logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಂಬೇಡ್ಕರ್ ವೃತ್ತದಲ್ಲಿ ‘ಕೆರೆಯಾದ’ ರಸ್ತೆ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ! ಅಂಬೇಡ್ಕರ್ ವೃತ್ತದಲ್ಲಿ ‘ಕೆರೆಯಾದ’ ರಸ್ತೆ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ! ಮಳೆ ಬಂದರೆ ಸಾಕು ಮುಖ್ಯ ರಸ್ತೆಯೇ ಜಲಾವೃತ; ಕಣ್ಣೆದುರೇ ಸಮಸ್ಯೆ ಕಂಡರೂ ಪರಿಹಾರಕ್ಕೆ ಮುಂದಾಗದ ತಾಲೂಕು ಆಡಳಿತ ಅಫಜಲಪುರ: ಪಟ್ಟಣದ ಹೃದಯ ಭಾಗದಲ್ಲಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದ ಮುಂಭಾಗದ ಮುಖ್ಯ ರಸ್ತೆ ಸ್ವಲ್ಪ ಮಳೆ ಬಂದರೆ ಸಾಕು ಕೆರೆಯಂತಾಗುತ್ತಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಪಟ್ಟಣದ ಪ್ರಮುಖ ರಸ್ತೆಯಾಗಿರುವ ಇಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಹಾಗೂ ಸಾರ್ವಜನಿಕರು ಸಂಚರಿಸುತ್ತಾರೆ. ಆದರೆ ಮಳೆ ಸುರಿದಾಗ ರಸ್ತೆಯ ಮೇಲೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದೆ, ರಸ್ತೆಯಲ್ಲಿಯೇ ನೀರು ನಿಂತು ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಮಳೆ ನೀರು ನಿಂತಿರುವ ದೃಶ್ಯವನ್ನು ಕಂಡು ಸ್ಥಳೀಯರು “ಇದು ಅಫಜಲಪುರದ ಹೃದಯ ಭಾಗವೋ ಅಥವಾ ಕೆರೆಯೋ?” ಎಂದು ಪ್ರಶ್ನಿಸುವಂತಾಗಿದೆ. ವಿಶೇಷವೆಂದರೆ ಇದೇ ಪ್ರದೇಶದ ಸುತ್ತಮುತ್ತ ನ್ಯಾಯಾಲಯ, ಪೊಲೀಸ್ ಠಾಣೆ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ತಹಶೀಲ್ದಾರ್ ಕಚೇರಿ ಸೇರಿದಂತೆ ಪ್ರಮುಖ ಸರ್ಕಾರಿ ಕಚೇರಿಗಳಿವೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪ್ರತಿನಿತ್ಯ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದರೂ, ಸಮಸ್ಯೆ ಮಾತ್ರ ವರ್ಷಗಳಿಂದ ಮುಂದುವರಿದಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ. ಮಳೆ ನೀರು ಬೇರೆಡೆಗೆ ಸಮರ್ಪಕವಾಗಿ ಹರಿದು ಹೋಗುವಂತೆ ಚರಂಡಿ ವ್ಯವಸ್ಥೆ ಕಲ್ಪಿಸುವುದು ಅಥವಾ ರಸ್ತೆ ಮೇಲಿನ ನೀರು ನಿಲ್ಲದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸಾಮಾನ್ಯ ಜನರು ನೀರಿನಲ್ಲಿ ಸಂಚರಿಸಿದರೆ ಮಾತ್ರ ಸಮಸ್ಯೆ ಕಾಣಿಸುತ್ತದೆಯೇ? ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇದೇ ರಸ್ತೆಯಲ್ಲಿ ಸಂಚರಿಸುವಾಗ ಅವರಿಗೆ ಸಮಸ್ಯೆ ಕಾಣಿಸುತ್ತಿಲ್ಲವೇ?” ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಸಣ್ಣ ಮಳೆಯಾದರೂ ರಸ್ತೆ ಜಲಾವೃತವಾಗುತ್ತಿರುವುದರಿಂದ ವಾಹನ ಸವಾರರು, ಪಾದಚಾರಿಗಳು, ವೃದ್ಧರು ಹಾಗೂ ಆಸ್ಪತ್ರೆಗೆ ತೆರಳುವ ರೋಗಿಗಳು ತೊಂದರೆ ಅನುಭವಿಸುವಂತಾಗಿದೆ. ನೀರು ದೀರ್ಘಕಾಲ ರಸ್ತೆಯ ಮೇಲೆ ನಿಂತರೆ ರಸ್ತೆ ಹಾಳಾಗುವುದರ ಜೊತೆಗೆ ಸೊಳ್ಳೆಗಳ ಉತ್ಪತ್ತಿ ಹಾಗೂ ಸಾಂಕ್ರಾಮಿಕ ರೋಗಗಳ ಭೀತಿಯೂ ಎದುರಾಗಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಜನರ ಸಮಸ್ಯೆ ಕಡೆಗಣಿಸಿದರೆ ಇಂದಿನ ಆಕ್ರೋಶ ಮುಂದೊಂದು ದಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧದ ಹೋರಾಟವಾಗಿ ತಿರುಗುವ ಸಾಧ್ಯತೆ ಇದೆ ಎಂದು ನಾಗರಿಕರು ಎಚ್ಚರಿಸಿದ್ದಾರೆ. ಪಟ್ಟಣದ ಹೃದಯ ಭಾಗದಲ್ಲಿರುವ ಅಂಬೇಡ್ಕರ್ ವೃತ್ತದ ಮುಂಭಾಗದ ರಸ್ತೆಯಲ್ಲಿ ಮಳೆ ನೀರು ನಿಲ್ಲದಂತೆ ವೈಜ್ಞಾನಿಕವಾಗಿ ಚರಂಡಿ ವ್ಯವಸ್ಥೆ ಕಲ್ಪಿಸಿ, ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು. ತಾಲೂಕು ಆಡಳಿತ, ಪುರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತಕ್ಷಣವೇ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಅಫಜಲಪುರದ ನಾಗರಿಕರು ಒತ್ತಾಯಿಸಿದ್ದಾರೆ.

