logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

​ಶಾಸಕ ಎ.ಆರ್. ಕೃಷ್ಣಮೂರ್ತಿಯವರಿಂದ 'ಚೆಲುವನಾಡು' ಮಾಸಪತ್ರಿಕೆ ಲೋಕಾರ್ಪಣೆ. ​ಯಳಂದೂರು: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಇತ್ತೀಚೆಗೆ 'ಚೆಲುವನಾಡು' ಮಾಸಪತ್ರಿಕೆಯನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಿದರು. ​ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, "ಕೆಸ್ತೂರು ಗ್ರಾಮದ ಪ್ರಸನ್ನಕುಮಾರ್ ಅವರು 'ಚೆಲುವನಾಡು' ಮಾಸಪತ್ರಿಕೆಯನ್ನು ಹೊರತರುವ ಮೂಲಕ ಮಾಧ್ಯಮ ಲೋಕಕ್ಕೆ ಪಾದಾರ್ಪಣೆ ಮಾಡಿರುವುದು ಶ್ಲಾಘನೀಯ. ಪತ್ರಿಕೆಗಳು ಸತ್ಯನಿಷ್ಠೆ ಮತ್ತು ವಸ್ತುನಿಷ್ಠ ವರದಿಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕು. ನಿಮ್ಮ ಈ ಪತ್ರಿಕೆ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಪ್ರಚಾರ ಪಡದುಕೊಳ್ಳಲಿ" ಎಂದು ಶುಭ ಹಾರೈಸಿದರು. ​ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಯನ ಎಸ್.ಎಲ್., ಬಿಇಒ ಮಾರಯ್ಯ, ಇಒ ವೇಣು, ಸಮಾಜ ಕಲ್ಯಾಣ ಅಧಿಕಾರಿ ಕೇಶವಮೂರ್ತಿ, ಪ್ರಾಧ್ಯಾಪಕಿ ಶ್ವೇತಾ, ಗೌಡಹಳ್ಳಿ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಮಹೇಶ್ ಕುಮಾರ್ ಹಾಗೂ ಪತ್ರಿಕೆಯ ಸಂಪಾದಕ ಕೆಸ್ತೂರು ಪ್ರಸನ್ನಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

10 hrs ago
user_ಉಸ್ಮಾನ್ ಖಾನ್
ಉಸ್ಮಾನ್ ಖಾನ್
Local News Reporter ಹನೂರು, ಚಾಮರಾಜನಗರ, ಕರ್ನಾಟಕ•
10 hrs ago
595a298e-75b0-44b0-8757-fb5b06bdc7c7
3c79f56b-09c5-438f-b99b-15e2d2167aa4

​ಶಾಸಕ ಎ.ಆರ್. ಕೃಷ್ಣಮೂರ್ತಿಯವರಿಂದ 'ಚೆಲುವನಾಡು' ಮಾಸಪತ್ರಿಕೆ ಲೋಕಾರ್ಪಣೆ. ​ಯಳಂದೂರು: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಇತ್ತೀಚೆಗೆ 'ಚೆಲುವನಾಡು' ಮಾಸಪತ್ರಿಕೆಯನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಿದರು. ​ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, "ಕೆಸ್ತೂರು ಗ್ರಾಮದ ಪ್ರಸನ್ನಕುಮಾರ್ ಅವರು 'ಚೆಲುವನಾಡು' ಮಾಸಪತ್ರಿಕೆಯನ್ನು ಹೊರತರುವ ಮೂಲಕ ಮಾಧ್ಯಮ ಲೋಕಕ್ಕೆ ಪಾದಾರ್ಪಣೆ ಮಾಡಿರುವುದು ಶ್ಲಾಘನೀಯ. ಪತ್ರಿಕೆಗಳು ಸತ್ಯನಿಷ್ಠೆ ಮತ್ತು ವಸ್ತುನಿಷ್ಠ ವರದಿಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕು. ನಿಮ್ಮ ಈ ಪತ್ರಿಕೆ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದಲ್ಲಿ ಪ್ರಚಾರ ಪಡದುಕೊಳ್ಳಲಿ" ಎಂದು ಶುಭ ಹಾರೈಸಿದರು. ​ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನಯನ ಎಸ್.ಎಲ್., ಬಿಇಒ ಮಾರಯ್ಯ, ಇಒ ವೇಣು, ಸಮಾಜ ಕಲ್ಯಾಣ ಅಧಿಕಾರಿ ಕೇಶವಮೂರ್ತಿ, ಪ್ರಾಧ್ಯಾಪಕಿ ಶ್ವೇತಾ, ಗೌಡಹಳ್ಳಿ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಮಹೇಶ್ ಕುಮಾರ್ ಹಾಗೂ ಪತ್ರಿಕೆಯ ಸಂಪಾದಕ ಕೆಸ್ತೂರು ಪ್ರಸನ್ನಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಹನೂರು: ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಿಳೆಯರು ನೀರಿಗಾಗಿ ಕೆಲಸಕಾರ್ಯಗಳನ್ನು ಬಿಟ್ಟು ಸಂಜೆವರೆಗೂ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಮನಗುಡ್ಡೆಯಿಂದ ಟ್ಯಾಂಕರ್ ಮೂಲಕ ಪೂರೈಸುತ್ತಿರುವ ನೀರು ಸ್ವಚ್ಛವಾಗಿಲ್ಲ ಹಾಗೂ ಕುಡಿಯಲು ಯೋಗ್ಯವಲ್ಲ ಎಂದು ಆರೋಪಿಸಿದರು. ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದು, ನೀರಿನ ಗುಣಮಟ್ಟ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜೇಂದ್ರ, ಗಿರೀಶ್, ಬಾಬು, ಅಜಯ್, ಪ್ರಯಾಗ್ ಸೇರಿದಂತೆ ಹಲವು ಗ್ರಾಮಸ್ಥರು ಭಾಗವಹಿಸಿದ್ದರು. ಹನೂರು: ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಿಳೆಯರು ನೀರಿಗಾಗಿ ಕೆಲಸಕಾರ್ಯಗಳನ್ನು ಬಿಟ್ಟು ಸಂಜೆವರೆಗೂ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಮನಗುಡ್ಡೆಯಿಂದ ಟ್ಯಾಂಕರ್ ಮೂಲಕ ಪೂರೈಸುತ್ತಿರುವ ನೀರು ಸ್ವಚ್ಛವಾಗಿಲ್ಲ ಹಾಗೂ ಕುಡಿಯಲು ಯೋಗ್ಯವಲ್ಲ ಎಂದು ಆರೋಪಿಸಿದರು. ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದು, ನೀರಿನ ಗುಣಮಟ್ಟ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜೇಂದ್ರ, ಗಿರೀಶ್, ಬಾಬು, ಅಜಯ್, ಪ್ರಯಾಗ್ ಸೇರಿದಂತೆ ಹಲವು ಗ್ರಾಮಸ್ಥರು ಭಾಗವಹಿಸಿದ್ದರು.
    1
    ಹನೂರು: ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಿಳೆಯರು ನೀರಿಗಾಗಿ ಕೆಲಸಕಾರ್ಯಗಳನ್ನು ಬಿಟ್ಟು ಸಂಜೆವರೆಗೂ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಮನಗುಡ್ಡೆಯಿಂದ ಟ್ಯಾಂಕರ್ ಮೂಲಕ ಪೂರೈಸುತ್ತಿರುವ ನೀರು ಸ್ವಚ್ಛವಾಗಿಲ್ಲ ಹಾಗೂ ಕುಡಿಯಲು ಯೋಗ್ಯವಲ್ಲ ಎಂದು ಆರೋಪಿಸಿದರು.

ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದು, ನೀರಿನ ಗುಣಮಟ್ಟ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜೇಂದ್ರ, ಗಿರೀಶ್, ಬಾಬು, ಅಜಯ್, ಪ್ರಯಾಗ್ ಸೇರಿದಂತೆ ಹಲವು ಗ್ರಾಮಸ್ಥರು ಭಾಗವಹಿಸಿದ್ದರು.
ಹನೂರು: ತಾಲೂಕಿನ ರಾಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಹಿಳೆಯರು ನೀರಿಗಾಗಿ ಕೆಲಸಕಾರ್ಯಗಳನ್ನು ಬಿಟ್ಟು ಸಂಜೆವರೆಗೂ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಮನಗುಡ್ಡೆಯಿಂದ ಟ್ಯಾಂಕರ್ ಮೂಲಕ ಪೂರೈಸುತ್ತಿರುವ ನೀರು ಸ್ವಚ್ಛವಾಗಿಲ್ಲ ಹಾಗೂ ಕುಡಿಯಲು ಯೋಗ್ಯವಲ್ಲ ಎಂದು ಆರೋಪಿಸಿದರು.
ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಗಳು, ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದ್ದು, ನೀರಿನ ಗುಣಮಟ್ಟ ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜೇಂದ್ರ, ಗಿರೀಶ್, ಬಾಬು, ಅಜಯ್, ಪ್ರಯಾಗ್ ಸೇರಿದಂತೆ ಹಲವು ಗ್ರಾಮಸ್ಥರು ಭಾಗವಹಿಸಿದ್ದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    12 hrs ago
  • ದೇಶಕ್ಕೆ ಇಂಜಿನಿಯರ್‌ಗಳ ಕೊಡುಗೆ ಅಪಾರ: ಅಬ್ದುಲ್‌ಅಜೀಜ್ ದೀನಾ ವರದಿ: ಹೊಮ್ಮನಂಜುಂಡನಾಯಕ ದೇಶಕ್ಕೆ ಇಂಜಿನಿಯರ್‌ಗಳ ಕೊಡುಗೆ ಅಪಾರ: ಅಬ್ದುಲ್‌ಅಜೀಜ್ ದೀನಾ ರೋಟರಿ ಸಂಸ್ಥೆ ವತಿಯಿಂದ ಇಂಜಿನಿಯ‌ರ್ ದಿನಾಚರಣೆ ಚಾಮರಾಜನಗರ: ದೇಶಕ್ಕೆ ಇಂಜಿನಿಯರ್‌ಗಳ ಕೊಡುಗೆ ಅಪಾರವಾಗಿದೆ' ಎಂದು ರೋಟರಿ ಅಧ್ಯಕ್ಷ ಅಬ್ದುಲ್‌ ಅಜೀಜ್ ದೀನಾ ಹೇಳಿದರು. ನಗರದ ರೋಟರಿ ಭವನದಲ್ಲಿ ನಡೆದ ರೋಟರಿ ಸಂಸ್ಥೆ ವತಿಯಿಂದ ನಡೆದ ಇಂಜಿನಿಯರ್ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ‌ ಮಾತನಾಡಿ, ಭಾರತದ ಮಹಾನ್ ಇಂಜಿನಿಯರ್, ಭಾರತರತ್ನ ಮೊಕ್ಷಗುಂಡಂವಿಶ್ವೇಶ್ವರಯ್ಯ ಅವರ ಜನ್ಮದಿನದ ನೆನಪಿಗಾಗಿ ಇಂಜಿನಿಯ‌ರ್ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತ ಸರ್ಕಾರವು 1986ರಲ್ಲಿ ಸೆ.15 ನ್ನು ರಾಷ್ಟ್ರೀಯ ಇಂಜಿನಿಯರ್ ದಿನವೆಂದು ಘೋಷಿಸಿದೆ ಎಂದರು. ದೇಶದ ಮೂಲಭೂತ ಸೌಲಭ್ಯ, ನೀರಾವರಿ ವ್ಯವಸ್ಥೆ, ಸುಂದರ ಕಟ್ಟಡಗಳ ನಿರ್ಮಾಣ ಕೈಗಾರಿಕಾ ಅಭಿವೃದ್ಧಿಗೆ ಇಂಜಿನಿಯರ್ ಗಳು ಅಪಾರ ಕೊಡುಗೆ ನೀಡಿದ್ದಾರೆ. ಅವರ ಸೇವೆಯನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ' ಎಂದರು. ಸನ್ಮಾನ ಸ್ವೀಕರಿಸಿದ ಸಹಾಯಕ ಕಾರ್ಯಪಾಲಕ ಅಭಿಯಂತರಾದ ವಿ.ರಮೇಶ್ ಮಾತನಾಡಿ, ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯು ಇಂಜಿನಿಯರ್‌ಗಳ ಸೇವೆಯನ್ನು ಗುರುತಿಸಿ ತಮ್ಮಗಳನ್ನು ಸನ್ಮಾನಿಸಿ ತಮ್ಮಗಳ ಜವಾಬ್ದಾರಿಯನ್ನು ಹೆಚ್ಚು ಮಾಡಿದೆ. ಇದಕ್ಕಾಗಿ ರೋಟರಿ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತೇನೆ. ರೋಟರಿ ಸಂಸ್ಥೆಯು ಮತ್ತಷ್ಟು ಸೇವಾ ಕಾರ್ಯಗಳ ಮೂಲಕ ಜನಸೇವೆ ಮಾಡುವಂತಾಗಲಿ ಎಂದು ಆಶಿಸಿದರು. ಸನ್ಮಾನ: ಸಹಾಯಕ ಕಾರ್ಯಪಾಲಕ ಅಭಿಯಂತರಾದ ವಿ.ರಮೇಶ್, ಹರದನಹಳ್ಳಿ ಚೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿ. ಧ್ರುಪದ್, ಕಿರಿಯ ಇಂಜಿನಿಯರ್ ಎಸ್‌.ಮಂಜುನಾಥ್, ರೋಟರಿ ಸಂಸ್ಥೆಯ ಇಂಜಿನಿಯರ್‌ಗಳಾದ ಮೋಹನ್, ರಾಜುವರ್ಗೀಸ್, ಪ್ರವೀಣ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥಾಪಕ ಸದಸ್ಯರಾದ ಜಿ.ಆ‌ರ್.ಅಶ್ವಥನಾರಾಯಣ್, ಸಿ.ವಿ.ಶ್ರೀನಿವಾಸಶೆಟ್ಟಿ,ಕಾರ್ಯದರ್ಶಿ ಅಂಕಶೆಟ್ಟಿ ಹಾಗೂ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.
    4
    ದೇಶಕ್ಕೆ ಇಂಜಿನಿಯರ್‌ಗಳ ಕೊಡುಗೆ ಅಪಾರ: ಅಬ್ದುಲ್‌ಅಜೀಜ್ ದೀನಾ
ವರದಿ: ಹೊಮ್ಮನಂಜುಂಡನಾಯಕ
ದೇಶಕ್ಕೆ ಇಂಜಿನಿಯರ್‌ಗಳ ಕೊಡುಗೆ ಅಪಾರ: ಅಬ್ದುಲ್‌ಅಜೀಜ್ ದೀನಾ
ರೋಟರಿ ಸಂಸ್ಥೆ ವತಿಯಿಂದ ಇಂಜಿನಿಯ‌ರ್ ದಿನಾಚರಣೆ
ಚಾಮರಾಜನಗರ: ದೇಶಕ್ಕೆ ಇಂಜಿನಿಯರ್‌ಗಳ ಕೊಡುಗೆ ಅಪಾರವಾಗಿದೆ' ಎಂದು ರೋಟರಿ ಅಧ್ಯಕ್ಷ ಅಬ್ದುಲ್‌ ಅಜೀಜ್ ದೀನಾ ಹೇಳಿದರು.
ನಗರದ ರೋಟರಿ ಭವನದಲ್ಲಿ ನಡೆದ ರೋಟರಿ ಸಂಸ್ಥೆ ವತಿಯಿಂದ ನಡೆದ ಇಂಜಿನಿಯರ್ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ‌ ಮಾತನಾಡಿ, ಭಾರತದ ಮಹಾನ್ ಇಂಜಿನಿಯರ್, ಭಾರತರತ್ನ ಮೊಕ್ಷಗುಂಡಂವಿಶ್ವೇಶ್ವರಯ್ಯ ಅವರ ಜನ್ಮದಿನದ ನೆನಪಿಗಾಗಿ ಇಂಜಿನಿಯ‌ರ್ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತ ಸರ್ಕಾರವು 1986ರಲ್ಲಿ ಸೆ.15 ನ್ನು ರಾಷ್ಟ್ರೀಯ ಇಂಜಿನಿಯರ್ ದಿನವೆಂದು ಘೋಷಿಸಿದೆ ಎಂದರು.
ದೇಶದ ಮೂಲಭೂತ ಸೌಲಭ್ಯ, ನೀರಾವರಿ ವ್ಯವಸ್ಥೆ, ಸುಂದರ ಕಟ್ಟಡಗಳ ನಿರ್ಮಾಣ ಕೈಗಾರಿಕಾ ಅಭಿವೃದ್ಧಿಗೆ ಇಂಜಿನಿಯರ್ ಗಳು ಅಪಾರ ಕೊಡುಗೆ ನೀಡಿದ್ದಾರೆ. ಅವರ ಸೇವೆಯನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ' ಎಂದರು.
ಸನ್ಮಾನ ಸ್ವೀಕರಿಸಿದ ಸಹಾಯಕ ಕಾರ್ಯಪಾಲಕ ಅಭಿಯಂತರಾದ ವಿ.ರಮೇಶ್ ಮಾತನಾಡಿ, ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯು ಇಂಜಿನಿಯರ್‌ಗಳ ಸೇವೆಯನ್ನು ಗುರುತಿಸಿ ತಮ್ಮಗಳನ್ನು ಸನ್ಮಾನಿಸಿ ತಮ್ಮಗಳ ಜವಾಬ್ದಾರಿಯನ್ನು ಹೆಚ್ಚು ಮಾಡಿದೆ. ಇದಕ್ಕಾಗಿ ರೋಟರಿ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತೇನೆ. ರೋಟರಿ ಸಂಸ್ಥೆಯು ಮತ್ತಷ್ಟು ಸೇವಾ ಕಾರ್ಯಗಳ ಮೂಲಕ ಜನಸೇವೆ ಮಾಡುವಂತಾಗಲಿ ಎಂದು ಆಶಿಸಿದರು.
ಸನ್ಮಾನ: ಸಹಾಯಕ ಕಾರ್ಯಪಾಲಕ ಅಭಿಯಂತರಾದ ವಿ.ರಮೇಶ್, ಹರದನಹಳ್ಳಿ ಚೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿ. ಧ್ರುಪದ್, ಕಿರಿಯ ಇಂಜಿನಿಯರ್ ಎಸ್‌.ಮಂಜುನಾಥ್, ರೋಟರಿ ಸಂಸ್ಥೆಯ ಇಂಜಿನಿಯರ್‌ಗಳಾದ ಮೋಹನ್, ರಾಜುವರ್ಗೀಸ್, ಪ್ರವೀಣ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥಾಪಕ ಸದಸ್ಯರಾದ ಜಿ.ಆ‌ರ್.ಅಶ್ವಥನಾರಾಯಣ್,  ಸಿ.ವಿ.ಶ್ರೀನಿವಾಸಶೆಟ್ಟಿ,ಕಾರ್ಯದರ್ಶಿ ಅಂಕಶೆಟ್ಟಿ ಹಾಗೂ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    8 hrs ago
  • ಕಿಲಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ‌ಪೂಜೆ ನೆರವೇರಿಸಿದ‌‌ ಸಚಿವ ಪುಟ್ಟರಂಗಶೆಟ್ಟಿ ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಎಸ್ಇಪಿ ಯೋಜನೆಯಡಿ ಒಂದು ಕೋಟಿ ರೂ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ ಅವರು ರಸ್ತೆಗಳು ಗ್ರಾಮೀಣ ಜನರ ಜೀವನಾಡಿಯಾಗಿದೆ ಈ ನಿಟ್ಟಿನಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ರಸ್ತೆ, ಚರಂಡಿ ಸೇತುವೆ ಅಭಿವೃದ್ಧಿಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಜನರ ಅಭಿವೃದ್ಧಿ ಕೆಲಸಗಳೆ ನನ್ನ ಗುರಿಯಾಗಿದ್ದು ವಿವಿಧ ಅಭಿವೃದ್ಧಿ ಯೋಜನೆಯಡಿ ಅನುದಾನ ತಂದು ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು
    2
    ಕಿಲಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ‌ಪೂಜೆ ನೆರವೇರಿಸಿದ‌‌ ಸಚಿವ ಪುಟ್ಟರಂಗಶೆಟ್ಟಿ 

ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಎಸ್ಇಪಿ ಯೋಜನೆಯಡಿ ಒಂದು ಕೋಟಿ ರೂ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿ ಅವರು ರಸ್ತೆಗಳು ಗ್ರಾಮೀಣ ಜನರ ಜೀವನಾಡಿಯಾಗಿದೆ ಈ ನಿಟ್ಟಿನಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ರಸ್ತೆ, ಚರಂಡಿ ಸೇತುವೆ ಅಭಿವೃದ್ಧಿಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ.
ಜನರ ಅಭಿವೃದ್ಧಿ ಕೆಲಸಗಳೆ ನನ್ನ ಗುರಿಯಾಗಿದ್ದು ವಿವಿಧ ಅಭಿವೃದ್ಧಿ ಯೋಜನೆಯಡಿ ಅನುದಾನ ತಂದು ಸಾಕಷ್ಟು ಕೆಲಸಗಳನ್ನು  ಮಾಡುತ್ತಿದ್ದೇವೆ ಎಂದು ತಿಳಿಸಿದರು
    user_ಚಾಮರಾಜನಗರ ಸುದ್ದಿ ಮನೆ
    ಚಾಮರಾಜನಗರ ಸುದ್ದಿ ಮನೆ
    ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    11 hrs ago
  • ಪಟ್ಟಣದಲ್ಲಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಿವೇಶನಗಳ ಹಂಚಿಕೆ ಕಾರ್ಯಕ್ಕೆ ಸಚಿವ ನರೇಂದ್ರಸ್ವಾಮಿ ಚಾಲನೆ ಮಳವಳ್ಳಿ ; ಕಳೆದ 45 ವರ್ಷಗ ಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟ ಣದ ಶಾಂತಿ ಕಾಲೇಜು ಮುಂಭಾ ಗದ 33 ಎಕರೆ ನಿವೇಶನ ಹಂಚಿಕೆ ಕಾರ್ಯಕ್ಕೆ ಮುಕ್ತಿ ದೊರಕಿದ್ದು ನಿವೇಶನ ಹಂಚಿಕೆ ಕಾರ್ಯಕ್ಕೆ ಕೃಷಿ ಸಚಿವರೂ ಅದ ಶಾಸಕ ಪಿ ಎಂ ನರೇಂದ್ರಸ್ವಾಮಿ ವಿದ್ಯುಕ್ತ ಚಾಲನೆ ನೀಡಿದರು. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ನಿವೇಶನ ಆವರಣದಲ್ಲಿ ಮಂಗಳವಾರ ಸಾಯಂಕಾಲ 5.30 ರ ಸಮಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಲಾಟರಿ ಮೂಲಕ ಫಲಾನುಭವಿಗಳ ಸೈಟ್ ಸಂಖ್ಯೆಯನ್ನು ಅವರೇ ಆಯ್ಕೆ ಮಾಡಿಕೊಳ್ಳುವ ಸಚಿವ ನರೇಂದ್ರಸ್ವಾಮಿ ನಿವೇಶನ ಹಂಚಿಕೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಕಳೆದ 45 ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಕಾಲದಲ್ಲಿ ಭೂಸ್ವಾಧೀನ ವಾಗಿದ್ದ ಈ ನಿವೇಶನ ಜಮೀನಿನ ಮಾಲೀಕರು ಹಾಗೂ ಪುರಸಭೆ ನಡುವಿನ ವ್ಯಾಜ್ಯ ಹೈಕೋಟ್೯ ಮೆಟ್ಟಲೇ ರಿದ ಪರಿಣಾಮ‌ ಅಂದಿನಿಂ ದಲೂ ನೆನೆಗುದಿಗೆ ಬಿದ್ದಿತ್ತಾ ದರೂ ತಾವು 2 ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ವೇಳೆ ಈ ಹಂಚಿಕೆ ಕಾರ್ಯಕ್ಕೆ ಚಾಲನೆ ನೀಡಿದ್ದಾಗಿ ತಿಳಿಸಿದರು. ಅಂದು ಜಮೀನಿನ ಮಾಲೀಕರ ಜೊತೆ ಚೆರ್ಚೆ ನಡೆಸಿ ವಿವಾದ ಬಗೆಹರಿಸಿದ್ದರ ಜೊತೆಗೆ ನ್ಯಾಯಾಲಯದ ತಡೆಯಾಜ್ಞೆ ತೆರೆವು ಗೊಳಿಸಿ ಜನರಿಗೆ ನೀಡಿದ ಭರವಸೆಯಂತೆ ಇದೀಗ ನಿವೇಶ ನಗಳ ಹಂಚಿಕೆಗೆ ಇಂದು ಚಾಲನೆ ನೀಡುತ್ತಿರುವುದಾಗಿ ಹೇಳಿದರು. ಇಂದು ಸೈಟ್ ನಂಬರ್ ಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದ್ದು ಸಧ್ಯದಲ್ಲಿ ಮುಖ್ಯಮಂತ್ರಿಗಳಿಂದ ಹಕ್ಕು ಪತ್ರ ವಿತರಿಸುವುದಾಗಿ ತಿಳಿಸಿದ ಅವರು ನಿವೇಶ ಹಂಚಿಕೆ ವಿಚಾರದಲ್ಲಿ ಹಿಂದಿನವರಂತೆ ರಾಜಕಾರಣ ಮಾಡದೆ ಬಡ ಪಲಾನುಭವಿಗಳಿಗೆ ಪ್ರಾಮಾಣಿ ಕವಾಗಿ ನಿವೇಶನ ದೊರಕಿಸಿ ಕೊಡುತ್ತಿರುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ನಿವೇಶನ ಹಂಚಿಕೆ ಯನ್ನು ಪಾರದರ್ಶಕವಾಗಿ ನಡೆಸುತ್ತಿರುವ ಸಚಿವ ಪಿ ಎಂ ನರೇಂದ್ರಸ್ವಾಮಿ ಅವರ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಜಿ ಪಂ ಸಿಇಒ ನಂದಿನಿ, ಉಪ‌ ವಿಭಾಗಾಧಿಕಾರಿ ಶಿವಮೂರ್ತಿ , ನಗರಾಭಿವೃದ್ದಿ ಇಲಾಖೆ ಯೋಜನಾಧಿಕಾರಿ ಚಂದ್ರ ಶೇಖರ್. ಮುಖ್ಯಾಧಿ ಕಾರಿ ನಾಗರತ್ನ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿ ದ್ದರು.
    1
    ಪಟ್ಟಣದಲ್ಲಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಿವೇಶನಗಳ ಹಂಚಿಕೆ ಕಾರ್ಯಕ್ಕೆ ಸಚಿವ ನರೇಂದ್ರಸ್ವಾಮಿ ಚಾಲನೆ
ಮಳವಳ್ಳಿ ; ಕಳೆದ 45 ವರ್ಷಗ ಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟ ಣದ ಶಾಂತಿ ಕಾಲೇಜು ಮುಂಭಾ ಗದ 33 ಎಕರೆ ನಿವೇಶನ ಹಂಚಿಕೆ ಕಾರ್ಯಕ್ಕೆ  ಮುಕ್ತಿ ದೊರಕಿದ್ದು ನಿವೇಶನ ಹಂಚಿಕೆ ಕಾರ್ಯಕ್ಕೆ ಕೃಷಿ ಸಚಿವರೂ ಅದ ಶಾಸಕ ಪಿ ಎಂ ನರೇಂದ್ರಸ್ವಾಮಿ ವಿದ್ಯುಕ್ತ ಚಾಲನೆ ನೀಡಿದರು. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ನಿವೇಶನ ಆವರಣದಲ್ಲಿ ಮಂಗಳವಾರ ಸಾಯಂಕಾಲ 5.30 ರ ಸಮಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಲಾಟರಿ ಮೂಲಕ ಫಲಾನುಭವಿಗಳ ಸೈಟ್ ಸಂಖ್ಯೆಯನ್ನು ಅವರೇ ಆಯ್ಕೆ ಮಾಡಿಕೊಳ್ಳುವ ಸಚಿವ ನರೇಂದ್ರಸ್ವಾಮಿ ನಿವೇಶನ ಹಂಚಿಕೆಗೆ  ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಕಳೆದ 45 ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಕಾಲದಲ್ಲಿ ಭೂಸ್ವಾಧೀನ ವಾಗಿದ್ದ ಈ ನಿವೇಶನ ಜಮೀನಿನ ಮಾಲೀಕರು ಹಾಗೂ ಪುರಸಭೆ ನಡುವಿನ ವ್ಯಾಜ್ಯ ಹೈಕೋಟ್೯ ಮೆಟ್ಟಲೇ ರಿದ ಪರಿಣಾಮ‌ ಅಂದಿನಿಂ ದಲೂ ನೆನೆಗುದಿಗೆ ಬಿದ್ದಿತ್ತಾ ದರೂ ತಾವು 2 ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ವೇಳೆ ಈ ಹಂಚಿಕೆ ಕಾರ್ಯಕ್ಕೆ ಚಾಲನೆ ನೀಡಿದ್ದಾಗಿ ತಿಳಿಸಿದರು.    ಅಂದು ಜಮೀನಿನ ಮಾಲೀಕರ ಜೊತೆ ಚೆರ್ಚೆ ನಡೆಸಿ ವಿವಾದ ಬಗೆಹರಿಸಿದ್ದರ ಜೊತೆಗೆ ನ್ಯಾಯಾಲಯದ ತಡೆಯಾಜ್ಞೆ  ತೆರೆವು ಗೊಳಿಸಿ ಜನರಿಗೆ ನೀಡಿದ ಭರವಸೆಯಂತೆ ಇದೀಗ ನಿವೇಶ ನಗಳ ಹಂಚಿಕೆಗೆ ಇಂದು ಚಾಲನೆ ನೀಡುತ್ತಿರುವುದಾಗಿ ಹೇಳಿದರು.    ಇಂದು ಸೈಟ್ ನಂಬರ್ ಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದ್ದು ಸಧ್ಯದಲ್ಲಿ ಮುಖ್ಯಮಂತ್ರಿಗಳಿಂದ ಹಕ್ಕು ಪತ್ರ ವಿತರಿಸುವುದಾಗಿ ತಿಳಿಸಿದ ಅವರು ನಿವೇಶ ಹಂಚಿಕೆ ವಿಚಾರದಲ್ಲಿ ಹಿಂದಿನವರಂತೆ ರಾಜಕಾರಣ ಮಾಡದೆ ಬಡ ಪಲಾನುಭವಿಗಳಿಗೆ ಪ್ರಾಮಾಣಿ ಕವಾಗಿ ನಿವೇಶನ ದೊರಕಿಸಿ ಕೊಡುತ್ತಿರುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ನಿವೇಶನ ಹಂಚಿಕೆ ಯನ್ನು  ಪಾರದರ್ಶಕವಾಗಿ ನಡೆಸುತ್ತಿರುವ ಸಚಿವ ಪಿ ಎಂ ನರೇಂದ್ರಸ್ವಾಮಿ ಅವರ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಜಿ ಪಂ ಸಿಇಒ ನಂದಿನಿ, ಉಪ‌ ವಿಭಾಗಾಧಿಕಾರಿ ಶಿವಮೂರ್ತಿ , ನಗರಾಭಿವೃದ್ದಿ ಇಲಾಖೆ  ಯೋಜನಾಧಿಕಾರಿ ಚಂದ್ರ ಶೇಖರ್.  ಮುಖ್ಯಾಧಿ ಕಾರಿ ನಾಗರತ್ನ ಮತ್ತಿತರರು ಕಾರ್ಯಕ್ರಮದಲ್ಲಿ  ಹಾಜರಿ ದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    11 hrs ago
  • ಗೌರಿ ಗಣೇಶ ಹಬ್ಬಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ: ಕೃಷಿ ಸಚಿವ ನರೇಂದ್ರಸ್ವಾಮಿ ಗೌರಿ ಗಣೇಶ ಹಬ್ಬ ಅಂಗವಾಗಿ ನಿಮ್ಮೆಲ್ಲರಿಗೂ ಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ ಎಂದು ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದರು. ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನದ ಆವರಣದಲ್ಲಿ ನಗರಾಭಿವೃದ್ದಿ ಇಲಾಖೆ , ರಾಜೀವ್ ಗಾಂಧಿ ವಸತಿ ನಿಗಮ , ಜಿಲ್ಲಾಢಳಿತ, ಪುರಸಭೆ ವತಿಯಿಂದ ಆರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜಕೀಯ ವಿರೋಧವಿದ್ದರೂ ನಾನು ಅಂಜದೆ ಛಲ ಬಿಡದೆ ನಿವೇಶನ ಹಂಚಿಕೆ ಮಾಡುತ್ತಿದ್ದೇನೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು ಇದೇ ನಿವೇಶನಕ್ಕೆ ಕರೆಸಿ ವಿವಿಧ ಕಾಮಗಾರಿಗಳ ಜೊತೆಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು. ಈ ವೇಳೆ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಸೇರಿದಂತೆ ಹಲವರು ಇದ್ದರು.
    1
    ಗೌರಿ ಗಣೇಶ ಹಬ್ಬಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ: ಕೃಷಿ ಸಚಿವ ನರೇಂದ್ರಸ್ವಾಮಿ 
ಗೌರಿ ಗಣೇಶ ಹಬ್ಬ ಅಂಗವಾಗಿ ನಿಮ್ಮೆಲ್ಲರಿಗೂ  ಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ ಎಂದು  ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದರು.
ಮಳವಳ್ಳಿ ಪಟ್ಟಣದ 33 ಎಕರೆ  ನಿವೇಶನದ ಆವರಣದಲ್ಲಿ  ನಗರಾಭಿವೃದ್ದಿ ಇಲಾಖೆ , ರಾಜೀವ್ ಗಾಂಧಿ ವಸತಿ ನಿಗಮ , ಜಿಲ್ಲಾಢಳಿತ, ಪುರಸಭೆ ವತಿಯಿಂದ ಆರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜಕೀಯ ವಿರೋಧವಿದ್ದರೂ ನಾನು ಅಂಜದೆ  ಛಲ ಬಿಡದೆ  ನಿವೇಶನ ಹಂಚಿಕೆ ಮಾಡುತ್ತಿದ್ದೇನೆ ಮುಂದಿನ ದಿನಗಳಲ್ಲಿ  ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು  ಇದೇ ನಿವೇಶನಕ್ಕೆ ಕರೆಸಿ ವಿವಿಧ ಕಾಮಗಾರಿಗಳ ಜೊತೆಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು.
ಈ  ವೇಳೆ  ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಸೇರಿದಂತೆ ಹಲವರು ಇದ್ದರು.
    user_ಸುಮಿತ್ರ‌ ಹೆಚ್‌ ಪಿ
    ಸುಮಿತ್ರ‌ ಹೆಚ್‌ ಪಿ
    ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
    13 hrs ago
  • ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ. ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ. ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಆರೋಪಿಗಳ ಬಂಧನಕ್ಕೆ ಪ್ರತಿಭಟನೆ ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು. ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.
    3
    ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ
ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ.
ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ.
ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಆರೋಪಿಗಳ ಬಂಧನಕ್ಕೆ ಪ್ರತಿಭಟನೆ
ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು.
ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.
    user_ಶಿವು.ಎಸ್ ದೊಡ್ಡಆಲಹಳ್ಳಿ
    ಶಿವು.ಎಸ್ ದೊಡ್ಡಆಲಹಳ್ಳಿ
    Local News Reporter ಕನಕಪುರ, ರಾಮನಗರ, ಕರ್ನಾಟಕ•
    10 hrs ago
  • ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ ಚನ್ನಪಟ್ಟಣ--ತಂತ್ರಜ್ಞಾನದ  ಯುಗದಲ್ಲಿ  ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ  ಶ್ರೀ ಸಿದ್ಧರಾಮೇಶ್ವರ  ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ  ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್‌ ಅನ್ನು ಸಂಸ್ಥೆಯ ಕಾರ್ಯ ದರ್ಶಿಗಳಾದ  ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ  ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.
    1
    ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ
ಚನ್ನಪಟ್ಟಣ--ತಂತ್ರಜ್ಞಾನದ  ಯುಗದಲ್ಲಿ  ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ  ಶ್ರೀ ಸಿದ್ಧರಾಮೇಶ್ವರ  ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು.
ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ  ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್‌ ಅನ್ನು ಸಂಸ್ಥೆಯ ಕಾರ್ಯ
ದರ್ಶಿಗಳಾದ  ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ  ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    11 hrs ago
  • ಜೆಎಸ್‌ಎಸ್ ನರ್ಸಿಂಗ್ ಕಾಲೇಜು ವತಿಯಿಂದ ವಿಶ್ವ ಆತ್ಮಹತ್ಯೆ ತಡೆದಿನಾಚರಣೆ ಕಾರ್ಯಕ್ರಮ ವರದಿ: ಹೊಮ್ಮನಂಜುಂಡನಾಯಕ ಜಿಲ್ಲೆಯನ್ನು ಆತ್ಮಹತ್ಯೆ ಮುಕ್ತ ಮಾಡಲು ಪಣ ತೊಡಿ: ಡಾ.ಪಿ.ಚಂದ್ರಶೇಖ‌ರ್ ಜೆಎಸ್‌ಎಸ್ ನರ್ಸಿಂಗ್ ಕಾಲೇಜು ವತಿಯಿಂದ ವಿಶ್ವ ಆತ್ಮಹತ್ಯೆ ತಡೆದಿನಾಚರಣೆ ಕಾರ್ಯಕ್ರಮ ಚಾಮರಾಜನಗರ: ಆತ್ಮಹತ್ಯೆ ತಡೆಗಟ್ಟಲು ಸಮಾಜದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ. ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಪಿ.ಚಂದ್ರಶೇಖ‌ರ್ ಅಭಿಪ್ರಾಯಪಟ್ಟರು. ನಗರದ ಜೆಎಸ್‌ಎಸ್‌ ಮಹಿಳಾಕಾಲೇಜು ಸಭಾಂಗಣದಲ್ಲಿ ಜೆಎಸ್‌ಎಸ್‌ ನರ್ಸಿಂಗ್‌ ಕಾಲೇಜು ವತಿಯಿಂದ ಆತ್ಮಹತ್ಯೆಯ ನಿರೂಪಣೆಯನ್ನು ಬದಲಾಯಿಸೋಣ' ಧ್ಯೇಯ ವಾಕ್ಯದಡಿ, ನಡೆದ 'ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯನ್ನು ಗಿಡಕ್ಕೆ ನೀರಾಕುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.  ಶುಶ್ರೂಷಕರು ಆತ್ಮಹತ್ಯೆಗೆ ಪ್ರಯತ್ನ ಮಾಡುವವರ ಜತೆ ಸಮಾಲೋಚನೆ ನಡೆಸಿ, ಅವರಿಗೆ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮ ಆಯೋಜಿಸಬೇಕು, ಆ ಮೂಲಕ‌ ಜಿಲ್ಲೆಯನ್ನು ಆತ್ಮಹತ್ಯೆ ಮುಕ್ತ ಮಾಡಲು ಪಣ ತೊಡಬೇಕು ಎಂದರು. ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ. ಸಕಾರಾತ್ಮಕ ಚಿಂತನೆಗಳು ಎಲ್ಲದಕ್ಕೂ ಸೂಕ್ತ ಪರಿಹಾರ ನೀಡುತ್ತವೆ.ಮಾನಸಿಕ ಖಿನ್ನತೆ ಒಂಟಿತನ, ಕೌಟುಂಬಿಕ ಕಲಹ ಇದರಲ್ಲಿ ಸಿಲುಕುವವರು  ಆತ್ಮಹತ್ಯೆಗೆ ಶರಣಾಗುವ ಸಾಧ್ಯತೆ ಇದೆ. ಇಲಾಖೆ ಸಂಗ್ರಹಿಸಿರುವ ಅಂಕಿ ಅಂಕಿಆಂಶಗಳ ಪ್ರಕಾರ ಜುಲೈನಲ್ಲಿ  ಗಂಡುಮಕ್ಕಳು-61 ಹೆಣ್ಣುಮಕ್ಕಳು-66, ಆಗಸ್ಟ್ ನಲ್ಲಿ  ಗಂಡುಮಕ್ಕಳು -66,  ಹೆಣ್ಣು ಮಕ್ಕಳು -70 ಆತ್ಮಹತ್ಯೆಗೆ ಶರಣಾಗಿದ್ದಾರೆ.  ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಜಿಲ್ಲೆಯ ತಾಲ್ಲೂಕು ಆಸ್ಪತ್ರೆಗಳಲ್ಲಿ ಪ್ರತಿ ಮಂಗಳವಾರ,  ಶುಕ್ರವಾರ, ಬುಧವಾರ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮನೋಚೈತನ್ಯ‌ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಆತ್ಮ ಹತ್ಯೆಗೆ  ಪ್ರಯತ್ನಪಟ್ಟವರ ಜತೆ ಆಪ್ತಸಮಾಲೋಚನೆ ನಡೆಸುವ ಮೂಲಕ  ಅವರ ಸಮಸ್ಯೆಗೆ ಪರಿಹಾರ ಕೊಡುವ ಪ್ರಯತ್ನ ಮಾಡಲಾಗುತ್ತಿದೆ ಎಂದರು. ಮೈಸೂರು ಜೆಎಸ್‌ಎಸ್‌ ವೈದ್ಯಕೀಯ ಕಾಲೇಜು ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕರಾದ ಡಾ.ಶಿವಾನಂದ ಜೆ.ಮನೋಹರ್, ರಕ್ಷಿತಾಪೂಜಾರಿ ಮಾತನಾಡಿದರು. ಅಧ್ಯಕ್ಷ ತೆ ವಹಿಸಿದ್ದ ಪ್ರಾಂಶುಪಾಲ‌ ಜಿ.ವಿನಯಕುಮಾರ್ ಮಾತನಾಡಿದರು. ಉಪನ್ಯಾಸಕಿ ಹೇಮಾವತಿ, ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿಗಳಾದ ನಿಧಿಶ್ರೀ ಪ್ರಾರ್ಥಿಸಿದರು.ದಿವ್ಯ ಸ್ವಾಗತಿಸಿದರು. ಮಾದಲಾಂಬಿಕೆ ವಂದಿಸಿದರು.
    4
    ಜೆಎಸ್‌ಎಸ್ ನರ್ಸಿಂಗ್ ಕಾಲೇಜು ವತಿಯಿಂದ ವಿಶ್ವ ಆತ್ಮಹತ್ಯೆ ತಡೆದಿನಾಚರಣೆ ಕಾರ್ಯಕ್ರಮ
ವರದಿ: ಹೊಮ್ಮನಂಜುಂಡನಾಯಕ
ಜಿಲ್ಲೆಯನ್ನು ಆತ್ಮಹತ್ಯೆ ಮುಕ್ತ ಮಾಡಲು ಪಣ ತೊಡಿ:
ಡಾ.ಪಿ.ಚಂದ್ರಶೇಖ‌ರ್
ಜೆಎಸ್‌ಎಸ್ ನರ್ಸಿಂಗ್ ಕಾಲೇಜು ವತಿಯಿಂದ ವಿಶ್ವ ಆತ್ಮಹತ್ಯೆ ತಡೆದಿನಾಚರಣೆ ಕಾರ್ಯಕ್ರಮ
ಚಾಮರಾಜನಗರ: ಆತ್ಮಹತ್ಯೆ ತಡೆಗಟ್ಟಲು ಸಮಾಜದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವುದು ಅತ್ಯಂತ ಅವಶ್ಯಕವಾಗಿದೆ. ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಪಿ.ಚಂದ್ರಶೇಖ‌ರ್ ಅಭಿಪ್ರಾಯಪಟ್ಟರು.
ನಗರದ ಜೆಎಸ್‌ಎಸ್‌ ಮಹಿಳಾಕಾಲೇಜು ಸಭಾಂಗಣದಲ್ಲಿ ಜೆಎಸ್‌ಎಸ್‌ ನರ್ಸಿಂಗ್‌ ಕಾಲೇಜು ವತಿಯಿಂದ ಆತ್ಮಹತ್ಯೆಯ ನಿರೂಪಣೆಯನ್ನು ಬದಲಾಯಿಸೋಣ' ಧ್ಯೇಯ ವಾಕ್ಯದಡಿ, ನಡೆದ 'ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯನ್ನು ಗಿಡಕ್ಕೆ ನೀರಾಕುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. 
ಶುಶ್ರೂಷಕರು ಆತ್ಮಹತ್ಯೆಗೆ ಪ್ರಯತ್ನ ಮಾಡುವವರ ಜತೆ ಸಮಾಲೋಚನೆ ನಡೆಸಿ, ಅವರಿಗೆ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮ ಆಯೋಜಿಸಬೇಕು, ಆ ಮೂಲಕ‌ ಜಿಲ್ಲೆಯನ್ನು ಆತ್ಮಹತ್ಯೆ ಮುಕ್ತ ಮಾಡಲು ಪಣ ತೊಡಬೇಕು ಎಂದರು.
ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ. ಸಕಾರಾತ್ಮಕ ಚಿಂತನೆಗಳು ಎಲ್ಲದಕ್ಕೂ ಸೂಕ್ತ ಪರಿಹಾರ ನೀಡುತ್ತವೆ.ಮಾನಸಿಕ ಖಿನ್ನತೆ ಒಂಟಿತನ, ಕೌಟುಂಬಿಕ ಕಲಹ ಇದರಲ್ಲಿ ಸಿಲುಕುವವರು  ಆತ್ಮಹತ್ಯೆಗೆ ಶರಣಾಗುವ ಸಾಧ್ಯತೆ ಇದೆ. ಇಲಾಖೆ ಸಂಗ್ರಹಿಸಿರುವ ಅಂಕಿ ಅಂಕಿಆಂಶಗಳ ಪ್ರಕಾರ ಜುಲೈನಲ್ಲಿ  ಗಂಡುಮಕ್ಕಳು-61 ಹೆಣ್ಣುಮಕ್ಕಳು-66, ಆಗಸ್ಟ್ 
ನಲ್ಲಿ  ಗಂಡುಮಕ್ಕಳು -66,  ಹೆಣ್ಣು ಮಕ್ಕಳು -70 ಆತ್ಮಹತ್ಯೆಗೆ ಶರಣಾಗಿದ್ದಾರೆ.  ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಜಿಲ್ಲೆಯ ತಾಲ್ಲೂಕು ಆಸ್ಪತ್ರೆಗಳಲ್ಲಿ ಪ್ರತಿ ಮಂಗಳವಾರ,  ಶುಕ್ರವಾರ, ಬುಧವಾರ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮನೋಚೈತನ್ಯ‌ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಆತ್ಮ ಹತ್ಯೆಗೆ  ಪ್ರಯತ್ನಪಟ್ಟವರ ಜತೆ ಆಪ್ತಸಮಾಲೋಚನೆ ನಡೆಸುವ ಮೂಲಕ  ಅವರ ಸಮಸ್ಯೆಗೆ ಪರಿಹಾರ ಕೊಡುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಮೈಸೂರು ಜೆಎಸ್‌ಎಸ್‌ ವೈದ್ಯಕೀಯ ಕಾಲೇಜು ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕರಾದ ಡಾ.ಶಿವಾನಂದ ಜೆ.ಮನೋಹರ್, ರಕ್ಷಿತಾಪೂಜಾರಿ ಮಾತನಾಡಿದರು. ಅಧ್ಯಕ್ಷ ತೆ ವಹಿಸಿದ್ದ ಪ್ರಾಂಶುಪಾಲ‌ ಜಿ.ವಿನಯಕುಮಾರ್ ಮಾತನಾಡಿದರು.
ಉಪನ್ಯಾಸಕಿ ಹೇಮಾವತಿ, ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿಗಳಾದ ನಿಧಿಶ್ರೀ ಪ್ರಾರ್ಥಿಸಿದರು.ದಿವ್ಯ ಸ್ವಾಗತಿಸಿದರು. ಮಾದಲಾಂಬಿಕೆ ವಂದಿಸಿದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.