Shuru
Apke Nagar Ki App…
ತಮಾಷೆ ಹಾಗೂ ಆರೋಗ್ಯಕರವಾದಂತ ವಿಡಿಯೋ ಇದು ನೋಡಿ #onlinetv24x7
Onlinetv24x7
ತಮಾಷೆ ಹಾಗೂ ಆರೋಗ್ಯಕರವಾದಂತ ವಿಡಿಯೋ ಇದು ನೋಡಿ #onlinetv24x7
More news from ಕರ್ನಾಟಕ and nearby areas
- ₹2,000 ಮೇಲ್ಪಟ್ಟ UPI ಪಾವತಿಗೆ ಹೊಸ ಶುಲ್ಕ? ಅಕ್ಟೋಬರ್ 5ರಿಂದ MDR ನಿಯಮ; NPCI ಸ್ಪಷ್ಟನೆ ₹2,000 ಮೇಲ್ಪಟ್ಟ UPI ಪಾವತಿಗೆ ಹೊಸ ಶುಲ್ಕ? ಅಕ್ಟೋಬರ್ 5ರಿಂದ MDR ನಿಯಮ; NPCI ಸ್ಪಷ್ಟನೆ1
- ಹಲಸೂರು ಕೆರೆ ಕಲ್ಯಾಣಿಯಲ್ಲಿ ದೊಡ್ಡ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಕಾರ್ಯಕ್ಕೆ ಚಾಲನೆ ಬೆಂಗಳೂರು:ಕೇಂದ್ರ ನಗರ ಪಾಲಿಕೆಯ ಹಲಸೂರು ಕೆರೆ ಕಲ್ಯಾಣಿಯಲ್ಲಿ ಆಹಾರ ಖಾತೆ ಸಚಿವರು ಹಾಗು ಶಿವಾಜಿನಗರ ಶಾಸಕರಾದ ರಿಜ್ವಾನ್ ಹರ್ಷದ್ ರವರು ಹಲಸೂರು ಕೆರೆ ಕಲ್ಯಾಣಿಯಲ್ಲಿ ದೊಡ್ಡ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಕಾರ್ಯಕ್ಕೆ ಚಾಲನೆ ಇಂದು ಸಂಜೆ ನೀಡಿದರು. ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಜಗದೀಶ್ ಜಿ ರವರು ಹಾಗು ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ವೆಂಕಟಾಚಲಪತಿ ಆರ್ ರವರು ಉಪಸ್ಥಿತರಿದ್ದಾರೆ. ಆಯುಕ್ತರು ಅಪರ ಆಯುಕ್ತರೊಂದಿಗೆ, ಜಂಟಿ ಆಯುಕ್ತರೊಂದಿಗೆ ಹಾಗು ಮುಖ್ಯ ಇಂಜಿನಿಯರ್ ಕಾರ್ಯಪಾಲಕ ಇಂಜಿನಿಯರ್ ಪೊಲೀಸ್ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳೊಂದಿಗೆ ನಿರಂತರವಾಗಿ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯದ ಸಿದ್ಧತೆ ಬಗ್ಗೆ ಅಧಿಕಾರಿಗಳೊಂದಿಗೆ ನಿರಂತರ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.1
- ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಹೆಚ್.ಸಿ.ಬಾಲಕೃಷ್ಣ ನಗರದ ಜಿಲ್ಲಾ ಪಂಚಾಯತ್ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಪೌರಾಢಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಚ್.ಸಿ.ಬಾಲಕೃಷ್ಣ ಉದ್ಘಾಟನೆ ನೇರವೇರಿಸಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು , ನಮ್ಮ ಯುವ ಜನಾಂಗ ಸಂಸತ್ತು ಹಾಗೂ ವಿಧಾನ ಸಭೆ ಕಲಾಪಗಳಲ್ಲಿ ಯಾವ ರೀತಿ ಚರ್ಚೆ ಮಾಡಬೇಕು, ಯಾವ ರೀತಿ ಪಾಲ್ರ್ಗೊಳ್ಳಬೇಕು ಹಾಗೂ ರಾಷ್ಟ್ರೀಯ ಸಮಸ್ಯೆಗಳನ್ನು ಯಾವ ರೀತಿ ಪ್ರಸ್ತಾಪ ಮಾಡಬೇಕು ಎಂಬುದರ ಅರಿವು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಇನ್ನೂ ತಿಂಗಳ ಕಾಲಾವಕಾಶದಲ್ಲಿ ಪ್ರತಿ ತಾಲ್ಲೂಕು ಮಟ್ಟದಲ್ಲಿ ಮಕ್ಕಳ ಸಂಸತ್ತ ಕಾರ್ಯಕ್ರಮ ಅಯೋಜಿಸಿ ನಂತರ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರ ಆದೇಶ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಬಾಲಕೃಷ್ಣ, ರಾಮನಗರ ಶಾಸಕ ಹೆಚ್.ಎ.ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕಾರ್, ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು1
- ಬ್ರೇಕಿಂಗ್ ನ್ಯೂಸ್ : ಪಾವಗಡ ಪೊಲೀಸರ ಭರ್ಜರಿ ಬೇಟೆ: ಬಲೆಗೆ ಬಿದ್ದ ನಕ್ಸಲ್ ವೆಂಕಟೇಶ್1
- ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ. ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ. ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಆರೋಪಿಗಳ ಬಂಧನಕ್ಕೆ ಪ್ರತಿಭಟನೆ ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು. ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.3
- ರಾಜಕಾರಣ ಮಾಡಲು ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿದ್ದಾರೆ - ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ಮಂಡ್ಯ-ಮದ್ದೂರಿನಲ್ಲಿ ನಡೆಯುತ್ತಿರುವ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸುತ್ತಿರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಉಸ್ತುವಾರಿ ಸಚಿವ ಚಲುವಾರಾಯಸ್ವಾಮಿ, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಬಾರದ ಬಿಜೆಪಿ ನಾಯಕರು, ಗಣೇಶ ವಿಸರ್ಜನೆ ನೆಪದಲ್ಲಿ ರಾಜಕಾರಣ ಮಾಡಲು ಮಂಡ್ಯಕ್ಕೆ ಬರುತ್ತಿದ್ದಾರೆ ಬರುತ್ತಿದ್ದಾರೆ. ನಮ್ಮ ಜಿಲ್ಲೆಯ ಜನರಿಗೆ ಗಣೇಶನನ್ನು ಹೇಗೆ ವಿಸರ್ಜಿಸಬೇಕು ಎಂಬುದು ಗೊತ್ತಿದೆ, ಬಿಜೆಪಿಯವರಿಂದ ಕಲಿಯ ಬೇಕಿಲ್ಲ ರಾಜಕೀಯವಾಗಿ ಮಾತನಾಡಲು ಬೇರೆ ವಿಷಯವಿಲ್ಲದ ಕಾರಣ ಬಿಜೆಪಿ ಇಲ್ಲಿ ರಾಜಕೀಯ ಮಾಡಲು ಬರುತ್ತಿದೆ, ಅವರು ಜಿಲ್ಲೆ ಪ್ರವೇಶಿಸದಂತೆ ಪೊಲೀಸ್ ಭದ್ರತೆ ಒದಗಿಸಿ ವಾಪಸ್ ಕಳುಹಿಸಲಾಗುವುದು ಎಂದುಚಲುವರಾಯಸ್ವಾಮಿ ಗಣೇಶ ವಿಸರ್ಜನೆಗೆ ಬರುತ್ತಿರುವ ಬಾಜಪಾ ನಾಯಕರಿಗೆ ಎಚ್ಚರಿಕೆ ನೀಡಿದರು.1
- ರಸ್ತೆ ಬದಿಯಲ್ಲೇ ಮದ್ಯಪಾನ; ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ ಕಾನೂನಿನ ಭಯವಿಲ್ಲವೇ? ಕ್ರಮಕ್ಕೆ ಸ್ಥಳೀಯರಿಂದ ಆಗ್ರಹ ರಸ್ತೆ ಬದಿಯಲ್ಲೇ ಮದ್ಯಪಾನ; ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ ಕಾನೂನಿನ ಭಯವಿಲ್ಲವೇ? ಕ್ರಮಕ್ಕೆ ಸ್ಥಳೀಯರಿಂದ ಆಗ್ರಹ1
- ದೇವನಹಳ್ಳಿಯಲ್ಲಿ ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಬೆಂಗಳೂರು:ಎತ್ತಿನ ಗಾಡಿಯಲ್ಲಿ ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ಗ್ರಾಮಸ್ಥರು ವಿಸರ್ಜನೆ ಮಾಡಿದ್ದಾರೆ.ದೇವನಹಳ್ಳಿಯ ಪ್ರಸನ್ನಹಳ್ಳಿಯ ಜಟಾಯು ಯುವಸೇನೆವತಿಯಿಂದ ಗಣೇಶೋತ್ಸವ ಆಯೋಜನೆ ಮಾಡಲಾಗಿದ್ದು,ಯಾವುದೆ ಡಿಜೆ ಬಳಕೆ ಮಾಡದೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಸಾಂಪ್ರದಾಯಿಕವಾಗಿ ಮೆರವಣಿಗೆ ಮಾಡಲಾಗಿದೆ.ಎತ್ತಿನಗಾಡಿ ಮತ್ತು ಮಹಿಳೆಯರಿಂದ ತಟ್ಟೆಗಳಲ್ಲಿ ಗಣಪತಿ ಮೂರ್ತಿಗಳ ಹೊತ್ತು ಪ್ರಸನ್ನಹಳ್ಳಿ ಇಂದ ಚಿಕ್ಕಕೆರೆವರೆಗೆ ಮೆರವಣಿಗೆ ಮಾಡಿ ಪರಿಸರ ಸ್ನೇಹಿ ಮೂರ್ತಿಗಳ ವಿಸರ್ಜನೆ ಮಾಡಿದ್ದಾರೆ.1
- ಹೆಚ್ಡಿಕೆ ಕೇಂದ್ರ ಮಂತ್ರಿಯಂತೆ ವರ್ತಿಸಲಿ- ಹೆಚ್.ಸಿ.ಬಾಲಕೃಷ್ಣ ವ್ಯಂಗ್ಯ :ಹೆಚ್ಡಿಕೆ ಕೇಂದ್ರ ಮಂತ್ರಿಯಂತೆ ವರ್ತಿಸಲಿ, ಗ್ರಾಮ ಪಂಚಾಯತಿ ಸದಸ್ಯರಂತೆ ಅಲ್ಲ - ಪೌರಾಢಳಿತ ಸಚಿವ ಹೆಚ್.ಸಿ.ಬಾಲಕೃಷ್ಣ: ನೈಸ್, ಕೆಪಿಎಸ್ಸಿ ಹಗರಣ ಹಾಗೂ ಬಿಡದಿ ಟೌನ್ ಶಿಪ್ ವಿಚಾರವಾಗಿ ನಾವು ಧ್ವನಿ ಎತ್ತಿದ್ದಕ್ಕೆ ಪ್ರಜ್ವಲ್ ವಿಚಾರ ಮುನ್ನೆಲೆಗೆ ತಂದಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ ಕ್ಕೆ ರಾಮನಗರದಲ್ಲಿ ಪ್ರತಿಕ್ರಿಯೆ ನೀಡಿದ ಪೌರಾಢಳಿತ ಸಚಿವ ಹೆಚ್.ಸಿ.ಬಾಲಕೃಷ್ಣ .ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಆ ಪ್ರಕರಣಗಳಿಗೂ ಏನು ಸಂಬಂಧ.? ಹೀಗೆ ಮಾತನಾಡಿಯೇ ಪ್ರಜ್ವಲ್ ರನ್ನ ಜೈಲಿಗೆ ಕಳುಹಿಸಿದ್ರು. ಪ್ರಜ್ವಲ್ ರೇವಣ್ಣ ಜೈಲಲ್ಲೇ ಇರಬೇಕು ಅನ್ನೋದು ಕುಮಾರಸ್ವಾಮಿ ಅಭಿಲಾಷೆ. ಜವಾಬ್ದಾರಿಯುತ ಮಂತ್ರಿ ಸ್ವಲ್ಪ ಗೌರವಯುತವಾಗಿ ಮಾತನಾಡಿ. ಕೇಂದ್ರ ಮಂತ್ರಿ ಅನ್ನೋದನ್ನ ಮರೆತು ಪಂಚಾಯ್ತಿ ಮೆಂಬರ್ ರೀತಿ ಆಡ್ತಿದ್ದಾರೆ. ಪ್ರಜ್ವಲ್ ಮುಗಿಸುವ ತನಕ ಕುಮಾರಸ್ವಾಮಿ ಸುಮ್ಮನಿರಲ್ಲ. ಎಂದು ಸಚಿವ ಹೆಚ್.ಸಿ.ಬಾಲಕೃಷ್ಣ, ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು1