*ಹರ್ಡೀಕರ್ ಅವರ ೫೧ನೇ ಪುಣ್ಯ ಸ್ಮರಣೆ,ಭಾವಚಿತ್ರಕ್ಕೆ ಪುಷ್ಪನಮನ: ಹರ್ಡೀಕರ್ ಜನ್ಮದಿನಾಚರಣೆ ರಾಷ್ಟ್ರೀಯ ಕಾರ್ಯಕ್ರಮವಾಗಲಿ:ಕೆ.ಎಸ್.ಗಣೇಶ್* ಕೋಲಾರ:- ಸೇವಾ ಭಾವನೆಯನ್ನೇ ಜೀವನವನ್ನಾಗಿಸಿಕೊಂಡು ಭಾರತ ಸೇವಾದಳ ಸ್ಥಾಪನೆಯ ಮೂಲಕ ದೇಶಪ್ರೇಮವನ್ನು ಸಮಾಜದಲ್ಲಿ ಭಿತ್ತಿದ ನಾರಾಯಣ ಸುಬ್ಬರಾವ್ ಹರ್ಡೀಕರ್ ಅವರ ದಿನಾಚರಣೆಯನ್ನು ರಾಷ್ಟ್ರೀಯ ಕಾರ್ಯಕ್ರಮವಾಗಿ ಇಡೀ ದೇಶದಲ್ಲಿ ಆಚರಿಸುವಂತಾಗಬೇಕು ಎಂದು ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಕರೆ ನೀಡಿದರು. ನಗರದ ಭಾರತ ಸೇವಾದಳ ಕಚೇರಿಯಲ್ಲಿ ನಾ.ಸು.ಹರ್ಡೀಕರ್ ಅವರ ೫೧ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಕರ್ನಾಟಕದಲ್ಲಿ ಜನಿಸಿ, ಚಿಕ್ಕಂದಿನಲ್ಲಿಯೇ ತಂದೆ ತಾಯಿಯನ್ನು ಕಳೆದುಕೊಂಡರೂ ಎದೆಗುಂದದೆ ಸೇವಾ ಮನೋಭಾವನೆ ಮೈಗೂಡಿಸಿಕೊಂಡು, ವೈದ್ಯರಾದ ನಂತರ ಸ್ವಾತಂತ್ರ್ಯ ಚಳವಳಿಗೆ ಧುಮುಕಿ ಬ್ರಿಟೀಷರ ವಿರುದ್ಧ ಸಮರಶೀಲವಾಗಿ ಹೋರಾಡಲು ಹಿಂದೂಸ್ತಾನಿ ಸೇವಾದಳ ಎಂಬ ಸಂಘಟನೆಯನ್ನು ಸ್ಥಾಪಿಸಿದ ಕೀರ್ತಿ ನಾ.ಸು.ಹರ್ಡೀಕರ್ ಅವರಿಗೆ ಸಲ್ಲುತ್ತದೆ ಎಂದರು. ಕರ್ನಾಟಕ ಗಾಂಧಿ ಹೆಸರಿನಿಂದ ಖ್ಯಾತಿ ಪಡೆದಿರುವ ನಾ.ಸು.ಹರ್ಡೀಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಶಿಸ್ತು, ಧೈರ್ಯ ಹಾಗೂ ತ್ಯಾಗ ಮನೋಭಾವನೆಯನ್ನು ಹಿಂದೂಸ್ತಾನಿ ಸೇವಾದಳದ ಮೂಲಕ ಪರಿಚಯಿಸಿ ಸ್ವಾತಂತ್ರ್ಯ ಸಂಗ್ರಾಮವನ್ನು ಚುರುಕುಗೊಳಿಸಿದ ಮಹನೀಯರಲ್ಲಿ ಪ್ರಮುಖರೆಂದು ತಿಳಿಸಿದರು. ಸ್ವಾತಂತ್ರ್ಯ ನಂತರ ಹಿಂದೂಸ್ತಾನಿ ಸೇವಾದಳವು ಶಿಕ್ಷಣ ಇಲಾಖೆಯ ಭಾಗವಾಗಿ ಭಾರತ ಸೇವಾದಳವಾಗಿ ಬದಲಾಗಿದೆ, ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಪ್ರತಿಯೊಬ್ಬರೂ ಭಾರತೀಯರು, ರಾಷ್ಟ್ರಗೀತೆ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವ ವಿಧಾನಗಳ ಕುರಿತು ತರಬೇತಿ ನೀಡುವ ದೇಶದ ಏಕೈಕ ಸಂಸ್ಥೆಯಾಗಿ ಭಾರತ ಸೇವಾದಳ ಕಾರ್ಯನಿರ್ವಹಿಸುತ್ತಿದೆ ಎಂದು ವಿವರಿಸಿದರು. ರಾಷ್ಟ್ರಧ್ವಜ ಸಂಹಿತೆ ರೂಪಿಸುವುದರ ಜೊತೆಗೆ, ಸ್ವಾತಂತ್ರ್ಯ ಸಂಗ್ರಾಮಕ್ಕೆ ಶಿಸ್ತು ಮೂಡಿಸುವ ಸಲುವಾಗಿಯೇ ಹಿಂದೂಸ್ತಾನಿ ಸೇವಾದಳವನ್ನು ನೂರು ವರ್ಷಗಳ ಹಿಂದೆ ಆರಂಭಿಸಿದ್ದರು. ಸ್ವಾತಂತ್ರ್ಯ ನಂತರ ಭಾರತ ಸೇವಾದಳ ರಾಜಕೀಯ ರಹಿತ ಸಂಘಟನೆಯಾಗಿ ಸೇವೆ ಮಾಡಲು ಯೋಜಿಸಿದರೆಂದರು. ಇಂತ ಸೇವಾದಳ ಚಟುವಟಿಕೆಗಳು ಕೇವಲ ಕರ್ನಾಟಕಕ್ಕೆ ಸೀಮಿತವಾಗದೆ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ನಾ.ಸು.ಹರ್ಡೀಕರ್ ಸ್ಥಾಪಿತ ಸೇವಾದಳ ಚಟುವಟಿಕೆಗಳು ನಡೆಯುವಂತಾಗಬೇಕೆಂದರು. ಇದೇ ಸಂದರ್ಭದಲ್ಲಿ ನಾ.ಸು.ಹರ್ಡೀಕರ್ ಭಾವಚಿತ್ರಕ್ಕೆ ಅತಿಥಿಗಳು ಪುಷ್ಪಾರ್ಚನೆ ನೆರವೇರಿಸಿದರು. ಭಾರತ ಸೇವಾದಳ ಜಿಲ್ಲಾ ಸಂಘಟಕ ಎಂ.ಬಿ.ದಾನೇಶ್ ಕಾರ್ಯಕ್ರಮ ನಿರ್ವಹಿಸಿದರು. ಸರ್ವಧರ್ಮ ಪ್ರಾರ್ಥನೆಯಿಂದ ಆರಂಭವಾದ ಕಾರ್ಯಕ್ರಮ ರಾಷ್ಟ್ರಗೀತೆ ಗಾಯನದೊಂದಿಗೆಗ ಪೂರ್ಣಗೊಂಡಿತು. ಕಾರ್ಯಕ್ರಮದಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ ಸದಸ್ಯರುಗಳಾದ ಆರ್.ಶ್ರೀನಿವಾಸನ್ , ಜಿ.ಶ್ರೀನಿವಾಸ್ ,ಸೇವಾದಳ ಜಿಲ್ಲಾ,ತಾಲ್ಲೂಕು ಸಮಿತಿ ಸದಸ್ಯ ಅಪ್ಪಿ ನಾರಾಯಣಸ್ವಾಮಿ, ತಾಲ್ಲೂಕು ಅಧ್ಯಕ್ಷ ಹಾಗೂ ಶಿಕ್ಷಕ ಶ್ರೀರಾಮ್, ಮುನಿವೆಂಕಟಯಾದವ್,ಮಲ್ಲಿಕಾರ್ಜುನ್, ವಿನಯ್,ರಾಜು, ಶ್ರೀನಿವಾಸಲು, ಶ್ರೀನಿವಾಸಪುರದ ರವಿಕುಮಾರ್,ಪುಟಾಣಿ ಫಲ್ಗುಣಿ ಮತ್ತಿತರರಿದ್ದರು.

- *ದೇವರ ನಿಶ್ಚಯದಂತೆ ನಾವುಗಳು ಕೆಲಸ ಮಾಡಿ ದೇವಾಲಯ ನಿರ್ಮಾಣ ಮಾಡಿದ್ದೇವೆ:ಸಮಾಜ ಸೇವಕ ಕರುಣಾಮಯಿ ಲಕ್ಷ್ಮಣಗೌಡ* ಹಲವಾರು ಸಮುದಾಯದ ಜನರು ವಾಸಿಸುವ ಕಮ್ಯೂನಿಟಿಗಳಲ್ಲಿ ದೇವಾಲಯ ನಿರ್ಮಾಣ ಕಷ್ಟ ಸಾಧ್ಯ ಆದರೂ ಪ್ರೆಸ್ಟೀಜ್ ಗ್ಲೆನ್ ವುಡ್ ಕಮ್ಯೂನಟಿಯ ಜನರ ಆಶಯ ಹಾಗೂ ಸಂಕಲ್ಪ ದಂತೆ ಶ್ರೀ ವರಸಿದ್ಧಿ ವಿನಾಯಕ ದೇವಾಲಯವ ನಿರ್ಮಾಣದ ಬಗ್ಗೆ ಎರಡು ವರ್ಷದ ಹಿಂದಿನಿಂದಲೂ ಮಾಡುತ್ತಿದ್ದರೂ ದೇವಾಲಯವ ನಿರ್ಮಾಣದ ಕೆಲಸ ಪ್ರಾರಂಭ ಮಾಡಿದ 45 ದಿನಗಳಲ್ಲಿ ಅದರಲ್ಲೂ ಕೇವಲ 30 ದಿನಗಳು ಕೆಲಸ ಮಾಡಿ ಪೂರ್ಣಗೊಳಿಸಿರುವುದು ಗಿನ್ನಿಸ್ ದಾಖಲೆ ಎಂದು ಕೆಲವು ಸ್ನೇಹಿತರು ಹೇಳುತ್ತಿದ್ದರು ಎಂದು ಸಮಾಜ ಸೇವಕರು ಮತ್ತು ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ಲಕ್ಷ್ಮಣಗೌಡರು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಬಿದರಹಳ್ಳಿ ಹೋಬಳಿ ಭೂದಿಗೆರೆ ರಸ್ತೆಯ ಮಂಡೂರುಗ್ರಾಮದ ಪ್ರೆಸ್ಟೀಜ್ ಗ್ಲೆನ್ ವುಡ್ ನ ಶ್ರೀ ವರಸಿದ್ಧ ವಿನಾಯಕ ಸೇವಾ ಸಮಿತಿ ವತಿಯಿಂದ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಯಾವುದೇ ಕೆಲಸ ಮಾಡಬೇಕಾದರೂ ನಾವು ನಿಮಿತ್ತ ಮಾತ್ರ ಎಲ್ಲಾ ದೇವರ ಕೃಪೆಯಿಂದ ನಡೆಯುತ್ತದೆ.ದೇವಾಲಯದ ಕೆಲಸ ಹಾಗೂ ಪ್ರತಿಷ್ಠಾಪನೆ ವಿನಾಯಕನ ಕೃಪೆಯಿಂದ ಸಾಂಗವಾಗಿ ನೆರವೇರಿದೆ ಎಂದು ಹೇಳಿದರು. ದೇವತಾ ಕಾರ್ಯದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿರವರು ಭಾಗವಹಿಸಿ ಹಿತವಚನಗಳನ್ನು ತಿಳಿಸಿದರು. ಅವರೊಂದಿಗೆ ಮುಖಂಡರುಗಳಾದ ಕಾಟ್ಮನೂರು ಪಾಪಣ್ಣ,ಕ್ರಾಸ್ ಮಂಜು,,ಜ್ಯೋತಿ ಪುರ ವೇಣು ರವರುಗಳು ಆಗಮಿಸಿ ಶುಭಕೋರಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು. ದೇವಾಲಯ ನಿರ್ಮಾಣಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದವರಿಗೆ ಧನ್ಯವಾದಗಳನ್ನು ತಿಳಿಸಿದ ಅವರು ಶ್ರೀ ವರಸಿದ್ಧಿ ವಿನಾಯಕ ಎಲ್ಲರ ಕಷ್ಟಗಳ ನಿವಾರಣೆ ಮಾಡಲಿ ಹಾಗೂ ಕಲವರ ಮನಸ್ಸುಗಳಲ್ಲಿರುವ ಕಲ್ಮಶಗಳನ್ನು ತೊಳೆದು ಹಾಕಲಿ ಎಂದು ಆಶಿಸಿದರು ಹಾಗೂ ದೇವಾಲಯದ ಶುಚಿತ್ವ ಕಾಪಾಡಿಕೊಂಡು ಮುನ್ನಡಿಸಿಕೊಂಡು ಹೋಗ ಬೇಕೆಂದು ಕೋರಿದರು. ಕಾರ್ಯಕ್ರಮದಲ್ಲಿ ದೇವಾಲಯದ ಅಧ್ಯಕ್ಷರಾದ ಪಿಳ್ಳಪ್ಪ,ಸ್ಥಳೀಯ ನಿವಾಸಿಗಳಾದ ಜನಾರ್ದನ್, ಪರಿಷಿತ್,ನಿಕುನ್,ಚೌಧರಿ,ರಣವೀರ್, ರಂಚಿತ್,ಕೃಷ್ಣಾ ಸೇರಿದಂತೆ ಅನೇಕ ಮಹಿಳೆಯರು, ಮುಖಂಡರುಗಳು ಮತ್ತು ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.3
