logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

583121 Bellary district siruguppa

2 hrs ago
user_Welding Nizam Welding Nizam
Welding Nizam Welding Nizam
ಸಿರುಗುಪ್ಪ, ಬಳ್ಳಾರಿ, ಕರ್ನಾಟಕ•
2 hrs ago

583121 Bellary district siruguppa

More news from ಕರ್ನಾಟಕ and nearby areas
  • ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿ ಗ್ರಾಮದಲ್ಲಿ ವಿವಾದ ಉಂಟಾಗಿದೆ. ಒಂದೇ ಕೋಮಿನವರನ್ನು ಮುಖ್ಯ ಸ್ಥಾನಗಳಿಗೆ ಪದಾಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವುದನ್ನು ಕೆಲವು ಹಾಲು ಉತ್ಪಾದಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತವಾಗಿ ದೂರು ನೀಡಿದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೇ ಅವಿರೋಧವಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಹಾಲು ಉತ್ಪಾದಕರ ಸಂಘವನ್ನು ಸ್ಥಾಪಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ. ಡೈರಿಗೆ ನಿಯಮಿತವಾಗಿ ಹಾಲು ಪೂರೈಸುವ ರೈತರಿಗೆ ಮೊದಲ ಆದ್ಯತೆ ನೀಡದೇ ಸಂಘವನ್ನು ರಚಿಸಿರುವುದು ಸರಿಯಲ್ಲ ಎಂದು ಹಾಲು ಉತ್ಪಾದಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ಈ ಆಯ್ಕೆಯನ್ನು ರದ್ದುಪಡಿಸಿ, ಡೈರಿಗೆ ಹಾಲು ಹಾಕುವ ನಿಜವಾದ ಹಾಲು ಉತ್ಪಾದಕರಿಗೆ ಮೊದಲ ಅವಕಾಶ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹಾಲು ಉತ್ಪಾದಕರು ಒತ್ತಾಯಿಸಿದ್ದಾರೆ.
    1
    ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿ ಗ್ರಾಮದಲ್ಲಿ ವಿವಾದ ಉಂಟಾಗಿದೆ. ಒಂದೇ ಕೋಮಿನವರನ್ನು ಮುಖ್ಯ ಸ್ಥಾನಗಳಿಗೆ ಪದಾಧಿಕಾರಿಗಳನ್ನಾಗಿ ನೇಮಕ ಮಾಡಲು ಮುಂದಾಗಿರುವುದನ್ನು ಕೆಲವು ಹಾಲು ಉತ್ಪಾದಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತವಾಗಿ ದೂರು ನೀಡಿದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೇ ಅವಿರೋಧವಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಹಾಲು ಉತ್ಪಾದಕರ ಸಂಘವನ್ನು ಸ್ಥಾಪಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.
ಡೈರಿಗೆ ನಿಯಮಿತವಾಗಿ ಹಾಲು ಪೂರೈಸುವ ರೈತರಿಗೆ ಮೊದಲ ಆದ್ಯತೆ ನೀಡದೇ ಸಂಘವನ್ನು ರಚಿಸಿರುವುದು ಸರಿಯಲ್ಲ ಎಂದು ಹಾಲು ಉತ್ಪಾದಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೂಡಲೇ ಈ ಆಯ್ಕೆಯನ್ನು ರದ್ದುಪಡಿಸಿ, ಡೈರಿಗೆ ಹಾಲು ಹಾಕುವ ನಿಜವಾದ ಹಾಲು ಉತ್ಪಾದಕರಿಗೆ ಮೊದಲ ಅವಕಾಶ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹಾಲು ಉತ್ಪಾದಕರು ಒತ್ತಾಯಿಸಿದ್ದಾರೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಉತ್ತರ ಕರ್ನಾಟಕದ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಮುಳುಗಡೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ತಕ್ಷಣ ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಶಾಸಕ ಪಿ.ಎಚ್. ಪೂಜಾರ್ ಆಗ್ರಹಿಸಿದ್ದಾರೆ. ಸಂತ್ರಸ್ತರ ಪರಿಸ್ಥಿತಿ ದಿನೇದಿನೇ ಚಿಂತಾಜನಕವಾಗುತ್ತಿದೆ. ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಸಂತ್ರಸ್ತರು ದೊಡ್ಡ ಮಟ್ಟದ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಸಿದರು. ಉದ್ಯೋಗ ಸೃಷ್ಟಿಗೆ ಅಗತ್ಯವಾದ ಪೂರಕ ವಾತಾವರಣವನ್ನು ರಾಜ್ಯ ಸರ್ಕಾರ ನಿರ್ಮಿಸಿ, ಸಂತ್ರಸ್ತರ ಜೀವನೋಪಾಯಕ್ಕೆ ಶಾಶ್ವತ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದರು.
    1
    ಉತ್ತರ ಕರ್ನಾಟಕದ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಮುಳುಗಡೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ತಕ್ಷಣ ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ಶಾಸಕ ಪಿ.ಎಚ್. ಪೂಜಾರ್ ಆಗ್ರಹಿಸಿದ್ದಾರೆ. ಸಂತ್ರಸ್ತರ ಪರಿಸ್ಥಿತಿ ದಿನೇದಿನೇ ಚಿಂತಾಜನಕವಾಗುತ್ತಿದೆ. ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಸಂತ್ರಸ್ತರು ದೊಡ್ಡ ಮಟ್ಟದ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಬಹುದು ಎಂದು ಎಚ್ಚರಿಸಿದರು.
ಉದ್ಯೋಗ ಸೃಷ್ಟಿಗೆ ಅಗತ್ಯವಾದ ಪೂರಕ ವಾತಾವರಣವನ್ನು ರಾಜ್ಯ ಸರ್ಕಾರ ನಿರ್ಮಿಸಿ, ಸಂತ್ರಸ್ತರ ಜೀವನೋಪಾಯಕ್ಕೆ ಶಾಶ್ವತ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    9 hrs ago
  • ಚಿತ್ರದುರ್ಗದ ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಒಂದಲ್ಲ ಒಂದು ದೂರು ಕೇಳಿ ಬರುತ್ತಲೇ ಇರುವ ನಡುವೆಯೇ ನಡೆದ ಬಾಣಂತಿಯ ಸಾವು.. ಚಿತ್ರದುರ್ಗ :ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಪರಶುರಾಮಪುರದ ಶಿಲ್ಪ ಎನ್ನುವ ಮಹಿಳೆಯೋರ್ವರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ  ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್​​ ಮಾಡಲಾಗಿದೆ.. ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದರು. ಹೆರಿಗೆ ಬಳಿಕ ವೈದ್ಯರು ನಿರ್ಲಕ್ಷ ತೋರಿದ ಪರಿಣಾಮ ಶಿಲ್ಪಾಳ ಸಾವು ಸಂಭವಿಸಿದೆ. ಏಕಾಏಕಿ ಐಸಿಯುಗೆ ಶಿಫ್ಟ್ ಮಾಡಬೇಕೆಂದು ಹೇಳಿ ನೇರವಾಗಿ ಶವಾಗಾರಕ್ಕೆ ಶಿಫ್ಟ್ ಮಾಡಿದ್ದಾರೆ ಎಂಬುದು ಮೃತಳ ತಾಯಿ ದುರ್ಗಮ್ಮ ಅವರ ಆರೋಪ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತರ ಸಂಬಂಧಿಕರು ಆಸ್ಪತ್ರೆ ಬಳಿ ಜಮಾಯಿಸಿದ್ದು, ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಸೇರಿ ಸಿಬ್ಬಂದಿಯನ್ನು ತರಾಟೆಗೆ ಪಡೆದಿದ್ದಾರೆ..
    1
    ಚಿತ್ರದುರ್ಗದ ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಒಂದಲ್ಲ ಒಂದು ದೂರು ಕೇಳಿ ಬರುತ್ತಲೇ ಇರುವ ನಡುವೆಯೇ ನಡೆದ ಬಾಣಂತಿಯ ಸಾವು..
ಚಿತ್ರದುರ್ಗ :ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಪರಶುರಾಮಪುರದ ಶಿಲ್ಪ ಎನ್ನುವ  ಮಹಿಳೆಯೋರ್ವರು  ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ  ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ..
ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್​​ ಮಾಡಲಾಗಿದೆ..
ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದರು. ಹೆರಿಗೆ ಬಳಿಕ ವೈದ್ಯರು ನಿರ್ಲಕ್ಷ ತೋರಿದ ಪರಿಣಾಮ ಶಿಲ್ಪಾಳ ಸಾವು ಸಂಭವಿಸಿದೆ. ಏಕಾಏಕಿ ಐಸಿಯುಗೆ ಶಿಫ್ಟ್ ಮಾಡಬೇಕೆಂದು ಹೇಳಿ ನೇರವಾಗಿ ಶವಾಗಾರಕ್ಕೆ ಶಿಫ್ಟ್ ಮಾಡಿದ್ದಾರೆ ಎಂಬುದು ಮೃತಳ ತಾಯಿ ದುರ್ಗಮ್ಮ ಅವರ ಆರೋಪ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತರ ಸಂಬಂಧಿಕರು ಆಸ್ಪತ್ರೆ ಬಳಿ ಜಮಾಯಿಸಿದ್ದು, ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಸೇರಿ ಸಿಬ್ಬಂದಿಯನ್ನು ತರಾಟೆಗೆ ಪಡೆದಿದ್ದಾರೆ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಚಿತ್ರದುರ್ಗದ ಜಿಲ್ಲಾ‌ ಆಸ್ಪತ್ರೆ ಬಳಿ ಮೃತ ಮಹಿಳೆಯ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಧಾಖಲಾಗಿದ್ದ ಮಹಿಳೆ ಹೆರಿಗೆ ನಂತರ ಮೃತಪಟ್ಟಿದ್ದು ಮಗು ಚಿಕಿತ್ಸೆ ಪಡೆಯುತ್ತಿದ್ದು ಶಿಲ್ಪ ಎಂಬ ಮಹಿಳೆ ಸಾವನ್ನಪ್ಪಿದ್ದು ಮಹಿಳೆ ಸಾವಿಗೆ ವೈದ್ಯರು ಹಾಗೂ ಜಿಲ್ಲಾ ಸರ್ಜನ್ ಅವರೆ ಕಾರಣ ಎಂದು ಆರೋಪಿಸಿದ್ದಾರೆ
    1
    ಚಿತ್ರದುರ್ಗದ ಜಿಲ್ಲಾ‌ ಆಸ್ಪತ್ರೆ ಬಳಿ ಮೃತ ಮಹಿಳೆಯ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಧಾಖಲಾಗಿದ್ದ ಮಹಿಳೆ ಹೆರಿಗೆ ನಂತರ ಮೃತಪಟ್ಟಿದ್ದು ಮಗು ಚಿಕಿತ್ಸೆ ಪಡೆಯುತ್ತಿದ್ದು ಶಿಲ್ಪ ಎಂಬ ಮಹಿಳೆ ಸಾವನ್ನಪ್ಪಿದ್ದು ಮಹಿಳೆ ಸಾವಿಗೆ ವೈದ್ಯರು ಹಾಗೂ ಜಿಲ್ಲಾ ಸರ್ಜನ್ ಅವರೆ ಕಾರಣ ಎಂದು ಆರೋಪಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    19 hrs ago
  • ಕಲಬುರಗಿ: ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಠಾಣೆಗೆ ತಂದು ಒಪ್ಪಿಸಿದ ಹಿಂದೂ ಕಾರ್ಯಕರ್ತರು ಕಲಬುರ್ಗಿಯ ಶರಣಸಿರಸಗಿ ಗ್ರಾಮದಲ್ಲಿ ಕ್ರಿಶ್ಚಿಯನ್ ಧರ್ಮದ ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರ ಮೂರ್ತಿ, ಫೋಟೋಗಳನ್ನು ಮನೆಯಿಂದ ಹೊರಗೆಸೆಯಿರಿ ನಿಮಗಾಗಿ ನಾವು ಪ್ರಾರ್ಥನೆ ಮಾಡುತ್ತೇವೆ ಎಂದು 20-30 ಜನರ ತಂದ ಧರ್ಮ ಪರಿವರ್ತನಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಜರಂಗದಳ ಕಾರ್ಯಕರ್ತನ ಮನೆಗೆ ಭೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಕಾರ್ಯಕರ್ತೆ ದಿವ್ಯಾ ನೇತೃತ್ವದಲ್ಲಿ ತಂಡವನ್ನು ಸಬ್ ಅರ್ಬನ್ ಪೊಲೀಸ್‌ ಠಾಣೆಗೆ ಒಪ್ಪಿಸಲಾಗಿದ್ದು, ಸರ್ಕಲ್ ಇನ್ಸೆಕ್ಟ‌ರ್ ಕಾನೂನು ಕ್ರಮದ ಭರವಸೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮತಾಂತರ ತಡೆಗೆ ಕಠಿಣ ಕ್ರಮಕ್ಕಾಗಿ ಆಗ್ರಹ ಕೇಳಿಬಂದಿದೆ.
    2
    ಕಲಬುರಗಿ: ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಠಾಣೆಗೆ ತಂದು ಒಪ್ಪಿಸಿದ ಹಿಂದೂ ಕಾರ್ಯಕರ್ತರು
ಕಲಬುರ್ಗಿಯ ಶರಣಸಿರಸಗಿ ಗ್ರಾಮದಲ್ಲಿ ಕ್ರಿಶ್ಚಿಯನ್ ಧರ್ಮದ ಕರಪತ್ರ ಹಂಚಿ ಮತಾಂತರಕ್ಕೆ ಯತ್ನಿಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರ ಮೂರ್ತಿ, ಫೋಟೋಗಳನ್ನು ಮನೆಯಿಂದ ಹೊರಗೆಸೆಯಿರಿ ನಿಮಗಾಗಿ ನಾವು ಪ್ರಾರ್ಥನೆ ಮಾಡುತ್ತೇವೆ ಎಂದು 20-30 ಜನರ ತಂದ ಧರ್ಮ ಪರಿವರ್ತನಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಜರಂಗದಳ ಕಾರ್ಯಕರ್ತನ ಮನೆಗೆ ಭೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಕಾರ್ಯಕರ್ತೆ ದಿವ್ಯಾ ನೇತೃತ್ವದಲ್ಲಿ ತಂಡವನ್ನು ಸಬ್ ಅರ್ಬನ್ ಪೊಲೀಸ್‌ ಠಾಣೆಗೆ ಒಪ್ಪಿಸಲಾಗಿದ್ದು, ಸರ್ಕಲ್ ಇನ್ಸೆಕ್ಟ‌ರ್ ಕಾನೂನು ಕ್ರಮದ ಭರವಸೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮತಾಂತರ ತಡೆಗೆ ಕಠಿಣ ಕ್ರಮಕ್ಕಾಗಿ ಆಗ್ರಹ ಕೇಳಿಬಂದಿದೆ.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    6 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    7 hrs ago
  • ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕೆ ಭಕ್ತರ ಹರಿವು – ಕಾಯಿನ್ ಅಂಟಿಸಿ ಬೇಡಿಕೆ ಈಡೇರಿಕೆಗಾಗಿ ಪ್ರಾರ್ಥನೆ ಹೌದು ಇದು ಚಳ್ಳಕೆರೆ ತಾಲೂಕಿನ ಮಧ್ಯಾಹ್ನದ ಮಾರಮ್ಮ ಎಂದೇ ಖ್ಯಾತಿ ಪಡೆದ ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕಾಗಿ ಮಂಗಳವಾರ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿದರು. ತಮ್ಮ ಇಷ್ಟಾರ್ಥಗಳು ಈಡೇರಲಿ ಎಂಬ ನಂಬಿಕೆಯಿಂದ ಭಕ್ತರು ದೇವಿಯ ಗರ್ಭಗುಡಿಯ ಹಿಂಭಾಗದಲ್ಲಿ ಕಾಯಿನ್ ಅಂಟಿಸುವ ಮೂಲಕ ಅರಕೆ ತೀರಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿತು. ದೇವಿಯ ಕೃಪೆಯಿಂದ ಮನಸಿನ ಬೇಡಿಕೆಗಳು ಈಡೇರುತ್ತವೆ ಎಂಬ ನಂಬಿಕೆಯಿಂದ ಹಲವರು ಈ ವಿಧಿ ಪಾಲಿಸುತ್ತಿದ್ದಾರೆ. ಇದೇ ವೇಳೆ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ತಮ್ಮ ಇಷ್ಟಾರ್ಥಗಳು ಈಡೇರಿದ ಹಿನ್ನೆಲೆಯಲ್ಲಿ ಮಕ್ಕಳ ಜವಳ, ನಾಮಕರಣ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿ ಬಾಡೂಟ ಮಾಡಿಸುವ ಸಂಪ್ರದಾಯವೂ ನಡೆಯುತ್ತಿತ್ತು. ಬಂಧು-ಬಳಗ ಹಾಗೂ ಸ್ನೇಹಿತರನ್ನು ಆಹ್ವಾನಿಸಿ ಊಟ ಬಡಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
    1
    ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕೆ ಭಕ್ತರ ಹರಿವು – ಕಾಯಿನ್ ಅಂಟಿಸಿ ಬೇಡಿಕೆ ಈಡೇರಿಕೆಗಾಗಿ ಪ್ರಾರ್ಥನೆ
ಹೌದು ಇದು ಚಳ್ಳಕೆರೆ ತಾಲೂಕಿನ ಮಧ್ಯಾಹ್ನದ ಮಾರಮ್ಮ ಎಂದೇ ಖ್ಯಾತಿ ಪಡೆದ ಗೌರಸಮುದ್ರ ಮಾರಮ್ಮ ದೇವಿ ದರ್ಶನಕ್ಕಾಗಿ ಮಂಗಳವಾರ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿದರು.
ತಮ್ಮ ಇಷ್ಟಾರ್ಥಗಳು ಈಡೇರಲಿ ಎಂಬ ನಂಬಿಕೆಯಿಂದ ಭಕ್ತರು ದೇವಿಯ ಗರ್ಭಗುಡಿಯ ಹಿಂಭಾಗದಲ್ಲಿ ಕಾಯಿನ್ ಅಂಟಿಸುವ ಮೂಲಕ ಅರಕೆ ತೀರಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿತು. ದೇವಿಯ ಕೃಪೆಯಿಂದ ಮನಸಿನ ಬೇಡಿಕೆಗಳು ಈಡೇರುತ್ತವೆ ಎಂಬ ನಂಬಿಕೆಯಿಂದ ಹಲವರು ಈ ವಿಧಿ ಪಾಲಿಸುತ್ತಿದ್ದಾರೆ.
ಇದೇ ವೇಳೆ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ತಮ್ಮ ಇಷ್ಟಾರ್ಥಗಳು ಈಡೇರಿದ ಹಿನ್ನೆಲೆಯಲ್ಲಿ ಮಕ್ಕಳ ಜವಳ, ನಾಮಕರಣ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಿ ಬಾಡೂಟ ಮಾಡಿಸುವ ಸಂಪ್ರದಾಯವೂ ನಡೆಯುತ್ತಿತ್ತು. ಬಂಧು-ಬಳಗ ಹಾಗೂ ಸ್ನೇಹಿತರನ್ನು ಆಹ್ವಾನಿಸಿ ಊಟ ಬಡಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.
    1
    ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    23 hrs ago
  • ಚಳ್ಳಕೆರೆ, ಮಾ.10 : ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ಕೈಗೊಂಡಿದ್ದ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು. ತಾಲ್ಲೂಕಿನ ಗರಣಿ ಕ್ರಾಸ್ ಬಳಿ ಮಂಗಳವಾರ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆ ನಡೆಸಿದ ರೈತರು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಕೂದಲೆಳೆ ಅಂತರದಲ್ಲಿಯೇ ರೈತಸಂಘದ ಕಾರ್ಯಕರ್ತರು ಮಾ.2ರಂದು ಉಪವಾಸ ಆರಂಭಿಸಿ ಐದು ದಿನಗಳ ಕಾಲ ಮುಂದುವರಿಸಿದ್ದರೂ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ, ಮನವೊಲಿಸುವ ಸಣ್ಣ ಪ್ರಯತ್ನವನ್ನೇ ಮಾಡಲಿಲ್ಲ ಎಂದು ದೂರಿದರು. ಪ್ರತಿದಿನ ವಿವಿಧ ಸಂಘಟನೆಗಳು ಆಗಮಿಸಿ ಬೆಂಬಲ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಬೇಕೆಂದು ಆಗ್ರಹಿಸಿದರು ಸರ್ವಾಧಿಕಾರಿ ರೀತಿ ವರ್ತಿಸಿದ್ದಾರೆ. ಪರಿಣಾಮ ರೈತನಾಯಕ ಉಪವಾಸ ಸತ್ಯಾಗ್ರಹದಿಂದ ಕುಸಿದುಬಿದ್ದು ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತçಚಿಕಿತ್ಸೆಗೆ 15 ಲಕ್ಷ ರೂ. ವೆಚ್ಚವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ತಿಪ್ಪೇಸ್ವಾಮಿ ಅವರ ಆರೋಗ್ಯ ವಿಚಾರಿಸುವ ಮಾನವೀಯತೆಯನ್ನು ಜಿಲ್ಲಾಡಳಿತ, ಜನಪ್ರತಿನಿಧಿಗಳು ಮಾಡಿಲ್ಲದಿರುವುದು ಹೋರಾಟಗಾರರಿಗೆ ಅಪಮಾನ ಮಾಡುವ ನಡೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತಂಘದ ರಾಜ್ಯ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ಸಾರ್ವಜನಿಕರ ಸಂಕಷ್ಟ, ಹೋರಾಟಗಾರರ ಕೂಗಿಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ. ಆದರೆ, ಐದು