ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಜಮೀನು ವಿಚಾರವಾಗಿ ಭೀಕರ ಮಾರಾಮಾರಿ ನಡೆದಿದ್ದು, ಕಬ್ಬು ಕಟಾವು ಮಾಡುವ ವಿಷಯದಲ್ಲಿ ಉಂಟಾದ ಗಲಾಟೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ನಿಡಗುಂದಿ ನಿವಾಸಿ ಮಿಥುನ ಯಮನಪ್ಪ ಭಜಂತ್ರಿ ಎಂಬುವವರು ಅಣ್ಣಾಸಾಬ ಖೇಮಲಾಪುರ್ ಅವರ 6 ಎಕರೆ ಜಮೀನಿನ ಪೈಕಿ 2 ಎಕರೆ ಜಮೀನಿನಲ್ಲಿ ಕಳೆದ 5 ವರ್ಷಗಳಿಂದ ಪಾಲುದಾರಿಕೆ ಆಧಾರದ ಮೇಲೆ ಕಬ್ಬು ಬೆಳೆದು ಕಟಾವು ಮಾಡುತ್ತಿದ್ದರು. ಈ ವೇಳೆ ಅವರು ಹಾಗೂ ಅವರ ಚಿಕ್ಕಪ್ಪನ ಮಗ ಯಮನಪ್ಪ ಭಜಂತ್ರಿ ಸೇರಿ ಬೆಳೆದಿದ್ದ ಕಬ್ಬನ್ನು ಸುಮಾರು 12ಕ್ಕೂ ಹೆಚ್ಚು ಮಂದಿ ಯಾವುದೇ ಅನುಮತಿಯಿಲ್ಲದೆ ಏಕಾಏಕಿ ಬಂದು ಕಟಾವು ಮಾಡಲು ಆರಂಭಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಇದನ್ನು ಪ್ರಶ್ನಿಸಲು ಹೋದಾಗ ಸುಕುಮಾರ ದೇವಪ್ಪ ಖೆಮಲಾಪೂರೆ ಎಂಬಾತ ತಲೆಗೆ ಹೊಡೆಯಲು ಯತ್ನಿಸಿದ್ದು, ತಪ್ಪಿಸಿಕೊಳ್ಳುವಾಗ ಮಿಥುನ ಅವರ ಕೈಗೆ ಗಾಯವಾಗಿದೆ. ಆ ಬಳಿಕ ಬಾಹುಬಲಿ ಮನೋಹರ ಖೆಮಲಾಪೂರೆ ಎಂಬಾತ ಕಬ್ಬಿನ ಮಡ್ಡಿನಿಂದ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗಲಾಟೆಯನ್ನು ಬಿಡಿಸಲು ಬಂದ ಇತರರ ಮೇಲೂ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿದ್ದು, ಗಾಯಗೊಂಡ ಮಿಥುನ ಯಮನಪ್ಪ ಭಜಂತ್ರಿ ಹಾಗೂ ಪ್ರವೀಣಕುಮಾರ ಅಣ್ಣಾಸಾಬ ಖೆಮಲಾಪೂರೆ ಅವರನ್ನು ರಾಯಬಾಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತರು ಒತ್ತಾಯಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಜಮೀನು ವಿಚಾರವಾಗಿ ಭೀಕರ ಮಾರಾಮಾರಿ ನಡೆದಿದ್ದು, ಕಬ್ಬು ಕಟಾವು ಮಾಡುವ ವಿಷಯದಲ್ಲಿ ಉಂಟಾದ ಗಲಾಟೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ನಿಡಗುಂದಿ ನಿವಾಸಿ ಮಿಥುನ ಯಮನಪ್ಪ ಭಜಂತ್ರಿ ಎಂಬುವವರು ಅಣ್ಣಾಸಾಬ ಖೇಮಲಾಪುರ್ ಅವರ 6 ಎಕರೆ ಜಮೀನಿನ ಪೈಕಿ 2 ಎಕರೆ ಜಮೀನಿನಲ್ಲಿ ಕಳೆದ 5 ವರ್ಷಗಳಿಂದ ಪಾಲುದಾರಿಕೆ ಆಧಾರದ ಮೇಲೆ ಕಬ್ಬು ಬೆಳೆದು ಕಟಾವು ಮಾಡುತ್ತಿದ್ದರು. ಈ ವೇಳೆ ಅವರು ಹಾಗೂ ಅವರ ಚಿಕ್ಕಪ್ಪನ ಮಗ ಯಮನಪ್ಪ ಭಜಂತ್ರಿ ಸೇರಿ ಬೆಳೆದಿದ್ದ ಕಬ್ಬನ್ನು ಸುಮಾರು 12ಕ್ಕೂ ಹೆಚ್ಚು ಮಂದಿ ಯಾವುದೇ ಅನುಮತಿಯಿಲ್ಲದೆ ಏಕಾಏಕಿ ಬಂದು ಕಟಾವು ಮಾಡಲು ಆರಂಭಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಇದನ್ನು ಪ್ರಶ್ನಿಸಲು ಹೋದಾಗ ಸುಕುಮಾರ ದೇವಪ್ಪ ಖೆಮಲಾಪೂರೆ ಎಂಬಾತ ತಲೆಗೆ ಹೊಡೆಯಲು ಯತ್ನಿಸಿದ್ದು, ತಪ್ಪಿಸಿಕೊಳ್ಳುವಾಗ ಮಿಥುನ ಅವರ ಕೈಗೆ ಗಾಯವಾಗಿದೆ. ಆ ಬಳಿಕ ಬಾಹುಬಲಿ ಮನೋಹರ ಖೆಮಲಾಪೂರೆ ಎಂಬಾತ ಕಬ್ಬಿನ ಮಡ್ಡಿನಿಂದ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗಲಾಟೆಯನ್ನು ಬಿಡಿಸಲು ಬಂದ ಇತರರ ಮೇಲೂ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿದ್ದು, ಗಾಯಗೊಂಡ ಮಿಥುನ ಯಮನಪ್ಪ ಭಜಂತ್ರಿ ಹಾಗೂ ಪ್ರವೀಣಕುಮಾರ ಅಣ್ಣಾಸಾಬ ಖೆಮಲಾಪೂರೆ ಅವರನ್ನು ರಾಯಬಾಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತರು ಒತ್ತಾಯಿಸಿದ್ದಾರೆ.
- ಪಂಚಕರ್ಮ ಚಿಕಿತ್ಸೆಯು ಆರೋಗ್ಯಕ್ಕೆ ಹೇಗೆ ಒಳ್ಳೆಯದು ಎಂಬುದನ್ನು ಅಂಬಿಕಾ ಸ್ವಾಮೀಜಿ ಅವರು ಡಾ. ಜೆ. ಬಿ. ಮಾನೆ ಅವರೊಂದಿಗೆ ವಿವರವಾಗಿ ಹಂಚಿಕೊಂಡಿದ್ದಾರೆ.2
- ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರಮೇಶ ಕಾಂಬಳೆ ಅವರ ಅಧ್ಯಕ್ಷತೆಯಲ್ಲಿ ನೂತನ ಕಾರ್ಯಕ್ರಮ ವೇದಿಕೆ ನಿರ್ಮಾಣದ ಗುದ್ದಲಿ ಪೂಜೆ, ಶಿಕ್ಷಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥ ಪ್ರವೀಣ ನಾಯಿಕ ಅವರು ನೂತನ ವೇದಿಕೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಗಣ್ಯರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರವೀಣ ನಾಯಿಕ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸರ್ವೋತ್ತಮ ಬೆಳವಣಿಗೆಯಲ್ಲಿ ಸರ್ಕಾರಿ ಶಾಲೆಗಳ ಪಾತ್ರ ಪ್ರಮುಖವಾಗಿದೆ ಎಂದರು. ಮಕ್ಕಳ ಸಾಂಸ್ಕೃತಿಕ ಹಾಗೂ ಭೌತಿಕ ವಿಕಸನಕ್ಕೆ ಉತ್ತಮ ವೇದಿಕೆಯ ಅಗತ್ಯವಿದ್ದು, ಗ್ರಾಮ ಪಂಚಾಯತ್ ಅಡಿಯಲ್ಲಿ ಈ ವೇದಿಕೆ ನಿರ್ಮಾಣವಾಗುತ್ತಿರುವುದು ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ಉತ್ತಮ ಅವಕಾಶ ಕಲ್ಪಿಸಲಿದೆ ಎಂದು ತಿಳಿಸಿದರು. ಅಲ್ಲದೆ, ಬಡ ಮಕ್ಕಳ ಹಿತದೃಷ್ಟಿಯಿಂದ ಇಲ್ಲಿಗೆ ಸರ್ಕಾರಿ ಪ್ರೌಢಶಾಲೆಯ ಅವಶ್ಯಕತೆ ಇರುವುದರಿಂದ ಶಾಸಕರು ಹಾಗೂ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಮಕ್ಕಳನ್ನು