logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಳವಳ್ಳಿ ತಾಲೂಕು ನಲ್ಲಿ ಅಕ್ರಮ ಮಣ್ಣು ದಂದೆ ಮಳವಳ್ಳಿ : ಮಳವಳ್ಳಿ ತಾಲೂಕಿನಲ್ಲಿ ಮಣ್ಣಿನ ದಂಧೆ ಅಕ್ರಮವಾಗಿ ನಡೆಯುತ್ತಿದ್ದು ಕೆಲ ಗ್ರಾಮಗಳಲ್ಲಿ ಅವೇರಳ್ಳಿ ಹೆಬ್ಬಣಿ ಮುಂತಾದ ಗ್ರಾಮಗಳಲ್ಲಿ ಮಣ್ಣಿನ ದಂಧೆ ಸಾಗುತ್ತಿದೆ ಇದಕ್ಕೆ ಗ್ರಾಮಸ್ಥರ ಆಕ್ರೋಶ ಹಾಗೂ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿ ಇದಕ್ಕೆ ಸೂಕ್ತವಾದ ಕಾನೂನಿ ಕ್ರಮವನ್ನು ಜರಗಿಸಬೇಕು ಎಂದು ತಹಸಿಲ್ದಾರ್ ಜಿಲ್ಲಾ ಕಚೇರಿ ನಲ್ಲಿ ಮನವಿ ಮಾಡಲು ತೀರ್ಮಾನಿಸಿದ್ದಾರೆ

46 min ago
user_ಎ.ಏನ್.ಎಸ್ ನ್ಯೂಸ್
ಎ.ಏನ್.ಎಸ್ ನ್ಯೂಸ್
ರಾಜಕೀಯ ಪಕ್ಷದ ಕಚೇರಿ ಮಳವಳ್ಳಿ, ಮಂಡ್ಯ, ಕರ್ನಾಟಕ•
46 min ago

ಮಳವಳ್ಳಿ ತಾಲೂಕು ನಲ್ಲಿ ಅಕ್ರಮ ಮಣ್ಣು ದಂದೆ ಮಳವಳ್ಳಿ : ಮಳವಳ್ಳಿ ತಾಲೂಕಿನಲ್ಲಿ ಮಣ್ಣಿನ ದಂಧೆ ಅಕ್ರಮವಾಗಿ ನಡೆಯುತ್ತಿದ್ದು ಕೆಲ ಗ್ರಾಮಗಳಲ್ಲಿ ಅವೇರಳ್ಳಿ ಹೆಬ್ಬಣಿ ಮುಂತಾದ ಗ್ರಾಮಗಳಲ್ಲಿ ಮಣ್ಣಿನ ದಂಧೆ ಸಾಗುತ್ತಿದೆ ಇದಕ್ಕೆ ಗ್ರಾಮಸ್ಥರ ಆಕ್ರೋಶ ಹಾಗೂ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿ ಇದಕ್ಕೆ ಸೂಕ್ತವಾದ ಕಾನೂನಿ ಕ್ರಮವನ್ನು ಜರಗಿಸಬೇಕು ಎಂದು ತಹಸಿಲ್ದಾರ್ ಜಿಲ್ಲಾ ಕಚೇರಿ ನಲ್ಲಿ ಮನವಿ ಮಾಡಲು ತೀರ್ಮಾನಿಸಿದ್ದಾರೆ

More news from ಕರ್ನಾಟಕ and nearby areas
  • *ಸಮ ಸಮಾಜ ನಿರ್ಮಾಣಕ್ಕೆ ನಾರಾಯಣ ಗುರು ಗಳ ಆದರ್ಶ ಪಾಲನೆ ಅಗತ್ಯ ಬಿ.ಪಿ. ಪ್ರಕಾಶ್* ಮಂಡ್ಯ- ಸಮ ಸಮಾಜ ನಿರ್ಮಾಣಕ್ಕೆ ಪಣತೊಟ್ಟ ಮಹನೀಯರಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸಾಧನೆ ಅಪಾರವಾಗಿದೆ. ಅವರ ಆದರ್ಶ, ತತ್ವ ಹಾಗೂ ಸಮಾಜ ಸುಧಾರಣೆಯ ಚಿಂತನೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ. ಪ್ರಕಾಶ್ ರವರು ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಹಾಗೂ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಸಮಾನತೆ, ಸಹೋದರತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ನಾರಾಯಣಗುರುಗಳು ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಸಮಾಜ ಸುಧಾರಣೆಯ ಆಶಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಕರ್ನಾಟಕ ರಾಜ್ಯ ಪ್ರದೇಶ ಆರ್ಯ ಈಡಿಗರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಸೌಮ್ಯ ಶ್ರೀನಿವಾಸ್ ಉಪನ್ಯಾಸ ನೀಡಿ, ಬ್ರಹ್ಮಶ್ರೀ ನಾರಾಯಣಗುರುಗಳ ಜೀವನ, ಜನನ ಹಾಗೂ ಸಮಾಜ ಸುಧಾರಣಾ ಕಾರ್ಯಗಳ ಕುರಿತು ವಿವರಿಸಿದರು. ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಅಪ್ಪಾಜಿಗೌಡ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದ ಅಭಿವೃದ್ಧಿಗಾಗಿ ಸಂಘದ ವತಿಯಿಂದ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಂಗವಾಗಿ ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸಿದ ಗಣ್ಯರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ವಿ. ನಂದೀಶ್, ನಗರಸಭೆ ಮಾಜಿ ಉಪಾಧ್ಯಕ್ಷರಾದ ಎಂ.ಪಿ. ಅರುಣ್ ಕುಮಾರ್, ಜಿಲ್ಲಾ ಆರ್ಯ ಈಡಿಗರ ಸಂಘದ ಉಪಾಧ್ಯಕ್ಷರಾದ ದಾಸೇಗೌಡ, ರಾಜಕುಮಾರ, ಅಮ್ಜದ್ ಪಾಶ, ಮಹದೇವು, ಶ್ರೀನಿವಾಸ್, ಸತ್ಯರಾಜು ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
    1
    *ಸಮ ಸಮಾಜ ನಿರ್ಮಾಣಕ್ಕೆ ನಾರಾಯಣ ಗುರು ಗಳ ಆದರ್ಶ ಪಾಲನೆ ಅಗತ್ಯ ಬಿ.ಪಿ. ಪ್ರಕಾಶ್*
ಮಂಡ್ಯ- ಸಮ ಸಮಾಜ ನಿರ್ಮಾಣಕ್ಕೆ ಪಣತೊಟ್ಟ ಮಹನೀಯರಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸಾಧನೆ ಅಪಾರವಾಗಿದೆ. ಅವರ ಆದರ್ಶ, ತತ್ವ ಹಾಗೂ ಸಮಾಜ ಸುಧಾರಣೆಯ ಚಿಂತನೆಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ. ಪ್ರಕಾಶ್ ರವರು ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಹಾಗೂ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಸಮಾನತೆ, ಸಹೋದರತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ನಾರಾಯಣಗುರುಗಳು ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಸಮಾಜ ಸುಧಾರಣೆಯ ಆಶಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಪ್ರದೇಶ ಆರ್ಯ ಈಡಿಗರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಸೌಮ್ಯ ಶ್ರೀನಿವಾಸ್ ಉಪನ್ಯಾಸ ನೀಡಿ, ಬ್ರಹ್ಮಶ್ರೀ ನಾರಾಯಣಗುರುಗಳ ಜೀವನ, ಜನನ ಹಾಗೂ ಸಮಾಜ ಸುಧಾರಣಾ ಕಾರ್ಯಗಳ ಕುರಿತು ವಿವರಿಸಿದರು.
ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಅಪ್ಪಾಜಿಗೌಡ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದ ಅಭಿವೃದ್ಧಿಗಾಗಿ ಸಂಘದ ವತಿಯಿಂದ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸಿದ ಗಣ್ಯರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ವಿ. ನಂದೀಶ್, ನಗರಸಭೆ ಮಾಜಿ ಉಪಾಧ್ಯಕ್ಷರಾದ ಎಂ.ಪಿ. ಅರುಣ್ ಕುಮಾರ್, ಜಿಲ್ಲಾ ಆರ್ಯ ಈಡಿಗರ ಸಂಘದ ಉಪಾಧ್ಯಕ್ಷರಾದ ದಾಸೇಗೌಡ, ರಾಜಕುಮಾರ, ಅಮ್ಜದ್ ಪಾಶ, ಮಹದೇವು, ಶ್ರೀನಿವಾಸ್, ಸತ್ಯರಾಜು ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    3 hrs ago
  • News by dailynews ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ! ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ. #tanveersait #viral #mysuru #cmdkshivakumar #viralnews News by dailynews ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ! ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ. #tanveersait #viral #mysuru #cmdkshivakumar #viralnews
    1
    News by dailynews 
ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ!
ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ.
#tanveersait #viral #mysuru #cmdkshivakumar #viralnews
News by dailynews 
ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ!
ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ.
#tanveersait #viral #mysuru #cmdkshivakumar #viralnews
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    11 hrs ago
  • ಹೆಬ್ಬಾಲೆಯಲ್ಲಿ 25 ಲಕ್ಷದಲ್ಲಿ ಪ್ರೇಕ್ಷಕ ಗ್ಯಾಲರಿ ಬನಶಂಕರಿ ಅಮ್ಮನವರ ರಂಗ ಮಂದಿರ ಉದ್ಘಾಟನಾ ಸಮಾರಂಭ. ಕೊಡಗು: ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮಾರಂಭದಲ್ಲಿ ಇನ್ನುಳಿಕೆ ಆಗಿರುವ ಪ್ರೇಕ್ಷಕ ಗ್ಯಾಲರಿಯನ್ನು 15 ಲಕ್ಷ ರೂ ವೆಚ್ಚದಲ್ಲಿ ಮುಂದಿನ ದಿನಗಳಲ್ಲಿ ವಿಸ್ತರಿಸಿಕೊಡುವುದಾಗಿ ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾಕ್ಟರ್ ಮಂತರ್ ಗೌಡ ಭರವಸೆ ನೀಡಿದರು. ತಾಲೂಕಿನ ಹೆಬ್ಬಾಲೆ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕರ ಅನುದಾನದಿಂದ 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರೇಕ್ಷಕರ ಗ್ಯಾಲರಿ ಮತ್ತು 5 ಲಕ್ಷದಲ್ಲಿ ಬನಶಂಕರಿ ಅಮ್ಮನವರ ಬಯಲು ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿ ಈ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಉದ್ಘಾಟನಾ ಸಮಾರಂಭದಲ್ಲಿ ಭರವಸೇನು ನೀಡಿದರು. ಸಮಾರಂಭದಲ್ಲಿ ಗ್ಯಾರಂಟಿ ಯೋಜನಾ ಅಧ್ಯಕ್ಷರಾದ ವಿಪಿ ಶಶಿಧರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ, ಶಾಲಾ ಅಭಿವೃದ್ಧಿ ಅಧ್ಯಕ್ಷರಾದ ಪ್ರದೀಪ್ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರುಣ್ ಕುಮಾರಿ, ದಿನೇಶ್, ರಾಜಶೇಖರ್ ಮುಖ್ಯ ಶಿಕ್ಷಕರಾದ ವೆಂಕಟೇಶ್ ಮುಂತಾದ ನಾಯಕರು ಹಾಜರಿದ್ದರು.
    4
    ಹೆಬ್ಬಾಲೆಯಲ್ಲಿ 25 ಲಕ್ಷದಲ್ಲಿ  ಪ್ರೇಕ್ಷಕ ಗ್ಯಾಲರಿ ಬನಶಂಕರಿ ಅಮ್ಮನವರ ರಂಗ ಮಂದಿರ ಉದ್ಘಾಟನಾ ಸಮಾರಂಭ.
ಕೊಡಗು: ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮಾರಂಭದಲ್ಲಿ ಇನ್ನುಳಿಕೆ ಆಗಿರುವ ಪ್ರೇಕ್ಷಕ ಗ್ಯಾಲರಿಯನ್ನು 15 ಲಕ್ಷ ರೂ ವೆಚ್ಚದಲ್ಲಿ ಮುಂದಿನ ದಿನಗಳಲ್ಲಿ ವಿಸ್ತರಿಸಿಕೊಡುವುದಾಗಿ ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾಕ್ಟರ್ ಮಂತರ್ ಗೌಡ ಭರವಸೆ ನೀಡಿದರು. ತಾಲೂಕಿನ ಹೆಬ್ಬಾಲೆ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕರ ಅನುದಾನದಿಂದ 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರೇಕ್ಷಕರ ಗ್ಯಾಲರಿ ಮತ್ತು 5 ಲಕ್ಷದಲ್ಲಿ ಬನಶಂಕರಿ ಅಮ್ಮನವರ ಬಯಲು ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿ ಈ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಉದ್ಘಾಟನಾ ಸಮಾರಂಭದಲ್ಲಿ ಭರವಸೇನು ನೀಡಿದರು. ಸಮಾರಂಭದಲ್ಲಿ ಗ್ಯಾರಂಟಿ ಯೋಜನಾ ಅಧ್ಯಕ್ಷರಾದ ವಿಪಿ ಶಶಿಧರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ, ಶಾಲಾ ಅಭಿವೃದ್ಧಿ  ಅಧ್ಯಕ್ಷರಾದ ಪ್ರದೀಪ್  ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರುಣ್ ಕುಮಾರಿ, ದಿನೇಶ್, ರಾಜಶೇಖರ್ ಮುಖ್ಯ ಶಿಕ್ಷಕರಾದ ವೆಂಕಟೇಶ್ ಮುಂತಾದ ನಾಯಕರು ಹಾಜರಿದ್ದರು.
    user_ಹೆಚ ಟಿ ಸತ್ಯನಾರಾಯಣ ಪ್ರಸಾದ್
    ಹೆಚ ಟಿ ಸತ್ಯನಾರಾಯಣ ಪ್ರಸಾದ್
    Teacher ನಂಜನಗೂಡು, ಮೈಸೂರು, ಕರ್ನಾಟಕ•
    1 hr ago
  • ಆರೋಗ್ಯಕರ ಬದುಕಿಗೆ ಕ್ರೀಡಾ ಚಟುವಟಿಕೆಗಳು ಮುಖ್ಯ : ಸಚಿವ ಸಿ. ಪುಟ್ಟರಂಗಶೆಟ್ಟಿ ಆರೋಗ್ಯಕರ ಬದುಕಿಗೆ ಕ್ರೀಡಾ ಚಟುವಟಿಕೆಗಳು ಮುಖ್ಯ : ಸಚಿವ ಸಿ. ಪುಟ್ಟರಂಗಶೆಟ್ಟಿ ವರದಿ: ಹೊಮ್ಮನಂಜುಂಡನಾಯಕ ಚಾಮರಾಜನಗರ: ಆರೋಗ್ಯಕರ ಬದುಕಿಗೆ ಕ್ರೀಡಾ ಚಟುವಟಿಕೆಗಳು ಬಹು ಮುಖ್ಯವಾಗಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಮರಿಯಾಲದ ಶ್ರೀ ಮುರುಘರಾಜೇಂದ್ರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಾಮರಾಜನಗರ ತಾಲೂಕು ಮಟ್ಟದ ಶಾಲಾ ಶಿಕ್ಷಣ (ಪದವಿ ಪೂರ್ವ) ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಎಷ್ಟೇ ಚಟುವಟಿಕೆಗಳಿದ್ದರು ಕ್ರೀಡಾ ಚಟುವಟಿಕೆ ಅತ್ಯಂತ ಅವಶ್ಯವಾಗಿದೆ. ಆರೋಗ್ಯ ಜೀವನಕ್ಕೆ ಕ್ರೀಡೆ ಸಹಕಾರಿಯಾಗಲಿದೆ. ದೈಹಿಕವಾಗಿ ಸಧೃಡರಾಗಲು ಕ್ರೀಡೆ ಆಟೋಟಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಚಿವರು ಸಲಹೆ ನೀಡಿದರು. ಕ್ರೀಡಾ ಆಸಕ್ತರಿಗೆ ಉತ್ತೇಜನ ನೀಡುವ ಸಲುವಾಗಿ ಇನ್ನಷ್ಟು ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. 13 ಕೋಟಿ ರೂ. ವೆಚ್ಚದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಅಭಿವೃದ್ದಿ ಹಾಗೂ ಈಜುಕೊಳ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ. ಲೋಕಸಭಾ ಸದಸ್ಯರಾಗಿದ್ದ ಧ್ರುವನಾರಾಯಣ್ ಅವರ ಅವಧಿಯಲ್ಲಿ ಸುಸಜ್ಜಿತ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣವಾಯಿತು. ಕ್ರೀಡಾ ಚಟುವಟಿಕೆಗಳಿಗೆ ಈ ಮೂಲಕ ಉತ್ತೇಜನ ನೀಡಲಾಗುತ್ತಿದೆ ಎಂದರು. ಪ್ರಸ್ತುತ ನಡೆಯುತ್ತಿರುವ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡಬೇಕು. ರಾಜ್ಯ, ರಾಷ್ಟ್ರ ಮಟ್ಟದಲ್ಲಿಯೂ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಹಾರೈಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಅವಕಾಶ ಮಾಡಿಕೊಡಲು ಪ್ರೋತ್ಸಾಹ ನೀಡಬೇಕು. ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸೋಲಿಗೆ ಧೃತಿಗೆಡಬಾರದು ಗೆಲುವು ಸೋಲನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು. ಮರಿಯಾಲದ ಶ್ರೀ ಮುರುಘರಾಜೇಂದ್ರಸ್ವಾಮಿ ಮಹಾಸಂಸ್ಥಾನ ಮಠಾಧ್ಯಕ್ಷರು ಹಾಗೂ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಇಮ್ಮಡಿ ಮುರುಘರಾಜೇಂದ್ರಸ್ವಾಮಿ ಅವರು ಮಾತನಾಡಿ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಯಿಂದ ಸಾಧ್ಯವಾಗಲಿದೆ. ಧ್ಯಾನ, ಯೋಗದಂತಹ ಆಧ್ಯಾತ್ಮಿಕ ಶಿಕ್ಷಣವು ಅಗತ್ಯವಾಗಿದೆ. ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಹೆಚ್.ಎನ್. ಪುಟ್ಟಗೌರಮ್ಮ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪಿ. ಪ್ರಿಯಾ ಶಂಕರ್, ಖಜಾಂಚಿ ಹೆಚ್.ಎನ್ ಸ್ವಾಮಿ, ಮುರುಘರಾಜೇಂದ್ರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ. ಮಹದೇವಸ್ವಾಮಿ, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಟಿ. ಮಧು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ನಾಗರಾಜು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜು, ದೈಹಿಕ ಶಿಕ್ಷಣ ಶಿಕ್ಷಕ ಚಿಕ್ಕಬಸವಯ್ಯ, ವಿಶ್ರಾಂತ ಪ್ರಾಂಶುಪಾಲರಾದ ಸೋಮಣ್ಣ ಹಾಗೂ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.
    4
    ಆರೋಗ್ಯಕರ ಬದುಕಿಗೆ ಕ್ರೀಡಾ ಚಟುವಟಿಕೆಗಳು ಮುಖ್ಯ :  ಸಚಿವ ಸಿ. ಪುಟ್ಟರಂಗಶೆಟ್ಟಿ
ಆರೋಗ್ಯಕರ ಬದುಕಿಗೆ ಕ್ರೀಡಾ ಚಟುವಟಿಕೆಗಳು ಮುಖ್ಯ :  ಸಚಿವ ಸಿ. ಪುಟ್ಟರಂಗಶೆಟ್ಟಿ
ವರದಿ: ಹೊಮ್ಮನಂಜುಂಡನಾಯಕ
ಚಾಮರಾಜನಗರ:
ಆರೋಗ್ಯಕರ ಬದುಕಿಗೆ ಕ್ರೀಡಾ ಚಟುವಟಿಕೆಗಳು ಬಹು ಮುಖ್ಯವಾಗಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ
ಸಿ. ಪುಟ್ಟರಂಗಶೆಟ್ಟಿ  ಹೇಳಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಮರಿಯಾಲದ ಶ್ರೀ ಮುರುಘರಾಜೇಂದ್ರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಾಮರಾಜನಗರ ತಾಲೂಕು ಮಟ್ಟದ ಶಾಲಾ ಶಿಕ್ಷಣ (ಪದವಿ ಪೂರ್ವ) ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ  ಮಾತನಾಡಿದರು.
ಜೀವನದಲ್ಲಿ ಎಷ್ಟೇ ಚಟುವಟಿಕೆಗಳಿದ್ದರು ಕ್ರೀಡಾ ಚಟುವಟಿಕೆ ಅತ್ಯಂತ ಅವಶ್ಯವಾಗಿದೆ. ಆರೋಗ್ಯ ಜೀವನಕ್ಕೆ ಕ್ರೀಡೆ ಸಹಕಾರಿಯಾಗಲಿದೆ. ದೈಹಿಕವಾಗಿ ಸಧೃಡರಾಗಲು ಕ್ರೀಡೆ ಆಟೋಟಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಚಿವರು ಸಲಹೆ ನೀಡಿದರು.  
ಕ್ರೀಡಾ ಆಸಕ್ತರಿಗೆ ಉತ್ತೇಜನ ನೀಡುವ ಸಲುವಾಗಿ ಇನ್ನಷ್ಟು ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. 13 ಕೋಟಿ ರೂ. ವೆಚ್ಚದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಅಭಿವೃದ್ದಿ ಹಾಗೂ ಈಜುಕೊಳ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ. ಲೋಕಸಭಾ ಸದಸ್ಯರಾಗಿದ್ದ ಧ್ರುವನಾರಾಯಣ್ ಅವರ ಅವಧಿಯಲ್ಲಿ ಸುಸಜ್ಜಿತ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣವಾಯಿತು. ಕ್ರೀಡಾ ಚಟುವಟಿಕೆಗಳಿಗೆ ಈ ಮೂಲಕ ಉತ್ತೇಜನ ನೀಡಲಾಗುತ್ತಿದೆ ಎಂದರು. 
ಪ್ರಸ್ತುತ ನಡೆಯುತ್ತಿರುವ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡಬೇಕು. ರಾಜ್ಯ, ರಾಷ್ಟ್ರ ಮಟ್ಟದಲ್ಲಿಯೂ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಹಾರೈಸಿದರು. 
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಅವಕಾಶ ಮಾಡಿಕೊಡಲು ಪ್ರೋತ್ಸಾಹ ನೀಡಬೇಕು. ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸೋಲಿಗೆ ಧೃತಿಗೆಡಬಾರದು ಗೆಲುವು ಸೋಲನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು. 
ಮರಿಯಾಲದ ಶ್ರೀ ಮುರುಘರಾಜೇಂದ್ರಸ್ವಾಮಿ ಮಹಾಸಂಸ್ಥಾನ ಮಠಾಧ್ಯಕ್ಷರು ಹಾಗೂ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಇಮ್ಮಡಿ ಮುರುಘರಾಜೇಂದ್ರಸ್ವಾಮಿ ಅವರು ಮಾತನಾಡಿ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಯಿಂದ ಸಾಧ್ಯವಾಗಲಿದೆ. ಧ್ಯಾನ, ಯೋಗದಂತಹ ಆಧ್ಯಾತ್ಮಿಕ ಶಿಕ್ಷಣವು ಅಗತ್ಯವಾಗಿದೆ.  ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದು ತಿಳಿಸಿದರು. 
ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಹೆಚ್.ಎನ್. ಪುಟ್ಟಗೌರಮ್ಮ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪಿ. ಪ್ರಿಯಾ ಶಂಕರ್, ಖಜಾಂಚಿ ಹೆಚ್.ಎನ್ ಸ್ವಾಮಿ, ಮುರುಘರಾಜೇಂದ್ರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ. ಮಹದೇವಸ್ವಾಮಿ, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಟಿ. ಮಧು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ನಾಗರಾಜು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜು, ದೈಹಿಕ ಶಿಕ್ಷಣ ಶಿಕ್ಷಕ ಚಿಕ್ಕಬಸವಯ್ಯ, ವಿಶ್ರಾಂತ ಪ್ರಾಂಶುಪಾಲರಾದ ಸೋಮಣ್ಣ ಹಾಗೂ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    2 hrs ago
  • ಅಧಿಕಾರಿಗಳಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಚಪನ್ ಶಾಲಾ ಮಕ್ಕಳು ಮೈಸೂರು: ರಕ್ಷಾ ಬಂಧನ ಹಬ್ಬದ ಅಂಗವಾಗಿ ನಗರದ ಬಚಪನ್ ಶಾಲೆಯ ಮಕ್ಕಳು ವಿಶೇಷ ರೀತಿಯಲ್ಲಿ ಹಬ್ಬವನ್ನು ಆಚರಿಸಿದರು. ಶಾಲೆಯ ಮಕ್ಕಳು ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳಿಗೆ ತೆರಳಿ ಅಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಖಿ ಕಟ್ಟಿ ಶುಭಾಶಯ ಕೋರಿದರು. ಮಕ್ಕಳು ಸರ್ಕಾರಿ ನೌಕರರು, ವೈದ್ಯರು, ಪೋಸ್ಟ್ ಆಫೀಸ್ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ರಾಖಿ ಕಟ್ಟಿದರು. ಈ ಮೂಲಕ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರೊಂದಿಗೆ ಸಹೋದರತ್ವ ಹಾಗೂ ಪ್ರೀತಿಯ ಬಾಂಧವ್ಯವನ್ನು ಬೆಳೆಸುವ ಸಂದೇಶ ನೀಡಿದರು. ಪೊಲೀಸ್ ಇಲಾಖೆ ಕಚೇರಿಗೆ ತೆರಳಿದ ಮಕ್ಕಳು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಖಿ ಕಟ್ಟುವ ಮೂಲಕ ಅವರ ಸೇವೆಗೆ ಗೌರವ ಸಲ್ಲಿಸಿದರು. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸರೊಂದಿಗೆ ಮಕ್ಕಳು ಆತ್ಮೀಯವಾಗಿ ಬೆರೆತು ಸಂಭ್ರಮಿಸಿದರು. ಇದೇ ವೇಳೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗೂ ರಾಖಿ ಕಟ್ಟಿ, ಜನರ ಆರೋಗ್ಯ ಕಾಪಾಡುವ ಅವರ ಸೇವೆಯನ್ನು ಸ್ಮರಿಸಿದರು. ಪೋಸ್ಟ್ ಆಫೀಸ್‌ಗೆ ಭೇಟಿ ನೀಡಿದ ಮಕ್ಕಳು ಅಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಖಿ ಕಟ್ಟಿ ರಕ್ಷಾ ಬಂಧನದ ಶುಭಾಶಯ ತಿಳಿಸಿದರು. ಸರ್ಕಾರಿ ಕಚೇರಿಗಳಲ್ಲಿಯೂ ಅಧಿಕಾರಿಗಳು ಮಕ್ಕಳೊಂದಿಗೆ ಆತ್ಮೀಯವಾಗಿ ಮಾತನಾಡಿ, ರಾಖಿ ಕಟ್ಟಿಸಿಕೊಂಡು ಮಕ್ಕಳಿಗೆ ಶುಭ ಹಾರೈಸಿದರು. ಶಾಲಾ ಮಕ್ಕಳ ಈ ವಿಶೇಷ ಆಚರಣೆ ಅಧಿಕಾರಿಗಳಲ್ಲಿಯೂ ಸಂತಸ ಮೂಡಿಸಿತು. ರಕ್ಷಾ ಬಂಧನ ಕೇವಲ ಸಹೋದರ-ಸಹೋದರಿಯರ ನಡುವಿನ ಹಬ್ಬವಲ್ಲ, ಪರಸ್ಪರ ಪ್ರೀತಿ, ಗೌರವ, ಕಾಳಜಿ ಮತ್ತು ಸಹೋದರತ್ವದ ಭಾವನೆಯನ್ನು ಬೆಳೆಸುವ ಹಬ್ಬ ಎಂಬ ಸಂದೇಶವನ್ನು ಮಕ್ಕಳು ಸಾರಿದರು. ಬಚಪನ್ ಶಾಲೆಯ ಶಿಕ್ಷಕರು ಮಕ್ಕಳಿಗೆ ರಕ್ಷಾ ಬಂಧನದ ಮಹತ್ವವನ್ನು ತಿಳಿಸಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವವರನ್ನು ಗೌರವಿಸುವ ಮನೋಭಾವ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದರು. ಮಕ್ಕಳ ಈ ವಿಭಿನ್ನ ಆಚರಣೆ ಸಾರ್ವಜನಿಕರ ಗಮನ ಸೆಳೆಯಿತು.
    1
    ಅಧಿಕಾರಿಗಳಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಚಪನ್ ಶಾಲಾ ಮಕ್ಕಳು

ಮೈಸೂರು: ರಕ್ಷಾ ಬಂಧನ ಹಬ್ಬದ ಅಂಗವಾಗಿ ನಗರದ ಬಚಪನ್ ಶಾಲೆಯ ಮಕ್ಕಳು ವಿಶೇಷ ರೀತಿಯಲ್ಲಿ ಹಬ್ಬವನ್ನು ಆಚರಿಸಿದರು. ಶಾಲೆಯ ಮಕ್ಕಳು ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳಿಗೆ ತೆರಳಿ ಅಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಖಿ ಕಟ್ಟಿ ಶುಭಾಶಯ ಕೋರಿದರು.
ಮಕ್ಕಳು ಸರ್ಕಾರಿ ನೌಕರರು, ವೈದ್ಯರು, ಪೋಸ್ಟ್ ಆಫೀಸ್ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ರಾಖಿ ಕಟ್ಟಿದರು. ಈ ಮೂಲಕ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರೊಂದಿಗೆ ಸಹೋದರತ್ವ ಹಾಗೂ ಪ್ರೀತಿಯ ಬಾಂಧವ್ಯವನ್ನು ಬೆಳೆಸುವ ಸಂದೇಶ ನೀಡಿದರು.
ಪೊಲೀಸ್ ಇಲಾಖೆ ಕಚೇರಿಗೆ ತೆರಳಿದ ಮಕ್ಕಳು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಖಿ ಕಟ್ಟುವ ಮೂಲಕ ಅವರ ಸೇವೆಗೆ ಗೌರವ ಸಲ್ಲಿಸಿದರು. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸರೊಂದಿಗೆ ಮಕ್ಕಳು ಆತ್ಮೀಯವಾಗಿ ಬೆರೆತು ಸಂಭ್ರಮಿಸಿದರು. ಇದೇ ವೇಳೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗೂ ರಾಖಿ ಕಟ್ಟಿ, ಜನರ ಆರೋಗ್ಯ ಕಾಪಾಡುವ ಅವರ ಸೇವೆಯನ್ನು ಸ್ಮರಿಸಿದರು.
ಪೋಸ್ಟ್ ಆಫೀಸ್‌ಗೆ ಭೇಟಿ ನೀಡಿದ ಮಕ್ಕಳು ಅಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಖಿ ಕಟ್ಟಿ ರಕ್ಷಾ ಬಂಧನದ ಶುಭಾಶಯ ತಿಳಿಸಿದರು. ಸರ್ಕಾರಿ ಕಚೇರಿಗಳಲ್ಲಿಯೂ ಅಧಿಕಾರಿಗಳು ಮಕ್ಕಳೊಂದಿಗೆ ಆತ್ಮೀಯವಾಗಿ ಮಾತನಾಡಿ, ರಾಖಿ ಕಟ್ಟಿಸಿಕೊಂಡು ಮಕ್ಕಳಿಗೆ ಶುಭ ಹಾರೈಸಿದರು.
ಶಾಲಾ ಮಕ್ಕಳ ಈ ವಿಶೇಷ ಆಚರಣೆ ಅಧಿಕಾರಿಗಳಲ್ಲಿಯೂ ಸಂತಸ ಮೂಡಿಸಿತು. ರಕ್ಷಾ ಬಂಧನ ಕೇವಲ ಸಹೋದರ-ಸಹೋದರಿಯರ ನಡುವಿನ ಹಬ್ಬವಲ್ಲ, ಪರಸ್ಪರ ಪ್ರೀತಿ, ಗೌರವ, ಕಾಳಜಿ ಮತ್ತು ಸಹೋದರತ್ವದ ಭಾವನೆಯನ್ನು ಬೆಳೆಸುವ ಹಬ್ಬ ಎಂಬ ಸಂದೇಶವನ್ನು ಮಕ್ಕಳು ಸಾರಿದರು.
ಬಚಪನ್ ಶಾಲೆಯ ಶಿಕ್ಷಕರು ಮಕ್ಕಳಿಗೆ ರಕ್ಷಾ ಬಂಧನದ ಮಹತ್ವವನ್ನು ತಿಳಿಸಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವವರನ್ನು ಗೌರವಿಸುವ ಮನೋಭಾವ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದರು. ಮಕ್ಕಳ ಈ ವಿಭಿನ್ನ ಆಚರಣೆ ಸಾರ್ವಜನಿಕರ ಗಮನ ಸೆಳೆಯಿತು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Nanjangud, Mysuru•
    6 hrs ago
  • ಇಂದು ನಡೆದ ಸರಣಿ ಅಪಘಾತ , ದಿನೇ ದಿನೇ ಹೆಚ್ಚಾಗುತ್ತಿದೆ ಬೆಂಗಳೂರಿನಲ್ಲಿ ಇಂತಹ ಪ್ರಕರಣಗಳು. ಇಂದು ಯಲಹಂಕದ ಏರ್ಪೋರ್ಟ್ ರಸ್ತೆಯ ಬಳಿ ನಡೆದ ಸರಣಿ ಅಪಘಾತ, ಇಂದು ಮಧ್ಯಾಹ್ನ ಸುಮಾರು ನಾಲ್ಕು ಗಂಟೆಗೆ ಈ ಘಟನೆ ನಡೆದಿದ್ದು ಸದ್ಯಕ್ಕೆ ಯಾರ ಪ್ರಾಣಿಗೂ ಹಾನಿಯಾಗಲಿಲ್ಲ ಆದರೆ ಗಾಡಿಗಳು ಮಾತ್ರ ಜಕಮ್ ಗೊಂಡಿವೆ
    1
    ಇಂದು ನಡೆದ ಸರಣಿ ಅಪಘಾತ , ದಿನೇ ದಿನೇ ಹೆಚ್ಚಾಗುತ್ತಿದೆ ಬೆಂಗಳೂರಿನಲ್ಲಿ ಇಂತಹ ಪ್ರಕರಣಗಳು. 
ಇಂದು ಯಲಹಂಕದ ಏರ್ಪೋರ್ಟ್ ರಸ್ತೆಯ ಬಳಿ ನಡೆದ ಸರಣಿ ಅಪಘಾತ, ಇಂದು ಮಧ್ಯಾಹ್ನ ಸುಮಾರು ನಾಲ್ಕು ಗಂಟೆಗೆ ಈ ಘಟನೆ ನಡೆದಿದ್ದು ಸದ್ಯಕ್ಕೆ ಯಾರ ಪ್ರಾಣಿಗೂ ಹಾನಿಯಾಗಲಿಲ್ಲ ಆದರೆ ಗಾಡಿಗಳು ಮಾತ್ರ ಜಕಮ್ ಗೊಂಡಿವೆ
    user_DHOOTHA NEWS
    DHOOTHA NEWS
    ಸ್ಥಳೀಯ ಸುದ್ದಿ ವರದಿಗಾರ ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ಖರ್ಗೆರವರನ್ನು ಅಪಮಾನಿಸಿರುವ ಸಂವಿಧಾನ ವಿರೋಧಿ ಕ್ರಮವನ್ನು ಖಂಡಿಸಿ ಪ್ರತಿಭಟನೆ ಮಳವಳ್ಳಿ: ಉತ್ತರಕಾಂಡ ರಾಜ್ಯದ ಹಲ್ದ್ವಾನಿಯಲ್ಲಿ ಮನುವಾಧಿಗಳು ಆಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರನ್ನು ಅಪಮಾನಿಸಿರುವ ಸಂವಿಧಾನ ವಿರೋಧಿ ಕ್ರಮವನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ವತಿಯಿಂದ ಮುಖಂಡರು ಮಳವಳ್ಳಿ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮನುವಾದಿಗಳ ವಿರುದ್ದ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕೆಡಿಪಿ ಸದಸ್ಯ ಶಶಿರಾಜ್ ಮಾತನಾಡಿ,ಬಹುಜನರನ್ನು ಒಡೆಯುವ ಕೆಲಸವನ್ನು ಮನುವಾದಿಗಳು ಮಾಡುತ್ತಿದ್ದಾರೆ. ದಲಿತರು ,ಅಲ್ಪ ಸಂಖ್ಯಾತರು,ಹಿಂದುಳಿದವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ಮನುವಾದಿಗಳಿಗೆ ನಾವೆಲ್ಲರೂ ತಕ್ಕಪಾಠ ಕಲಿಸಬೇಕಾಗಿದೆ ಎಂದರು. ಇದೇ ವೇಳೆ ಶಿರಸೇಲ್ದಾರ್ ಗುರುಪ್ರಸಾದರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು ಪ್ರತಿಭಟನೆಯಲ್ಲಿ ಮಾಜಿ ಪುರಸಭಾಧ್ಯಕ್ಷ ದೊಡ್ಡಯ್ಯ, ಕಸಾಪ ಅಧ್ಯಕ್ಷ ಚೇತನಕುಮಾರ್,ಕೆಡಿ ಪಿ ಸದಸ್ಯ ಶಶಿರಾಜ್ ,ಡಾ.ಪ್ರಸಾದ,ಶಂಕರ , ಶೇಖರ , ಕಲ್ಕುಣಿನಂಜುಂಡಸ್ವಾಮಿ, ಚಿನ್ನಸ್ವಾಮಿ, ಶಾಂತರಾಜು ಸೇರಿದಂತೆ ಹಲವರು ಇದ್ದರು.