ದಿನಗಳಿಂದ ಉಪವಾಸ ನಿರತರಾಗಿದ್ದ ತಿಪ್ಪೇಸ್ವಾಮಿ ಅವರನ್ನು ಅತ್ಯಂತ ಅಪಮಾನಕರವಾಗಿ ಜಿಲ್ಲಾಧಿಕಾರಿ ನಡೆಸಿಕೊಂಡಿದ್ದಾರೆ. ಧರಣಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸದ ಪರಿಣಾಮ ಉಪವಾಸ ಮುಂದುವರಿಸಿದ್ದೇ ಅನಾರೋಗ್ಯಕ್ಕೆ ಒಳಗಾಗಲು ಮುಖ್ಯ ಕಾರಣ ಎಂದರು. ರೈತನಾಯಕ ಅನಾರೋಗ್ಯಕ್ಕೆ ಒಳಗಾಗಲಿ ಎಂಬ ಉದ್ದೇಶದಿಂದಲೇ ಅವರು ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿಲ್ಲವೆಂಬ ಸಂಶಯ ಮೂಡುತ್ತದೆ. ಇದೊಂದು ಸರ್ಕಾರಿ ವ್ಯವಸ್ಥೆ ಪರೋಕ್ಷವಾಗಿ ಕೊಲೆ ಯತ್ನ ನಡೆಸಿದೆ ಎಂದು ದೂರಿದರು. ಆಸ್ಪತ್ರೆಗೆ ಸೇರಿ ಐದು ದಿನಗಳಾಗಿದ್ದರೂ ಇಲ್ಲಿಯವರೆಗೂ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸ ಅಧಿಕಾರಿಗಳು ಮಾಡಿಲ್ಲ. ಅಧಿಕಾರಿಗಳ ನಡೆ ಉದ್ಧಟನದಿಂದ ಕೂಡಿದೆ. ಇಂತಹ ಡಿಸಿಯನ್ನು ಯಾವುದೇ ಕಾರಣಕ್ಕೂ ಚಿತ್ರದುರ್ಗದಲ್ಲಿ ಇರಲು ಬಿಡಬಾರದು ಎಂದರು. ಟಿ.ವೆAಕಟೇಶ್ ಜಿಲ್ಲೆಗೆ ಆಗಮಿಸಿ ಎರಡೂವರೆ ವರ್ಷ ಆಗಿದ್ದರೂ ಇಲ್ಲಿಯವರೆಗೂ ಯಾವ ಕಾರಣಕ್ಕೆ ಅವರನ್ನೇ ಮುಂದುವರಿಸಲಾಗುತ್ತಿದೆ ಎಂದು ಪ್ರಶ್ನೀಸಿದ ಬಸವರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಎಟಿಎಂ ರೀತಿ ಬೆಂಬಲವಾಗಿ ನಿಂತಿದ್ದಾರೆ. ಈ ಕಾರಣಕ್ಕೆ ವೆಂಕಟೇಶ್ ಅವರನ್ನು ಉಳಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು. ಭ್ರಷ್ಟಾಚಾರದಲ್ಲಿ ಮುಳುಗಿರುವ ಅಧಿಕಾರಿಗಳು, ಜನಪ್ರತಿನಿಧಿಗಳು ಕೊನೇ ಪಕ್ಷ ಹೋರಾಟಗಾರರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಲಿ. ಜಿಲ್ಲೆಯ ಜನರ ಹಿತಕ್ಕಾಗಿ ಯಾವುದೇ ವ್ಯಕ್ತಿ ಚಳವಳಿ ಕೈಗೊಂಡರೇ ಅವರ ಮನವಿ ಆಲಿಸುವ ಬದ್ಧತೆ ಪ್ರದರ್ಶಿಸಲಿ ಎಂದು ಆಗ್ರಹಿಸಿದರು. ಜಿಲ್ಲಾಧ್ಯಕ್ಷ ಮರ್ಲಹಳ್ಳಿ ರವಿಕುಮಾರ್ ಮಾತನಾಡಿ, ದೇಶಕ್ಕೆ ಅನ್ನ ಕೊಡುವ ರೈತ ಉಪವಾಸ ಕುಳಿತ ತಕ್ಷಣವೇ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಬೇಕಾಗಿತ್ತು. ಆದರೆ, ಅವರು ನಿರ್ಲಕ್ಷö್ಯ ತೋರಿದ್ದರ ಪರಿಣಾಮ ರೈತನಾಯಕ ಕೆ.ಟಿ.ತಿಪ್ಪೇಸ್ವಾಮಿ ಕುಸಿದುಬಿದ್ದು ಆಸ್ಪತ್ರೆ ಸೇರುವಂತಾಗಿದೆ. ಈಗಲಾದರೂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವ ಮಾನವೀಯತೆ ಪ್ರದರ್ಶಿಸಲಿ ಎಂದು ತಿಳಿಸಿದರು. ತಾಲ್ಲೂಕಾಧ್ಯಕ್ಷ ಮಲ್ಲಸಮುದ್ರ ಗಂಗಾಧರ್, ಮುಖಂಡರಾದ ಸೂರಮ್ಮನಹಳ್ಳಿ ರಾಜಣ್ಣ, ಪ್ರಶಾಂತ್‌ರೆಡ್ಡಿ, ಮಿಠ್ಯಾನಾಯ್ಕ, ಓಬನಾಯ್ಕ್, ಚಂದ್ರಶೇಖರ ನಾಯಕ, ಹೀರೇಹಳ್ಳಿ ತಿಪ್ಪೇಸ್ವಾಮಿ, ಎದ್ದಲು ತಿಪ್ಪೇಸ್ವಾಮಿ, ಪಾಪಯ್ಯ, ಬಸವರಾಜ್, ರಾಜಣ್ಣ ಇತರರಿದ್ದರು. .
    1
    ಚಳ್ಳಕೆರೆ, ಮಾ.10 : ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಬಳಿ ಉಪವಾಸ ಕೈಗೊಂಡಿದ್ದ ರೈತನಾಯಕ ತಿಪ್ಪೇಸ್ವಾಮಿ ತೀವ್ರ ಅಸ್ವಸ್ಥರಾಗಲು ಜಿಲ್ಲಾಧಿಕಾರಿ ಅವರೇ ನೇರ ಹೊಣೆ ಎಂದು ಆರೋಪಿಸಿ ರೈತಸಂಘದ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು.
ತಾಲ್ಲೂಕಿನ ಗರಣಿ ಕ್ರಾಸ್ ಬಳಿ ಮಂಗಳವಾರ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆ ನಡೆಸಿದ ರೈತರು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಕಚೇರಿ ಕೂದಲೆಳೆ ಅಂತರದಲ್ಲಿಯೇ ರೈತಸಂಘದ ಕಾರ್ಯಕರ್ತರು ಮಾ.2ರಂದು ಉಪವಾಸ ಆರಂಭಿಸಿ ಐದು ದಿನಗಳ ಕಾಲ ಮುಂದುವರಿಸಿದ್ದರೂ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ, ಮನವೊಲಿಸುವ ಸಣ್ಣ ಪ್ರಯತ್ನವನ್ನೇ ಮಾಡಲಿಲ್ಲ ಎಂದು ದೂರಿದರು.
ಪ್ರತಿದಿನ ವಿವಿಧ ಸಂಘಟನೆಗಳು ಆಗಮಿಸಿ ಬೆಂಬಲ ವ್ಯಕ್ತಪಡಿಸಿ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಬೇಕೆಂದು ಆಗ್ರಹಿಸಿದರು ಸರ್ವಾಧಿಕಾರಿ ರೀತಿ ವರ್ತಿಸಿದ್ದಾರೆ. ಪರಿಣಾಮ ರೈತನಾಯಕ ಉಪವಾಸ ಸತ್ಯಾಗ್ರಹದಿಂದ ಕುಸಿದುಬಿದ್ದು ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತçಚಿಕಿತ್ಸೆಗೆ 15 ಲಕ್ಷ ರೂ. ವೆಚ್ಚವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ತಿಪ್ಪೇಸ್ವಾಮಿ ಅವರ ಆರೋಗ್ಯ ವಿಚಾರಿಸುವ ಮಾನವೀಯತೆಯನ್ನು ಜಿಲ್ಲಾಡಳಿತ, ಜನಪ್ರತಿನಿಧಿಗಳು ಮಾಡಿಲ್ಲದಿರುವುದು ಹೋರಾಟಗಾರರಿಗೆ ಅಪಮಾನ ಮಾಡುವ ನಡೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತಂಘದ ರಾಜ್ಯ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ಸಾರ್ವಜನಿಕರ ಸಂಕಷ್ಟ, ಹೋರಾಟಗಾರರ ಕೂಗಿಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ. ಆದರೆ, ಐದು ದಿನಗಳಿಂದ ಉಪವಾಸ ನಿರತರಾಗಿದ್ದ ತಿಪ್ಪೇಸ್ವಾಮಿ ಅವರನ್ನು ಅತ್ಯಂತ ಅಪಮಾನಕರವಾಗಿ ಜಿಲ್ಲಾಧಿಕಾರಿ ನಡೆಸಿಕೊಂಡಿದ್ದಾರೆ. ಧರಣಿ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸದ ಪರಿಣಾಮ ಉಪವಾಸ ಮುಂದುವರಿಸಿದ್ದೇ ಅನಾರೋಗ್ಯಕ್ಕೆ ಒಳಗಾಗಲು ಮುಖ್ಯ ಕಾರಣ ಎಂದರು.
ರೈತನಾಯಕ ಅನಾರೋಗ್ಯಕ್ಕೆ ಒಳಗಾಗಲಿ ಎಂಬ ಉದ್ದೇಶದಿಂದಲೇ ಅವರು ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿಲ್ಲವೆಂಬ ಸಂಶಯ ಮೂಡುತ್ತದೆ. ಇದೊಂದು ಸರ್ಕಾರಿ ವ್ಯವಸ್ಥೆ ಪರೋಕ್ಷವಾಗಿ ಕೊಲೆ ಯತ್ನ ನಡೆಸಿದೆ ಎಂದು ದೂರಿದರು.
