ರಾಯಚೂರಿನಲ್ಲಿ ಸಚಿವ ಸ್ಥಾನಕ್ಕೆ ಆಗ್ರಹಿಸಿ ಆ.15ರಂದು ಪ್ರತಿಭಟನೆಗೆ ದಲಿತ ಪರ ಸಂಘಟನೆಗಳ ಕರೆ ರಾಯಚೂರು : ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ಜಿಲ್ಲೆಗಳಾದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡದೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿ, ಆಗಸ್ಟ್ 15ರಂದು ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಪರ ಸಂಘಟನೆಗಳ ಒಕ್ಕೂಟದ ಮುಖಂಡ ಎಸ್. ಮಾರೆಪ್ಪ 10 ಗಂಟೆಗೆ ತಿಳಿಸಿದರು. ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಚಿವ ಸ್ಥಾನ ಹಾಗೂ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ಜಿಲ್ಲೆಯ ಜನಪ್ರತಿನಿಧಿಗಳಿಗೆ ನೀಡಬೇಕು. ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬೇರೆ ಜಿಲ್ಲೆಯ ಸಚಿವರು ಬಂದರೆ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಲಾಗುವುದು ಎಂದು ಎಚ್ಚರಿಸಿದರು. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ರಾಜಕೀಯವಾಗಿ ಕಡೆಗಣನೆಗೆ ಒಳಗಾಗಿವೆ. ಈ ಭಾಗದ ಅಭಿವೃದ್ಧಿ ವಿಚಾರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಸಮರ್ಪಕವಾಗಿ ಧ್ವನಿ ಎತ್ತುತ್ತಿಲ್ಲ. ಬೇರೆ ಜಿಲ್ಲೆಗಳ ರಾಜಕಾರಣಿಗಳು ತಮ್ಮ ಜಿಲ್ಲೆಯ ಹಿತಾಸಕ್ತಿಗಾಗಿ ಒಗ್ಗಟ್ಟಿನಿಂದ ಹೋರಾಡುತ್ತಾರೆ. ಆದರೆ ರಾಯಚೂರು ಜಿಲ್ಲೆಯ ರಾಜಕಾರಣಿಗಳಲ್ಲಿ ಅಂತಹ ಬದ್ಧತೆ ಕಾಣುತ್ತಿಲ್ಲ ಎಂದು ಆರೋಪಿಸಿದರು. ಜಿಲ್ಲೆಯ ಅಭಿವೃದ್ಧಿಗಿಂತ ವೈಯಕ್ತಿಕ ಹಿತಾಸಕ್ತಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದಲೇ ಸಚಿವ ಸ್ಥಾನ ಕೈತಪ್ಪಿದೆ. ಪಕ್ಕದ ಕಲಬುರಗಿ ಹಾಗೂ ಕೊಪ್ಪಳ ಜಿಲ್ಲೆಗಳಿಂದ ಇಬ್ಬರು–ಮೂರು ಜನ ಶಾಸಕರು ಸಚಿವರಾಗಿದ್ದು, ಅವರೇ ನಮ್ಮ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ಬರುತ್ತಿದ್ದಾರೆ. ಆದರೂ ಜಿಲ್ಲೆಯ ಪರವಾಗಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷದ ನಾಯಕರು ಯಾವುದೇ ಒಗ್ಗಟ್ಟಿನ ಧ್ವನಿ ಎತ್ತುತ್ತಿಲ್ಲ ಎಂದು ಟೀಕಿಸಿದರು. ಜಿಲ್ಲೆಗೆ ಸೂಕ್ತ ಸಚಿವ ಸ್ಥಾನ ಹಾಗೂ ಪ್ರಾತಿನಿಧ್ಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ. ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಬೇರೆ ಜಿಲ್ಲೆಯ ಸಚಿವರು ಧ್ವಜಾರೋಹಣಕ್ಕೆ ಬಂದರೆ ಪ್ರತಿಭಟನೆ ಮೂಲಕ ವಿರೋಧಿಸಲಾಗುವುದು ಎಂದು ಎಸ್. ಮಾರೆಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ದಲಿತ ಪರ ಸಂಘಟನೆಗಳ ಮುಖಂಡರಾದ ಹೇಮರಾಜ ಅಸ್ಕಿಹಾಳ, ಶ್ರೀನಿವಾಸ್, ಲಕ್ಷ್ಮಣ್, ತಾಯಪ್ಪ, ರವಿ, ನರಸಿಂಹಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಯಚೂರಿನಲ್ಲಿ ಸಚಿವ ಸ್ಥಾನಕ್ಕೆ ಆಗ್ರಹಿಸಿ ಆ.15ರಂದು ಪ್ರತಿಭಟನೆಗೆ ದಲಿತ ಪರ ಸಂಘಟನೆಗಳ ಕರೆ ರಾಯಚೂರು : ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದ ಜಿಲ್ಲೆಗಳಾದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡದೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿ, ಆಗಸ್ಟ್ 15ರಂದು ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಪರ ಸಂಘಟನೆಗಳ ಒಕ್ಕೂಟದ ಮುಖಂಡ ಎಸ್. ಮಾರೆಪ್ಪ 10 ಗಂಟೆಗೆ ತಿಳಿಸಿದರು. ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಸಚಿವ ಸ್ಥಾನ ಹಾಗೂ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ಜಿಲ್ಲೆಯ ಜನಪ್ರತಿನಿಧಿಗಳಿಗೆ ನೀಡಬೇಕು. ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬೇರೆ ಜಿಲ್ಲೆಯ ಸಚಿವರು ಬಂದರೆ ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸಲಾಗುವುದು ಎಂದು ಎಚ್ಚರಿಸಿದರು. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ರಾಜಕೀಯವಾಗಿ ಕಡೆಗಣನೆಗೆ ಒಳಗಾಗಿವೆ. ಈ ಭಾಗದ ಅಭಿವೃದ್ಧಿ ವಿಚಾರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಸಮರ್ಪಕವಾಗಿ ಧ್ವನಿ ಎತ್ತುತ್ತಿಲ್ಲ. ಬೇರೆ ಜಿಲ್ಲೆಗಳ ರಾಜಕಾರಣಿಗಳು ತಮ್ಮ ಜಿಲ್ಲೆಯ ಹಿತಾಸಕ್ತಿಗಾಗಿ ಒಗ್ಗಟ್ಟಿನಿಂದ ಹೋರಾಡುತ್ತಾರೆ. ಆದರೆ ರಾಯಚೂರು ಜಿಲ್ಲೆಯ ರಾಜಕಾರಣಿಗಳಲ್ಲಿ ಅಂತಹ ಬದ್ಧತೆ ಕಾಣುತ್ತಿಲ್ಲ ಎಂದು ಆರೋಪಿಸಿದರು. ಜಿಲ್ಲೆಯ ಅಭಿವೃದ್ಧಿಗಿಂತ ವೈಯಕ್ತಿಕ ಹಿತಾಸಕ್ತಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದಲೇ ಸಚಿವ ಸ್ಥಾನ ಕೈತಪ್ಪಿದೆ. ಪಕ್ಕದ ಕಲಬುರಗಿ ಹಾಗೂ ಕೊಪ್ಪಳ ಜಿಲ್ಲೆಗಳಿಂದ ಇಬ್ಬರು–ಮೂರು ಜನ ಶಾಸಕರು ಸಚಿವರಾಗಿದ್ದು, ಅವರೇ ನಮ್ಮ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ಬರುತ್ತಿದ್ದಾರೆ. ಆದರೂ ಜಿಲ್ಲೆಯ ಪರವಾಗಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷದ ನಾಯಕರು ಯಾವುದೇ ಒಗ್ಗಟ್ಟಿನ ಧ್ವನಿ ಎತ್ತುತ್ತಿಲ್ಲ ಎಂದು ಟೀಕಿಸಿದರು. ಜಿಲ್ಲೆಗೆ ಸೂಕ್ತ ಸಚಿವ ಸ್ಥಾನ ಹಾಗೂ ಪ್ರಾತಿನಿಧ್ಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ. ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಬೇರೆ ಜಿಲ್ಲೆಯ ಸಚಿವರು ಧ್ವಜಾರೋಹಣಕ್ಕೆ ಬಂದರೆ ಪ್ರತಿಭಟನೆ ಮೂಲಕ ವಿರೋಧಿಸಲಾಗುವುದು ಎಂದು ಎಸ್. ಮಾರೆಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ದಲಿತ ಪರ ಸಂಘಟನೆಗಳ ಮುಖಂಡರಾದ ಹೇಮರಾಜ ಅಸ್ಕಿಹಾಳ, ಶ್ರೀನಿವಾಸ್, ಲಕ್ಷ್ಮಣ್, ತಾಯಪ್ಪ, ರವಿ, ನರಸಿಂಹಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.
