಮುಕ್ತಕಂಠದಿಂದ ಪ್ರಶಂಸಿಸಿದರು.
ಚಳ್ಳಕೆರೆ ತಾಲೂಕಿನ ಸಾಣಿಕೆರೆಯಲ್ಲಿರುವ ವೇದ ಶೈಕ್ಷಣಿಕ ಅಭಿವೃದ್ಧಿ ಅಕಾಡೆಮಿ ಹಾಗೂ ವೇದ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಶುಕ್ರವಾರ ವಿಜೃಂಭಣೆಯಿಂದ ಜರುಗಿದ ನೂತನ 'ಆದಿಯೋಗಿ' ಶಿಲಾಮೂರ್ತಿ ಪ್ರತಿಷ್ಠಾಪನೆ ಹಾಗೂ ಸಂಸ್ಥಾಪಕರ ದಿನಾಚರಣೆ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಗ್ರಾಮೀಣ ಮಟ್ಟದಲ್ಲಿ ಸಂಸ್ಥೆಯು ನೀಡುತ್ತಿರುವ ಶೈಕ್ಷಣಿಕ ಸೇವೆಯನ್ನು ಸಚಿವರು ಈ ಸಂದರ್ಭದಲ್ಲಿ ವಿಶೇಷವಾಗಿ ಶ್ಲಾಘಿಸಿದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ತುಮಕೂರು ಸಿದ್ದಗಂಗಾ ಮಠದ ಪರಮ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, "ಶಿಕ್ಷಣವು ಸಮಾಜದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಒದಗಿಸುವ ಏಕೈಕ ಮಾರ್ಗವಾಗಿದೆ. ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬವೇ ಸುಶಿಕ್ಷಿತವಾಗುತ್ತದೆ. ವಿದ್ಯಾರ್ಥಿಗಳು ಅಕ್ಷರ ಜ್ಞಾನದ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳಿಗೆ ಒತ್ತು ನೀಡಬೇಕು" ಎಂದು ಕಿವಿಮಾತು ಹೇಳಿದರು. ಸಿದ್ದರಬೆಟ್ಟದ ಶ್ರೀ ವೀರಭದ್ರ ಮಹಾಸ್ವಾಮಿಗಳು ಸಹ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಶಾಸಕ ವೀರೇಂದ್ರ ಪಪ್ಪಿ ಅವರು ಸಹ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಈ ಸಮಾರಂಭದ ಅಧ್ಯಕ್ಷತೆಯನ್ನು ವೇದ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಿ.ಟಿ. ರವೀಂದ್ರ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಕಿರಣ್, ಅಧೀಕ್ಷಕರಾದ ವಿರೂಪಾಕ್ಷಪ್ಪ ಸಿ., ಪ್ರಾಂಶುಪಾಲರಾದ ಸಂದೀಪ್, ಮುಖ್ಯೋಪಾಧ್ಯಾಯಿನಿಯಾದ ಪುಷ್ಪರಾಣಿ, ಹಾಗೂ ಪ್ರಮುಖರಾದ ರವಿಕುಮಾರ್, ಯೋಗೇಶ್, ಸತೀಶ್, ಸಾಗರ್ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ನೂರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
    user_Kiran M J
    Kiran M J