- MBBS students felicitation function1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಉರುಸ್ ಮಹೋತ್ಸವ ಶಾಂತಿ,ಸೌಹಾರ್ದತೆಗೆ ಪ್ರಾರ್ಥಿಸಿದ:ದರ್ಗಾದಲ್ಲಿ ಜೆ.ಕೆ. ಕೃಷ್ಣಾರೆಡ್ಡಿ ವಿಶೇಷ ಪೂಜೆ1
- ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಡಿಕೆ ಶಿವಕುಮಾರ್. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ. ದೇವನಹಳ್ಳಿ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಡಿಕೆ ಶಿವಕುಮಾರ್. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ. 7 ಗಂಟೆಯ ವಿಮಾನದಲ್ಲಿ ಪ್ರಯಾಣ. AI2654 ವಿಮಾನದ ಮೂಲಕ ಪ್ರಯಾಣ. ಕಾಂಗ್ರೆಸ್ ಕಚೇರಿ ಉದ್ಘಾಟನೆ, ನೀರಿನ ಸಮಸ್ತ ಕುರಿತು ಕಾನೂನು ತಜ್ಞರ ಜೊತೆಯಲ್ಲಿ ಚರ್ಚೆಗೆ ದೆಹಲಿ ಪ್ರಯಾಣ. ಸಿಎಂ ಬೀಳ್ಕೊಡಲು ಏರ್ಪೋರ್ಟ್ ಗೆ ಆಗಮಿಸಿದ ಸಚಿವ ಈಶ್ವರ್ ಖಂಡ್ರೆ. ಬೀದರ್ ಶಾಸಕ ರಹೀಂಖಾನ್ ಸಿಎಂ ತೆರಳಿದ ನಂತರ ಬೆಂಗಳೂರಿನತ್ತ ಹೊರಡಲಿರುವ ಈಶ್ವರ್ ಖಂಡ್ರೆ ರಹಿಂಖಾನ್ ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒಂದೇ ವಿಮಾನದಲ್ಲಿ ಪ್ರಯಾಣ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ1
- ಶಿಡ್ಲಘಟ್ಟ ತಾಲ್ಲೂಕಿನ ಚೀಮನಹಳ್ಳಿ ಸಮಾಜ ಸೇವಕ ಸಿಎಂ ಬೈರೇಗೌಡ ರು ಮುತ್ತೈದೆಯರಿಗೆ ಹರಿಶಿನ, ಕುಂಕುಮ, ಸೀರೆ ವಿತರಣೆ1
- ಶಿಡ್ಲಘಟ್ಟದ ಹಂಡಿಗನಾಳ ಬಳಿ ಭೀಕರ ಅಪಘಾತ ; ಓರ್ವ ವ್ಯಕ್ತಿ ಸಾವು1
- ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದ ಬಳಿ ಭೀಕರ ಅಪಘಾತ : ಓರ್ವ ವ್ಯಕ್ತಿ ಸಾವು! ಹಂಡಿಗನಾಳ ಸೇತುವೆ ಬಳಿ ಅಪಘಾತ; ಓರ್ವ ಸಾವು...!ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದ ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ1