ಕಣಕೂರು ಪಿ.ಎ.ಸಿ.ಎಸ್ ನೂತನ ಅಧ್ಯಕ್ಷರಾಗಿ ಗುಡ್ಡೇನಹಳ್ಳಿ ಕಾಂತಣ್ಣ ಅವಿರೋಧ ಆಯ್ಕೆ. ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿಯ ಕಣಕೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ "ಗುಡ್ಡೇನಹಳ್ಳಿ ಕಾಂತಣ್ಣ" ರವರು ಅವಿರೋಧವಾಗಿ ಆಯ್ಕೆ. ಈ ಹಿಂದಿನ ಅಧ್ಯಕ್ಷರಾಗಿದ್ದ ಶ್ರೀನಿವಾಸ್ ಕೆ, ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಿತು. 12 ಸದಸ್ಯ ಬಲವುಳ್ಳ ಸಂಘದಲ್ಲಿ ರವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಟಿ.ಬಿ. ರವರು ಅವಿರೋಧ ಆಯ್ಕೆ ಎಂದು ಘೋಷಿಸಿದರು. ಈ ವೇಳೆ ಪತ್ರಕರ್ತರೊಂದಿಗೆ ನೂತನ ಅಧ್ಯಕ್ಷ ಗುಡ್ಡೇನಹಳ್ಳಿ ಕಾಂತಣ್ಣ ರವರು ಮಾತನಾಡಿ, ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಸರ್ವ ಸದಸ್ಯರಿಗೂ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮತ್ತು ನಮ್ಮ ಸಂಘದ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳ ರೈತರುಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸುವ ಕಾರ್ಯದಲ್ಲಿ ಪ್ರವೃತ್ತರಾಗಿರುತ್ತೇನೆ. ಹಾಗೂ ನಮ್ಮ ಸಂಘದ ಅಭಿವೃದ್ಧಿಗಾಗಿ ಒತ್ತು ನೀಡುವುದರ ಮೂಲಕ, ಸಾರ್ವಜನಿಕರ ಮತ್ತು ರೈತರ ಸಮಸ್ಯೆಗೆ ಸದಾ ಸ್ಪಂದಿಸುವುದಾಗಿ ತಿಳಿಸಿದರು. ನೂತನ ಅಧ್ಯಕ್ಷರ ಆಯ್ಕೆಯ ಘೋಷಣೆಯಾಗುತ್ತಿದ್ದಂತೆ ತಮ್ಮ ಬೆಂಬಲಿಗರು, ಅಭಿಮಾನಿಗಳು, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು ಹಾಗೂ ಸ್ಥಳೀಯ ಮುಖಂಡರುಗಳು, ಸಂಘದ ಆಡಳಿತ ಮಂಡಳಿ ಮತ್ತು ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಸಿದ್ಧಲಿಂಗಪ್ಪನವರು ನೂತನ ಅಧ್ಯಕ್ಷರನ್ನು ಅಭಿನಂದಿಸಿ ಶುಭ ಹಾರೈಸಿದರು. .

- ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು ತುರುವೇಕೆರೆ: ಶ್ರೀ ಶ್ರೀ ಶ್ರೀ ಡಾ // ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆ ವೈಭವದಿಂದ ಆಚರಣೆ ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಶ್ರೀ ಮಹಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆಯನ್ನು ಪಟ್ಟಣದ ಗಣಪತಿ ಆಸ್ಥಾನ ಮಂಟಪದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಟ್ಟಣದ ಖ್ಯಾತ ಹಿರಿಯ ವೈದ್ಯ ಡಾ. ಎ. ನಾಗರಾಜ್ ಅವರು ಮಾತನಾಡಿ, ಮಕ್ಕಳು ಹಾಗೂ ಯುವಕರಲ್ಲಿ ಮಾದಕ ವ್ಯಸನದ ಬೆಳವಣಿಗೆ, ಅದರ ಆರೋಗ್ಯದ ಮೇಲಾಗುವ ಪರಿಣಾಮಗಳು ಮತ್ತು ಕುಟುಂಬ ಹಾಗೂ ಸಮಾಜದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಮಕ್ಕಳು ಮಾದಕ ವ್ಯಸನದ ಬಲೆಗೆ ಬೀಳುವ ಮೊದಲೇ ತಡೆಯುವುದು ಹೇಗೆ, ಪೋಷಕರು ಮತ್ತು ಶಿಕ್ಷಕರ ಪಾತ್ರ ಎಷ್ಟು ಮಹತ್ವದ್ದು ಎಂಬುದನ್ನು ವಿವರಿಸಿದರು. ಉಪನ್ಯಾಸಕ ವಿಜಯಕುಮಾರ್ ಅವರು ಮಾದಕ ವ್ಯಸನದಿಂದ ಯುವ ಸಮೂಹಕ್ಕೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೆಳೆಯನಂತೆ ತಿಳಿಸಿಕೊಟ್ಟರು. ವ್ಯಸನದಿಂದ ವಿದ್ಯಾರ್ಥಿಗಳ ಭವಿಷ್ಯ ಹೇಗೆ ಹಾಳಾಗುತ್ತದೆ, ಮಾನಸಿಕ ಆರೋಗ್ಯದ ಮೇಲೆ ಬೀರುವ ಪರಿಣಾಮ, ಮತ್ತು ವ್ಯಸನದಿಂದ ದೂರವಿರಲು ಯುವಕರು ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಸರಳವಾಗಿ ಮನವರಿಕೆ ಮಾಡಿಕೊಟ್ಟರು. ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಆಡಳಿತ, ಆರೋಗ್ಯ, ಶಿಕ್ಷಣ ಮತ್ತು ಪೊಲೀಸ್ ಇಲಾಖೆಗಳ ಸಮನ್ವಯದ ಅಗತ್ಯವನ್ನು ಕಾರ್ಯಕ್ರಮದಲ್ಲಿ ಒತ್ತಿ ಹೇಳಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡು ವ್ಯಸನ ಮುಕ್ತಿಯ ಸಂದೇಶಕ್ಕೆ ಬೆಂಬಲ ಸೂಚಿಸಿದರು. ಈ ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಇ ಓ ಅನಂತರಾಜು, ಗ್ರೇಡ್( 2) ತಹಶೀಲ್ದಾರ್ ಸುನಿಲ್, ಬಿಇಒ ಸೋಮಶೇಖರ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಪಾಪಣ್ಣ, ಸಮಾಜ ಕಲ್ಯಾಣ ಇಲಾಖೆಯ ವರ್ಷಿಣಿ, ತಾಲೋಕು ಚುನಾವಣಾ ಶಾಖೆಯ ಶಿರಸ್ತೆದಾರ್ ರಂಗಸ್ವಾಮಿ, ಆರ್ ಆರ್ ಟಿ ಶಾಖೆಯ ಶ್ರೀನಿವಾಸ್, ವತ್ಸಲ, ಬಿ ಆರ್ ಸಿ ಸುರೇಶ್,ಉಪನ್ಯಾಸಕ ಡಾ, ಚಂದ್ರಯ್ಯ,ಆರೋಗ್ಯ ಇಲಾಖೆಯ ಸದಾಶಿವಯ್ಯ ಆಶಾ ಕಾರ್ಯಕರ್ತೆಯರು ಶಾಲಾ-ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಶಿಕ್ಷಕರು ಭಾಗವಹಿಸಿದ್ದರು.4
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ರೈತರು ಅಹೋರಾತ್ರಿ ಧರಣೀಯ ಮುಂದುವರಿಸಿದ್ದಾರೆ4
- ಹೇಮಾವತಿ ನೀರಿಗಾಗಿ ಹೋರಾಟ ಪ್ರತಿಭಟನಾ ಸ್ಥಳಕ್ಕೆ ಬಂದ ಶಾಸಕ ಸಿ ಬಿ ಸುರೇಶ್ ಬಾಬು ಚಿಕ್ಕನಾಯಕನಹಳ್ಳಿಯಲ್ಲಿ ನಡೆಯುತ್ತಿರುವಂತಹ ಹೇಮಾವತಿ ನಾಲೆ ಶೀಘ್ರವೇ ಮುಗಿಸಬೇಕು ನೀರನ್ನು ಹರಿಸಬೇಕು ಎಂಬ ಹೋರಾಟ ಮೂರು ದಿನಗಳಿಂದ ನಡೆಯುತ್ತಿದ್ದು ಇಂದು ಚಿಕ್ಕನಾಯಕನಹಳ್ಳಿ ಕ್ಷೇತ್ರ ಶಾಸಕ ಸುರೇಶ್ ಬಾಬು ನೇರವಾಗಿ ತಾಲೂಕು ಕಚೇರಿಯ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಹೋರಾಟಗಾರರ ಜೊತೆ ನೇರವಾಗಿ ಮಾತನಾಡಿದ್ದಾರೆ ಮಂಗಳವಾರದ ಒಳಗೆ ಕಾಮಗಾರಿಯನ್ನ ಮುಗಿಸುತ್ತೇವೆ ಎಂಬ ಭರವಸೆಯನ್ನು ನೀಡಿದ್ದಾರೆ.1
- ಕುಣಿಗಲ್ ತಾಲೂಕು ಯಡಿಯೂರು ಹೋಬಳಿ ಗ್ರಾಮಗಳಿಗೆ ಸುಮಾರು 6.50 ಕೋಟಿ ರೂ ಅಧಿಕ ಅಭಿವೃದ್ಧಿ ಕಾಮಗಾರಿ ನಾಗಸಂದ್ರ ಹುಲಿವಾನ ಅಕ್ಕಿ ಮರಿಪಾಳ್ಯ ಹೆಡ್ಡಿಗೆರೆ ಜೆಡ್ಡಿಗೆರೆ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಘಟಕ ಮತ್ತು ರಸ್ತೆ ಚರಂಡಿ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿದರು1
- ಮಂಡ್ಯದ ಚಿರುಮರಿಗೆ ಫಿದಾ ಆದ ನಟಿ ಅಭಿಮಾನಿ ಗಳಿಗೆ ಸೆಲ್ಫಿ ನೀಡುವಾಗಲು ಚಿರುಮುರಿ ಬಿಡದೆ ತಿಂದ ರಾಗಿಣಿ ಮಂಡ್ಯ- ತಮ್ಮ ಚಲನಚಿತ್ರದ ಪ್ರಮೋಷನ್ ಗಾಗಿ ಮಂಡ್ಯ ಸಂಜೆ ಥಿಯೇಟರ್ ಗೆ ಭೇಟಿ ನೀಡಿದ್ದ ನಟಿ ರಾಗಿಣಿ ಅತ್ಯಂತ ಪ್ರಿಯ ಮಂಡ್ಯದ ಚುರುಮುರಿ ಸವಿದ ಅಪರೂಪದ ಘಟನೆ ಮಂಡ್ಯ ಸಂಜೆಯ ಸರ್ಕಲ್ ನಲ್ಲಿ ಜರುಗಿತು. ಮಂಡ್ಯ ಸಂಜೆ ಥಿಯೇಟರ್ ನಲ್ಲಿ ನಡೆಯುತ್ತಿರುವ ಸರ್ಕಾರಿ ನ್ಯಾಯಬೆಲೆ ಅಂಗಡಿ ಚಲನಚಿತ್ರ ದಲ್ಲಿ ನಾಯಕಿ ನಟಿಯಾಗಿ ನಟಿಸಿರುವ ರಾಗಿಣಿ ಯವರು ಮಂಡ್ಯಕ್ಕೆ ಬಂದಾಗ ಅಲ್ಲೇ ಥಿಯೇಟರ್ನಲ್ಲಿ ಮಾರಾಟ ಮಾಡುತ್ತಿದ್ದ ಚುರುಮುರಿಯನ್ನು ಪ್ರೀತಿಯಿಂದ ಸವಿದರು. ಅಭಿಮಾನಿಗಳು ಸೆಲ್ಫಿಗಾಗಿ ಹೋಗಿದ್ದರು ಕೈಯಲ್ಲಿ ಇದ್ದ ಚುರುಮುರಿಯನ್ನು ಬಿಡದೆ ಸೆಲ್ಫಿ ನೀಡಿದರು1
- ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ,ಪ್ರತಿಭಟನೆ ಮದ್ದೂರು-ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವ ರಾಜ್ಯ ಸರ್ಕಾರದ ಆದೇಶವನ್ನು ವಿರೋಧಿಸಿ ಹಾಗೂ ಶಿಂಷಾ ಎಡ ಮತ್ತು ಬಲದಂಡೆ ನಾಲೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ, ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ವಿನೋದ್ ಬಾಬಾ ನೇತೃತ್ವದಲ್ಲಿ ಕೆಸ್ತೂರು ವೃತ್ತ ಘಟಕದ ವತಿಯಿಂದ ಶನಿವಾರ ರಸ್ತೆತಡೆ ಪ್ರತಿಭಟನೆ ನಡೆಸಲಾಯಿತು. ಬೆಳಿಗ್ಗೆ 11 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ ರೈತರು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು. ಪರಿಣಾಮ ಸುಮಾರು ಎರಡು ಕಿಲೋಮೀಟರ್ವರೆಗೆ ವಾಹನಗಳ ಸಂಚಾರ ದಟ್ಟಣೆ ಉಂಟಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ವಿನೋದ್ ಬಾಬಾ, ಕೆಆರ್ಎಸ್ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಕಬ್ಬು ಹಾಗೂ ವಿವಿಧ ತೋಟಗಾರಿಕೆ ಬೆಳೆಗಳು ನೀರಿನ ಕೊರತೆಯಿಂದ ಒಣಗುತ್ತಿವೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದು ರಾಜ್ಯದ ರೈತರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.1
- ಬಿದರೆಕೆರೆ-ಬೇಡತ್ತೂರು ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡಲು ಒತ್ತಾಯ ಮಧುಗಿರಿ ತಾಲೂಕಿನಲ್ಲಿ ನಡೆಯುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯಲ್ಲಿ ಬಿದರೆಕೆರೆ ಬೇಡತ್ತೂರು ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡುವಂತೆ, ಬಿಜೆಪಿ ಒಬಿಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಮಿಡಿಗೇರ್ ಶ್ರೀ ಕೃಷ್ಣಮೂರ್ತಿ ಇವತ್ತಾಯಿಸಿದ್ದಾರೆ2
- ಪಾಕಿಸ್ತಾನಿ ಸೈನಿಕರು ಹಾಕಿದ ಬಾಂಬ್ ನಿಂದ ನನ್ನ ಕಾಲು ಹೋಯಿತು ಆದರೂ ಯುದ್ಧ ಗೆದ್ದಿದ್ದೇವೆ 1999 ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಕ್ಯಾಪ್ಟನ್ ನವೀನ್ ನಾಗಪ್ಪ ಯುದ್ಧದ ಸಮಯದಲ್ಲಿ ಬಿದ್ದಂತಹ ಬಾಂಬ ನಿಂದ ತಮ್ಮ ಕಾಲನ್ನೇ ಕಳೆದುಕೊಂಡಿದ್ದಾರೆ ಕಾರ್ಗಿಲ್ ಯುದ್ಧದ ಸಮಯದಲ್ಲಿ ನಾವು ಹೇಗೆಲ್ಲಾ ಹೋರಾಟ ಮಾಡಿದೆವು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಹೇಳಿದ್ರು ಕಾರ್ಗಿಲ್ನಂತಹ ಈ ಮಚ್ಚಾದಿತಾ ಪ್ರದೇಶದಲ್ಲಿ ಪಾಕಿಸ್ತಾನಿ ಸೈನಿಕರು ಹಾಗೂ ಭಾರತೀಯ ಸೈನಿಕರ ಹೋರಾಟ ಹೇಗಿತ್ತು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು1