logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬದ ಪ್ರಯುಕ್ತ ಗ್ರಾಮದ ಹಿರೇಮಸೀದಿ ಆವರಣದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲಕೇರಿ, ಮುಷ್ಠಕೊಪ್ಪ, ವಿರುಪಾಪೂರ ಹಾಗೂ ವಿರುಪಾಪೂರ ತಾಂಡಾ ಗ್ರಾಮಗಳ 2026ನೇ ಸಾಲಿನ SSLC ಮತ್ತು PUC ವಾರ್ಷಿಕ ಪರೀಕ್ಷೆಯಲ್ಲಿ ಶೇ. 70ಕ್ಕಿಂತ ಹೆಚ್ಚು ಅಂಕ ಗಳಿಸಿದ 51 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ನೀಡಲಾಯಿತು. ಹಜರತ್ ಮುಸ್ತಫಾ ಸಾಹೇಬ ಬೆಳಗಟ್ಟಿ ಹಾಗೂ ವಿರುಪಾಪೂರದ ಷ. ಬ್ರ. ಅಭಿನವ ಶ್ರೀ ಮುದುಕೇಶ್ವರ ಶಿವಾಚಾರ್ಯ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಶಿವಕುಮಾರಗೌಡ ಎಸ್. ಪಾಟೀಲ ಅವರು, ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ ಮೌಲ್ಯಯುತ ಶಿಕ್ಷಣದ ಜೊತೆಗೆ ಸಂಸ್ಕಾರದ ಅರಿವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಗದಗ ಜಿಲ್ಲೆಗೆ ಮುಂಡರಗಿ ತಾಲೂಕು ಅತಿ ಹೆಚ್ಚು ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದೆ ಎಂದು ಶ್ಲಾಘಿಸಿದ ಅವರು, SSLCಯ 29 ವಿದ್ಯಾರ್ಥಿಗಳಿಗೆ ತಲಾ 500/- ರೂ. ಹಾಗೂ PUCಯ 22 ವಿದ್ಯಾರ್ಥಿಗಳಿಗೆ ತಲಾ 1000/- ರೂ. ಗಳ ಪ್ರೋತ್ಸಾಹ ಧನವನ್ನು ವಿತರಿಸಿ ಶುಭ ಹಾರೈಸಿದರು. ಬೆಂಗಳೂರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್. ಡಿ. ಮಕಾಂದಾರ ಮಾತನಾಡಿ, ಪಾಲಕರ ಆಶ್ರಯ ಹಾಗೂ ಶಿಕ್ಷಕರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಪಟ್ಟ ಪರಿಶ್ರಮದ ಫಲವಾಗಿ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು. ಶ್ರೀ ಎ. ಕೆ. ಮುಲ್ಲಾ ಹಾಗೂ ಶ್ರೀ ಎಂ. ಬಿ. ಪಾಟೀಲ್ ಉಪನ್ಯಾಸ ನೀಡಿದರೆ, ಶ್ರೀ ಡಿ. ಎಮ್. ಶಿರೋಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಎಮ್. ಯು. ಮಕಾಂದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಅಂದಪ್ಪ ಮೇಟಿ, ಧನಂಜಯ ದ್ರಾಕ್ಷಿ, ಹಾಜೀ ಮಹ್ಮದಗೌಸ್ ಮಕಾಂದಾರ, ಬಸವರಾಜ ಬಳಿಗೇರ, ಬಿ. ಕೆ. ದೇಸಾಯಿ, ಮಲ್ಲಪ್ಪ ನಾಯ್ಕರ, ಬಸವರಾಜ ಕೊಪ್ಪಣ್ಣವರ, ಹನಮಂತಪ್ಪ ವಡ್ಡಟ್ಟಿ, ಹನಮಂತಪ್ಪ ಹಡಪದ, ಸಂಗನಗೌಡ ಪಾಟೀಲ, ಹಾಲಯ್ಯ ಹಿರೇಮಠ್, ರವೀಂದ್ರ ಮುದ್ಲಾಪೂರ, ಪಂಪಣ್ಣ ಬಂಡಿವಡ್ಡರ, ಶಿವು ಪೂಜಾರ, ಎಂ. ಎಂ. ಮುಲ್ಲಾ, ಬಿ. ಜೆ. ಅಳವುಂಡಿ, ಆರ್. ಎಮ್. ಖತೀಬ, ಶಾದಿಕ್ ಮಕಾಂದಾರ, ಜಾಹಿರುದ್ದೀನ ಮುಲ್ಲಾ, ಎಮ್. ಎ. ಮಾಳೆಕೊಪ್ಪ, ನಜೀರ ಖತೀಬ, ಮೈನು ಅಳವುಂಡಿ, ಕಶೀಮಸಾಬ ಮಲಕಬಾಯಿ, ರಾಜಾಹುಸೇನ ಮಲಕಬಾಯಿ, ರಾಜಾಬಕ್ಷೀ ಹರ್ಲಾಪೂರ ಹಾಗೂ ಗ್ರಾಮದ ಅಂಜುಮನ್ ಮತ್ತು ನೌಜವಾನ ಕಮಿಟಿಯ ಪದಾಧಿಕಾರಿಗಳು, ಗ್ರಾಮದ ಸಮಸ್ತ ಗುರು-ಹಿರಿಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಗ್ರಾಮದ ಖಾದ್ರಿ ಕಲಾತಂಡ ಹಾಗೂ ಅಂಗನವಾಡಿ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಕರಾದ ಶ್ರೀ ಶರಣು ಕಲಾಲ ಕಾರ್ಯಕ್ರಮ ನಿರೂಪಿಸಿದರು ಹಾಗೂ ಶ್ರೀ ಶಹಾಬೂದ್ದೀನ ನದಾಫ ಸ್ವಾಗತಿಸಿ, ವಂದನಾರ್ಪಣೆ ಮಾಡಿದರು.

17 hrs ago
user_Ranganath Kandagal
Ranganath Kandagal
TV News Anchor ಮುಂಡರಗಿ, ಗದಗ, ಕರ್ನಾಟಕ•
17 hrs ago
8a6fb8e4-2b2c-4752-9db5-1e12b4de92c9

ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬದ ಪ್ರಯುಕ್ತ ಗ್ರಾಮದ ಹಿರೇಮಸೀದಿ ಆವರಣದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲಕೇರಿ, ಮುಷ್ಠಕೊಪ್ಪ, ವಿರುಪಾಪೂರ ಹಾಗೂ ವಿರುಪಾಪೂರ ತಾಂಡಾ ಗ್ರಾಮಗಳ 2026ನೇ ಸಾಲಿನ SSLC ಮತ್ತು PUC ವಾರ್ಷಿಕ ಪರೀಕ್ಷೆಯಲ್ಲಿ ಶೇ. 70ಕ್ಕಿಂತ ಹೆಚ್ಚು ಅಂಕ ಗಳಿಸಿದ 51 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ನೀಡಲಾಯಿತು. ಹಜರತ್ ಮುಸ್ತಫಾ ಸಾಹೇಬ ಬೆಳಗಟ್ಟಿ ಹಾಗೂ ವಿರುಪಾಪೂರದ ಷ. ಬ್ರ. ಅಭಿನವ ಶ್ರೀ ಮುದುಕೇಶ್ವರ ಶಿವಾಚಾರ್ಯ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಶಿವಕುಮಾರಗೌಡ ಎಸ್. ಪಾಟೀಲ ಅವರು, ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ ಮೌಲ್ಯಯುತ ಶಿಕ್ಷಣದ ಜೊತೆಗೆ ಸಂಸ್ಕಾರದ ಅರಿವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ

e0ab00c2-4dec-480d-a2b8-a01a2958ec84

ನೀಡಿದರು. ಗದಗ ಜಿಲ್ಲೆಗೆ ಮುಂಡರಗಿ ತಾಲೂಕು ಅತಿ ಹೆಚ್ಚು ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿದೆ ಎಂದು ಶ್ಲಾಘಿಸಿದ ಅವರು, SSLCಯ 29 ವಿದ್ಯಾರ್ಥಿಗಳಿಗೆ ತಲಾ 500/- ರೂ. ಹಾಗೂ PUCಯ 22 ವಿದ್ಯಾರ್ಥಿಗಳಿಗೆ ತಲಾ 1000/- ರೂ. ಗಳ ಪ್ರೋತ್ಸಾಹ ಧನವನ್ನು ವಿತರಿಸಿ ಶುಭ ಹಾರೈಸಿದರು. ಬೆಂಗಳೂರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್. ಡಿ. ಮಕಾಂದಾರ ಮಾತನಾಡಿ, ಪಾಲಕರ ಆಶ್ರಯ ಹಾಗೂ ಶಿಕ್ಷಕರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಪಟ್ಟ ಪರಿಶ್ರಮದ ಫಲವಾಗಿ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು. ಶ್ರೀ ಎ. ಕೆ. ಮುಲ್ಲಾ ಹಾಗೂ ಶ್ರೀ ಎಂ. ಬಿ. ಪಾಟೀಲ್ ಉಪನ್ಯಾಸ ನೀಡಿದರೆ, ಶ್ರೀ ಡಿ. ಎಮ್. ಶಿರೋಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಎಮ್. ಯು. ಮಕಾಂದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಅಂದಪ್ಪ ಮೇಟಿ, ಧನಂಜಯ

1a3a6433-aba4-4662-9ae1-921572c53f8b

ದ್ರಾಕ್ಷಿ, ಹಾಜೀ ಮಹ್ಮದಗೌಸ್ ಮಕಾಂದಾರ, ಬಸವರಾಜ ಬಳಿಗೇರ, ಬಿ. ಕೆ. ದೇಸಾಯಿ, ಮಲ್ಲಪ್ಪ ನಾಯ್ಕರ, ಬಸವರಾಜ ಕೊಪ್ಪಣ್ಣವರ, ಹನಮಂತಪ್ಪ ವಡ್ಡಟ್ಟಿ, ಹನಮಂತಪ್ಪ ಹಡಪದ, ಸಂಗನಗೌಡ ಪಾಟೀಲ, ಹಾಲಯ್ಯ ಹಿರೇಮಠ್, ರವೀಂದ್ರ ಮುದ್ಲಾಪೂರ, ಪಂಪಣ್ಣ ಬಂಡಿವಡ್ಡರ, ಶಿವು ಪೂಜಾರ, ಎಂ. ಎಂ. ಮುಲ್ಲಾ, ಬಿ. ಜೆ. ಅಳವುಂಡಿ, ಆರ್. ಎಮ್. ಖತೀಬ, ಶಾದಿಕ್ ಮಕಾಂದಾರ, ಜಾಹಿರುದ್ದೀನ ಮುಲ್ಲಾ, ಎಮ್. ಎ. ಮಾಳೆಕೊಪ್ಪ, ನಜೀರ ಖತೀಬ, ಮೈನು ಅಳವುಂಡಿ, ಕಶೀಮಸಾಬ ಮಲಕಬಾಯಿ, ರಾಜಾಹುಸೇನ ಮಲಕಬಾಯಿ, ರಾಜಾಬಕ್ಷೀ ಹರ್ಲಾಪೂರ ಹಾಗೂ ಗ್ರಾಮದ ಅಂಜುಮನ್ ಮತ್ತು ನೌಜವಾನ ಕಮಿಟಿಯ ಪದಾಧಿಕಾರಿಗಳು, ಗ್ರಾಮದ ಸಮಸ್ತ ಗುರು-ಹಿರಿಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಗ್ರಾಮದ ಖಾದ್ರಿ ಕಲಾತಂಡ ಹಾಗೂ ಅಂಗನವಾಡಿ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಕರಾದ ಶ್ರೀ ಶರಣು ಕಲಾಲ ಕಾರ್ಯಕ್ರಮ ನಿರೂಪಿಸಿದರು ಹಾಗೂ ಶ್ರೀ ಶಹಾಬೂದ್ದೀನ ನದಾಫ ಸ್ವಾಗತಿಸಿ, ವಂದನಾರ್ಪಣೆ ಮಾಡಿದರು.

More news from Karnataka and nearby areas
  • ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡಿದರು. ಸೋಮವಾರ ಪ್ರಮಾಣ ವಚನ ಸ್ವೀಕರಿಸಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಡಿ.ಕೆ. ಶಿವಕುಮಾರ್ ಅವರಿಗೆ, ರಾಜ್ಯದಲ್ಲಿ ಸಾರಿಗೆ ಸೇರಿದಂತೆ ಹಲವಾರು ಸಮಸ್ಯೆಗಳಿದ್ದು, ಇವೆಲ್ಲದರ ನಡುವೆ ರಾಜ್ಯದ ಅಭಿವೃದ್ಧಿ ಮಾಡಬೇಕು ಎಂದು ಬೊಮ್ಮಾಯಿ ಹೇಳಿದರು. ಇದಕ್ಕಾಗಿ ದಕ್ಷ ಮತ್ತು ಪ್ರಾಮಾಣಿಕ ಆಡಳಿತ ನೀಡಬೇಕು ಎಂದು ಅವರು ಸೂಚಿಸಿದರು.
    1
    ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡಿದರು. ಸೋಮವಾರ ಪ್ರಮಾಣ ವಚನ ಸ್ವೀಕರಿಸಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಡಿ.ಕೆ. ಶಿವಕುಮಾರ್ ಅವರಿಗೆ, ರಾಜ್ಯದಲ್ಲಿ ಸಾರಿಗೆ ಸೇರಿದಂತೆ ಹಲವಾರು ಸಮಸ್ಯೆಗಳಿದ್ದು, ಇವೆಲ್ಲದರ ನಡುವೆ ರಾಜ್ಯದ ಅಭಿವೃದ್ಧಿ ಮಾಡಬೇಕು ಎಂದು ಬೊಮ್ಮಾಯಿ ಹೇಳಿದರು. ಇದಕ್ಕಾಗಿ ದಕ್ಷ ಮತ್ತು ಪ್ರಾಮಾಣಿಕ ಆಡಳಿತ ನೀಡಬೇಕು ಎಂದು ಅವರು ಸೂಚಿಸಿದರು.
    user_H M ಹರಕುಣಿ
    H M ಹರಕುಣಿ
    Local News Reporter Haveri, Karnataka•
    6 hrs ago
  • ಈಶ್ವರಿ ಬಳ್ಳಿ ಸಸ್ಯಕ್ಕೆ ಸಂಬಂಧಿಸಿದಂತೆ ಕೆಲವು ಉಪಯೋಗಗಳನ್ನು ತಿಳಿಸಲಾಗಿದೆ. ಅದರಂತೆ, ಚೋಳು ಎಂಬ ಚರ್ಮದ ಸಮಸ್ಯೆಗೆ ಈ ಬಳ್ಳಿಯನ್ನು ಬಳಸಲಾಗುತ್ತದೆ. ಇದರ ಜೊತೆಗೆ, ನಾಯಿ ಕಡಿತ ಉಂಟಾದಾಗಲೂ ಈ ಬಳ್ಳಿಯ ಉಪಯೋಗವಿದೆ. ನಾಯಿ ಕಡಿತಕ್ಕೆ ಪರಿಹಾರವಾಗಿ, ಈಶ್ವರಿ ಬಳ್ಳಿಯನ್ನು ನಾಲ್ಕು ಬಾರಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು ಎಂದು ಹೇಳಲಾಗಿದೆ.
    1
    ಈಶ್ವರಿ ಬಳ್ಳಿ ಸಸ್ಯಕ್ಕೆ ಸಂಬಂಧಿಸಿದಂತೆ ಕೆಲವು ಉಪಯೋಗಗಳನ್ನು ತಿಳಿಸಲಾಗಿದೆ. ಅದರಂತೆ, ಚೋಳು ಎಂಬ ಚರ್ಮದ ಸಮಸ್ಯೆಗೆ ಈ ಬಳ್ಳಿಯನ್ನು ಬಳಸಲಾಗುತ್ತದೆ. ಇದರ ಜೊತೆಗೆ, ನಾಯಿ ಕಡಿತ ಉಂಟಾದಾಗಲೂ ಈ ಬಳ್ಳಿಯ ಉಪಯೋಗವಿದೆ. ನಾಯಿ ಕಡಿತಕ್ಕೆ ಪರಿಹಾರವಾಗಿ, ಈಶ್ವರಿ ಬಳ್ಳಿಯನ್ನು ನಾಲ್ಕು ಬಾರಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು ಎಂದು ಹೇಳಲಾಗಿದೆ.
    user_ಶಂಶ ಪೊಲೀಕ್ಲಿನಿಕ್ ಕಾರಡಗಿ
    ಶಂಶ ಪೊಲೀಕ್ಲಿನಿಕ್ ಕಾರಡಗಿ
    Ayurvedic Practitioner ಸವಣೂರು, ಹಾವೇರಿ, ಕರ್ನಾಟಕ•
    14 hrs ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಪತ್ರಕರ್ತರು ತಮ್ಮ ಕುಟುಂಬಗಳಿಗೆ ಸುಸಜ್ಜಿತ ವಸತಿ ಸೌಕರ್ಯ ಕಲ್ಪಿಸುವಂತೆ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಹಿರಿಯ ಪತ್ರಕರ್ತ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಕೂಡ್ಲಿಗಿ ತಾಲೂಕಾಧ್ಯಕ್ಷರಾದ ಹುಡೇಂ ಕೃಷ್ಣಮೂರ್ತಿಯವರು ಈ ಮನವಿಯನ್ನು ಶಾಸಕರ ಪತ್ರಿಕಾಗೋಷ್ಠಿಯಲ್ಲಿ ತಾಲೂಕಿನ ಎಲ್ಲ ಪತ್ರಕರ್ತರ ಪರವಾಗಿ ಪ್ರಸ್ತುತಪಡಿಸಿದರು. ಪತ್ರಕರ್ತರಿಗೆ ಸರ್ಕಾರದಿಂದ ಪಟ್ಟಣದಲ್ಲಿ ನಿವೇಶನ ಸಮೇತ ವಸತಿ ಸಮುಚ್ಚಯಗಳನ್ನು ನಿರ್ಮಿಸಿಕೊಡುವಂತೆ ಅವರು ಒತ್ತಾಯಿಸಿದರು. ತಾಲೂಕಿನ ಐವತ್ತಕ್ಕೂ ಹೆಚ್ಚು ಪತ್ರಕರ್ತರಲ್ಲಿ ಬಹುತೇಕರು ಗ್ರಾಮೀಣ ಭಾಗಗಳಿಂದ ಕೇಂದ್ರಕ್ಕೆ ಬಂದು ಕರ್ತವ್ಯ ನಿರ್ವಹಿಸಿ ಮರಳಿ ಗ್ರಾಮಕ್ಕೆ ತೆರಳುತ್ತಿದ್ದು, ಪಟ್ಟಣದಲ್ಲಿ ವಸತಿ ರಹಿತರಾಗಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. ಅರ್ಹ ವಸತಿ ರಹಿತ ಪತ್ರಕರ್ತರಿಗಾಗಿ ಸರ್ಕಾರದ ವಸತಿ ಯೋಜನೆಯಡಿ ಒಂದೆಡೆ ಸಾಮೂಹಿಕ ಮನೆಗಳನ್ನು ನಿರ್ಮಿಸಿ ವಸತಿ ಸಮುಚ್ಚಯಗಳನ್ನು ಕಟ್ಟಿಸಿಕೊಡಬೇಕೆಂಬುದು ಅವರ ಪ್ರಮುಖ ಬೇಡಿಕೆಯಾಗಿತ್ತು. ಪತ್ರಕರ್ತರು ತಮ್ಮ ಮನವಿಯೊಂದಿಗೆ, ಶಾಸಕರು ಸರ್ಕಾರದಿಂದ ವಸತಿಗಳನ್ನು ನಿರ್ಮಿಸಿದ್ದಲ್ಲಿ, ಆ ವಟಾರಕ್ಕೆ "ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ರವರ ವಟಾರ" ಎಂದು ಹೆಸರಿಟ್ಟು ಕೃತಜ್ಞಪೂರ್ವಕವಾಗಿ ಸ್ಮರಿಸುವುದಾಗಿ ಭರವಸೆ ನೀಡಿದರು. ಪತ್ರಕರ್ತರ ಮನವಿ ಆಲಿಸಿದ ಶಾಸಕ ಡಾ. ಎನ್.ಟಿ. ಶ್ರೀನಿವಾಸ್, ಸರ್ಕಾರದಲ್ಲಿ ಇದಕ್ಕೆ ಪ್ರತ್ಯೇಕ ಅವಕಾಶವಿರುವ ಸಾಧ್ಯತೆ ಕಡಿಮೆ ಎಂದು ತಿಳಿಸಿದರು. ಆದಾಗ್ಯೂ, ಸಂಬಂಧಪಟ್ಟ ಇಲಾಖೆಗಳು, ಸ್ಥಳೀಯ ಹಾಗೂ ತಾಲೂಕಾಡಳಿತದೊಂದಿಗೆ ಮತ್ತು ಉನ್ನತಾಧಿಕಾರಿಗಳೊಂದಿಗೆ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದರು. ಸ್ಥಳೀಯ ಹಾಗೂ ನಿರಾಶ್ರಿತ ಅರ್ಹ ಪತ್ರಕರ್ತರು ನಿಯಮಾನುಸಾರ ವಸತಿ ಸೌಕರ್ಯಕ್ಕಾಗಿ ಮನವಿ ಸಲ್ಲಿಸಿದರೆ, ಕಾನೂನಿನ ಪ್ರಕಾರ ವಸತಿ ಯೋಜನೆಗಳಡಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಸಕರು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಭೀಮಣ್ಣ ಗಜಾಪುರ್ ಸೇರಿದಂತೆ ಪಟ್ಟಣ ಮತ್ತು ತಾಲೂಕಿನ ಅನೇಕ ಪತ್ರಕರ್ತರು ಉಪಸ್ಥಿತರಿದ್ದರು.
    4
    ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಪತ್ರಕರ್ತರು ತಮ್ಮ ಕುಟುಂಬಗಳಿಗೆ ಸುಸಜ್ಜಿತ ವಸತಿ ಸೌಕರ್ಯ ಕಲ್ಪಿಸುವಂತೆ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಹಿರಿಯ ಪತ್ರಕರ್ತ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಕೂಡ್ಲಿಗಿ ತಾಲೂಕಾಧ್ಯಕ್ಷರಾದ ಹುಡೇಂ ಕೃಷ್ಣಮೂರ್ತಿಯವರು ಈ ಮನವಿಯನ್ನು ಶಾಸಕರ ಪತ್ರಿಕಾಗೋಷ್ಠಿಯಲ್ಲಿ ತಾಲೂಕಿನ ಎಲ್ಲ ಪತ್ರಕರ್ತರ ಪರವಾಗಿ ಪ್ರಸ್ತುತಪಡಿಸಿದರು. ಪತ್ರಕರ್ತರಿಗೆ ಸರ್ಕಾರದಿಂದ ಪಟ್ಟಣದಲ್ಲಿ ನಿವೇಶನ ಸಮೇತ ವಸತಿ ಸಮುಚ್ಚಯಗಳನ್ನು ನಿರ್ಮಿಸಿಕೊಡುವಂತೆ ಅವರು ಒತ್ತಾಯಿಸಿದರು.

ತಾಲೂಕಿನ ಐವತ್ತಕ್ಕೂ ಹೆಚ್ಚು ಪತ್ರಕರ್ತರಲ್ಲಿ ಬಹುತೇಕರು ಗ್ರಾಮೀಣ ಭಾಗಗಳಿಂದ ಕೇಂದ್ರಕ್ಕೆ ಬಂದು ಕರ್ತವ್ಯ ನಿರ್ವಹಿಸಿ ಮರಳಿ ಗ್ರಾಮಕ್ಕೆ ತೆರಳುತ್ತಿದ್ದು, ಪಟ್ಟಣದಲ್ಲಿ ವಸತಿ ರಹಿತರಾಗಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. ಅರ್ಹ ವಸತಿ ರಹಿತ ಪತ್ರಕರ್ತರಿಗಾಗಿ ಸರ್ಕಾರದ ವಸತಿ ಯೋಜನೆಯಡಿ ಒಂದೆಡೆ ಸಾಮೂಹಿಕ ಮನೆಗಳನ್ನು ನಿರ್ಮಿಸಿ ವಸತಿ ಸಮುಚ್ಚಯಗಳನ್ನು ಕಟ್ಟಿಸಿಕೊಡಬೇಕೆಂಬುದು ಅವರ ಪ್ರಮುಖ ಬೇಡಿಕೆಯಾಗಿತ್ತು. ಪತ್ರಕರ್ತರು ತಮ್ಮ ಮನವಿಯೊಂದಿಗೆ, ಶಾಸಕರು ಸರ್ಕಾರದಿಂದ ವಸತಿಗಳನ್ನು ನಿರ್ಮಿಸಿದ್ದಲ್ಲಿ, ಆ ವಟಾರಕ್ಕೆ "ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ರವರ ವಟಾರ" ಎಂದು ಹೆಸರಿಟ್ಟು ಕೃತಜ್ಞಪೂರ್ವಕವಾಗಿ ಸ್ಮರಿಸುವುದಾಗಿ ಭರವಸೆ ನೀಡಿದರು.

