logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಾಗಲಕೋಟ :ಬಿಜೆಪಿಯಿಂದ ಬೃಹತ್ ಬೈಕ್ ರ್ಯಾಲಿ | 150ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ ಬಾಗಲಕೋಟೆಯಲ್ಲಿ ಬಿಜೆಪಿ ಪಕ್ಷದ ಪದಗ್ರಹಣ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ಜೋರಾಗಿ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹಾಗೂ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ದಿಲೀಪ್ ರಾಠೋಡ ಅವರಿಗೆ ಪದಗ್ರಹಣ ಮಾಡಿಸಲಾಯಿತು. ಇದೇ ವೇಳೆ 150ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು. ಪದಗ್ರಹಣ ಹಿನ್ನೆಲೆಯಲ್ಲಿ ನವನಗರ ಕೋರ್ಟ್ ಸರ್ಕಲ್‌ನಿಂದ ಆರಂಭವಾದ ಬೃಹತ್ ಬೈಕ್ ರ್ಯಾಲಿ ವಿದ್ಯಾಗಿರಿ, ಬಸವೇಶ್ವರ ವೃತ್ತ, ರೈಲ್ವೆ ನಿಲ್ದಾಣ ರಸ್ತೆ ಮೂಲಕ ಎಪಿಎಂಸಿ ಮೂಲಕ ಬಿಜೆಪಿ ಜಿಲ್ಲಾ ಕಾರ್ಯಾಲಯದವರೆಗೆ ಸಾಗಿತು.

10 hrs ago
user_PKBagalkot
PKBagalkot
ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
10 hrs ago

ಬಾಗಲಕೋಟ :ಬಿಜೆಪಿಯಿಂದ ಬೃಹತ್ ಬೈಕ್ ರ್ಯಾಲಿ | 150ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ ಬಾಗಲಕೋಟೆಯಲ್ಲಿ ಬಿಜೆಪಿ ಪಕ್ಷದ ಪದಗ್ರಹಣ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ಜೋರಾಗಿ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹಾಗೂ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ದಿಲೀಪ್ ರಾಠೋಡ ಅವರಿಗೆ ಪದಗ್ರಹಣ ಮಾಡಿಸಲಾಯಿತು. ಇದೇ ವೇಳೆ 150ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು. ಪದಗ್ರಹಣ ಹಿನ್ನೆಲೆಯಲ್ಲಿ ನವನಗರ ಕೋರ್ಟ್ ಸರ್ಕಲ್‌ನಿಂದ ಆರಂಭವಾದ ಬೃಹತ್ ಬೈಕ್ ರ್ಯಾಲಿ ವಿದ್ಯಾಗಿರಿ, ಬಸವೇಶ್ವರ ವೃತ್ತ, ರೈಲ್ವೆ ನಿಲ್ದಾಣ ರಸ್ತೆ ಮೂಲಕ ಎಪಿಎಂಸಿ ಮೂಲಕ ಬಿಜೆಪಿ ಜಿಲ್ಲಾ ಕಾರ್ಯಾಲಯದವರೆಗೆ ಸಾಗಿತು.

More news from ಕರ್ನಾಟಕ and nearby areas
  • ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ರೋಣ ಪಟ್ಟಣದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಿ ತಹಸಿಲ್ದಾರ್ ರಿಗೆ ಮನವಿ ಸಲ್ಲಿಸಲಾಯಿತು, ಕರ್ನಾಟಕ ರಾಜ್ಯದಲ್ಲಿ ಕಳೆದ 3-4 ವರ್ಷಗಳಿಂದ ವಿದ್ಯಾರ್ಥಿಗಳ ಪರಿಸ್ಥಿತಿ ಶೋಚನೀಯವಾಗಿದೆ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ವಿದ್ಯಾರ್ಥಿಗಳ ಜೊತೆಗೆ ನಿಲ್ಲಬೇಕಾದ ಸರ್ಕಾರ ಕುಂಭನಿದ್ರೆಗೆ ಜಾರಿದೆ,ಸರಕಾರದ ಹತ್ತಿರ ಯಾವುದೇ ದೂರದೃಷ್ಟಿಯ ಯೋಜನೆಗಳು ಇಲ್ಲದೆ ಸಮಸ್ಯೆಗಳು ಬಂದಾಗ ಅವುಗಳಿಗೆ ತೇಪೆ ಹಚ್ಚುವ ಕಾರ್ಯ ನಡೆಯುತ್ತಿದೆ,ಸರಕಾರಿ ಹುದ್ದೆಗಳ ನೇಮಕಾತಿ, ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನ ಮಾಡಿಕೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಕಳೆದ ಮೂರು ವರ್ಷಗಳಿಂದ ಯಾವುದೇ ನೇಮಕಾತಿಗಳನ್ನು ಮಾಡದೆ ವಿದ್ಯಾರ್ಥಿಗಳಿಗೆ ಮೋಸ ಮಾಡಿದೆ, ರಾಜ್ಯದಲ್ಲಿ ಒಟ್ಟು 43 ಇಲಾಖೆಗಳಲ್ಲಿ 284,881 ಹುದ್ದೆಗಳು ಖಾಲಿ ಇದೆ,ಲಕ್ಷಾಂತರ ಅಭ್ಯರ್ಥಿಗಳು ಕಳೆದ ಐದಾರು ವರ್ಷಗಳಿಂದ ಸರ್ಕಾರ ನೇಮಕಾತಿಗಳನ್ನ ಮಾಡುತ್ತೆ ಎಂಬ ನಂಬಿಕೆಯೊಂದಿಗೆ ಪ್ರತಿ ತಿಂಗಳು ಹಣವನ್ನು ಖರ್ಚು ಮಾಡಿಕೊಂಡು ತರಬೇತಿಯನ್ನು ಪಡೆಯುತ್ತಾ ಸರಕಾರಿ ಸೇವೆಯನ್ನು ಮಾಡಬೇಕು ಎಂಬ ಆಸೆಯನ್ನು ಇಟ್ಟುಕೊಂಡು ಅಧ್ಯಯನ ಮಾಡುತ್ತಿದ್ದಾರೆ, ಆದರೆ ಅಂತಹ ಸಾವಿರಾರು ಅಭ್ಯರ್ಥಿಗಳ ವಯಸ್ಸು ಕೂಡಾ ಮೀರುತ್ತಿದೆ, ಆದರೆ ಸರಕಾರಕ್ಕೆ ಈ ಯಾವುದೇ ತೊಂದರೆಗಳನ್ನು ಗಮನಿಸದೆ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ,ಅದರಲ್ಲೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತಹ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ 79,694 ಹುದ್ದೆಗಳು, ಉನ್ನತ ಶಿಕ್‌ಷಣ ಇಲಾಖೆಯಲ್ಲೂ 13,599 ಹುದ್ದೆಗಳು ಖಾಲಿ ಇದ್ದು ಇದರಿಂದ ರಾಜ್ಯದ ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ, ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ,ಸರ್ವರಿಗೂ ಶಿಕ್ಷಣವನ್ನು ನೀಡಬೇಕಾದದ್ದು ಸರಕಾರಗಳ ಕರ್ತವ್ಯ ಆದರೆ ಸರಕಾರಿ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳ ಸರಕಾರ ಅನ್ಯಾಯ ಮಾಡುತ್ತಿದೆ,ರಾಜ್ಯದ ವಿಶ್ವವಿದ್ಯಾಲಯಗಳ ಸ್ಥಿತಿಗತಿ ಶೋಚನೀಯವಾಗಿದೆ. ಕರ್ನಾಟಕ ರಾಜ್ಯದ ವಿಶ್ವವಿದ್ಯಾಗಳ ಸ್ಥಿತಿಗತಿ ಶೋಚನೀಯವಾಗಿದೆ, ಕರ್ನಾಟಕ ರಾಜ್ಯ ಮೊದಲು ಉನ್ನತ ಶಿಕ್ಷಣಕ್ಕೆ ಹೆಸರುವಾಸಿ ಆದ ರಾಜ್ಯ ಪ್ರತಿಷ್ಠಿತ ವಿವಿಗಳು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ ಅವರ ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿತ್ತು , ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಗಳನ್ನು ಸರಕಾರ ಕಡೆಗಣಿಸಿದೆ, ವಿವಿಗಳಿಗೆ ಯಾವುದೇ ಅನುದಾನ ನೀಡದೇ ಅವುಗಳನ್ನು ಕೇವಲ ವಿದ್ಯಾರ್ಥಿಗಳ ಶುಲ್ಕದ ಮೇಲೆ ನಡೆಸುವಂತೆ ಮಾಡುತ್ತಿದೆ, ಇದರಿಂದ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಮೇಲೆ ಹಲವಾರು ಶುಲ್ಕಗಳನ್ನು ಹೇರುತ್ತಿದೆ,ಹಿಂದಿನ ಸರ್ಕಾರ ಸ್ನಾಪಿಸಿದ 09 ವಿಶ್ವ ವಿದ್ಯಾಲಯಗಳು ಮುಚ್ಚುವ ಸ್ತಿತಿಯನ್ನು ಸರಕಾರ ನಿರ್ಮಾಣ ಮಾಡುತ್ತಿದೆ, ಖಾಯಂ ಹುದ್ದೆಗಳ ನೇಮಕಾತಿ ಇಲ್ಲದ ಕಾರಣ ಸಕಾಲಕ್ಕೆಅಂಕಪಟ್ಟಿ, ಫಲಿತಾಂಶ, ಹಾಗೂ ಇನ್ನಿತರ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಅನುಭವಿಸುವಂತಾಗಿದೆ,ವಿದ್ಯಾರ್ಥಿ ವೇತನ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ವಿದ್ಯಾರ್ಥಿವೇತನವನ್ನು ನೀಡುವ ಯೋಜನೆಯನ್ನು ಸರಕಾರ ಪ್ರಾರಂಭ ಮಾಡಿವೆ ಆದರೆ ಇತ್ತೀಚಿನ ದಿನಗಳಲ್ಲಿ ಸರಕಾರ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ವಿದ್ಯಾರ್ಥಿ ವೇತನವನ್ನು ತಲುಪಿಸುತ್ತಿಲ್ಲ,ಇದರಿಂದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಹೊಡೆತ ಬೀಳುತ್ತಿದೆ,ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಾರಂಭ ಮಾಡಬೇಕು,ವಿಶ್ವ ವಿದ್ಯಾಲಯಗಳಿಗೆ ಅನುದಾನ ನೀಡಬೇಕು,ಸಮರ್ಪಕವಾಗಿ ವಿದ್ಯಾರ್ಥಿ ವೇತನವನ್ನು ತಲುಪಿಸಬೇಕು,ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಫಲಿತಾಂಶ, ಅಂಕಪಟ್ಟಿ ನೀಡಬೇಕು,ವಿವಿಧ ಇಲಾಖೆಗಳಿಗೆ ನೇಮಕಾತಿ ಮಾಡುವಾಗ ವಯೋಮಿತಿಯನ್ನು ಸಡಿಲಿಕೆ ಮಾಡಬೇಕು ಎಂದು ಮನವಿ ಸಲ್ಲಿಸಿದರು, ರೋಣ ಪಟ್ಟಣದ ಮುಲ್ಲಾನಬಾವಿ ವೃತ್ತದಲ್ಲಿ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು ಇದರಿಂದ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
    1
    ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ರೋಣ ಪಟ್ಟಣದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಿ ತಹಸಿಲ್ದಾರ್ ರಿಗೆ ಮನವಿ ಸಲ್ಲಿಸಲಾಯಿತು, ಕರ್ನಾಟಕ ರಾಜ್ಯದಲ್ಲಿ ಕಳೆದ 3-4 ವರ್ಷಗಳಿಂದ ವಿದ್ಯಾರ್ಥಿಗಳ ಪರಿಸ್ಥಿತಿ ಶೋಚನೀಯವಾಗಿದೆ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ವಿದ್ಯಾರ್ಥಿಗಳ ಜೊತೆಗೆ ನಿಲ್ಲಬೇಕಾದ ಸರ್ಕಾರ ಕುಂಭನಿದ್ರೆಗೆ ಜಾರಿದೆ,ಸರಕಾರದ ಹತ್ತಿರ ಯಾವುದೇ
ದೂರದೃಷ್ಟಿಯ ಯೋಜನೆಗಳು ಇಲ್ಲದೆ ಸಮಸ್ಯೆಗಳು ಬಂದಾಗ ಅವುಗಳಿಗೆ ತೇಪೆ ಹಚ್ಚುವ ಕಾರ್ಯ ನಡೆಯುತ್ತಿದೆ,ಸರಕಾರಿ ಹುದ್ದೆಗಳ ನೇಮಕಾತಿ, ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನ
ಮಾಡಿಕೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಕಳೆದ ಮೂರು ವರ್ಷಗಳಿಂದ ಯಾವುದೇ ನೇಮಕಾತಿಗಳನ್ನು ಮಾಡದೆ ವಿದ್ಯಾರ್ಥಿಗಳಿಗೆ ಮೋಸ
ಮಾಡಿದೆ, ರಾಜ್ಯದಲ್ಲಿ ಒಟ್ಟು 43 ಇಲಾಖೆಗಳಲ್ಲಿ 284,881 ಹುದ್ದೆಗಳು ಖಾಲಿ ಇದೆ,ಲಕ್ಷಾಂತರ ಅಭ್ಯರ್ಥಿಗಳು ಕಳೆದ ಐದಾರು ವರ್ಷಗಳಿಂದ ಸರ್ಕಾರ ನೇಮಕಾತಿಗಳನ್ನ ಮಾಡುತ್ತೆ ಎಂಬ ನಂಬಿಕೆಯೊಂದಿಗೆ ಪ್ರತಿ ತಿಂಗಳು ಹಣವನ್ನು ಖರ್ಚು ಮಾಡಿಕೊಂಡು ತರಬೇತಿಯನ್ನು ಪಡೆಯುತ್ತಾ ಸರಕಾರಿ ಸೇವೆಯನ್ನು ಮಾಡಬೇಕು ಎಂಬ ಆಸೆಯನ್ನು
ಇಟ್ಟುಕೊಂಡು ಅಧ್ಯಯನ ಮಾಡುತ್ತಿದ್ದಾರೆ, ಆದರೆ ಅಂತಹ ಸಾವಿರಾರು ಅಭ್ಯರ್ಥಿಗಳ ವಯಸ್ಸು ಕೂಡಾ ಮೀರುತ್ತಿದೆ, ಆದರೆ ಸರಕಾರಕ್ಕೆ ಈ ಯಾವುದೇ ತೊಂದರೆಗಳನ್ನು ಗಮನಿಸದೆ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಜೀವನದ ಜೊತೆ
ಚೆಲ್ಲಾಟವಾಡುತ್ತಿದೆ,ಅದರಲ್ಲೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತಹ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ 79,694 ಹುದ್ದೆಗಳು, ಉನ್ನತ ಶಿಕ್‌ಷಣ ಇಲಾಖೆಯಲ್ಲೂ 13,599
ಹುದ್ದೆಗಳು ಖಾಲಿ ಇದ್ದು ಇದರಿಂದ ರಾಜ್ಯದ ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ, ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ,ಸರ್ವರಿಗೂ ಶಿಕ್ಷಣವನ್ನು ನೀಡಬೇಕಾದದ್ದು ಸರಕಾರಗಳ ಕರ್ತವ್ಯ ಆದರೆ ಸರಕಾರಿ ಶಾಲಾ
ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳ ಸರಕಾರ ಅನ್ಯಾಯ ಮಾಡುತ್ತಿದೆ,ರಾಜ್ಯದ ವಿಶ್ವವಿದ್ಯಾಲಯಗಳ ಸ್ಥಿತಿಗತಿ ಶೋಚನೀಯವಾಗಿದೆ. ಕರ್ನಾಟಕ ರಾಜ್ಯದ ವಿಶ್ವವಿದ್ಯಾಗಳ ಸ್ಥಿತಿಗತಿ ಶೋಚನೀಯವಾಗಿದೆ, ಕರ್ನಾಟಕ ರಾಜ್ಯ ಮೊದಲು ಉನ್ನತ ಶಿಕ್ಷಣಕ್ಕೆ ಹೆಸರುವಾಸಿ ಆದ ರಾಜ್ಯ ಪ್ರತಿಷ್ಠಿತ ವಿವಿಗಳು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ ಅವರ ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿತ್ತು , ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಗಳನ್ನು ಸರಕಾರ ಕಡೆಗಣಿಸಿದೆ, ವಿವಿಗಳಿಗೆ ಯಾವುದೇ ಅನುದಾನ ನೀಡದೇ ಅವುಗಳನ್ನು ಕೇವಲ ವಿದ್ಯಾರ್ಥಿಗಳ ಶುಲ್ಕದ ಮೇಲೆ ನಡೆಸುವಂತೆ ಮಾಡುತ್ತಿದೆ, ಇದರಿಂದ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಮೇಲೆ ಹಲವಾರು ಶುಲ್ಕಗಳನ್ನು ಹೇರುತ್ತಿದೆ,ಹಿಂದಿನ ಸರ್ಕಾರ ಸ್ನಾಪಿಸಿದ 09 ವಿಶ್ವ ವಿದ್ಯಾಲಯಗಳು ಮುಚ್ಚುವ ಸ್ತಿತಿಯನ್ನು ಸರಕಾರ ನಿರ್ಮಾಣ ಮಾಡುತ್ತಿದೆ, ಖಾಯಂ ಹುದ್ದೆಗಳ ನೇಮಕಾತಿ ಇಲ್ಲದ ಕಾರಣ ಸಕಾಲಕ್ಕೆಅಂಕಪಟ್ಟಿ, ಫಲಿತಾಂಶ, ಹಾಗೂ ಇನ್ನಿತರ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಅನುಭವಿಸುವಂತಾಗಿದೆ,ವಿದ್ಯಾರ್ಥಿ ವೇತನ
ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ವಿದ್ಯಾರ್ಥಿವೇತನವನ್ನು ನೀಡುವ ಯೋಜನೆಯನ್ನು ಸರಕಾರ ಪ್ರಾರಂಭ ಮಾಡಿವೆ ಆದರೆ ಇತ್ತೀಚಿನ ದಿನಗಳಲ್ಲಿ ಸರಕಾರ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ವಿದ್ಯಾರ್ಥಿ ವೇತನವನ್ನು ತಲುಪಿಸುತ್ತಿಲ್ಲ,ಇದರಿಂದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಹೊಡೆತ ಬೀಳುತ್ತಿದೆ,ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಾರಂಭ ಮಾಡಬೇಕು,ವಿಶ್ವ ವಿದ್ಯಾಲಯಗಳಿಗೆ ಅನುದಾನ ನೀಡಬೇಕು,ಸಮರ್ಪಕವಾಗಿ ವಿದ್ಯಾರ್ಥಿ ವೇತನವನ್ನು ತಲುಪಿಸಬೇಕು,ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಫಲಿತಾಂಶ, ಅಂಕಪಟ್ಟಿ ನೀಡಬೇಕು,ವಿವಿಧ ಇಲಾಖೆಗಳಿಗೆ ನೇಮಕಾತಿ ಮಾಡುವಾಗ ವಯೋಮಿತಿಯನ್ನು ಸಡಿಲಿಕೆ
ಮಾಡಬೇಕು ಎಂದು ಮನವಿ ಸಲ್ಲಿಸಿದರು, ರೋಣ ಪಟ್ಟಣದ ಮುಲ್ಲಾನಬಾವಿ ವೃತ್ತದಲ್ಲಿ ಪ್ರತಿಭಟನಾಕಾರರು ಮಾನವ ಸರಪಳಿ  ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು ಇದರಿಂದ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    2 hrs ago
  • ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮಾಚ೯ 18 ರಿಂದ ಏಪ್ರಿಲ್ 02 ರ ವರೆಗೆ ಹುನಗುಂದ ಮತ್ತು ಇಳಕಲ್ ಅವಳಿ ತಾಲೂಕಿನ 7 ಸರ್ಕಾರಿ , 08 ಅನುದಾನಿತ ಹಾಗೂ ಒಂದು ಅನುದಾನ ರಹಿತ ಶಾಲೆ ಸೇರಿದಂತೆ ಒಟ್ಟು 16 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲೇದಾರ ತಿಳಿಸಿದ್ದಾರೆ.
    1
    ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮಾಚ೯ 18 ರಿಂದ ಏಪ್ರಿಲ್ 02 ರ ವರೆಗೆ ಹುನಗುಂದ ಮತ್ತು ಇಳಕಲ್ ಅವಳಿ ತಾಲೂಕಿನ 7 ಸರ್ಕಾರಿ , 08 ಅನುದಾನಿತ ಹಾಗೂ ಒಂದು ಅನುದಾನ ರಹಿತ ಶಾಲೆ ಸೇರಿದಂತೆ ಒಟ್ಟು 16 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲೇದಾರ ತಿಳಿಸಿದ್ದಾರೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    9 hrs ago
  • MB Patil : ರಾಜ್ಯದ 2 ಕ್ಷೇತ್ರಗಳ ಬೈ ಎಲೆಕ್ಷನ್‌ಗೆ ಡೇಟ್ ಫಿಕ್ಸ್.. MB ಪಾಟೀಲ್ ರಿಯಾಕ್ಷನ್
    1
    MB Patil : ರಾಜ್ಯದ 2 ಕ್ಷೇತ್ರಗಳ ಬೈ ಎಲೆಕ್ಷನ್‌ಗೆ ಡೇಟ್ ಫಿಕ್ಸ್.. MB ಪಾಟೀಲ್ ರಿಯಾಕ್ಷನ್
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    22 hrs ago
  • Post by Ajay Shet
    2
    Post by Ajay Shet
    user_Ajay Shet
    Ajay Shet
    Grain Trader ಅಥಣಿ, ಬೆಳಗಾವಿ, ಕರ್ನಾಟಕ•
    43 min ago
  • ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಗುವಿನ ಬದುಕಿನ ಅತ್ಯಂತ ಮಹತ್ವದ ಘಟ್ಟ ತಹಸೀಲ್ದಾರ್ ಸಿದರಾಯ ಭೋಸಗಿ ಅಥಣಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಗುವಿನ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದ್ದು ಪ್ರತಿಯೊಂದು ಮಗುವು ಭಯರಹಿತವಾಗಿ ಹಾಗೂ ಯಶಸ್ವಿಯಾಗಿ ಪರೀಕ್ಷೆ ಬರೆಯುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ," ಎಂದು ತಹಸೀಲ್ದಾರ್ ಸಿದರಾಯ ಭೋಸಗಿ ಹೇಳಿದರು. ​ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮರುಳ ಶಂಕರ  ಸಭಾಭವನದಲ್ಲಿ  ನಡೆದ ಸುದ್ದಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷೆಗಳನ್ನು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಸಲು ತಾಲೂಕು ಆಡಳಿತವು ಕೈಗೊಂಡಿರುವ ಕ್ರಮಗಳ ಕುರಿತು ಅವರು ಮಾಹಿತಿ ನೀಡಿದರು. ​ಪರೀಕ್ಷಾ ಸಿದ್ಧತೆಗಳ ಮುಖ್ಯಾಂಶಗಳು: ​ಸುಸಜ್ಜಿತ ಕೇಂದ್ರಗಳು: ಅಥಣಿ ತಾಲೂಕಿನಾದ್ಯಂತ ಒಟ್ಟು 21 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಕುಡಿಯುವ ನೀರು, ಶೌಚಾಲಯ ಹಾಗೂ ಆಸನ ವ್ಯವಸ್ಥೆಯಂತಹ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ​ಕಟ್ಟುನಿಟ್ಟಿನ ನಿಗಾ: ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಹಾಗೂ ವೆಬ್ ಕ್ಯಾಮೆರಾ ಅಳವಡಿಸಲಾಗಿದ್ದು, ಆಯುಕ್ತರೇ ನೇರವಾಗಿ ಇದರ ಉಸ್ತುವಾರಿ ವಹಿಸಲಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಅಥವಾ ನಕಲು ಮಾಡಲು ಅವಕಾಶ ನೀಡದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ​ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ (144 ಸೆಕ್ಷನ್ ಜಾರಿ). ಅಕ್ಕಪಕ್ಕದ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ. ​ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ: ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಬಿಇಓ ಎಂ.ಆರ್. ಮುಂಜೆ ಅವರು 2025-26 ರ ಪರೀಕ್ಷಾ ಅಂಕಿ-ಅಂಶಗಳನ್ನು   ಪರೀಕ್ಷಾರ್ಥಿಗಳ ವಿವರವನ್ನು ಹಂಚಿಕೊಳ್ಳುತ್ತ  18-03-2026 ರಿಂದ 02-04-2026 ರವರೆಗೆ ಪರೀಕ್ಷೆ ಜರುಗಲಿದ್ದು  ಒಟ್ಟು ವಿದ್ಯಾರ್ಥಿಗಳು: 6,590.ಗಂಡು ಮಕ್ಕಳು 3,343, ಹೆಣ್ಣು ಮಕ್ಕಳು: 3,247 ಮಕ್ಕಳು ಪರೀಕ್ಷೆಗೆ ಹಾಜರಾಗಲಿದ್ದಾರೆ  ಇಓ ಶಿವಾನಂದ ಕಲ್ಲಾಪುರ ಈ ಸಂದರ್ಭದಲ್ಲಿ ಮಾತನಾಡಿ​"ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿವಂತ ಮಕ್ಕಳನ್ನು ನಾಡಿಗೆ ನೀಡುವ ಕಾರ್ಯವನ್ನು ನಾವು ಮಾಡಬೇಕಿದೆ," ಎಂದು ಅಭಿಪ್ರಾಯಪಟ್ಟರು. ​ಭದ್ರತೆ: ಶಾಂತಿಯುತವಾಗಿ ಪರೀಕ್ಷೆ ನಡೆಸಲು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಸಿಪಿಐ ಸಂತೋಷ ಹಳ್ಳೂರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಿಪಿಐ ಸಂತೋಷ ಹಳ್ಳೂರ್, ವಿವಿಧ ಇಲಾಖೆಯ ಅಧಿಕಾರಿ ಗಳಾದ  ನಿಜಗುಣಿ ಕೇರಿ, ಎ.ಬಿ. ಗೂಳಿಧರ್, ಎಂ.ವಿ. ನಾಮದಾರ, ಕೆಇಬಿ ಅಧಿಕಾರಿ ಪ್ರಾರ್ಥನಹಳ್ಳಿ, ಪರೀಕ್ಷಾ ನೋಡಲ್ ಅಧಿಕಾರಿ ಸಾವನ್ ಗಸ್ತಿ, ಕ್ಷೇತ್ರ ಸಮನ್ವಯ ಅಧಿಕಾರಿ ಗೌಡಪ್ಪ ಖೋತ, ಸಂಜೀವ ತೇಲಿ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಪಾಲಕರು, ಪರೀಕ್ಷಾ ಜಾಗೃತ್ ದಳದ ಸದಸ್ಯರು, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
    4
    ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಗುವಿನ ಬದುಕಿನ ಅತ್ಯಂತ ಮಹತ್ವದ ಘಟ್ಟ ತಹಸೀಲ್ದಾರ್ ಸಿದರಾಯ ಭೋಸಗಿ
ಅಥಣಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಗುವಿನ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದ್ದು ಪ್ರತಿಯೊಂದು ಮಗುವು ಭಯರಹಿತವಾಗಿ ಹಾಗೂ ಯಶಸ್ವಿಯಾಗಿ ಪರೀಕ್ಷೆ ಬರೆಯುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ," ಎಂದು ತಹಸೀಲ್ದಾರ್ ಸಿದರಾಯ ಭೋಸಗಿ ಹೇಳಿದರು.
​ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮರುಳ ಶಂಕರ  ಸಭಾಭವನದಲ್ಲಿ  ನಡೆದ ಸುದ್ದಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷೆಗಳನ್ನು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಸಲು ತಾಲೂಕು ಆಡಳಿತವು ಕೈಗೊಂಡಿರುವ ಕ್ರಮಗಳ ಕುರಿತು ಅವರು ಮಾಹಿತಿ ನೀಡಿದರು.
​ಪರೀಕ್ಷಾ ಸಿದ್ಧತೆಗಳ ಮುಖ್ಯಾಂಶಗಳು:
​ಸುಸಜ್ಜಿತ ಕೇಂದ್ರಗಳು: ಅಥಣಿ ತಾಲೂಕಿನಾದ್ಯಂತ ಒಟ್ಟು 21 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಕುಡಿಯುವ ನೀರು, ಶೌಚಾಲಯ ಹಾಗೂ ಆಸನ ವ್ಯವಸ್ಥೆಯಂತಹ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ.
​ಕಟ್ಟುನಿಟ್ಟಿನ ನಿಗಾ: ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಹಾಗೂ ವೆಬ್ ಕ್ಯಾಮೆರಾ ಅಳವಡಿಸಲಾಗಿದ್ದು, ಆಯುಕ್ತರೇ ನೇರವಾಗಿ ಇದರ ಉಸ್ತುವಾರಿ ವಹಿಸಲಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಅಥವಾ ನಕಲು ಮಾಡಲು ಅವಕಾಶ ನೀಡದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು.
​ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ (144 ಸೆಕ್ಷನ್ ಜಾರಿ). ಅಕ್ಕಪಕ್ಕದ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ.
​ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ: ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ.
ಈ ವೇಳೆ ಬಿಇಓ ಎಂ.ಆರ್. ಮುಂಜೆ ಅವರು 2025-26 ರ ಪರೀಕ್ಷಾ ಅಂಕಿ-ಅಂಶಗಳನ್ನು  
ಪರೀಕ್ಷಾರ್ಥಿಗಳ ವಿವರವನ್ನು ಹಂಚಿಕೊಳ್ಳುತ್ತ  18-03-2026 ರಿಂದ 02-04-2026 ರವರೆಗೆ ಪರೀಕ್ಷೆ ಜರುಗಲಿದ್ದು  ಒಟ್ಟು ವಿದ್ಯಾರ್ಥಿಗಳು: 6,590.ಗಂಡು ಮಕ್ಕಳು 3,343, ಹೆಣ್ಣು ಮಕ್ಕಳು: 3,247 ಮಕ್ಕಳು ಪರೀಕ್ಷೆಗೆ ಹಾಜರಾಗಲಿದ್ದಾರೆ 
ಇಓ ಶಿವಾನಂದ ಕಲ್ಲಾಪುರ ಈ ಸಂದರ್ಭದಲ್ಲಿ ಮಾತನಾಡಿ​"ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿವಂತ ಮಕ್ಕಳನ್ನು ನಾಡಿಗೆ ನೀಡುವ ಕಾರ್ಯವನ್ನು ನಾವು ಮಾಡಬೇಕಿದೆ," ಎಂದು ಅಭಿಪ್ರಾಯಪಟ್ಟರು.
​ಭದ್ರತೆ: ಶಾಂತಿಯುತವಾಗಿ ಪರೀಕ್ಷೆ ನಡೆಸಲು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಸಿಪಿಐ ಸಂತೋಷ ಹಳ್ಳೂರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಿಪಿಐ ಸಂತೋಷ ಹಳ್ಳೂರ್, ವಿವಿಧ ಇಲಾಖೆಯ ಅಧಿಕಾರಿ ಗಳಾದ  ನಿಜಗುಣಿ ಕೇರಿ, ಎ.ಬಿ. ಗೂಳಿಧರ್, ಎಂ.ವಿ. ನಾಮದಾರ, ಕೆಇಬಿ ಅಧಿಕಾರಿ ಪ್ರಾರ್ಥನಹಳ್ಳಿ, ಪರೀಕ್ಷಾ ನೋಡಲ್ ಅಧಿಕಾರಿ ಸಾವನ್ ಗಸ್ತಿ, ಕ್ಷೇತ್ರ ಸಮನ್ವಯ ಅಧಿಕಾರಿ ಗೌಡಪ್ಪ ಖೋತ, ಸಂಜೀವ ತೇಲಿ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಪಾಲಕರು, ಪರೀಕ್ಷಾ ಜಾಗೃತ್ ದಳದ ಸದಸ್ಯರು, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    1 hr ago
  • ನಾಲ್ಕು ಸೈಕಲ್ ಮತ್ತು ಮನೆಗಳನ್ನು ಕೊಡುವದಕ್ಕಿಂತ ಕೇವಲ ಭಾಷಣ ಮಾಡದೆ ನಿಜವಾಗಿ ರೈತರ ಪರ ಕೆಲಸ ಮಾಡಿದರೆ, ರೈತರು ಶಾಂತವಾಗುತ್ತಾರೆ ನಂತರ ಹಂತ ಹಂತವಾಗಿ ರಾಜ್ಯ ದೇಶ ಸಮೃದ್ದಿಯಾಗುತ್ತದೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೋಳಿ ಇವರು ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೇರವೆರಿಸಿ ಮಾತನಾಡಿದರು. ಗೋಕಾಕ ತಾಲೂಕಿನ ಕೊಣ್ಣೂರ ಪಟ್ಣದ ಹೊರವಲಯದ ಕೊಣ್ಣೂರ ಸಾವಳಗಿ ಮುಖ್ಯ ರಸ್ತೆಯಿಂದ ಶ್ರೀ ಕಂಠಿ ಲಕ್ಷ್ಮೀದೇವಿ ದೇವಸ್ಥಾನದ ವರೆಗೆ ರೈತರಿಗೆ ಅನೂಕೂಲ ಆಗಲೆಂದು ಅಂದಾಜು ಒಂದು ಕೋಟಿ ರೂ ವೆಚ್ಚದ ರಸ್ತೆ ಅಬಿವೃದ್ದಿ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೋಳಿ ಇವರು ಭೂಮಿ ಪೂಜೆ ನೇರವೆರಿಸಿದರು. ಸ್ಥಳಿಯ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು ಸರಕಾರವನ್ನು ಟೀಕೆ ಮಾಡುದಕ್ಕಿಂತ ಸಾದ್ಯವಾದಷ್ಟ ಅಬಿವೃದ್ದಿ ಕಾರ್ಯಗಳನ್ನು ಮಾಡಬೇಕು , ಟೀಕೆ ಮಾಡುತ್ತಾ ಕುತರೆ ಆಗೊದಿಲ್ಲ. ಸರಕಾರದ ಒಂದೊಂದು ಪದ್ದತಿ ಇರುತ್ತದೆ, ನಾನು ನೀರಾವರಿ ಮಂತ್ರಿ ಇದ್ದಾಗ ಬೆಳಗಾವಿ ಜಿಲ್ಲೆಯಲ್ಲಿ ವಿಶೇಷವಾಗಿ ಚಿಕ್ಕೋಡಿಯಲ್ಲಿ ಮತ್ತು ನಮ್ಮ ಬಾಗದಲ್ಲಿ ಸವಳು ಜವಳು ತೆಗೆದು ರೈತರಿಗೆ ಅನೂಕೂಲಕ್ಕಾಗಿ ರಸ್ತೆ ಅಬಿವೃದ್ದಿಗಾಗಿ 200 ಕೋಟಿ ರೂ ಇಟ್ಟು ಹೊಸ ಯೋಜನೆ ಮಾಡಲಾಗಿತ್ತು ,ನನ್ನ ರಾಜಿನಾಮೆಯಿಂದ ಅದು ಇವತ್ತು ಕುಂಟಿತವಾಗಿದೆ , ದೇವರ ಆಶಿರ್ವಾದ ಮತ್ತು ಜನತೆ ಆಶಿರ್ವಾದೊಂದಿಗೆ ಮತ್ತೆ ಅದೆ ಸ್ಥಾನಕ್ಕೆ ಬಂದರೆ ರಾಜ್ಯದ ಮೂಲೆ ಮೂಲೆಗಳಲ್ಲಿ ಅಬಿವೃದ್ದಿ ಕಾರ್ಯ ಮಾಡುತ್ತೇನೆ. ಮನುಷ್ಯ ತಪ್ಪು ಮಾಡುವುದು ಸಹಜ ತಿದ್ದಿಕೊಂಡು ಒಗ್ಗಟ್ಟಾಗಿ ಇದ್ದು ಮತ್ತೆ ನನಗೆ ಆಶಿರ್ವದಿಸಿದರೆ ಇನ್ನು ಹೆಚ್ಚಿನ ಅಬಿವೃದ್ದಿ ಕಾರ್ಯಮಾಡುತ್ತೇನೆಂದರು.. ಇದೆ ಸಂದರ್ಭದಲ್ಲಿ ನಾಳೆಯಿಂದ ರಾಜ್ಯಾದ್ಯಂತ ನಡೆಯುವ ಎಸ್,ಎಸ್,ಎಲ್,ಸಿ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ದೈರ್ಯದಿಂದ ಪರೀಕ್ಷೆ ಬರೆದು ಹೆಚ್ಚಿನ ಅಂಕ ಪಡೆಯಬೇಕೆಂದು ತಿಳಿಸಿ ಎಲ್ಲ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದರು. ಇವತ್ತಿನ ಕಾರ್ಯಕ್ರಮದಲ್ಲಿ ಶಿವಾನಂದ ಗಣಾಚಾರಿ, ಸಚಿನ ಸಮಯ,ಜಿನ್ನಪ್ಪ ಚೌಗಲಾ, ಮಹಾವೀರ ಪಾಟೀಲ,ಈರಪ್ಪಾ ಪಟಗುಂದಿ ,ನಾಗಪ್ಪ ಮಾಳಗಿ, ಅಕ್ಷಯ ಬೆಡಕಿಹಾಳ, ಬಸವರಾಜ ಬೇಡರಟ್ಟಿ, ಶಂಕರ ಗಾಡಿವಡ್ಡರ. ಗುತ್ತಿಗೆದಾರ ದರ್ಶನ ಅಶೋಕ ಕೋಳಿ, ಸೇರಿದಂತೆ ಕೊಣ್ಣೂರ ರೈತ ಸಂಘದ ಸರ್ವ ಸದಸ್ಯರು, ಕೊಣ್ಣೂರ ,ಸಾವಳಗಿ ಗ್ರಾಮಸ್ಥರು ಉಪಸ್ಥಿತರಿದ್ದರು.
    3
    ನಾಲ್ಕು ಸೈಕಲ್ ಮತ್ತು ಮನೆಗಳನ್ನು  ಕೊಡುವದಕ್ಕಿಂತ ಕೇವಲ ಭಾಷಣ ಮಾಡದೆ ನಿಜವಾಗಿ ರೈತರ ಪರ ಕೆಲಸ ಮಾಡಿದರೆ, ರೈತರು ಶಾಂತವಾಗುತ್ತಾರೆ ನಂತರ ಹಂತ ಹಂತವಾಗಿ ರಾಜ್ಯ ದೇಶ ಸಮೃದ್ದಿಯಾಗುತ್ತದೆ ಎಂದು  ಗೋಕಾಕ ಶಾಸಕ ರಮೇಶ ಜಾರಕಿಹೋಳಿ ಇವರು ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೇರವೆರಿಸಿ ಮಾತನಾಡಿದರು.