8 hrs ago
user_Y..k.pujari
Y..k.pujari
Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
8 hrs ago
ff124285-2c9e-4803-b272-85d9c786bfc7

More news from ಕರ್ನಾಟಕ and nearby areas
  • ಹೂ ಮಳೆ ಸುರಿದು ಪೊಲೀಸ್ ಅಧಿಕಾರಿಗೆ ಅದ್ದೂರಿಯಾಗಿ ಬೀಳ್ಕೋಡುಗೆ ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು. ಅಫಜಲಪುರ ತಾಲೂಕಿನ ರೇವೂರ ಪೊಲೀಸ್ ಠಾಣೆ ಪಿ.ಎಸ್.ಐ.ಕಮಲು ಅವರಿಗೆ ಠಾಣಾ ಸಿಬ್ಬಂದಿಗಳು ಹೂ ಮಳೆ ಸುರಿದು ಅಭಿನಂದನೆ ಸಲ್ಲಿಸಿ ಅದ್ದೂರಿಯಾಗಿ ಬೀಲಕ್ಕೋಡುಗೆ ಮಾಡಿದರು.
    1
    ಹೂ ಮಳೆ ಸುರಿದು ಪೊಲೀಸ್ ಅಧಿಕಾರಿಗೆ ಅದ್ದೂರಿಯಾಗಿ ಬೀಳ್ಕೋಡುಗೆ ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
ಅಫಜಲಪುರ ತಾಲೂಕಿನ ರೇವೂರ ಪೊಲೀಸ್ ಠಾಣೆ ಪಿ.ಎಸ್.ಐ.ಕಮಲು ಅವರಿಗೆ ಠಾಣಾ ಸಿಬ್ಬಂದಿಗಳು ಹೂ ಮಳೆ ಸುರಿದು ಅಭಿನಂದನೆ ಸಲ್ಲಿಸಿ ಅದ್ದೂರಿಯಾಗಿ ಬೀಲಕ್ಕೋಡುಗೆ ಮಾಡಿದರು.
    user_Afzalapur today news kannada
    Afzalapur today news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    1 hr ago
  • ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ
    1
    ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ
ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ
    user_Y..k.pujari
    Y..k.pujari
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    6 hrs ago
  • ಕೋಲಿ ಸಮಾಜದ ಯುವ ಅಟೋ ಚಾಲಕ ದತ್ತು ಖುರ್ಚಿ ಮೇಲೆ ಗಂಭೀರ ಮಾರಣಾಂತಿಕ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ
    1
    ಕೋಲಿ ಸಮಾಜದ ಯುವ ಅಟೋ ಚಾಲಕ ದತ್ತು ಖುರ್ಚಿ ಮೇಲೆ ಗಂಭೀರ ಮಾರಣಾಂತಿಕ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    17 hrs ago
  • ಮಹಾನ್ ಗುರು ಎಚ್ ಟಿ ಕುಲಕರ್ಣಿ ಅವರಿಗೆ ಅನಂತ ಕೋಟಿ ನಮನಗಳು ಎಚ್ ಟಿ ಕುಲಕರ್ಣಿ ಗುರುಗಳ ಅಂತಿಮ ಸಂಸ್ಕಾರ
    1
    ಮಹಾನ್ ಗುರು ಎಚ್ ಟಿ ಕುಲಕರ್ಣಿ ಅವರಿಗೆ ಅನಂತ ಕೋಟಿ ನಮನಗಳು ಎಚ್ ಟಿ ಕುಲಕರ್ಣಿ ಗುರುಗಳ ಅಂತಿಮ ಸಂಸ್ಕಾರ
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    Pharmacist ಸಿಂದಗಿ, ವಿಜಯಪುರ, ಕರ್ನಾಟಕ•
    10 hrs ago
  • ಸಿಸಿ ರಸ್ತೆ ಕಾಮಾಗಾರಿ ವೇಳೆ ಐತಿಹಾಸಿಕ ಪುರಾತನ ಮೂರ್ತಿ ಪತ್ತೆ* ಸಿಸಿ ರಸ್ತೆ ಕಾಮಗಾರಿ ಮಾಡುವೆ ವೇಳೆಯಲ್ಲಿ ಐರಿಹಾಸಿಕ ಪುರಾತನದ ಮೂರ್ತಿ ಪತ್ತೆಯಾಗಿದ್ದು ಶ್ರೀ ಸೂರ್ಯನಾರಾಯಣ ದೇವರ ಶಿಲಾ ಮೂರ್ತಿ ‌ಎಂದು ತಿಳಿದು ಬಂದಿದೆ.ರುಕ್ಮಿಣಿ - ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಹೊಲಕುಂದಾ ಗ್ರಾಮದ ವಿಠ್ಠಲ ದೇವಸ್ಥಾನದ ಆವರಣದಲ್ಲಿನ ಸಿಸಿ ರಸ್ತೆ ಕಾಮಾಗಾರಿ ವೇಳೆ ಪತ್ತೆಯಾಗಿದೆ.2.1 ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ , ಎರಡೂ ಕೈಗಳಲ್ಲಿ ಕಮಲ ಹೂವುಗಳು ಹೊಂದಿರುವ‌ ಮೂರ್ತಿಯಾಗಿದ್ದು, ಸಂಧ್ಯಾದೇವಿ, ಛಾಯಾದೇವಿ ಹಾಗೂ ಸಪ್ತ ಅಶ್ವಗಳ ಕೆತ್ತನೆ ಒಳಗೊಂಡಿದೆ. ಸಂಶೋಧಕರ ಪ್ರಾಥಮಿಕ ಅಭಿಪ್ರಾಯದಂತೆ ರಾಷ್ಟ್ರಕೂಟರ ಕಾಲದ ಶಿಲ್ಪ ಎನ್ನುವ ಸಾಧ್ಯತೆ ಇದೆ
    1
    ಸಿಸಿ ರಸ್ತೆ ಕಾಮಾಗಾರಿ ವೇಳೆ ಐತಿಹಾಸಿಕ ಪುರಾತನ ಮೂರ್ತಿ ಪತ್ತೆ*
ಸಿಸಿ ರಸ್ತೆ ಕಾಮಗಾರಿ ಮಾಡುವೆ ವೇಳೆಯಲ್ಲಿ ಐರಿಹಾಸಿಕ ಪುರಾತನದ ಮೂರ್ತಿ ಪತ್ತೆಯಾಗಿದ್ದು ಶ್ರೀ ಸೂರ್ಯನಾರಾಯಣ ದೇವರ  ಶಿಲಾ ಮೂರ್ತಿ ‌ಎಂದು ತಿಳಿದು ಬಂದಿದೆ.ರುಕ್ಮಿಣಿ - ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಹೊಲಕುಂದಾ ಗ್ರಾಮದ ವಿಠ್ಠಲ ದೇವಸ್ಥಾನದ ಆವರಣದಲ್ಲಿನ ಸಿಸಿ ರಸ್ತೆ ಕಾಮಾಗಾರಿ ವೇಳೆ ಪತ್ತೆಯಾಗಿದೆ.2.1 ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ , ಎರಡೂ ಕೈಗಳಲ್ಲಿ ಕಮಲ ಹೂವುಗಳು ಹೊಂದಿರುವ‌ ಮೂರ್ತಿಯಾಗಿದ್ದು, ಸಂಧ್ಯಾದೇವಿ, ಛಾಯಾದೇವಿ ಹಾಗೂ ಸಪ್ತ ಅಶ್ವಗಳ ಕೆತ್ತನೆ ಒಳಗೊಂಡಿದೆ. ಸಂಶೋಧಕರ ಪ್ರಾಥಮಿಕ ಅಭಿಪ್ರಾಯದಂತೆ ರಾಷ್ಟ್ರಕೂಟರ ಕಾಲದ ಶಿಲ್ಪ ಎನ್ನುವ ಸಾಧ್ಯತೆ ಇದೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    3 hrs ago
  • ಇಂಗನಕಲ: ಶರಣಪ್ಪಾ D ಹಾಲಕಾಯಿ ಸಾಹುಕಾರ ಅವರು ಭಜನಾ ಮಂಡಳಿಗೆ ಪ್ರಸಾದ ಸೇವೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಭಿಷೇಕ ಹಾಲಕಾಯಿ ಉಪಸ್ಥಿತರಿದ್ದರು
    2
    ಇಂಗನಕಲ: ಶರಣಪ್ಪಾ D ಹಾಲಕಾಯಿ ಸಾಹುಕಾರ ಅವರು ಭಜನಾ ಮಂಡಳಿಗೆ ಪ್ರಸಾದ ಸೇವೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಭಿಷೇಕ ಹಾಲಕಾಯಿ ಉಪಸ್ಥಿತರಿದ್ದರು
    user_User1523
    User1523
    Chittapur, Kalaburagi•
    1 hr ago
  • ವಿಜಯಪುರ ವಿಮಾನ ನಿಲ್ದಾಣ : ಮೂರು ತಿಂಗಳಲ್ಲಿ ವಿಮಾನ ಹಾರಾಟದ ನಿರೀಕ್ಷೆ ವಿಜಯಪುರ : ಅರ್ಧಕ್ಕೆ ನಿಲ್ಲುವ ಭೀತಿಯಲ್ಲಿದ್ದ ವಿಜಯಪುರ ವಿಮಾನ ನಿಲ್ದಾಣ ಯೋಜನೆಗೆ ಮರುಜೀವ ನೀಡಿ, ಶೀಘ್ರವೇ ಕಾರ್ಯರೂಪಕ್ಕೆ ತಂದ ಶ್ರೇಯಸ್ಸು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ.ಪಾಟೀಲ್‌ರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ವಕ್ತಾರ ಎಸ್‌.ಎಂ.ಪಾಟೀಲ್ ಗಣಿಹಾರ ತಿಳಿಸಿದರು. ಶುಕ್ರವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ತಾಂತ್ರಿಕ ಹಾಗೂ ಕಾನೂನು ಸಂಕಷ್ಟಕ್ಕೆ ಸಿಲುಕಿ ನೆನೆಗುದಿಗೆ ಬಿದ್ದಿದ್ದ ವಿಮಾನ ನಿಲ್ದಾಣ ಯೋಜನೆಗೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದೆ. ಮುಂದಿನ ಮೂರೇ ತಿಂಗಳಲ್ಲಿ ವಿಮಾನ ಹಾರಾಟ ಆರಂಭವಾಗುವ ಆಶಾವಾದ ಮೂಡಿದೆ ಎಂದು ಗಣಿಹಾರ ಹೇಳಿದರು.
    1
    ವಿಜಯಪುರ ವಿಮಾನ ನಿಲ್ದಾಣ : ಮೂರು ತಿಂಗಳಲ್ಲಿ ವಿಮಾನ ಹಾರಾಟದ ನಿರೀಕ್ಷೆ
ವಿಜಯಪುರ : ಅರ್ಧಕ್ಕೆ ನಿಲ್ಲುವ ಭೀತಿಯಲ್ಲಿದ್ದ ವಿಜಯಪುರ ವಿಮಾನ ನಿಲ್ದಾಣ ಯೋಜನೆಗೆ ಮರುಜೀವ ನೀಡಿ, ಶೀಘ್ರವೇ ಕಾರ್ಯರೂಪಕ್ಕೆ ತಂದ ಶ್ರೇಯಸ್ಸು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ.
ಎಂ.ಬಿ.ಪಾಟೀಲ್‌ರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ವಕ್ತಾರ ಎಸ್‌.ಎಂ.ಪಾಟೀಲ್ ಗಣಿಹಾರ ತಿಳಿಸಿದರು.
ಶುಕ್ರವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ತಾಂತ್ರಿಕ ಹಾಗೂ ಕಾನೂನು ಸಂಕಷ್ಟಕ್ಕೆ ಸಿಲುಕಿ ನೆನೆಗುದಿಗೆ ಬಿದ್ದಿದ್ದ ವಿಮಾನ ನಿಲ್ದಾಣ ಯೋಜನೆಗೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದೆ. ಮುಂದಿನ ಮೂರೇ ತಿಂಗಳಲ್ಲಿ ವಿಮಾನ ಹಾರಾಟ ಆರಂಭವಾಗುವ ಆಶಾವಾದ ಮೂಡಿದೆ ಎಂದು ಗಣಿಹಾರ ಹೇಳಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    19 hrs ago
  • ಹೋರಾಟವೇ ಜೀವನ – ಕೋಲಿ ಸಮಾಜದ ಧ್ವನಿಯಾಗಿ ಸಂತೋಷ್ ಬೆಣ್ಣೂರು ಅವರ ಪಯಣ
    1
    ಹೋರಾಟವೇ ಜೀವನ – ಕೋಲಿ ಸಮಾಜದ ಧ್ವನಿಯಾಗಿ ಸಂತೋಷ್ ಬೆಣ್ಣೂರು ಅವರ ಪಯಣ
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.