ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಬಾಗೇಪಲ್ಲಿ:- ಪಟ್ಟಣದ ಹೊರವಲಯದ ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು,ಬೆಳ್ಳಗೆ 4 ಘಂಟೆಯಿಂದಲೇ ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದುಬಂದಿದೆ. ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಪ್ರಧಾನ ಅರ್ಚಕ ಪ್ರಕಾಶ್ ರಾವ್ ಮಾತನಾಡಿ ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಹೀಗಾಗಿಯೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ಕುಟುಂಬ ಸಮೇತವಾಗಿ ಬಂದು ದೇವರ ದರ್ಶನ ಪಡೆದರು ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ದೇವಾಲಯದ ಆವರಣವನ್ನು ವಿವಿಧ ಹೂವಿನಿಂದ ಸಿಂಗರಿಸಲಾಗಿದೆ. ಇಂದು ಸಂಜೆಯವರೆಗೆ ಒಂದು ಹದಿನೈದು ಸಾವಿರಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆಯಿದೆ. ಆಂದ್ರಪ್ರದೇಶ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿದ್ದು, ದೇವಾಲಯ ಆಡಳಿತ ಮಂಡಳಿ ಹಾಗೂ ದಾನಿಗಳಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ ನೇತೃತ್ವದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಬಾಗೇಪಲ್ಲಿ:- ಪಟ್ಟಣದ ಹೊರವಲಯದ ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು,ಬೆಳ್ಳಗೆ 4 ಘಂಟೆಯಿಂದಲೇ ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದುಬಂದಿದೆ. ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಪ್ರಧಾನ ಅರ್ಚಕ ಪ್ರಕಾಶ್ ರಾವ್ ಮಾತನಾಡಿ ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಹೀಗಾಗಿಯೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ
ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ಕುಟುಂಬ ಸಮೇತವಾಗಿ ಬಂದು ದೇವರ ದರ್ಶನ ಪಡೆದರು ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ದೇವಾಲಯದ ಆವರಣವನ್ನು ವಿವಿಧ ಹೂವಿನಿಂದ ಸಿಂಗರಿಸಲಾಗಿದೆ. ಇಂದು ಸಂಜೆಯವರೆಗೆ ಒಂದು ಹದಿನೈದು ಸಾವಿರಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆಯಿದೆ. ಆಂದ್ರಪ್ರದೇಶ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿದ್ದು, ದೇವಾಲಯ ಆಡಳಿತ ಮಂಡಳಿ ಹಾಗೂ ದಾನಿಗಳಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ ನೇತೃತ್ವದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
- ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳಲ್ಲಿ ಟ್ರೋಪಿ ಗೆದ್ದ ಮಳ್ಳೂರು ಗ್ರಾಮದ ಜೈಭೀಮ್ ಬಾಯ್ಸ್ ಟೀಮ್2
- ದುರ್ಗಶಕ್ತಿ ಚಿತ್ರಕ್ಕೆ ನೃತ್ಯ ಮಾಡಿದ ಮಿಂಚು ಮತ್ತು ಟೀಮ್1
- ಚಳ್ಳಕೆರೆ :ಕಾಡುಗೊಲ್ಲರ ಆರಾಧ್ಯ (ಕೇತೇದೇವರ ಜಾತ್ರೋತ್ಸವ) ಕ್ಯಾತಪ್ಪನ ದೈವ ಚನ್ನಮ್ಮನಾಗತಿಹಳ್ಳಿಯ ಕ್ಯಾತೇದೇವರ ಜಾತ್ರೆಯು ಡಿ.೧೮ ರಿಂದ ಜ.೯ರ ನಡೆಯುವ (ಕೇತೇದೇವರ ಜಾತ್ರೋತ್ಸವ) ಜಾತ್ರೆಯು ತನ್ನದೇ ಆದ ವಿಶಿಷ್ಟ ಪರಂಪರೆಯಿಂದ ನಡೆಯುವ ಅತಿದೊಡ್ಡ ಜಾತ್ರೆಯಾಗಿದೆ.ಈ ದೇವರ ಪರೀಷೆ ಈ ಭಾಗದ ಬುಡಕಟ್ಟು ಸಮುದಾಯಗಳಿಗೆ ಸಂಸ್ಕೃತಿ ಆಚರಣೆಯನ್ನು ಎತ್ತಿ ತೋರುವ ಜಾತ್ರೆಗಳಲ್ಲಿ ಒಂದಾಗಿದೆ. ಚಿತ್ರದುರ್ಗ ಜಿಲ್ಲೆಯ ತಾಲ್ಲೂಕಿನ ಪುರ‍್ಲೆಹಳ್ಳಿಯ ವಸಲು ದಿನ್ನೆಬ್ಬದಲ್ಲಿ ನಡೆಯುವ ಜಾತ್ರೆಯಲ್ಲಿ ಸುಮಾರು ಒಂದು ತಿಂಗಳ ಕಾಲ ಪಾರಂಪರಿಕವಾಗಿ ಆಚರಣೆಯಲ್ಲಿರುವ ಸಂಪ್ರದಾಯಗಳನ್ನು ಇಂದಿಗೂ ಚಾಚೂ ತಪ್ಪದೇ ಪಾಲಿಸಿಕೊಂಡು ಆಧುನಿಕತೆಯ ಭರಾಟೆಯಲ್ಲಿ ಬುಡಕಟ್ಟು ಸಂಸ್ಕೃತಿಯನ್ನು ಉಳಿಸುವ ಪ್ರಯತ್ನ ನಡೆಯುತ್ತದೆ... ಒಟ್ಟಾರೆಯಾಗಿ ಸಾಂಪ್ರದಾಯಿಕ ಆಚರಣೆಗಳು ಕಾಲಕ್ಕೆ ತಕ್ಕಂತೆ ಬದಲಾಗುತ್ತಾ ಹೋಗುವ ಸಂದರ್ಭದಲ್ಲಿ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡಕಟ್ಟು ಸಮುದಾಯದ ಕಾಡುಗೊಲ್ಲರು ವಿಶಿಷ್ಟ ಆಚರಣೆಯನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷವಾಗಿದೆ ಎನ್ನಬಹುದಾಗಿದೆ... ಯಾವುದೇ ಜಾತಿ, ಧರ್ಮ ಭೇದವಿಲ್ಲದೆ ಇಂದಿಗೂ ಭಾವೈಕ್ಯ ಹಾಗೂ ಸಾಮಾಜಿಕ ಸಾಮರಸ್ಯದಿಂದ ಕೂಡಿದೆ. ಈ ದೇವರ ಜಾತ್ರೆಗೆ ನೆರೆ ಆಂಧ್ರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಜಾತ್ರೆಯಲ್ಲಿ ಭಾಗವಹಿಸುವುದು ಮತ್ತೊಂದು ವಿಶೇಷವಾಗಿದೆ... ಚನ್ನಮ್ಮನಾಗತಿಹಳ್ಳಿಯ ಕೇತೇ ದೇವಸ್ಥಾನದಿಂದ ಕಳಶ ಹೊತ್ತು ತಂದು ಎರದ(ಬಾರೆ),ಬಂದ್ರೆ, ಬ್ಯಾಟೆ,ತುಗ್ಗಲಿ ಇತ್ಯಾದಿ ಕಳ್ಳೆ ಮುಳ್ಳುಗಳಿಂದ ಸಿದ್ದ ಮಾಡಿದ ಕ್ಯಾತಪ್ಪನ ಗುಡಿಯ ಮೇಲೆ ಕೊಣನ ಗೊಲ್ಲ ಮತ್ತು ಬೊಮ್ಮನ ಗೊಲ್ಲರ ಅಣ್ಣತಮ್ಮಂದಿರ ಒಬ್ಬಬ್ಬರನ್ನು ಆಯ್ಕೆ ಮಾಡಿ ಕಳಶ ಇಡಲು ಅವಕಾಶ ನೀಡಲಾಗುತ್ತದೆ.ಇಲ್ಲಿ ದೇವರಿಗೆ ಸಂಬಂದಿಸಿದ ಹಲವಾರು ರೀತಿಯ ಪೂಜಾ ವಿಧಾನಗಳು ವಿಶೇಷವಾಗಿ ನಡೆಯುತ್ತವೆ .. ಇಂದು ಬಾರೆ ಕಳ್ಳೆ ಗುಡಿ ನಿರ್ಮಾಣ ಕಾರ್ಯ ಸಂಭ್ರಮದಿಂದ ಜರುಗಿತು...1
- ಜಾಮೀನು ಬಳಿಕ ಕೆ ಸಿ ವೀರೇಂದ್ರ ಪಪ್ಪಿ ಹೇಳಿದ್ದೇನು1
- ಮಹಾರಾಷ್ಟ್ರ ಪೊಲೀಸರು ಬೆಂಗಳೂರು ಮತ್ತು ಮೈಸೂರಿನಲ್ಲಿ ಬೃಹತ್ ಡ್ರಗ್ಸ್ ಜಾಲವನ್ನು ಬಯಲು ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಗಳು ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾದ ವ್ಯಾಪಕತೆಯನ್ನು ಎತ್ತಿ ತೋರಿಸಿದ್ದು, ಇದು ಸ್ಥಳೀಯ ಪೊಲೀಸರ ವೈಫಲ್ಯದ ಬಗ್ಗೆ ಪ್ರಶ್ನೆಗಳು ಉಲ್ಬಣಿಸುವಂತೆ ಮಾಡಿದೆ. ಈ ಕುರಿತು ಹನೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಸುಧಾಕರ್, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಪೊಲೀಸ್ ಇಲಾಖೆ ಡ್ರಗ್ಸ್ ಜಾಲದ ಬಗ್ಗೆ ಸಮರ್ಪಕ ನಿಗಾವಹಿಸಲು ವಿಫಲವಾಗಿದೆ ಎಂದು ಆರೋಪಿಸಿದ ಅವರು, ಹೊರರಾಜ್ಯದ ಪೊಲೀಸರು ಬಂದು ಇಲ್ಲಿ ಕಾರ್ಯಾಚರಣೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದರು. ಡ್ರಗ್ಸ್ ಮಾಫಿಯಾ ರಾಜ್ಯದ ಪ್ರಮುಖ ನಗರಗಳಲ್ಲಿ ಅಬ್ಬರವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕೈಕಟ್ಟಿ ಕುಳಿತಂತಿದೆ ಎಂದು ಟೀಕಿಸಿದ ಸುಧಾಕರ್, ಯುವಜನರನ್ನು ರಕ್ಷಿಸುವ ಹೊಣೆಗಾರಿಕೆಯನ್ನು ಸರ್ಕಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ತಕ್ಷಣವೇ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.1
- ಗ್ಯಾರೆಂಟಿ ಯೋಜನೆಗಳ ಸಂವಾದ ಕಾರ್ಯಕ್ರಮ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಮಾಂಬಳ್ಳಿ ಹಿಂಡಿ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂವಾದ ಕಾರ್ಯಕ್ರಮ ಆ ಯೋಜನೆ ಮಾಡಲಾಗಿತ್ತು , ಈ ಸಂದರ್ಭದಲ್ಲಿ ಯಳಂದೂರು ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಉಮೇಶ್ ಮಾತನಾಡಿ ಪಂಚ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚನೆ ಪಂಚ ಯೋಜನೆ ಪ್ರತಿ ಜಿಲ್ಲೆಯಲ್ಲಿ ಸುಮಾರು ಮೀಟಿಂಗ್ ಮಾಡಲಾಯ್ತು ನಂತರ ಜಿಲ್ಲಾ ಮಟ್ಟ ತಾಲೂಕು ಮಟ್ಟ ,ಅಧ್ಯಕ್ಷರು ಸದಸ್ಯರ ಸುಮಾರು ಹತ್ತು ಸಭೆ ಮಾಡಲಾಗಿದೆ ಐದನೆಯ ಸಭೆಯಲ್ಲಿ ಚರ್ಚೆ ಮಾಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ಸಂವಾದ ಕಾರ್ಯ ಕಾರ್ಯಕ್ರಮ ಮಾಡಿ ಸವಲತ್ತು ಸರಿಯಾಗಿ ತಲುಪಿತ್ತುದಿಯೇ ಎಂದು ಎಲ್ಲರ ಸಮ್ಮುಖದಲ್ಲಿ ಕುಂದು ಕೊರತೆ ಬಗ್ಗೆ ಚರ್ಚೆ ಮಾಡಿ ಫಲಾನುಭವಿಗಳು ಚರ್ಚೆ ಮಾಡಲು ಸೇರಿದ್ದೇವೆ ಎಂದು ಹೇಳಿದರು. ನಂತರ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷರು ಚಂದ್ರು ಮಾತನಾಡಿ ಸಂವಾದ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅಭಿನಂದಿಸಿ ಪರಾಮರ್ಶೆ ಸಮಿತಿ ಜಿಲ್ಲಾ ಕಮಿಟಿ ತಾಲೂಕು ಮಟ್ಟದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಇದರಲ್ಲಿ ಪ್ರತ್ಯೇಕ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಣಾಮಕಾರಿ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಗೂ ಸಿಡಿಪಿಓ ಅವರು ಕೈ ಜೋಡಿಸಿ ಸ್ಥಳೀಯ ಮಟ್ಟದಲ್ಲಿ ಏನಾದ್ರು ಲೋಪದೋಷಗಳಿದ್ದರೆ ಸರಿಪಡಿಸಿ ಫಲಾನುಭವಿಗಳಿಗೆ ಅನುಕೂಲವಾಗುವಂತೆ ತಮ್ಮ ಕೆಲಸ ಕಾರ್ಯಗಳನ್ನು ಮಾಡಿ ಕೊಡುತ್ತಿದ್ದಾರೆ ಆ ಕೀರ್ತಿ ಅವರಿಗೆ ಸಲ್ಲುತ್ತದೆ, ಮಹಿಳೆಯರು ಉಚಿತ ಅಕ್ಕಿ ಹಸಿವಿನಿಂದ ಬಳಲಬಾರದು ಎಂದು ಬಡವರ ಕಷ್ಟ ಬಗೆಹರಿಸಲು ಸಾಧ್ಯ ಎಂದರು ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆಯ ಹಣವು ಕಂತಿನ ಲೆಕ್ಕ ಇದು ಬರುತ್ತದೆ ತಿಂಗಳ ಲೆಕ್ಕದಲ್ಲಿ ಅಲ್ಲ, ಮುಂದಿನ ದಿನಗಳಲ್ಲಿ ಮುಂದಿನ ಎಲ್ಲಾ ಕತ್ತಿನ ಹಣ ನಿಮ್ಮ ಖಾತೆಗೆ ನೇರವಾಗಿ ಜಮವಾಗಲಿದೆ ಎಂದು ಆಶ್ವಾಸನೆ ನೀಡಿದರು. ಗೃಹ ಜ್ಯೋತಿ ಉಚಿತ ವಿದ್ಯುತ್ ಬಗ್ಗೆ ಮಾತನಾಡಿ ನಂತರ ಅನ್ನ ಭಾಗ್ಯ ಅದರ ಬಗ್ಗೆ ಮಾತನಾಡಿ ಯಾರು ಸಿವಿನಿಂದ ಬಳಲಬಾರದು ಎಂದು ಈ ಯೋಜನೆ ನಮ್ಮ ಸಿದ್ದರಾಮಯ್ಯನವರು ತಂದಿದ್ದಾರೆ ಇದರ ಉಪಯೋಗ ಎಲ್ಲರೂ ಪಡೆದುಕೊಳ್ಳುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದರು ಶಕ್ತಿ ಯೋಜನೆ ಮೂಲಕ ಕೆಎಸ್ಆರ್ಟಿಸಿ ಫ್ರೀ ಆಗಿ ಸರ್ಕಾರಿ ಬಸ್ಸುಗಳಲ್ಲಿ ಸ್ವಾಭಿಮಾನವಾಗಿ ಓಡಾಡಲು ಮಾಡಿಕೊಟ್ಟಿದ್ದಾರೆ, ಇದೆಲ್ಲ ಯೋಜನೆಗಳು ಸ್ವಾಭಿಮಾನದ ಬದುಕು ಮಹಿಳೆಯರು ಕಟ್ಟಿಕೊಳ್ಳಲು ಮಾಡಲಾಗಿದೆ ಎಂದರು. ಶಾಸಕ ಎ. ಆರ್. ಕೃಷ್ಣಮೂರ್ತಿಯವರು ಫಲಾನುಭವಿಗಳ ಜೊತೆ ಸಂವಾದ ನಡೆಸಿ ಅವರ ಕುಂದು ಕೊರತೆಗಳನ್ನು ಪರಿಶೀಲನೆ ಮಾಡಿ ಆದಷ್ಟು ಕುಂದುಕೊರತೆಗಳನ್ನು ಸ್ಥಳದಲ್ಲೇ ಸರಿಪಡಿಸಿಕೊಟ್ಟರು ಉಳಿದಂತಹ ಕುಂದು ಕೊರತೆಗಳು ಮುಂದಿನ ದಿನಗಳಲ್ಲಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಕ್ಕೂ ಮೊದಲು ಯಳಂದೂರು ತಾಲೂಕು ಗ್ಯಾರೆಂಟ್ ಅಧ್ಯಕ್ಷರು ಪ್ರಭು ಪ್ರಸಾದ್ ಮಾತನಾಡಿ ಪಂಚ ಗೌರೆಂಟಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದಾಗೆ ಇದು ಅಸಾಧ್ಯ ಎಂದಿದ್ದರು ಕೆಲವಲ ,35 ದಿನದಲ್ಲಿ ಮಹಿಳೆಯಈಗೆ ಸಬಲೀಕರಣ ಹಾಗು ಸ್ವಲಂಬಿ ಯೋಜನೆಗಳನ್ನು ಜಾರಿಗೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾರಿಗೆ ತಂದರು ಎಂದರು. ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಗ್ಯಾರಂಟಿ ಯೋಜನಗಳ ಅಧ್ಯಕ್ಷ ಚಂದ್ರು, ಬೆಳಂದೂರು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಪ್ರಭು ಪ್ರಸಾದ್,ಮಾಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮಲ್ಲೇಶ್ , ಗ್ರಾಮ ಪಂಚಾಯಿತಿ ಸದಸ್ಯರು ಅಗರ ಮಾಂಬಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಗರ ಮಾಂಬಳ್ಳಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.4
