ಮಾನಸಿಕ ಸದೃಢತೆಯಿಂದ ಆತ್ಮಹತ್ಯೆ ತಡೆ ಸಾಧ್ಯ: ನ್ಯಾ. ಮಹಾಂತೇಶ ದರಗದ ಕೊಪ್ಪಳ :ಮಾನಸಿಕ ಸದೃಢತೆಯಿಂದ ಆತ್ಮಹತ್ಯೆ ತಡೆ ಸಾಧ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮೀಡಿಯಾ ಕ್ಲಬ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ "ವಿಶ್ವ ಆತ್ಮಹತ್ಯೆ ತಡೆಗಟ್ಟುವ ಸಪ್ತಾಹ" ಅಂಗವಾಗಿ ಬುಧವಾರ ಆಯೋಜಿಸಲಾಗಿದ್ದ ಅರಿವು-ನೆರವು ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ವ್ಯಕ್ತಿಯು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಿದ್ದರೆ ಆತ್ಮಹತ್ಯೆಯಂತಹ ಯೋಚನೆಗಳು ಬರುವುದಿಲ್ಲ. ಖಿನ್ನತೆ, ಅತಿಯಾದ ಒತ್ತಡ, ಮದ್ಯ ಹಾಗೂ ಮಾದಕವಸ್ತುಗಳಿಗೆ ದಾಸರಾಗುವುದೇ ಆತ್ಮಹತ್ಯೆಗೆ ಪ್ರಮುಖ ಕಾರಣಗಳಾಗಿದ್ದು, ಆಪ್ತ ಸಮಾಲೋಚನೆ, ಉತ್ತಮ ಜೀವನಶೈಲಿ ಮತ್ತು ಅಗತ್ಯವಿದ್ದಲ್ಲಿ ಔಷಧೋಪಚಾರಗಳಿಂದ ಈ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಈಶ್ವರ ಎಸ್. ಸವಡಿ ಅವರು ಮಾತನಾಡಿ, ಜೀವನ ಅತ್ಯಂತ ಅಮೂಲ್ಯವಾಗಿದ್ದು, ಪ್ರತಿಯೊಬ್ಬರೂ ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಂಡು ಮಾನಸಿಕವಾಗಿ ಸದೃಢರಾಗಬೇಕು ಎಂದರು. ಜಿಲ್ಲಾ ಕುಷ್ಠರೋಗ ನಿವಾರಣಾ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ. ಹೆಚ್. ಪ್ರಕಾಶ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, "ಆತ್ಮಹತ್ಯೆಗೆ ಯತ್ನಿಸಿದವರು ಹಾಗೂ ಸಾವಿಗೀಡಾದ ಕುಟುಂಬದವರೊಂದಿಗೆ ನಿರಂತರ ಸಂಪರ್ಕದಲ್ಲಿರುವುದು ಮುಖ್ಯ. ಸಮಾಜದ ಬೆಂಬಲ ಹಾಗೂ ನಮ್ಮೊಂದಿಗೆ ಯಾರೋ ಒಬ್ಬರಿದ್ದಾರೆ ಎಂಬ ಭರವಸೆಯೇ ಹಲವು ಜೀವಗಳನ್ನು ಉಳಿಸುತ್ತದೆ. ಯಾವುದೇ ಮಾನಸಿಕ ಸಮಸ್ಯೆಗಳಿದ್ದಲ್ಲಿ ಇತರರೊಂದಿಗೆ ಭಾವನೆಗಳನ್ನು ಹಂಚಿಕೊಳ್ಳಬೇಕು, ಅಗತ್ಯವಿದ್ದಲ್ಲಿ ಆರೋಗ್ಯ ಇಲಾಖೆಯ ಉಚಿತ ಟೋಲ್ ಫ್ರೀ ಸಂಖ್ಯೆ 14416 (Tele-MANAS) ಗೆ ಕರೆ ಮಾಡಿ ಸಕಾಲದಲ್ಲಿ ಆಪ್ತ ಸಮಾಲೋಚನೆ ಪಡೆಯಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳಾದ ಡಾ. ಪ್ರಕಾಶ ವಿ., ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ರವೀಂದ್ರನಾಥ ಎಂ. ಹೆಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ನಂದಕುಮಾರ ಹೆಚ್., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳಾದ ಡಾ. ಗೋನಾಳು ಕುಮಾರಸ್ವಾಮಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳಾದ ಡಾ. ಶಶಿಧರ ಅಲೂರು, ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ. ವೆಂಕಟೇಶ ಕೆ., ಮೀಡಿಯಾ ಕ್ಲಬ್ ಅಧ್ಯಕ್ಷರಾದ ದೇವು ನಾಗನೂರು, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹನುಮಂತಪ್ಪ ಹಳ್ಳಿಕೇರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ, ಮನಃಶಾಸ್ತ್ರಜ್ಞೆ ಪುಷ್ಪಾ ಥೆರೇಸಾ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

- ಕೊಪ್ಪಳ: ನಮ್ಮ ಒತ್ತಡದಿಂದಲೇ ತಾಲೂಕಿನ ಬರ ಗುರುತಿಸಿದ ಸರಕಾರ' : ಸಿವಿಸಿ 'ಕೊಪ್ಪಳ: ಕೊಪ್ಪಳ ತಾಲೂಕ ಬರಪೀಡಿತ ಎಂದು ಸರಕಾರ ಒಪ್ಪಿಕೊಂಡಿರುವುದು ನಮ್ಮ ಹೋರಾಟಕ್ಕೆ ಸಂದ ಜಯ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. "ಕೊಪ್ಪಳವೂ ಸೇರಿದಂತೆ 53 ತಾಲೂಕುಗಳು ಬರಪೀಡಿತ ಸರಕಾರ ಆದೇಶ ಹೊರಡಿಸಿದೆ. ತಾಂತ್ರಿಕ ಪ್ರಕ್ರಿಯೆಗಳ ನಂತರ ಒಂದು ವಾರದಲ್ಲಿ ಈ ತಾಲೂಕು ಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುತ್ತದೆ. ಈ ವಿಷಯದಲ್ಲಿ ಈ ಹಿಂದೆ ಮಾಡಿದಂತಹ ವಿಳಂಬವನ್ನು ಮಾಡದೆ ಎಲ್ಲಾ ಪ್ರಕ್ರಿಯೆಗಳನ್ನು ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಬೇಕು," ಎಂದು ಒತ್ತಾಯಿಸಿದ್ದಾರೆ. ತಾಲೂಕಿನ ಪರಸ್ಥಿತಿಯ ಆಧಾರದ ಮೇಲೆ ನಾವು ಮಂಡಿಸಿದ್ದ ಬೇಡಿಕೆಯನ್ನು ಈಡೇರಿಸಲು ಎರಡೂವರೆ ತಿಂಗಳುಗಳಷ್ಟು ಕಾಲಹರಣ ಮಾಡುವ ಅಗತ್ಯ ಇರಲಿಲ್ಲ. ನಾವು ಒಂದೂವರೆ ತಿಂಗಳಿನಲ್ಲಿ ಎರಡು ಪಾದಯಾತ್ರೆಗಳನ್ನು ಹಮ್ಮಿಕೊಂಡು ತೀವ್ರ ಒತ್ತಡ ಹೇರದಿದ್ದರೆ ಕೊಪ್ಪಳದಲ್ಲಿ ಬರ ಇರುವುದನ್ನು ಸರಕಾರ ಒಪ್ಪುತ್ತಿರಲಿಲ್ಲ. ಶಾಸಕರು ಕ್ರಿಯಾಶೀಲವಾಗಿ ಕೆಲಸ ಮಾಡಿದ್ದರೆ ನಾವು ಹೋರಾಡುವ ಪರಿಸ್ಥಿತಿಯೇ ಇರುತ್ತಿರಲಿಲ್ಲ. ಸರಕಾರದ ನಿರ್ಧಾರ ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ. "ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ, ಬಾಕಿ ಇರುವ ಬೆಳೆ ವಿಮೆಗೆ ಹಾಗೂ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಹಣ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ಈ ಕೂಡಲೇ ಆರಂಭಿಸಬೇಕು. ಈ ಪ್ರಕ್ರಿಯೆಯಲ್ಲಿ ವಿಳಂಬವಾದರೆ ಪರಿಹಾರ ಸಕಾಲದಲ್ಲಿ ದೊರೆಯದೆ ರೈತರು ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ಈ ವಿಷಯದಲ್ಲಿ ಕಾಲಹರಣ ಮಾಡಿದರೇ ನಮ್ಮ ಪಕ್ಷ ಮತ್ತೊಮ್ಮೆ ಉಗ್ರ ಹೋರಾಟ ಮಾಡುವುದು ಖಚಿತ ಎಂದು ಸ್ಪಷ್ಟಪಡಿಸಿದ್ದಾರೆ.2
- ಕುಷ್ಟಗಿಯಲ್ಲಿ ಪ್ರಧಾನಿ ಮೋದಿ ಜನ್ಮದಿನಾಚರಣೆ: ಮನೆ ಮನೆಯಲ್ಲಿ ಆಶೀರ್ವಾದ ದೀಪ ಬೆಳಗಲು ಕರೆ - ಶಾಸಕ ದೊಡ್ಡನಗೌಡ ಪಾಟೀಲ* *ಕುಷ್ಟಗಿ:* ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನಾಚರಣೆ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿ, ಅವರ ದೀರ್ಘಾಯುಷ್ಯಕ್ಕೆ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಹಾಗೂ ಬಿಜೆಪಿ ಕಾರ್ಯಕರ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಮಾತನಾಡಿದ ಅವರು, ದೇಶ ಕಂಡ ಪ್ರಬುದ್ಧ ನಾಯಕ, ಜಗತ್ತು ಮೆಚ್ಚಿದ ನಾಯಕ ನರೇಂದ್ರ ಮೋದಿಜಿ ಅವರಿಗೆ ಭಾರತವನ್ನು ಬಲಿಷ್ಠ ಮಾಡುವ ಶಕ್ತಿಯನ್ನು ದೇವರು ನೀಡಲಿ. ಇಂದು 75ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮೋದಿಜಿ ಅವರಿಗೆ ನಿಮ್ಮೆಲ್ಲರ ಪರವಾಗಿ ಶುಭಾಶಯಗಳನ್ನು ಕೋರುತ್ತೇನೆ. ಅವರ ಹೆಸರಿನಲ್ಲಿ ಒಂದು ತಿಂಗಳ ಕಾಲ ಶಿವಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇಂದು ಸಂಜೆ ಮನೆ ಮನೆಯಲ್ಲಿ ದೀಪ ಹಚ್ಚುವ ಮೂಲಕ ಆಶೀರ್ವಾದ ದೀಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಾರತೀಯ ಜನತಾ ಪಕ್ಷದ ಹಿರಿಯರು, ಎಲ್ಲ ನಾಗರಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ ಅವರು, ಜನ್ಮದಿನದ ಈ ಸಂದರ್ಭದಲ್ಲಿ ಅವರಿಗೆ ಶುಭವಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಮಹಾಂತೇಶ ಬಾದಾಮಿ, ಜಯ ತೀರ್ಥ ಸೌದಿ, ಈರಣ್ಣ ಗಜೇಂದ್ರಗಡ,. ತಾಲೂಕು ಯುವ ಮೋರ್ಚಾ ಅಧ್ಯಕ್ಷ ಉಮೇಶ ಯಾದವ್, ಮಾಜಿ ಪುರಸಭೆ ಸದಸ್ಯ ಜಯತೀರ್ಥ ಆಚಾರಿ, ಅಶೋಕ ಬಳೂಟಗಿ, ಸುಖಮುನಿ ಗುರುವಿನ್, ವೆಂಕಟೇಶ ಇಂಗಳಗಿ, ಶಿವಪ್ಪ ಗೆಜ್ಜಲಗಟ್ಟಿ, ಸುರೇಶ ಕೌದಿ, ಶೈಲಜಾ ಬಾಗಲಿ, ಶರಣಮ್ಮ ಸೇರಿದಂತೆ ನಗರದ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.4
- ನಾಳೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ಜನ್ಮದಿನ. ಕುಷ್ಟಗಿ : ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ನಾಳೆ ಜನ್ಮದಿನವಾಗಿರುವುದರಿಂದ ಅವರಿಗೆ ಇಂದು ಮುಂಚಿತವಾಗಿ ಹೃತ್ಪೂರ್ವಕವಾದ ಹುಟ್ಟುಹಬ್ಬದ ಶುಭಾಶಯಗಳನ್ನು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ತಿಳಿಸಿದ್ದಾರೆ. ನಾಳೆ ಸೆಪ್ಟೆಂಬರ್ 17ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ, ಮೋದಿಜಿ ಅವರಿಗೆ ಇನ್ನಷ್ಟು ಹೆಚ್ಚು ದೇಶ ಸೇವೆ ಮಾಡುವ ಶಕ್ತಿ, ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸೋಣ ಹಾಗೂ ಸೇವೆಯ ಸಂಕಲ್ಪದೊಂದಿಗೆ, ರಾಷ್ಟ್ರ ನಿರ್ಮಾಣದ ಪಯಣಕ್ಕೆ ನಮ್ಮ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಶಾಸಕರು ಹೇಳಿದ್ದಾರೆ.2
- ಮುಂಬರುವ ಸರ್ಕಾರಕ್ಕೆ ಒಳ್ಳೆಯ ಭವಿಷ್ಯವಿಲ್ಲ ಶಾಸಕ ಸಿ ಸಿ ಪಾಟೀಲ. ಬಿಜೆಪಿ ಅವಧಿಯಲ್ಲಿ 25 ಸಾವಿರ ಕೋಟಿ ಜಮಾ ಕೊಟ್ಟಿತ್ತು,ಪ್ರಸ್ತುತ ಸರ್ಕಾರದ್ದು 9 ಲಕ್ಷ ಕೋಟಿ ಮಾಡಿದೆ. ಮುಂಬರುವ ಸರ್ಕಾರಕ್ಕೆ ಒಳ್ಳೆಯ ಭವಿಷ್ಯವಿಲ್ಲ ಶಾಸಕ ಸಿ ಸಿ ಪಾಟೀಲ. ಪ್ರಸ್ತುತ ಸರ್ಕಾರದ್ದು 9 ಲಕ್ಷ ಕೋಟಿ ಸಾಲವಿದೆ,ಬಿಜೆಪಿ ಅವಧಿಯಲ್ಲಿ 25 ಸಾವಿರ ಕೋಟಿ ಜಮಾ ಇತ್ತು. ಗದಗ : ಪಂಚ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಆರ್ಥಿಕ ಸ್ಥಿತಿ ಸರಿಯಾಗಿ ಉಳಿದಿಲ್ಲ, ಅಧಿಕಾರದ ದುರಾಸೆಗೆ ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಅಧಿಕಾರದ ಚುಕ್ಕಾಣಿ ಹಿಡಿದು ಆರ್ಥಿಕವಾಗಿ ದುರ್ಬಲವಾಗಿದೆ ಇದರಿಂದ ಮುಂಬರುವ ಸರ್ಕಾರಕ್ಕೆ ಒಳ್ಳೆಯ ಭವಿಷ್ಯವಿಲ್ಲ ಎಂದು ಶಾಸಕ ಸಿ ಸಿ ಪಾಟೀಲ ಹೇಳಿದರು. ತಾಲೂಕಿನ ಕದಡಿ ಗ್ರಾಮದಲ್ಲಿ ನೀಲಾಂಬಿಕಾ ದೇವಸ್ಥಾನದ ಬಯಲು ಜಾಗೆಯಲ್ಲಿ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಐದು ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಿ ಅದರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು. ಸರ್ಕಾರದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಸಮರ್ಪಕ ಅನುದಾನವಿರುವದಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಯಾರು ಏನೇ ಅಭಿವೃದ್ಧಿ ಕೆಲಸಕ್ಕೆ ಬೇಡಿಕೆ ಇಟ್ಟರೆ ಇಲ್ಲಾ ಎಂದ ಉದಾಹರಣೆ ಸಿಗುತ್ತಿರಲಿಲ್ಲ,ಆದರೆ ಪ್ರಸಕ್ತ ನಮ್ಮ ಪರಿಸ್ಥಿತಿ ಮನೆಗೆ ಯಾರಾದರೂ ಕಾರ್ಯಕರ್ತರು ಬಂದರೆ ಎಲ್ಲಿ ಏನ ಕೇಳುವರೋ ಎಂಬ ಹೆದರಿಕೆ ಪಡುವಂತಾಗಿದೆ,ಆದರೂ ಕೂಡಾ ಇವತ್ತು ಎರಡು ಕೋಟಿ ಐವತ್ತು ಲಕ್ಷರೂ ಕದಡಿ ಹೊನ್ನಾಪುರ ಸಂಪರ್ಕ ರಸ್ತೆಯ 1300 ಮೀಟರ್ ರಸ್ತೆ ದುರಸ್ಥಿಗೆ ಹಾಗೂ ಸಮುದಾಯ ಭವನದ ಕಟ್ಟಡ ನಿರ್ಮಾಣಕ್ಕೆ ಐದು ಲಕ್ಷ ಬಿಡುಗಡೆ ಮಾಡಿದ್ದೇನೆ ಅಲ್ಲದೇ ಮುಂಬರುವ ಶಾಸಕರ ನಿಧಿಯಲ್ಲಿ ಇನ್ನೂ ಐದು ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಹಾಗೂ ನೂತನ ಗಡ್ಡಿ ತೇರಿನ ನಿರ್ಮಾಣಕ್ಕೆ ವೈಯಕ್ತಿಕ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡುವೆ ಎಂದರು. ನಮಗೆ ಶಾಸಕ ನಿಧಿಗೆ ಸರ್ಕಾರ ಬರೀ ಐವತ್ತು ಲಕ್ಷ ಮಾತ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುತ್ತದೆ ಅದರಲ್ಲಿ ಬರೀ ಹತ್ತು ಲಕ್ಷ ಮಾತ್ರ ನೀಡಿದೆ ಅದರಲ್ಲಿ ನಮ್ಮ ಕ್ಷೇತ್ರದ 105 ಹಳ್ಳಿಗಳಿಗೂ ಹಂಚಲು ಸಾಧ್ಯವಾಗುತ್ತಿಲ್ಲ ಎಂದು ಸರ್ಕಾರದ ಅಸಹಾಯಕತೆ ಎತ್ತಿ ತೋರಿಸುವ ಕೆಲಸ ಮಾಡಿದರು. ಸಿದ್ದರಾಮಯ್ಯನವರು ಮುಖ್ಯ ಮಂತ್ರಿಯಾದ ಸಮಯದಲ್ಲಿ ಅಧಿಕಾರಿಗಳ ಮೇಲೆ ಹಿಡಿತವಿದ್ದಿಲ್ಲ, ಪ್ರಸ್ತುತ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರವರು ಸ್ವಲ್ಪ ಹಿಡಿತ ಸಾಧಿಸುತ್ತಿದ್ದಾರೆ ಎಂದರು. ನಾನು ಆರು ಭಾರೀ ಸಚಿವನಾಗಿ ವಿವಿಧ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಿದ ಸಮಯದಲ್ಲಿ ಅಧಿಕಾರಿಗಳೊಂದಿಗೆ ಹೊಂದಿದ್ದ ಉತ್ತಮ ಭಾಂದವ್ಯವೇ ಹಿಂದಿನ ಈ ಅನುದಾನ ತರುವಲ್ಲಿ ಸಾಧ್ಯವಾಗಿದೆ ಇಲ್ಲವಾದರೆ ಇವತ್ತು ಈ ಅನುದಾನ ತರಲು ಸಾಧ್ಯವಾಗುತ್ತಿರಲಿಲ್ಲ ಎಂದು ಸರ್ಕಾರದ ವಿರುದ್ದ ಆರ್ಥಿಕ ದುರ್ಬಲತೆ ಎತ್ತಿ ತೋರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಾನಿಧ್ಯ ವೇದಮೂರ್ತಿ ಮಹಾದೇವಯ್ಯ ಸ್ವಾಮಿಗಳು ವಹಿಸಿದ್ದರು, ವಸಂತಗೌಡ ಪೊಲೀಸಪಾಟೀಲ, ವಿರೂಪಾಕ್ಷಪ್ಪ ಗೊಜನೂರು,ಶೇಕಣ್ಣ ಹುಲಗೂರು,ವಸಂತ ಮೇಟಿ, ಗ್ರಾಮ ಪಂಚಾಯ್ತಿ ಪಿ ಡಿ ಓ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು,ಹಾಗೂ ಗ್ರಾಮದ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.2
- ಗುಡೇಕೋಟೆ : ಆರೋಗ್ಯ ತಪಾಸಣೆಗೈದ ಹಾಗೂ ಒಳಗಾದ ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ - ತಾಲೂಕಿನ ಗುಡೇಕೋಟೆ *ಗುಡೇಕೋಟೆ : ಆರೋಗ್ಯ ತಪಾಸಣೆಗೈದ ಹಾಗೂ ಒಳಗಾದ ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*- ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು. ಆರೋಗ್ಯ ತಪಾಸಣೆಗೈದರು , ಹಾಗೂ ತಪಾಸಣೆಗೆೊಳಗಾದರು. ಅವರು ಜನಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಭಾಗಿಯಾಗಿದ ನಂತರ , ಆರೋಗ್ಯ ಸಿಬ್ಬಂದಿಯವರಲ್ಲಿ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಮತ್ತು ನೆರೆದಿದ್ದ ಹಲವರ ಆಪೇಕ್ಷೆಯ ಮೇರೆಗೆ , ಶಾಸಕರು ಹಲವರ ಕಣ್ಣು ಪರೀಕ್ಷೆ ಮಾಡಿ ಚಿಕಿತ್ಸೆ ಶಿಪಾರಸ್ಸು ಮಾಡಿದರು. ನಂತರ ಅವರು ಸಿ ವಿಟಮಿನ್ ಮಾತ್ರೆ ಸೇವನೆಯ ಮಹತ್ವವನ್ನು , ನೆರೆದವರಲ್ಲಿ ಜಾಗ್ರತೆ ಮೂಡಿಸಿದರು ಹಾಗೂ ಸ್ವತಃ ಅವರೇ ಮಾತ್ರೆ ಸೇವೆನ ಮಾಡಿ ಪ್ರೋತ್ಸಾಹಿಸಿದರು. ಇದಕ್ಕೂ ಮುನ್ನ ಅವರು ಎಸ್ಡಿ ಎಮ್ಸಿ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ , ಪ್ರೌಢ ಶಾಲಾ ಪ್ರಾಂಶುಪಾಲರಿಗೆ ಅಗತ್ಯ ಸಲಹೆ ಸೂಚನೆಗಳನ್ನು ನಿರ್ಧೇಶನಗಳನ್ನು ನೀಡಿದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಸಾರ್ವಜನಿಕ ಸ್ಪಂದನೆ ಕುರಿತು ದೂರು: ಪಟ್ಟಣ ಪಂಚಾಯತ್‌ಗೆ ಲೋಕಾಯುಕ್ತ ಭೇಟಿ ಕೂಡ್ಲಿಗಿ: ಪಟ್ಟಣ ಪಂಚಾಯತ್ ಕಚೇರಿಗೆ ಬುದುವಾರ ದಿಢೀರನೆ ವಿಜಯನಗರ–ಬಳ್ಳಾರಿ ವಿಭಾಗದ ಲೋಕಾಯುಕ್ತರು ಡಿವೈಎಸ್ಪಿ ಎಸ್.ಎಸ್.ಬೀಳಗಿ, ಚಿತ್ರದುರ್ಗ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಚಿತ್ರದುರ್ಗದ ಸಿಪಿಐಗಳಾದ ಬಸವರಾಜ ಪಾಟೀಲ್, ಸುಮಾ ಗೊರೆಬಾಳ ಸೇರಿದಂತೆ ಒಟ್ಟು ೧೬ ಸಿಬ್ಬಂದಿಯು ದಿಢೀರ್ ಆಗಮಿಸಿದ್ದರು. ಕಛೇರಿಗೆ ಸಂಬಂಧಿಸಿದ ಕಡತಗಳನ್ನು ಮುಖ್ಯಾಧಿಕಾರಿ ದಾದಾಪೀರ್ ಮೂಲಕ ಕಚೇರಿಯ ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು. ಪಟ್ಟಣ ಪಂಚಾಯತ್ ಕಚೇರಿಯ ಆಡಳಿತ ವ್ಯವಸ್ಥೆ ಸರಿಯಾಗಿಲ್ಲ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್ ಭೇಟಿ ನಂತರ ಮಾಹಿತಿ ಕೇಳಲು, ದಾಖಲೆ ಪರಿಶೀಲಿಸಲು ಮುಂದಾಗಿದ್ದರಿಂದ ಪಪಂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಾಕ್ ನೀಡಿದಂತಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿದ್ದ ವೇಳೆ ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್ ಸೇರಿ ನಾನಾ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ದಾಖಲೆ ಪರಿಶೀಲನೆಗೆ ಸಹಕರಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು. ನಾನಾ ದೂರು ಆಧರಿಸಿ ಲೋಕಾಯುಕ್ತದಲ್ಲಿ ಸ್ವಯಂ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಕೊಟ್ಟೂರು ಪಪಂ ಕಚೇರಿಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಖಲೆ ಪರಿಶೀಲನೆ ನಡೆಸಲಾಗಿದೆ ಎಂದು ಬಳ್ಳಾರಿ ಲೋಕಾಯುಕ್ತ ಡಿವೈಎಸ್ಪಿ ಎಸ್.ಎಸ್.ಬೀಳಗಿ ಅವರು ಮಾಹಿತಿ ತಿಳಿಸಿದರು.1
- ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಮನೆಗೆ ಭೇಟಿ ನೀಡಿದ ಶಾಸಕ ಶರಣಗೌಡ ಕಂದಕೂರ ದೊಡ್ಡನಗೌಡ ಜಿ ಪಾಟೀಲ್ ಮನೆಗೆ ಭೇಟಿ ನೀಡಿದ ಶಾಸಕ ಶರಣಗೌಡ ಕಂದಕೂರ ಇಳಕಲ್ ; ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ತಾಯಿಯವರು ನಿಧನದ ಹಿನ್ನೆಲೆ , ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಪಕ್ಷದ ಶಾಸಕ ಶರಣಗೌಡ ಕಂದಕೂರ ಭೇಟಿ ನೀಡಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.4
- ನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಸ್ಥಾಪಿಸಿ: ಸರಕಾರಕ್ಕೆ ಸಿವಿಸಿ ಒತ್ತಾಯ ಕೊಪ್ಪಳ: ಹೈದರಾಬಾದ್ ಕರ್ನಾಟಕ (ಹೈ-ಕ) ವಿಮೋಚನೆಗೆ ನಿರ್ಣಾಯಕ ಪಾತ್ರ ವಹಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆಗಳನ್ನು ಶಾಶ್ವತವಾಗಿರಿಸಲು ಕೊಪ್ಪಳದಲ್ಲಿ ಅವರ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಗುರುವಾರ ಸರಕಾರಕ್ಕೆ ಒತ್ತಾಯಿಸಿದರು. ಪಕ್ಷದ ಜಿಲ್ಲಾ ಕಛೇರಿಯಲ್ಲಿ ಹೈ-ಕ ವಿಮೋಚನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಹೈ-ಕ ವಿಮೋಚನೆಗೊಂಡು ಏಳು ದಶಕಗಳಾದರೂ ಪಟೇಲ್ ಅವರ ಕೊಡುಗೆಗಳನ್ನು ಸ್ಮರಿಸಲು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಅಂದಿನ ಹೋರಾಟದ ಸಂದರ್ಭದಲ್ಲಿ ಕವಲೂರಿನಲ್ಲಿ ನಡೆದ ಹತ್ಯಾಕಾಂಡದಲ್ಲಿ ಮಡಿದ ವೀರಯೋಧರ ನೆನಪಿಗಾಗಿ ಸ್ಮಾರಕವನ್ನು ಆ ಗ್ರಾಮದಲ್ಲಿ ಸ್ಥಾಪಿಸಬೇಕು. ಒಂದು ವೇಳೆ ಸರಕಾರ ಇದನ್ನು ಮಾಡದಿದ್ದರೆ ಜೆಡಿಎಸ್ ಈ ಕೆಲಸ ಮಾಡಲಿದೆ," ಎಂದರು. "ವೈಜನಾಥ ಪಾಟೀಲ್ ಹೈ-ಕ ಪ್ರದೇಶಕ್ಕೆ ವಿಶೇಷ ಸೌಕರ್ಯಗಳು ಬೇಕೆಂದು ಕನಸು ಕಂಡು ತಮ್ಮ ಸರ್ವಸ್ವವನ್ನೇ ಧಾರೆಯಾದವರು. ತಮ್ಮ ಆಸ್ತಿಯನ್ನು ಮಾರಿ ಈ ಭಾಗದ ಸೌಕರ್ಯಗಳಿಗೆ ಹೋರಾಡಿದರು. ಆದರೆ ಸರಕಾರ ಅವರನ್ನು ಸಂಪೂರ್ಣವಾಗಿ ಮರೆತಿದೆ. ಸಂವಿಧಾನಾತ್ಮಕವಾಗಿ ಸಿಗಬೇಕಾದ ಸವಲತ್ತುಗಳು ಇಂದಿಗೂ ಮರೀಚಿಕೆಯಾಗಿವೆ. ಹೈ-ಕ ಭಾಗದ ಏಳು ಜಿಲ್ಲೆಗಳ ಎಲ್ಲಾ ಶಾಸಕರು ಸಭೆ ಸೇರಿ ಈ ಭಾಗದ ಅಭಿವೃದ್ಧಿ ಯೋಜನೆಗಳ ಕುರಿತು ನೀಲನಕ್ಷೆ ತಯಾರಿಸಬೇಕು," ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಡಿ ಹೇಳಿದರು. ಸರಕಾರದ ನಿರ್ಧಾರಗಳಿಗೆ ಕಾಯದೆ ಈ ಭಾಗಕ್ಕೆ ಆಗಬೇಕಾಗಿರುವ ಕೆಲಸಗಳನ್ನು ಮಾಡಲು ನಾಯಕರು ಮುಂದೆ ಬರಬೇಕೆಂದು ಯುವ ಮುಖಂಡ ಬಸವರಾಜ್ ಹೇಳಿದರು. ಹೈ-ಕ ವಿಮೋಚನಾ ಅಂಗವಾಗಿ ಹೋರಾಟಗಾರರ ಕುರಿತು ಜಿಲ್ಲಾ ಸಂಸ್ಕೃತಿ ವಿಭಾಗದ ಅಧ್ಯಕ್ಷ ಮಂಜುನಾಥ ಸೊರಟೂರ ಮಾತನಾಡಿದರು. ಹೈ-ಕ ವಿಮೋಚನ ಸಂಘರ್ಷದ ಕುರಿತು ಎಸ್ ವಿ ಸಿ ಶಿಕ್ಷಣ ಸಂಸ್ಥೆಗಳ ಸಿಇಓ ಡಾ. ಜಗದೀಶ ಅಂಗಡಿ ಉಪನ್ಯಾಸ ನೀಡಿದರು. ಜಿಲ್ಲಾ ಒಬಿಸಿ ಅಧ್ಯಕ್ಷ ಕರಿಯಪ್ಪ ಹಾಲವರ್ತಿ, ಜಿಲ್ಲಾ ಎಸ್ ಟಿ ಘಟಕ ಅಧ್ಯಕ್ಷ ರಮೇಶ ಡಂಬ್ರಳ್ಳಿ ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ ಏಣಿಗಿ, ನಗರ ಘಟಕದ ಮಹಿಳಾ ಅಧ್ಯಕ್ಷೆ ನಿರ್ಮಾಲಾ ಮೇದಾರ, ನಗರ ಮಹಿಳಾ ಘಟಕದ ಗೌರವ ಅಧ್ಯಕ್ಷೆ ರತ್ನಮ್ಮ ಹಿರೇಮಠ, ತಾಲೂಕು ಎಸ್ ಸಿ ಘಟಕ ಅಧ್ಯಕ್ಷ ಸುರೇಶ ದದಗಲ್, ಜಿಲ್ಲಾ ಕೈಗಾರಿಕಾ ಅಧ್ಯಕ್ಷ ಮಾರುತಿಗೌಡ ಪೊಲೀಸ್ ಪಾಟೀಲ್, ಜಿಲ್ಲಾ ಯುವ ಘಟಕ ಅಧ್ಯಕ್ಷ ಮಂಜುನಾಥ ಮಾಲಿಪಾಟೀಲ, ಮುಖಂಡರಾದ ಭಾಗ್ಯಲಕ್ಷ್ಮಿ, ಸಿದ್ದು ಪಾಟೀಲ್, ಭರತ ಕುಮಾರ ಗೊಂದಿಹೊಸಳ್ಳಿ, ಶ್ರೀನಿವಾಸ ಗೊಂದಳ್ಳಿ, ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.2