ಆತ್ಮವಿಶ್ವಾಸದಿಂದ ಓದಿದಾಗ ಮಾತ್ರ ಯಶಸ್ಸು ಸಾಧ್ಯ: ಬಿಇಓ ಕೇಶವ್ ಪೆಟ್ಲೂರ್ ಗುಳೇದಗುಡ್ಡ: ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಓದುವ ಹವ್ಯಾಸವನ್ನು ರೂಢಿಸಿಕೊಂಡರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ್ ಅವರು ಹೇಳಿದರು. ಅವರು ಗುಳೇದಗುಡ್ಡ ಸಮೀಪದ ಕೆಲವಡಿ ಗ್ರಾಮದಲ್ಲಿ ಮಂಗಳವಾರ ನಡೆದ ಶ್ರೀ ಲಕ್ಷ್ಮೀ ರಂಗನಾಥ ಸರ್ಕಾರಿ ಪ್ರೌಢ ಶಾಲೆಯ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ನಿರಂತರ ಅಭ್ಯಾಸದ ಕಲಿಕೆಯಿಂದ ಅಸಾಧ್ಯವಾದುದೂ ಕೂಡಾ ಸಾಧ್ಯವಾಗುತ್ತದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸುವದರಿಂದ ಪರೀಕ್ಷೆ ಸುಲಭವಾಗಿ ಎದುರಿಸಲು ವಿದ್ಯಾರ್ಥಿಗಳಿಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು. ನಿವೃತ್ತ ದೈಹಿಕ ಶಿಕ್ಷಕ ಎಸ್.ಬಿ,ಮಾಚಾ ಅವರು ಮಾತನಾಡಿ, ವಿದ್ಯಾರ್ಥಿಗಳು ಸಮಯವನ್ನು ಸರಿಯಾಗಿ ಪಾಲನೆ ಮಾಡುವುದರೊಂದಿಗೆ ಧನಾತ್ಮಕ ಚಿಂತನೆ ಮತ್ತು ಆರೋಗ್ಯಕರ ಪರಿಸರವನ್ನು ನಿರ್ಮಿಸಿಕೊಂಡು ನಿರಂತರ ಅಭ್ಯಾಸವನ್ನು ಮಾಡಿದರೆ ತಾವುಗಳ ಪರೀಕ್ಷೆಯಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಉಪನ್ಯಾಸಕ ಡಾ.ಚಂದ್ರಶೇಖರ ಕಾಳನ್ನವರ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು, ತಂದೆ ತಾಯಿಯಂದಿರ ಪರಿಶ್ರಮ ಅರಿತುಕೊಂಡು, ವಿದ್ಯೆ ಕಲಿಸಿದ ಗುರುಗಳ ಗೌರವ, ಕೀರ್ತಿ ತರುವ ಮೂಲಕ ಸಮಾಜದಲ್ಲಿ ಆದರ್ಶ ಪ್ರಜೆಗಳಾಗಬೇಕು. ನಿಮ್ಮ ಬೆನ್ನ ಹಿಂದೆ ನಿಮ್ಮ ಶಿಕ್ಷಕರು ಮತ್ತು ಪೋಷಕರ ಶ್ರಮವಿದೆ. ಅವರ ಮಾರ್ಗದರ್ಶನ ನಿಮ್ಮ ಶಿಕ್ಷಣ ಬದುಕಿಗೆ ದಾರಿದೀಪವಾಗಿದೆ. ಅವರ ನಂಬಿಕೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ಮತ್ತು ಕಲಿತ ಶಾಲೆಯ ಕೀರ್ತಿ, ಗೌರವ ತರುವ ಕಾರ್ಯ ನಿಮ್ಮದಾಗಿದೆ ಎಂದು ಹೇಳಿದರು. ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆಯ ಉಪನಿರ್ದೇಶಕರಾದ ಅಜೀತ ಮನ್ನಿಕೇರಿ. ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯ ಸಂಗಮೇಶ ಕಲ್ಲೂರ ಕಾರ್ಯಕ್ರಮದಲ್ಲಿ ಅಧ್ಯಕ್ಷ ವಹಿಸಿದ್ದರು. ವರ್ಗಾವಣೆಗೊಂಡ ಶಿಕ್ಷಕರಾದ ಬಿ.ವಾಯ್.ಚಲವಾದಿ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ ಮಾದರ, ಉಪಾಧ್ಯಕ್ಷ ಮುಕ್ಕಣ್ಣ ಕೆಂಗಾರ ಹಾಗೂ ಸರ್ವ ಸದಸ್ಯರು, ಬಿ.ಹೆಚ್.ಹಳಗೇರಿ, ಅಂಗಡಿ, ಹೊನ್ನಪ್ಪಗೌಡ ಗೌಡರ ಅಡಿಯಪ್ಪ ಹಡಗಲಿ, ತುಕರಾಮ ವಡ್ಡರ, ಶಿಕ್ಷಕರಾದ ಬಿ.ಆರ್.ಪಾಟೀಲ, ಶಕುಂತಲಾ ಹೆಚ್.ಬಾದಾಮಿ ನಾಗರಾಜ ಸಲಕಿ, ರಮೇಶ ಬೀಳಗಿ, ಬಸವರಾಜ ರಕ್ಕಸಗಿ ಶರೀಪಾ ಸುಲ್ತಾನ, ಗೀರಿಶ ಕೊಣ್ಣುರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಕ್ಷಕಿ ಶಕುಂತಲಾ ಹೆಚ್.ಬಾದಾಮಿ ಸ್ವಾಗತಿಸಿದರು, ಶಿಕ್ಷಕ ರಮೇಶ ಬೀಳಗಿ ನಿರೂಪಿಸಿದರು, ಶಿಕ್ಷಕ ಬಸವರಾಜ ರಕ್ಕಸಗಿ ವಂದಿಸಿದರು. ಶಿಕ್ಷಕಿ ಜಯಶ್ರೀ ಕೂವಳ್ಳಿ ವಾರ್ಷಿಕ ವರದಿ ಮಂಡಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಹಾಗೂ ದೀಪದಾನ ಕಾರ್ಯಕ್ರಮ ನಡೆದವು.
ಆತ್ಮವಿಶ್ವಾಸದಿಂದ ಓದಿದಾಗ ಮಾತ್ರ ಯಶಸ್ಸು ಸಾಧ್ಯ: ಬಿಇಓ ಕೇಶವ್ ಪೆಟ್ಲೂರ್ ಗುಳೇದಗುಡ್ಡ: ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಓದುವ ಹವ್ಯಾಸವನ್ನು ರೂಢಿಸಿಕೊಂಡರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ್ ಅವರು ಹೇಳಿದರು. ಅವರು ಗುಳೇದಗುಡ್ಡ ಸಮೀಪದ ಕೆಲವಡಿ ಗ್ರಾಮದಲ್ಲಿ ಮಂಗಳವಾರ ನಡೆದ ಶ್ರೀ ಲಕ್ಷ್ಮೀ ರಂಗನಾಥ ಸರ್ಕಾರಿ ಪ್ರೌಢ ಶಾಲೆಯ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ನಿರಂತರ ಅಭ್ಯಾಸದ ಕಲಿಕೆಯಿಂದ ಅಸಾಧ್ಯವಾದುದೂ ಕೂಡಾ ಸಾಧ್ಯವಾಗುತ್ತದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸುವದರಿಂದ ಪರೀಕ್ಷೆ ಸುಲಭವಾಗಿ ಎದುರಿಸಲು ವಿದ್ಯಾರ್ಥಿಗಳಿಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು. ನಿವೃತ್ತ ದೈಹಿಕ ಶಿಕ್ಷಕ ಎಸ್.ಬಿ,ಮಾಚಾ ಅವರು ಮಾತನಾಡಿ, ವಿದ್ಯಾರ್ಥಿಗಳು ಸಮಯವನ್ನು ಸರಿಯಾಗಿ ಪಾಲನೆ ಮಾಡುವುದರೊಂದಿಗೆ ಧನಾತ್ಮಕ ಚಿಂತನೆ ಮತ್ತು ಆರೋಗ್ಯಕರ ಪರಿಸರವನ್ನು ನಿರ್ಮಿಸಿಕೊಂಡು ನಿರಂತರ ಅಭ್ಯಾಸವನ್ನು ಮಾಡಿದರೆ ತಾವುಗಳ ಪರೀಕ್ಷೆಯಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಉಪನ್ಯಾಸಕ ಡಾ.ಚಂದ್ರಶೇಖರ ಕಾಳನ್ನವರ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು, ತಂದೆ ತಾಯಿಯಂದಿರ ಪರಿಶ್ರಮ ಅರಿತುಕೊಂಡು, ವಿದ್ಯೆ ಕಲಿಸಿದ ಗುರುಗಳ ಗೌರವ, ಕೀರ್ತಿ ತರುವ ಮೂಲಕ ಸಮಾಜದಲ್ಲಿ ಆದರ್ಶ ಪ್ರಜೆಗಳಾಗಬೇಕು. ನಿಮ್ಮ
ಬೆನ್ನ ಹಿಂದೆ ನಿಮ್ಮ ಶಿಕ್ಷಕರು ಮತ್ತು ಪೋಷಕರ ಶ್ರಮವಿದೆ. ಅವರ ಮಾರ್ಗದರ್ಶನ ನಿಮ್ಮ ಶಿಕ್ಷಣ ಬದುಕಿಗೆ ದಾರಿದೀಪವಾಗಿದೆ. ಅವರ ನಂಬಿಕೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ಮತ್ತು ಕಲಿತ ಶಾಲೆಯ ಕೀರ್ತಿ, ಗೌರವ ತರುವ ಕಾರ್ಯ ನಿಮ್ಮದಾಗಿದೆ ಎಂದು ಹೇಳಿದರು. ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆಯ ಉಪನಿರ್ದೇಶಕರಾದ ಅಜೀತ ಮನ್ನಿಕೇರಿ. ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯ ಸಂಗಮೇಶ ಕಲ್ಲೂರ ಕಾರ್ಯಕ್ರಮದಲ್ಲಿ ಅಧ್ಯಕ್ಷ ವಹಿಸಿದ್ದರು. ವರ್ಗಾವಣೆಗೊಂಡ ಶಿಕ್ಷಕರಾದ ಬಿ.ವಾಯ್.ಚಲವಾದಿ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ ಮಾದರ, ಉಪಾಧ್ಯಕ್ಷ ಮುಕ್ಕಣ್ಣ ಕೆಂಗಾರ ಹಾಗೂ ಸರ್ವ ಸದಸ್ಯರು, ಬಿ.ಹೆಚ್.ಹಳಗೇರಿ, ಅಂಗಡಿ, ಹೊನ್ನಪ್ಪಗೌಡ ಗೌಡರ ಅಡಿಯಪ್ಪ ಹಡಗಲಿ, ತುಕರಾಮ ವಡ್ಡರ, ಶಿಕ್ಷಕರಾದ ಬಿ.ಆರ್.ಪಾಟೀಲ, ಶಕುಂತಲಾ ಹೆಚ್.ಬಾದಾಮಿ ನಾಗರಾಜ ಸಲಕಿ, ರಮೇಶ ಬೀಳಗಿ, ಬಸವರಾಜ ರಕ್ಕಸಗಿ ಶರೀಪಾ ಸುಲ್ತಾನ, ಗೀರಿಶ ಕೊಣ್ಣುರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಕ್ಷಕಿ ಶಕುಂತಲಾ ಹೆಚ್.ಬಾದಾಮಿ ಸ್ವಾಗತಿಸಿದರು, ಶಿಕ್ಷಕ ರಮೇಶ ಬೀಳಗಿ ನಿರೂಪಿಸಿದರು, ಶಿಕ್ಷಕ ಬಸವರಾಜ ರಕ್ಕಸಗಿ ವಂದಿಸಿದರು. ಶಿಕ್ಷಕಿ ಜಯಶ್ರೀ ಕೂವಳ್ಳಿ ವಾರ್ಷಿಕ ವರದಿ ಮಂಡಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಹಾಗೂ ದೀಪದಾನ ಕಾರ್ಯಕ್ರಮ ನಡೆದವು.
- ಬೇಸಿಗೆ ಬಿಸಿ: ಮಾಗಡಿಯ 56 ಗ್ರಾಮಗಳಿಗೆ ತಪ್ಪಲಿದೆ ನೀರಡಿಕೆ; ಕುಡಿಯುವ ನೀರಿಗಾಗಿ ಸರ್ಕಾರದ ಮಾಸ್ಟರ್ ಪ್ಲಾನ್! #JB_News_Kannada1
- ಉತ್ತರ ಕರ್ನಾಟಕದ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಮುಳುಗಡೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ತಕ್ಷಣ ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಶಾಸಕ ಪಿ.ಎಚ್. ಪೂಜಾರ್ ಆಗ್ರಹಿಸಿದ್ದಾರೆ. ಸಂತ್ರಸ್ತರ ಪರಿಸ್ಥಿತಿ ದಿನೇದಿನೇ ಚಿಂತಾಜನಕವಾಗುತ್ತಿದೆ. ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಸಂತ್ರಸ್ತರು ದೊಡ್ಡ ಮಟ್ಟದ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಸಿದರು. ಉದ್ಯೋಗ ಸೃಷ್ಟಿಗೆ ಅಗತ್ಯವಾದ ಪೂರಕ ವಾತಾವರಣವನ್ನು ರಾಜ್ಯ ಸರ್ಕಾರ ನಿರ್ಮಿಸಿ, ಸಂತ್ರಸ್ತರ ಜೀವನೋಪಾಯಕ್ಕೆ ಶಾಶ್ವತ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದರು.1
- ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಮಾರ್ಚ ೧೫ ರವಿವಾರದಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಿನ್ನಲೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ.ರವಿ ಪಾಲ್ಗೊಳ್ಳಲಿದ್ದು. ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಲಿದ್ದು. ಸಾಯಂಕಾಲ ಎಸ್.ಆರ್.ಕಂಠಿ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಇದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಹಿಂದೂ ಸಮಾಜದ ಮುಖಂಡರು ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮನವಿ ಮಾಡಿದ್ದಾರೆ. ವರದಿ ಭೀಮಣ್ಣ ಗಾಣಿಗೇರ ಇಳಕಲ್ಲ1
- ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು. ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.1
- Post by @april14news1
- ಮೇಡಮ್ ಬರ್ತಾವ್ರೆ ತುಮಕೂರಿಗೆ1
- ಕಲಬುರಗಿ: ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಠಾಣೆಗೆ ತಂದು ಒಪ್ಪಿಸಿದ ಹಿಂದೂ ಕಾರ್ಯಕರ್ತರು ಕಲಬುರ್ಗಿಯ ಶರಣಸಿರಸಗಿ ಗ್ರಾಮದಲ್ಲಿ ಕ್ರಿಶ್ಚಿಯನ್ ಧರ್ಮದ ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರ ಮೂರ್ತಿ, ಫೋಟೋಗಳನ್ನು ಮನೆಯಿಂದ ಹೊರಗೆಸೆಯಿರಿ ನಿಮಗಾಗಿ ನಾವು ಪ್ರಾರ್ಥನೆ ಮಾಡುತ್ತೇವೆ ಎಂದು 20-30 ಜನರ ತಂದ ಧರ್ಮ ಪರಿವರ್ತನಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಜರಂಗದಳ ಕಾರ್ಯಕರ್ತನ ಮನೆಗೆ ಭೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಕಾರ್ಯಕರ್ತೆ ದಿವ್ಯಾ ನೇತೃತ್ವದಲ್ಲಿ ತಂಡವನ್ನು ಸಬ್ ಅರ್ಬನ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಸರ್ಕಲ್ ಇನ್ಸೆಕ್ಟರ್ ಕಾನೂನು ಕ್ರಮದ ಭರವಸೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮತಾಂತರ ತಡೆಗೆ ಕಠಿಣ ಕ್ರಮಕ್ಕಾಗಿ ಆಗ್ರಹ ಕೇಳಿಬಂದಿದೆ.2
- ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.1