ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಾ–ಟೆಂಗುಂಟಿ ಸಂಪರ್ಕ ರಸ್ತೆಯ ಮೆಟ್ಲಿಂಗ್ ಹಾಗೂ ಡಾಂಬರೀಕರಣ ಕಾಮಗಾರಿ ಎರಡು ವರ್ಷ ಕಳೆದರೂ ಪೂರ್ಣಗೊಳ್ಳದೆ ಅರ್ಧದಲ್ಲೇ ನಿಂತಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. 2023-24ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಿಲ್ಲಾ ಪಂಚಾಯತ್ ರಾಜ್ ಉಪವಿಭಾಗದಿಂದ ಕೈಗೆತ್ತಿಕೊಳ್ಳಲಾದ ಸುಮಾರು ₹1 ಕೋಟಿ 35 ಲಕ್ಷ 92 ಸಾವಿರ ವೆಚ್ಚದ, 1.5 ಕಿಲೋಮೀಟರ್ ಉದ್ದದ ಈ ರಸ್ತೆ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿರುವುದರಿಂದ ಗುಮಗೇರಾ ಹಾಗೂ ಟೆಂಗುಂಟಿ ಗ್ರಾಮಗಳ ನಿವಾಸಿಗಳು, ರೈತರು ಮತ್ತು ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಯಲ್ಲಿ ಎದ್ದಿರುವ 20 ಎಂಎಂ ಜಲ್ಲಿಕಲ್ಲುಗಳಿಂದಾಗಿ ದ್ವಿಚಕ್ರ ವಾಹನ ಸವಾರರು ಸಂಕಷ್ಟ ಎದುರಿಸುತ್ತಿದ್ದು, ಈಗಾಗಲೇ ಹಲವು ಸಣ್ಣಪುಟ್ಟ ಅಪಘಾತಗಳು ಸಂಭವಿಸಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯ ಪಕ್ಕದ ಕೆಲವು ರೈತರ ತಕರಾರಿನಿಂದಾಗಿ ಕಾಮಗಾರಿ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಸ್ಥಳೀಯರು ಹೇಳುತ್ತಿದ್ದಾರೆ. ಈ ವಿಷಯವು ಹಲವು ಬಾರಿ ಕೆಡಿಪಿ ಸಭೆಯಲ್ಲೂ ಚರ್ಚೆಯಾಗಿದ್ದರೂ ಯಾವುದೇ ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಒಟ್ಟು ಕಾಮಗಾರಿಯಲ್ಲಿ ಶೇ.80ರಷ್ಟು ಕೆಲಸ ಮುಗಿದಿದೆ ಎಂದು ಬಿಂಬಿಸಿ ಈಗಾಗಲೇ ₹98 ಲಕ್ಷ ಬಿಲ್ ಪಾವತಿಸಲಾಗಿದ್ದರೂ ಉಳಿದ ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರೊಂದಿಗೆ, ರಸ್ತೆ ಅಗಲೀಕರಣಕ್ಕೆ ಮೀಸಲಾಗಿದ್ದ ಸರ್ಕಾರಿ ಜಾಗವನ್ನು ಖಾಸಗಿ ವಿಂಡ್ ಕಂಪನಿಯ ರಸ್ತೆ ನಿರ್ಮಾಣಕ್ಕೆ ಬಳಸಲಾಗಿದೆ ಎಂಬ ಗಂಭೀರ ಆರೋಪವೂ ವ್ಯಕ್ತವಾಗಿದ್ದು, ಅಧಿಕಾರಿಗಳು ಹಾಗೂ ಟಾಸ್ಕ್ ಫೋರ್ಸ್ ಸಮಿತಿ ತಕ್ಷಣ ಪರಿಶೀಲನೆ ನಡೆಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಅರ್ಧದಲ್ಲೇ ನಿಂತಿರುವ ರಸ್ತೆ ಕಾಮಗಾರಿಯ ಬಗ್ಗೆ ಶಾಸಕರು ಹಾಗೂ ಅಧಿಕಾರಿಗಳು ತಕ್ಷಣ ಗಮನಹರಿಸದಿದ್ದರೆ ರಸ್ತೆ ತಡೆದು ಉಗ್ರ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥ ಯಮನೂರಪ್ಪ ಚೌಡ್ಕಿ ಎಚ್ಚರಿಸಿದ್ದಾರೆ. ಯುವ ರೈತ ಹಾಗೂ ಉದ್ಯಮಿ ವೀರಭದ್ರಯ್ಯ ಬೆನಕನಾಳಮಠ ಅವರು ಮಾತನಾಡಿ, ರಸ್ತೆ ಅಪೂರ್ಣವಾಗಿರುವುದರಿಂದ ವಾಹನ ಸಂಚಾರ ಮತ್ತು ಕೃಷಿ ಉತ್ಪನ್ನ ಸಾಗಣೆಗೆ ತೀವ್ರ ತೊಂದರೆಯಾಗಿದೆ ಎಂದು ಶೀಘ್ರ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ದೊಡ್ಡನಗೌಡ ಎಚ್. ಪಾಟೀಲ್, ಅಪೂರ್ಣಗೊಂಡಿರುವ ರಸ್ತೆ ಕಾಮಗಾರಿ ತಮ್ಮ ಗಮನದಲ್ಲಿದ್ದು, ಗುಮಗೇರಾ ಗ್ರಾಮದ ಎಲ್ಲ ಗ್ರಾಮಸ್ಥರು ಒಗ್ಗಟ್ಟಾಗಿ ರಸ್ತೆ ನಿರ್ಮಾಣಕ್ಕೆ ಸಹಕರಿಸಿದರೆ ಹೆಚ್ಚಿನ ಅನುದಾನ ತಂದು ರಸ್ತೆ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಮನವಿ ಮಾಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಾ–ಟೆಂಗುಂಟಿ ಸಂಪರ್ಕ ರಸ್ತೆಯ ಮೆಟ್ಲಿಂಗ್ ಹಾಗೂ ಡಾಂಬರೀಕರಣ ಕಾಮಗಾರಿ ಎರಡು ವರ್ಷ ಕಳೆದರೂ ಪೂರ್ಣಗೊಳ್ಳದೆ ಅರ್ಧದಲ್ಲೇ ನಿಂತಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. 2023-24ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಿಲ್ಲಾ ಪಂಚಾಯತ್ ರಾಜ್ ಉಪವಿಭಾಗದಿಂದ ಕೈಗೆತ್ತಿಕೊಳ್ಳಲಾದ ಸುಮಾರು ₹1 ಕೋಟಿ 35 ಲಕ್ಷ 92 ಸಾವಿರ ವೆಚ್ಚದ, 1.5 ಕಿಲೋಮೀಟರ್ ಉದ್ದದ ಈ ರಸ್ತೆ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿರುವುದರಿಂದ ಗುಮಗೇರಾ ಹಾಗೂ ಟೆಂಗುಂಟಿ ಗ್ರಾಮಗಳ ನಿವಾಸಿಗಳು, ರೈತರು ಮತ್ತು ವಿದ್ಯಾರ್ಥಿಗಳು
ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಯಲ್ಲಿ ಎದ್ದಿರುವ 20 ಎಂಎಂ ಜಲ್ಲಿಕಲ್ಲುಗಳಿಂದಾಗಿ ದ್ವಿಚಕ್ರ ವಾಹನ ಸವಾರರು ಸಂಕಷ್ಟ ಎದುರಿಸುತ್ತಿದ್ದು, ಈಗಾಗಲೇ ಹಲವು ಸಣ್ಣಪುಟ್ಟ ಅಪಘಾತಗಳು ಸಂಭವಿಸಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯ ಪಕ್ಕದ ಕೆಲವು ರೈತರ ತಕರಾರಿನಿಂದಾಗಿ ಕಾಮಗಾರಿ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಸ್ಥಳೀಯರು ಹೇಳುತ್ತಿದ್ದಾರೆ. ಈ ವಿಷಯವು ಹಲವು ಬಾರಿ ಕೆಡಿಪಿ ಸಭೆಯಲ್ಲೂ ಚರ್ಚೆಯಾಗಿದ್ದರೂ ಯಾವುದೇ ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಒಟ್ಟು ಕಾಮಗಾರಿಯಲ್ಲಿ ಶೇ.80ರಷ್ಟು ಕೆಲಸ ಮುಗಿದಿದೆ ಎಂದು ಬಿಂಬಿಸಿ ಈಗಾಗಲೇ ₹98
ಲಕ್ಷ ಬಿಲ್ ಪಾವತಿಸಲಾಗಿದ್ದರೂ ಉಳಿದ ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರೊಂದಿಗೆ, ರಸ್ತೆ ಅಗಲೀಕರಣಕ್ಕೆ ಮೀಸಲಾಗಿದ್ದ ಸರ್ಕಾರಿ ಜಾಗವನ್ನು ಖಾಸಗಿ ವಿಂಡ್ ಕಂಪನಿಯ ರಸ್ತೆ ನಿರ್ಮಾಣಕ್ಕೆ ಬಳಸಲಾಗಿದೆ ಎಂಬ ಗಂಭೀರ ಆರೋಪವೂ ವ್ಯಕ್ತವಾಗಿದ್ದು, ಅಧಿಕಾರಿಗಳು ಹಾಗೂ ಟಾಸ್ಕ್ ಫೋರ್ಸ್ ಸಮಿತಿ ತಕ್ಷಣ ಪರಿಶೀಲನೆ ನಡೆಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಅರ್ಧದಲ್ಲೇ ನಿಂತಿರುವ ರಸ್ತೆ ಕಾಮಗಾರಿಯ ಬಗ್ಗೆ ಶಾಸಕರು ಹಾಗೂ ಅಧಿಕಾರಿಗಳು ತಕ್ಷಣ ಗಮನಹರಿಸದಿದ್ದರೆ ರಸ್ತೆ ತಡೆದು ಉಗ್ರ ಪ್ರತಿಭಟನೆ ನಡೆಸುವುದಾಗಿ
ಗ್ರಾಮಸ್ಥ ಯಮನೂರಪ್ಪ ಚೌಡ್ಕಿ ಎಚ್ಚರಿಸಿದ್ದಾರೆ. ಯುವ ರೈತ ಹಾಗೂ ಉದ್ಯಮಿ ವೀರಭದ್ರಯ್ಯ ಬೆನಕನಾಳಮಠ ಅವರು ಮಾತನಾಡಿ, ರಸ್ತೆ ಅಪೂರ್ಣವಾಗಿರುವುದರಿಂದ ವಾಹನ ಸಂಚಾರ ಮತ್ತು ಕೃಷಿ ಉತ್ಪನ್ನ ಸಾಗಣೆಗೆ ತೀವ್ರ ತೊಂದರೆಯಾಗಿದೆ ಎಂದು ಶೀಘ್ರ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ದೊಡ್ಡನಗೌಡ ಎಚ್. ಪಾಟೀಲ್, ಅಪೂರ್ಣಗೊಂಡಿರುವ ರಸ್ತೆ ಕಾಮಗಾರಿ ತಮ್ಮ ಗಮನದಲ್ಲಿದ್ದು, ಗುಮಗೇರಾ ಗ್ರಾಮದ ಎಲ್ಲ ಗ್ರಾಮಸ್ಥರು ಒಗ್ಗಟ್ಟಾಗಿ ರಸ್ತೆ ನಿರ್ಮಾಣಕ್ಕೆ ಸಹಕರಿಸಿದರೆ ಹೆಚ್ಚಿನ ಅನುದಾನ ತಂದು ರಸ್ತೆ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಮನವಿ ಮಾಡಿದ್ದಾರೆ.
- ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮನ್ನು ಬಿಎಲ್‌ಒ (BLO) ಕರ್ತವ್ಯದಿಂದ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಕಾರ್ಯಕರ್ತೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ತಮಗೆ ವಿಧಿಸಲಾಗುತ್ತಿರುವ ಹೆಚ್ಚುವರಿ ಕೆಲಸದ ಒತ್ತಡ, ಡೇಟಾ ಎಂಟ್ರಿ ಮಾಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳು ಹಾಗೂ ಮೇಲಧಿಕಾರಿಗಳಿಂದ ಬರುತ್ತಿರುವ ನೊಟೀಸ್‌ನ ಭೀತಿಯ ಬಗ್ಗೆ ಕಾರ್ಯಕರ್ತೆಯರು ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ಹೆಚ್ಚುವರಿ ಜವಾಬ್ದಾರಿಗಳಿಂದಾಗಿ ತಮ್ಮ ಮೂಲ ಕೆಲಸವಾದ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ಕಣ್ಣೀರಿಟ್ಟರು.1
- ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯ ಆಡಳಿತ ವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ, ಸ್ಪೀಕರ್ ಯು.ಟಿ. ಖಾದರ್ ಅವರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಮತ್ತು ಆಡಳಿತದ ಬಗ್ಗೆ ಸಾರ್ವಜನಿಕರು ದೂರುಗಳನ್ನು ನೀಡಿದ್ದರ ಬೆನ್ನಲ್ಲೇ ಈ ಭೇಟಿ ನಡೆದಿದೆ.1
- ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ರಾಜ್ಯದ ಮಳೆ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಹಾಗೂ ಜನಸಾಮಾನ್ಯರ ನೆರವಿಗೆ ಬರಲು ಶಂಬುಲಿಂಗ್ ಹಿರೇಮಠ್ ಮುಂದಾಗಿದ್ದಾರೆ. ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದ್ದು, ರೈತರು ಆತಂಕದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ, ಬರಗಾಲದ ಭವಣೆಯನ್ನು ತಪ್ಪಿಸಲು ಮತ್ತು ರೈತರ ಸಂಕಷ್ಟವನ್ನು ಪಾರು ಮಾಡಲು ತಾವೇ ಸ್ವತಃ ತಪಸ್ಸು ಮಾಡಲು ಸಿದ್ಧವಿರುವುದಾಗಿ ಅವರು ಘೋಷಿಸಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಉತ್ತಮ ಮಳೆಯಾಗಲೆಂದು ಸಂಪ್ರದಾಯಬದ್ಧ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ನಡೆಸಲು ಸಿದ್ಧರಾಗಿರುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿ, ಬೆಳೆಗಳು ಸಮೃದ್ಧಿಯಾಗಿ ಬೆಳೆದು ಜನಜೀವನ ಸುಗಮವಾಗಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ಹಿರೇಮಠ್ ಹೇಳಿದ್ದಾರೆ. ಪ್ರಕೃತಿಯ ಅನುಗ್ರಹಕ್ಕಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿರುವ ಅವರು, ಕೇವಲ ಪ್ರಾರ್ಥನೆಯಷ್ಟೇ ಅಲ್ಲದೆ, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ, ಮರ ನೆಡುವಿಕೆ ಹಾಗೂ ನೀರಿನ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.1
- ಗುಳೇದಗುಡ್ಡದ ಭಂಡಾರಿ ಮತ್ತು ರಾಠಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಶುಕ್ರವಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕೆರೂರದ ಸಾಹಿತಿ ಬಸವರಾಜ ಪ್ಯಾಟಿಶೆಟ್ಟರ್ ಅವರು ಮಾತನಾಡಿ, ವಿದ್ಯಾರ್ಥಿಗಳು ಸಮಯ ಪ್ರಜ್ಞೆಯನ್ನು ಮೈಗೂಡಿಸಿಕೊಂಡು ನಿರಂತರ ಅಧ್ಯಯನಶೀಲರಾಗಬೇಕು ಮತ್ತು ರಾಷ್ಟ್ರ ಅಭಿಮಾನವನ್ನು ಬೆಳೆಸಿಕೊಂಡು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು. ಬದುಕು ಮುಳ್ಳಿನ ಹಾಸಿಗೆಯಿದ್ದಂತೆ ಎಂದು ಬಣ್ಣಿಸಿದ ಅವರು, ವಿದ್ಯಾರ್ಥಿಗಳು ದೈಹಿಕ, ಭಾವನಾತ್ಮಕ ಮತ್ತು ಶೈಕ್ಷಣಿಕ ಬೆಳವಣಿಗೆಗಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜಶೇಖರ ಶೀಲವಂತ ಅವರು ವಿದ್ಯಾರ್ಥಿಗಳ ಆರೋಗ್ಯದ ಮಹತ್ವವನ್ನು ಒತ್ತಿ ಹೇಳಿದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕು ಮತ್ತು ಪಠ್ಯಕ್ಕೆ ನೀಡುವಷ್ಟೇ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಿ ಸದೃಢ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿ ಪೂರ್ವ ವಿಭಾಗದ ಚೇರಮನ್ ಸಿದ್ಲಿಂಗಪ್ಪ ಬರಗುಂಡಿ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರುಗಳಾದ ರಾಜು ತಾಪಡಿಯಾ, ಸುನಿಲ್ ಕರಣಿ, ಲಕ್ಷ್ಮಿನಾರಾಯಣ ಕಾಬ್ರಾ, ಅಮಾತೆಪ್ಪ ಕೊಪ್ಪಳ, ರವೀಂದ್ರ ಅಂಗಡಿ, ಶಾಮಸುಂದರ ಮಾಲಪಾಣಿ, ಪುರುಷೋತ್ತಮ ಝಂವರ, ಎಸ್.ಎಸ್.ನಾಯನೇಗಲಿ, ಪ್ರಾಚಾರ್ಯ ಡಾ.ಎನ್.ವೈ.ಬಡನ್ನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.1
- ಮಹಾರಾಷ್ಟ್ರದಲ್ಲಿ ಉಂಟಾಗಿರುವ ಮಳೆಯಿಂದಾಗಿ ಕೃಷ್ಣಾ ನದಿಗೆ 1.30 ಲಕ್ಷ ಕ್ಯೂಸೆಕ್ಸ್ ಒಳಹರಿವು ಹರಿದುಬಂದಿದೆ. ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಒಟ್ಟು 10 ಸೇತುವೆಗಳು ಜಲಾವೃತಗೊಂಡಿವೆ.1
- ಬಾಗಲಕೋಟೆಯಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಸಮಿತಿಯು ಶುಕ್ರವಾರ ಕರಾಳ ದಿನಾಚರಣೆ ಆಚರಿಸಿ ಒಂದು ದಿನದ ಮುಷ್ಕರ ನಡೆಸಿದೆ. ಅಕ್ಷರ ದಾಸೋಹ (ಬಿಸಿಯೂಟ) ಯೋಜನೆ ಆರಂಭವಾಗಿ 25 ವರ್ಷಗಳು ಪೂರ್ಣಗೊಂಡಿದ್ದರೂ, ನೌಕರರ ಬದುಕಿನಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ಸಂಘ ಆರೋಪಿಸಿದೆ. ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ನೌಕರರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರು 2008ರಿಂದ ಕೇಂದ್ರ ಸರ್ಕಾರ ಬಿಸಿಯೂಟ ನೌಕರರಿಗೆ ಸಮರ್ಪಕ ವೇತನ ಹೆಚ್ಚಳ ಮಾಡದೆ ಶೋಷಣೆ ನಡೆಸುತ್ತಿದೆ ಎಂದು ದೂರಿದರು. ಜೊತೆಗೆ ಖಾಸಗಿ ಸಂಸ್ಥೆಗಳಿಗೆ ಬಿಸಿಯೂಟ ಯೋಜನೆಯನ್ನು ಹಸ್ತಾಂತರಿಸುವ ಮೂಲಕ ಯೋಜನೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರವು ತನ್ನ ಚುನಾವಣಾ ಭರವಸೆಯಂತೆ ಕಾರ್ಯಕರ್ತೆಯರ ಮಾಸಿಕ ವೇತನವನ್ನು ₹7,000ಕ್ಕೆ ಹೆಚ್ಚಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು. ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದರಲ್ಲಿ 6 ಗಂಟೆಗಳ ಕೆಲಸದ ಅವಧಿಯ ಕುರಿತು ಅಧಿಕೃತ ಆದೇಶ, ಎಲ್ಲರಿಗೂ ಆರೋಗ್ಯ ವಿಮೆ, ಮುಖ್ಯ ಅಡುಗೆ ನೌಕರರಿಂದ ಪಿ.ಡಿ.ಒ.ಗೆ ವರ್ಗಾಯಿಸಿರುವ ಜಂಟಿ ಖಾತೆ ಜವಾಬ್ದಾರಿಯನ್ನು ಹಿಂದಿನಂತೆ ಮರುಸ್ಥಾಪಿಸುವುದು, ಖಾಸಗಿ ಸಂಸ್ಥೆಗಳಿಂದ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿರುವವರಿಗೆ ಉದ್ಯೋಗ ಭದ್ರತೆ ಮತ್ತು ಅಕ್ಷರ ದಾಸೋಹ ಯೋಜನೆಗೆ ಹೆಚ್ಚಿನ ಅನುದಾನ ಒದಗಿಸುವುದು ಸೇರಿವೆ. ಇದರೊಂದಿಗೆ ನಿವೃತ್ತ ನೌಕರರಿಗೆ ಮಾಸಿಕ ₹10,000 ಪಿಂಚಣಿ, ಬಾಕಿ ಹಣ ಬಿಡುಗಡೆ ಹಾಗೂ ಸುಸಜ್ಜಿತ ಮತ್ತು ಸ್ವಚ್ಛ ಅಡುಗೆ ಕೇಂದ್ರಗಳನ್ನು ನಿರ್ಮಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ.1
- ಬಾಗಲಕೋಟೆ ಮುಳುಗಡೆ ನಗರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಹೆಚ್. ಶಿವರಾಮೇಗೌಡರ ಬಣವು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ. ಮುಳುಗಡೆ ಸಂತ್ರಸ್ತರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಮೀಸಲಿಟ್ಟ ಕೈಗಾರಿಕಾ ನಿವೇಶನಗಳಲ್ಲಿ ಯಾವುದೇ ಉತ್ಪಾದನಾ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ಸಂಘಟನೆ ದೂರಿದೆ. ಈ ನಿವೇಶನಗಳ ಬಳಕೆಯಾಗದಿರುವ ಕುರಿತು ತೃತೀಯ ಸಂಸ್ಥೆಯ ಮೂಲಕ ತನಿಖೆ ನಡೆಸಬೇಕೆಂದು ಕರವೇ ಆಗ್ರಹಿಸಿದೆ. ನಿಯಮ ಉಲ್ಲಂಘಿಸಿದವರಿಂದ ನಿವೇಶನಗಳನ್ನು ವಾಪಸ್ ಪಡೆದು, ಅವುಗಳಲ್ಲಿ ಪರಿಸರ ಸ್ನೇಹಿ ಕೈಗಾರಿಕೆಗಳು ಮತ್ತು ಹೊಸ ಉದ್ಯಮಗಳನ್ನು ಸ್ಥಾಪಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. 'ಮುಳುಗಿದ್ದು ಬಾಗಲಕೋಟೆ... ಬೆಳೆದಿದ್ದು ವಿಜಯಪುರ' ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಂಘಟನೆಯು, ಈ ಸಂಬಂಧ ಸರ್ಕಾರಕ್ಕೆ ಮನವಿಯನ್ನು ಕೂಡ ಸಲ್ಲಿಸಿದೆ.1
- ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಯುವಕನೊಬ್ಬ ತನಗೆ ಮದುವೆ ಮಾಡಿಸಬೇಕೆಂದು ಆಗ್ರಹಿಸಿ ಬಿಎಸ್ಎನ್ಎಲ್ ಟವರ್ ಏರಿ ಕುಳಿತಿರುವ ಘಟನೆ ನಡೆದಿದೆ. ಈ ಘಟನೆಯಿಂದ ಸ್ಥಳದಲ್ಲಿ ಹೈಡ್ರಾಮಾ ಸೃಷ್ಟಿಯಾಗಿದೆ. ಸದ್ಯದ ಮಾಹಿತಿ ಪ್ರಕಾರ, ಟವರ್ ಏರಿದ ಆ ಯುವಕ ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಹೆಚ್ಚಿನ ವಿವರಗಳು ಲಭ್ಯವಿಲ್ಲ.1