ಪತ್ರಕರ್ತರ ಮನವಿ ಆಲಿಸಿದ ಶಾಸಕ ಡಾ. ಎನ್.ಟಿ. ಶ್ರೀನಿವಾಸ್, ಸರ್ಕಾರದಲ್ಲಿ ಇದಕ್ಕೆ ಪ್ರತ್ಯೇಕ ಅವಕಾಶವಿರುವ ಸಾಧ್ಯತೆ ಕಡಿಮೆ ಎಂದು ತಿಳಿಸಿದರು. ಆದಾಗ್ಯೂ, ಸಂಬಂಧಪಟ್ಟ ಇಲಾಖೆಗಳು, ಸ್ಥಳೀಯ ಹಾಗೂ ತಾಲೂಕಾಡಳಿತದೊಂದಿಗೆ ಮತ್ತು ಉನ್ನತಾಧಿಕಾರಿಗಳೊಂದಿಗೆ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದರು. ಸ್ಥಳೀಯ ಹಾಗೂ ನಿರಾಶ್ರಿತ ಅರ್ಹ ಪತ್ರಕರ್ತರು ನಿಯಮಾನುಸಾರ ವಸತಿ ಸೌಕರ್ಯಕ್ಕಾಗಿ ಮನವಿ ಸಲ್ಲಿಸಿದರೆ, ಕಾನೂನಿನ ಪ್ರಕಾರ ವಸತಿ ಯೋಜನೆಗಳಡಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಸಕರು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಭೀಮಣ್ಣ ಗಜಾಪುರ್ ಸೇರಿದಂತೆ ಪಟ್ಟಣ ಮತ್ತು ತಾಲೂಕಿನ ಅನೇಕ ಪತ್ರಕರ್ತರು ಉಪಸ್ಥಿತರಿದ್ದರು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವರದಿಗಾರ ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    15 hrs ago
  • ರಾಜ್ಯ ಸರ್ಕಾರ ಸಚಿವ ಸಂಪುಟ ಪುನರ್‌ರಚನೆಗೆ ಮುಂದಾದಲ್ಲಿ, ಬಂಜಾರಾ ಸಮಾಜದಿಂದ ಕಾಂಗ್ರೆಸ್‌ನ ಏಕೈಕ ಶಾಸಕರಾಗಿರುವ ಹಾವೇರಿ ಶಾಸಕ ಹಾಗೂ ವಿಧಾನ ಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಸಮಾಜದ ಯುವ ಮುಖಂಡ ಸುಧೀರ ಲಮಾಣಿ ಒತ್ತಾಯಿಸಿದ್ದಾರೆ. ಶಿಗ್ಗಾವಿಯಲ್ಲಿ ಈ ಕುರಿತು ಪ್ರಕಟಣೆ ನೀಡಿರುವ ಸುಧೀರ ಲಮಾಣಿ, ರಾಜ್ಯದ ಪರಿಶಿಷ್ಟ ಜಾತಿಯ ೩೬ ಮೀಸಲು ಮತಕ್ಷೇತ್ರಗಳು ಹಾಗೂ ಪರಿಶಿಷ್ಟ ಪಂಗಡದ ೧೫ ಮೀಸಲು ಮತಕ್ಷೇತ್ರಗಳಲ್ಲಿ ಬಂಜಾರ ಸಮುದಾಯದ ಮತ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ. ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ, ಕಳೆದ ಬಿಜೆಪಿ ಸರ್ಕಾರದ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣ ಮತ್ತು ಶಿಫಾರಸುಗಳನ್ನು ಖಂಡಿಸಿ, "ಬಿಜೆಪಿ ಹಠಾವೋ-ತಾಂಡಾ ಬಚಾವೋ" ಘೋಷಣೆಯೊಂದಿಗೆ ರಾಜ್ಯದ ೪೦ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಸಮುದಾಯ ಪ್ರಮುಖ ಪಾತ್ರ ವಹಿಸಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ರಾಜ್ಯದ ೩೦ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಬಂಜಾರ ಸಮುದಾಯದವರು, ಏಕೈಕ ಶಾಸಕರಾದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆಯಲ್ಲಿದ್ದರು. ಆದರೆ, ಕೆಲವು ರಾಜಕೀಯ ಕಾರಣಗಳಿಂದ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೂರು ಬಾರಿ ಶಾಸಕರಾಗಿರುವ ರುದ್ರಪ್ಪ ಲಮಾಣಿ ಅವರು ೨೦೧೪ರಿಂದ ಸಂತ ಸೇವಾಲಾಲ್ ಗುರೂಜಿ ಜನ್ಮಸ್ಥಳವಾದ ಸೂರಗೊಂಡನಕೊಪ್ಪ ಮಹಾಮಠ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಮಹಾಮಠದ ಅಭಿವೃದ್ಧಿಗಾಗಿ ಸರ್ಕಾರದಿಂದ ₹೫೦ ಕೋಟಿ ಅನುದಾನ ತಂದು, ೧೫ ಎಕರೆ ಜಾಗವನ್ನು ೨೮ ಎಕರೆಗೆ ವಿಸ್ತರಿಸಿ, ಅದನ್ನು ಧಾರ್ಮಿಕ ಹಾಗೂ ಶೈಕ್ಷಣಿಕ ಉದ್ದೇಶಗಳಿಗಾಗಿ ಮೀಸಲಿಟ್ಟಿದ್ದಾರೆ. ಸರ್ಕಾರ ಬಂದು ಈಗಾಗಲೇ ಮೂರು ವರ್ಷಗಳು ಕಳೆದಿವೆ ಎಂದು ಸುಧೀರ ಲಮಾಣಿ ಉಲ್ಲೇಖಿಸಿದ್ದಾರೆ. ಹೈಕಮಾಂಡ್ ನಿರ್ದೇಶನದ ಮೇರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ಹೇಳಿರುವ ಅವರು, ಮುಂದಿನ ಸಂಪುಟ ಪುನರ್‌ರಚನೆ ಸಂದರ್ಭದಲ್ಲಿ ರುದ್ರಪ್ಪ ಲಮಾಣಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ಪುನರುಚ್ಚರಿಸಿದ್ದಾರೆ.
    1
    ರಾಜ್ಯ ಸರ್ಕಾರ ಸಚಿವ ಸಂಪುಟ ಪುನರ್‌ರಚನೆಗೆ ಮುಂದಾದಲ್ಲಿ, ಬಂಜಾರಾ ಸಮಾಜದಿಂದ ಕಾಂಗ್ರೆಸ್‌ನ ಏಕೈಕ ಶಾಸಕರಾಗಿರುವ ಹಾವೇರಿ ಶಾಸಕ ಹಾಗೂ ವಿಧಾನ ಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಸಮಾಜದ ಯುವ ಮುಖಂಡ ಸುಧೀರ ಲಮಾಣಿ ಒತ್ತಾಯಿಸಿದ್ದಾರೆ. ಶಿಗ್ಗಾವಿಯಲ್ಲಿ ಈ ಕುರಿತು ಪ್ರಕಟಣೆ ನೀಡಿರುವ ಸುಧೀರ ಲಮಾಣಿ, ರಾಜ್ಯದ ಪರಿಶಿಷ್ಟ ಜಾತಿಯ ೩೬ ಮೀಸಲು ಮತಕ್ಷೇತ್ರಗಳು ಹಾಗೂ ಪರಿಶಿಷ್ಟ ಪಂಗಡದ ೧೫ ಮೀಸಲು ಮತಕ್ಷೇತ್ರಗಳಲ್ಲಿ ಬಂಜಾರ ಸಮುದಾಯದ ಮತ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ.

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ, ಕಳೆದ ಬಿಜೆಪಿ ಸರ್ಕಾರದ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣ ಮತ್ತು ಶಿಫಾರಸುಗಳನ್ನು ಖಂಡಿಸಿ, "ಬಿಜೆಪಿ ಹಠಾವೋ-ತಾಂಡಾ ಬಚಾವೋ" ಘೋಷಣೆಯೊಂದಿಗೆ ರಾಜ್ಯದ ೪೦ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಸಮುದಾಯ ಪ್ರಮುಖ ಪಾತ್ರ ವಹಿಸಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ರಾಜ್ಯದ ೩೦ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಬಂಜಾರ ಸಮುದಾಯದವರು, ಏಕೈಕ ಶಾಸಕರಾದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆಯಲ್ಲಿದ್ದರು. ಆದರೆ, ಕೆಲವು ರಾಜಕೀಯ ಕಾರಣಗಳಿಂದ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೂರು ಬಾರಿ ಶಾಸಕರಾಗಿರುವ ರುದ್ರಪ್ಪ ಲಮಾಣಿ ಅವರು ೨೦೧೪ರಿಂದ ಸಂತ ಸೇವಾಲಾಲ್ ಗುರೂಜಿ ಜನ್ಮಸ್ಥಳವಾದ ಸೂರಗೊಂಡನಕೊಪ್ಪ ಮಹಾಮಠ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಮಹಾಮಠದ ಅಭಿವೃದ್ಧಿಗಾಗಿ ಸರ್ಕಾರದಿಂದ ₹೫೦ ಕೋಟಿ ಅನುದಾನ ತಂದು, ೧೫ ಎಕರೆ ಜಾಗವನ್ನು ೨೮ ಎಕರೆಗೆ ವಿಸ್ತರಿಸಿ, ಅದನ್ನು ಧಾರ್ಮಿಕ ಹಾಗೂ ಶೈಕ್ಷಣಿಕ ಉದ್ದೇಶಗಳಿಗಾಗಿ ಮೀಸಲಿಟ್ಟಿದ್ದಾರೆ.

ಸರ್ಕಾರ ಬಂದು ಈಗಾಗಲೇ ಮೂರು ವರ್ಷಗಳು ಕಳೆದಿವೆ ಎಂದು ಸುಧೀರ ಲಮಾಣಿ ಉಲ್ಲೇಖಿಸಿದ್ದಾರೆ. ಹೈಕಮಾಂಡ್ ನಿರ್ದೇಶನದ ಮೇರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ಹೇಳಿರುವ ಅವರು, ಮುಂದಿನ ಸಂಪುಟ ಪುನರ್‌ರಚನೆ ಸಂದರ್ಭದಲ್ಲಿ ರುದ್ರಪ್ಪ ಲಮಾಣಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ಪುನರುಚ್ಚರಿಸಿದ್ದಾರೆ.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    4 hrs ago
  • ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ದಲಿತ ಯುವಕ ರವಿಚಂದ್ರ ದೇವಪ್ಪ ಮಾದರ ಅವರ ಅಮಾನುಷ ಕೊಲೆಯನ್ನು ಖಂಡಿಸಿ, ಶಿಗ್ಗಾವಿಯಲ್ಲಿ ತಾಲೂಕು ಕರ್ನಾಟಕ ದಲಿತ ವಿಮೋಚನಾ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ತಾಲೂಕಾ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು. ರವಿಚಂದ್ರ ಮಾದರ್ ಅವರು ಎನ್.ಎಸ್. ಪೂಜಾರಿ ಅವರ ಕಂಪನಿಯಲ್ಲಿ ನಾಲ್ಕು ವರ್ಷಗಳಿಂದ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹಂಗರಗಿ ಗ್ರಾಮದ ಕ್ರಾಸ್ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಎಸ್.ಎಸ್. ಪೂಜಾರಿ ಅವರು ರವಿಚಂದ್ರ ಅವರ ತಂದೆಗೆ ದೂರವಾಣಿ ಮೂಲಕ ಮಾಹಿತಿ ನೀಡಿದಾಗ, ತಂದೆ ಸ್ಥಳಕ್ಕೆ ಭೇಟಿ ನೀಡಿ ಮಗನ ಸ್ಥಿತಿಯನ್ನು ಕಂಡು ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ತೀರ್ಮಾನಿಸಿದರು. ಈ ಕುರಿತು ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ 15 ಜನರ ವಿರುದ್ಧ ದೂರು ನೀಡಲಾಗಿದೆ. ಆದರೂ, ದೂರು ನೀಡಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸದೆ ಪೊಲೀಸರು ಮತ್ತೊಂದು ದೌರ್ಜನ್ಯ ಎಸಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಅಲ್ಲದೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಒಂದಲ್ಲಾ ಒಂದು ಕಾರಣಕ್ಕೆ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ದಲಿತ ಯುವಕನ ಸಾವಿಗೆ ನ್ಯಾಯ ಒದಗಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಆಗ್ರಹಿಸಿದೆ. ಅಮಾಯಕ ದಲಿತರ ಎಷ್ಟೋ ಕೊಲೆ ಪ್ರಕರಣಗಳಿಗೆ ನ್ಯಾಯ ಸಿಕ್ಕಿಲ್ಲ ಎಂದು ತಿಳಿಸಿದ ಅವರು, ಸರ್ಕಾರ ಈ ಪ್ರಕರಣದ ಹೊಣೆಗಾರಿಕೆಯನ್ನು ವಹಿಸಿಕೊಂಡು ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಸರ್ಕಾರಿ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತೋರಿದರೆ, ಉಗ್ರವಾದ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಪ್ರತಿಭಟನೆಯಲ್ಲಿ ತಾಲೂಕು ಕರ್ನಾಟಕ ದಲಿತ ವಿಮೋಚನಾ ಸಮಿತಿಯ ಅಧ್ಯಕ್ಷ ಮಂಜುನಾಥ ಬಾಲಪ್ಪನವರ, ಅರುಣ ನಡುವಿನಮನಿ, ಫಕ್ಕೀರೇಶ ಹರಿಜನ, ಬಸವರಾಜ ಕಟ್ಟಿಮನಿ, ದೇವರಾಜ ಹರಿಜನ, ಅಭಿಷೇಕ ಹರಿಜನ, ನಾಗರಾಜ ನಡುವಿನಮನಿ, ಅವಿನಾಶ ಬಾಲಪ್ಪನವರ, ಸಂತೋಷ ಮಾದರ, ಮಂಜುನಾಥ ಪೂಜಾರ, ರವಿ ಮಾದರ, ಆಕಾಶ ಲಮಾಣಿ, ಶಿವಾನಂದ ದೊಡ್ಡಮನಿ ಸೇರಿದಂತೆ ಸಮಿತಿಯ ಹಲವು ಸದಸ್ಯರು ಉಪಸ್ಥಿತರಿದ್ದರು.