ಸನ್ಮಾರ್ಗದಲ್ಲಿ ನಡೆಸುವ ಶಿಕ್ಷಕರ ಸೇವೆ ಅನನ್ಯವಾಗಿದ್ದು, ಶಾಲೆಯ ಶಿಸ್ತು ಮತ್ತು ಗುಣಮಟ್ಟ ಕಾಪಾಡಿಕೊಂಡಿರುವ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಯನ್ನು ಸನ್ಮಾನಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್ ಎ ಚೌಗಲಾ ಅವರು, ಎಸ್‌ಡಿಎಂಸಿ ಆಡಳಿತ ಮಂಡಳಿ, ವಿದ್ಯಾರ್ಥಿಗಳ ಪಾಲಕರು ಹಾಗೂ ಗ್ರಾಮಸ್ಥರ ಸಹಾಯ ಮತ್ತು ಸಹಕಾರದೊಂದಿಗೆ ಶಾಲೆ ಹಾಗೂ ಮಕ್ಕಳ ಅಭಿವೃದ್ಧಿ ಮಾಡುವುದೇ ನಮ್ಮ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು. ಇದೇ ವೇಳೆ ಶಾಲೆಯ ಶೈಕ್ಷಣಿಕ ಪ್ರಗತಿ ಮತ್ತು ಮೂಲಸೌಕರ್ಯಗಳ ಕುರಿತು ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷೆ ರೇಖಾ ಮಡಿವಾಳ, ಸದಸ್ಯರಾದ ಮಲ್ಲೇಶ ಖಟಾವಿ, ನಾಗರಾಜ ಹಡಪದ, ಸಂಗೀತ ಮಗದುಮ್ಮ, ರುಕ್ಷಾನ ಅಲಾಸ, ಅಶ್ವಿನಿ ಗಾರಿಮನಿ, ಶಾಂತ ಕಾಂಬಳೆ, ಸುನಿತಾ ನಾಯಕ, ಸುಮಿತ್ರ ಬೀಸೆ, ಸುವರ್ಣಾ ನಿರ್ಲೇಕರ ಹಾಗೂ ಶಿಕ್ಷಕರಾದ ಎಸ್ ಎನ್ ಮಾಕನವರ, ಕೆ ಎಸ್ ನಾಯ್ಕೋಡಿ, ಪಿ ಎಸ್ ಪಕೀರೆ, ವಿ ಬಿ ಪಾಟೀಲ, ಆರ್ ಬಿ ನಿಲಜಗಿ, ಎ ಎಸ್ ಚೌಗಲಾ, ವಿ ಎಂ ಪೂಜಾರಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.4
- Post by ANUSHKA FOOTWEAR Nagarmunnoli1
- ಧಾರವಾಡ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಹಾಗೂ ಶಾಸಕ ಸಿ.ಸಿ ಪಾಟೀಲ ಅವರು, ಜಿ.ಬಿ.ಎ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರವು ಕುಂಟು ನೆಪ ಹೇಳುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಚುನಾವಣೆ ನಡೆಸಲು ಚುನಾವಣಾ ಆಯೋಗವು ಸಿದ್ಧತೆ ಮಾಡಿಕೊಂಡಿದ್ದರೂ ಸಹ, ಸರ್ಕಾರವು ಚುನಾವಣೆಯನ್ನು ಮುಂದೂಡುವ ಉದ್ದೇಶದಿಂದ ಎಸ್.ಐ.ಆರ್ ಎಂಬ ಕುಂಟು ನೆಪವನ್ನು ಹೇಳಿ ಅರ್ಜಿ ಸಲ್ಲಿಸಿದೆ ಎಂದು ಅವರು ದೂರಿದ್ದಾರೆ. ಪ್ರತಿಯೊಂದಕ್ಕೂ ಎಸ್.ಐ.ಆರ್ ಎನ್ನುವುದು ಸೂಕ್ತವಲ್ಲ ಮತ್ತು ಬಹುತೇಕ ಕಾಂಗ್ರೆಸ್ ಮುಖಂಡರಿಗೆ ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವೇ ಇಲ್ಲ ಎಂದು ಅವರು ಟೀಕಿಸಿದ್ದಾರೆ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಜಿ.ಬಿ.ಎ ಚುನಾವಣೆ ನಡೆದಿಲ್ಲ ಎಂದಾಕ್ಷಣ ಈ ಸರ್ಕಾರವೂ ಅದನ್ನು ನಡೆಸಬಾರದೇ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದಿದ್ದು, ಇನ್ನು ಆರು ತಿಂಗಳು ಇರುವಾಗಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಹೇಳಿದರು. ನಮಗೆ ಇರುವುದೇ ನಾಲ್ಕೂವರೆ ವರ್ಷಗಳ ಅಧಿಕಾರ ಅವಧಿಯಾಗಿದ್ದು, ಈ ಅವಧಿಯಲ್ಲೇ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.1
- ಬೆಳಗಾವಿ ಸಚಿವ ಸತೀಶ್ ಜಾರಹೋಳಿ ಅವರು ಸುದ್ದಿ ಗೋಷ್ಠಿ ನಡೆಸಿದ್ದಾರೆ.1
- ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸುಣಧೋಳ ಗ್ರಾಮದಲ್ಲಿರುವ ಸರ್ಕಾರಿ ಪಶು ಆಸ್ಪತ್ರೆ ಮುಂಭಾಗದಲ್ಲಿ ಸಾರ್ವಜನಿಕರು ಬಹಿರಂಗ ಶೌಚ ಮಾಡುತ್ತಿದ್ದು, ಇದರಿಂದ ಆಸ್ಪತ್ರೆಯ ಸಿಬ್ಬಂದಿ, ಪಶು ವೈದ್ಯಾಧಿಕಾರಿಗಳು ಹಾಗೂ ಜಾನುವಾರುಗಳನ್ನು ಕರೆತರುವ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಯ ಮುಂಭಾಗವು ತೀವ್ರ ದುರ್ವಾಸನೆಯಿಂದ ಕೂಡಿದ್ದು, ಚಿಕಿತ್ಸೆಗಾಗಿ ಬರುವ ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಒಳಗೆ ಪ್ರವೇಶಿಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರಿಗೆ ಹಲವು ಬಾರಿ ಮನವಿ ಮಾಡಿದರೂ ಇದುವರೆಗೆ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪಶು ವೈದ್ಯಾಧಿಕಾರಿಗಳ ಪ್ರಕಾರ, ಆಸ್ಪತ್ರೆಯ ಸುತ್ತ ಕಾಂಪೌಂಡ್ ಗೋಡೆ ನಿರ್ಮಿಸಿ, ಮುಂಭಾಗದಲ್ಲಿ ಗೇಟ್ ಅಳವಡಿಸಿದರೆ ಮಾತ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದಾಗಿದೆ. ಪ್ರಸ್ತುತ ನೈರ್ಮಲ್ಯದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಆರೋಗ್ಯಕ್ಕೂ ಹಾನಿಯಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ. ಆದ್ದರಿಂದ, ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ, ಆಸ್ಪತ್ರೆಯ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಲು ಮತ್ತು ಸ್ವಚ್ಛತೆಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಿಬ್ಬಂದಿ ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.1
- ರಾಜ್ಯದ ಧಾರವಾಡ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು, ಕಾಂಗ್ರೆಸ್ ಪಕ್ಷದವರು ಮೂಲತಃ ಆರ್‌ಎಸ್‌ಎಸ್ ವಿರೋಧಿಗಳಾಗಿದ್ದು, ಅವರಿಂದ ಒಳ್ಳೆಯದನ್ನು ಅಪೇಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಆರ್‌ಎಸ್‌ಎಸ್ ನಿನ್ನೆ ಇತ್ತು, ಇಂದು ಇದೆ ಮತ್ತು ನಾಳೆಯೂ ಇರುತ್ತದೆ ಎಂದು ಹೇಳಿದ ಅವರು, ಇಂತಹ ವಿರೋಧಿಗಳನ್ನು ಎದುರಿಸಿಯೇ ಸಂಘಟನೆಯು ಗಟ್ಟಿಯಾಗಿ ಬೆಳೆದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ, ಹಿಂದೆ ಇಂದಿರಾ ಗಾಂಧಿ ಅವರಿಗೇ ಆರ್‌ಎಸ್‌ಎಸ್ ಅನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.1
- ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಜಮೀನು ವಿಚಾರವಾಗಿ ಭೀಕರ ಮಾರಾಮಾರಿ ನಡೆದಿದ್ದು, ಕಬ್ಬು ಕಟಾವು ಮಾಡುವ ವಿಷಯದಲ್ಲಿ ಉಂಟಾದ ಗಲಾಟೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ನಿಡಗುಂದಿ ನಿವಾಸಿ ಮಿಥುನ ಯಮನಪ್ಪ ಭಜಂತ್ರಿ ಎಂಬುವವರು ಅಣ್ಣಾಸಾಬ ಖೇಮಲಾಪುರ್ ಅವರ 6 ಎಕರೆ ಜಮೀನಿನ ಪೈಕಿ 2 ಎಕರೆ ಜಮೀನಿನಲ್ಲಿ ಕಳೆದ 5 ವರ್ಷಗಳಿಂದ ಪಾಲುದಾರಿಕೆ ಆಧಾರದ ಮೇಲೆ ಕಬ್ಬು ಬೆಳೆದು ಕಟಾವು ಮಾಡುತ್ತಿದ್ದರು. ಈ ವೇಳೆ ಅವರು ಹಾಗೂ ಅವರ ಚಿಕ್ಕಪ್ಪನ ಮಗ ಯಮನಪ್ಪ ಭಜಂತ್ರಿ ಸೇರಿ ಬೆಳೆದಿದ್ದ ಕಬ್ಬನ್ನು ಸುಮಾರು 12ಕ್ಕೂ ಹೆಚ್ಚು ಮಂದಿ ಯಾವುದೇ ಅನುಮತಿಯಿಲ್ಲದೆ ಏಕಾಏಕಿ ಬಂದು ಕಟಾವು ಮಾಡಲು ಆರಂಭಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಇದನ್ನು ಪ್ರಶ್ನಿಸಲು ಹೋದಾಗ ಸುಕುಮಾರ ದೇವಪ್ಪ ಖೆಮಲಾಪೂರೆ ಎಂಬಾತ ತಲೆಗೆ ಹೊಡೆಯಲು ಯತ್ನಿಸಿದ್ದು, ತಪ್ಪಿಸಿಕೊಳ್ಳುವಾಗ ಮಿಥುನ ಅವರ ಕೈಗೆ ಗಾಯವಾಗಿದೆ. ಆ ಬಳಿಕ ಬಾಹುಬಲಿ ಮನೋಹರ ಖೆಮಲಾಪೂರೆ ಎಂಬಾತ ಕಬ್ಬಿನ ಮಡ್ಡಿನಿಂದ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗಲಾಟೆಯನ್ನು ಬಿಡಿಸಲು ಬಂದ ಇತರರ ಮೇಲೂ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿದ್ದು, ಗಾಯಗೊಂಡ ಮಿಥುನ ಯಮನಪ್ಪ ಭಜಂತ್ರಿ ಹಾಗೂ ಪ್ರವೀಣಕುಮಾರ ಅಣ್ಣಾಸಾಬ ಖೆಮಲಾಪೂರೆ ಅವರನ್ನು ರಾಯಬಾಗ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತರು ಒತ್ತಾಯಿಸಿದ್ದಾರೆ.1