- ಜುಂಜಪ್ಪನ ಗುಡ್ಡೆ ಅಭಿವೃದ್ಧಿ ಅನುದಾನ ವಿಭಜಿಸಿದರೆ ಉಗ್ರ ಹೋರಾಟ: ಮಗೋಡು ಪ್ರತಾಪ್ ಎಚ್ಚರಿಕೆ ಶಿರಾ: ತಾಲೂಕಿನ ಕಳುವರಹಳ್ಳಿ ಜುಂಜಪ್ಪ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ವಿಭಜಿಸಬಾರದು. ಒಂದು ವೇಳೆ ಹಣವನ್ನು ಎರಡು ಭಾಗ ಮಾಡಲು ಮುಂದಾದರೆ ಕಾಡುಗೊಲ್ಲ ಸಮುದಾಯದಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುಖಂಡ ಬಿಜೆಪಿ ಓ ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಗೋಡು ಪ್ರತಾಪ್ ಎಚ್ಚರಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾಗೂ ಶಿರಾ ಉಪಚುನಾವಣೆಯ ವೇಳೆ ಜುಂಜಪ್ಪನ ಗುಡ್ಡೆ ಅಭಿವೃದ್ಧಿಗಾಗಿ 1 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದರು. ಈ ಹಣವು ಜುಂಜಪ್ಪನ ಗುಡ್ಡೆಯ ಸರ್ವತೋಮುಖ ಅಭಿವೃದ್ಧಿಗಾಗಿ ಮೀಸಲಿಟ್ಟದ್ದಾಗಿದೆ ಎಂದರು. ಮಾಜಿ ಶಾಸಕ ಡಾ. ಸಿ.ಎಂ. ರಾಜೇಶ್ ಗೌಡ ಅವರು ಈ ಹಿಂದೆ ಸುದ್ದಿ ಗೋಷ್ಠಿ ನಡೆಸಿ, ಈ 1 ಕೋಟಿ ರೂಪಾಯಿ ಅನುದಾನವನ್ನು ಎರಡು ಭಾಗಗಳಾಗಿ ವಿಂಗಡಿಸಲು ಕೆಲವರು ಸಂಚು ರೂಪಿಸುತ್ತಿದ್ದಾರೆ ಎಂಬ ಆತಂಕಕಾರಿ ವಿಷಯವನ್ನು ಪ್ರಸ್ತಾಪಿಸಿದ್ದರು. ಜುಂಜಪ್ಪನ ಗುಡ್ಡೆಯ ಅಭಿವೃದ್ಧಿಗೆಂದೇ ಮೀಸಲಾಗಿರುವ ಈ ಪೂರ್ಣ ಮೊತ್ತವನ್ನು ಅದೇ ಉದ್ದೇಶಕ್ಕೆ ಬಳಸಬೇಕು ಎಂಬುದು ಸಮುದಾಯದ ಒತ್ತಾಯವಾಗಿದೆ. ಹೋರಾಟದ ಎಚ್ಚರಿಕೆ: "ನಮಗೆ ಸರ್ಕಾರದ ಮೇಲೆ ವಿಶ್ವಾಸವಿದೆ. ಆದರೆ ನಮ್ಮ ಸಮುದಾಯದ ಆರಾಧ್ಯ ದೈವ ಜುಂಜಪ್ಪ ಸ್ವಾಮಿಯ ನೆಲದ ಅಭಿವೃದ್ಧಿಗೆ ಬಂದಿರುವ ಹಣಕ್ಕೆ ಕತ್ತರಿ ಹಾಕುವ ಕೆಲಸ ಮಾಡಬೇಡಿ. ಒಂದು ವೇಳೆ ಈ 1 ಕೋಟಿ ರೂಪಾಯಿಯನ್ನು ಎರಡು ಭಾಗ ಮಾಡಿದರೆ, ಕಾಡುಗೊಲ್ಲ ಸಮುದಾಯವು ಸುಮ್ಮನಿರುವುದಿಲ್ಲ. ಸಮುದಾಯದ ಹಿತದೃಷ್ಟಿಯಿಂದ ಬೀದಿಗಿಳಿದು ಹೋರಾಟ ಮಾಡುವುದು ಖಚಿತ" ಎಂದು ಮಗೋಡು ಪ್ರತಾಪ್ ಈ ಸಂದರ್ಭದಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಈ ಸಂಧರ್ಭದಲ್ಲಿ ಉಪಸ್ಥಿತರಿದ್ದ ಕಾಡುಗೋಲ್ಲ ಸಮಾಜದ ಮುಖಂಡರಾದ ಬಂದಕುಂಟೆ ಮಂಜುನಾಥ್ ಮಾಗೋಡ್ ಪ್ರತಾಪ್ ಈರಣ್ಣ ಪಟೇಲ್ ಗೌಡಪ್ಪ ಅಜ್ಜಣ್ಣ ಓಜಗುಂಟೆ ಶ್ರೀಧರ್ ಕರಿಯಪ್ಪ ಮಧು ತಾವರೆಕೆರೆ ಶಿವಣ್ಣ ಮುದ್ದಣ್ಣ ದೊಡ್ಡಿರಪ್ಪ ಮಹೇಶ್ ಪ್ರಸನ್ನ ಶಿವರಾಜ್ ಈರಣ್ಣ ವ್ಯೆ ಕೆ ಸಿದ್ದೇಶ್ ಹರೀಶ್ ಇನ್ನಿತರರು ಉಪಸ್ಥಿತಿ1
- ಶಾಸಕ ಕೆ ಸಿ ವೀರೇಂದ್ರ ಪಪ್ಪಿಗೆ ಬೇಲ್ ಸಿಹಿ ಹಂಚಿ ಸಂಭ್ರಮಿಸಿದ ಅಭಿಮಾನಿಗಳು.. ಚಿತ್ರದುರ್ಗವಿಧಾನಸಭಾ ಕ್ಷೇತ್ರದ ಶಾಸಕ ಕೆಸಿ ವೀರೇಂದ್ರ ಪಪ್ಪಿಗೆ ಇಂದು ಬೇಲ್ ಸಿಕ್ಕಿದ್ದು ಕೆ.ಸಿ ವಿರೇಂದ್ರ ಪಪ್ಪಿ ಅಭಿಮಾನಿಗಳ ಹಾಗೂ ವಿವಿಧ ಸಂಘಟನೆಯ ಮುಖಂಡರು ಸಿಹಿ ಹಂಚ ಪಟಾಕಿ ಸಿಡಿ ಸಂಭ್ರಮಿಸಿದರು.. ಚಳ್ಳಕೆರೆ ನಗರದ ವಾಲ್ಮೀಕಿ ವೃತದ ಬಳಿ ಕೆ ಸಿ ವೀರೇಂದ್ರ ಪಪ್ಪಿ ಅವರ ಭಾವಚಿತ್ರ ಮುಂದೆ ಪಟಾಕಿ ಹೊಡೆದು ಸಂಭ್ರಮಿಸಿದರು ಈ ವೇಳೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಸ್ವಪ್ನ ವೆಂಕಟೇಶ, ವೈಕುಂಠ ಏಕಾದಶಿ ದಿನವೇ ಚಿತ್ರದುರ್ಗ ಶಾಸಕರಾದ ಕೆ ಸಿ ವೀರೇಂದ್ರ ಪಪ್ಪಿ ಅವರಿಗೆ ನ್ಯಾಯಾಲಯದಿಂದ ಬೇಲ್ ಸಿಕ್ಕಿರುವುದು ಸಂತಸ ತಂದಿದೆ. ಅವರಿಗೆ ಈಗ ಬಂದಿರುವ ಕಳಂಕಗಳಿಂದ ಹೊರ ಬಂದೇ ಬರುತ್ತಾರೆ ಬೇಲ್ ಸಿಕ್ಕಿರುವುದು ಶುಭ ಸಮಾಚಾರ ಎಂದರು. ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಚೇತನ್ ಕುಮಾರ್(ಕುಮ್ಮಿ)ಚಂದ್ರು ಮಾತೃಶ್ರೀ ಮಂಜುನಾಥ, ಶ್ರೀನಿವಾಸ್,ಮಧಕರಿಪಾಪಣ್ಣ, ಸೇರಿದಂತೆ ಕೆಸಿ ವೀರೇಂದ್ರ ಪಪ್ಪಿ ಅಭಿಮಾನಿ ಬಳಗದ ಪದಾಧಿಕಾರಿಗಳು ಮುಖಂಡರು ಇದ್ದರು...1
- ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು. ಚಿತ್ರದುರ್ಗ ತಾಲ್ಲೂಕಿನ ಶಿವಮೊಗ್ಗ ರಸ್ತೆಯ ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಂಡಿದ್ದು ಈ ಹಿನ್ನೆಲೆ ದೇವಸ್ಥಾನವನ್ನ ಸಂಪೂರ್ಣ ತಳಿರು ತೋರಣಗಳಿಂದ ಸಿಂಗರಿಸಿದ್ದು ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿತ್ತು1