ಆಸ್ಪತ್ರೆಗೆ ಸೇರಿ ಐದು ದಿನಗಳಾಗಿದ್ದರೂ ಇಲ್ಲಿಯವರೆಗೂ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸ ಅಧಿಕಾರಿಗಳು ಮಾಡಿಲ್ಲ. ಅಧಿಕಾರಿಗಳ ನಡೆ ಉದ್ಧಟನದಿಂದ ಕೂಡಿದೆ. ಇಂತಹ ಡಿಸಿಯನ್ನು ಯಾವುದೇ ಕಾರಣಕ್ಕೂ ಚಿತ್ರದುರ್ಗದಲ್ಲಿ ಇರಲು ಬಿಡಬಾರದು ಎಂದರು.
ಟಿ.ವೆAಕಟೇಶ್ ಜಿಲ್ಲೆಗೆ ಆಗಮಿಸಿ ಎರಡೂವರೆ ವರ್ಷ ಆಗಿದ್ದರೂ ಇಲ್ಲಿಯವರೆಗೂ ಯಾವ ಕಾರಣಕ್ಕೆ ಅವರನ್ನೇ ಮುಂದುವರಿಸಲಾಗುತ್ತಿದೆ ಎಂದು ಪ್ರಶ್ನೀಸಿದ ಬಸವರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಎಟಿಎಂ ರೀತಿ ಬೆಂಬಲವಾಗಿ ನಿಂತಿದ್ದಾರೆ. ಈ ಕಾರಣಕ್ಕೆ ವೆಂಕಟೇಶ್ ಅವರನ್ನು ಉಳಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಭ್ರಷ್ಟಾಚಾರದಲ್ಲಿ ಮುಳುಗಿರುವ ಅಧಿಕಾರಿಗಳು, ಜನಪ್ರತಿನಿಧಿಗಳು ಕೊನೇ ಪಕ್ಷ ಹೋರಾಟಗಾರರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಲಿ. ಜಿಲ್ಲೆಯ ಜನರ ಹಿತಕ್ಕಾಗಿ ಯಾವುದೇ ವ್ಯಕ್ತಿ ಚಳವಳಿ ಕೈಗೊಂಡರೇ ಅವರ ಮನವಿ ಆಲಿಸುವ ಬದ್ಧತೆ ಪ್ರದರ್ಶಿಸಲಿ ಎಂದು ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಮರ್ಲಹಳ್ಳಿ ರವಿಕುಮಾರ್ ಮಾತನಾಡಿ, ದೇಶಕ್ಕೆ ಅನ್ನ ಕೊಡುವ ರೈತ ಉಪವಾಸ ಕುಳಿತ ತಕ್ಷಣವೇ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಬೇಕಾಗಿತ್ತು. ಆದರೆ, ಅವರು ನಿರ್ಲಕ್ಷö್ಯ ತೋರಿದ್ದರ ಪರಿಣಾಮ ರೈತನಾಯಕ ಕೆ.ಟಿ.ತಿಪ್ಪೇಸ್ವಾಮಿ ಕುಸಿದುಬಿದ್ದು ಆಸ್ಪತ್ರೆ ಸೇರುವಂತಾಗಿದೆ. ಈಗಲಾದರೂ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವ ಮಾನವೀಯತೆ ಪ್ರದರ್ಶಿಸಲಿ ಎಂದು ತಿಳಿಸಿದರು.
ತಾಲ್ಲೂಕಾಧ್ಯಕ್ಷ ಮಲ್ಲಸಮುದ್ರ ಗಂಗಾಧರ್, ಮುಖಂಡರಾದ ಸೂರಮ್ಮನಹಳ್ಳಿ ರಾಜಣ್ಣ, ಪ್ರಶಾಂತ್‌ರೆಡ್ಡಿ, ಮಿಠ್ಯಾನಾಯ್ಕ, ಓಬನಾಯ್ಕ್, ಚಂದ್ರಶೇಖರ ನಾಯಕ, ಹೀರೇಹಳ್ಳಿ ತಿಪ್ಪೇಸ್ವಾಮಿ, ಎದ್ದಲು ತಿಪ್ಪೇಸ್ವಾಮಿ, ಪಾಪಯ್ಯ, ಬಸವರಾಜ್, ರಾಜಣ್ಣ ಇತರರಿದ್ದರು.
.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.