ಬಿಡದಿ ಜೆಡಿಎಸ್ ಮುಖಂಡ ಕೆಂಚನಕುಪ್ಪೆ ರಮೇಶ್ ಕಾಂಗ್ರೆಸ್ ಸೇರ್ಪಡೆ ಇಂದು ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಿಡದಿಯ ಜೆಡಿಎಸ್ ಪಕ್ಷದ ಪ್ರಭಾವಿ ದಲಿತ ಮುಖಂಡ ಹಾಗೂ ಮಾಜಿ ತಾ.ಪಂ. ಸದಸ್ಯರಾದ ಕೆಂಚನಕುಪ್ಪೆ ರಮೇಶ್ ಜೆಡಿಎಸ್ ಪಕ್ಷ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪೌರಾಢಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಬಾಲಕೃಷ್ಣ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಸಮ್ಮುಖದಲ್ಲಿ ರಮೇಶ್ ಕಾಂಗ್ರೆಸ್ ಸೇರ್ಪಡೆಯಾದರು. ಮಾಗಡಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಎ.ಮಂಜುನಾಥ್ ಅವರ ಅತ್ಮೀಯ ವಲಯದಲ್ಲಿ ಗುರಿತಿಸಿಕೊಂಡಿದ್ದ ಕೆಂವನಕುಪ್ಪೆ ರಮೇಶ್, ಬಿಡದಿ ಟೌನ್ ಶಿಪ್ ಯೋಜನೆಯನ್ನು ಜೆಡಿಎಸ್ ಪಕ್ಷ ವಿರೋದಿಸಿದ ನಂತರ ಪಕ್ಷದಿಂದ ಅಂತರಕಾಯ್ದುಕೊಂಡಿದ್ದರು ಅಲ್ಲದೇ ಟೌನ್ ಶಿಪ್ ಪರವಾದ ಸಭೆಗಳಲ್ಲಿ ಕಾಣಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪ್ರಮುಖ ಮುಖಂಡರಾದ ಕೆ. ಕೃಷ್ಣಮೂರ್ತಿ ಹಾಗೂ ಜಿಬಿಎ ಅಧ್ಯಕ್ಷರಾದ ಗಾಣಕಲ್ ನಟರಾಜ್ ಉಪಸ್ಥಿತರಿದ್ದು ಹೊಸಬರನ್ನು ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು.
ಬಿಡದಿ ಜೆಡಿಎಸ್ ಮುಖಂಡ ಕೆಂಚನಕುಪ್ಪೆ ರಮೇಶ್ ಕಾಂಗ್ರೆಸ್ ಸೇರ್ಪಡೆ ಇಂದು ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಿಡದಿಯ ಜೆಡಿಎಸ್ ಪಕ್ಷದ ಪ್ರಭಾವಿ ದಲಿತ ಮುಖಂಡ ಹಾಗೂ ಮಾಜಿ ತಾ.ಪಂ. ಸದಸ್ಯರಾದ ಕೆಂಚನಕುಪ್ಪೆ ರಮೇಶ್ ಜೆಡಿಎಸ್ ಪಕ್ಷ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪೌರಾಢಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಬಾಲಕೃಷ್ಣ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಸಮ್ಮುಖದಲ್ಲಿ ರಮೇಶ್ ಕಾಂಗ್ರೆಸ್ ಸೇರ್ಪಡೆಯಾದರು. ಮಾಗಡಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಎ.ಮಂಜುನಾಥ್ ಅವರ ಅತ್ಮೀಯ ವಲಯದಲ್ಲಿ ಗುರಿತಿಸಿಕೊಂಡಿದ್ದ ಕೆಂವನಕುಪ್ಪೆ ರಮೇಶ್, ಬಿಡದಿ ಟೌನ್ ಶಿಪ್ ಯೋಜನೆಯನ್ನು ಜೆಡಿಎಸ್ ಪಕ್ಷ ವಿರೋದಿಸಿದ ನಂತರ ಪಕ್ಷದಿಂದ ಅಂತರಕಾಯ್ದುಕೊಂಡಿದ್ದರು ಅಲ್ಲದೇ ಟೌನ್ ಶಿಪ್ ಪರವಾದ ಸಭೆಗಳಲ್ಲಿ ಕಾಣಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪ್ರಮುಖ ಮುಖಂಡರಾದ ಕೆ. ಕೃಷ್ಣಮೂರ್ತಿ ಹಾಗೂ ಜಿಬಿಎ ಅಧ್ಯಕ್ಷರಾದ ಗಾಣಕಲ್ ನಟರಾಜ್ ಉಪಸ್ಥಿತರಿದ್ದು ಹೊಸಬರನ್ನು ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು.
- ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ ಚನ್ನಪಟ್ಟಣ--ತಂತ್ರಜ್ಞಾನದ ಯುಗದಲ್ಲಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್ ಅನ್ನು ಸಂಸ್ಥೆಯ ಕಾರ್ಯ ದರ್ಶಿಗಳಾದ ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.1
- ದೊಡ್ಡಆಲಹಳ್ಳಿಯಲ್ಲಿ ಗೌರಿ–ಗಣೇಶ ಹಬ್ಬ ಆಚರಣೆ: ಮಹಿಳೆಯರೊಂದಿಗೆ ಸರಳವಾಗಿ ಬೆರೆತ ಸಿಎಂ ಪತ್ನಿ ಶ್ರೀಮತಿ ಉಷಾ ಕನಕಪುರ: ತಾಲೂಕಿನ ದೊಡ್ಡಆಲಹಳ್ಳಿ ಗ್ರಾಮದಲ್ಲಿ ಗೌರಿ–ಗಣೇಶ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ಉಷಾ ಅವರು ತಂಬಿಟ್ಟಿನ ಆರತಿಯೊಂದಿಗೆ ಆಗಮಿಸಿ ನಾಗರಕಲ್ಲಿಗೆ ತನಿ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿಯವರ ಪತ್ನಿ ಎಂಬ ಯಾವುದೇ ಅಹಂ ಪ್ರದರ್ಶಿಸದೆ, ಗ್ರಾಮದ ಮಹಿಳೆಯರೊಂದಿಗೆ ಸಾಮಾನ್ಯ ಮಹಿಳೆಯಂತೆ ಬೆರೆತು ಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಗ್ರಾಮೀಣ ಸಂಪ್ರದಾಯದಂತೆ ನಾಗರಕಲ್ಲಿಗೆ ಪೂಜೆ ಸಲ್ಲಿಸಿ, ಕುಟುಂಬ ಹಾಗೂ ರಾಜ್ಯದ ಒಳಿತಿಗಾಗಿ ಪ್ರಾರ್ಥಿಸಿದರು. ಪೂಜೆ ಬಳಿಕ ಗ್ರಾಮದ ಮಹಿಳೆಯರು ಹಾಗೂ ಮಕ್ಕಳು ಉಷಾ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಈ ವೇಳೆ ಉಷಾ ಅವರು ಗ್ರಾಮದ ಮಹಿಳೆಯರೊಂದಿಗೆ ಆತ್ಮೀಯವಾಗಿ ಬೆರೆತು, ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಉಷಾ ಅವರ ಸರಳತೆ ಹಾಗೂ ಗ್ರಾಮಸ್ಥರೊಂದಿಗೆ ಆತ್ಮೀಯವಾಗಿ ಬೆರೆತ ನಡೆ ಸ್ಥಳೀಯರ ಗಮನ ಸೆಳೆಯಿತು1
- ಪಟ್ಟಣದಲ್ಲಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಿವೇಶನಗಳ ಹಂಚಿಕೆ ಕಾರ್ಯಕ್ಕೆ ಸಚಿವ ನರೇಂದ್ರಸ್ವಾಮಿ ಚಾಲನೆ ಮಳವಳ್ಳಿ ; ಕಳೆದ 45 ವರ್ಷಗ ಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟ ಣದ ಶಾಂತಿ ಕಾಲೇಜು ಮುಂಭಾ ಗದ 33 ಎಕರೆ ನಿವೇಶನ ಹಂಚಿಕೆ ಕಾರ್ಯಕ್ಕೆ ಮುಕ್ತಿ ದೊರಕಿದ್ದು ನಿವೇಶನ ಹಂಚಿಕೆ ಕಾರ್ಯಕ್ಕೆ ಕೃಷಿ ಸಚಿವರೂ ಅದ ಶಾಸಕ ಪಿ ಎಂ ನರೇಂದ್ರಸ್ವಾಮಿ ವಿದ್ಯುಕ್ತ ಚಾಲನೆ ನೀಡಿದರು. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ನಿವೇಶನ ಆವರಣದಲ್ಲಿ ಮಂಗಳವಾರ ಸಾಯಂಕಾಲ 5.30 ರ ಸಮಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಲಾಟರಿ ಮೂಲಕ ಫಲಾನುಭವಿಗಳ ಸೈಟ್ ಸಂಖ್ಯೆಯನ್ನು ಅವರೇ ಆಯ್ಕೆ ಮಾಡಿಕೊಳ್ಳುವ ಸಚಿವ ನರೇಂದ್ರಸ್ವಾಮಿ ನಿವೇಶನ ಹಂಚಿಕೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಕಳೆದ 45 ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಕಾಲದಲ್ಲಿ ಭೂಸ್ವಾಧೀನ ವಾಗಿದ್ದ ಈ ನಿವೇಶನ ಜಮೀನಿನ ಮಾಲೀಕರು ಹಾಗೂ ಪುರಸಭೆ ನಡುವಿನ ವ್ಯಾಜ್ಯ ಹೈಕೋಟ್೯ ಮೆಟ್ಟಲೇ ರಿದ ಪರಿಣಾಮ ಅಂದಿನಿಂ ದಲೂ ನೆನೆಗುದಿಗೆ ಬಿದ್ದಿತ್ತಾ ದರೂ ತಾವು 2 ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ವೇಳೆ ಈ ಹಂಚಿಕೆ ಕಾರ್ಯಕ್ಕೆ ಚಾಲನೆ ನೀಡಿದ್ದಾಗಿ ತಿಳಿಸಿದರು. ಅಂದು ಜಮೀನಿನ ಮಾಲೀಕರ ಜೊತೆ ಚೆರ್ಚೆ ನಡೆಸಿ ವಿವಾದ ಬಗೆಹರಿಸಿದ್ದರ ಜೊತೆಗೆ ನ್ಯಾಯಾಲಯದ ತಡೆಯಾಜ್ಞೆ ತೆರೆವು ಗೊಳಿಸಿ ಜನರಿಗೆ ನೀಡಿದ ಭರವಸೆಯಂತೆ ಇದೀಗ ನಿವೇಶ ನಗಳ ಹಂಚಿಕೆಗೆ ಇಂದು ಚಾಲನೆ ನೀಡುತ್ತಿರುವುದಾಗಿ ಹೇಳಿದರು. ಇಂದು ಸೈಟ್ ನಂಬರ್ ಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದ್ದು ಸಧ್ಯದಲ್ಲಿ ಮುಖ್ಯಮಂತ್ರಿಗಳಿಂದ ಹಕ್ಕು ಪತ್ರ ವಿತರಿಸುವುದಾಗಿ ತಿಳಿಸಿದ ಅವರು ನಿವೇಶ ಹಂಚಿಕೆ ವಿಚಾರದಲ್ಲಿ ಹಿಂದಿನವರಂತೆ ರಾಜಕಾರಣ ಮಾಡದೆ ಬಡ ಪಲಾನುಭವಿಗಳಿಗೆ ಪ್ರಾಮಾಣಿ ಕವಾಗಿ ನಿವೇಶನ ದೊರಕಿಸಿ ಕೊಡುತ್ತಿರುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ನಿವೇಶನ ಹಂಚಿಕೆ ಯನ್ನು ಪಾರದರ್ಶಕವಾಗಿ ನಡೆಸುತ್ತಿರುವ ಸಚಿವ ಪಿ ಎಂ ನರೇಂದ್ರಸ್ವಾಮಿ ಅವರ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಜಿ ಪಂ ಸಿಇಒ ನಂದಿನಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ , ನಗರಾಭಿವೃದ್ದಿ ಇಲಾಖೆ ಯೋಜನಾಧಿಕಾರಿ ಚಂದ್ರ ಶೇಖರ್. ಮುಖ್ಯಾಧಿ ಕಾರಿ ನಾಗರತ್ನ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿ ದ್ದರು.1
- ಗೌರಿ ಗಣೇಶ ಹಬ್ಬಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ: ಕೃಷಿ ಸಚಿವ ನರೇಂದ್ರಸ್ವಾಮಿ ಗೌರಿ ಗಣೇಶ ಹಬ್ಬ ಅಂಗವಾಗಿ ನಿಮ್ಮೆಲ್ಲರಿಗೂ ಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ ಎಂದು ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದರು. ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನದ ಆವರಣದಲ್ಲಿ ನಗರಾಭಿವೃದ್ದಿ ಇಲಾಖೆ , ರಾಜೀವ್ ಗಾಂಧಿ ವಸತಿ ನಿಗಮ , ಜಿಲ್ಲಾಢಳಿತ, ಪುರಸಭೆ ವತಿಯಿಂದ ಆರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜಕೀಯ ವಿರೋಧವಿದ್ದರೂ ನಾನು ಅಂಜದೆ ಛಲ ಬಿಡದೆ ನಿವೇಶನ ಹಂಚಿಕೆ ಮಾಡುತ್ತಿದ್ದೇನೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು ಇದೇ ನಿವೇಶನಕ್ಕೆ ಕರೆಸಿ ವಿವಿಧ ಕಾಮಗಾರಿಗಳ ಜೊತೆಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು. ಈ ವೇಳೆ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಸೇರಿದಂತೆ ಹಲವರು ಇದ್ದರು.1
- ರಾಜಕಾರಣ ಮಾಡಲು ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿದ್ದಾರೆ - ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ಮಂಡ್ಯ-ಮದ್ದೂರಿನಲ್ಲಿ ನಡೆಯುತ್ತಿರುವ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸುತ್ತಿರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಉಸ್ತುವಾರಿ ಸಚಿವ ಚಲುವಾರಾಯಸ್ವಾಮಿ, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಬಾರದ ಬಿಜೆಪಿ ನಾಯಕರು, ಗಣೇಶ ವಿಸರ್ಜನೆ ನೆಪದಲ್ಲಿ ರಾಜಕಾರಣ ಮಾಡಲು ಮಂಡ್ಯಕ್ಕೆ ಬರುತ್ತಿದ್ದಾರೆ ಬರುತ್ತಿದ್ದಾರೆ. ನಮ್ಮ ಜಿಲ್ಲೆಯ ಜನರಿಗೆ ಗಣೇಶನನ್ನು ಹೇಗೆ ವಿಸರ್ಜಿಸಬೇಕು ಎಂಬುದು ಗೊತ್ತಿದೆ, ಬಿಜೆಪಿಯವರಿಂದ ಕಲಿಯ ಬೇಕಿಲ್ಲ ರಾಜಕೀಯವಾಗಿ ಮಾತನಾಡಲು ಬೇರೆ ವಿಷಯವಿಲ್ಲದ ಕಾರಣ ಬಿಜೆಪಿ ಇಲ್ಲಿ ರಾಜಕೀಯ ಮಾಡಲು ಬರುತ್ತಿದೆ, ಅವರು ಜಿಲ್ಲೆ ಪ್ರವೇಶಿಸದಂತೆ ಪೊಲೀಸ್ ಭದ್ರತೆ ಒದಗಿಸಿ ವಾಪಸ್ ಕಳುಹಿಸಲಾಗುವುದು ಎಂದುಚಲುವರಾಯಸ್ವಾಮಿ ಗಣೇಶ ವಿಸರ್ಜನೆಗೆ ಬರುತ್ತಿರುವ ಬಾಜಪಾ ನಾಯಕರಿಗೆ ಎಚ್ಚರಿಕೆ ನೀಡಿದರು.1
- ಹಲಗೂರಿನಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮ ಬ್ರಹ್ಮನ್ ಮಠದಲ್ಲಿ ಸ್ವರ್ಣ ಗೌರಿಗೆ ವಿಶೇಷ ಪೂಜೆ ಹಲಗೂರು ಬೃಹನ್ಮಠದಲ್ಲಿ ಸ್ವರ್ಣಗೌರಿಗೆ ವಿಶೇಷ ಪೂಜೆ. ಹಲಗೂರು: ಇಲ್ಲಿನ ಮಠದ ಬೀದಿಯಲ್ಲಿರುವ ಬೃಹನ್ಮಠದಲ್ಲಿ ಸ್ವರ್ಣ ಗೌರಿಗೆ ಮುತ್ತೈದೆಯರು ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿ ನಂತರ ಮುತ್ತೈದೆಯರಿಗೆ ಅರಿಶಿನ ಕುಂಕುಮ ನೀಡಿ ವಿಶೇಷವಾಗಿ ಪೂಜೆ ಸಲ್ಲಿಸಿ ನಮ್ಮ ಕಷ್ಟಕಾರ್ಪಣ್ಯಗಳನ್ನು ನಿವಾರಿಸುವಂತೆ ಸ್ವರ್ಣಗೌರಿಯಲ್ಲಿ ಪ್ರಾರ್ಥಿಸಿದರು. ಸೋಮವಾರ ಸಮೀಪದ ಶಿಂಷಾ ನದಿಯ ದಡದಲ್ಲಿ ಬೆಳಗಿನ ಪ್ರಾಂತ್ಯಕಾಲದ ಬ್ರಹ್ಮ ಮುಹೂರ್ತದಲ್ಲಿ ಅರಸಿನದಿಂದ ತಯಾರಿಸಿದ ಸ್ವರ್ಣ ಗೌರಿಯನ್ನು ತಂದು ಹಲಗೂರಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮುಖಾಂತರ ಹಲಗೂರಿನ ಬೃಹನ್ಮಠಕ್ಕೆ ತಂದಾಗ ಮುತ್ತೈದೆಯರು ಆರತಿ ಎತ್ತಿ ವಿಶೇಷವಾಗಿ ಪೂಜೆ ಸಲ್ಲಿಸಿ ಸ್ವರ್ಣ ಗೌರಿಯನ್ನು ಬರಮಾಡಿಕೊಂಡರು. ಶ್ರೀ ವಿದ್ಯಾ ಗಣಪತಿ ದೇವಸ್ಥಾನದ ಪ್ರಸಾದ್ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಶಿಂಷಾ ನದಿಯಿಂದ ಅರಸಿನ ಮತ್ತು ಮರಳಿನಿಂದ ಸ್ವರ್ಣ ಗೌರಿಯನ್ನು ಮಾಡಿಕೊಂಡು ಮಠಕ್ಕೆ ತರಲಾಯಿತು. ನಂತರ ಗೃಹಿಣಿಯರು ವಿಶೇಷವಾಗಿ ಪೂಜೆ ಸಲ್ಲಿಸುತಿದ್ದರೆ ಎಂದರು. ಸ್ವರ್ಣ ಗೌರಿ ಭಕ್ತ ಮಂಡಳಿಯ ತೋಂಟದಾರ್ಯ ನಾಗೇಂದ್ರ ಮಾತನಾಡಿ 2026 ನೇ ಸಾಲಿನ ಸ್ವರ್ಣ ಗೌರಿ ಮಹೋತ್ಸವವನ್ನು ನಮ್ಮ ಸ್ವರ್ಣಗೌರಿ ಭಕ್ತ ಮಂಡಳಿ ವತಯಿಂದ ಆಚರಿಸಿಕೊಂಡು ಬಂದು 14ನೇ ಸೋಮವಾರ ದಿನದಿಂದ ಪ್ರತಿದಿನ ಸಂಜೆ 9 ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮವನ್ನು ನಡೆಸಿ ಮಹಾಮಂಗಳಾರತಿ ನಂತರ ಪ್ರಸಾದ ವಿನಯೋಗಿಸಲಾಗುತ್ತದೆ. ಮತ್ತು ಸೆಪ್ಟೆಂಬರ್ 22ನೇ ಮಂಗಳವಾರ ಸ್ವರ್ಣ ಗೌರಿಯನ್ನು ಮುತ್ತಿನ ಪಲ್ಲಕಿಯಲ್ಲಿ ಕೂರಿಸಿ ಮೆರವಣಿಗೆ ಮುಖಾಂತರ ವಿಸರ್ಜಿಸಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ಸ್ವರ್ಣ ಗೌರಿಯ ಕೃಪೆಗೆ ಪಾತರಾಗುವಂತೆ ಈ ಸಂದರ್ಭದಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ವರ್ಣ ಗೌರಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.1
- ರಸ್ತೆ ಬದಿಯಲ್ಲೇ ಮದ್ಯಪಾನ; ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ ಕಾನೂನಿನ ಭಯವಿಲ್ಲವೇ? ಕ್ರಮಕ್ಕೆ ಸ್ಥಳೀಯರಿಂದ ಆಗ್ರಹ ರಸ್ತೆ ಬದಿಯಲ್ಲೇ ಮದ್ಯಪಾನ; ಪೊಲೀಸರ ವಿರುದ್ಧ ಸಾರ್ವಜನಿಕರ ಆಕ್ರೋಶ ಕಾನೂನಿನ ಭಯವಿಲ್ಲವೇ? ಕ್ರಮಕ್ಕೆ ಸ್ಥಳೀಯರಿಂದ ಆಗ್ರಹ1
- ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಹೆಚ್.ಸಿ.ಬಾಲಕೃಷ್ಣ ನಗರದ ಜಿಲ್ಲಾ ಪಂಚಾಯತ್ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಪೌರಾಢಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಚ್.ಸಿ.ಬಾಲಕೃಷ್ಣ ಉದ್ಘಾಟನೆ ನೇರವೇರಿಸಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು , ನಮ್ಮ ಯುವ ಜನಾಂಗ ಸಂಸತ್ತು ಹಾಗೂ ವಿಧಾನ ಸಭೆ ಕಲಾಪಗಳಲ್ಲಿ ಯಾವ ರೀತಿ ಚರ್ಚೆ ಮಾಡಬೇಕು, ಯಾವ ರೀತಿ ಪಾಲ್ರ್ಗೊಳ್ಳಬೇಕು ಹಾಗೂ ರಾಷ್ಟ್ರೀಯ ಸಮಸ್ಯೆಗಳನ್ನು ಯಾವ ರೀತಿ ಪ್ರಸ್ತಾಪ ಮಾಡಬೇಕು ಎಂಬುದರ ಅರಿವು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಇನ್ನೂ ತಿಂಗಳ ಕಾಲಾವಕಾಶದಲ್ಲಿ ಪ್ರತಿ ತಾಲ್ಲೂಕು ಮಟ್ಟದಲ್ಲಿ ಮಕ್ಕಳ ಸಂಸತ್ತ ಕಾರ್ಯಕ್ರಮ ಅಯೋಜಿಸಿ ನಂತರ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರ ಆದೇಶ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಬಾಲಕೃಷ್ಣ, ರಾಮನಗರ ಶಾಸಕ ಹೆಚ್.ಎ.ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕಾರ್, ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು1