logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಾವೇರಿ ಕಾವು ಖಾಲಿ ತಟ್ಟೆ-ಲೋಟ ಹಿಡಿದು ಪ್ರತಿಭಟನೆ, ವಿಜಯ್ ಪೋಸ್ಟರ್ ಹರಿದು ಆಕ್ರೋಶ ಚಾಮರಾಜನಗರ, ಜು. 31: ಕಾವೇರಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ತಮಿಳು ನಟ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅಭಿನಯದ 'ಜನನಾಯಗನ್' ಚಿತ್ರದ ಪ್ರದರ್ಶನವನ್ನು ವಿರೋಧಿಸಿ ರೈತರು ಶನಿವಾರ ನಗರದ ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಖಾಲಿ ತಟ್ಟೆ ಮತ್ತು ಲೋಟ ಹಿಡಿದು ಬಾರಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ವಿರುದ್ಧವೂ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ಹೊರಹಾಕಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಚಿತ್ರಮಂದಿರದ ಆಡಳಿತ ಮಂಡಳಿ ದಿನದ ನಾಲ್ಕು ಪ್ರದರ್ಶನಗಳನ್ನು ರದ್ದುಪಡಿಸಿತು. ಯಾವುದೇ ಕಾರಣಕ್ಕೂ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನಾನಿರತ ರೈತರು ಎಚ್ಚರಿಕೆ ನೀಡಿದರು.

17 hrs ago
user_ಚಾಮರಾಜನಗರ ಸುದ್ದಿ ಮನೆ
ಚಾಮರಾಜನಗರ ಸುದ್ದಿ ಮನೆ
ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
17 hrs ago

ಕಾವೇರಿ ಕಾವು ಖಾಲಿ ತಟ್ಟೆ-ಲೋಟ ಹಿಡಿದು ಪ್ರತಿಭಟನೆ, ವಿಜಯ್ ಪೋಸ್ಟರ್ ಹರಿದು ಆಕ್ರೋಶ ಚಾಮರಾಜನಗರ, ಜು. 31: ಕಾವೇರಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ತಮಿಳು ನಟ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅಭಿನಯದ 'ಜನನಾಯಗನ್' ಚಿತ್ರದ ಪ್ರದರ್ಶನವನ್ನು ವಿರೋಧಿಸಿ ರೈತರು ಶನಿವಾರ ನಗರದ ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಖಾಲಿ ತಟ್ಟೆ ಮತ್ತು ಲೋಟ ಹಿಡಿದು ಬಾರಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ವಿರುದ್ಧವೂ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ಹೊರಹಾಕಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಚಿತ್ರಮಂದಿರದ ಆಡಳಿತ ಮಂಡಳಿ ದಿನದ ನಾಲ್ಕು ಪ್ರದರ್ಶನಗಳನ್ನು ರದ್ದುಪಡಿಸಿತು. ಯಾವುದೇ ಕಾರಣಕ್ಕೂ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನಾನಿರತ ರೈತರು ಎಚ್ಚರಿಕೆ ನೀಡಿದರು.

More news from ಕರ್ನಾಟಕ and nearby areas
  • ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ 4 ದಿನಕ್ಕೆ: ಜಿಲ್ಲಾಧಿಕಾರಿ ಭೇಟಿ, ನೀರು ಬಿಡುವ ಭರವಸೆ. ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ 4 ದಿನಕ್ಕೆ: ಜಿಲ್ಲಾಧಿಕಾರಿ ಭೇಟಿ, ನೀರು ಬಿಡುವ ಭರವಸೆ. ಅಹೋರಾತ್ರಿ ಧರಣಿಗೆ ಬಿಜೆಪಿ ಬೆಂಬಲ, ಕೆರೆಗಳಿಗೆ ನೀರು ತುಂಬಿಸುವ ತನಕ ಅಹೋರಾತ್ರಿ ಧರಣಿ ಕೈ ಬಿಡಲ್ಲ ರೈತರು. ಚಾಮರಾಜನಗರ : ಮೂರನೆಯ ಹಂತದ ಕೆರಗಳಿಗೆ ಕಳೆದ ಮೂರು ವರ್ಷಗಳಿಂದಲ್ಲೂ ನೀರು ತುಂಬಿಸುತ್ತಿಲ್ಲ ಎಂದು ಆರೋಪಿಸಿ ತಾಲೂಕಿನ ಮೂರನೆಯ ಹಂತದ ಅಚ್ಚಕಟ್ಟು ಗ್ರಾಮದ ರೈತರು ಗುಂಡ್ಲುಪೇಟೆ ತಾಲೂಕಿನ ಹುತ್ತೂರು ಪಂಪ್‌ಹೌಸ್ ಮುಂಭಾಗದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣೆ  ಸ್ಥಳಕ್ಕೆ ಜಿಲ್ಲಾಧಿಕಾರಿ ಶ್ರೀ ರೂಪ ಅಧಿಕಾರಿಗಳೊಂದಿಗೆ ಭೇಟಿ ನೀಡಿ  ರೈತರ ಸಮಸ್ಯೆ ಆಲಿಸಿ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಮೂರನೇ ಹಂತದ ಕೆರೆಗಳಿಗೆ ನೀರು ಭರವಸೆ ನೀಡಿದರು. ವಾರದೊಳಗೆ ನೀರಾವರಿ ನಿಗಮದ ಮುಖ್ಯ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಭವನದಲ್ಲಿ ಸಭೆ ಕರೆಯಲಾಗುವುದು. ನೀವೆಲ್ಲರೂ ಸಭೆ ಬನ್ನಿ ಸಮಸ್ಯೆಗಳ ಬಗ್ಗೆ ಚರ್ಚಿ ಪರಿಹರಿಸೋಣ ಎಂದರು. ಬಿಜೆಪಿ ಬೆಂಬಲ: ಅಹೋರಾತ್ರಿಧರಣಿಯಲ್ಲಿ  ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ,  ಜಿಲ್ಲಾ ವಕ್ತಾರ ಮನೋಜ್ ಪಟೇಲ್, ಜಿಲ್ಲಾ ಕಾರ್ಯದರ್ಶಿ ನಟರಾಜು ಇತರರು ಭಾಗವಹಿಸಿ ಬೆಂಬಲ ಸೂಚಿಸಿದರು. ಬಿಜೆಪಿ ಜಿಲ್ಲಾ ವಕ್ತಾರ ಮನೋಜ್ ಪಟೇಲ್ ಮಾತನಾಡಿ, ಹುತ್ತೂರು ಪಂಪ್‌ ಹೌಸ್‌ ನಿಂದ ಚಾಮರಾಜನಗರ ತಾಲೂಕಿನ ಕೆರೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಆ ಭಾಗದ ರೈತರು ಹುತ್ತೂರು ಪಂಪ್ ಹೌಸ್ ಮುಂಭಾಗದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಬಿಜೆಪಿ ಬೆಂಬಲ ಸೂಚಿಸಿಸಿದೆ. ಅಧಿಕಾರಿಗಳು ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ಮೂರನೇ ಹಂತ ಕೆರೆಗಳಿಗೆ ನೀರು ಹರಿಸದೆ ನಾಲ್ಕನೆಯ ಹಂತದ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡುತಿದ್ದಾರೆ. ಇದು ಎಷ್ಟರ ಮಟ್ಟಿಗೆ ಹರಿ ಎಂದು ಪ್ರಶ್ನಿಸಿದರು. ಇದು ಸ್ಥಳೀಯ ಶಾಸಕರಿಗೆ ಇಚ್ಛೆ ಇಲ್ಲವೋ ಅಥವಾ ಗುಂಡ್ಲುಪೇಟೆ ಶಾಸಕರ ಪ್ರಭಾವ ಹೆಚ್ಚಾಗುತ್ತಿದಿಯೋ ಗೊತ್ತಿಲ್ಲ. ಕಾನೂನು ಪ್ರಕಾರ 1ನೇ ಹಂತ, 2ನೇ ಹಂತ, 3ನೇ ಹಂತ ಪ್ರಕಾರವೇ ಕರೆಗಳಿಗೆ ನೀರು ತುಂಬಿಸಲಿ ಎಂದು ಒತ್ತಾಯಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ ಮಾತನಾಡಿ, ಹುತ್ತೂರು ಪಂಪ್‌ಹೌಸ್‌ನಿಂದ ಕೇವಲ ಮೂರನೇ ಹಂತದಲ್ಲಿ ಒಂದೇ ಒಂದು ಬಾರಿ ನೀರು ತುಂಬಿಸುವ ಕೆಲಸ ಮಾಡಿದರೆ ಅದನ್ನು ಬಿಟ್ಟರೆ ನೀರು ತುಂಬಿಸಿಲ್ಲ. ಒಂದುನೇ ಹಂತ, ಎರಡನೇ ಹಂತ, ಮೂರನೆಯ ಹಂತ ಬಿಟ್ಟು ಸ್ವಾರ್ಥ, ರಾಜಕಾರಣದಿಂದ 4ನೇ ಹಂತಕ್ಕೆ ನೀರು ಬಿಟ್ಟಿರುವುದು ರೈತ ಅಹೋರಾತ್ರಿ ಹೋರಾಟಕ್ಕೆ ಕಾರಣವಾಗಿದೆ. ಬರಗಾಲ ಕಾರಣದಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿರುವ ಸಂದರ್ಭದಲ್ಲಿ 900, 100 ಅಡಿಗೆ ಅಂತರ್ಜಲ ಕುಸಿದಿದೆ. ಇದೇ ರೀತಿ ಆದರೆ ಜನ, ಜಾನುವಾರುಗಳು ಉಳಿಸಿಕೊಳ್ಳುವುದು ಕಷ್ಟಕರವಾಗಿದೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ನೀರು ಬಿಡುವ ಭರವಸೆ ನೀಡಿದ್ದಾರೆ. ಅವರಿಗೆ ರೈತರ ಪರವಾಗಿ ಧನ್ಯವಾದ ಅರ್ಪಿಸುತ್ತೇವೆ ಎಂದರು. ಕ್ಷೇತ್ರದ ಶಾಸಕರು ಮಂತ್ರಿಗಿರಿಗಾಗಿ ಪ್ರವಾಸಕ್ಕೆ ಹೋಗಿದ್ದಾರೆ. ಈ ಭಾಗದಲ್ಲಿ ರೈತರು ನೀರು ಇಲ್ಲದೆ... ತುಂಬಾ ತೊಂದರೆಯಲ್ಲಿದ್ದಾರೆ, ರೈತರ ಬ್ಯಾಂಕ್‌ಗಳಲ್ಲಿ ಸಾಲ ಮಾಡಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ತಾವು... ದಯಾಮಾಡಿ ನಿಮಗೆ ವೋಟ್ ಹಾಕಿದ ತಪ್ಪಿಗಾಗಿ ಕೆರೆಗಳಿಗೆ ನೀರು ತುಂಬಿಸಿ ರೈತರ ಹಿತಕಾಪಾಡುವಂತೆ ಮನವಿ ಮಾಡಿದರು. ರೈತ ಮೋಹನ್ ರಾಜ್ ಮಾತನಾಡಿ, ಆಲಂಬೂರು ಏತ ಕುಡಿಯುವ ನೀರು ಯೋಜನೆಯಲ್ಲಿ ಮೂರನೆ ಹಂತದ ಕೊನೆಯ ಕೆರೆ ಅಮಚವಾಡಿ ಕೆರೆ. ಅಮಚವಾಡಿ ಅಚ್ಚುಕಟ್ಟು ಪ್ರದೇಶದಲ್ಲಿ ಸುಮಾರು 15 ಸಾವಿರ ಜನಸಂಖ್ಯೆ ಇದ್ದು, 8-10 ಸಾವಿರ ಜಾನುವಾರುಗಳಿವೆ. ಮೂರನೇಯ ಹಂತ ಅಚ್ಚಕಟ್ಟು ಪ್ರದೇಶದಲ್ಲಿ ಹುಮಾರು 40 ಸಾವಿರ ಜನಸಂಖ್ಯೆ ಇದ್ದು ಸುಮಾರು 25 ಸಾವಿರ ಜಾನುವಾರು ಇದೆ. ಪ್ರತಿವರ್ಷವೂ ಅಧಿಕಾರಿಗಳು ಜನಪ್ರತಿನಿಧಿಗಳ ಒತ ಡಕ್ಕೆ ಮಣಿದು ಯಾವುದನ್ನು ಪರಿಪೂರ್ಣ ಮಾಡಿದೆ 1ನೇ ಹಂತ ಅಥವಾ 3ನೇ ಹಂತಕ್ಕೆ ವಾಪನ್ ನೀರು ಬಿಡುವ ಕೆಲಸ ಮಾಡುತಿದ್ದಾರೆ. ಇದು ದಯಮಾಡಿ ಯಾವ ಕಾರಣಕ್ಕೂ ಆಗಬಾರದು. ಜಿಲ್ಲಾಡಳಿತ ಆಲಂಬೂರಿಯಿಂದ ಯಾವುದೇ ಅಡತಡೆ ಇಲ್ಲದೆ ಹುತ್ತೂರು ಪಂಪ್‌ಹೌನ್‌ಗೆ ನೀರು ಶೇಖರಣೆ ಮಾಡಿ ಅಮಚವಾಡಿ ಕೆರೆ ತುಂಬಿಸಬೇಕು. ಎಣ್ಣೆಹೊಳೆ ಕೆರೆಭರ್ತಿ ಮಾಡಿ ಕೋಡಿ ಹರಿಸಬೇಕು. ಕೆರೆಗಳಿಗೆ ನೀರು ತುಂಬಿಸುವಲ್ಲಿ ವಿಫಲರಾಗಿರುವ ಅಧಿಕಾರಗಳನ್ನು ವರ್ಗಾವಣೆ ಮಾಡಿ ಸಮರ್ಥ, ಜಬಾಬ್ದಾರಿಯುತ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು. ನೀರು ಬಿಡುವ ತನಕ ಅಹೋರಾತ್ರಿ ಮುಂದುವರಿಯುತ್ತದೆ : ನಮ್ಮ ಕೆರೆಗಳಿಗೆ ನೀರು ತುಂಬಿಸುವ ತನಕ ಪ್ರತಿಭಟನೆ ಮುಂದುವರಿಸುವುದಾಗಿ ರೈತರು ಪಟ್ಟು ಹಿಡಿದಿದ್ದಾರೆ. .
    3
    ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ 4 ದಿನಕ್ಕೆ: ಜಿಲ್ಲಾಧಿಕಾರಿ ಭೇಟಿ, ನೀರು ಬಿಡುವ ಭರವಸೆ.
ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ 4 ದಿನಕ್ಕೆ: ಜಿಲ್ಲಾಧಿಕಾರಿ ಭೇಟಿ, ನೀರು ಬಿಡುವ ಭರವಸೆ.
ಅಹೋರಾತ್ರಿ ಧರಣಿಗೆ ಬಿಜೆಪಿ ಬೆಂಬಲ, 
ಕೆರೆಗಳಿಗೆ ನೀರು ತುಂಬಿಸುವ ತನಕ ಅಹೋರಾತ್ರಿ ಧರಣಿ ಕೈ ಬಿಡಲ್ಲ ರೈತರು.
ಚಾಮರಾಜನಗರ : ಮೂರನೆಯ ಹಂತದ ಕೆರಗಳಿಗೆ ಕಳೆದ ಮೂರು ವರ್ಷಗಳಿಂದಲ್ಲೂ ನೀರು ತುಂಬಿಸುತ್ತಿಲ್ಲ ಎಂದು ಆರೋಪಿಸಿ ತಾಲೂಕಿನ ಮೂರನೆಯ ಹಂತದ ಅಚ್ಚಕಟ್ಟು ಗ್ರಾಮದ ರೈತರು ಗುಂಡ್ಲುಪೇಟೆ ತಾಲೂಕಿನ ಹುತ್ತೂರು ಪಂಪ್‌ಹೌಸ್ ಮುಂಭಾಗದಲ್ಲಿ ನಡೆಸುತ್ತಿರುವ
ಅಹೋರಾತ್ರಿ ಧರಣೆ  ಸ್ಥಳಕ್ಕೆ ಜಿಲ್ಲಾಧಿಕಾರಿ ಶ್ರೀ ರೂಪ ಅಧಿಕಾರಿಗಳೊಂದಿಗೆ ಭೇಟಿ ನೀಡಿ  ರೈತರ ಸಮಸ್ಯೆ ಆಲಿಸಿ ಮನವಿ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ಮೂರನೇ ಹಂತದ ಕೆರೆಗಳಿಗೆ ನೀರು ಭರವಸೆ ನೀಡಿದರು. ವಾರದೊಳಗೆ
ನೀರಾವರಿ ನಿಗಮದ ಮುಖ್ಯ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಭವನದಲ್ಲಿ
ಸಭೆ ಕರೆಯಲಾಗುವುದು. ನೀವೆಲ್ಲರೂ ಸಭೆ ಬನ್ನಿ ಸಮಸ್ಯೆಗಳ ಬಗ್ಗೆ ಚರ್ಚಿ ಪರಿಹರಿಸೋಣ ಎಂದರು.
ಬಿಜೆಪಿ ಬೆಂಬಲ: ಅಹೋರಾತ್ರಿಧರಣಿಯಲ್ಲಿ  ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ,  ಜಿಲ್ಲಾ ವಕ್ತಾರ ಮನೋಜ್ ಪಟೇಲ್, ಜಿಲ್ಲಾ ಕಾರ್ಯದರ್ಶಿ ನಟರಾಜು ಇತರರು ಭಾಗವಹಿಸಿ ಬೆಂಬಲ ಸೂಚಿಸಿದರು.
ಬಿಜೆಪಿ ಜಿಲ್ಲಾ ವಕ್ತಾರ ಮನೋಜ್ ಪಟೇಲ್ ಮಾತನಾಡಿ, ಹುತ್ತೂರು ಪಂಪ್‌ ಹೌಸ್‌ ನಿಂದ ಚಾಮರಾಜನಗರ ತಾಲೂಕಿನ ಕೆರೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಆ ಭಾಗದ ರೈತರು ಹುತ್ತೂರು ಪಂಪ್ ಹೌಸ್ ಮುಂಭಾಗದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಬಿಜೆಪಿ ಬೆಂಬಲ ಸೂಚಿಸಿಸಿದೆ. ಅಧಿಕಾರಿಗಳು ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ಮೂರನೇ ಹಂತ ಕೆರೆಗಳಿಗೆ ನೀರು ಹರಿಸದೆ ನಾಲ್ಕನೆಯ ಹಂತದ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡುತಿದ್ದಾರೆ. ಇದು ಎಷ್ಟರ ಮಟ್ಟಿಗೆ ಹರಿ ಎಂದು ಪ್ರಶ್ನಿಸಿದರು. ಇದು ಸ್ಥಳೀಯ ಶಾಸಕರಿಗೆ ಇಚ್ಛೆ ಇಲ್ಲವೋ ಅಥವಾ ಗುಂಡ್ಲುಪೇಟೆ ಶಾಸಕರ ಪ್ರಭಾವ ಹೆಚ್ಚಾಗುತ್ತಿದಿಯೋ ಗೊತ್ತಿಲ್ಲ. ಕಾನೂನು ಪ್ರಕಾರ 1ನೇ ಹಂತ, 2ನೇ ಹಂತ, 3ನೇ ಹಂತ ಪ್ರಕಾರವೇ ಕರೆಗಳಿಗೆ ನೀರು ತುಂಬಿಸಲಿ ಎಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ ಮಾತನಾಡಿ, ಹುತ್ತೂರು ಪಂಪ್‌ಹೌಸ್‌ನಿಂದ ಕೇವಲ ಮೂರನೇ ಹಂತದಲ್ಲಿ ಒಂದೇ ಒಂದು ಬಾರಿ ನೀರು ತುಂಬಿಸುವ ಕೆಲಸ ಮಾಡಿದರೆ ಅದನ್ನು ಬಿಟ್ಟರೆ ನೀರು ತುಂಬಿಸಿಲ್ಲ. ಒಂದುನೇ ಹಂತ, ಎರಡನೇ ಹಂತ, ಮೂರನೆಯ ಹಂತ ಬಿಟ್ಟು ಸ್ವಾರ್ಥ, ರಾಜಕಾರಣದಿಂದ 4ನೇ ಹಂತಕ್ಕೆ ನೀರು ಬಿಟ್ಟಿರುವುದು ರೈತ ಅಹೋರಾತ್ರಿ ಹೋರಾಟಕ್ಕೆ
ಕಾರಣವಾಗಿದೆ. ಬರಗಾಲ ಕಾರಣದಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿರುವ ಸಂದರ್ಭದಲ್ಲಿ 900, 100 ಅಡಿಗೆ ಅಂತರ್ಜಲ ಕುಸಿದಿದೆ. ಇದೇ ರೀತಿ ಆದರೆ ಜನ, ಜಾನುವಾರುಗಳು ಉಳಿಸಿಕೊಳ್ಳುವುದು ಕಷ್ಟಕರವಾಗಿದೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ನೀರು ಬಿಡುವ ಭರವಸೆ ನೀಡಿದ್ದಾರೆ. ಅವರಿಗೆ ರೈತರ ಪರವಾಗಿ ಧನ್ಯವಾದ ಅರ್ಪಿಸುತ್ತೇವೆ ಎಂದರು.
ಕ್ಷೇತ್ರದ ಶಾಸಕರು ಮಂತ್ರಿಗಿರಿಗಾಗಿ ಪ್ರವಾಸಕ್ಕೆ ಹೋಗಿದ್ದಾರೆ. ಈ ಭಾಗದಲ್ಲಿ ರೈತರು ನೀರು ಇಲ್ಲದೆ... ತುಂಬಾ ತೊಂದರೆಯಲ್ಲಿದ್ದಾರೆ, ರೈತರ ಬ್ಯಾಂಕ್‌ಗಳಲ್ಲಿ ಸಾಲ ಮಾಡಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ತಾವು... ದಯಾಮಾಡಿ ನಿಮಗೆ ವೋಟ್ ಹಾಕಿದ ತಪ್ಪಿಗಾಗಿ ಕೆರೆಗಳಿಗೆ ನೀರು ತುಂಬಿಸಿ ರೈತರ ಹಿತಕಾಪಾಡುವಂತೆ ಮನವಿ ಮಾಡಿದರು.
ರೈತ ಮೋಹನ್ ರಾಜ್ ಮಾತನಾಡಿ, ಆಲಂಬೂರು ಏತ ಕುಡಿಯುವ ನೀರು ಯೋಜನೆಯಲ್ಲಿ ಮೂರನೆ ಹಂತದ ಕೊನೆಯ ಕೆರೆ ಅಮಚವಾಡಿ ಕೆರೆ. ಅಮಚವಾಡಿ ಅಚ್ಚುಕಟ್ಟು ಪ್ರದೇಶದಲ್ಲಿ ಸುಮಾರು 15 ಸಾವಿರ ಜನಸಂಖ್ಯೆ ಇದ್ದು, 8-10 ಸಾವಿರ ಜಾನುವಾರುಗಳಿವೆ. ಮೂರನೇಯ ಹಂತ ಅಚ್ಚಕಟ್ಟು ಪ್ರದೇಶದಲ್ಲಿ ಹುಮಾರು 40 ಸಾವಿರ ಜನಸಂಖ್ಯೆ ಇದ್ದು ಸುಮಾರು 25 ಸಾವಿರ ಜಾನುವಾರು ಇದೆ. ಪ್ರತಿವರ್ಷವೂ ಅಧಿಕಾರಿಗಳು ಜನಪ್ರತಿನಿಧಿಗಳ ಒತ ಡಕ್ಕೆ ಮಣಿದು ಯಾವುದನ್ನು ಪರಿಪೂರ್ಣ ಮಾಡಿದೆ 1ನೇ ಹಂತ ಅಥವಾ 3ನೇ ಹಂತಕ್ಕೆ ವಾಪನ್ ನೀರು ಬಿಡುವ ಕೆಲಸ ಮಾಡುತಿದ್ದಾರೆ. ಇದು ದಯಮಾಡಿ ಯಾವ ಕಾರಣಕ್ಕೂ ಆಗಬಾರದು. ಜಿಲ್ಲಾಡಳಿತ ಆಲಂಬೂರಿಯಿಂದ ಯಾವುದೇ ಅಡತಡೆ ಇಲ್ಲದೆ ಹುತ್ತೂರು ಪಂಪ್‌ಹೌನ್‌ಗೆ ನೀರು ಶೇಖರಣೆ ಮಾಡಿ ಅಮಚವಾಡಿ ಕೆರೆ ತುಂಬಿಸಬೇಕು. ಎಣ್ಣೆಹೊಳೆ ಕೆರೆಭರ್ತಿ ಮಾಡಿ ಕೋಡಿ ಹರಿಸಬೇಕು. ಕೆರೆಗಳಿಗೆ ನೀರು ತುಂಬಿಸುವಲ್ಲಿ ವಿಫಲರಾಗಿರುವ ಅಧಿಕಾರಗಳನ್ನು ವರ್ಗಾವಣೆ ಮಾಡಿ ಸಮರ್ಥ, ಜಬಾಬ್ದಾರಿಯುತ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.
ನೀರು ಬಿಡುವ ತನಕ ಅಹೋರಾತ್ರಿ ಮುಂದುವರಿಯುತ್ತದೆ : ನಮ್ಮ ಕೆರೆಗಳಿಗೆ ನೀರು ತುಂಬಿಸುವ ತನಕ ಪ್ರತಿಭಟನೆ ಮುಂದುವರಿಸುವುದಾಗಿ ರೈತರು ಪಟ್ಟು ಹಿಡಿದಿದ್ದಾರೆ. .
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    10 hrs ago
  • ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಕುಡಿಯುವ ನೀರಿಗಾಗಿ ಹೋರಾಟ ಕರ್ನಾಟಕ ರಾಜ್ಯ ರೈತ ಸಂಘದಿಂದ ಚಾಮರಾಜನಗರದಲ್ಲಿ ಕುಡಿಯುವ ನೀರಿಗಾಗಿ ಚಾಮರಾಜೇಶ್ವರ ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿ ಅವರಿಗೆ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು
    1
    ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಕುಡಿಯುವ ನೀರಿಗಾಗಿ ಹೋರಾಟ
ಕರ್ನಾಟಕ ರಾಜ್ಯ ರೈತ ಸಂಘದಿಂದ ಚಾಮರಾಜನಗರದಲ್ಲಿ ಕುಡಿಯುವ ನೀರಿಗಾಗಿ ಚಾಮರಾಜೇಶ್ವರ ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿ ಅವರಿಗೆ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು
    user_ಶಿವಕುಮಾರ ಬಿ
    ಶಿವಕುಮಾರ ಬಿ
    Pharmacist ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    14 hrs ago
  • ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ : ತಮಿಳುನಾಡಿಗೆ ಹೋಗುವ ಹೆದ್ದಾರಿ ತಡೆದು ರೈತರ ಪ್ರತಿಭಟನೆ ಚಾಮರಾಜನಗರ, ಜು.31: ಕಾವೇರಿ ನೀರು ನಿರ್ವಹಣಾ ಮಂಡಳಿ ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯುಸೆಕ್ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಇಂದು (ಜು.31) ರಸ್ತೆ ತಡೆ ಪ್ರತಿಭಟನೆ ನಡೆಸಲಾಗುತ್ತಿದೆ. ನಗರದ ಸೋಮವಾರಪೇಟೆ ಪೆಟ್ರೋಲ್ ಬಂಕ್ ಸಮೀಪ ನಡೆಯಲಿರುವ ಪ್ರತಿಭಟನೆಯಲ್ಲಿ ಜಿಲ್ಲೆಯ ರೈತರು ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ರಾಜ್ಯದಲ್ಲಿ ಸಮರ್ಪಕ ಮಳೆಯಿಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಬೆಳೆದ ಬೆಳೆಗಳು ಒಣಗುತ್ತಿವೆ. ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವುದು ರಾಜ್ಯದ ಹಿತಕ್ಕೆ ವಿರುದ್ಧವಾಗಿದೆ ಎಂದು ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
    1
    ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ : ತಮಿಳುನಾಡಿಗೆ ಹೋಗುವ ಹೆದ್ದಾರಿ ತಡೆದು ರೈತರ ಪ್ರತಿಭಟನೆ
ಚಾಮರಾಜನಗರ, ಜು.31: ಕಾವೇರಿ ನೀರು ನಿರ್ವಹಣಾ ಮಂಡಳಿ ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯುಸೆಕ್ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ಇಂದು (ಜು.31) ರಸ್ತೆ ತಡೆ ಪ್ರತಿಭಟನೆ ನಡೆಸಲಾಗುತ್ತಿದೆ.