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಸಂಜೆ 4:30 ಯಿಂದ ರಾತ್ರಿ 9:30ರ ವರೆಗೆ ನೂರಾರು ಲಾರಿಗಳು ರಸ್ತೆಗೆ ಅಡ್ಡ ದಿಡ್ಡಿ ನಿಲ್ಲಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳ ವಾಹನಗಳಿಗೆ ತೊಂದರೆ ಮಾಡಿದ್ದಾರೆ. ಸಂಜೆ 4:30 ಯಿಂದ ರಾತ್ರಿ 9:30ರ ವರೆಗೆ ನೂರಾರು ಲಾರಿಗಳು ರಸ್ತೆಗೆ ಅಡ್ಡ ದಿಡ್ಡಿ ನಿಲ್ಲಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳ ವಾಹನಗಳಿಗೆ ತೊಂದರೆ ಮಾಡಿದ್ದಾರೆ. ಪೊಲೀಸರು ಎಷ್ಟು ಬಾರಿ ಈ ರೀತಿ ರಸ್ತೆ ಅಡ್ಡ ಮಾಡಬೇಡಿ ಎಂದು ಹೇಳಿದರೂ ಸಹ ಲಾರಿ ಚಾಲಕರು ಇದೇ ರೀತಿಯ ಕಾನೂನು ಬಾಹಿರ ಕೃತ್ಯಗಳನ್ನು ಮಾಡಿಕೊಂಡೇ ಬರುತ್ತಿದ್ದಾರೆ. ಅಚಾತುರ್ಯ ಎಂದರೆ ನಾನು ಈಗ ಇಲ್ಲಿಯೇ ಸಾಯುತ್ತೇನೆಂದು ದೇಹದ ಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚುವ ನಾಟಕದ ಕೃತ್ಯ ಅಚ್ಚರಿ ಎನಿಸಿತು. ಸ್ಥಳದಲ್ಲಿರುವ ಪೊಲೀಸರು ಮತ್ತು ಸಾರ್ವಜನಿಕರ ಮೇಲೆ ಡೀಸೆಲ್ ಎರಚಿದರು. ಸ್ಥಳಕ್ಕೆ ಬಾಲಚಂದ್ರ ನಾಯಕ್ (ಸರ್ಕಲ್ ಇನ್ಸ್ಪೆಕ್ಟರ್) ಮತ್ತು ತಂಡ ಆಗಮಿಸಿ ಲಾರಿ ಚಾಲಕರನ್ನು ಅಲ್ಲಿಂದ ಖಾಲಿ ಮಾಡಿಸಿದರು. ರೈತರು ರೈಲ್ವೆ ಅಂಡರ್ ಪಾಸ್ ನಿಂದ ತಮ್ಮ ಪ್ರತಿಭಟನಾ ಸ್ಥಳಕ್ಕೆ ತೆರಳಿದರು. ಜನರು ಕಾಲಿ ಆಗುತ್ತಿದ್ದಂತೆ ಲಾರಿ ಚಾಲಕರು ಊರಿನ ಒಳಗಡೆ ಬರಲು ಪ್ರಾರಂಭಿಸಿದರು. ಆದರೆ ಗ್ರಾಮಸ್ಥರು ಲಾರಿಗಳನ್ನು ತಡೆದು ಕೇಂದ್ರ ಸರ್ಕಾರದ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನೀವುಗಳು ಜನ ವಸತಿ ಇರುವ ಹಳ್ಳಿಗಳ ರಸ್ತೆಯಲ್ಲಿ ಅದಿರು ತುಂಬಿದ ಲಾರಿಗಳು ಸಂಚಾರ ಮಾಡುವಂತಿಲ್ಲ ಎಂದು ಶಾಂತಿಯುತವಾಗಿ ಪ್ರತಿಭಟನಾ ಸ್ಥಳದಲ್ಲಿ ಕುಳಿತರು.
    1
    ಸಂಜೆ 4:30 ಯಿಂದ ರಾತ್ರಿ 9:30ರ ವರೆಗೆ ನೂರಾರು ಲಾರಿಗಳು ರಸ್ತೆಗೆ ಅಡ್ಡ ದಿಡ್ಡಿ ನಿಲ್ಲಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳ ವಾಹನಗಳಿಗೆ ತೊಂದರೆ ಮಾಡಿದ್ದಾರೆ.
ಸಂಜೆ 4:30 ಯಿಂದ ರಾತ್ರಿ 9:30ರ ವರೆಗೆ ನೂರಾರು ಲಾರಿಗಳು ರಸ್ತೆಗೆ ಅಡ್ಡ ದಿಡ್ಡಿ ನಿಲ್ಲಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳ ವಾಹನಗಳಿಗೆ ತೊಂದರೆ ಮಾಡಿದ್ದಾರೆ.
