ಕೂಡ್ಲಿಗಿ ತಾಲ್ಲೂಕಿನ ಕಾನಮಡುಗು ಗ್ರಾಮದ ಶ್ರೀ ಶರಣಬಸವೇಶ್ವರ ದಾಸೋಹ ಮಠದ ಸಮುದಾಯ ಭವನದಲ್ಲಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ವತಿಯಿಂದ ನೈಸರ್ಗಿಕ ಮತ್ತು ಸಾವಯವ ಕೃಷಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಈ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಹುರುಳಿಹಾಳು ಹೊಂಬಾಳೆ ರೇವಣ್ಣ ಅವರು, ಮುಂದಿನ ಪೀಳಿಗೆಗೆ ಉತ್ತಮ ಆಹಾರ ಸಿಗಬೇಕಾದರೆ ರೈತರು ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ರೇವಣ್ಣ ಅವರು ಮಾತನಾಡುತ್ತಾ, ಹಿಂದೆ ಹಿರಿಯರು ಮಕ್ಕಳಿಗೆ ಮಣ್ಣು ಮತ್ತು ಬೇಸಾಯದ ಬಗ್ಗೆ ಅರಿವು ಮೂಡಿಸುತ್ತಿದ್ದರು. ಆದರೆ, ಇಂದಿನ ಪೋಷಕರು ಮಕ್ಕಳನ್ನು ಮಣ್ಣಿನಲ್ಲಿ ಆಟವಾಡಲು ಬಿಡದೆ ಅವರ ರೋಗನಿರೋಧಕ ಶಕ್ತಿಯನ್ನು ಕುಂದಿಸುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು. ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ಅತಿಯಾದ ಬಳಕೆಯು ಆಹಾರದ ಗುಣಮಟ್ಟ ಮತ್ತು ಮಣ್ಣಿನ ಫಲವತ್ತತೆಯನ್ನು ನಾಶಮಾಡುತ್ತಿದೆ ಎಂದು ಎಚ್ಚರಿಸಿದರು. ಅಲ್ಲದೆ, ಸಾವಯವ ಕೃಷಿಕ ನಾಗರಾಜು ಅವರು ಕೃಷಿ ತರಬೇತಿ ಶಾಲೆ ತೆರೆದು ಮಕ್ಕಳಿಗೆ ಮಣ್ಣಿನ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾವಯವ ಕೃಷಿಕ ಹುಲಿಕೆರೆ ಎಚ್.ವಿ.ಸಜ್ಜನ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕಾನಮಡುಗು ದಾಸೋಹ ಮಠದ ಧರ್ಮಾಧಿಕಾರಿ ದಾ.ಮ.ಐಮಡಿ ಶರಣಾರ್ಯರು, ಪ್ರಗತಿಪರ ಕೃಷಿಕರಾದ ಕಾನಮಡುಗು ಕೆ.ಎಂ.ಶಶಿಧರ, ಹುಲಿಕೆರೆ ದುರುಗೇಶ್, ಕೊಟ್ಟೂರು ಭರಮನಗೌಡ ಪಾಟೀಲ್, ಹರಪನಹಳ್ಳಿ ಷಣ್ಮುಖಪ್ಪ ಮತ್ತಿತರರು ಮಾತನಾಡಿದರು. ಇದೇ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ತಾಲೂಕು ಅಧ್ಯಕ್ಷ ಎಂ.ಬಿ.ಅಯ್ಯನಹಳ್ಳಿ ಯಜಮಾನಪ್ಪ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹುರುಳಿಹಾಳ್ ರೇಖಾ ಮಲ್ಲಿಕಾರ್ಜುನ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಹುಲಿಕೆರೆ ಗೀತಾ, ಆಲೂರು ಪದ್ಮನಾಭರೆಡ್ಡಿ, ಕೋಣನವರ ಮಲ್ಲಿಕಾರ್ಜುನ, ಮಂಡಲ ಪ್ರಧಾನ ಕಾರ್ಯದರ್ಶಿ ಮಂಗಾಪುರ ಸಿದ್ಧೇಶ್, ಇಮಡಾಪುರ ಸಂಗಣ್ಣ, ನಿಂಬಳಗೆರೆ ಕಲ್ಲೇಶಪ್ಪ, ತೂಲಹಳ್ಳಿ ಹೇಮಣ್ಣ, ಜಯಣ್ಣ, ಕಟ್ಟೆ ಈಶ್ವರಪ್ಪ, ನಿಂಬಳಗೆರೆ ರಾಜಣ್ಣ, ಕಾನಮಡುಗು ಸುರೇಶ್, ದಿನೇಶ್, ನಾಗಭೂಷಣ, ಶಾಂತನಹಳ್ಳಿ ವೀರಭದ್ರಪ್ಪ, ಕಾನಹೊಸಹಳ್ಳಿ ಸಿದ್ದೇಶ್ (ಗಜ), ಅವಿನಾಶ್, ಹೊಸೂರು ಅಭಿಷೇಕ್, ಸಿರಾಜುದ್ದೀನ್ ಸೇರಿ ಜಿಲ್ಲೆಯ ನಾನಾ ತಾಲೂಕುಗಳ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿದ್ದರು.

- ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ "ಗೃಹಲಕ್ಷ್ಮಿ" ಯೋಜನೆಯ ಫಲಾನುಭವಿಗಳು ಯಾವುದೇ ರೀತಿಯ ಊಹಾ ಪೋಹಗಳಿಗೆ, ಅಂತೆ ಕಂತೆಗಳಿಗೆ, ಅಥವಾ ಗಾಳಿ ಸುದ್ದಿಗಳಗೆ ಕಿವಿಗೊಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ. ಸರ್ಕಾರದ ಅಥವಾ ಇಲಾಖೆಯ ಅಧಿಕೃತ ಆದೇಶ ಹಾಗೂ ನಿರ್ದೇಶನಗಳು ಹೊರಡಿಸುವವರೆಗೆ ಫಲಾನುಭವಿಗಳು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಿಂದ ಈ ಕುರಿತು ಮಾಹಿತಿ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಧಿಕೃತ ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ, ಸಾಕಷ್ಟು ಫಲಾನುಭವಿಗಳು ಕಂಪ್ಯೂಟರ್ ಸೆಂಟರ್‌ಗಳಿಗೆ ಹಾಗೂ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುತ್ತಿದ್ದಾರೆ. ಇದನ್ನು ಮನಗಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯು ಈ ಸಂಬಂಧ ಸ್ಪಷ್ಟನೆ ನೀಡಿ ಸುತ್ತೋಲೆ ಹೊರಡಿಸಿದೆ. ಅರ್ಹ ಫಲಾನುಭವಿಗಳು ಕಚೇರಿಗಳಿಗೆ ಅಥವಾ ಡಾಟಾ ಎಂಟ್ರಿ ಕಂಪ್ಯೂಟರ್ ಸೆಂಟರ್‌ಗಳಿಗೆ ಅನಗತ್ಯವಾಗಿ ಅಲೆದಾಡುವುದು ಅಥವಾ ಆತಂಕಪಡುವ ಅಗತ್ಯವಿಲ್ಲ ಎಂದು ಇಲಾಖೆ ತಿಳಿಸಿದೆ. ಯೋಜನೆಯ ಸೌಲಭ್ಯ ಹೊಂದದ ಅರ್ಹರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಪ್ರಸ್ತುತ ಅರ್ಜಿಗಳನ್ನು ಆಹ್ವಾನಿಸಿಲ್ಲ. ಸಂಬಂಧಿಸಿದಂತೆ ಅರ್ಹರಿಂದ ಅರ್ಜಿ ಆಹ್ವಾನಿಸಿ ಪ್ರಕಟಣೆ ಹೊರಡಿಸಿದ ನಂತರವೇ, ಸೌಲಭ್ಯ ಹೊಂದದೇ ಇರುವ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಅರ್ಹ ಫಲಾನುಭವಿಗಳು ಯಾವುದೇ ಗಾಸಿಪ್‌ಗಳಿಗೆ ಅಥವಾ ಗಾಳಿಸುದ್ದಿಗಳಿಗೆ ಕಿವಿಗೊಡಬಾರದು. ಈ ಉದ್ದೇಶಕ್ಕಾಗಿ ಕಂಪ್ಯೂಟರ್ ಸೆಂಟರ್‌ಗಳಿಗೆ ಹಾಗೂ ಇಲಾಖಾ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡಬಾರದು ಎಂದು ಇಲಾಖೆ ಹೇಳಿದೆ. ಯಾವುದೇ ರೀತಿಯಲ್ಲಿಯೂ ಆತಂಕಪಡುವ ಅಗತ್ಯವಿಲ್ಲ ಎಂದು ಪುನರುಚ್ಚರಿಸಿದ ಇಲಾಖೆ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯವು ಯಥಾವತ್ತಾಗಿ ಲಭ್ಯವಿರುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.3
- ಬಳ್ಳಾರಿ ನಗರದ ಮಾಜಿ ಶಾಸಕರು ಮತ್ತು ಜನಪ್ರಿಯ ನಾಯಕರೆಂದು ಗುರುತಿಸಿಕೊಂಡಿರುವ ಗಾಲಿ ಸೋಮಶೇಖರ್ ರೆಡ್ಡಿ ಅವರ ಹುಟ್ಟುಹಬ್ಬವನ್ನು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು. ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾಧ್ಯಕ್ಷ ಜಿ. ರಾಜಶೇಖರ್ ಅವರ ನೇತೃತ್ವದಲ್ಲಿ ಕರವೇ ಕಚೇರಿಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕರವೇ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿ ಗಾಲಿ ಸೋಮಶೇಖರ್ ರೆಡ್ಡಿ ಅವರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರು, ಗಾಲಿ ಸೋಮಶೇಖರ್ ರೆಡ್ಡಿ ಅವರು ಬಳ್ಳಾರಿ ನಗರದ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಅಲ್ಲದೆ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಮತ್ತಷ್ಟು ಜನಸೇವೆಗೆ ಅವಕಾಶಗಳು ದೊರೆಯಲಿ ಎಂದು ಹಾರೈಸಿದರು. ಹಲವಾರು ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಹುಟ್ಟುಹಬ್ಬದ ಆಚರಣೆಯಲ್ಲಿ ಉಪಸ್ಥಿತರಿದ್ದು, ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು.1
- ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 'ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ' ಎಂಬ ಘೋಷವಾಕ್ಯದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮತ್ತು ಎಂಎಲ್‌ಸಿ ಕೆ.ಎಸ್. ನವೀನ್ ಭಾಗವಹಿಸಿದ್ದರು. ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಎಂಎಲ್‌ಸಿ ಕೆ.ಎಸ್. ನವೀನ್ ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಅಧಿಕೃತವಾಗಿ ಚಾಲನೆ ನೀಡಿದರು.1
- ಚಳ್ಳಕೆರೆ ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ಉಜ್ಜಿನಿ ಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ವಿಶ್ವಗುರು ಬಸವಣ್ಣನವರ ಜಯಂತಿ ಹಾಗೂ ದಿ. ಡಿ. ಸುಧಾಕರ್ ಅವರ ನುಡಿನಮನ ಕಾರ್ಯಕ್ರಮವನ್ನು ನಗರಂಗೆರೆ ಗ್ರಾಮಪಂಚಾಯಿತಿ ಮತ್ತು ಮೂರ್ತಿ ಇಂಎಸ್ಟೀಸ್ ಅಂಡ್ ಡೆವಲಪ್ಪರ್ಸ್ ಗ್ರೂಪ್ ವತಿಯಿಂದ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿಮುಲು ಜಿಲ್ಲಾ ನಿರ್ದೇಶಕರಾದ ಬಿ.ಸಿ. ಸಂಜೀವಮೂರ್ತಿ ಅವರು, ಭಾರತದ ಸಂವಿಧಾನವು ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದೆ ಎಂದು ಹೇಳಿದರು. ತಾವು ಇಂದು ಈ ವೇದಿಕೆಯಲ್ಲಿ ನಿಂತು ಮಾತನಾಡುತ್ತಿದ್ದೇವೆ ಎಂದರೆ ಅದು ಡಾ. ಬಿ.ಆರ್. ಅಂಬೇಡ್ಕರ್ ಅವರ ದೊಡ್ಡ ಕೊಡುಗೆ ಎಂದು ಸಂಜೀವಮೂರ್ತಿ ನುಡಿದರು. ಡಾ. ಅಂಬೇಡ್ಕರ್ ಅವರು ಭಾರತೀಯ ಸಂವಿಧಾನದ ಶಿಲ್ಪಿ, ಶ್ರೇಷ್ಠ ಸಮಾಜ ಸುಧಾರಕ ಹಾಗೂ ಅರ್ಥಶಾಸ್ತ್ರಜ್ಞರಾಗಿದ್ದು, ಭಾರತದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಗೆ ಅವರ ಕೊಡುಗೆಗಳು ಅಪಾರವಾಗಿವೆ. ಅಂದು ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನವನ್ನು ರಚಿಸದಿದ್ದರೆ, ಇಂದು ಇಂತಹ ಕಾರ್ಯಕ್ರಮಗಳಲ್ಲಿ ನಿಂತು ಮಾತನಾಡಲು ಅವಕಾಶ ಸಿಗುತ್ತಿರಲಿಲ್ಲ. ಅವರು ಭಾರತೀಯ ಸಂವಿಧಾನದ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ೧೨ನೇ ಶತಮಾನದ ಶರಣರ ಕ್ರಾಂತಿಯ ಹರಿಕಾರ ಬಸವಣ್ಣನವರ ಸಿದ್ಧಾಂತವನ್ನು ಸ್ಮರಿಸಲಾಯಿತು. ಅವರ ತತ್ವಗಳು ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಮೇಲೆ ಆಧಾರಿತವಾಗಿವೆ. ಬಸವಣ್ಣನವರ ಮುಖ್ಯ ಗುರಿ ಜಾತಿ-ಭೇದ ಮತ್ತು ಲಿಂಗ ತಾರತಮ್ಯವನ್ನು ವಿರೋಧಿಸಿ, ಪ್ರತಿಯೊಬ್ಬರಿಗೂ ಸಮಾನವಾದ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಹಕ್ಕುಗಳನ್ನು ಒದಗಿಸುವುದಾಗಿತ್ತು. ಅವರು ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ಬಲವಾಗಿ ವಿರೋಧಿಸಿ, ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ, ನಡತೆಯಿಂದಲೇ ವ್ಯಕ್ತಿಯ ಮೌಲ್ಯ ನಿರ್ಧಾರವಾಗುತ್ತದೆ ಎಂದು ಪ್ರತಿಪಾದಿಸಿದರು. ಪ್ರತಿಯೊಬ್ಬರೂ ತಮ್ಮದೇ ಆದ ಪ್ರಾಮಾಣಿಕ ಕಾಯಕ ಮಾಡಬೇಕು, ದುಡಿಮೆಯೇ ದೈವತ್ವಕ್ಕೆ ಸಮಾನ ಎಂಬುದು ಬಸವಣ್ಣನವರ ನಂಬಿಕೆಯಾಗಿತ್ತು. ದಿ. ಡಿ. ಸುಧಾಕರ್ ಅವರು ಉತ್ತಮ ರಾಜಕಾರಣಿಯಾಗಿದ್ದರು ಮತ್ತು ಬಡ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ ರಾಜಕೀಯ ನಾಯಕರಾಗಿದ್ದರು ಎಂದು ಇದೇ ಸಂದರ್ಭದಲ್ಲಿ ನೆನಪಿಸಿಕೊಳ್ಳಲಾಯಿತು. ಈ ಮಹನೀಯರ ಜಯಂತಿ ಪ್ರಯುಕ್ತ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಆಟೋ ಹಾಗೂ ಟ್ರ್ಯಾಕ್ಟರ್ ಚಾಲಕರಿಗೆ ಉಚಿತವಾಗಿ ವಾಹನ ಚಾಲನಾ ಪರವಾನಗಿ ಕೊಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಆದಿಜಾಂಬುವಂತ ಮಠದ ಷಡಾಕ್ಷರಿಮುನಿ ಸ್ವಾಮೀಜಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ್ ಕವಿ ಕೊರ್ಲಕುಂಟೆ ತಿಪ್ಪೇದಸ್ವಾಮಿ, ಬಿ.ಸಿ. ಸತೀಶ್ ಕುಮಾರ್, ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.1
- ಗದಗ ಜಿಲ್ಲೆಯ ಕದಡಿ ಗ್ರಾಮದ ಮಲ್ಲಯ್ಯಜ್ಜನ ಕಟ್ಟೆ ಹತ್ತಿರ ಶನಿವಾರ ಬೆಳಿಗ್ಗೆ ಜನದಟ್ಟಣೆಯಿರುವ ವಸತಿ ಪ್ರದೇಶದಲ್ಲಿ ಬೃಹತ್ ನಾಗರ ಹಾವೊಂದು ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಮೂಡಿಸಿದೆ. ಹಾವು ಸಳ ಸಳನೆ ಬರುತ್ತಿರುವುದನ್ನು ಕಂಡ ಸಾರ್ವಜನಿಕರು ಭಯಭೀತರಾಗಿ ಕೆಲ ಹೊತ್ತು ನಿಂತು ನೋಡುತ್ತಿದ್ದರು. ಈ ವೇಳೆ, ಕೆಲವರು ಇದು ದೇವರ ಹಾವಿರಬಹುದೇ ಎಂದು ಪರಸ್ಪರ ಚರ್ಚಿಸತೊಡಗಿದರು. ತಕ್ಷಣವೇ ಅಲ್ಲಿಯೇ ಇದ್ದವರು ಒಬ್ಬ ಹಾವು ಹಿಡಿಯುವ ವ್ಯಕ್ತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮಾಹಿತಿ ತಿಳಿದು ಧಾವಿಸಿದ ಉರಗ ರಕ್ಷಕರು, ಮಣ್ಣಿನ ಗೋಡೆಯಲ್ಲಿ ಅಡಗಿಕೊಂಡಿದ್ದ ಹಾವನ್ನು ಹೊರಗೆಳೆದು ಜೀವಂತವಾಗಿ ಸೆರೆ ಹಿಡಿದು ನಂತರ ಅದನ್ನು ಹೊರ ವಲಯದಲ್ಲಿ ಬಿಟ್ಟು ಹೋಗಿದ್ದಾರೆ. ಈ ಪ್ರಸಂಗ ಗ್ರಾಮಸ್ಥರ ನಡುವೆ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉರಗ ರಕ್ಷಕರು, ಎಲ್ಲಿಯೇ ಹಾವು ಕಂಡರೂ ಯಾರೂ ಅವುಗಳನ್ನು ಬಡಿಯಬಾರದು, ಬದಲಿಗೆ ಉರಗ ರಕ್ಷಕರಿಗೆ ಅಥವಾ ಅರಣ್ಯ ಇಲಾಖೆಯವರಿಗೆ ತಿಳಿಸಿ ಅವುಗಳ ರಕ್ಷಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ. ಈ ಘಟನೆ ನಡೆದಾಗ ಗ್ರಾಮಸ್ಥರಾದ ಅಜ್ಜು ರಾಜೇಖಾನ್, ಪ್ರಕಾಶ ಕಮ್ಮಾರ, ಪ್ರವೀಣ ಚೋಳಪ್ಪನವರ, ನಬಿಸಾಬ ರಾಜೇಖಾನ ಸೇರಿದಂತೆ ಇತರರು ಉಪಸ್ಥಿತರಿದ್ದರು.2
- ಪೊಲೀಸರ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಖಾಕಿ ಪಡೆ ನೀಟ್ ವಿದ್ಯಾರ್ಥಿಗಳನ್ನು ಅವರ ಸರಿಯಾದ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಮೂಲಕ ಅವರ ಭವಿಷ್ಯವನ್ನು ಉಳಿಸಿದೆ. ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ನೀಡಿ, ಅವರಿಗೆ ಪರೀಕ್ಷೆಗೆ ಹಾಜರಾಗಲು ಅನುಕೂಲ ಮಾಡಿಕೊಟ್ಟಿದ್ದಾರೆ. ಪೊಲೀಸರ ಈ ಕಾರ್ಯ ನಿಜಕ್ಕೂ ಮೆಚ್ಚುವಂಥದ್ದು.1
- ಬಾಗಲಕೋಟೆ ನಗರದಲ್ಲಿ ಕೆಪಿಸಿಸಿ ಬೀದಿ ಬದಿ ವ್ಯಾಪಾರಸ್ಥರ ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಪವಾಡೆಪ್ಪ ಚಲವಾದಿ ಅವರು, ಶಾಸಕರಾದ ವಿಜಯಾನಂದ ಕಾಶಪ್ಪನವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಪವಾಡೆಪ್ಪ ಚಲವಾದಿ ಅವರು, ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರು, ಉತ್ತರ ಕರ್ನಾಟಕದ ಅಭಿವೃದ್ಧಿ ಹರಿಕಾರರು, ಯುವಕರ ಕಣ್ಮಣಿ ಹಾಗೂ ನುಡಿದಂತೆ ನಡೆಯುವ ಜನಾನುರಾಗಿ ಶಾಸಕರಾದ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಿ ಗೌರವಿಸಬೇಕು ಎಂದು ಆಗ್ರಹಿಸಿದ್ದಾರೆ.1
- ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಜುಲೈ 1 ರಂದು ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪಟ್ಟಣದ ಹಿರೇಮಠ ವಿದ್ಯಾಪೀಠ ಸಂಯುಕ್ತ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸ್ವಚ್ಛತಾ ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ ಮಾಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ, ವಿವಿಧ ಜಿಲ್ಲೆ ಮತ್ತು ತಾಲೂಕುಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ. ಅಲ್ಲದೆ, ನಾಗರಿಕರು, ಗಣ್ಯರು, ತಾಲೂಕಿನ ಪತ್ರಕರ್ತರು, ವಿವಿಧ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಆಡಳಿತ ಅಧಿಕಾರಿಗಳು, ಪೌರಕಾರ್ಮಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಮತ್ತು ಸಾರ್ವಜನಿಕರು ಸಹ ಪಾಲ್ಗೊಳ್ಳಲಿದ್ದಾರೆ.3