ಶಿಡ್ಲಘಟ್ಟದಲ್ಲಿ ವಿಜೃಂಭಣೆಯಿಂದ ಜೈ ಭೀಮ್ ಗೆಳೆಯರ ಬಳಗದ 2ನೇ ವಾರ್ಷಿಕೋತ್ಸವ ಹಾಗೂ ಗಣೇಶೋತ್ಸವ. ಶಿಡ್ಲಘಟ್ಟ: ನಗರದ ಸಿದ್ಧಾರ್ಥ ನಗರದ ಸರ್ಕಾರಿ ಶಾಲೆಯ ಆವರಣದಲ್ಲಿ 'ಜೈ ಭೀಮ್ ಗೆಳೆಯರ ಬಳಗ'ದ ವತಿಯಿಂದ 2ನೇ ವರ್ಷದ ವಾರ್ಷಿಕೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಧಾರ್ಮಿಕ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಸಂಭ್ರಮದಿಂದ ನೆರವೇರಿಸಲಾಯಿತು. ಈ ಪೂಜಾ ಮಹೋತ್ಸವದಲ್ಲಿ ಶಿಡ್ಲಘಟ್ಟ ಕ್ಷೇತ್ರದ ಸಮಾಜ ಸೇವಕ ಸಿ.ಕೆ. ಮೌಲಾ ಶರೀಫ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ನಂತರ ಮಾತನಾಡಿದ ಅವರು, "ಯಾವುದೇ ಶುಭ ಕಾರ್ಯಕ್ಕೆ ಮೊದಲು ಆರಾಧಿಸುವ ದೇವರೆಂದರೆ ಅದು ವಿಘ್ನನಿವಾರಕ ಶ್ರೀ ಗಣೇಶ. 'ಯುವಶಕ್ತಿ ಎದ್ದರೆ ದೇಶ ಎದ್ದಂತೆ' ಎಂಬ ಮಾತಿನಂತೆ ಯುವಕರ ಸಂಘಟಿತ ಶಕ್ತಿಯೇ ದೇಶದ ಬೆನ್ನೆಲುಬು," ಎಂದು ಬಣ್ಣಿಸಿದರು. ಇದೇ ವೇಳೆ ಭಾರತಕ್ಕೆ ಶ್ರೇಷ್ಠ ಸಂವಿಧಾನ ನೀಡಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದರು. "ಯುವಜನತೆ ಸಮಾಜಕ್ಕೆ ಮಾದರಿಯಾಗುವ ಉತ್ತಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಇಂತಹ ಸತ್ಕಾರ್ಯಗಳಲ್ಲಿ ತೊಡಗುವ ಯುವಕರಿಗೆ 'ಡಾ. ಮೌಲಾ ಷರೀಫ್ ಫೌಂಡೇಶನ್' ಯಾವಾಗಲೂ ಬೆನ್ನೆಲುಬಾಗಿ ನಿಲ್ಲಲಿದೆ," ಎಂದು ಭರವಸೆ ನೀಡಿ, ತಮ್ಮನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ ಸಂಘಟಕರಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದ ಅಂಗವಾಗಿ ಆಗಮಿಸಿದ್ದ ನೂರಾರು ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಬೃಹತ್ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಮಾರಂಭದಲ್ಲಿ ಮಹಮ್ಮದ್ ಶರೀಫ್, ಆರಿಫ್ ಪಾಷಾ, ಜೈ ಭೀಮ್ ಗೆಳೆಯರ ಬಳಗದ ಪದಾಧಿಕಾರಿಗಳಾದ ರವೀಂದ್ರ, ನವೀನ್, ಸಾಗರ್, ಜಯಪ್ರಭ, ಮಧು ಕುಮಾರ್, ಮೂರ್ತಿ, ಸುನಿಲ್, ಸಮೀರ್, ಮುರಳಿ, ಸುರೇಶ್ (ಭಗತ್), ದೇವರಾಜ್ ಹಾಗೂ ಸಿದ್ಧಾರ್ಥ ನಗರದ ನೂರಾರು ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದು ಯಶಸ್ವಿಗೊಳಿಸಿದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ

- ಗೌರಿ-ಗಣೇಶ ಹಬ್ಬ: ಸಮಾಜ ಸೇವಕ ಕೊತ್ತನೂರು ಪಂಚಾಕ್ಷರಿ ರೆಡ್ಡಿ ತೋಟದ ಮನೆಯಲ್ಲಿ ವಿಶೇಷ ಪೂಜೆ ಹಾಗೂ ಶುಭಾಶಯ ಸಲ್ಲಿಕೆ1
- ಹೆದ್ದಾರಿಯಲ್ಲಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ದೇವನಹಳ್ಳಿ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.2
- ಶ್ರದ್ಧಾ ಭಕ್ತಿಯಿಂದ ಶ್ರೀ ವಿಘ್ನೇ ವಿನಾಯಕನಿಗೆ ವಿಶೇಷವಾಗಿ ಪೂಜೆ ಸಲ್ಲಿಸಿದ ಚಿಂತಾಮಣಿ ಬೆಸ್ಕಾಂ ಉಪವಿಭಾಗದ ಸಿಬ್ಬಂದಿ *ಚಿಂತಾಮಣಿ ಬೆಸ್ಕಾಂ ಉಪ ವಿಭಾಗದಲ್ಲಿ ಶ್ರದ್ಧಾ-ಭಕ್ತಿಯಿಂದ ಗಣೇಶ ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜೆ* *KRUTHI NEWS KANNADA 24×7* *ಸುದ್ದಿ ಮತ್ತು ಜಾಹೀರಾತುಗಾಗಿ ಸಂಪರ್ಕಿಸಿ:-8892502546*1
- ಚಪ್ಪಲಿ ಧರಿಸಿಯೇ ಗಣೇಶ ಮೂರ್ತಿ ಹಿಡಿದು ಬಿಜೆಪಿ ಪ್ರತಿಭಟನೆ| Veega News Kannada ಚಪ್ಪಲಿ ಧರಿಸಿಯೇ ಗಣೇಶ ಮೂರ್ತಿ ಹಿಡಿದು ಬಿಜೆಪಿ ಪ್ರತಿಭಟನೆ1
- ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ:ಒರ್ವ ಸಾವು ,ಮೂವರಿಗೆ ಗಾಯ ಬೆಂಗಳೂರು:ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ.ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ ಹೊಡೆದಿದೆ.ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ನಡೆದಿದೆ.ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ.ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯವಾಗಿದೆ.ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .1
- * ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿ ಗಣೇಶೋತ್ಸವ ಆಚರಣೆ: ಸಮಾಜ ಸೇವಕ ದೊಡ್ಡವಲ್ಲಬಿ ಲಕ್ಷ್ಮಣಗೌಡ* ಕೋಲಾರ : ಸಮಾಜ ಸೇವೆಯ ಮೂಲಕ ತನ್ನದೇ ಆದ ಹೆಸರು ಘನತೆ ಪಡೆದಿರುವ ಸಮಾಜ ಸೇವಕರು ಮತ್ತು ಎಲ್ ಜಿ ಫೌಂಡೇಶನ್ ಅಧ್ಯಕ್ಷರು ಹಾಗೂ ಆರ್ಯಭಟ ಪ್ರಶಸ್ತಿ ವಿಜೇತರಾದ ಕರುಣಾಮಯಿ ದೊಡ್ಡವಲ್ಲಬಿ ಲಕ್ಷ್ಮಣಗೌಡರ ನೇತೃತ್ವದಲ್ಲಿ ಅವರ ಹುಟ್ಟೂರಾದ ದೊಡ್ಡವಲ್ಲಬಿಯಲ್ಲಿ ಬಾಲಗಂಗಾಧರನಾಥ್ ತಿಲಕ್ ರವರ ಆಶಯದಂತೆ ಜನತೆಯನ್ನು ಒಗ್ಗೂಡಿಸಲು ಎಲ್ ಜಿ ಫೌಂಡೇಶನ್ ಆಶ್ರಯದಲ್ಲಿ ಅದ್ದೂರಿಯಾಗಿ ವೈಭವದಿಂದ ವಿಶೇಷ ಹಾಗೂ ವಿಶಿಷ್ಟವಾಗಿ ಗಣೇಶೋತ್ಸವ ಹಬ್ಬದವನ್ನು ಆಚರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಮಾತಾಡಿದ ಲಕ್ಷ್ಮಣಗೌಡರು ಒಂದು ಊರಿನಲ್ಲಿ ಏಕತೆ ಮೂಡಿಸಲು ಗಣೇಶ ಹಬ್ಬ ಉತ್ತಮ ವೇದಿಕೆಯಾಗಿದ್ದು, ಮಹಿಳೆಯರಿಗೆ ಬಾಗೀನ ಕೊಡುವುದರೊಂದಿಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಲ್ಯಾಪ್‌ಟಾಪ್‌ಗಳನ್ನು ವಿತರಣೆ ಮಾಡಿ, ಮಕ್ಕಳನ್ನು ಪ್ರೋತ್ಸಾಹಿಲು ಮೂಜಿಕಲ್ ಚೇರ್ ಆಡಿಸಿ ಅವರಿಗೆ ಸ್ಕೂಲ್ ಬ್ಯಾಗ್ ಹಾಗೂ ಫೈಲ್ ಗಳನ್ನು ನೀಡುವ ಮೂಲಕ ಹಾಗೂ ಯುವಕರನ್ನು ಉತ್ತೇಜಿಸಲು ಕ್ರಿಕೆಟ್ ಮತ್ತು ವಾಲಿಬಾಲ್ ಕಿಟ್ಟುಗಳನ್ನು ನೀಡುವದರೊಂದಿಗೆ ಮತ್ತು ಹಿರಿಯರಿಗೆ ಮಡಿಕೆ ಹೊಡೆಯುವ ಕಾರ್ಯಕ್ರಮ ನಡೆಸಿ ಅವರುಗಳಿಗೆ ರಾಮ್ ರಾಜ್ ರೇಷ್ಮೆ ಪಂಚೆ ಮತ್ತು ಶರ್ಟ್, ಶಲ್ಯ ವಿತರಿಸಿ , ಎಲ್ಲಾ ಜಾತಿ ವರ್ಗ ಹಾಗೂ ಎಲ್ಲಾ ಪಕ್ಷದ ವರನ್ನು ಒಗ್ಗೂಡಿಸಿ ಗ್ರಾಮದಲ್ಲಿ ಒಗ್ಗಟು ಪ್ರದರ್ಶಿಸು ಮೂಲಕ ಅದ್ದೂರಿಯಾಗಿ ಹಾಗೂ ವೈಭವದಿಂದ ಗೌರಿ ಗಣೇಶನ ಹಬ್ಬವನ್ನು ಎಲ್ ಜಿ ಫೌಂಡೇಶನ್ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು ಎಂದು ತಿಳಿಸಿದರು. ಇದೇ ಅಲ್ಲದೆ ಊರಿನ ಹೈಮಾಸ್ಟ್ ದೀಪ ಮತ್ತು ದೇವಾಲಯದ ದೀಪಗಳ ದುರಸ್ತಿ ಮಾಡಿಸಿದ್ದು,ಸುಮಾರು 500 ಜನ ಹೆಣ್ಣು ಮಕ್ಕಳಿಗೆ ಹಬ್ಬದ ಪ್ರಯುಕ್ತ ಬಾಗೀನ ನೀಡಲಾಗಿದ್ದು,ಮಕ್ಕಳು, ಯುವಕರು ಹಾಗೂ ಹಿರಿಯರು ಸೇರಿ ಒಂದು ಸಾವಿರಕ್ಕೂ ಹೆಚ್ಚು ಜನ ಸೇರಿ ಊರಿನ ಅಭಿವೃದ್ಧಿಯ ಸಂಕೇತವನ್ನು ತೋರಿಸಲು ಹಾಗೂ ಬಾಲಗಂಗಾಧರ ನಾಥರ ಆಶಯವನ್ನು ಸಾಕಾರಗೊಳಿಸಲು ಹಿಂದೂಗಳು ಒಗ್ಗೂಡಿ ಹಬ್ಬವನ್ನು ಆಚರಣೆ ಮಾಡುವ ಮೂಲಕ ಸಂಭ್ರಮಿಸಲಾಯಿತು ಎಂದು ಲಕ್ಷ್ಮಣಗೌಡರು ತಿಳಿಸಿದರು. ಹಬ್ಬದ ಅಂಗವಾಗಿ ಆಟಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.4
- ಹುಬ್ಬಳ್ಳಿ ಬಾಣಿ ಓಣಿಯಲ್ಲಿ ಶೀರಕೊಳ ಫ್ಯಾಮಿಲಿ ಗಣೇಶ ಪೂಜೆ ಅದ್ಭುತ! | Hubli Ganesh Festivals ಹುಬ್ಬಳ್ಳಿ ಬಾಣಿ ಓಣಿಯಲ್ಲಿ ಶೀರಕೊಳ ಫ್ಯಾಮಿಲಿಯವರ ಮನೆಯಲ್ಲಿ ನಡೆದ ಅದ್ಭುತ ಗಣೇಶ ಪೂಜೆ! 🙏 ಗಣೇಶ ಚತುರ್ಥಿಯ ಈ ಶುಭ ಸಂದರ್ಭದಲ್ಲಿ ಶೀರಕೊಳ ಕುಟುಂಬದವರು ಅತ್ಯಂತ ಭಕ್ತಿ ಮತ್ತು ಸಂಭ್ರಮದಿಂದ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದಾರೆ. ಮನೆಯ ಅಲಂಕಾರ, ಪ್ರಸಾದ, ಮತ್ತು ಇಡೀ ಕುಟುಂಬದ ಭಕ್ತಿ ನಿಜಕ್ಕೂ ನೋಡುವಂತಿದೆ. ಈ ವರ್ಷದ ಗಣೇಶ ಹಬ್ಬ ಹುಬ್ಬಳ್ಳಿಯಲ್ಲಿ ತುಂಬಾ ವಿಶೇಷವಾಗಿ ಆಚರಿಸಲಾಗುತ್ತಿದೆ. ನೀವು ಕೂಡ ನಿಮ್ಮ ಮನೆಯ ಗಣೇಶ ಪೂಜೆಯ ಫೋಟೋವನ್ನು ಕಮೆಂಟ್ ನಲ್ಲಿ ಹಂಚಿಕೊಳ್ಳಿ. @AyyappaShirkol @KallappaShirkol @Vedusdairy @PralhadJoshiOfficial *📍 Location:* ಬಾಣಿ ಓಣಿ, ಹುಬ್ಬಳ್ಳಿ *👨👩👧👦 Family:* ಶೀರಕೊಳ ಫ್ಯಾಮಿಲಿ ವಿಡಿಯೋ ಇಷ್ಟ ಆದರೆ Like ಮಾಡಿ, Share ಮಾಡಿ ಮತ್ತು ನಮ್ಮ Channel ಅನ್ನು Subscribe ಮಾಡಿ! ಗಣಪತಿ ಬಪ್ಪಾ ಮೋರ್ಯಾ! 🙏 #hubli #hubballi #banioni #ganeshchaturthi #ganeshfestival #sheerkolfamily #hubballiganesha #karnataka #ganeshpooja #hubballidharwad ### 🔖 TAGS (YouTube Tags Box me dalo) hubli bani oni ganesh pooja, sheerkol family ganesh, hubballi ganesh festival 2025, bani oni hubli, hubli ganesh chaturthi, dharwad ganesh festival, kannada ganesh pooja, hubballi ka Ganesh @citynextnews24731
- ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ ಗ್ರಾಮಸ್ಥರು ದೇವನಹಳ್ಳಿ ನೂರ ಒಂದು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆ ಎತ್ತಿನ ಗಾಡಿಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮೆರವಣಿಗೆ ಮಾಡಿ ವಿಸರ್ಜಿಸಿದ ಗ್ರಾಮಸ್ಥರು ದೇವನಹಳ್ಳಿಯ ಪ್ರಸನ್ನಹಳ್ಳಿಯ ಜಟಾಯು ಯುವಸೇನೆವತಿಯಿಂದ ಗಣೇಶೋತ್ಸವ ಆಯೋಜನೆ ಯಾವುದೆ ಡಿಜೆ ಬಳಕೆ ಮಾಡದೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಸಾಂಪ್ರದಾಯಿಕವಾಗಿ ಮೆರವಣಿಗೆ ಎತ್ತಿನಗಾಡಿ ಮತ್ತು ಮಹಿಳೆಯರಿಂದ ತಟ್ಟೆಗಳಲ್ಲಿ ಗಣಪತಿ ಮೂರ್ತಿಗಳ ಹೊತ್ತು ಮೆರವಣಿಗೆ ಪ್ರಸನ್ನಹಳ್ಳಿ ಇಂದ ಚಿಕ್ಕಕೆರೆವರೆಗೆ ಮೆರವಣಿಗೆ ಮಾಡಿ ಪರಿಸರ ಸ್ನೇಹಿ ಮೂರ್ತಿಗಳ ವಿಸರ್ಜನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಪ್ರಸನ್ನ ಹಳ್ಳಿ3