ಖಬರಸ್ತಾನದ ಕಂಪೌಂಡ್, ಸಿಸಿ ರಸ್ತೆಯ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ ಬಳ್ಳಾರಿ, ಮಾ.11: ವಡ್ಡರಬಂಡೆ ಶಾದಿ ಮಹಲ್ ಕಾಮಗಾರಿ ಶೀಘ್ರ ಆರಂಭಿಸಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಮಂಗಳವಾರ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ಹಾಗೂ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ನಂತರ ಮಾತನಾಡಿದರು. ರಾಜ್ಯಸಭಾ ಸದಸ್ಯ ಡಾ.ಸಯ್ಯದ್ ನಾಸಿರ್ ಹುಸೇನ್, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರ ಸಹಯೋಗದಲ್ಲಿ ಈಗಾಗಲೇ ತೀರ್ಮಾನಿಸಿದಂತೆ ನಗರದಲ್ಲಿ ಒಟ್ಟು ಎರಡು ಶಾದಿ ಮಹಲ್ ನಿರ್ಮಾಣ ಕಾರ್ಯ ನಡೆಯಲಿದೆ. ಇದರಿಂದ ಬಡವರ ಮಕ್ಕಳ ಮದುವೆಗೆ ಅನುಕೂಲ ಆಗಲಿದೆ ಎಂದರು. ನಗರದ ಮುಸ್ಲಿಂ ಸಮುದಾಯದ ಯುವಕರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಬೇಕೆಂಬುದು ನಮ್ಮೆಲ್ಲರ ಆಸೆ ಇತ್ತು, ಅದೇ ರೀತಿ ಇಂದು ನಗರದ ಈದ್ಗಾ ಹಾಗೂ ಖಬರಸ್ತಾನದ ಸ್ವಚ್ಛತೆ, ರಕ್ಷಣೆ ಹಾಗೂ ಹಸೀರಿಕರಣದ ಕೆಲಸವನ್ನು ಯುವಕರು ಮಾಡಿದ್ದಾರೆ ಎಂದು ಹೇಳಿದ ಶಾಸಕ ನಾರಾ ಭರತ್ ರೆಡ್ಡಿ, ಇದೇ ನಗರದ ಜನ ವಸತಿ ಬಡಾವಣೆಗಳಲ್ಲಿ ಹಸೀರಕಣಕ್ಕೆ ನಾವೆಲ್ಲ ಶ್ರಮಿಸೋಣ ಎಂದರು. ಭೂಮಿ ಪೂಜೆಯ ನಂತರ ಯೂತ್ ರೆವಲ್ಯೂಷನ್ ಟೀಮಿನ ಸದಸ್ಯರನ್ನು ಶಾಸಕರು ಸನ್ಮಾನಿಸಿದರು. ಈ ಸಂದರ್ಭ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಹುಮಾಯೂನ್ ಖಾನ್, ಪಾಲಿಕೆಯ ಸದಸ್ಯರಾದ ಎಂ.ಪ್ರಭಂಜನಕುಮಾರ್, ನಾಜು, ಆಸಿಫ್, ಕಾಂಗ್ರೆಸ್ ಮುಖಂಡರಾದ ಆಯಾಜ್ ಅಹ್ಮದ್, ದಾದಾಭಾಯ್, ಕಣೇಕಲ್ ಮೆಹಬೂಬಸಾಬ, ಹುಸೇನ್ ಪೀರಾ, ಯೂನುಸ್ ಭಾಯ್, ಮಹಮ್ಮದ್ ಭಾಯ್, ಉಸ್ಮಾನ್, ಅನ್ವರ್, ಅರ್ಷದ್, ಅತೀಕ್, ತೌಸೀಫ್, ಸಮೀರ್, ಅಫಾಕ್, ನೂರ್, ಫರಾಜ್, ತಬರೇಜ್ ಮತ್ತಿತರರು ಹಾಜರಿದ್ದರು.