ಗೋಕಾಕ ತಾಲೂಕಿನ ಕೊಣ್ಣೂರ ಪಟ್ಣದ ಹೊರವಲಯದ ಕೊಣ್ಣೂರ ಸಾವಳಗಿ ಮುಖ್ಯ ರಸ್ತೆಯಿಂದ ಶ್ರೀ ಕಂಠಿ ಲಕ್ಷ್ಮೀದೇವಿ ದೇವಸ್ಥಾನದ ವರೆಗೆ ರೈತರಿಗೆ ಅನೂಕೂಲ ಆಗಲೆಂದು ಅಂದಾಜು ಒಂದು ಕೋಟಿ ರೂ ವೆಚ್ಚದ  ರಸ್ತೆ ಅಬಿವೃದ್ದಿ ಕಾಮಗಾರಿಗೆ  ಶಾಸಕ ರಮೇಶ ಜಾರಕಿಹೋಳಿ ಇವರು ಭೂಮಿ ಪೂಜೆ ನೇರವೆರಿಸಿದರು.
ಸ್ಥಳಿಯ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು ಸರಕಾರವನ್ನು ಟೀಕೆ ಮಾಡುದಕ್ಕಿಂತ ಸಾದ್ಯವಾದಷ್ಟ  ಅಬಿವೃದ್ದಿ ಕಾರ್ಯಗಳನ್ನು ಮಾಡಬೇಕು , ಟೀಕೆ ಮಾಡುತ್ತಾ ಕುತರೆ ಆಗೊದಿಲ್ಲ.
ಸರಕಾರದ ಒಂದೊಂದು ಪದ್ದತಿ ಇರುತ್ತದೆ, ನಾನು  ನೀರಾವರಿ ಮಂತ್ರಿ ಇದ್ದಾಗ ಬೆಳಗಾವಿ ಜಿಲ್ಲೆಯಲ್ಲಿ ವಿಶೇಷವಾಗಿ ಚಿಕ್ಕೋಡಿಯಲ್ಲಿ ಮತ್ತು ನಮ್ಮ ಬಾಗದಲ್ಲಿ ಸವಳು ಜವಳು ತೆಗೆದು ರೈತರಿಗೆ ಅನೂಕೂಲಕ್ಕಾಗಿ ರಸ್ತೆ ಅಬಿವೃದ್ದಿಗಾಗಿ 200 ಕೋಟಿ ರೂ ಇಟ್ಟು ಹೊಸ ಯೋಜನೆ ಮಾಡಲಾಗಿತ್ತು ,ನನ್ನ ರಾಜಿನಾಮೆಯಿಂದ ಅದು ಇವತ್ತು ಕುಂಟಿತವಾಗಿದೆ , 
ದೇವರ ಆಶಿರ್ವಾದ ಮತ್ತು ಜನತೆ ಆಶಿರ್ವಾದೊಂದಿಗೆ ಮತ್ತೆ ಅದೆ ಸ್ಥಾನಕ್ಕೆ ಬಂದರೆ ರಾಜ್ಯದ ಮೂಲೆ ಮೂಲೆಗಳಲ್ಲಿ ಅಬಿವೃದ್ದಿ ಕಾರ್ಯ ಮಾಡುತ್ತೇನೆ. ಮನುಷ್ಯ ತಪ್ಪು ಮಾಡುವುದು ಸಹಜ ತಿದ್ದಿಕೊಂಡು ಒಗ್ಗಟ್ಟಾಗಿ ಇದ್ದು ಮತ್ತೆ ನನಗೆ ಆಶಿರ್ವದಿಸಿದರೆ ಇನ್ನು ಹೆಚ್ಚಿನ ಅಬಿವೃದ್ದಿ ಕಾರ್ಯಮಾಡುತ್ತೇನೆಂದರು..
ಇದೆ ಸಂದರ್ಭದಲ್ಲಿ ನಾಳೆಯಿಂದ ರಾಜ್ಯಾದ್ಯಂತ ನಡೆಯುವ ಎಸ್,ಎಸ್,ಎಲ್,ಸಿ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ದೈರ್ಯದಿಂದ ಪರೀಕ್ಷೆ ಬರೆದು ಹೆಚ್ಚಿನ ಅಂಕ ಪಡೆಯಬೇಕೆಂದು ತಿಳಿಸಿ ಎಲ್ಲ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದರು.
ಇವತ್ತಿನ ಕಾರ್ಯಕ್ರಮದಲ್ಲಿ ಶಿವಾನಂದ ಗಣಾಚಾರಿ, ಸಚಿನ ಸಮಯ,ಜಿನ್ನಪ್ಪ ಚೌಗಲಾ, ಮಹಾವೀರ ಪಾಟೀಲ,ಈರಪ್ಪಾ ಪಟಗುಂದಿ ,ನಾಗಪ್ಪ ಮಾಳಗಿ, ಅಕ್ಷಯ ಬೆಡಕಿಹಾಳ, ಬಸವರಾಜ ಬೇಡರಟ್ಟಿ, ಶಂಕರ ಗಾಡಿವಡ್ಡರ.
ಗುತ್ತಿಗೆದಾರ ದರ್ಶನ ಅಶೋಕ ಕೋಳಿ, ಸೇರಿದಂತೆ ಕೊಣ್ಣೂರ ರೈತ ಸಂಘದ ಸರ್ವ ಸದಸ್ಯರು, ಕೊಣ್ಣೂರ ,ಸಾವಳಗಿ ಗ್ರಾಮಸ್ಥರು ಉಪಸ್ಥಿತರಿದ್ದರು.
    user_Manohar megeri
    Manohar megeri
    ಪತ್ರಕರ್ತ ಗೋಕಾಕ, ಬೆಳಗಾವಿ, ಕರ್ನಾಟಕ•
    20 min ago
  • ಬಾಗಲಕೋಟೆಯಲ್ಲಿ ಬಿಜೆಪಿ ಪಕ್ಷದ ಪದಗ್ರಹಣ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ಜೋರಾಗಿ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹಾಗೂ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ದಿಲೀಪ್ ರಾಠೋಡ ಅವರಿಗೆ ಪದಗ್ರಹಣ ಮಾಡಿಸಲಾಯಿತು. ಇದೇ ವೇಳೆ 150ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು. ಪದಗ್ರಹಣ ಹಿನ್ನೆಲೆಯಲ್ಲಿ ನವನಗರ ಕೋರ್ಟ್ ಸರ್ಕಲ್‌ನಿಂದ ಆರಂಭವಾದ ಬೃಹತ್ ಬೈಕ್ ರ್ಯಾಲಿ ವಿದ್ಯಾಗಿರಿ, ಬಸವೇಶ್ವರ ವೃತ್ತ, ರೈಲ್ವೆ ನಿಲ್ದಾಣ ರಸ್ತೆ ಮೂಲಕ ಎಪಿಎಂಸಿ ಮೂಲಕ ಬಿಜೆಪಿ ಜಿಲ್ಲಾ ಕಾರ್ಯಾಲಯದವರೆಗೆ ಸಾಗಿತು.
    1
    ಬಾಗಲಕೋಟೆಯಲ್ಲಿ ಬಿಜೆಪಿ ಪಕ್ಷದ ಪದಗ್ರಹಣ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ಜೋರಾಗಿ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹಾಗೂ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ದಿಲೀಪ್ ರಾಠೋಡ ಅವರಿಗೆ ಪದಗ್ರಹಣ ಮಾಡಿಸಲಾಯಿತು. ಇದೇ ವೇಳೆ 150ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.