- ಸಚಿವ ಸಂಪುಟ ವಿಸ್ತರಣೆಗಿಂತ ರೈತರ ಸಂಕಷ್ಟ ಪರಿಹಾರಕ್ಕೆ ಆದ್ಯತೆ ನೀಡಿ: ಬೆಳೆ ವಿಮೆಗಾಗಿ ರೈತ ಸಂಘದ ಆಗ್ರಹ"1
- ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.! ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.!1
- ಆಗಸ್ಟ್ 9 ಕ್ಕೆ 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಕಾರ್ಯಕ್ರಮ. ಅಫಜಲಪುರ: ಪಟ್ಟಣದ ಶ್ರೀ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಇದೆ ಆಗಸ್ಟ್ 9 ರಂದು 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ ಎಂದು ಶ್ರೀ ಮಹಾಂತೇಶ್ವರ ವಿದ್ಯಾ ವರ್ದಕ ಶಾಲೆಯ ಹಳೆಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.1
- ಕೂಡ್ಲಿಗಿ : ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ತಾಯಿ ಮಕ್ಕಳ ಆಸ್ಪತ್ರೆ , ಅನಿರ್ಯ ಹಾಗೂ ತುರ್ತಾಗಿ ನಿರ್ಮಾಣವಾಗಬೇಕಿದೆ _ ಸಾರ್ವಜನಿಕರ ಹೋರಾಟಗಾರರ ಅಭಿಮತ *ಕೂಡ್ಲಿಗಿ : ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ತಾಯಿ ಮಕ್ಕಳ ಆಸ್ಪತ್ರೆ , ಅನಿರ್ಯ ಹಾಗೂ ತುರ್ತಾಗಿ ನಿರ್ಮಾಣವಾಗಬೇಕಿದೆ _ ಸಾರ್ವಜನಿಕರ ಹೋರಾಟಗಾರರ ಅಭಿಮತ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದಲ್ಲಿನ 100ಹಾಸಿಗೆ ಆಸ್ಪತ್ರೆಯನ್ನು , 150 ಹಾಸಿಗೆ ಆಸ್ಪತ್ರೆಯಾಗಿ ಉನ್ನತೀಕರಿಸಿ. ತಾಯಿ ಮಕ್ಕಳ ಆಸ್ಪತ್ರೆಯನ್ನು , ಹಾಲಿ ಇರುವ ಆಸ್ಪತ್ರೆಗೆ ಹೊಂದಿಕೊಂಡಂತೆ ನಿರ್ಮಿಸಿ. ಆಸ್ಪತ್ರೆಯನ್ನು ವಿಭಾಗಿಯ ಆಸ್ಪತ್ರೆಯನ್ನಾಗಿಸುವ ನಿಟ್ಟಿನಲ್ಲಿ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರ ಅಭಿವೃದ್ಧಿಯ ದಿಟ್ಟ ಹೆಜ್ಜೆಗೆ. ಸಾರ್ವಜನಿಕ ವಲಯದಲ್ಲಿ ಕೂಡ ಉತ್ತಮ ಪ್ರತಿಕ್ರಿಯೆ ದೊರಕಿದೆ , ಸಾರ್ವಜನಿಕರು ಕೂಡ ಶಾಸಕರಿಗೆ ನಡೆಗೆ ಪೂರಕ ಅಭಿಮತ ನೀಡೊ ಮೂಲಕ ಸಾಥ್ ನೀಡಿದ್ದಾರೆ. ಸಂಬಂಧಿಸಿದಂತೆ ಸಾರ್ವಜನಿಕ ವಲಯದ ಅಭಿಪ್ರಾಯ ಸಂಗ್ರಹಿಸಿದಾಗ , ಬಹುತೇಕ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ತುರ್ತುಸೇವಾ ಸಿಬ್ಬಂದಿಯವರು , ಮುಖಂಡರು , ಸಾರ್ವಜನಿಕರು ಶಾಸಕರ ಈ ನಡೆಯನ್ನು ಶ್ಲಾಘಿಸಿದ್ದಾರೆ. ತಾಯಿ ಮಕ್ಕಳ ಮರಣ ಪ್ರಮಾಣ ತಗ್ಗಿಸಲು , ತಾಯಿ ಮಕ್ಕಳಿಗೆ ಅಗತ್ಯ ತುರ್ತು ಚಿಕಿತ್ಸೆ ಒದಗಿಸಲು. ತಾಯಿ ಮಕ್ಕಳ ಆಸ್ಪತ್ರೆಯು , ಹಾಲಿ ಇರುವ ಆಸ್ಪತ್ರೆಗೆ ಹೊಂದಿಕೊಂಡಿರುವುದು. ಎಲ್ಲಾ ರೀತಿಯಿಂದ ತುಂಬಾ ಅನುಕೂಲವಾಗಲಿದ್ದು , ಅದು ಅತ್ಯಅಗತ್ಯವಿದೆ ಎಂದು ಸ್ತ್ರೀರೋಗ ತಜ್ಞ ವೈದ್ಯರಾದ ನಾಗರಾಜರವರು ತಿಳಿಸಿದ್ದಾರೆ. ಸಂಘಟನೆಗಳ ಮುಖಂಡರು ಮಾತನಾಡಿ , ತಾಯಿ ಮಕ್ಕಳ ಆಸ್ಪತ್ರೆ ಕೂಡ್ಲಿಗಿ ಗೆ ಮಾತ್ರ ಸೀಮಿತವಾಗಲ್ಲ. ನೆರೆ ಹೊರೆ ತಾಲೂಕುಗಳಿಗೂ ಸಹಕಾರಿಯಾಗಲಿದೆ , ಸಹೃದಯವಂತ ಶಾಸಕರನ್ನು ಜನಾನುರಾಗಿ ಶಾಸಕರನ್ನು ಪಡೆದಿರುವುದು ನಮ್ಮ ಭಾಗ್ಯ ಎಂದಿದ್ದಾರೆ. ಆಶಕಾರ್ಯಕರ್ತರು ಮಾತನಾಡಿ , ಕೆಲ ಅನಿವಾರ್ಯ ಕಾರಣಗಳಿಗೆ ಹೆರಿಗೆ ಪ್ರಕಣಗಳನ್ನು. ಕೂಡ್ಲಗಿಯಿಂದ ಹೊಸಪೇಟೆ , ಬಳ್ಳಾರಿ , ಕೊಪ್ಪಳ , ದಾವಣಗೆರೆ ಆಸ್ಪತ್ರೆಗೆ ಶಿಪಾರಸ್ಸು ಮಾಡೋದು ಸಹಜವಾಗಿದೆ. ಅದರಿಂದಾಗಿ ಎಲ್ಲಾ ರೀತಿಯ ನಷ್ಟಗಳನ್ನು ಸಂಕಷ್ಟಗಳನ್ನು ಅನುಭವಿಸುವಂತಾಗಿತ್ತು , ಅದೆಲ್ಲಾ ತಪ್ಪಲಿದೆ ಹಾಗೂ ತಾಯಿ ಮಕ್ಕಳು ಸುರಕ್ಷಿತವಾಗಿರಲು ಆಸ್ಪತ್ರೆ ಹತ್ತಿರದಲ್ಲಿಯೇ ಆಗಬೇಕಿದೆ ಎಂದಿದ್ದಾರೆ. ದಲಿತ ಮುಖಂಡರು ಹೋರಾಟಗಾರರು ಮಾತನಾಡಿ , ಮಾಜಿ ಶಾಸಕರಾದ ದಿವಂತ ಎನ್ ಟಿ ಬೊಮ್ಮಣ್ಣರವರು. ಅಂದರೆ ಶಾಸಕರ ತಂದೆಯವರು ಶಾಸಕರಾದಾಗ , 100ಹಾಸಿಗೆ ಆಸ್ಪತ್ರೆ ನಿರ್ಮಿಸಿ ದಾಖಲು ಮಾಡಿದ್ದಾರೆ. ಅಂತೆಯೆ ಅವರ ಪುತ್ರರಾದ ಶಾಸಕರಾದ , ಡಾ ॥ ಎನ್ ಟಿ ಶ್ರೀನಿವಾಸ್ ರವರು 150 ಹಾಸಿಗೆ ಆಸ್ಪತ್ರೆಯಾಗಿ ಉನ್ನತೀಕರಿಸಿದ್ದಾರೆ. ಅದು ವಿಭಾಗ ಮಟ್ಟದ ಸುಸಜ್ಜಿತ ತಾಯಿ ಮಕ್ಕಳ ಆಸ್ಪತ್ರೆಯಾಗಿ , ಉನ್ನತೀಕರಿಸಿ ಅಭಿವೃದ್ಧಿ ಪಡಿಸುತ್ತಿರುವುದು ಶ್ಲಾಘನೀಯವಾದದ್ದು. ಈ ಮೂಲಕ ಅಸಂಖ್ಯಾತ ತಾಯಿ ಮಕ್ಕಳ , ಆರೈಕೆಗೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ವಾತಾವರಣ ನಿರ್ಮಿಸುತ್ತಿದ್ದಾರೆ. ತಾಯಿ ಮಕ್ಕಳ ಆಸ್ಪತ್ರೆ ಪಟ್ಟಣ ತಾಲೂಕು ಮಾತ್ರವಲ್ಲ , ವಿಜಯನಗರ ಜಿಲ್ಲೆಗೆ ಮಾದರಿ ಆಸ್ಪತ್ರೆಯಾಗಲಿದೆ. ಅದು ವಿಜಯನಗರ ಜಿಲ್ಲೆಯ ನವಜಾತ ಶಿಶು ಹಾಗೂ ತಾಯಿಯರಿಗೆ ಸಂಜೀವಿನಯಾಗಲಿದೆಎಂದು ಹಿರಿಯ ನಾಗರೀಕರು ಬಣ್ಣಿಸಿದ್ದಾರೆ. ಅದುದರಿಂದಾಗಿ ಈ ಆಸ್ಪತ್ರೆಯು , ಹಾಲಿ ನಿಗದಿಪಡಿಸಿರುವ ಸಾರ್ವಜನಿಕ ಆಸ್ಪತ್ರೆಗೆ ಹೊಂದಿಕೊಂಡ ಜಾಗದಲ್ಲಿಯೇ ನಿರ್ಮಾಣವಾಗಬೇಕಿದೆ ಎಂದು ಅಭಿಮತ ವ್ಯೆಕ್ತಪಡಿಸಿದ್ದಾರೆ. ಪಟ್ಟಣ ತಾಲೂಕು ನೆರೆ ಹೊರೆ ತಾಲೂಕುಗಳಿಂದ ತಿಂಗಳೊಂದಕ್ಕೆ 50 - 75 ಹೆರಿಗೆ ಪ್ರಕರಣಗಳು , ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ ಅರಸಿ ಬರಲಿದ್ದು. ಇದು ಎಲ್ಲರಿಗೂ ತುಂಬಾ ಅನುಕೂಲವಾಗಲಿದೆ , ಶಾಸಕರ ದೂರ ದೃಷ್ಟಿ ಹಾಗೂ ಜನಪರ ಕಾಳಜಿಯನ್ನು ಸಾಬೀತುಪಡಿಸಿದೆ ಎಂದಿದ್ದಾರೆ. ಶಾಸಕರ ಜನಪರ ಕಾಳಜಿ ಮಕ್ಕಳ ಮಹಿಳೆಯರ ಪರ ಇರುವ ನಿಲುವಿಗೆ ನಿದರ್ಶನವಾಗಿದ್ದು , ಈ ಮೂಲಕ ಅವರು ತಾಯಿಯ ಮಮತೆಯ ಸಹೃದಯವಂತಿಕೆ ತೋರಿದ್ದಾರೆ. ತಾಯಿ ಮಕ್ಕಳ ಆಸ್ಪತ್ರೆ ಹಾಲಿ ಇರುವ ಆಸ್ಪತ್ರೆಗೆ ಹೊಂದಿಕೊಂಡಿದ್ದಲ್ಲಿ , ಎಲ್ಲರಿಗೂ ಎಲ್ಲಾ ರೀತಿಯಲ್ಲಿ ಸಾಕಷ್ಟು ಅನುಕೂಕವಾಗಲಿದೆ. ಶಾಸಕರ ಕಾಳಜಿ ಹಾಗೂ ಅಂತಃಕರಣ ಪೂರ್ವಕ ಹೃದಯ ಶ್ರೀಮಂತಿಕೆಗೆ , ತಾಯಿ ಮಕ್ಕಳ ಆಸ್ಪತ್ರೆಯೇ ಸಾಕ್ಷಿಯಾಗಿದೆ. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರ , ಈ ಮಹಾ ಕಾರ್ಯಕ್ಕೆ ಅವರೊಂದಿಗೆ ತಾವು ಸದಾ ಇರುತ್ತೇವೆಂದು. ಕೂಡ್ಲಿಗಿ ಪಟ್ಟಣದ ನಾಗರೀಕರು , ಸಾರ್ವಜನಿಕರು , ಹೋರಾಟಗಾರರು , ವಿವಿದ ಸಂಘಟನೆಗಳ ಪದಾಧಿಕಾರಿಗಳು. ಮಹಿಳಾ ಸಂಘ ,ರೈತ ಸಂಘ , ಕಾರ್ಮಿಕರ ಸಂಘ , ಕನ್ನಡ ಪರ ಸಂಘಟನೆಗಳು , ದಲಿತಪರ ಸಂಘಟನೆಗಳು , ತಾಲೂಕಿನ ಬಹುತೇಕ ಸಂಘಟನೆಗಳ ಪದಾಧಿಕಾರಿಗಳು ಅಭಿಮತ ವ್ಯಕ್ತಪಡಿಸಿದ್ದಾರೆ.✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ತುಂಗಭದ್ರಾ ಎಡದಂಡೆ ಕಾಲುವೆಗೆ ತಕ್ಷಣ ನೀರು ಹರಿಸಲು ಸಿರವಾರ ಭಾಗದ ರೈತರು ರಾಯಚೂರಿನಲ್ಲಿ ಆಗ್ರಹ ರಾಯಚೂರು : 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳನ್ನು ರಕ್ಷಿಸುವ ನಿಟ್ಟಿನಲ್ಲಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ತಕ್ಷಣ ನೀರು ಹರಿಸಬೇಕು ಎಂದು ತುಂಗಭದ್ರಾ ಎಡದಂಡೆ ಕಾಲುವೆ ರೈತರ ವೇದಿಕೆಯ ರಾಜ್ಯಾಧ್ಯಕ್ಷ ಶಂಕರಗೌಡ ಹರವಿ ರಾಜ್ಯ ಸರ್ಕಾರವನ್ನು ಮಂಗಳವಾರ 10.30 ನಿಮಿಷಕ್ಕೆ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದಲ್ಲಿ ಈಗಾಗಲೇ ಸುಮಾರು 50 ಟಿಎಂಸಿ ನೀರು ಸಂಗ್ರಹವಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯೊಂದಿಗೆ ಒಳಹರಿವು ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ. ಹೀಗಾಗಿ ರೈತರ ಹಿತದೃಷ್ಟಿಯಿಂದ ಕೂಡಲೇ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು. ಕಾಲುವೆಯ ಗೇಜ್‌ಗಳನ್ನು ಸಮರ್ಪಕವಾಗಿ ದುರಸ್ತಿ ಮಾಡಿ, ನೀರಿನ ಪ್ರಮಾಣವನ್ನು ನಿಖರವಾಗಿ ಅಳೆಯುವ ವ್ಯವಸ್ಥೆ ಕಲ್ಪಿಸಬೇಕು. ಈ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದ್ದು, ಜಿಲ್ಲಾಧಿಕಾರಿಗಳು ಸಭೆಯಲ್ಲಿ ತೀರ್ಮಾನಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. 1970-80ರ ದಶಕಗಳಲ್ಲಿ ಜಲಾಶಯದಲ್ಲಿ 25ರಿಂದ 30 ದಿನಗಳಿಗೆ ಸಾಕಾಗುವಷ್ಟು ನೀರು ಸಂಗ್ರಹವಾದ ಕೂಡಲೇ ನೀರಾವರಿ ಕಾಲುವೆಗಳಿಗೆ ನೀರು ಹರಿಸಲಾಗುತ್ತಿತ್ತು. ನಂತರ ಬಂದ ಒಳಹರಿವಿನಿಂದ ಯಾವುದೇ ಸಮಸ್ಯೆ ಉಂಟಾಗುತ್ತಿರಲಿಲ್ಲ. ಆದರೆ ಈಗ ಅಧಿಕಾರಿಗಳು ಅತಿಯಾದ ಮುನ್ನೆಚ್ಚರಿಕೆ ಹಾಗೂ ರಕ್ಷಣಾತ್ಮಕ ನಿಲುವಿನಿಂದ ಕಾಲುವೆಗೆ ನೀರು ಹರಿಸಲು ವಿಳಂಬ ಮಾಡುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ ಎಂದು ಹೇಳಿದರು. ಈಗಾಗಲೇ ಹತ್ತಿ, ಭತ್ತ ಸೇರಿದಂತೆ ವಿವಿಧ ಮುಂಗಾರು ಬೆಳೆಗಳ ಬಿತ್ತನೆ ಪೂರ್ಣಗೊಂಡಿದ್ದು, ಬೆಳೆಗಳು 25ರಿಂದ 45 ದಿನಗಳ ಬೆಳವಣಿಗೆಯ ಹಂತದಲ್ಲಿವೆ. ಈ ಸಂದರ್ಭದಲ್ಲಿ ನೀರು ಹರಿಸದಿದ್ದರೆ ಬೆಳೆಗಳು ಒಣಗಿ ರೈತರಿಗೆ ಭಾರೀ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು. ಕಾಲುವೆಗೆ ನೀರು ಹರಿಸುವುದರಲ್ಲಿ ಮತ್ತಷ್ಟು ವಿಳಂಬವಾದರೆ ಕೃಷಿ ಉತ್ಪಾದನೆ ಕುಸಿತ, ಆಹಾರ ಧಾನ್ಯಗಳ ಕೊರತೆ, ಗ್ರಾಮೀಣ ಪ್ರದೇಶಗಳಲ್ಲಿ ರೈತರು ಹಾಗೂ ಕೃಷಿ ಕೂಲಿಕಾರರಿಗೆ ಉದ್ಯೋಗದ ಅಭಾವ, ಆರ್ಥಿಕ ಸಂಕಷ್ಟ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಲಿವೆ ಎಂದು ಅವರು ಹೇಳಿದರು. ಆದ್ದರಿಂದ ನಕಾರಾತ್ಮಕ ಮನೋಭಾವ ತೊರೆದು, ಪ್ರಕೃತಿಯ ಮೇಲೆ ವಿಶ್ವಾಸವಿಟ್ಟು ರೈತರ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ತಕ್ಷಣ ನೀರು ಹರಿಸುವಂತೆ ಶಂಕರಗೌಡ ಹರವಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ವೈ. ಬಸನಗೌಡ, ರಮೇಶ್ ನಾಡಗೌಡ, ನಾಗನಗೌಡ, ಶರಣಪ್ಪಗೌಡ, ಅಮರೇಶ್ ಹೊಸಮನಿ, ವೀರೇಂದ್ರ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.1
- ಹರಿದಾಸ್ ಹಾರ್ಟ್ ಆಸ್ಪತ್ರೆಯ ಪ್ರಥಮ ವಾರ್ಷಿಕೋತ್ಸ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ1
- ಕಾಲೇಜಿನ ಕೊನೆಯ ದಿನ ಸೆಕ್ಯೂರಿಟಿ ಗಾರ್ಡ್‌ನ ಆಶೀರ್ವಾದ ಪಡೆದ ವಿದ್ಯಾರ್ಥಿ ಕಾಲೇಜಿನ ಕೊನೆಯ ದಿನ ಸೆಕ್ಯೂರಿಟಿ ಗಾರ್ಡ್‌ನ ಆಶೀರ್ವಾದ ಪಡೆದ ವಿದ್ಯಾರ್ಥಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ದೃಶ್ಯಗಳು ಮನಸ್ಸಿಗೆ ಹತ್ತಿರವಾಗುತ್ತವೆ. ಇದೀಗ ವಿದ್ಯಾರ್ಥಿಯೊಬ್ಬ ಕಾಲೇಜಿನ ಕೊನೆಯ ದಿನದಂದು ಪ್ರತಿದಿನ ಗೇಟ್ ಮುಂದೆ ನಿಂತು ತನ್ನನ್ನು ನಗುತ್ತಾ ಸ್ವಾಗತಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ನ ಆಶೀರ್ವಾದ ಪಡೆದುಕೊಂಡಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದೆ. ಕಾಲೇಜ್ ಲೈಫ್ (College life) ಇಸ್ ಗೋಲ್ಡನ್ ಲೈಫ್ ಅಂತಾರೆ. ಕಾಲೇಜಿನ ಕೊನೆಯ ದಿನದಂದು ಪ್ರತಿಯೊಬ್ಬ ವಿದ್ಯಾರ್ಥಿಯೂ ಜತೆಯಾಗಿ ಕಳೆದ ಸುಂದರ ಕ್ಷಣಗಳನ್ನು ಮೆಲುಕು ಹಾಕುವುದು ಸಹಜ. ಇನ್ನ ತನ್ನ ಪ್ರೀತಿಯ ಶಿಕ್ಷಕರಿಗೆ, ಸ್ನೇಹಿತರೊಂದಿಗೆ ಫೋಟೋ ಕ್ಲಿಕಿಸಿಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಪದವಿ ವಿದ್ಯಾರ್ಥಿ ಸೆಕ್ಯೂರಿಟಿ ಗಾರ್ಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾನೆ. ಹೌದು, ಕಾಲೇಜ್ ಗೇಟ್ ಹತ್ತಿರ ಬರುತ್ತಿದ್ದಂತೆ ನಗುತ್ತಾ ಸ್ವಾಗತಿಸುತ್ತಿದ್ದ ಮಹಿಳಾ ಭದ್ರತಾ ಸಿಬ್ಬಂದಿಯ ಆಶೀರ್ವಾದ ಪಡೆದ ಕ್ಷಣದ ವಿಡಿಯೋ ವೈರಲ್ ಆಗಿದೆ. ಈ ಹೃದಯ ಸ್ಪರ್ಶಿ ದೃಶ್ಯ ಈ ವಿದ್ಯಾರ್ಥಿಯ ಸಂಸ್ಕಾರಯುತ ನಡವಳಿಕೆಯನ್ನು ಎತ್ತಿ ತೋರಿಸಿದೆ.ರೋಸಿ (Rosy) ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ವಿದ್ಯಾರ್ಥಿಯೊಬ್ಬ ತನ್ನ ಕಾಲೇಜಿನ ಕೊನೆಯ ದಿನದಂದು ಮಹಿಳಾ ಭದ್ರತಾ ಸಿಬ್ಬಂದಿ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಳ್ಳುತ್ತಿರುವುದನ್ನು ನೋಡಬಹುದು. ಈ ವಿದ್ಯಾರ್ಥಿ ಕಾಲು ಮುಟ್ಟುತ್ತಿದ್ದಂತೆ ಸಿಬ್ಬಂದಿ ಭಾವುಕರಾಗಿದ್ದಾಳೆ. ಕೊನೆಗೆ ಈ ವಿದ್ಯಾರ್ಥಿ ತಬ್ಬಿಕೊಂಡು ಸೆಕ್ಯೂರಿಟಿ ಗಾರ್ಡ್‌ನನ್ನು ಸಮಾಧಾನ ಪಡಿಸುತ್ತಿರುವುದನ್ನು ನೀವು ಇಲ್ಲಿ ನೋಡಬಹುದು.ಆಗಸ್ಟ್ 1 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಇದುವರೆಗೆ ಆರು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಭಾರತೀಯ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ನಿಜವಾದ ಜೆನ್ ಝೆಡ್ ಎಂದಿದ್ದಾರೆ. ಮತ್ತೊಬ್ಬರು, ಈ ವಿದ್ಯಾರ್ಥಿಯ ಗುಣ ನಡತೆ ಹೃದಯ ಹತ್ತಿರವಾಯ್ತು ಎಂದು ಕಾಮೆಂಟ್ ಮಾಡಿದ್ದಾರೆ.1
- ಯಾದಗಿರಿ || ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ; ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆ – ತನಿಖೆ ಆರಂಭ ಯಾದಗಿರಿ || ಗ್ಯಾಸ್ ಸೋರಿಕೆ ದುರಂತ: ಮೂವರು ಕಾರ್ಮಿಕರ ದುರ್ಮರಣ ಕಡೇಚೂರ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ವಿಷಾನಿಲ ಸೋರಿಕೆ; ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆ – ತನಿಖೆ ಆರಂಭ1