ಖಬರಸ್ತಾನದ ಕಂಪೌಂಡ್, ಸಿಸಿ ರಸ್ತೆಯ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ ಬಳ್ಳಾರಿ, ಮಾ.11: ವಡ್ಡರಬಂಡೆ ಶಾದಿ ಮಹಲ್ ಕಾಮಗಾರಿ ಶೀಘ್ರ ಆರಂಭಿಸಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಮಂಗಳವಾರ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ಹಾಗೂ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ
ನಂತರ ಮಾತನಾಡಿದರು. ರಾಜ್ಯಸಭಾ ಸದಸ್ಯ ಡಾ.ಸಯ್ಯದ್ ನಾಸಿರ್ ಹುಸೇನ್, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರ ಸಹಯೋಗದಲ್ಲಿ ಈಗಾಗಲೇ ತೀರ್ಮಾನಿಸಿದಂತೆ ನಗರದಲ್ಲಿ ಒಟ್ಟು ಎರಡು ಶಾದಿ ಮಹಲ್ ನಿರ್ಮಾಣ ಕಾರ್ಯ ನಡೆಯಲಿದೆ. ಇದರಿಂದ ಬಡವರ ಮಕ್ಕಳ ಮದುವೆಗೆ ಅನುಕೂಲ ಆಗಲಿದೆ ಎಂದರು. ನಗರದ ಮುಸ್ಲಿಂ ಸಮುದಾಯದ ಯುವಕರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಬೇಕೆಂಬುದು ನಮ್ಮೆಲ್ಲರ ಆಸೆ
ಇತ್ತು, ಅದೇ ರೀತಿ ಇಂದು ನಗರದ ಈದ್ಗಾ ಹಾಗೂ ಖಬರಸ್ತಾನದ ಸ್ವಚ್ಛತೆ, ರಕ್ಷಣೆ ಹಾಗೂ ಹಸೀರಿಕರಣದ ಕೆಲಸವನ್ನು ಯುವಕರು ಮಾಡಿದ್ದಾರೆ ಎಂದು ಹೇಳಿದ ಶಾಸಕ ನಾರಾ ಭರತ್ ರೆಡ್ಡಿ, ಇದೇ ನಗರದ ಜನ ವಸತಿ ಬಡಾವಣೆಗಳಲ್ಲಿ ಹಸೀರಕಣಕ್ಕೆ ನಾವೆಲ್ಲ ಶ್ರಮಿಸೋಣ ಎಂದರು. ಭೂಮಿ ಪೂಜೆಯ ನಂತರ ಯೂತ್ ರೆವಲ್ಯೂಷನ್ ಟೀಮಿನ ಸದಸ್ಯರನ್ನು ಶಾಸಕರು ಸನ್ಮಾನಿಸಿದರು. ಈ ಸಂದರ್ಭ
ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಹುಮಾಯೂನ್ ಖಾನ್, ಪಾಲಿಕೆಯ ಸದಸ್ಯರಾದ ಎಂ.ಪ್ರಭಂಜನಕುಮಾರ್, ನಾಜು, ಆಸಿಫ್, ಕಾಂಗ್ರೆಸ್ ಮುಖಂಡರಾದ ಆಯಾಜ್ ಅಹ್ಮದ್, ದಾದಾಭಾಯ್, ಕಣೇಕಲ್ ಮೆಹಬೂಬಸಾಬ, ಹುಸೇನ್ ಪೀರಾ, ಯೂನುಸ್ ಭಾಯ್, ಮಹಮ್ಮದ್ ಭಾಯ್, ಉಸ್ಮಾನ್, ಅನ್ವರ್, ಅರ್ಷದ್, ಅತೀಕ್, ತೌಸೀಫ್, ಸಮೀರ್, ಅಫಾಕ್, ನೂರ್, ಫರಾಜ್, ತಬರೇಜ್ ಮತ್ತಿತರರು ಹಾಜರಿದ್ದರು.
