ಗದಗನಲ್ಲಿ ಹಳದಿ ಭಂಡಾರದಲ್ಲಿ ಮಿಂದೆದ್ದ ನಗರ- ಭಕ್ತಿಭಾವದಲ್ಲಿ ಮೆರವಣಿಗೆ ನಗರದ ಗ್ರಾಮ ದೇವತೆಗಳಾದ ಶ್ರೀ ದ್ಯಾಮಮ್ಮ ಹಾಗೂ ಶ್ರೀ ದುರ್ಗಮ್ಮ ದೇವಿಯರ ಹರಿ ಜಾತ್ರಾ ಮಹೋತ್ಸವದ ಅಂಗವಾಗಿ 18 ವರ್ಷಗಳ ಬಳಿಕ ನಗರದಲ್ಲಿ ಬುಧವಾರ ಬಂಡಾರದ ಜಾತ್ರೆ ಅದ್ದೂರಿಯಾಗಿ ನಡೆಯಿತು. ನೂರಾರು ಭಕ್ತರು ಪಾಲ್ಗೊಂಡು ದೇವಿಯರಿಗೆ ಭಕ್ತಿಯನ್ನು ಸಮರ್ಪಿಸಿದರು. ಒಕ್ಕಲಗೇರಿಯ ದ್ಯಾಮವ್ವನ ಕಟ್ಟಿಯಿಂದ ಆರಂಭಗೊಂಡ ದೇವರ ಪಲ್ಲಕ್ಕಿಗಳ ಮೆರವಣಿಗೆ ಗಂಜೀ ಬಸವೇಶ್ವರ ವೃತ್ತ, ರಾಚೋಟೇಶ್ವರ ಗುಡಿ, ಹನುಮನಗರಡಿ, ಮಹಸುಬಾನಿ ಕಟ್ಟಿ, ನಾಲ್ವಾಡ ಗಲ್ಲಿ, ತಿಲಕ ಪಾರ್ಕ ರಸ್ತೆ ಮಾರ್ಗವಾಗಿ ಜೋಡ ಮಾರುತಿ ದೇವಸ್ಥಾನದ ಎದುರಿನ ದುರ್ಗಾದೇವಿ ದೇವಸ್ಥಾನದವರೆಗೆ ಸಾಗಿತು. ಮೆರವಣಿಗೆ ಸಾಗಿದ ಮಾರ್ಗದುದ್ದಕ್ಕೂ ಭಂಡಾರದ ಹಳದಿ ಬಣ್ಣವೇ ಕಂಗೊಳಿಸಿತು. ವಿವಿಧ ವೃತ್ತಗಳಲ್ಲಿ ಭಂಡಾರ ತುಂಬಿದ ಚೀಲಗಳನ್ನು ಇರಿಸಲಾಗಿತ್ತು. ಭಕ್ತರು ಪರಸ್ಪರ ಭಂಡಾರ ಹಚ್ಚಿಕೊಂಡು ದೇವಿಗೆ ತಮ್ಮ ಭಕ್ತಿ ಸಮರ್ಪಿಸಿದರು. ಮೆರವಣಿಗೆಯಲ್ಲಿ ಮಹಿಳೆಯರು, ಯುವಕರು, ಯುವತಿಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಹಳದಿ ಭಂಡಾರಮಯ ನಗರ ಬಂಡಾರದ ಜಾತ್ರೆಯ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ಹಳದಿ ಬಣ್ಣದಲ್ಲಿ ಮಿಂದೆದ್ದಿದ್ದವು. ಹಲವರು ಹಳದಿ ಬಣ್ಣದ ಉಡುಪು ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಭಕ್ತರು ಪರಸ್ಪರ ಭಂಡಾರ ಹಚ್ಚಿಕೊಂಡು ಹರ್ಷ ವ್ಯಕ್ತಪಡಿಸಿದರು. 18 ವರ್ಷಗಳ ಬಳಿಕ ನಡೆದ ಜಾತ್ರೆಯಾಗಿದ್ದರಿಂದ ಜನರಲ್ಲಿ ವಿಶೇಷ ಉತ್ಸಾಹ ಕಂಡುಬಂತು. ಕೆಲವೆಡೆ ವಾಹನ ದಟ್ಟಣೆ ಗ್ರಾಮ ದೇವತೆಗಳ ಜಾತ್ರೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಜೋಡ ಮಾರುತಿ ದೇವಸ್ಥಾನ, ರಾಚೋಟೇಶ್ವರ ದೇವಸ್ಥಾನ ಹಾಗೂ ಮೇನ್ ಬಜಾರ್ ಸುತ್ತಮುತ್ತ ಕೆಲಕಾಲ ವಾಹನ ದಟ್ಟಣೆ ಉಂಟಾಯಿತು. ಪೊಲೀಸರು ಸ್ಥಳದಲ್ಲಿದ್ದು ಸಂಚಾರ ವ್ಯವಸ್ಥೆಯನ್ನು ನಿಯಂತ್ರಿಸಿ ವಾಹನ ಸಂಚಾರ ಸುಗಮಗೊಳಿಸಿದರು.

- ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ1
- ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ1
- ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.1
- ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.4
- ಇಳಕಲ್ ನಗರದಲ್ಲಿ ಟಾಕ್ಸಿಕ್ ಸಿನಿಮಾ ಭರ್ಜರಿ ಓಪನಿಂಗ್ ; ಅಭಿಮಾನಿಗಳಿಂದ ಉತ್ತಮ ಪ್ರಶಂಸೆ. ಇಳಕಲ್ ನಗರದಲ್ಲಿ ಟಾಕ್ಸಿಕ್ ಸಿನಿಮಾ ಭರ್ಜರಿ ಓಪನಿಂಗ್ ಪಡೆದಿದೆ. ನಗರದ ಶ್ರೀನಿವಾಸ್ ಚಿತ್ರಮಂದಿರದಲ್ಲಿ ಮೊದಲನೇ ಶೋ ದಿಂದ ಸಂಜೆಯ ಶೋ ವರೆಗೂ ಹೌಸ್ ಫುಲ್ ಪ್ರದರ್ಶನ ಕಂಡಿತು. ಟಿಕೆಟ್ ಸಿಗದೇ ಕೆಲವು ಅಭಿಮಾನಿಗಳು, ಮಂತರದ ನೋಡಿದರಾಯ್ತು ಎಂದು ವಾಪಸಾದ ಘಟನೆಗಳು ನಡೆದವು.1
- ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ಗುಳೇದಗುಡ್ಡ ಪಟ್ಟಣದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ಗುಳೇದಗುಡ್ಡ: ಪಟ್ಟಣದಲ್ಲಿ ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ನಿಮಿತ್ತವಾಗಿ ಬುಧವಾರ ಪವಿತ್ರ ಈದ್ ಮಿಲಾದ್ ಹಬ್ಬದ ಅದ್ದೂರಿ ಮೆರವಣಿಗೆ ನಡೆಯಿತು. ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಪಟ್ಟಣದ ಭಾಗವಾನ್ ಪೇಟೆಯಿಂದ ಆರಂಭವಾಗಿ ಪವಾರ್ ಕ್ರಾಸ್, ಪುರಸಭೆ, ಸರಾಫಬಜಾರ್, ಕಂಠಿಪೇಟೆ, ಗಚ್ಚಿನಕಟ್ಟಿ, ಚೌಬಜಾರ, ಅರಳಿಕಟ್ಟಿ ಮೂಲಕ ಹಾಯ್ದು ಭಾಗವಾನ್ ಪೇಟೆಗೆ ತಲುಪಿತು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಹಾಗೂ ಸಮಾಜದ ಮುಖಂಡರಾದ ಮುಬಾರಕ್ ಮಂಗಳೂರು, ಅಂಜುಮನ್ ಕಮೀಟಿ ಅಧ್ಯಕ್ಷ ರಜಾಕ್ ಕುದರಿ, ಸಾಧನಿ ಭಾಷಾ, ಮಶಾಕ್ ನಲವತ್ತವಾಡ, ಜಾವಿದ್ ಮೊಮಿನ್, ಜಿಲಾನಿ ಮುಜಾಹಿದ್, ರಫಿಕ್ ಕಲ್ಬುರ್ಗಿ, ದೇವರಾಜ ಕಟ್ಟಿಮನಿ, ಗೋವಿಂದ ರಾಠೋಡ, ರಫಿಕ್ ಮಕನದಾರ, ಮೋದಿನಸಾಬ್ ಸದರಿ, ರೀಯಾಜ್ ಚೊಳಚಗುಡ್ಡ, ಗುಲಾಮ್ ಹುಸೇನ್ ಇಲ್ಲಕಲ್, ಅಲ್ಲಾಸಾಬ ದೋಟೆಗಾರ ಸೇರಿದಂತೆ ಸಮಾಜದ ಮುಖಂಡರು ಇದ್ದರು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಮುಖ್ಯಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಅವರಿಗೆ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮುಬಾರಕ್ ಮಂಗಳೂರ ಅವರು ಸನ್ಮಾನಿಸಿದರು.2
- ನೋಡಿ ಕಾರೊಂದು ಕೆರೆಯೊಳಗೆ ಉರುಳಿಬಿದ್ದಿದೆ. ನೀರಿನೊಳಗೆ ಮುಳುಗುತ್ತಿದ್ದ ಕಾರಿನಲ್ಲಿದ್ದವರನ್ನು ಸ್ಥಳೀಯರು ತಕ್ಷಣ ಕಾರಿನೊಳಗಿದ್ದವರನ್ನು ರಕ್ಷಿಸಿದ್ದಾರೆ..1
- ಧಾರವಾಡ ಉತ್ತರಾದಿಮಠದ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ಧಾರವಾಡ ಉತ್ತರಾದಿಮಠದ ಶ್ರೀ ಹಯಗ್ರೀವದೇವರ ಸಪ್ತರಾತ್ರೋತ್ಸವದ ಅಂಗವಾಗಿ ಬುಧವಾರ ಸಂಜೆ ಎಮ್ಮಿಕೇರಿಯಿಂದ ಶ್ರೀಮಠದವರೆಗೆ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ನಡೆಯಿತು. ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಭಜನಾ ಮಂಡಳಿ ಸದಸ್ಯೆಯರು ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಹಾಡುತ್ತ ಸಾಗಿದರು. ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಪಂ. ಪ್ರಹ್ಲಾದಾಚಾರ್ಯ ಗಲಗಲಿ, ಆರ್.ಎಂ. ಕುಲಕರ್ಣಿ, ಪಂ. ಕೇಶವಾಚಾರ್ಯ ಕೆರೂರ, ಜಯತೀರ್ಥಾಚಾರ್ಯ ಗಲಗಲಿ, ಹನುಮಂತ ಕೊಟಬಾಗಿ, ಶ್ರೀಹರಿ ಕೊಪ್ಪರ, ರವೀಂದ್ರ ದೇಶಪಾಂಡೆ, ಅಶೋಕ ಚಚಡಿ, ಸುರೇಶಾಚಾರ್ಯ ರಾಯಚೂರ, ದೇಶಮುಖ ಸೇರಿದಂತೆ ಹಲವರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.1