    1
    ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ದಲಿತ ಯುವಕ ರವಿಚಂದ್ರ ದೇವಪ್ಪ ಮಾದರ ಅವರ ಅಮಾನುಷ ಕೊಲೆಯನ್ನು ಖಂಡಿಸಿ, ಶಿಗ್ಗಾವಿಯಲ್ಲಿ ತಾಲೂಕು ಕರ್ನಾಟಕ ದಲಿತ ವಿಮೋಚನಾ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ತಾಲೂಕಾ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು.

ರವಿಚಂದ್ರ ಮಾದರ್ ಅವರು ಎನ್.ಎಸ್. ಪೂಜಾರಿ ಅವರ ಕಂಪನಿಯಲ್ಲಿ ನಾಲ್ಕು ವರ್ಷಗಳಿಂದ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹಂಗರಗಿ ಗ್ರಾಮದ ಕ್ರಾಸ್ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಎಸ್.ಎಸ್. ಪೂಜಾರಿ ಅವರು ರವಿಚಂದ್ರ ಅವರ ತಂದೆಗೆ ದೂರವಾಣಿ ಮೂಲಕ ಮಾಹಿತಿ ನೀಡಿದಾಗ, ತಂದೆ ಸ್ಥಳಕ್ಕೆ ಭೇಟಿ ನೀಡಿ ಮಗನ ಸ್ಥಿತಿಯನ್ನು ಕಂಡು ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ತೀರ್ಮಾನಿಸಿದರು. ಈ ಕುರಿತು ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ 15 ಜನರ ವಿರುದ್ಧ ದೂರು ನೀಡಲಾಗಿದೆ. ಆದರೂ, ದೂರು ನೀಡಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸದೆ ಪೊಲೀಸರು ಮತ್ತೊಂದು ದೌರ್ಜನ್ಯ ಎಸಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಅಲ್ಲದೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಒಂದಲ್ಲಾ ಒಂದು ಕಾರಣಕ್ಕೆ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

ದಲಿತ ಯುವಕನ ಸಾವಿಗೆ ನ್ಯಾಯ ಒದಗಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಆಗ್ರಹಿಸಿದೆ. ಅಮಾಯಕ ದಲಿತರ ಎಷ್ಟೋ ಕೊಲೆ ಪ್ರಕರಣಗಳಿಗೆ ನ್ಯಾಯ ಸಿಕ್ಕಿಲ್ಲ ಎಂದು ತಿಳಿಸಿದ ಅವರು, ಸರ್ಕಾರ ಈ ಪ್ರಕರಣದ ಹೊಣೆಗಾರಿಕೆಯನ್ನು ವಹಿಸಿಕೊಂಡು ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಸರ್ಕಾರಿ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತೋರಿದರೆ, ಉಗ್ರವಾದ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಪ್ರತಿಭಟನೆಯಲ್ಲಿ ತಾಲೂಕು ಕರ್ನಾಟಕ ದಲಿತ ವಿಮೋಚನಾ ಸಮಿತಿಯ ಅಧ್ಯಕ್ಷ ಮಂಜುನಾಥ ಬಾಲಪ್ಪನವರ, ಅರುಣ ನಡುವಿನಮನಿ, ಫಕ್ಕೀರೇಶ ಹರಿಜನ, ಬಸವರಾಜ ಕಟ್ಟಿಮನಿ, ದೇವರಾಜ ಹರಿಜನ, ಅಭಿಷೇಕ ಹರಿಜನ, ನಾಗರಾಜ ನಡುವಿನಮನಿ, ಅವಿನಾಶ ಬಾಲಪ್ಪನವರ, ಸಂತೋಷ ಮಾದರ, ಮಂಜುನಾಥ ಪೂಜಾರ, ರವಿ ಮಾದರ, ಆಕಾಶ ಲಮಾಣಿ, ಶಿವಾನಂದ ದೊಡ್ಡಮನಿ ಸೇರಿದಂತೆ ಸಮಿತಿಯ ಹಲವು ಸದಸ್ಯರು ಉಪಸ್ಥಿತರಿದ್ದರು.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    6 hrs ago
  • ಇಳಕಲ್ ತಾಲೂಕು ಅಹಿಂದ ಸಂಘಟನೆಯು ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದೆ. ಇದರೊಂದಿಗೆ, ಸಂಘಟನೆಯು ತಮ್ಮ ಸಂಪುಟದಲ್ಲಿ ರಾಜ್ಯದ ಅಹಿಂದ ನಾಯಕರಾದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದೆ. ಜೊತೆಗೆ, ಅಹಿಂದ ತತ್ವಗಳ ಆದರ್ಶಗಳನ್ನು ಹೊಂದಿರುವ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದೂ ಅಹಿಂದ ಸಂಘಟನೆಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಅಹಿಂದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ರಫೀಕ್ ಮುಲ್ಲಾ, ಅಹಿಂದ ರಾಜ್ಯ ಅಲ್ಪಸಂಖ್ಯಾತ ಯುವ ಘಟಕದ ಅಧ್ಯಕ್ಷ ಮೈಹಿನು ಕಂದಗಲ್ಲ, ಅಹಿಂದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪರಶುರಾಮ ತಂಬಲಗಡ್ಡಿ, ಚಂದ್ರಶೇಖರ್ ಬಸರಗಿಡದ, ಸಂಗಪ್ಪ ಕುರಿ, ರಾಜು ಭಾಗವಾನ್, ಮತ್ತು ಸಂಗಪ್ಪ ತೊಂಡಿಹಾಳ ಸೇರಿದಂತೆ ಇತರ ಅಹಿಂದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇಳಕಲ್ ತಾಲೂಕು ಅಹಿಂದ ಸಂಘಟನೆಯು ಈ ಬೇಡಿಕೆಗಳನ್ನು ಪುನರುಚ್ಚರಿಸಿದೆ.
    1
    ಇಳಕಲ್ ತಾಲೂಕು ಅಹಿಂದ ಸಂಘಟನೆಯು ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದೆ. ಇದರೊಂದಿಗೆ, ಸಂಘಟನೆಯು ತಮ್ಮ ಸಂಪುಟದಲ್ಲಿ ರಾಜ್ಯದ ಅಹಿಂದ ನಾಯಕರಾದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದೆ. ಜೊತೆಗೆ, ಅಹಿಂದ ತತ್ವಗಳ ಆದರ್ಶಗಳನ್ನು ಹೊಂದಿರುವ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದೂ ಅಹಿಂದ ಸಂಘಟನೆಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ.

ಈ ಪತ್ರಿಕಾಗೋಷ್ಠಿಯಲ್ಲಿ ಅಹಿಂದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ರಫೀಕ್ ಮುಲ್ಲಾ, ಅಹಿಂದ ರಾಜ್ಯ ಅಲ್ಪಸಂಖ್ಯಾತ ಯುವ ಘಟಕದ ಅಧ್ಯಕ್ಷ ಮೈಹಿನು ಕಂದಗಲ್ಲ, ಅಹಿಂದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪರಶುರಾಮ ತಂಬಲಗಡ್ಡಿ, ಚಂದ್ರಶೇಖರ್ ಬಸರಗಿಡದ, ಸಂಗಪ್ಪ ಕುರಿ, ರಾಜು ಭಾಗವಾನ್, ಮತ್ತು ಸಂಗಪ್ಪ ತೊಂಡಿಹಾಳ ಸೇರಿದಂತೆ ಇತರ ಅಹಿಂದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇಳಕಲ್ ತಾಲೂಕು ಅಹಿಂದ ಸಂಘಟನೆಯು ಈ ಬೇಡಿಕೆಗಳನ್ನು ಪುನರುಚ್ಚರಿಸಿದೆ.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಯಾಗಲಿರುವ ಹಿನ್ನೆಲೆಯಲ್ಲಿ, ಹುನಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ದೊರೆಯಬೇಕೆಂದು ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ. ಇಳಕಲ್ಲದ ಕಿಲ್ಲಾ ಓಣಿಯ ಕಾಶಪ್ಪನವರ ಅಭಿಮಾನಿಗಳು ಶ್ರೀಶೈಲದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಈ ಬೇಡಿಕೆಯನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅಭಿಮಾನಿಗಳು, ಶಾಸಕ ವಿಜಯಾನಂದ ಕಾಶಪ್ಪನವರಿಗೆ ಹೈಕಮಾಂಡ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾವಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕಾಶಪ್ಪನವರಿಗೆ ಜೈಕಾರ ಕೂಗುವ ಮೂಲಕ ತಮ್ಮ ಬೆಂಬಲ ಮತ್ತು ಆಶಯವನ್ನು ಪ್ರದರ್ಶಿಸಿದರು.
    1
    ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆಯಾಗಲಿರುವ ಹಿನ್ನೆಲೆಯಲ್ಲಿ, ಹುನಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ದೊರೆಯಬೇಕೆಂದು ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ. ಇಳಕಲ್ಲದ ಕಿಲ್ಲಾ ಓಣಿಯ ಕಾಶಪ್ಪನವರ ಅಭಿಮಾನಿಗಳು ಶ್ರೀಶೈಲದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಈ ಬೇಡಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅಭಿಮಾನಿಗಳು, ಶಾಸಕ ವಿಜಯಾನಂದ ಕಾಶಪ್ಪನವರಿಗೆ ಹೈಕಮಾಂಡ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾವಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕಾಶಪ್ಪನವರಿಗೆ ಜೈಕಾರ ಕೂಗುವ ಮೂಲಕ ತಮ್ಮ ಬೆಂಬಲ ಮತ್ತು ಆಶಯವನ್ನು ಪ್ರದರ್ಶಿಸಿದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    14 hrs ago
  • ಶಾಸಕ ಯಾಸೀರ್ ಖಾನ್ ಪಠಾಣ ಅವರು ಹೈಕಮಾಂಡ್​ಗೆ ಮನವಿಯೊಂದನ್ನು ಸಲ್ಲಿಸಿದ್ದಾರೆ. ಈ ಮನವಿಯಲ್ಲಿ, ಒಟ್ಟು ಹತ್ತು ಅಲ್ಪಸಂಖ್ಯಾತ ಶಾಸಕರಲ್ಲಿ ನಾಲ್ಕು ಜನರಿಗೆ ಸಚಿವ ಸ್ಥಾನ ನೀಡಬೇಕೆಂದು ಕೋರಲಾಗಿದೆ.
    1
    ಶಾಸಕ ಯಾಸೀರ್ ಖಾನ್ ಪಠಾಣ ಅವರು ಹೈಕಮಾಂಡ್​ಗೆ ಮನವಿಯೊಂದನ್ನು ಸಲ್ಲಿಸಿದ್ದಾರೆ. ಈ ಮನವಿಯಲ್ಲಿ, ಒಟ್ಟು ಹತ್ತು ಅಲ್ಪಸಂಖ್ಯಾತ ಶಾಸಕರಲ್ಲಿ ನಾಲ್ಕು ಜನರಿಗೆ ಸಚಿವ ಸ್ಥಾನ ನೀಡಬೇಕೆಂದು ಕೋರಲಾಗಿದೆ.
    user_H M ಹರಕುಣಿ
    H M ಹರಕುಣಿ
    Local News Reporter Haveri, Karnataka•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.