- ಬಳ್ಳಾರಿ ಕೋಟೆಯ ಪ್ರದೇಶದಲ್ಲಿ ಬೆಂಕಿ ಅವಘಡ.1
- Post by ನಾಗರಾಜ3
- ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕೆ ಭಕ್ತರ ಹರಿವು – ಕಾಯಿನ್ ಅಂಟಿಸಿ ಬೇಡಿಕೆ ಈಡೇರಿಕೆಗಾಗಿ ಪ್ರಾರ್ಥನೆ ಹೌದು ಇದು ಚಳ್ಳಕೆರೆ ತಾಲೂಕಿನ ಮಧ್ಯಾಹ್ನದ ಮಾರಮ್ಮ ಎಂದೇ ಖ್ಯಾತಿ ಪಡೆದ ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕಾಗಿ ಮಂಗಳವಾರ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿದರು. ತಮ್ಮ ಇಷ್ಟಾರ್ಥಗಳು ಈಡೇರಲಿ ಎಂಬ ನಂಬಿಕೆಯಿಂದ ಭಕ್ತರು ದೇವಿಯ ಗರ್ಭಗುಡಿಯ ಹಿಂಭಾಗದಲ್ಲಿ ಕಾಯಿನ್ ಅಂಟಿಸುವ ಮೂಲಕ ಅರಕೆ ತೀರಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿತು. ದೇವಿಯ ಕೃಪೆಯಿಂದ ಮನಸಿನ ಬೇಡಿಕೆಗಳು ಈಡೇರುತ್ತವೆ ಎಂಬ ನಂಬಿಕೆಯಿಂದ ಹಲವರು ಈ ವಿಧಿ ಪಾಲಿಸುತ್ತಿದ್ದಾರೆ. ಇದೇ ವೇಳೆ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ತಮ್ಮ ಇಷ್ಟಾರ್ಥಗಳು ಈಡೇರಿದ ಹಿನ್ನೆಲೆಯಲ್ಲಿ ಮಕ್ಕಳ ಜವಳ, ನಾಮಕರಣ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿ ಬಾಡೂಟ ಮಾಡಿಸುವ ಸಂಪ್ರದಾಯವೂ ನಡೆಯುತ್ತಿತ್ತು. ಬಂಧು-ಬಳಗ ಹಾಗೂ ಸ್ನೇಹಿತರನ್ನು ಆಹ್ವಾನಿಸಿ ಊಟ ಬಡಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.1
- Post by Harisha Y1
- Post by ಸ್1
- ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು. ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.1
- ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆ ಬಳಿ ಮೃತ ಮಹಿಳೆಯ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಧಾಖಲಾಗಿದ್ದ ಮಹಿಳೆ ಹೆರಿಗೆ ನಂತರ ಮೃತಪಟ್ಟಿದ್ದು ಮಗು ಚಿಕಿತ್ಸೆ ಪಡೆಯುತ್ತಿದ್ದು ಶಿಲ್ಪ ಎಂಬ ಮಹಿಳೆ ಸಾವನ್ನಪ್ಪಿದ್ದು ಮಹಿಳೆ ಸಾವಿಗೆ ವೈದ್ಯರು ಹಾಗೂ ಜಿಲ್ಲಾ ಸರ್ಜನ್ ಅವರೆ ಕಾರಣ ಎಂದು ಆರೋಪಿಸಿದ್ದಾರೆ1
- ಚಳ್ಳಕೆರೆ ಪಾವಗಡರಸ್ತೆಯ ರೈಲ್ವೇ ಮೇಲು ಸೇತುವೆ ವಿಳಂಬ ವಾಹನಗಳ ಸಂಚಾರಕ್ಕೆ ಕಿರಿಕಿರಿ ಮೇಲ್ಸೇತುವೆ ಕಾಮಗಾರಿ ಆರಂಭ ಯಾವಗ1