logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಯಪುರ ಗ್ರಾಮ ಪಂಚಾಯತಿಯ ಸಿದ್ದಯ್ಯ ಕೋಟೆಯ ವಿಜಯ ಮಹಾಂತೇಶ್ವರ ಶಾಖಾ ಮಠದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸುಗಮ ಸಂಗೀತ ಮತ್ತು ಶಾಸ್ತ್ರೀಯ ಸಂಗೀತ ತರಬೇತಿ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ ಎನ್. ಚೆಲುವಾದಿ ಅವರು, ಭಾರತೀಯ ಸಂಸ್ಕೃತಿಯಲ್ಲಿ ಸಂಗೀತಕ್ಕೆ ಅತ್ಯುನ್ನತ ಸ್ಥಾನವಿದ್ದು, ಇದನ್ನು ಉಳಿಸುವ ವ್ಯವಸ್ಥೆ ನಮ್ಮದಾಗಿದೆ ಎಂದು ತಿಳಿಸಿದರು. ಈ ತರಬೇತಿ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿತ್ರದುರ್ಗ ಹಾಗೂ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಮೊಳಕಾಲ್ಮೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿತ್ತು. ಸಂಗೀತವು ನಮ್ಮ ಜೀವನದ ಜೀವನಾಡಿಯಾಗಿದ್ದು, ಯಾವುದೇ ಭೇದ ಭಾವವಿಲ್ಲದೆ ಎಲ್ಲರನ್ನೂ ಒಂದುಗೂಡಿಸುವ ಶಕ್ತಿಯನ್ನು ಹೊಂದಿದೆ ಎಂದು ಅಶೋಕ ಎನ್. ಚೆಲುವಾದಿ ಅಭಿಪ್ರಾಯಪಟ್ಟರು. ಸಂಗೀತವು ಮಾನಸಿಕ ನೆಮ್ಮದಿ ಹಾಗೂ ಸಂಸ್ಕಾರವನ್ನು ನೀಡುತ್ತದೆ, ಆದ್ದರಿಂದ ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳು ಸಂಗೀತವನ್ನು ಅಭ್ಯಾಸ ಮಾಡುವುದು ಉತ್ತಮ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಈ ತರಬೇತಿಯ ಸದುಪಯೋಗ ಪಡೆದುಕೊಂಡು ಒಳ್ಳೆಯ ಸಂಗೀತಗಾರರಾಗಿ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ಅವರು ಕರೆ ನೀಡಿದರು. ಗಡಿಭಾಗದಲ್ಲಿ ಕೃಷಿ, ಕಾಯಕ ಹಾಗೂ ದಾಸೋಹದ ಜೊತೆಗೆ ಸಂಗೀತ, ಸಾಹಿತ್ಯ ಮತ್ತು ಕಲೆಗೆ ಮಠದ ಪೂಜ್ಯರು ನೀಡುತ್ತಿರುವ ಪ್ರೋತ್ಸಾಹವನ್ನು ಶ್ಲಾಘಿಸಿದರು. ಮಠದ ಪರಮ ಪೂಜ್ಯ ಬಸವಲಿಂಗಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಸಂಗೀತ ತರಬೇತಿಯು ಉತ್ತಮ ವ್ಯಕ್ತಿತ್ವದ ಗುಣಗಳನ್ನು ಹೆಚ್ಚಿಸುವುದರ ಜೊತೆಗೆ ಮಾನಸಿಕ ನೆಮ್ಮದಿ ಮತ್ತು ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ ಎಂದರು. ಈ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಸಹಾಯಕ ನಿರ್ದೇಶಕ ಡಾ. ಬಿ.ಎಂ. ಗುರುನಾಥ್, ಮಠದ ಕಾರ್ಯದರ್ಶಿ ಪಿ.ಆರ್. ಕಾಂತರಾಜ್, ಬಸವ ಕೇಂದ್ರದ ಅಧ್ಯಕ್ಷ ಭೋಗೇಶ್ ಗೌಡ್ರು, ಸಮಾಜ ಸೇವಕ ಕೆ.ಪಿ. ಪಂಪಾಪತಿ, ತಿಪ್ಪೇಸ್ವಾಮಿ, ಸಂಗೀತ ತರಬೇತಿದಾರ ಶಿವರಾಜ್ ಪಾಟೀಲ್, ಸಂಗೀತ ಶಿಕ್ಷಕ ಕೆ.ಓ. ಶಿವಣ್ಣ, ಸಂಗೀತ ಕಲಾವಿದ ಎಂ. ನುಂಕೇಶ್, ಅಮುಕುಂದಿ ಕೆ. ಗಂಗಾಧರ, ಗುರು ಶಂಕ್ರಪ್ಪ, ಲಕ್ಷ್ಮಣಪ್ಪ ಮತ್ತು ಜಗದೀಶ್ ಉಪಸ್ಥಿತರಿದ್ದರು. ಇವರೊಂದಿಗೆ ವಿಜಯ ಮಹಾಂತೇಶ್ವರ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ತುಳಸಿ, ಅಕ್ಕನ ಬಳಗ ಅಧ್ಯಕ್ಷರಾದ ಎಂ.ಬಿ. ಸಂಧ್ಯಾ, ಎಂ.ಬಿ. ಮಹಾಂತಮ್ಮ, ರುದ್ರಮ್ಮ, ಸುನೀತಾ, ದೀಪ, ಲಕ್ಷ್ಮೀ ದೇವಿ, ಹಂಪಕ್ಕ ಹಾಗೂ ವಿವಿಧ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.

5 hrs ago
user_Basavaraj
Basavaraj
Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
5 hrs ago
687277d1-41b1-41a3-91e6-66b9040200f6

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಯಪುರ ಗ್ರಾಮ ಪಂಚಾಯತಿಯ ಸಿದ್ದಯ್ಯ ಕೋಟೆಯ ವಿಜಯ ಮಹಾಂತೇಶ್ವರ ಶಾಖಾ ಮಠದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸುಗಮ ಸಂಗೀತ ಮತ್ತು ಶಾಸ್ತ್ರೀಯ ಸಂಗೀತ ತರಬೇತಿ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ ಎನ್. ಚೆಲುವಾದಿ ಅವರು, ಭಾರತೀಯ ಸಂಸ್ಕೃತಿಯಲ್ಲಿ ಸಂಗೀತಕ್ಕೆ ಅತ್ಯುನ್ನತ ಸ್ಥಾನವಿದ್ದು, ಇದನ್ನು ಉಳಿಸುವ ವ್ಯವಸ್ಥೆ ನಮ್ಮದಾಗಿದೆ ಎಂದು ತಿಳಿಸಿದರು. ಈ ತರಬೇತಿ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿತ್ರದುರ್ಗ ಹಾಗೂ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಮೊಳಕಾಲ್ಮೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿತ್ತು. ಸಂಗೀತವು ನಮ್ಮ ಜೀವನದ ಜೀವನಾಡಿಯಾಗಿದ್ದು, ಯಾವುದೇ ಭೇದ ಭಾವವಿಲ್ಲದೆ ಎಲ್ಲರನ್ನೂ ಒಂದುಗೂಡಿಸುವ ಶಕ್ತಿಯನ್ನು ಹೊಂದಿದೆ ಎಂದು ಅಶೋಕ ಎನ್. ಚೆಲುವಾದಿ ಅಭಿಪ್ರಾಯಪಟ್ಟರು. ಸಂಗೀತವು ಮಾನಸಿಕ ನೆಮ್ಮದಿ ಹಾಗೂ ಸಂಸ್ಕಾರವನ್ನು ನೀಡುತ್ತದೆ, ಆದ್ದರಿಂದ ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳು ಸಂಗೀತವನ್ನು ಅಭ್ಯಾಸ ಮಾಡುವುದು ಉತ್ತಮ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಈ ತರಬೇತಿಯ ಸದುಪಯೋಗ ಪಡೆದುಕೊಂಡು ಒಳ್ಳೆಯ ಸಂಗೀತಗಾರರಾಗಿ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ಅವರು ಕರೆ ನೀಡಿದರು. ಗಡಿಭಾಗದಲ್ಲಿ

a8b9fbe9-fdab-4b31-abc8-f76cd81600df

ಕೃಷಿ, ಕಾಯಕ ಹಾಗೂ ದಾಸೋಹದ ಜೊತೆಗೆ ಸಂಗೀತ, ಸಾಹಿತ್ಯ ಮತ್ತು ಕಲೆಗೆ ಮಠದ ಪೂಜ್ಯರು ನೀಡುತ್ತಿರುವ ಪ್ರೋತ್ಸಾಹವನ್ನು ಶ್ಲಾಘಿಸಿದರು. ಮಠದ ಪರಮ ಪೂಜ್ಯ ಬಸವಲಿಂಗಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಸಂಗೀತ ತರಬೇತಿಯು ಉತ್ತಮ ವ್ಯಕ್ತಿತ್ವದ ಗುಣಗಳನ್ನು ಹೆಚ್ಚಿಸುವುದರ ಜೊತೆಗೆ ಮಾನಸಿಕ ನೆಮ್ಮದಿ ಮತ್ತು ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ ಎಂದರು. ಈ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಸಹಾಯಕ ನಿರ್ದೇಶಕ ಡಾ. ಬಿ.ಎಂ. ಗುರುನಾಥ್, ಮಠದ ಕಾರ್ಯದರ್ಶಿ ಪಿ.ಆರ್. ಕಾಂತರಾಜ್, ಬಸವ ಕೇಂದ್ರದ ಅಧ್ಯಕ್ಷ ಭೋಗೇಶ್ ಗೌಡ್ರು, ಸಮಾಜ ಸೇವಕ ಕೆ.ಪಿ. ಪಂಪಾಪತಿ, ತಿಪ್ಪೇಸ್ವಾಮಿ, ಸಂಗೀತ ತರಬೇತಿದಾರ ಶಿವರಾಜ್ ಪಾಟೀಲ್, ಸಂಗೀತ ಶಿಕ್ಷಕ ಕೆ.ಓ. ಶಿವಣ್ಣ, ಸಂಗೀತ ಕಲಾವಿದ ಎಂ. ನುಂಕೇಶ್, ಅಮುಕುಂದಿ ಕೆ. ಗಂಗಾಧರ, ಗುರು ಶಂಕ್ರಪ್ಪ, ಲಕ್ಷ್ಮಣಪ್ಪ ಮತ್ತು ಜಗದೀಶ್ ಉಪಸ್ಥಿತರಿದ್ದರು. ಇವರೊಂದಿಗೆ ವಿಜಯ ಮಹಾಂತೇಶ್ವರ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ತುಳಸಿ, ಅಕ್ಕನ ಬಳಗ ಅಧ್ಯಕ್ಷರಾದ ಎಂ.ಬಿ. ಸಂಧ್ಯಾ, ಎಂ.ಬಿ. ಮಹಾಂತಮ್ಮ, ರುದ್ರಮ್ಮ, ಸುನೀತಾ, ದೀಪ, ಲಕ್ಷ್ಮೀ ದೇವಿ, ಹಂಪಕ್ಕ ಹಾಗೂ ವಿವಿಧ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.

More news from ಕರ್ನಾಟಕ and nearby areas
  • ಚಿತ್ರದುರ್ಗದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ನೀಡಲಾಗುತ್ತಿರುವ ಸ್ವಾವಲಂಬಿ ಸಂಚಾರಿ ಸಾರಥಿ ವಾಹನವನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷರಾದ ಎಂ. ಹಾರೋಗೆರೆ ಎಂ. ಮಹೇಶ್ ಅವರು ಟ್ಯಾಕ್ಸಿ ವಾಹನವನ್ನು ಹಸ್ತಾಂತರಿಸಿದ್ದಲ್ಲದೆ, ತಾವೇ ಸ್ವತಃ ಆ ವಾಹನವನ್ನು ಚಾಲನೆ ಮಾಡಿದರು. ಈ ಸಂದರ್ಭದಲ್ಲಿ ಕಾಡುಗೊಲ್ಲ ಸಂಘದ ತಾಲೂಕು ಅಧ್ಯಕ್ಷ ರಾಜಣ್ಣ ಬೂದಿಹಳ್ಳಿ, ಗ್ಯಾರಂಟಿ ಅನುಷ್ಠಾನ ಸಮಿತಿಗಳ ತಾಲೂಕು ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಹಾಗೂ ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಟಿ. ಶಶಿಧರ್ ಉಪಸ್ಥಿತರಿದ್ದರು. ಇವರೊಂದಿಗೆ ಮುಖಂಡರಾದ ಮಂಜುನಾಥ್ ಸಿದ್ದಪುರ, ಮಂಜುನಾಥ್, ನಿಸರ್ಗ ಗೋವಿಂದರಾಜ ಸೇರಿದಂತೆ ನಿಗಮ ಮಂಡಳಿಯ ಅಧಿಕಾರಿಗಳು ಭಾಗವಹಿಸಿದ್ದರು.
    1
    ಚಿತ್ರದುರ್ಗದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ನೀಡಲಾಗುತ್ತಿರುವ ಸ್ವಾವಲಂಬಿ ಸಂಚಾರಿ ಸಾರಥಿ ವಾಹನವನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷರಾದ ಎಂ. ಹಾರೋಗೆರೆ ಎಂ. ಮಹೇಶ್ ಅವರು ಟ್ಯಾಕ್ಸಿ ವಾಹನವನ್ನು ಹಸ್ತಾಂತರಿಸಿದ್ದಲ್ಲದೆ, ತಾವೇ ಸ್ವತಃ ಆ ವಾಹನವನ್ನು ಚಾಲನೆ ಮಾಡಿದರು.

ಈ ಸಂದರ್ಭದಲ್ಲಿ ಕಾಡುಗೊಲ್ಲ ಸಂಘದ ತಾಲೂಕು ಅಧ್ಯಕ್ಷ ರಾಜಣ್ಣ ಬೂದಿಹಳ್ಳಿ, ಗ್ಯಾರಂಟಿ ಅನುಷ್ಠಾನ ಸಮಿತಿಗಳ ತಾಲೂಕು ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಹಾಗೂ ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಟಿ. ಶಶಿಧರ್ ಉಪಸ್ಥಿತರಿದ್ದರು. ಇವರೊಂದಿಗೆ ಮುಖಂಡರಾದ ಮಂಜುನಾಥ್ ಸಿದ್ದಪುರ, ಮಂಜುನಾಥ್, ನಿಸರ್ಗ ಗೋವಿಂದರಾಜ ಸೇರಿದಂತೆ ನಿಗಮ ಮಂಡಳಿಯ ಅಧಿಕಾರಿಗಳು ಭಾಗವಹಿಸಿದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಕಾಂಗ್ರೆಸ್ ನಾಯಕರು ತೀವ್ರವಾಗಿ ಭಯಭೀತರಾಗಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರಿಗೆ ಅಲ್ಪಸಂಖ್ಯಾತರ, ಬಡವರ ಇಲ್ಲವೇ ದಲಿತ ಮತಗಳು ಕೈತಪ್ಪುತ್ತವೆ ಎಂಬ ಭಯವಿಲ್ಲ. ಬದಲಿಗೆ, ರಾಹುಲ್ ಗಾಂಧಿ ಅವರು ಎರಡು ಪೌರತ್ವ ಹೊಂದಿದ್ದು, ಆ ಗುಟ್ಟು ರಟ್ಟಾದರೆ ಅವರ ಲೋಕಸಭಾ ಸದಸ್ಯತ್ವ ಕೈತಪ್ಪಿ ಹೋಗುತ್ತದೆ ಎಂಬ ಭಯ ರಾಹುಲ್ ಗಾಂಧಿ ಅವರಿಗೆ ಉಂಟಾಗಿದೆ. ಇದೇ ಕಾರಣಕ್ಕಾಗಿಯೇ ಅವರು ದೇಶದಾದ್ಯಂತ ಇಂತಹ ಗಲಾಟೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದಲ್ಲದೆ, SIRನಿಂದ ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಗೋವಿಂದ ಕಾರಜೋಳ ಅವರು, ಕಾಂಗ್ರೆಸ್ ಮುಖಂಡರು ಭಯಭೀತರಾಗಿದ್ದಾರೆ ಎಂದು ಪಕ್ಷದ ವಿರುದ್ಧ ತೀವ್ರವಾಗಿ ಹರಿಹಾಯ್ದಿದ್ದಾರೆ.
    1
    ಕಾಂಗ್ರೆಸ್ ನಾಯಕರು ತೀವ್ರವಾಗಿ ಭಯಭೀತರಾಗಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರಿಗೆ ಅಲ್ಪಸಂಖ್ಯಾತರ, ಬಡವರ ಇಲ್ಲವೇ ದಲಿತ ಮತಗಳು ಕೈತಪ್ಪುತ್ತವೆ ಎಂಬ ಭಯವಿಲ್ಲ. ಬದಲಿಗೆ, ರಾಹುಲ್ ಗಾಂಧಿ ಅವರು ಎರಡು ಪೌರತ್ವ ಹೊಂದಿದ್ದು, ಆ ಗುಟ್ಟು ರಟ್ಟಾದರೆ ಅವರ ಲೋಕಸಭಾ ಸದಸ್ಯತ್ವ ಕೈತಪ್ಪಿ ಹೋಗುತ್ತದೆ ಎಂಬ ಭಯ ರಾಹುಲ್ ಗಾಂಧಿ ಅವರಿಗೆ ಉಂಟಾಗಿದೆ. ಇದೇ ಕಾರಣಕ್ಕಾಗಿಯೇ ಅವರು ದೇಶದಾದ್ಯಂತ ಇಂತಹ ಗಲಾಟೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದಲ್ಲದೆ, SIRನಿಂದ ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಗೋವಿಂದ ಕಾರಜೋಳ ಅವರು, ಕಾಂಗ್ರೆಸ್ ಮುಖಂಡರು ಭಯಭೀತರಾಗಿದ್ದಾರೆ ಎಂದು ಪಕ್ಷದ ವಿರುದ್ಧ ತೀವ್ರವಾಗಿ ಹರಿಹಾಯ್ದಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ತೀರ್ಥಹಳ್ಳಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಅಪರಿಚಿತ ವ್ಯಕ್ತಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕದಲ್ಲಿದ್ದ ವಿದ್ಯಾರ್ಥಿನಿ ಈ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂದು ವರದಿ ತಿಳಿಸಿದೆ. ಇಂತಹ ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಜನರು ಅತ್ಯಂತ ಜಾಗರೂಕರಾಗಿರಬೇಕಾದ ಮತ್ತು ಎಚ್ಚರಿಕೆ ವಹಿಸಬೇಕಾದ ಅಗತ್ಯವನ್ನು ಎತ್ತಿ ತೋರಿಸುತ್ತವೆ.
    1
    ತೀರ್ಥಹಳ್ಳಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಅಪರಿಚಿತ ವ್ಯಕ್ತಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕದಲ್ಲಿದ್ದ ವಿದ್ಯಾರ್ಥಿನಿ ಈ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂದು ವರದಿ ತಿಳಿಸಿದೆ. ಇಂತಹ ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಜನರು ಅತ್ಯಂತ ಜಾಗರೂಕರಾಗಿರಬೇಕಾದ ಮತ್ತು ಎಚ್ಚರಿಕೆ ವಹಿಸಬೇಕಾದ ಅಗತ್ಯವನ್ನು ಎತ್ತಿ ತೋರಿಸುತ್ತವೆ.
    user_ತೀರ್ಥಹಳ್ಳಿ ಲೈವ್ (Thirthahalli
    ತೀರ್ಥಹಳ್ಳಿ ಲೈವ್ (Thirthahalli
    Teacher ಕೊಪ್ಪಳ, ಕೊಪ್ಪಳ, ಕರ್ನಾಟಕ•
    11 min ago
  • ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಎಪಿಎಮ್‌ಸಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಕುಕನೂರು ತಾಲೂಕು ಘಟಕ, ಯುವ ಘಟಕ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಆದೇಶ ಪತ್ರ ಹಾಗೂ ಸದಸ್ಯತ್ವ ಕಾರ್ಡ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ ಅವರು, ಬಣಜಿಗ ಸಮಾಜದ ಏಳಿಗೆಗಾಗಿ ಪ್ರತಿಯೊಬ್ಬ ವ್ಯಕ್ತಿಯೂ ಏಕತೆಯಿಂದ ಮುನ್ನಡೆದಾಗ ಮಾತ್ರ ನಮ್ಮ ಸಮಾಜ ಬಲವರ್ಧನೆಗೊಂಡು ಉನ್ನತ ಸ್ಥಿತಿಗೆ ಏರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಂಘಟನೆಯಲ್ಲಿ ಯಾರೂ ಮೇಲು-ಕೀಳು ಎಂಬ ಭಿನ್ನಾಭಿಪ್ರಾಯ ಹೊಂದಬಾರದು ಹಾಗೂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರುವವರು ಅಹಂಕಾರದಿಂದ ನಡೆದುಕೊಳ್ಳದೆ ಸಮಾಜದ ಸೇವಕರಾಗಿ ಕೆಲಸ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಬಂಗಾರ ಶೆಟ್ರು ಮಾತನಾಡಿ, ಒಳಜಗಳ ಮರೆತು ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಬಣಜಿಗ ಸಮಾಜವು ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಬಸವತತ್ವ ಮತ್ತು ಲಿಂಗಾಯತ ಧರ್ಮದ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಈ ಸಮಾಜದ ಧ್ಯೇಯಗಳನ್ನು ಉಳಿಸಿ ಬೆಳೆಸಲು ಸಮಾಜದ ಯುವಕರು ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು. ಇದೇ ವೇಳೆ ರಾಜ್ಯ ಕಾರ್ಯಕಾರಣಿ ಸದಸ್ಯ ಅಂದಾನಪ್ಪ ಅಂಗಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಶ್ವನಾಥ್ ಮಳಗಿ ಹಾಗೂ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಂಗಣ್ಣ ತೆಂಗಿನಕಾಯಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ಬಸವರಾಜ ಜೋಳದ, ವಿಜಯಕುಮಾರ ಕರಡಿ, ಪ್ರಭು ಹೊಸಅಂಗಡಿ, ಶರಣಪ್ಪ ಗದಗಿನ, ಈಶಪ್ಪ ಅಂಗಡಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಶರಣಪ್ಪ ಅಂಗಡಿ, ಜಿಲ್ಲಾ ಮಾಧ್ಯಮ ಪ್ರತಿನಿಧಿ ಮಂಜುನಾಥ ಅಂಗಡಿ, ಮಹಿಳಾ ನಿಯೋಜಿತ ಅಧ್ಯಕ್ಷೆ ಅಕ್ಕಮ್ಮ ಅಂಗಡಿ ಸೇರಿದಂತೆ ಬಣಜಿಗ ಸಮಾಜದ ಹಿರಿಯರು, ಮಹಿಳೆಯರು ಮತ್ತು ಯುವಕರು ಪಾಲ್ಗೊಂಡಿದ್ದರು. ಸಿ.ಎಸ್. ಅಂಗಡಿ ಕಾರ್ಯಕ್ರಮ ನಿರೂಪಿಸಿದರು.
    2
    ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಎಪಿಎಮ್‌ಸಿ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಕುಕನೂರು ತಾಲೂಕು ಘಟಕ, ಯುವ ಘಟಕ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಆದೇಶ ಪತ್ರ ಹಾಗೂ ಸದಸ್ಯತ್ವ ಕಾರ್ಡ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ ಅವರು, ಬಣಜಿಗ ಸಮಾಜದ ಏಳಿಗೆಗಾಗಿ ಪ್ರತಿಯೊಬ್ಬ ವ್ಯಕ್ತಿಯೂ ಏಕತೆಯಿಂದ ಮುನ್ನಡೆದಾಗ ಮಾತ್ರ ನಮ್ಮ ಸಮಾಜ ಬಲವರ್ಧನೆಗೊಂಡು ಉನ್ನತ ಸ್ಥಿತಿಗೆ ಏರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಂಘಟನೆಯಲ್ಲಿ ಯಾರೂ ಮೇಲು-ಕೀಳು ಎಂಬ ಭಿನ್ನಾಭಿಪ್ರಾಯ ಹೊಂದಬಾರದು ಹಾಗೂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರುವವರು ಅಹಂಕಾರದಿಂದ ನಡೆದುಕೊಳ್ಳದೆ ಸಮಾಜದ ಸೇವಕರಾಗಿ ಕೆಲಸ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಬಂಗಾರ ಶೆಟ್ರು ಮಾತನಾಡಿ, ಒಳಜಗಳ ಮರೆತು ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಬಣಜಿಗ ಸಮಾಜವು ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಬಸವತತ್ವ ಮತ್ತು ಲಿಂಗಾಯತ ಧರ್ಮದ ಮೌಲ್ಯಗಳನ್ನು ಮೈಗೂಡಿಸಿಕೊಂಡಿರುವ ಈ ಸಮಾಜದ ಧ್ಯೇಯಗಳನ್ನು ಉಳಿಸಿ ಬೆಳೆಸಲು ಸಮಾಜದ ಯುವಕರು ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು.

ಇದೇ ವೇಳೆ ರಾಜ್ಯ ಕಾರ್ಯಕಾರಣಿ ಸದಸ್ಯ ಅಂದಾನಪ್ಪ ಅಂಗಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಶ್ವನಾಥ್ ಮಳಗಿ ಹಾಗೂ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸಂಗಣ್ಣ ತೆಂಗಿನಕಾಯಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಮಾಜದ ಪ್ರಮುಖರಾದ ಬಸವರಾಜ ಜೋಳದ, ವಿಜಯಕುಮಾರ ಕರಡಿ, ಪ್ರಭು ಹೊಸಅಂಗಡಿ, ಶರಣಪ್ಪ ಗದಗಿನ, ಈಶಪ್ಪ ಅಂಗಡಿ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಶರಣಪ್ಪ ಅಂಗಡಿ, ಜಿಲ್ಲಾ ಮಾಧ್ಯಮ ಪ್ರತಿನಿಧಿ ಮಂಜುನಾಥ ಅಂಗಡಿ, ಮಹಿಳಾ ನಿಯೋಜಿತ ಅಧ್ಯಕ್ಷೆ ಅಕ್ಕಮ್ಮ ಅಂಗಡಿ ಸೇರಿದಂತೆ ಬಣಜಿಗ ಸಮಾಜದ ಹಿರಿಯರು, ಮಹಿಳೆಯರು ಮತ್ತು ಯುವಕರು ಪಾಲ್ಗೊಂಡಿದ್ದರು. ಸಿ.ಎಸ್. ಅಂಗಡಿ ಕಾರ್ಯಕ್ರಮ ನಿರೂಪಿಸಿದರು.
    user_ಚನ್ನಯ್ಯ ಹಿರೇಮಠ ಕುಕನೂರು
    ಚನ್ನಯ್ಯ ಹಿರೇಮಠ ಕುಕನೂರು
    Koppal, Karnataka•
    16 hrs ago
  • ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿ ರೆಡ್ಡಿಹಳ್ಳಿ ಗ್ರಾಮದ ಸರ್ವೆ ನಂಬರ್ 76 ಹಾಗೂ ಬೆಟ್ಟದ ಸುತ್ತಮುತ್ತಲಿನ ಸರ್ವೆ ನಂಬರ್‌ಗಳಲ್ಲಿ ಸ್ಪೋಟಕ ಸಾಮಗ್ರಿಗಳು ಹಾಗೂ ಜೆಸಿಪಿ, ಹಿಟಾಚಿ, ಕಂಪ್ರೆಸರ್, ಕ್ರೇನ್ ಬಳಸಿ ನಿರಂತರವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಗಣಿಗಾರಿಕೆ ನಡೆಸುವ ಸಮಯದಲ್ಲಿ ಬೃಹತಾಕಾರದ ಬಂಡೆಯೊಂದು ಜಾರಿ ಜೆಸಿಪಿ ಮೇಲೆ ಕುಸಿದಿದ್ದು, ಅದರಲ್ಲಿದ್ದ ಕಾರ್ಮಿಕರು ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲ್ಲಿನ ಸುತ್ತ ಮಣ್ಣು ತೆಗೆಯುವಾಗ ಈ ಬೃಹತ್ ಕಲ್ಲು ದಿಮ್ಮಿ ಕುಸಿದು ಬಿದ್ದಿದ್ದರಿಂದ ಜೆಸಿಪಿ ಯಂತ್ರ ತೀವ್ರವಾಗಿ ಜಖಂಗೊಂಡಿದೆ. ಕಂದಾಯ ಇಲಾಖೆಗೆ ಸೇರಿದ ಸರ್ಕಾರಿ ಜಮೀನಿನಲ್ಲಿ ತಮಿಳುನಾಡು ಮೂಲದ ವ್ಯಕ್ತಿಗಳು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಈ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ. ತಮಿಳುನಾಡು ಮೂಲದವರಾದ ಶ್ರೀಧರ್, ಕುಮಾರ್, ಈಶ್ವರ್ ಮತ್ತು ಮಂಜ ಎಂಬುವರು ಈ ಅಕ್ರಮ ದಂಧೆಯ ಕಿಂಗ್‌ಪಿನ್‌ಗಳು ಎಂದು ಗ್ರಾಮಸ್ಥರಿಂದ ತಿಳಿದುಬಂದಿದೆ. ಇವರು ಯಂತ್ರೋಪಕರಣ ಹಾಗೂ ಸಿಡಿಮದ್ದುಗಳನ್ನು ಬಳಸಿ ದಿಮ್ಮಿ ಕಲ್ಲುಗಳನ್ನು ತೆಗೆದು, ಕ್ರೇನ್ ಮೂಲಕ ಲಾರಿಗಳಿಗೆ ಲೋಡ್ ಮಾಡಿ ತಮಿಳುನಾಡಿಗೆ ಸಾಗಿಸುತ್ತಿದ್ದಾರೆ. ಅಲ್ಲದೆ, ವೇಸ್ಟೇಜ್ ಕಲ್ಲುಗಳಲ್ಲಿ ಸೈಜ್ ಕಲ್ಲು ಹಾಗೂ ಕಂಬದ ಕಲ್ಲುಗಳನ್ನು ಮಾಡಿ ಸಾಗಾಣಿಕೆ ಮಾಡುತ್ತಿದ್ದಾರೆ. ಈ ಜಾಗದಲ್ಲಿ ನಿರಂತರವಾಗಿ ಅಕ್ರಮ ದಂಧೆ ನಡೆಯುತ್ತಿದ್ದರೂ ಕಂದಾಯ ಇಲಾಖೆಯ ಆರ್‌ಐ ಹಾಗೂ ವಿಎ ಅಧಿಕಾರಿಗಳು ಕಂಡೂ ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆಗಳಿಂದ ಅನುಮತಿ ಪಡೆಯದೆ, ಕಾರ್ಮಿಕರ ಸುರಕ್ಷತೆಯನ್ನೂ ನಿರ್ಲಕ್ಷಿಸಿ ಅಕ್ರಮವಾಗಿ ಬ್ಲಾಸ್ಟಿಂಗ್ ನಡೆಸುತ್ತಿರುವ ಈ ಕಲ್ಲು ಕಳ್ಳರ ವಿರುದ್ಧ ಜಿಲ್ಲಾಧಿಕಾರಿಗಳು ಅಥವಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.
    1
    ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿ ರೆಡ್ಡಿಹಳ್ಳಿ ಗ್ರಾಮದ ಸರ್ವೆ ನಂಬರ್ 76 ಹಾಗೂ ಬೆಟ್ಟದ ಸುತ್ತಮುತ್ತಲಿನ ಸರ್ವೆ ನಂಬರ್‌ಗಳಲ್ಲಿ ಸ್ಪೋಟಕ ಸಾಮಗ್ರಿಗಳು ಹಾಗೂ ಜೆಸಿಪಿ, ಹಿಟಾಚಿ, ಕಂಪ್ರೆಸರ್, ಕ್ರೇನ್ ಬಳಸಿ ನಿರಂತರವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಗಣಿಗಾರಿಕೆ ನಡೆಸುವ ಸಮಯದಲ್ಲಿ ಬೃಹತಾಕಾರದ ಬಂಡೆಯೊಂದು ಜಾರಿ ಜೆಸಿಪಿ ಮೇಲೆ ಕುಸಿದಿದ್ದು, ಅದರಲ್ಲಿದ್ದ ಕಾರ್ಮಿಕರು ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲ್ಲಿನ ಸುತ್ತ ಮಣ್ಣು ತೆಗೆಯುವಾಗ ಈ ಬೃಹತ್ ಕಲ್ಲು ದಿಮ್ಮಿ ಕುಸಿದು ಬಿದ್ದಿದ್ದರಿಂದ ಜೆಸಿಪಿ ಯಂತ್ರ ತೀವ್ರವಾಗಿ ಜಖಂಗೊಂಡಿದೆ.

ಕಂದಾಯ ಇಲಾಖೆಗೆ ಸೇರಿದ ಸರ್ಕಾರಿ ಜಮೀನಿನಲ್ಲಿ ತಮಿಳುನಾಡು ಮೂಲದ ವ್ಯಕ್ತಿಗಳು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಈ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ. ತಮಿಳುನಾಡು ಮೂಲದವರಾದ ಶ್ರೀಧರ್, ಕುಮಾರ್, ಈಶ್ವರ್ ಮತ್ತು ಮಂಜ ಎಂಬುವರು ಈ ಅಕ್ರಮ ದಂಧೆಯ ಕಿಂಗ್‌ಪಿನ್‌ಗಳು ಎಂದು ಗ್ರಾಮಸ್ಥರಿಂದ ತಿಳಿದುಬಂದಿದೆ. ಇವರು ಯಂತ್ರೋಪಕರಣ ಹಾಗೂ ಸಿಡಿಮದ್ದುಗಳನ್ನು ಬಳಸಿ ದಿಮ್ಮಿ ಕಲ್ಲುಗಳನ್ನು ತೆಗೆದು, ಕ್ರೇನ್ ಮೂಲಕ ಲಾರಿಗಳಿಗೆ ಲೋಡ್ ಮಾಡಿ ತಮಿಳುನಾಡಿಗೆ ಸಾಗಿಸುತ್ತಿದ್ದಾರೆ. ಅಲ್ಲದೆ, ವೇಸ್ಟೇಜ್ ಕಲ್ಲುಗಳಲ್ಲಿ ಸೈಜ್ ಕಲ್ಲು ಹಾಗೂ ಕಂಬದ ಕಲ್ಲುಗಳನ್ನು ಮಾಡಿ ಸಾಗಾಣಿಕೆ ಮಾಡುತ್ತಿದ್ದಾರೆ.

ಈ ಜಾಗದಲ್ಲಿ ನಿರಂತರವಾಗಿ ಅಕ್ರಮ ದಂಧೆ ನಡೆಯುತ್ತಿದ್ದರೂ ಕಂದಾಯ ಇಲಾಖೆಯ ಆರ್‌ಐ ಹಾಗೂ ವಿಎ ಅಧಿಕಾರಿಗಳು ಕಂಡೂ ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆಗಳಿಂದ ಅನುಮತಿ ಪಡೆಯದೆ, ಕಾರ್ಮಿಕರ ಸುರಕ್ಷತೆಯನ್ನೂ ನಿರ್ಲಕ್ಷಿಸಿ ಅಕ್ರಮವಾಗಿ ಬ್ಲಾಸ್ಟಿಂಗ್ ನಡೆಸುತ್ತಿರುವ ಈ ಕಲ್ಲು ಕಳ್ಳರ ವಿರುದ್ಧ ಜಿಲ್ಲಾಧಿಕಾರಿಗಳು ಅಥವಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.
    user_Madhugiri news
    Madhugiri news
    Local News Reporter ಮಧುಗಿರಿ, ತುಮಕೂರು, ಕರ್ನಾಟಕ•
    12 hrs ago
  • ಬಳ್ಳಾರಿ ನಗರದ ಪೋಲಾ ಹೋಟೆಲ್‌ನಲ್ಲಿ ಮಾನವ ಅಧಿಕಾರ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಎಸ್. ಶಷಾವಲಿ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಯಶಸ್ವಿಯಾಗಿ ಜರುಗಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಸಕ್ರಿಯವಾಗಿ ಭಾಗವಹಿಸಿ, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಇದೇ ಸಂದರ್ಭದಲ್ಲಿ ಹೊಸ ಸದಸ್ಯರನ್ನು ಪಕ್ಷಕ್ಕೆ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಳ್ಳುವ ಮೂಲಕ ಭರ್ಜರಿ ಸೇರ್ಪಡೆ ಪ್ರಕ್ರಿಯೆ ನೆರವೇರಿತು. ಇದೇ ವೇಳೆ ಪಕ್ಷದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಯಿತು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಖಾಜಾ ಹುಸೇನ್ ಡಿ.ಆರ್., ರಾಜ್ಯ ಸಂಸ್ಥೆಯ ಕಾರ್ಯದರ್ಶಿಯಾಗಿ ಶಾಷಾವಲಿ, ರಾಜ್ಯ ಖಜಾಂಚಿಯಾಗಿ ಶೇಕ್ಷಾವಲಿ ಹಾಗೂ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಸೈಯದ್ ಚಾಂದ್ ಬಾಷಾ ಅವರನ್ನು ನೇಮಕಗೊಳಿಸಿ ಅಧಿಕೃತ ಆದೇಶ ಪತ್ರಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಎಸ್. ಶಷಾವಲಿ ಅವರು, ಸಮರ್ಥ ಪದಾಧಿಕಾರಿಗಳ ನೇಮಕದ ಮೂಲಕ ಪಕ್ಷದ ಸಂಘಟನೆಗೆ ಹೊಸ ಚೈತನ್ಯವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಜನರ ಸಮಸ್ಯೆಗಳ ಪರಿಹಾರ ಮತ್ತು ಮಾನವ ಹಕ್ಕುಗಳ ರಕ್ಷಣೆಗಾಗಿ ಪಕ್ಷವು ಸದಾ ಬದ್ಧತೆಯಿಂದ ಕಾರ್ಯನಿರ್ವಹಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.
    1
    ಬಳ್ಳಾರಿ ನಗರದ ಪೋಲಾ ಹೋಟೆಲ್‌ನಲ್ಲಿ ಮಾನವ ಅಧಿಕಾರ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಎಸ್. ಶಷಾವಲಿ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಯಶಸ್ವಿಯಾಗಿ ಜರುಗಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬೆಂಬಲಿಗರು ಸಕ್ರಿಯವಾಗಿ ಭಾಗವಹಿಸಿ, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಇದೇ ಸಂದರ್ಭದಲ್ಲಿ ಹೊಸ ಸದಸ್ಯರನ್ನು ಪಕ್ಷಕ್ಕೆ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಳ್ಳುವ ಮೂಲಕ ಭರ್ಜರಿ ಸೇರ್ಪಡೆ ಪ್ರಕ್ರಿಯೆ ನೆರವೇರಿತು.

ಇದೇ ವೇಳೆ ಪಕ್ಷದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಯಿತು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಖಾಜಾ ಹುಸೇನ್ ಡಿ.ಆರ್., ರಾಜ್ಯ ಸಂಸ್ಥೆಯ ಕಾರ್ಯದರ್ಶಿಯಾಗಿ ಶಾಷಾವಲಿ, ರಾಜ್ಯ ಖಜಾಂಚಿಯಾಗಿ ಶೇಕ್ಷಾವಲಿ ಹಾಗೂ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಸೈಯದ್ ಚಾಂದ್ ಬಾಷಾ ಅವರನ್ನು ನೇಮಕಗೊಳಿಸಿ ಅಧಿಕೃತ ಆದೇಶ ಪತ್ರಗಳನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಎಸ್. ಶಷಾವಲಿ ಅವರು, ಸಮರ್ಥ ಪದಾಧಿಕಾರಿಗಳ ನೇಮಕದ ಮೂಲಕ ಪಕ್ಷದ ಸಂಘಟನೆಗೆ ಹೊಸ ಚೈತನ್ಯವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಜನರ ಸಮಸ್ಯೆಗಳ ಪರಿಹಾರ ಮತ್ತು ಮಾನವ ಹಕ್ಕುಗಳ ರಕ್ಷಣೆಗಾಗಿ ಪಕ್ಷವು ಸದಾ ಬದ್ಧತೆಯಿಂದ ಕಾರ್ಯನಿರ್ವಹಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.
    user_AsnNews24Kannada
    AsnNews24Kannada
    Local News Reporter Ballari, Karnataka•
    11 hrs ago
  • ಗಾನ ಸರಸ್ವತಿ ಎಸ್. ಜಾನಕಿ ಅವರು ವಿಧಿವಶರಾಗಿದ್ದಾರೆ. ಅವರ ಈ ಅಗಲಿಕೆಯು ಸಂಗೀತ ಲೋಕಕ್ಕೆ ತುಂಬಲಾರದಷ್ಟು ದೊಡ್ಡ ನಷ್ಟವನ್ನು ಉಂಟುಮಾಡಿದೆ.
    1
    ಗಾನ ಸರಸ್ವತಿ ಎಸ್. ಜಾನಕಿ ಅವರು ವಿಧಿವಶರಾಗಿದ್ದಾರೆ. ಅವರ ಈ ಅಗಲಿಕೆಯು ಸಂಗೀತ ಲೋಕಕ್ಕೆ ತುಂಬಲಾರದಷ್ಟು ದೊಡ್ಡ ನಷ್ಟವನ್ನು ಉಂಟುಮಾಡಿದೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಸಮೀಪದ ದೊಡ್ಡಗೊಲ್ಲರಹಟ್ಟಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮಳೆ ಇಲ್ಲದೆ ಬೆಳೆ ಬೆಳೆಯದೆ ಕಂಗಾಲಾಗಿರುವ ಅನ್ನದಾತ ರವಿಯಾದವ್ ಅವರು ತಮ್ಮ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದು, ಸದ್ಯ ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತ ರವಿ ಅವರು ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚ ಮಾಡಿ ತಮ್ಮ 12 ಎಕರೆ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಮಳೆಯ ಕೊರತೆಯಿಂದಾಗಿ ಭೂಮಿಯ ತೇವಾಂಶ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಹಚ್ಚಹಸಿರಾಗಿ ಕಂಗೊಳಿಸಬೇಕಿದ್ದ ಶೇಂಗಾ ಬೆಳೆ ಕಣ್ಮುಂದೆಯೇ ಒಣಗುತ್ತಿದೆ. ಇದರಿಂದಾಗಿ ಅವರ ಕನಸುಗಳು ಬರದ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿವೆ. ಸದ್ಯ ಒಣಗುತ್ತಿರುವ ಬೆಳೆಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ಮುಂದಾಗಿರುವ ಇವರು, ಮತ್ತೊಬ್ಬ ರೈತನ ಕೊಳವೆಬಾವಿಯಿಂದ ನೀರು ಪಡೆದುಕೊಂಡಿದ್ದಾರೆ. ಇದಕ್ಕಾಗಿ ಸುಮಾರು 90 ಪೈಪ್‌ಗಳನ್ನು ಅಳವಡಿಸಿ ಸ್ಪಿಂಕ್ಲರ್ ಮೂಲಕ ನೀರು ಹಾಯಿಸಿ ಬೆಳೆ ರಕ್ಷಿಸಿಕೊಳ್ಳಲು ಕೊನೆಯ ಪ್ರಯತ್ನ ನಡೆಸುತ್ತಿದ್ದಾರೆ.
    1
    ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಸಮೀಪದ ದೊಡ್ಡಗೊಲ್ಲರಹಟ್ಟಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮಳೆ ಇಲ್ಲದೆ ಬೆಳೆ ಬೆಳೆಯದೆ ಕಂಗಾಲಾಗಿರುವ ಅನ್ನದಾತ ರವಿಯಾದವ್ ಅವರು ತಮ್ಮ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದು, ಸದ್ಯ ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ರೈತ ರವಿ ಅವರು ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚ ಮಾಡಿ ತಮ್ಮ 12 ಎಕರೆ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಮಳೆಯ ಕೊರತೆಯಿಂದಾಗಿ ಭೂಮಿಯ ತೇವಾಂಶ ಸಂಪೂರ್ಣವಾಗಿ ಕಡಿಮೆಯಾಗಿದ್ದು, ಹಚ್ಚಹಸಿರಾಗಿ ಕಂಗೊಳಿಸಬೇಕಿದ್ದ ಶೇಂಗಾ ಬೆಳೆ ಕಣ್ಮುಂದೆಯೇ ಒಣಗುತ್ತಿದೆ. ಇದರಿಂದಾಗಿ ಅವರ ಕನಸುಗಳು ಬರದ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿವೆ.

ಸದ್ಯ ಒಣಗುತ್ತಿರುವ ಬೆಳೆಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ಮುಂದಾಗಿರುವ ಇವರು, ಮತ್ತೊಬ್ಬ ರೈತನ ಕೊಳವೆಬಾವಿಯಿಂದ ನೀರು ಪಡೆದುಕೊಂಡಿದ್ದಾರೆ. ಇದಕ್ಕಾಗಿ ಸುಮಾರು 90 ಪೈಪ್‌ಗಳನ್ನು ಅಳವಡಿಸಿ ಸ್ಪಿಂಕ್ಲರ್ ಮೂಲಕ ನೀರು ಹಾಯಿಸಿ ಬೆಳೆ ರಕ್ಷಿಸಿಕೊಳ್ಳಲು ಕೊನೆಯ ಪ್ರಯತ್ನ ನಡೆಸುತ್ತಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    17 hrs ago
  • ರಂಗಾರೆಡ್ಡಿ ಜಿಲ್ಲೆಯ ಶಾಬಾದ್‌ನಲ್ಲಿ ನಡೆದ ಆರು ಜನರ ಭೀಕರ ಕೊಲೆ ಪ್ರಕರಣದ ತನಿಖೆ ಚುರುಕಿನಿಂದ ಸಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಅತ್ಯಂತ ಪ್ರಮುಖ ಸಿಸಿಟಿವಿ ದೃಶ್ಯಾವಳಿ ಪತ್ತೆಯಾಗಿದೆ. ಈ ಸಿಸಿಟಿವಿ ದೃಶ್ಯದಲ್ಲಿ ಆರೋಪಿ ರಾಜ್‌ಕುಮಾರ್ ಎಂಬಾತ ಸಂತ್ರಸ್ತ ಹುಡುಗಿಯನ್ನು ರಾತ್ರಿ ಸುಮಾರು 10 ಗಂಟೆಯ ಸಮಯದಲ್ಲಿ ಮನೆಯಿಂದ ಬಲವಂತವಾಗಿ ಎಳೆದುಕೊಂಡು ಹೋಗುತ್ತಿರುವುದು ದಾಖಲಾಗಿದೆ. ಪೊಲೀಸರು ಈ ಸಿಸಿಟಿವಿ ದೃಶ್ಯಾವಳಿಯ ಆಧಾರದ ಮೇಲೆ ಕೊಲೆಗಳು ನಡೆದ ಸರಣಿ ಹಾಗೂ ಸಮಯವನ್ನು ಅತ್ಯಂತ ಸೂಕ್ಷ್ಮವಾಗಿ ವಿಶ್ಲೇಷಿಸುತ್ತಿದ್ದಾರೆ. ಸದ್ಯ ಈ ಪ್ರಕರಣದ ಕುರಿತು ಪೊಲೀಸರ ತನಿಖೆ ಪೂರ್ಣ ಪ್ರಮಾಣದಲ್ಲಿ ಮುಂದುವರಿದಿದೆ.
    1
    ರಂಗಾರೆಡ್ಡಿ ಜಿಲ್ಲೆಯ ಶಾಬಾದ್‌ನಲ್ಲಿ ನಡೆದ ಆರು ಜನರ ಭೀಕರ ಕೊಲೆ ಪ್ರಕರಣದ ತನಿಖೆ ಚುರುಕಿನಿಂದ ಸಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಅತ್ಯಂತ ಪ್ರಮುಖ ಸಿಸಿಟಿವಿ ದೃಶ್ಯಾವಳಿ ಪತ್ತೆಯಾಗಿದೆ. ಈ ಸಿಸಿಟಿವಿ ದೃಶ್ಯದಲ್ಲಿ ಆರೋಪಿ ರಾಜ್‌ಕುಮಾರ್ ಎಂಬಾತ ಸಂತ್ರಸ್ತ ಹುಡುಗಿಯನ್ನು ರಾತ್ರಿ ಸುಮಾರು 10 ಗಂಟೆಯ ಸಮಯದಲ್ಲಿ ಮನೆಯಿಂದ ಬಲವಂತವಾಗಿ ಎಳೆದುಕೊಂಡು ಹೋಗುತ್ತಿರುವುದು ದಾಖಲಾಗಿದೆ.

ಪೊಲೀಸರು ಈ ಸಿಸಿಟಿವಿ ದೃಶ್ಯಾವಳಿಯ ಆಧಾರದ ಮೇಲೆ ಕೊಲೆಗಳು ನಡೆದ ಸರಣಿ ಹಾಗೂ ಸಮಯವನ್ನು ಅತ್ಯಂತ ಸೂಕ್ಷ್ಮವಾಗಿ ವಿಶ್ಲೇಷಿಸುತ್ತಿದ್ದಾರೆ. ಸದ್ಯ ಈ ಪ್ರಕರಣದ ಕುರಿತು ಪೊಲೀಸರ ತನಿಖೆ ಪೂರ್ಣ ಪ್ರಮಾಣದಲ್ಲಿ ಮುಂದುವರಿದಿದೆ.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    14 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.