    1
    ಖರ್ಗೆರವರನ್ನು  ಅಪಮಾನಿಸಿರುವ ಸಂವಿಧಾನ ವಿರೋಧಿ ಕ್ರಮವನ್ನು ಖಂಡಿಸಿ ಪ್ರತಿಭಟನೆ  
ಮಳವಳ್ಳಿ:  ಉತ್ತರಕಾಂಡ ರಾಜ್ಯದ ಹಲ್ದ್ವಾನಿಯಲ್ಲಿ ಮನುವಾಧಿಗಳು
ಆಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ   ಮಲ್ಲಿಕಾರ್ಜುನ ಖರ್ಗೆರವರನ್ನು  ಅಪಮಾನಿಸಿರುವ ಸಂವಿಧಾನ ವಿರೋಧಿ ಕ್ರಮವನ್ನು ಖಂಡಿಸಿ  ಪ್ರಗತಿಪರ ಸಂಘಟನೆಗಳ ಒಕ್ಕೂಟ ವತಿಯಿಂದ ಮುಖಂಡರು 
ಮಳವಳ್ಳಿ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್  ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ  ಮನುವಾದಿಗಳ ವಿರುದ್ದ ಘೋಷಣೆ ಕೂಗಿ  ಪ್ರತಿಭಟನಾಕಾರರು  ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕೆಡಿಪಿ ಸದಸ್ಯ ಶಶಿರಾಜ್  ಮಾತನಾಡಿ,ಬಹುಜನರನ್ನು ಒಡೆಯುವ ಕೆಲಸವನ್ನು ಮನುವಾದಿಗಳು ಮಾಡುತ್ತಿದ್ದಾರೆ.  ದಲಿತರು ,ಅಲ್ಪ ಸಂಖ್ಯಾತರು,ಹಿಂದುಳಿದವರ ಮೇಲೆ  ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮುಂದಿನ ದಿನಗಳಲ್ಲಿ ಮನುವಾದಿಗಳಿಗೆ  ನಾವೆಲ್ಲರೂ ತಕ್ಕಪಾಠ ಕಲಿಸಬೇಕಾಗಿದೆ ಎಂದರು.
ಇದೇ ವೇಳೆ ಶಿರಸೇಲ್ದಾರ್ ಗುರುಪ್ರಸಾದರಿಗೆ   ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು
ಪ್ರತಿಭಟನೆಯಲ್ಲಿ ಮಾಜಿ ಪುರಸಭಾಧ್ಯಕ್ಷ ದೊಡ್ಡಯ್ಯ, ಕಸಾಪ ಅಧ್ಯಕ್ಷ ಚೇತನಕುಮಾರ್,ಕೆಡಿ ಪಿ ಸದಸ್ಯ ಶಶಿರಾಜ್ ,ಡಾ.ಪ್ರಸಾದ,ಶಂಕರ , ಶೇಖರ , ಕಲ್ಕುಣಿನಂಜುಂಡಸ್ವಾಮಿ, ಚಿನ್ನಸ್ವಾಮಿ, ಶಾಂತರಾಜು  ಸೇರಿದಂತೆ ಹಲವರು ಇದ್ದರು.
    user_ಸುಮಿತ್ರ‌ ಹೆಚ್‌ ಪಿ
    ಸುಮಿತ್ರ‌ ಹೆಚ್‌ ಪಿ
    ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
    7 hrs ago
  • *ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಔಷಧ ಕೌಂಟರ್ ವ್ಯವಸ್ಥೆ‌ಮಾಡುವಂತೆ ಲೋಕಾಯುಕ್ತ ಸೂಚನೆ ಔಷಧಿ ಪಡೆಯಲು ರೋಗಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಮಯ ಸರತಿ ಸಾಲಿನಲ್ಲಿ ಕಾಯುವ ಪರಿಸ್ಥಿತಿ ಉಂಟಾಗದಂತೆ ಕ್ರಮವಹಿಸಬೇಕು. ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಔಷಧ ಕೌಂಟರ್‌ಗಳನ್ನು ನಿರ್ಮಿಸುವ ಮೂಲಕ ಔಷಧಿ ವಿತರಣೆ ವ್ಯವಸ್ಥೆಯನ್ನು ಸುಗಮಗೊಳಿಸಬೇಕು. ಇದರಿಂದ ರೋಗಿಗಳಿಗೆ ಸಮಯ ಉಳಿತಾಯವಾಗುವುದರ ಜೊತೆಗೆ ಜನದಟ್ಟಣೆ ಕಡಿಮೆಯಾಗಲಿದೆ. ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ, ರೋಗಿಗಳಿಗೆ ತ್ವರಿತವಾಗಿ ಔಷಧಿ ದೊರೆಯುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು. *ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆಗೆ ಸೂಚನೆ* ಆಸ್ಪತ್ರೆಯಲ್ಲಿರುವ ವೈದ್ಯಕೀಯ ಉಪಕರಣಗಳು, ಹಾಸಿಗೆಗಳು, ವಿದ್ಯುತ್, ಕುಡಿಯುವ ನೀರು, ಶೌಚಾಲಯಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ದುರಸ್ತಿ ಅಗತ್ಯವಿರುವ ಉಪಕರಣಗಳು ಹಾಗೂ ಮೂಲಸೌಕರ್ಯಗಳನ್ನು ತಕ್ಷಣವೇ ದುರಸ್ತಿಪಡಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲ ಉಂಟಾಗದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು. ರೋಗಿಗಳೊಂದಿಗೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ತುರ್ತು ಚಿಕಿತ್ಸೆಗೆ ಆದ್ಯತೆ ನೀಡುವುದರ ಜೊತೆಗೆ, ಆಸ್ಪತ್ರೆಯಲ್ಲಿ ಲಭ್ಯವಿರುವ ಸೇವೆಗಳನ್ನು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿರಂತರ ಮೇಲ್ವಿಚಾರಣೆ ನಡೆಸಬೇಕು ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಸೂಚಿಸಿದರು. ಸಾರ್ವಜನಿಕರಿಗೆ ಸರ್ಕಾರದ ವತಿಯಿಂದ ಒದಗಿಸಲಾಗುತ್ತಿರುವ ಆರೋಗ್ಯ ಸೇವೆಗಳು ಸಮರ್ಪಕವಾಗಿ ತಲುಪಬೇಕು. ಆಸ್ಪತ್ರೆಯ ನಿರ್ವಹಣೆ, ಸ್ವಚ್ಛತೆ, ಔಷಧಿ ವಿತರಣೆ ಹಾಗೂ ಮೂಲಸೌಕರ್ಯಗಳ ವಿಚಾರದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ. ಶೋಭಾರಾಣಿ, ಮದ್ದೂರು ತಾಲ್ಲೂಕು ಆಸ್ಪತ್ರೆಯ ಆರ್.ಎಂ.ಓ. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
    1
    *ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಔಷಧ ಕೌಂಟರ್ ವ್ಯವಸ್ಥೆ‌ಮಾಡುವಂತೆ ಲೋಕಾಯುಕ್ತ ಸೂಚನೆ
ಔಷಧಿ ಪಡೆಯಲು ರೋಗಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಮಯ ಸರತಿ ಸಾಲಿನಲ್ಲಿ ಕಾಯುವ ಪರಿಸ್ಥಿತಿ ಉಂಟಾಗದಂತೆ ಕ್ರಮವಹಿಸಬೇಕು. ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಔಷಧ ಕೌಂಟರ್‌ಗಳನ್ನು ನಿರ್ಮಿಸುವ ಮೂಲಕ ಔಷಧಿ ವಿತರಣೆ ವ್ಯವಸ್ಥೆಯನ್ನು ಸುಗಮಗೊಳಿಸಬೇಕು. ಇದರಿಂದ ರೋಗಿಗಳಿಗೆ ಸಮಯ ಉಳಿತಾಯವಾಗುವುದರ ಜೊತೆಗೆ ಜನದಟ್ಟಣೆ ಕಡಿಮೆಯಾಗಲಿದೆ. ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ, ರೋಗಿಗಳಿಗೆ ತ್ವರಿತವಾಗಿ ಔಷಧಿ ದೊರೆಯುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
*ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆಗೆ ಸೂಚನೆ*
ಆಸ್ಪತ್ರೆಯಲ್ಲಿರುವ ವೈದ್ಯಕೀಯ ಉಪಕರಣಗಳು, ಹಾಸಿಗೆಗಳು, ವಿದ್ಯುತ್, ಕುಡಿಯುವ ನೀರು, ಶೌಚಾಲಯಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ದುರಸ್ತಿ ಅಗತ್ಯವಿರುವ ಉಪಕರಣಗಳು ಹಾಗೂ ಮೂಲಸೌಕರ್ಯಗಳನ್ನು ತಕ್ಷಣವೇ ದುರಸ್ತಿಪಡಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲ ಉಂಟಾಗದಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ರೋಗಿಗಳೊಂದಿಗೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ತುರ್ತು ಚಿಕಿತ್ಸೆಗೆ ಆದ್ಯತೆ ನೀಡುವುದರ ಜೊತೆಗೆ, ಆಸ್ಪತ್ರೆಯಲ್ಲಿ ಲಭ್ಯವಿರುವ ಸೇವೆಗಳನ್ನು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿರಂತರ ಮೇಲ್ವಿಚಾರಣೆ ನಡೆಸಬೇಕು ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಸೂಚಿಸಿದರು.
ಸಾರ್ವಜನಿಕರಿಗೆ ಸರ್ಕಾರದ ವತಿಯಿಂದ ಒದಗಿಸಲಾಗುತ್ತಿರುವ ಆರೋಗ್ಯ ಸೇವೆಗಳು ಸಮರ್ಪಕವಾಗಿ ತಲುಪಬೇಕು. ಆಸ್ಪತ್ರೆಯ ನಿರ್ವಹಣೆ, ಸ್ವಚ್ಛತೆ, ಔಷಧಿ ವಿತರಣೆ ಹಾಗೂ ಮೂಲಸೌಕರ್ಯಗಳ ವಿಚಾರದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ. ಶೋಭಾರಾಣಿ, ಮದ್ದೂರು ತಾಲ್ಲೂಕು ಆಸ್ಪತ್ರೆಯ ಆರ್.ಎಂ.ಓ. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    4 hrs ago
  • ಮೈಸೂರಿನ ಮೀಲಾದ್ ಬಾಗ್‌ನಲ್ಲಿ ಶ್ರದ್ಧಾ ಭಕ್ತಿಯ ಈದ್ ಮಿಲಾದ್ ಸಂಭ್ರಮ! #tanveersait #viral #eidmiladunnabiﷺ #kannadanews #todayviral ಮೈಸೂರಿನ ಮೀಲಾದ್ ಬಾಗ್‌ನಲ್ಲಿ ಶ್ರದ್ಧಾ ಭಕ್ತಿಯ ಈದ್ ಮಿಲಾದ್ ಸಂಭ್ರಮ! #tanveersait #viral #eidmiladunnabiﷺ #kannadanews #todayviral
    1
    ಮೈಸೂರಿನ ಮೀಲಾದ್ ಬಾಗ್‌ನಲ್ಲಿ ಶ್ರದ್ಧಾ ಭಕ್ತಿಯ ಈದ್ ಮಿಲಾದ್ ಸಂಭ್ರಮ!

#tanveersait #viral #eidmiladunnabiﷺ #kannadanews #todayviral
ಮೈಸೂರಿನ ಮೀಲಾದ್ ಬಾಗ್‌ನಲ್ಲಿ ಶ್ರದ್ಧಾ ಭಕ್ತಿಯ ಈದ್ ಮಿಲಾದ್ ಸಂಭ್ರಮ!
#tanveersait #viral #eidmiladunnabiﷺ #kannadanews #todayviral
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.