ಪೊಲೀಸರು ಎಷ್ಟು ಬಾರಿ ಈ ರೀತಿ ರಸ್ತೆ ಅಡ್ಡ ಮಾಡಬೇಡಿ ಎಂದು ಹೇಳಿದರೂ ಸಹ ಲಾರಿ ಚಾಲಕರು ಇದೇ ರೀತಿಯ ಕಾನೂನು ಬಾಹಿರ ಕೃತ್ಯಗಳನ್ನು ಮಾಡಿಕೊಂಡೇ ಬರುತ್ತಿದ್ದಾರೆ. ಅಚಾತುರ್ಯ ಎಂದರೆ ನಾನು ಈಗ ಇಲ್ಲಿಯೇ ಸಾಯುತ್ತೇನೆಂದು ದೇಹದ ಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚುವ ನಾಟಕದ ಕೃತ್ಯ ಅಚ್ಚರಿ ಎನಿಸಿತು. ಸ್ಥಳದಲ್ಲಿರುವ ಪೊಲೀಸರು ಮತ್ತು ಸಾರ್ವಜನಿಕರ ಮೇಲೆ ಡೀಸೆಲ್ ಎರಚಿದರು.  ಸ್ಥಳಕ್ಕೆ ಬಾಲಚಂದ್ರ ನಾಯಕ್ (ಸರ್ಕಲ್ ಇನ್ಸ್ಪೆಕ್ಟರ್) ಮತ್ತು ತಂಡ ಆಗಮಿಸಿ ಲಾರಿ ಚಾಲಕರನ್ನು ಅಲ್ಲಿಂದ ಖಾಲಿ ಮಾಡಿಸಿದರು. ರೈತರು ರೈಲ್ವೆ ಅಂಡರ್ ಪಾಸ್ ನಿಂದ ತಮ್ಮ ಪ್ರತಿಭಟನಾ ಸ್ಥಳಕ್ಕೆ ತೆರಳಿದರು. ಜನರು ಕಾಲಿ ಆಗುತ್ತಿದ್ದಂತೆ ಲಾರಿ ಚಾಲಕರು ಊರಿನ ಒಳಗಡೆ ಬರಲು ಪ್ರಾರಂಭಿಸಿದರು. ಆದರೆ ಗ್ರಾಮಸ್ಥರು ಲಾರಿಗಳನ್ನು ತಡೆದು ಕೇಂದ್ರ ಸರ್ಕಾರದ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನೀವುಗಳು ಜನ ವಸತಿ ಇರುವ ಹಳ್ಳಿಗಳ ರಸ್ತೆಯಲ್ಲಿ ಅದಿರು ತುಂಬಿದ ಲಾರಿಗಳು ಸಂಚಾರ ಮಾಡುವಂತಿಲ್ಲ ಎಂದು ಶಾಂತಿಯುತವಾಗಿ ಪ್ರತಿಭಟನಾ ಸ್ಥಳದಲ್ಲಿ ಕುಳಿತರು.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    5 hrs ago
  • ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ದೊಡ್ಡ ಮಟ್ಟದ ಶಬ್ದ ಎರಡು ಕಾರುಗಳ ನಡುವೆ ಬೀಕರ ಅಪಘಾತ ಗೋಡೆಕೆರೆ ಗೇಟ್ ಬಳಿ ಭೀಕರ ಅಪಘಾತ: ನಾಲ್ವರು ಸಾವು, ಮೂವರಿಗೆ ಗಾಯ ಚಿಕ್ಕನಾಯಕನಹಳ್ಳಿ: ತಾಲೂಕಿನ ಗೋಡೆಕೆರೆ ಗೇಟ್ ಬಳಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆ ವೇಳೆಯಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಕೆ.ಬಿ. ಕ್ರಾಸ್ ಕಡೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಪಟ್ಟಣದ ನಿವಾಸಿಗಳಾದ ಅನಿಲ್ (31) ಹಾಗೂ ವಿವೇಕ್ (32) ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಅನಿಲ್ ಹಾಗೂ ವಿವೇಕ್ ಮೃತಪಟ್ಟಿದ್ದಾರೆ. ಇದೇ ಕಾರಿನಲ್ಲಿದ್ದ ನಿಶಾನಿ ಅನಿಲ್ (31) ಅವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕಳುಹಿಸಲಾಗಿದೆ. ಮತ್ತೊಂದು ಕಾರು ಚಿಕ್ಕನಾಯಕನಹಳ್ಳಿಯ ತಾತಯ್ಯನವರ ದರ್ಗಾಕ್ಕೆ ಭೇಟಿ ನೀಡಿ ತುರುವೇಕೆರೆ ಕಡೆಗೆ ತೆರಳುತ್ತಿತ್ತು. ಈ ಕಾರಿನಲ್ಲಿ 3 ವರ್ಷದ ಹೆಣ್ಣು ಮಗು ಅನಾಫಾತಿಮ ಹಾಗೂ ಚಾಲಕ ದಾವೂದ್ (45) ಸೇರಿದಂತೆ ಪ್ರಯಾಣಿಕರು ಇದ್ದರು. ಅಪಘಾತದಲ್ಲಿ ಅನಾಫಾತಿಮ ಹಾಗೂ ಚಾಲಕ ದಾವೂದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
    1
    ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ದೊಡ್ಡ ಮಟ್ಟದ ಶಬ್ದ ಎರಡು ಕಾರುಗಳ ನಡುವೆ ಬೀಕರ ಅಪಘಾತ 
ಗೋಡೆಕೆರೆ ಗೇಟ್ ಬಳಿ ಭೀಕರ ಅಪಘಾತ: ನಾಲ್ವರು ಸಾವು, ಮೂವರಿಗೆ ಗಾಯ
ಚಿಕ್ಕನಾಯಕನಹಳ್ಳಿ: ತಾಲೂಕಿನ ಗೋಡೆಕೆರೆ ಗೇಟ್ ಬಳಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆ ವೇಳೆಯಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.
ಕೆ.ಬಿ. ಕ್ರಾಸ್ ಕಡೆಯಿಂದ ಚಿಕ್ಕನಾಯಕನಹಳ್ಳಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಪಟ್ಟಣದ ನಿವಾಸಿಗಳಾದ ಅನಿಲ್ (31) ಹಾಗೂ ವಿವೇಕ್ (32) ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಅನಿಲ್ ಹಾಗೂ ವಿವೇಕ್ ಮೃತಪಟ್ಟಿದ್ದಾರೆ. ಇದೇ ಕಾರಿನಲ್ಲಿದ್ದ ನಿಶಾನಿ ಅನಿಲ್ (31) ಅವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕಳುಹಿಸಲಾಗಿದೆ.
ಮತ್ತೊಂದು ಕಾರು ಚಿಕ್ಕನಾಯಕನಹಳ್ಳಿಯ ತಾತಯ್ಯನವರ ದರ್ಗಾಕ್ಕೆ ಭೇಟಿ ನೀಡಿ ತುರುವೇಕೆರೆ ಕಡೆಗೆ ತೆರಳುತ್ತಿತ್ತು. ಈ ಕಾರಿನಲ್ಲಿ 3 ವರ್ಷದ ಹೆಣ್ಣು ಮಗು ಅನಾಫಾತಿಮ ಹಾಗೂ ಚಾಲಕ ದಾವೂದ್ (45) ಸೇರಿದಂತೆ ಪ್ರಯಾಣಿಕರು ಇದ್ದರು. ಅಪಘಾತದಲ್ಲಿ ಅನಾಫಾತಿಮ ಹಾಗೂ ಚಾಲಕ ದಾವೂದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    31 min ago
  • ಚಿಕ್ಕನಾಯಕನಹಳ್ಳಿ ಎರಡು ಕಾರುಗಳ ನಡುವೆ ಬೀಗರ ಅಪಘಾತ ನಾಲ್ಕು ಸಾವು ಚಿಕ್ಕನಾಯಕನಹಳ್ಳಿ ತಾಲೂಕು ಗೋಡೆಗೆರೆ ಬಳಿ 2 ಕಾರುಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದು ಇನ್ನೂ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ ಭೀಕರ ಅಪಘಾತಕ್ಕೆ ಇಡಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ತುರುವೇಕೆರೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    1
    ಚಿಕ್ಕನಾಯಕನಹಳ್ಳಿ ಎರಡು ಕಾರುಗಳ ನಡುವೆ ಬೀಗರ ಅಪಘಾತ ನಾಲ್ಕು ಸಾವು 
ಚಿಕ್ಕನಾಯಕನಹಳ್ಳಿ ತಾಲೂಕು ಗೋಡೆಗೆರೆ ಬಳಿ 2 ಕಾರುಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದು ಇನ್ನೂ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ ಭೀಕರ ಅಪಘಾತಕ್ಕೆ ಇಡಿ  ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ತುರುವೇಕೆರೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    51 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.