ಪದಗ್ರಹಣ ಹಿನ್ನೆಲೆಯಲ್ಲಿ ನವನಗರ ಕೋರ್ಟ್ ಸರ್ಕಲ್‌ನಿಂದ ಆರಂಭವಾದ ಬೃಹತ್ ಬೈಕ್ ರ್ಯಾಲಿ ವಿದ್ಯಾಗಿರಿ, ಬಸವೇಶ್ವರ ವೃತ್ತ, ರೈಲ್ವೆ ನಿಲ್ದಾಣ ರಸ್ತೆ ಮೂಲಕ ಎಪಿಎಂಸಿ ಮೂಲಕ ಬಿಜೆಪಿ ಜಿಲ್ಲಾ ಕಾರ್ಯಾಲಯದವರೆಗೆ ಸಾಗಿತು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    10 hrs ago
  • ಕನ್ನಡಿಗರ ಸ್ವಾಭಿಮಾನದ ಅಸ್ಮಿತೆಯ ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ಚುನಾವಣೆಯಲ್ಲಿ ಡಾ. ಸಿ ಸೋಮಶೇಖರ ರವರನ್ನು ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಕನ್ನಡ ನಾಡು, ನುಡಿಯ ಸೇವೆಯನ್ನು ಮಾಡಲು ಅವಕಾಶ ನೀಡಿ ಎಂದು ನಬಿಸಾಬ ಕುಷ್ಟಗಿ ಹೇಳಿದರು, ಅವರು ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಮುಂಬರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯ ಹಿನ್ನೆಲೆ ಡಾ. ಸಿ ಸೋಮಶೇಖರ್ ಐಎಎಸ್, ಮಾಜಿ ಅಧ್ಯಕ್ಷರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರ ಪರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಬಾಲ್ಯದಿಂದಲೂ ಅಪ್ಪಟ ಕನ್ನಡ ಅಭಿಮಾನಿಯಾಗಿರುವ ಸಿ ಸೋಮಶೇಖರ್ ಅವರು ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗಳ ಬಗ್ಗೆ ಅಪಾರವಾದ ಪ್ರೀತಿ ಮತ್ತು ಆಸಕ್ತಿ ಹೊಂದಿದ್ದಾರೆ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಪ್ರಾರಂಭಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿಯೇ ಪಡೆದು ಆನಂತರ ವಾಣಿಜ್ಯ ಸ್ನಾತಕೋತ್ತರ ಪದವಿಗಳಿಸಿ ಬೆಂಗಳೂರಿನ ಕೆ.ಎಲ್‌.ಇ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿಯನ್ನು ಪ್ರಾರಂಭಿಸಿ ನಂತರ ಕರ್ನಾಟಕ ಆಡಳಿತ ಪ್ರಥಮ ದರ್ಜೆ ಸೇವೆಯನ್ನು ಸೇರುವ ಅವಕಾಶ ದೊರಕಿತು,ಅಖಿಲ ಭಾರತ ಲೋಕಸೇವಾ ಆಯೋಗದ ಪರೀಕ್ಷೆಯನ್ನು ಸಂಪೂರ್ಣವಾಗಿ ಕನ್ನಡ ಮಾಧ್ಯಮದಲ್ಲಿಯೇ ಉತ್ತರಿಸಿ ಕೇಂದ್ರ ಪ್ರಥಮ ದರ್ಜೆ ಸೇವೆಗೆ ಆಯ್ಕೆಯಾಗಿ ಕನ್ನಡ ನಾಡು, ನುಡಿಯ ಮೇಲಿನ ಅಭಿಮಾನದಿಂದ ಕರ್ನಾಟಕದಲ್ಲಿಯೇ ಸೇವೆ ಸಲ್ಲಿಸಬೇಕೆಂಬ ಹಂಬಲದಿಂದ ಕರ್ನಾಟಕ ಅಡಳಿತ ಸೇವೆಯನ್ನೇ ಆಯ್ಕೆ ಮಾಡಿಕೊಂಡರು ,ಭಾರತ ಆಡಳಿತ ಸೇವೆಗೆ (ಐ.ಎ.ಎಸ್) ಪದೋನ್ನತಿ ಪಡೆದು ರಾಜ್ಯದ ಅನೇಕ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು,ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವಿಶೇಷವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ , ನಿವೃತ್ತಿ ನಂತರ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸಿರುತ್ತಾರೆ, ಅವರ ಆಡಳಿತ ಅವಧಿಯಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಿ ಆಡಳಿದ ಎಲ್ಲಾ ಹಂತಗಳಲ್ಲಿಯೂ ಕನ್ನಡ ಭಾಷೆಯೇ ಸಾರ್ವಭೌಮ ಭಾಷೆಯಾಗಿ ಇರುವಂತೆ ಅಭಿಮಾನ ಪೂರಕವಾಗಿ ಪ್ರಯತ್ನಿಸಿದ್ದಾರೆ,ಸಂಸ್ಕೃತಿ- ಪ್ರಗತಿ ಆಡಳಿತ ನಾಣ್ಯದ ಎರಡು ಮುಖಗಳೆಂದೇ ಭಾವಿಸಿರುವ ಅವರು ಆಡಳಿತಕ್ಕೆ ಮಾನವೀಯ ಸ್ಪರ್ಶವನ್ನು ನೀಡಲು ಶ್ರಮಿಸಿರುತ್ತಾರೆ, ಮೂಲತಃ ಸಾಹಿತ್ಯ ಪ್ರೇಮಿಯಾದ ಅವರು ಹಲವಾರು ಮೌಲಿಕ ಕನ್ನಡದ ಕೃತಿಗಳನ್ನು ರಚಿಸಿರುತ್ತಾರೆ,“ವಚನಗಳಲ್ಲಿ ಸಾಮಾಜಿಕ ಚಿಂತನೆ” ಎಂಬ ಮಹಾ ಪ್ರಬಂಧವನ್ನು ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಡಿ.ಲಿಟ್ಪ ಡೆದುಕೊಂಡಿದ್ದಾರೆ,ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗಳ ಆರಾಧಕನಾಗಿರುವ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಅವರ ಆತ್ಮೀಯ ಕನ್ನಡ ಅಭಿಮಾನಿಗಳ ಒತ್ತಾಸೆಯಿಂದ ಅವರು ಮುಂಬರುವ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿಯಾಗಿ ಸ್ಪರ್ಧಿಸಲು ಬಯಸಿದ್ದಾರೆ,ನಾಡಿನ, ಹೊರನಾಡಿನ ಎಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳು ತಮ್ಮ ಆಶೀರ್ವಾದ ಮತ್ತು ಸಹಕಾರದ ಮೂಲಕ ಕನ್ನಡಿಗರ ಸ್ವಾಭಿಮಾನದ ಅಸ್ಮಿತೆಯ ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ಚುನಾವಣೆಯಲ್ಲಿ ಸಿ ಸೋಮಶೇಖರ್ ರವರನ್ನು ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಕನ್ನಡ ನಾಡು, ನುಡಿಯ ಸೇವೆಯನ್ನು ಮಾಡಲು ಅವರಿಗೆ ಒಂದು ಅಪೂರ್ವ ಅವಕಾಶವನ್ನು ನೀಡಬೇಕೆಂದು ಹೇಳಿದರು ಸುದ್ದಿಗೋಷ್ಠಿಯಲ್ಲಿ ಮೋಹನಲಾಲ್ ಜೈನ್ ಮತ್ತು ಇತರರು ಪಾಲ್ಗೊಂಡಿದ್ದರು.