ನಗರದ ಸೋಮವಾರಪೇಟೆ ಪೆಟ್ರೋಲ್ ಬಂಕ್ ಸಮೀಪ ನಡೆಯಲಿರುವ ಪ್ರತಿಭಟನೆಯಲ್ಲಿ ಜಿಲ್ಲೆಯ ರೈತರು ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ರಾಜ್ಯದಲ್ಲಿ ಸಮರ್ಪಕ ಮಳೆಯಿಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಬೆಳೆದ ಬೆಳೆಗಳು ಒಣಗುತ್ತಿವೆ. ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವುದು ರಾಜ್ಯದ ಹಿತಕ್ಕೆ ವಿರುದ್ಧವಾಗಿದೆ ಎಂದು ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
    user_ಚಾಮರಾಜನಗರ ಸುದ್ದಿ ಮನೆ
    ಚಾಮರಾಜನಗರ ಸುದ್ದಿ ಮನೆ
    ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    15 hrs ago
  • ಮೂರನೇ ಆಷಾಢ ಶುಕ್ರವಾರ ಅಂಗವಾಗಿ 2000 ಜನರಿಗೆ ಅನ್ನಸಂತರ್ಪಣೆ ಮಾಡಿದ್ದಾರೆ ಮೈಸೂರು, ಜು.31: ಮೈಸೂರಿನಲ್ಲಿ ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಗ್ಯಾರೇಜ್ ಹಾಗೂ ಟ್ಯಾಂಕರ್ ಮಾಲೀಕರ ಸಂಘದ ವತಿಯಿಂದ ಸುಮಾರು 2000 ಜನರಿಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು. ನಗರದ ಪ್ರಮುಖ ವೃತ್ತದ ಸಮೀಪ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಗ್ಯಾರೇಜ್‌ಗಳ ಮಾಲೀಕರು, ಟ್ಯಾಂಕರ್ ಮಾಲೀಕರು, ಚಾಲಕರು, ಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದರು. ಆಷಾಢ ಶುಕ್ರವಾರವನ್ನು ವಿಶೇಷವಾಗಿ ದೇವಿ ಆರಾಧನೆಗೆ ಸಮರ್ಪಿತ ದಿನವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ಪೂಜೆ, ಅಲಂಕಾರ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಬಳಿಕ ಅನ್ನಸಂತರ್ಪಣೆ ಆರಂಭಿಸಲಾಯಿತು. ಬಡವರು, ಕೂಲಿ ಕಾರ್ಮಿಕರು, ಪ್ರಯಾಣಿಕರು ಹಾಗೂ ಅಗತ್ಯವಿರುವ ಜನರಿಗೆ ಊಟ ವಿತರಿಸಲಾಯಿತು. ಕಾರ್ಯಕ್ರಮದ ಆಯೋಜಕರು ಮಾತನಾಡಿ, ಸಮಾಜಕ್ಕೆ ಸೇವೆ ಮಾಡುವ ಉದ್ದೇಶದಿಂದ ಪ್ರತಿವರ್ಷವೂ ಇಂತಹ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು. ಗ್ಯಾರೇಜ್ ಮತ್ತು ಟ್ಯಾಂಕರ್ ವೃತ್ತಿಯಲ್ಲಿ ತೊಡಗಿರುವ ಎಲ್ಲರೂ ಒಗ್ಗಟ್ಟಿನಿಂದ ಈ ಸೇವಾ ಕಾರ್ಯದಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ ಎಂದರು. ಅನ್ನಸಂತರ್ಪಣೆಯಲ್ಲಿ ಅನ್ನ, ಸಾಂಬಾರ್, ಪಲ್ಯ, ಪಾಯಸ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಲಾಗಿತ್ತು. ಸೇವೆ ಸಲ್ಲಿಸಿದ ಸ್ವಯಂಸೇವಕರು ಶಿಸ್ತಿನಿಂದ ಊಟ ವಿತರಣೆ ಮಾಡಿ ಭಕ್ತರ ಮೆಚ್ಚುಗೆ ಪಡೆದರು. ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಕಾರ್ಯಕ್ರಮವನ್ನು ಪ್ರಶಂಸಿಸಿ, ಧಾರ್ಮಿಕ ಆಚರಣೆಯ ಜೊತೆಗೆ ಮಾನವೀಯ ಸೇವೆಯೂ ಸಮಾಜದಲ್ಲಿ ಬೆಳೆಬೇಕು ಎಂದು ಅಭಿಪ್ರಾಯಪಟ್ಟರು. ಮೈಸೂರಿನಲ್ಲಿ ಇಂತಹ ಸೇವಾ ಚಟುವಟಿಕೆಗಳು ಸಾಮರಸ್ಯ ಮತ್ತು ಸಹಕಾರದ ಸಂಕೇತವಾಗಿವೆ ಎಂದು ಅವರು ಹೇಳಿದರು.
    2
    ಮೂರನೇ ಆಷಾಢ ಶುಕ್ರವಾರ ಅಂಗವಾಗಿ 2000 ಜನರಿಗೆ ಅನ್ನಸಂತರ್ಪಣೆ ಮಾಡಿದ್ದಾರೆ 
ಮೈಸೂರು, ಜು.31: ಮೈಸೂರಿನಲ್ಲಿ ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಗ್ಯಾರೇಜ್ ಹಾಗೂ ಟ್ಯಾಂಕರ್ ಮಾಲೀಕರ ಸಂಘದ ವತಿಯಿಂದ ಸುಮಾರು 2000 ಜನರಿಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು. ನಗರದ ಪ್ರಮುಖ ವೃತ್ತದ ಸಮೀಪ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಗ್ಯಾರೇಜ್‌ಗಳ ಮಾಲೀಕರು, ಟ್ಯಾಂಕರ್ ಮಾಲೀಕರು, ಚಾಲಕರು, ಕಾರ್ಮಿಕರು ಹಾಗೂ ಸಾರ್ವಜನಿಕರು ಭಾಗವಹಿಸಿದರು.
ಆಷಾಢ ಶುಕ್ರವಾರವನ್ನು ವಿಶೇಷವಾಗಿ ದೇವಿ ಆರಾಧನೆಗೆ ಸಮರ್ಪಿತ ದಿನವೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ಪೂಜೆ, ಅಲಂಕಾರ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಬಳಿಕ ಅನ್ನಸಂತರ್ಪಣೆ ಆರಂಭಿಸಲಾಯಿತು. ಬಡವರು, ಕೂಲಿ ಕಾರ್ಮಿಕರು, ಪ್ರಯಾಣಿಕರು ಹಾಗೂ ಅಗತ್ಯವಿರುವ ಜನರಿಗೆ ಊಟ ವಿತರಿಸಲಾಯಿತು.
ಕಾರ್ಯಕ್ರಮದ ಆಯೋಜಕರು ಮಾತನಾಡಿ, ಸಮಾಜಕ್ಕೆ ಸೇವೆ ಮಾಡುವ ಉದ್ದೇಶದಿಂದ ಪ್ರತಿವರ್ಷವೂ ಇಂತಹ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು. ಗ್ಯಾರೇಜ್ ಮತ್ತು ಟ್ಯಾಂಕರ್ ವೃತ್ತಿಯಲ್ಲಿ ತೊಡಗಿರುವ ಎಲ್ಲರೂ ಒಗ್ಗಟ್ಟಿನಿಂದ ಈ ಸೇವಾ ಕಾರ್ಯದಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ ಎಂದರು.
ಅನ್ನಸಂತರ್ಪಣೆಯಲ್ಲಿ ಅನ್ನ, ಸಾಂಬಾರ್, ಪಲ್ಯ, ಪಾಯಸ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಲಾಗಿತ್ತು. ಸೇವೆ ಸಲ್ಲಿಸಿದ ಸ್ವಯಂಸೇವಕರು ಶಿಸ್ತಿನಿಂದ ಊಟ ವಿತರಣೆ ಮಾಡಿ ಭಕ್ತರ ಮೆಚ್ಚುಗೆ ಪಡೆದರು.
ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಕಾರ್ಯಕ್ರಮವನ್ನು ಪ್ರಶಂಸಿಸಿ, ಧಾರ್ಮಿಕ ಆಚರಣೆಯ ಜೊತೆಗೆ ಮಾನವೀಯ ಸೇವೆಯೂ ಸಮಾಜದಲ್ಲಿ ಬೆಳೆಬೇಕು ಎಂದು ಅಭಿಪ್ರಾಯಪಟ್ಟರು. ಮೈಸೂರಿನಲ್ಲಿ ಇಂತಹ ಸೇವಾ ಚಟುವಟಿಕೆಗಳು ಸಾಮರಸ್ಯ ಮತ್ತು ಸಹಕಾರದ ಸಂಕೇತವಾಗಿವೆ ಎಂದು ಅವರು ಹೇಳಿದರು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Nanjangud, Mysuru•
    8 hrs ago
  • All About,Greatfull and Thankful for Our #CEO #KarnatakaStateBoardOfAuqaf #Bengaluru for his Performance of Duty Regards *ಭಾರತ ನಲ್ಲಿ ವೈರಲ್*
    1
    All About,Greatfull and Thankful for Our #CEO #KarnatakaStateBoardOfAuqaf #Bengaluru for his Performance of Duty Regards 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ಮೈಸೂರು: ಸಂಗೀತವೇ ಉಸಿರಾಗಿದ್ದ ಗಾನಗಾನಕೋಗಿಲೆ, ಪದ್ಮಭೂಷಣ ಡಾ. ಎಸ್. ಜಾನಕಿ ಅಮ್ಮನವರಿಗೆ ಮೈಸೂರಿನ ಕಲಾಭಿಮಾನಿಗಳು ಕಣ್ಣೀರಿನ ನುಡಿನಮನ ಸಲ್ಲಿಸಿದರು. ಮೈಸೂರಿನ ರಾಮಕೃಷ್ಣ ನಗರದ ಗಂಧರ್ವ ಸಂಗೀತ ಅಕಾಡೆಮಿಯಲ್ಲಿ "ಶ್ರದ್ಧಾಂಜಲಿ ಮತ್ತು ಗೀತಾ ಗಾಯನ" ಕಾರ್ಯಕ್ರಮವನ್ನು ಭಾವನಾತ್ಮಕವಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ಎಸ್. ಜಾನಕಿ ಅಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ನಂತರ ಸಭಿಕರೆಲ್ಲರೂ ಕೆಲ ಕ್ಷಣ ಮೌನಾಚರಣೆ ಮಾಡಿ ತಮ್ಮ ಪ್ರೀತಿಯ ಅಮ್ಮನ ಆತ್ಮಕ್ಕೆ ಶಾಂತಿ ಕೋರಿದರು. ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಆರ್‌.ಮಹೇಂದ್ರ ಮಾತನಾಡಿ, ಸಂಗೀತಕ್ಕೆ ಯಾವುದೇ ಧರ್ಮ ಜಾತಿ ಬೇಕಾಗಿಲ್ಲ. ಜಾನಕಿ ಅಮ್ಮನವರನ್ನು ನಾವು ದೈಹಿಕವಾಗಿ ಕಳೆದುಕೊಂಡಿದ್ದೇವೆ. ಆದರೆ, ಮಾನಸಿಕವಾಗಿ ಅವರು ಇಂದಿಗೂ ನಮ್ಮೊಟ್ಟಿಗೆ ಇದ್ದಾರೆ. ಸಂಗೀತಗಾರರಿಗೆ ಸರಸ್ವತಿಯೇ ಆದ ಅವರು, ಕೊನೆಯ ಕ್ಷಣಗಳಲ್ಲಿ ಮೈಸೂರನ್ನೇ ಆಯ್ಕೆ ಮಾಡಿಕೊಂಡು ಇಲ್ಲೇ ನೆಲೆಸಿದ್ದರು. ಇದು ನಮ್ಮ ಪುಣ್ಯ ಎಂದು ಹೇಳಿದರು. ಜಾನಕಿ ಅಮ್ಮನವರ ವ್ಯಕ್ತಿತ್ವವನ್ನು ನೆನೆದ ಆರ್.ಮಹೇಂದ್ರ ಅವರು, ಅವರು ಹಾಡುವ ಶೈಲಿ, ವಾಯ್ಸ್ ಮಾಡ್ಯುಲೇಷನ್ ಇಂದಿಗೂ ಗಾಯಕರಿಗೆ ಮಾದರಿ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲಾ ವಯಸ್ಸಿನ ಪಾತ್ರಗಳಿಗೂ ಅವರು ತಮ್ಮ ಕಂಠ ನೀಡಿದ್ದಾರೆ. 17 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ ದಾಖಲೆ ಅವರದ್ದು ಎಂದು ಸ್ಮರಿಸಿದರು. ನಾನು ಕೂಡ ಅವರೊಂದಿಗೆ ಎರಡು ವೇದಿಕೆಯಲ್ಲಿ ಹಾಡುವ ಅವಕಾಶ ಪಡೆದಿದ್ದೆ. ಅದು ಮರೆಯಲಾಗದ ಕ್ಷಣ. ಮೊದಲ ಬಾರಿ ಅವರನ್ನು ಭೇಟಿಯಾದಾಗ ತಮ್ಮ ಮಕ್ಕಳಂತೆ ನೋಡಿಕೊಂಡು, ಕೈ ತುತ್ತು ತಿನಿಸಿದರು. ಅಷ್ಟೊಂದು ಆತ್ಮೀಯತೆ. ನಾನು ಸಂಗೀತ ಕಲಿಯುತ್ತಿದ್ದಾಗ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನನಗೆ ಚಿನ್ನದ ಪದಕವನ್ನು ಅವರ ಕೈಯಿಂದಲೇ ಪಡೆದಿದ್ದೆ. ಅಂತಹ ಸರಳ, ಸಾರ್ಥಕ ಜೀವನ ನಡೆಸಿದ ಮಹಾನ್ ಕಲಾವಿದೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಕಣ್ಣೀರಿಟ್ಟರು. ನುಡಿನಮನದ ನಂತರ ಕಾರ್ಯಕ್ರಮದಲ್ಲಿ ಮಕ್ಕಳು ಮತ್ತು ಹಿರಿಯ ಗಾಯಕರು ಜಾನಕಿ ಅಮ್ಮನವರು ಹಾಡಿರುವ ಸುಪ್ರಸಿದ್ಧ ಗೀತೆಗಳನ್ನು ಹಾಡಿ ಗೀತಾ ಗಾಯನದ ಮೂಲಕ ನಮನ ಸಲ್ಲಿಸಿದರು. ಅವರ ಕಂಠದ ಪ್ರತಿಧ್ವನಿ ಸಭಾಂಗಣದಲ್ಲಿ ಮೊಳಗಿದಾಗ ಹಲವರ ಕಣ್ಣುಗಳು ತೇವಗೊಂಡವು. ಸ್ವರ ಮೌನವಾದರೂ, ಆ ಸ್ವರದ ಶಕ್ತಿ ಇಂದಿಗೂ ಕೋಟಿ ಹೃದಯಗಳಲ್ಲಿ ಜೀವಂತವಾಗಿದೆ ಎಂಬುದನ್ನು ಈ ಶ್ರದ್ಧಾಂಜಲಿ ಮತ್ತೊಮ್ಮೆ ಸಾಬೀತುಪಡಿಸಿತು. ಈ ಸಂದರ್ಭದಲ್ಲಿ ಪಿಡಬ್ಲ್ಯೂಡಿ ನಿವೃತ್ತ ಎಇಇ ಸುರೇಶ್, ಗಾಯಕರಾದ ಲಕ್ಷ್ಮಣ್, ಮೀನಾಕುಮಾರಿ, ಬಸವರಾಜು, ಚೇತನ್, ಡಾ.ಜಗದೀಶ್, ಸಂಜಯ್, ದಿನೇಶ್, ಡಾ. ರತ್ನ ಹಾಲಪ್ಪಗೌಡ, ರಾಜೇಶ್ವರಿ, ಮಹೇಶ್, ಮಂಜುನಾಥ್ ಎಂ, ಪವಿತ್ರ, ಎಂ. ನಟರಾಜ್, ಸೇರಿದಂತೆ ಅನೇಕ ಸಂಗೀತ ಪ್ರಿಯರು ಮತ್ತು ಮಕ್ಕಳು ಭಾಗವಹಿಸಿದ್ದರು.
    3
    ಮೈಸೂರು: 
ಸಂಗೀತವೇ ಉಸಿರಾಗಿದ್ದ ಗಾನಗಾನಕೋಗಿಲೆ, ಪದ್ಮಭೂಷಣ ಡಾ. ಎಸ್. ಜಾನಕಿ ಅಮ್ಮನವರಿಗೆ ಮೈಸೂರಿನ ಕಲಾಭಿಮಾನಿಗಳು ಕಣ್ಣೀರಿನ ನುಡಿನಮನ ಸಲ್ಲಿಸಿದರು. 
ಮೈಸೂರಿನ ರಾಮಕೃಷ್ಣ ನಗರದ ಗಂಧರ್ವ ಸಂಗೀತ ಅಕಾಡೆಮಿಯಲ್ಲಿ  "ಶ್ರದ್ಧಾಂಜಲಿ ಮತ್ತು ಗೀತಾ ಗಾಯನ" ಕಾರ್ಯಕ್ರಮವನ್ನು ಭಾವನಾತ್ಮಕವಾಗಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಆರಂಭದಲ್ಲಿ ಎಸ್. ಜಾನಕಿ ಅಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ನಂತರ ಸಭಿಕರೆಲ್ಲರೂ ಕೆಲ ಕ್ಷಣ ಮೌನಾಚರಣೆ ಮಾಡಿ ತಮ್ಮ ಪ್ರೀತಿಯ ಅಮ್ಮನ ಆತ್ಮಕ್ಕೆ ಶಾಂತಿ ಕೋರಿದರು.
ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಆರ್‌.ಮಹೇಂದ್ರ ಮಾತನಾಡಿ, ಸಂಗೀತಕ್ಕೆ ಯಾವುದೇ ಧರ್ಮ ಜಾತಿ ಬೇಕಾಗಿಲ್ಲ. ಜಾನಕಿ ಅಮ್ಮನವರನ್ನು ನಾವು ದೈಹಿಕವಾಗಿ ಕಳೆದುಕೊಂಡಿದ್ದೇವೆ. ಆದರೆ, ಮಾನಸಿಕವಾಗಿ ಅವರು ಇಂದಿಗೂ ನಮ್ಮೊಟ್ಟಿಗೆ ಇದ್ದಾರೆ. ಸಂಗೀತಗಾರರಿಗೆ ಸರಸ್ವತಿಯೇ ಆದ ಅವರು, ಕೊನೆಯ ಕ್ಷಣಗಳಲ್ಲಿ ಮೈಸೂರನ್ನೇ ಆಯ್ಕೆ ಮಾಡಿಕೊಂಡು ಇಲ್ಲೇ ನೆಲೆಸಿದ್ದರು. ಇದು ನಮ್ಮ ಪುಣ್ಯ ಎಂದು ಹೇಳಿದರು.
ಜಾನಕಿ ಅಮ್ಮನವರ ವ್ಯಕ್ತಿತ್ವವನ್ನು ನೆನೆದ ಆರ್.ಮಹೇಂದ್ರ ಅವರು, ಅವರು ಹಾಡುವ ಶೈಲಿ, ವಾಯ್ಸ್ ಮಾಡ್ಯುಲೇಷನ್ ಇಂದಿಗೂ ಗಾಯಕರಿಗೆ ಮಾದರಿ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲಾ ವಯಸ್ಸಿನ ಪಾತ್ರಗಳಿಗೂ ಅವರು ತಮ್ಮ ಕಂಠ ನೀಡಿದ್ದಾರೆ. 17 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ ದಾಖಲೆ ಅವರದ್ದು ಎಂದು ಸ್ಮರಿಸಿದರು.
ನಾನು ಕೂಡ ಅವರೊಂದಿಗೆ ಎರಡು ವೇದಿಕೆಯಲ್ಲಿ ಹಾಡುವ ಅವಕಾಶ ಪಡೆದಿದ್ದೆ. ಅದು ಮರೆಯಲಾಗದ ಕ್ಷಣ. ಮೊದಲ ಬಾರಿ ಅವರನ್ನು ಭೇಟಿಯಾದಾಗ ತಮ್ಮ ಮಕ್ಕಳಂತೆ ನೋಡಿಕೊಂಡು, ಕೈ ತುತ್ತು ತಿನಿಸಿದರು. ಅಷ್ಟೊಂದು ಆತ್ಮೀಯತೆ. ನಾನು ಸಂಗೀತ ಕಲಿಯುತ್ತಿದ್ದಾಗ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನನಗೆ ಚಿನ್ನದ ಪದಕವನ್ನು ಅವರ ಕೈಯಿಂದಲೇ ಪಡೆದಿದ್ದೆ. ಅಂತಹ ಸರಳ, ಸಾರ್ಥಕ ಜೀವನ ನಡೆಸಿದ ಮಹಾನ್ ಕಲಾವಿದೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಕಣ್ಣೀರಿಟ್ಟರು.
ನುಡಿನಮನದ ನಂತರ ಕಾರ್ಯಕ್ರಮದಲ್ಲಿ ಮಕ್ಕಳು ಮತ್ತು ಹಿರಿಯ ಗಾಯಕರು ಜಾನಕಿ ಅಮ್ಮನವರು ಹಾಡಿರುವ ಸುಪ್ರಸಿದ್ಧ ಗೀತೆಗಳನ್ನು ಹಾಡಿ ಗೀತಾ ಗಾಯನದ ಮೂಲಕ ನಮನ ಸಲ್ಲಿಸಿದರು. ಅವರ ಕಂಠದ ಪ್ರತಿಧ್ವನಿ ಸಭಾಂಗಣದಲ್ಲಿ ಮೊಳಗಿದಾಗ ಹಲವರ ಕಣ್ಣುಗಳು ತೇವಗೊಂಡವು.
ಸ್ವರ ಮೌನವಾದರೂ, ಆ ಸ್ವರದ ಶಕ್ತಿ ಇಂದಿಗೂ ಕೋಟಿ ಹೃದಯಗಳಲ್ಲಿ ಜೀವಂತವಾಗಿದೆ ಎಂಬುದನ್ನು ಈ ಶ್ರದ್ಧಾಂಜಲಿ ಮತ್ತೊಮ್ಮೆ ಸಾಬೀತುಪಡಿಸಿತು.
ಈ ಸಂದರ್ಭದಲ್ಲಿ ಪಿಡಬ್ಲ್ಯೂಡಿ ನಿವೃತ್ತ ಎಇಇ ಸುರೇಶ್, ಗಾಯಕರಾದ ಲಕ್ಷ್ಮಣ್, ಮೀನಾಕುಮಾರಿ, ಬಸವರಾಜು, ಚೇತನ್, ಡಾ.ಜಗದೀಶ್, ಸಂಜಯ್, ದಿನೇಶ್, ಡಾ. ರತ್ನ ಹಾಲಪ್ಪಗೌಡ, ರಾಜೇಶ್ವರಿ, ಮಹೇಶ್, ಮಂಜುನಾಥ್ ಎಂ, ಪವಿತ್ರ, ಎಂ. ನಟರಾಜ್, ಸೇರಿದಂತೆ ಅನೇಕ ಸಂಗೀತ ಪ್ರಿಯರು ಮತ್ತು ಮಕ್ಕಳು ಭಾಗವಹಿಸಿದ್ದರು.
    user_Mysore update
    Mysore update
    Voice of people Mysuru, Karnataka•
    9 hrs ago
  • ನಮ್ಮ ಸಿಎಂ ತಮಿಳುನಾಡಿನ ವಾಟರ್ ಮೆನ್ ಕೆಲಸ ಮಾಡಬಾರದು...ಸಿಟಿ ರವಿ ವಾಗ್ಧಾಳಿ... ನಮ್ಮ ರಾಜ್ಯದ ಮುಖ್ಯಮಂತ್ರಿಗಳು ತಮಿಳುನಾಡಿನ ವಾಟರ್ ಮ್ಯಾನ್ ಕೆಲಸ ಮಾಡಬಾರದು ಎಂದು ಸಿಟಿ ರವಿ ವಾಗ್ಧಾಳಿ ನಡೆಸಿದರು. ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡದೇವಿಯ ದರುಶನ ಪಡೆದ ನಂತರ ಮಾತನಾಡಿದ ಸಿಟಿ ರವಿ ರವರು ಡಿಕೆ ಶಿವಕುಮಾರ್ ವಿಪಕ್ಷದಲ್ಲಿ ಇದ್ದಾಗ ನಮ್ಮ ನೀರು ನಮ್ಮ ಹಕ್ಕು ಎಂದು ಹೋರಾಟ ಮಾಡಿದ್ರು. ಈಗ ಜಲಾಶಯದ ನೀರನ್ನು ಬೆಳೆಗೆ ಬಳೆಸಬೇಡಿ ಎಂದು ಹೇಳಿಕೆ ಕೊಡುತ್ತಾರೆ. ಮಂಡ್ಯ, ಮೈಸೂರು, ಬೆಂಗಳೂರು ಜನರಿಗೆ ಕೆಅರ್ ಎಸ್ ನಲ್ಲಿ ಕುಡಿಯುವುದಕ್ಕೆ ನೀರು ಎಷ್ಟಿದೆ ಎನ್ನುವದನ್ನು ಡಿಕೆಶಿ ಅವರು ಮೊದಲು ಬಾಯಿ ಬಿಡಬೇಕು. ರಾಜ್ಯದ ಜನರ ರಕ್ಷಣೆಗೆ ನೀವು ನಿಂತುಕೊಳ್ಳಿ.ನಿಮ್ಮ ಬೆಂಬಲಕ್ಕೆ ನಾವು ನಿಲ್ಲತ್ತೇವೆ. ಬಂಗಾರಪ್ಪರ ರೀತಿ ನಿರ್ಧಾರ ತೆಗೆದುಕೊಳ್ಳಿ ಎಂದು ಸಲಹೆ ನೀಡಿದರು. ತಮಿಳುನಾಡಿನ ಸಿಎಂ ವಿಜಯ್ ಕರ್ನಾಟಕಕ್ಕೆ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ ಮಾತುಕತೆ ಮಾಡಿದರೆ ಒಳ್ಳೆಯದು.ನಮ್ಮ ಜಲಾಶಯದ ವಸ್ತುಸ್ಥಿತಿಯ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಿ. ಕಾಂಗ್ರೆಸ್ ಹಾಗೂ ಟಿವಿಕೆ ಎರಡು ಮಿತ್ರ ಪಕ್ಷಗಳೇ ಅಲ್ಲವೇ . ನಿಮ್ಮ ಮಿತ್ರರಿಗೆ ಮನವರಿಕೆ ಮಾಡಿಕೊಡುವುದಕ್ಕೆ ಅಗುವುದಿಲ್ಲ ಎಂದರೇ ಹೇಗೆ ಎಂದು ಟೀಕಿಸಿದರು...
    1
    ನಮ್ಮ ಸಿಎಂ ತಮಿಳುನಾಡಿನ ವಾಟರ್ ಮೆನ್ ಕೆಲಸ ಮಾಡಬಾರದು...ಸಿಟಿ ರವಿ ವಾಗ್ಧಾಳಿ...
ನಮ್ಮ ರಾಜ್ಯದ ಮುಖ್ಯಮಂತ್ರಿಗಳು ತಮಿಳುನಾಡಿನ ವಾಟರ್ ಮ್ಯಾನ್ ಕೆಲಸ ಮಾಡಬಾರದು ಎಂದು ಸಿಟಿ ರವಿ ವಾಗ್ಧಾಳಿ ನಡೆಸಿದರು.
ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡದೇವಿಯ ದರುಶನ ಪಡೆದ ನಂತರ ಮಾತನಾಡಿದ ಸಿಟಿ  ರವಿ ರವರು
ಡಿಕೆ ಶಿವಕುಮಾರ್ ವಿಪಕ್ಷದಲ್ಲಿ ಇದ್ದಾಗ
ನಮ್ಮ ನೀರು ನಮ್ಮ ಹಕ್ಕು ಎಂದು ಹೋರಾಟ ಮಾಡಿದ್ರು.
ಈಗ ಜಲಾಶಯದ ನೀರನ್ನು ಬೆಳೆಗೆ ಬಳೆಸಬೇಡಿ ಎಂದು ಹೇಳಿಕೆ ಕೊಡುತ್ತಾರೆ.
ಮಂಡ್ಯ, ಮೈಸೂರು, ಬೆಂಗಳೂರು ಜನರಿಗೆ ಕೆಅರ್ ಎಸ್ ನಲ್ಲಿ ಕುಡಿಯುವುದಕ್ಕೆ ನೀರು ಎಷ್ಟಿದೆ ಎನ್ನುವದನ್ನು ಡಿಕೆಶಿ ಅವರು ಮೊದಲು ಬಾಯಿ ಬಿಡಬೇಕು. 
ರಾಜ್ಯದ ಜನರ ರಕ್ಷಣೆಗೆ ನೀವು ನಿಂತುಕೊಳ್ಳಿ.ನಿಮ್ಮ ಬೆಂಬಲಕ್ಕೆ ನಾವು ನಿಲ್ಲತ್ತೇವೆ.
ಬಂಗಾರಪ್ಪರ ರೀತಿ ನಿರ್ಧಾರ ತೆಗೆದುಕೊಳ್ಳಿ ಎಂದು ಸಲಹೆ ನೀಡಿದರು.
ತಮಿಳುನಾಡಿನ ಸಿಎಂ ವಿಜಯ್ ಕರ್ನಾಟಕಕ್ಕೆ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ
ಮಾತುಕತೆ ಮಾಡಿದರೆ ಒಳ್ಳೆಯದು.ನಮ್ಮ ಜಲಾಶಯದ ವಸ್ತುಸ್ಥಿತಿಯ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಿ.
ಕಾಂಗ್ರೆಸ್ ಹಾಗೂ ಟಿವಿಕೆ ಎರಡು ಮಿತ್ರ ಪಕ್ಷಗಳೇ ಅಲ್ಲವೇ .
ನಿಮ್ಮ ಮಿತ್ರರಿಗೆ ಮನವರಿಕೆ ಮಾಡಿಕೊಡುವುದಕ್ಕೆ ಅಗುವುದಿಲ್ಲ ಎಂದರೇ ಹೇಗೆ  ಎಂದು ಟೀಕಿಸಿದರು...
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    18 hrs ago
  • ಧ್ರುವ ನಾರಾಯಣ್ ಸರಳ ಸಜ್ಜನ ರಾಜಕಾರಣಿ  : ಪಿ.ಮರಿಸ್ವಾಮಿ ಆರ್.ಧ್ರುವನಾರಾಯಣ್ ಹುಟ್ಟುಹಬ್ಬ:  ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ, 268 ಮಂದಿ ತಪಾಸಣೆ ಮಾಡಿಸಿಕೊಂಡರು. ಧ್ರುವ ನಾರಾಯಣ್ ಸರಳ ಸಜ್ಜನ ರಾಜಕಾರಣಿ  : ಪಿ.ಮರಿಸ್ವಾಮಿ ದಿವಂಗತ ಮಾಜಿ ಸಂಸದ ಆರ್.ಧ್ರುವನಾರಾಯಣ್ ಹುಟ್ಟುಹಬ್ಬ:  ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ, 268 ಮಂದಿ ತಪಾಸಣೆ ಮಾಡಿಸಿಕೊಂಡರು. ವರ್ತಕರ ಭವನದಿಂದ ರಾಮಸಮುದ್ರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿರವರಗೆ ರಸ್ತೆಯ 2 ಬದಿಗಳಲ್ಲಿ 65 ಗಿಡಗಳ ನೆಡುವ ಕಾರ್ಯಕ್ರಮ. ಚಾಮರಾಜನಗರ:  ಆರ್. ಧ್ರುವನಾರಾಯಣ ಅವರು ದೇಶಕಂಡ ಅತ್ಯಂತ ಸರಳ, ಸಜ್ಜನಿಕೆ ರಾಜಕಾರಣಿಯಾಗಿದ್ದರು ಎಂದು ಕಾಡಾಧ್ಯಕ್ಷ ಪಿ.ಮರಿಸ್ವಾಮಿ ಗುಣಗಾನ ಮಾಡಿದರು. ನಗರದ ರೋಟರಿ ಭವನದಲ್ಲಿ ಧ್ರುವನಾರಾಯಣ್ ಅಭಿಮಾನಿಗಳ ಬಳಗ, ರೋಟರಿ ಸಂಸ್ಥೆ ವತಿಯಿಂದ ನಡೆದ ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣರವರ 65ನೇ ಹುಟ್ಟುಹಬ್ಬದ ಅಂಗವಾಗಿ ನಡೆದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಹಾಗೂ 65 ಗಿಡ ನೆಡುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ, ಪುಷ್ಷಾರ್ಚನೆ ಮಾಡಿ ಮಾತನಾಡಿದರು. ಧ್ರುವನಾರಾಯಣ್ ಅವರು ಅಜಾತಶತ್ರು ರಾಜಕಾರಣಿಯಾಗಿದ್ದರು. ಎರಡು ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿ, ಶಾಸಕರಾಗಿ,  ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಪಕ್ಷಾತೀತವಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು ಎಂದರು. ಧ್ರುವನಾರಾಯಣ್ ಅವರು ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ಗಾಗಿ ಶ್ರಮಿಸಿದರು. ಅವರು ಮಾಡಿರುವ ಜನಪರ ಕಾರ್ಯಗಳು ಜೀವಂತವಾಗಿವೆ. ಅವರು ನಮಗೆ ಆದರ್ಶವಾಗಿದ್ದು,ಅವರ ಪಕ್ಷ ಸಂಘಟನೆ, ಶಿಸ್ತು ಪ್ರತಿಯೊಬ್ಬರಿಗೂ ಮಾದರಿ, ಅವರ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳು ಇಂದಿಗೂ ಸ್ಮರಣೀಯವಾಗಿದೆ ಎಂದರು. ರೋಟರಿ ಸಂಸ್ಥೆಯ ಮಾಜಿ ಜಿಲ್ಲಾ ಗೌರ್ನರ್ ಡಾ. ನಾಗಾರ್ಜುನ ಮಾತನಾಡಿ, ಧ್ರುವನಾರಾಯಣ್ ಅವರೊಬ್ಬ ದೂರದೃಷ್ಠಿ ರಾಜಕಾರಣಿಯಾಗಿದ್ದು, ಮೊದಲ ಬಾರಿ ಸಿಎಸ್‌ಆ‌ರ್ ಅನುದಾನದಲ್ಲಿ 2.2. ಕೋಟಿ ಬಿಡುಗಡೆ ಮಾಡಿ ಎಲ್ಲ ಶಾಲೆಗಳಲ್ಲೂ ಶೌಚಾಲಯ ನಿರ್ಮಿಸಿಕೊಡುವ ಕೆಲಸ ಮಾಡಿದರು. ಅವರ ಹುಟ್ಟುಹಬ್ಬದಲ್ಲಿ ಅವರ ಅಭಿಮಾನಿ ಬಳಗ ಸಮಾಜಮುಖಿ ಕೆಲಸ ನಿಜಕ್ಕೂ ಶ್ಲಾಘನೀಯ ಎಂದರು. ಧ್ರುವನಾರಾಯಣ ಅಭಿಮಾನಿ ಬಳಗದ ಅಧ್ಯಕ್ಷ ಕಾಗಲವಾಡಿ ಚಂದ್ರು ಮಾತನಾಡಿ, ಧ್ರುವನಾರಾಯಣ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳ ಬಳಗದಿಂದ ಕಳೆದ 18 ವರ್ಷಗಳಿಂದ ಸಮಾಜಮುಖಿ ಸೇವಾ ಕಾರ್ಯಕ್ರಮಗಳೊಂದಿಗೆ ಆಚರಿಸಿಕೊಂಡು ಬರಲಾಗಿದ್ದು ಅದೇ ರೀತಿ ಇಂದು ಕೂಡ ಆರೋಗ್ಯ ತಪಾಸಣಾ ಶಿಬಿರ, ಅವರ 65ನೇ ಹುಟ್ಟುಹಬ್ಬದ ಅಂಗವಾಗಿ ನಗರದ ವರ್ತಕರ ಭವನದಿಂದ ರಾಮಸಮುದ್ರದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ರವರ ‌ ಪುತ್ಥಳಿಯವರಗೆ ರಸ್ತೆ, 2 ಬದಿಯಲ್ಲೂ 65 ಗಿಡ ನಡೆಯುವ ಕಾರ್ಯಕ್ರಮ. ಅಲ್ಲದೆ ರೋಟರಿ ಸಂಸ್ಥೆ ನಡೆಸುತ್ತಿರುವ ಡಯಾಲಿಸಸ್ ಕೇಂದ್ರಕ್ಕೆ ಧ್ರುವನಾರಾಯಣ್ ‌ ನೆನಪಿನಲ್ಲಿ ಒಂದು ದಿನದ ವೆಚ್ಚವನ್ನು ನೀಡಲಾಗಿದೆ ಎಂದರು. ಧ್ರುವನಾರಾಯಣ್ ರವರ ಅಭಿಮಾನಿಗಳ ಬಳಗ, ರೋಟರಿ ಸಂಸ್ಥೆ, ಈಶ್ವರಿ ಟ್ರಸ್ಟ್ ವತಿಯಿಂದ  ವರ್ತಕರ ಭವನದಿಂದ ರಾಮಸಮುದ್ರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿರವರಗೆ ರಸ್ತೆಯ 2 ಬದಿಗಳಲ್ಲಿ 65 ಗಿಡಗಳ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ರೋಟರಿ ಸಂಸ್ಥೆ ನಡೆಸುತ್ತಿರುವ ಡಯಾಲಿಸಸ್ ಕೇಂದ್ರಕ್ಕೆ ಧ್ರುವನಾರಾಯಣ್ ನೆನಪಿನಲ್ಲಿ ಒಂದು ದಿನದ ವೆಚ್ಚವನ್ನು ನೀಡಲಾಯಿತು, ಅನೀಮಿಯಾ ತಪಾಸಣಾ ಶಿಬಿರ ಹಾಗೂ ಔಷಧಿ ವಿತರಣೆ ಮಾಡಲಾಯಿತು.268 ಮಂದಿ ತಪಾಸಣೆ ಮಾಡಿಸಿಕೊಂಡರು. ಕಾರ್ಯಕ್ರಮದಲ್ಲಿ ಆರ್. ಧ್ರುವನಾರಾಯಣ ಅಭಿಮಾನಿ ಬಳಗ ಅಧ್ಯಕ್ಷ ಕಾಗಲವಾಡಿ ಚಂದ್ರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ವಿ.ಚಂದ್ರು, ಚೂಡಾಧ್ಯಕ್ಷ  ಮಹಮ್ಮದ್ ಅಸ್ಗರ್, ಜಿ.ಪಂ.ಮಾಜಿ ಸದಸ್ಯ ಸದಾಶಿವಮೂರ್ತಿ,  ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ,ಮಾಜಿ ಪದ್ಮಪುರಷೋತ್ತಮ, ಬಿ.ಕೆ.ರವಿಕುಮಾರ್, ಪರಿಸರ ಪ್ರೇಮಿ ವೆಂಕಟೇಶ್, ಹೊಮ್ಮದ ನಾಗನಾಯಕ, ರೋಟರಿ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ,  ಡಾ.ನಾಗಾರ್ಜುನ, ತಾ.ಪಂ.ಮಾಜಿ ಸದಸ್ಯ ಪ್ರಕಾಶ್, ಕುಮಾರ್ ನಾಯಕ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು ಚೂಡಾ ಮಾಜಿ ಅಧ್ಯಕ್ಷ,  ಸುಹೇಲ್ , ಮಹದೇವಯ್ಯ, ನಲ್ಲೂರು ಮಹಾದೇವಸ್ವಾಮಿ, , ಜಿ.ರಾಚಪ್ಪ ಮಹಾದೇವಸ್ವಾಮಿ, ಮಹದೇವಶೆಟ್ಟಿ, ಎಪಿಎಂಸಿ ಸದಸ್ಯರಾದ ಆಲೂರು ಪ್ರದೀಪ್, ಸೋಮೇಶ್, ಮೋಹನ್ ನಗು, ಅಕ್ಷಯ್,ನಾಗೇಂದ್ರ, ಪುರುಷೋತ್ತಮ,  ಶಿವಸ್ವಾಮಿ,  ಬ್ಯಾಡಮೂಡ್ಲು ನಾಗರಾಜು, ಮರಿಸ್ವಾಮಿ,  ಸೋಮಣ್ಣ, ಇತರರು ಹಾಜರಿದ್ದರು.
    4
    ಧ್ರುವ ನಾರಾಯಣ್ ಸರಳ
ಸಜ್ಜನ ರಾಜಕಾರಣಿ  : ಪಿ.ಮರಿಸ್ವಾಮಿ
ಆರ್.ಧ್ರುವನಾರಾಯಣ್ ಹುಟ್ಟುಹಬ್ಬ:  ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ, 268 ಮಂದಿ ತಪಾಸಣೆ ಮಾಡಿಸಿಕೊಂಡರು.
ಧ್ರುವ ನಾರಾಯಣ್ ಸರಳ
ಸಜ್ಜನ ರಾಜಕಾರಣಿ  : ಪಿ.ಮರಿಸ್ವಾಮಿ
ದಿವಂಗತ ಮಾಜಿ ಸಂಸದ ಆರ್.ಧ್ರುವನಾರಾಯಣ್ ಹುಟ್ಟುಹಬ್ಬ:  ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ, 268 ಮಂದಿ ತಪಾಸಣೆ ಮಾಡಿಸಿಕೊಂಡರು.
ವರ್ತಕರ ಭವನದಿಂದ ರಾಮಸಮುದ್ರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿರವರಗೆ ರಸ್ತೆಯ 2 ಬದಿಗಳಲ್ಲಿ 65 ಗಿಡಗಳ ನೆಡುವ ಕಾರ್ಯಕ್ರಮ.
ಚಾಮರಾಜನಗರ:  ಆರ್. ಧ್ರುವನಾರಾಯಣ ಅವರು ದೇಶಕಂಡ ಅತ್ಯಂತ ಸರಳ, ಸಜ್ಜನಿಕೆ ರಾಜಕಾರಣಿಯಾಗಿದ್ದರು ಎಂದು ಕಾಡಾಧ್ಯಕ್ಷ ಪಿ.ಮರಿಸ್ವಾಮಿ ಗುಣಗಾನ ಮಾಡಿದರು.
ನಗರದ ರೋಟರಿ ಭವನದಲ್ಲಿ ಧ್ರುವನಾರಾಯಣ್ ಅಭಿಮಾನಿಗಳ ಬಳಗ, ರೋಟರಿ ಸಂಸ್ಥೆ ವತಿಯಿಂದ ನಡೆದ ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣರವರ 65ನೇ ಹುಟ್ಟುಹಬ್ಬದ ಅಂಗವಾಗಿ ನಡೆದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಹಾಗೂ 65 ಗಿಡ ನೆಡುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ, ಪುಷ್ಷಾರ್ಚನೆ ಮಾಡಿ ಮಾತನಾಡಿದರು.
ಧ್ರುವನಾರಾಯಣ್ ಅವರು ಅಜಾತಶತ್ರು ರಾಜಕಾರಣಿಯಾಗಿದ್ದರು. ಎರಡು ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿ, ಶಾಸಕರಾಗಿ,  ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಪಕ್ಷಾತೀತವಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು ಎಂದರು.
ಧ್ರುವನಾರಾಯಣ್ ಅವರು ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ಗಾಗಿ ಶ್ರಮಿಸಿದರು. ಅವರು ಮಾಡಿರುವ ಜನಪರ ಕಾರ್ಯಗಳು ಜೀವಂತವಾಗಿವೆ. ಅವರು ನಮಗೆ ಆದರ್ಶವಾಗಿದ್ದು,ಅವರ ಪಕ್ಷ ಸಂಘಟನೆ, ಶಿಸ್ತು ಪ್ರತಿಯೊಬ್ಬರಿಗೂ ಮಾದರಿ, ಅವರ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳು ಇಂದಿಗೂ ಸ್ಮರಣೀಯವಾಗಿದೆ ಎಂದರು.
ರೋಟರಿ ಸಂಸ್ಥೆಯ ಮಾಜಿ ಜಿಲ್ಲಾ ಗೌರ್ನರ್ ಡಾ.
ನಾಗಾರ್ಜುನ ಮಾತನಾಡಿ, ಧ್ರುವನಾರಾಯಣ್ ಅವರೊಬ್ಬ ದೂರದೃಷ್ಠಿ ರಾಜಕಾರಣಿಯಾಗಿದ್ದು, ಮೊದಲ ಬಾರಿ ಸಿಎಸ್‌ಆ‌ರ್ ಅನುದಾನದಲ್ಲಿ 2.2. ಕೋಟಿ ಬಿಡುಗಡೆ ಮಾಡಿ ಎಲ್ಲ ಶಾಲೆಗಳಲ್ಲೂ ಶೌಚಾಲಯ ನಿರ್ಮಿಸಿಕೊಡುವ ಕೆಲಸ ಮಾಡಿದರು. ಅವರ ಹುಟ್ಟುಹಬ್ಬದಲ್ಲಿ ಅವರ ಅಭಿಮಾನಿ ಬಳಗ ಸಮಾಜಮುಖಿ ಕೆಲಸ ನಿಜಕ್ಕೂ ಶ್ಲಾಘನೀಯ ಎಂದರು.
ಧ್ರುವನಾರಾಯಣ ಅಭಿಮಾನಿ ಬಳಗದ ಅಧ್ಯಕ್ಷ ಕಾಗಲವಾಡಿ ಚಂದ್ರು ಮಾತನಾಡಿ, ಧ್ರುವನಾರಾಯಣ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳ ಬಳಗದಿಂದ ಕಳೆದ 18 ವರ್ಷಗಳಿಂದ ಸಮಾಜಮುಖಿ ಸೇವಾ ಕಾರ್ಯಕ್ರಮಗಳೊಂದಿಗೆ ಆಚರಿಸಿಕೊಂಡು ಬರಲಾಗಿದ್ದು ಅದೇ ರೀತಿ ಇಂದು ಕೂಡ ಆರೋಗ್ಯ ತಪಾಸಣಾ ಶಿಬಿರ, ಅವರ 65ನೇ ಹುಟ್ಟುಹಬ್ಬದ ಅಂಗವಾಗಿ ನಗರದ ವರ್ತಕರ ಭವನದಿಂದ ರಾಮಸಮುದ್ರದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ರವರ ‌ ಪುತ್ಥಳಿಯವರಗೆ ರಸ್ತೆ, 2 ಬದಿಯಲ್ಲೂ 65 ಗಿಡ ನಡೆಯುವ ಕಾರ್ಯಕ್ರಮ. ಅಲ್ಲದೆ ರೋಟರಿ ಸಂಸ್ಥೆ ನಡೆಸುತ್ತಿರುವ ಡಯಾಲಿಸಸ್ ಕೇಂದ್ರಕ್ಕೆ ಧ್ರುವನಾರಾಯಣ್ ‌ ನೆನಪಿನಲ್ಲಿ ಒಂದು ದಿನದ ವೆಚ್ಚವನ್ನು ನೀಡಲಾಗಿದೆ ಎಂದರು.
ಧ್ರುವನಾರಾಯಣ್ ರವರ ಅಭಿಮಾನಿಗಳ ಬಳಗ, ರೋಟರಿ ಸಂಸ್ಥೆ, ಈಶ್ವರಿ ಟ್ರಸ್ಟ್ ವತಿಯಿಂದ  ವರ್ತಕರ ಭವನದಿಂದ ರಾಮಸಮುದ್ರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿರವರಗೆ ರಸ್ತೆಯ 2 ಬದಿಗಳಲ್ಲಿ 65 ಗಿಡಗಳ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ರೋಟರಿ ಸಂಸ್ಥೆ ನಡೆಸುತ್ತಿರುವ ಡಯಾಲಿಸಸ್ ಕೇಂದ್ರಕ್ಕೆ ಧ್ರುವನಾರಾಯಣ್ ನೆನಪಿನಲ್ಲಿ ಒಂದು ದಿನದ ವೆಚ್ಚವನ್ನು ನೀಡಲಾಯಿತು, ಅನೀಮಿಯಾ ತಪಾಸಣಾ ಶಿಬಿರ ಹಾಗೂ ಔಷಧಿ ವಿತರಣೆ ಮಾಡಲಾಯಿತು.268 ಮಂದಿ ತಪಾಸಣೆ ಮಾಡಿಸಿಕೊಂಡರು.
ಕಾರ್ಯಕ್ರಮದಲ್ಲಿ ಆರ್. ಧ್ರುವನಾರಾಯಣ ಅಭಿಮಾನಿ ಬಳಗ ಅಧ್ಯಕ್ಷ ಕಾಗಲವಾಡಿ ಚಂದ್ರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ವಿ.ಚಂದ್ರು, ಚೂಡಾಧ್ಯಕ್ಷ  ಮಹಮ್ಮದ್ ಅಸ್ಗರ್, ಜಿ.ಪಂ.ಮಾಜಿ ಸದಸ್ಯ ಸದಾಶಿವಮೂರ್ತಿ,  ನಗರಸಭಾ ಮಾಜಿ ಅಧ್ಯಕ್ಷೆ ಚಿನ್ನಮ್ಮ,ಮಾಜಿ ಪದ್ಮಪುರಷೋತ್ತಮ, ಬಿ.ಕೆ.ರವಿಕುಮಾರ್, ಪರಿಸರ ಪ್ರೇಮಿ ವೆಂಕಟೇಶ್, ಹೊಮ್ಮದ ನಾಗನಾಯಕ, ರೋಟರಿ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ,  ಡಾ.ನಾಗಾರ್ಜುನ, ತಾ.ಪಂ.ಮಾಜಿ ಸದಸ್ಯ ಪ್ರಕಾಶ್, ಕುಮಾರ್ ನಾಯಕ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು ಚೂಡಾ ಮಾಜಿ ಅಧ್ಯಕ್ಷ,  ಸುಹೇಲ್ ,
ಮಹದೇವಯ್ಯ, ನಲ್ಲೂರು ಮಹಾದೇವಸ್ವಾಮಿ, 
, ಜಿ.ರಾಚಪ್ಪ ಮಹಾದೇವಸ್ವಾಮಿ, ಮಹದೇವಶೆಟ್ಟಿ, ಎಪಿಎಂಸಿ ಸದಸ್ಯರಾದ ಆಲೂರು ಪ್ರದೀಪ್, ಸೋಮೇಶ್, ಮೋಹನ್ ನಗು, ಅಕ್ಷಯ್,ನಾಗೇಂದ್ರ, ಪುರುಷೋತ್ತಮ,  ಶಿವಸ್ವಾಮಿ,  ಬ್ಯಾಡಮೂಡ್ಲು ನಾಗರಾಜು, ಮರಿಸ್ವಾಮಿ,  ಸೋಮಣ್ಣ, ಇತರರು ಹಾಜರಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.