Shuru
Apke Nagar Ki App…
ರಾಯಚೂರು ಬಂದ್ ಬಹುತೇಕ ಯಶಸ್ವಿ: ತೀನ್ ಕಂದಿಲ್ ಬಳಿ ಟೈಯರ್ ದಹನ ಹೋರಾಟಗಾರರಿಂದ ಆಕ್ರೋಶ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ನೀಡಿದ್ದ ರಾಯಚೂರು ಬಂದ್ ಕರೆ ಬಹುತೇಕ ಯಶಸ್ವಿಯಾಗಿದೆ. ನಗರದ ತೀನ್ ಕಂದಿಲ್ ಬಳಿ ಹೋರಾಟಗಾರರು ಬುಧವಾರ 12 ಗಂಟೆಗೆ ಟಯರ್‌ಗೆ ಬೆಂಕಿ ಹಚ್ಚಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಒಳ ಮೀಸಲಾತಿ ಐಕ್ಯ ಹೋರಾಟ ಸಮಿತಿ ಜಿಲ್ಲಾ ಘಟಕ ಬಂದ್‌ಗೆ ಕರೆ ನೀಡಿತ್ತು. ನಗರದಾದ್ಯಂತ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು ರಸ್ತೆಗಳು ಬಹುತೇಕ ಖಾಲಿಯಾಗಿದ್ದವು. ಕೆಲ ಖಾಸಗಿ ಶಾಲೆಗಳು ರಜೆ ಘೋಷಿಸಿವೆ. ರಾಯಚೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲೂ ಪ್ರತಿಭಟನೆ ನಡೆಯುತ್ತಿದೆ.
K2 kannada News

More news from ಕರ್ನಾಟಕ and nearby areas
- ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಇಂದು ರಾಯಚೂರಿನಲ್ಲಿ ಬಂದ್‌ಗೆ ಕರೆ ನೀಡಲಾಗಿತ್ತು. ಈ ವೇಳೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ 1 ಗಂಟೆಗೆ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಜಹರಾಬಾದ್ ನಿವಾಸಿ ಭರತ್ ಎಂಬ ಯುವಕ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನಕ್ಕೆ ಮುಂದಾದನು. ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಅಲ್ಲಿದ್ದ ಹೋರಾಟಗಾರರು ತಕ್ಷಣವೇ ಅವನನ್ನು ಹಿಡಿದು ತಡೆದರು. ನಂತರ ಗಾಯಗೊಂಡ ಯುವಕನನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.1
- Post by Welding Nizam Welding Nizam5
- ಪವಿತ್ರ ರಂಜಾನ್ ಮಾಸದ ಅಂಗವಾಗಿ Rise of Humanity Trust ವತಿಯಿಂದ ಬಳ್ಳಾರಿ ನಗರದ Kaul Bazaar ಪ್ರದೇಶದ Babu Chowk ನಲ್ಲಿ ಇರುವ ಟ್ರಸ್ಟ್ ಕಚೇರಿಯಲ್ಲಿ ಭರ್ಜರಿ ಇಫ್ತಾರ್ ಕೂಟವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಧರ್ಮಗಳ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಉಪವಾಸ ಮುಗಿಸಿದ ನಂತರ ಪ್ರಾರ್ಥನೆ ಸಲ್ಲಿಸಿದರು. ಟ್ರಸ್ಟ್ ಅಧ್ಯಕ್ಷ N. M. D. Asif ಮಾತನಾಡಿ, ರಂಜಾನ್ ಮಾಸವು ಸಹನೆ, ತ್ಯಾಗ, ದಾನ ಧರ್ಮ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುವ ಪವಿತ್ರ ಸಮಯವಾಗಿದೆ ಎಂದು ಹೇಳಿದರು. ಇಫ್ತಾರ್ ಕೂಟದ ಮೂಲಕ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವವನ್ನು ಬೆಳೆಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.1
- ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಸೇರ್ಪಡಿಸಬೇಕಾಗಿ ವಿನಂತಿ1
- Post by Rahuldev singh1
- Post by Kalyan karanataka news channel1
- ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಮಾರ್ಚ ೧೫ ರವಿವಾರದಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಿನ್ನಲೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ.ರವಿ ಪಾಲ್ಗೊಳ್ಳಲಿದ್ದು. ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಲಿದ್ದು. ಸಾಯಂಕಾಲ ಎಸ್.ಆರ್.ಕಂಠಿ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಇದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಹಿಂದೂ ಸಮಾಜದ ಮುಖಂಡರು ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮನವಿ ಮಾಡಿದ್ದಾರೆ. ವರದಿ ಭೀಮಣ್ಣ ಗಾಣಿಗೇರ ಇಳಕಲ್ಲ1
- ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ನೀಡಿದ್ದ ರಾಯಚೂರು ಬಂದ್ ಕರೆ ಬಹುತೇಕ ಯಶಸ್ವಿಯಾಗಿದೆ. ನಗರದ ತೀನ್ ಕಂದಿಲ್ ಬಳಿ ಹೋರಾಟಗಾರರು ಬುಧವಾರ 12 ಗಂಟೆಗೆ ಟಯರ್‌ಗೆ ಬೆಂಕಿ ಹಚ್ಚಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಒಳ ಮೀಸಲಾತಿ ಐಕ್ಯ ಹೋರಾಟ ಸಮಿತಿ ಜಿಲ್ಲಾ ಘಟಕ ಬಂದ್‌ಗೆ ಕರೆ ನೀಡಿತ್ತು. ನಗರದಾದ್ಯಂತ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು ರಸ್ತೆಗಳು ಬಹುತೇಕ ಖಾಲಿಯಾಗಿದ್ದವು. ಕೆಲ ಖಾಸಗಿ ಶಾಲೆಗಳು ರಜೆ ಘೋಷಿಸಿವೆ. ರಾಯಚೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲೂ ಪ್ರತಿಭಟನೆ ನಡೆಯುತ್ತಿದೆ.1