    1
    ಕನ್ನಡಿಗರ ಸ್ವಾಭಿಮಾನದ ಅಸ್ಮಿತೆಯ
ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ಚುನಾವಣೆಯಲ್ಲಿ ಡಾ. ಸಿ ಸೋಮಶೇಖರ ರವರನ್ನು ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಕನ್ನಡ ನಾಡು, ನುಡಿಯ ಸೇವೆಯನ್ನು ಮಾಡಲು ಅವಕಾಶ ನೀಡಿ ಎಂದು ನಬಿಸಾಬ ಕುಷ್ಟಗಿ ಹೇಳಿದರು,
ಅವರು ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಮುಂಬರುವ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯ ಹಿನ್ನೆಲೆ ಡಾ. ಸಿ ಸೋಮಶೇಖರ್ ಐಎಎಸ್, ಮಾಜಿ ಅಧ್ಯಕ್ಷರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರ ಪರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು,
ಬಾಲ್ಯದಿಂದಲೂ ಅಪ್ಪಟ ಕನ್ನಡ ಅಭಿಮಾನಿಯಾಗಿರುವ ಸಿ ಸೋಮಶೇಖರ್ ಅವರು ಕನ್ನಡ ಸಾಹಿತ್ಯ,
ಸಂಸ್ಕೃತಿ, ಕಲೆಗಳ ಬಗ್ಗೆ ಅಪಾರವಾದ ಪ್ರೀತಿ ಮತ್ತು ಆಸಕ್ತಿ ಹೊಂದಿದ್ದಾರೆ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಪ್ರಾರಂಭಿಕ ಶಿಕ್ಷಣವನ್ನು ಕನ್ನಡ
ಮಾಧ್ಯಮದಲ್ಲಿಯೇ ಪಡೆದು ಆನಂತರ ವಾಣಿಜ್ಯ ಸ್ನಾತಕೋತ್ತರ ಪದವಿಗಳಿಸಿ ಬೆಂಗಳೂರಿನ ಕೆ.ಎಲ್‌.ಇ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿಯನ್ನು ಪ್ರಾರಂಭಿಸಿ ನಂತರ ಕರ್ನಾಟಕ ಆಡಳಿತ ಪ್ರಥಮ ದರ್ಜೆ ಸೇವೆಯನ್ನು ಸೇರುವ ಅವಕಾಶ ದೊರಕಿತು,ಅಖಿಲ ಭಾರತ ಲೋಕಸೇವಾ ಆಯೋಗದ ಪರೀಕ್ಷೆಯನ್ನು ಸಂಪೂರ್ಣವಾಗಿ ಕನ್ನಡ ಮಾಧ್ಯಮದಲ್ಲಿಯೇ ಉತ್ತರಿಸಿ ಕೇಂದ್ರ ಪ್ರಥಮ ದರ್ಜೆ ಸೇವೆಗೆ ಆಯ್ಕೆಯಾಗಿ ಕನ್ನಡ ನಾಡು, ನುಡಿಯ
ಮೇಲಿನ ಅಭಿಮಾನದಿಂದ ಕರ್ನಾಟಕದಲ್ಲಿಯೇ ಸೇವೆ ಸಲ್ಲಿಸಬೇಕೆಂಬ ಹಂಬಲದಿಂದ ಕರ್ನಾಟಕ ಅಡಳಿತ ಸೇವೆಯನ್ನೇ ಆಯ್ಕೆ ಮಾಡಿಕೊಂಡರು ,ಭಾರತ ಆಡಳಿತ ಸೇವೆಗೆ (ಐ.ಎ.ಎಸ್) ಪದೋನ್ನತಿ ಪಡೆದು ರಾಜ್ಯದ ಅನೇಕ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು,ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವಿಶೇಷವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ , ನಿವೃತ್ತಿ ನಂತರ ಕರ್ನಾಟಕ ಗಡಿ ಪ್ರದೇಶ
ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸಿರುತ್ತಾರೆ, ಅವರ ಆಡಳಿತ ಅವಧಿಯಲ್ಲಿ
ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಿ ಆಡಳಿದ ಎಲ್ಲಾ ಹಂತಗಳಲ್ಲಿಯೂ ಕನ್ನಡ ಭಾಷೆಯೇ ಸಾರ್ವಭೌಮ ಭಾಷೆಯಾಗಿ ಇರುವಂತೆ ಅಭಿಮಾನ ಪೂರಕವಾಗಿ ಪ್ರಯತ್ನಿಸಿದ್ದಾರೆ,ಸಂಸ್ಕೃತಿ-
ಪ್ರಗತಿ ಆಡಳಿತ ನಾಣ್ಯದ ಎರಡು ಮುಖಗಳೆಂದೇ ಭಾವಿಸಿರುವ ಅವರು ಆಡಳಿತಕ್ಕೆ ಮಾನವೀಯ ಸ್ಪರ್ಶವನ್ನು ನೀಡಲು ಶ್ರಮಿಸಿರುತ್ತಾರೆ, ಮೂಲತಃ ಸಾಹಿತ್ಯ ಪ್ರೇಮಿಯಾದ ಅವರು ಹಲವಾರು ಮೌಲಿಕ ಕನ್ನಡದ ಕೃತಿಗಳನ್ನು
ರಚಿಸಿರುತ್ತಾರೆ,“ವಚನಗಳಲ್ಲಿ ಸಾಮಾಜಿಕ ಚಿಂತನೆ” ಎಂಬ ಮಹಾ ಪ್ರಬಂಧವನ್ನು ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಡಿ.ಲಿಟ್ಪ ಡೆದುಕೊಂಡಿದ್ದಾರೆ,ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗಳ ಆರಾಧಕನಾಗಿರುವ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಅವರ ಆತ್ಮೀಯ ಕನ್ನಡ ಅಭಿಮಾನಿಗಳ ಒತ್ತಾಸೆಯಿಂದ ಅವರು ಮುಂಬರುವ ಕನ್ನಡ ಸಾಹಿತ್ಯ
ಪರಿಷತ್ತಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿಯಾಗಿ ಸ್ಪರ್ಧಿಸಲು ಬಯಸಿದ್ದಾರೆ,ನಾಡಿನ, ಹೊರನಾಡಿನ ಎಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳು ತಮ್ಮ ಆಶೀರ್ವಾದ ಮತ್ತು ಸಹಕಾರದ ಮೂಲಕ ಕನ್ನಡಿಗರ ಸ್ವಾಭಿಮಾನದ ಅಸ್ಮಿತೆಯ ಪ್ರತಿಷ್ಠಿತ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಮುಂಬರುವ ಚುನಾವಣೆಯಲ್ಲಿ ಸಿ ಸೋಮಶೇಖರ್ ರವರನ್ನು ರಾಜ್ಯಾಧ್ಯಕ್ಷನನ್ನಾಗಿ ಆಯ್ಕೆ ಮಾಡಿ ಕನ್ನಡ ನಾಡು, ನುಡಿಯ ಸೇವೆಯನ್ನು ಮಾಡಲು ಅವರಿಗೆ ಒಂದು ಅಪೂರ್ವ ಅವಕಾಶವನ್ನು ನೀಡಬೇಕೆಂದು ಹೇಳಿದರು ಸುದ್ದಿಗೋಷ್ಠಿಯಲ್ಲಿ ಮೋಹನಲಾಲ್ ಜೈನ್ ಮತ್ತು ಇತರರು ಪಾಲ್ಗೊಂಡಿದ್ದರು.
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    23 hrs ago
  • #onlinetv24x7 #tumkur #ಶ್ರೀಶನಿಮಹಾತ್ಮ #ಶ್ರೀಶನಿದೇವ #ಶನಿಮಹಾತ್ಮ #ಶ್ರೀಕ್ಷೇತ್ರದೊಂಬರಟ್ಟಿ #ಕುಣಿಗಲ್ #ಶ್ರೀಶನಿಮಹಾತ್ಮ
    1
    #onlinetv24x7 #tumkur #ಶ್ರೀಶನಿಮಹಾತ್ಮ #ಶ್ರೀಶನಿದೇವ #ಶನಿಮಹಾತ್ಮ #ಶ್ರೀಕ್ಷೇತ್ರದೊಂಬರಟ್ಟಿ #ಕುಣಿಗಲ್ #ಶ್ರೀಶನಿಮಹಾತ್ಮ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.