ಮಾಡೆಲ್ ಹೈಸ್ಕೂಲಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಓದು, ಅಭ್ಯಾಸ ತ್ಯಾಯಾರಿಕೆ ಪರಿಶೀಲಿಸಿದ : ಜಿಲ್ಲಾಧಿಕಾರಿ ಸ್ನೇಹಲ್ ಆರ್. ನವಲಗುಂದ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಪ್ರತಿದಿನ ನಿಯಮಿತ ಓದು, ಹಳೆಯ ಪ್ರಶ್ನೆಪತ್ರಿಕೆಗಳ ಅಭ್ಯಾಸ ಮತ್ತು ಶಿಕ್ಷಕರ ಸಲಹೆಗಳನ್ನು ಅನುಸರಿಸುವುದು ಅತ್ಯಂತ ಮುಖ್ಯ. ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಫಲಿತಾಂಶ ತರುವ ಗುರಿ ಹೊಂದಿದ್ದು, ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು. ಸಾರ್ವಜನಿಕರ ಅಹವಾಲು ಸ್ವೀಕಾರ, ಸಭೆ ನಂತರ ಪಟ್ಟಣದ ಮಾಡೆಲ್ ಹೈಸ್ಕೂಲ್ ಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಓದು, ಅಭ್ಯಾಸ ತ್ಯಾಯಾರಿಕೆ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು ಪರೀಕ್ಷೆಗೆ ಉತ್ತಮವಾಗಿ ಸಿದ್ಧರಾಗುವಂತೆ ಮಾರ್ಗದರ್ಶನ ನೀಡಿದರು. ಇನ್ನೂ ಅಧಿಕಾರಿಗಳಿಗೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿ ಸಮೀಪಿಸುತ್ತಿರುವುದರಿಂದ ಹಾಸ್ಟೆಲ್‍ಗಳಲ್ಲಿ ಸರಿಯಾದ ವಸತಿ, ಆಹಾರ ಮತ್ತು ಓದು ವ್ಯವಸ್ಥೆ ಕಲ್ಪಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು. ತಹಸೀಲ್ದಾರ್ ಸುಧೀರ ಸಾವುಕಾರ, ಉಮೇಶ ಕ್ಷೇತ್ರ ಶಿಕ್ಷಣಾಧಿಕಾರಿ ಬೊಮ್ಮಕ್ಕನವರ, ಮುಖ್ಯ ಶಿಕ್ಷಕ ಜೆ.ಎಂ. ಮಾಕಣ್ಣವರ, ಶಿಕ್ಷಕ 9.력. ಪಾಟೀಲ, ತಾಪಂ ಇಒ ಪಿ.ಆರ್. ಬಡೆಖಾನ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ, ಭೂದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕ ಹಿರೇಗೌಡರ, ಉಪತಹಸೀಲ್ದಾರ್ ಎಂ.ಎಚ್. ಸದರಬಾ ಯಿ, ಕಂದಾಯ ನಿರೀಕ್ಷಕ ಕುಮಾರಗೌಡ ಪಾಟೀಲ ಸೇರಿದಂತೆ ಇತರರು ಇದ್ದರು.
ಮಾಡೆಲ್ ಹೈಸ್ಕೂಲಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಓದು, ಅಭ್ಯಾಸ ತ್ಯಾಯಾರಿಕೆ ಪರಿಶೀಲಿಸಿದ : ಜಿಲ್ಲಾಧಿಕಾರಿ ಸ್ನೇಹಲ್ ಆರ್. ನವಲಗುಂದ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಪ್ರತಿದಿನ ನಿಯಮಿತ ಓದು, ಹಳೆಯ ಪ್ರಶ್ನೆಪತ್ರಿಕೆಗಳ ಅಭ್ಯಾಸ ಮತ್ತು ಶಿಕ್ಷಕರ ಸಲಹೆಗಳನ್ನು ಅನುಸರಿಸುವುದು ಅತ್ಯಂತ ಮುಖ್ಯ. ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಫಲಿತಾಂಶ ತರುವ
ಗುರಿ ಹೊಂದಿದ್ದು, ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಹೇಳಿದರು. ಸಾರ್ವಜನಿಕರ ಅಹವಾಲು ಸ್ವೀಕಾರ, ಸಭೆ ನಂತರ ಪಟ್ಟಣದ ಮಾಡೆಲ್ ಹೈಸ್ಕೂಲ್ ಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಓದು, ಅಭ್ಯಾಸ ತ್ಯಾಯಾರಿಕೆ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು ಪರೀಕ್ಷೆಗೆ
ಉತ್ತಮವಾಗಿ ಸಿದ್ಧರಾಗುವಂತೆ ಮಾರ್ಗದರ್ಶನ ನೀಡಿದರು. ಇನ್ನೂ ಅಧಿಕಾರಿಗಳಿಗೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿ ಸಮೀಪಿಸುತ್ತಿರುವುದರಿಂದ ಹಾಸ್ಟೆಲ್‍ಗಳಲ್ಲಿ ಸರಿಯಾದ ವಸತಿ, ಆಹಾರ ಮತ್ತು ಓದು ವ್ಯವಸ್ಥೆ ಕಲ್ಪಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು. ತಹಸೀಲ್ದಾರ್ ಸುಧೀರ ಸಾವುಕಾರ, ಉಮೇಶ ಕ್ಷೇತ್ರ ಶಿಕ್ಷಣಾಧಿಕಾರಿ ಬೊಮ್ಮಕ್ಕನವರ, ಮುಖ್ಯ
ಶಿಕ್ಷಕ ಜೆ.ಎಂ. ಮಾಕಣ್ಣವರ, ಶಿಕ್ಷಕ 9.력. ಪಾಟೀಲ, ತಾಪಂ ಇಒ ಪಿ.ಆರ್. ಬಡೆಖಾನ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ, ಭೂದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕ ಹಿರೇಗೌಡರ, ಉಪತಹಸೀಲ್ದಾರ್ ಎಂ.ಎಚ್. ಸದರಬಾ ಯಿ, ಕಂದಾಯ ನಿರೀಕ್ಷಕ ಕುಮಾರಗೌಡ ಪಾಟೀಲ ಸೇರಿದಂತೆ ಇತರರು ಇದ್ದರು.
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಸವದತ್ತಿ ಕ್ಷೇತ್ರದ ಜನತೆಗೆ ಗುಣಮಟ್ಟದ ಹಾಗೂ ಸುಸಜ್ಜಿತ ವೈದ್ಯಕೀಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ.ಈ ನಿಟ್ಟಿನಲ್ಲಿ ಇಂದು ಸವದತ್ತಿ ಪಟ್ಟಣದಲ್ಲಿ ಒಂದು ಮಹತ್ವದ ಕಾರ್ಯಕ್ಕೆ ಚಾಲನೆ ನೀಡಿದರು.ಸವದತ್ತಿಯ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ನೂತನ ಕಟ್ಟಡದ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ಇಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡುರಾವ್ ಅವರ ಅಮೃತ ಹಸ್ತದಿಂದ ಈ ಅಭಿವೃದ್ಧಿ ಕಾಮಗಾರಿಗೆ ಅಧಿಕೃತವಾಗಿ ಅವರೊಂದಿಗೆ ಶಾಸಕ ಶ್ರೀ ವಿಶ್ವಾಸ ವೈದ್ಯ ಅವರು ಸೇರಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿ ಸವದತ್ತಿ ತಾಲೂಕಿನ ಜನರಿಗೆ ತುರ್ತು ಸಂದರ್ಭಗಳಲ್ಲಿ ಉತ್ತಮ ಚಿಕಿತ್ಸೆ ಸ್ಥಳೀಯವಾಗಿಯೇ ಸಿಗಬೇಕು ಎನ್ನುವುದು ನಮ್ಮ ಗುರಿ. ಈ 100 ಹಾಸಿಗೆಗಳ ಆಸ್ಪತ್ರೆಯ ವಿಸ್ತರಣೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.ಆಸ್ಪತ್ರೆಯ ನವೀಕರಣದೊಂದಿಗೆ ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಇದನ್ನು ಮಾದರಿ ತಾಲೂಕು ಆಸ್ಪತ್ರೆಯನ್ನಾಗಿ ರೂಪಿಸಲಾಗುವುದು.ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಆರೋಗ್ಯ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ನಮ್ಮ ಅಭಿವೃದ್ಧಿ ಪಯಣ ನಿರಂತರವಾಗಿ ಮುಂದುವರಿಯಲಿದೆ.ಅಂದಾಜು ವೆಚ್ಚ ರೂ. 31 ಕೋಟಿ.ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.1
- ತುಮಕೂರು ನಗರ ಪಾಲಿಕೆ ಮತ್ತು ಶಾಸಕರ ವಿರುದ್ಧ ಜನಕ್ರೋಶ1
- ಬೆಳಗಾವಿ ನಗರದ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಬಲು ಜೋರಾಗಿ ನಡೆಯುತ್ತಿರುವ ಮಟಕಾ ದಂಧೆ ಕಡಿವಾಣ ಯಾವಾಗ1
- ದೀನ ದಲಿತರು ಬಡವರು ಬದುಕುವುದೇ ಕಷ್ಟ ಸಾಧ್ಯವಾಗಿದೆ. ಉಳ್ಳವರಿಗೊಂದು ನ್ಯಾಯ ಬಡವರಿಗೊಂದು ನ್ಯಾಯ. " ಬಡವರ ದೀನಾ ದಲಿತರ ಹಾ ಹೆಣ್ಣು ಮಕ್ಕಳ ಅರ್ಥನಾದ, ಆಕ್ರಂದನ, ಅತಿ ಶೀಘ್ರದಲ್ಲಿ ನಿಮ್ಮ ಕುಟುಂಬಕ್ಕೆ ಹಾ ಶಾಪದ ಕರ್ಮ ಅತಿ ಶೀಘ್ರದಲ್ಲೇ " ಬಡವನ ಶಾಪದ ಕರ್ಮ ಯಾವ ಮಟ್ಟಕ್ಕೆ ತಟ್ಟುತ್ತದೆ ಎಂದರೆ........1
- ಹಾವೇರಿ ಜಿಲ್ಲೆ, ಸವಣೂರು ತಾಲೂಕ್ ಮಾದಾಪುರ ಗ್ರಾಮದ ಲಾಲ್ ಸಾಬ ಉಡೆದ ಎಂಬುವರಿಗೆ ಸೇರಿದ ಗುಡಿಸಲು 5 ಕೆಜಿ ಗ್ಯಾಸ್ ಲೀಕ್ ಆಗಿ ಹೊತ್ತಿ ಉರಿದ ಪರಿಣಾಮ , ಗುಡಿಸಿಲಲ್ಲಿ ಇದ್ದ ಮೆಕ್ಕೆಜೋಳದ ಪಟ್ಟಿ ಗುಡಿಸಲಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಬಸ್ಮ ಮನೆ ಇಲ್ಲದೆ ಬೀದಿಗೆ ಬಂದ ಕುಟುಂಬ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೀದಿಗೆ ಬಂದ ಕುಟುಂಬಕ್ಕೆ ಆಸರೆ ನೀಡಬೇಕೆಂದು ನಮ್ಮ ಕಳಕಳಿ,4
- ಇಂದು ಬಾಗಲಕೋಟೆ ನಗರದಲ್ಲಿ ಮಹತ್ವದ ಘಟನೆ ನಡೆದಿದೆ. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಸಾರ್ವಜನಿಕರ ದೂರಿನ ಮೇರೆಗೆ ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ ಸಂಘಟನೆ) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ದಿನಾಂಕ ೧೮.೦೨.೨೦೨೬ ರಂದು ಬೆಳಿಗ್ಗೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸ್ಥಳೀಯ ನಾಗರಿಕರು ಪ್ರಾಧಿಕಾರದ ಮುಖ್ಯ ದ್ವಾರದ ಎದುರು ಸೇರಿ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಾಧಿಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯ ಪರಿಣಾಮವಾಗಿ ಕೆಲ ಗಂಟೆಗಳ ಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಸಾರ್ವಜನಿಕರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು. ಇದೀಗ ಪ್ರಾಧಿಕಾರದ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಕುತೂಹಲ ಮೂಡಿದೆ.1
- ರಾಜ್ ನಟನೆಯ ಮೊದಲನೇ ಚಿತ್ರ ಬೇಡರ ಕಣ್ಣಪ್ಪ ನಿರ್ಮಿಸಿದ ಗುಬ್ಬಿ ವೀರಣ್ಣ ರವರ ಇತಿಹಾಸ1