logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ತಾಲೂಕು ಅಧ್ಯಕ್ಷ ಮಂಜುನಾಥ್ ಮಾ ಕ್ಷವರದ ಅವರ ಅಧ್ಯಕ್ಷತೆಯಲ್ಲಿ ಬಂಕಾಪುರ ವಲಯ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಶಂಕರ ಕ್ಷವರದ ಅವರನ್ನು ಬಂಕಾಪುರ ವಲಯ ಮಟ್ಟದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ರಾಜ್ಯ ಮಾಧ್ಯಮ ಪ್ರತಿನಿಧಿ ಮಲ್ಲಿಕಾರ್ಜುನ ಹಡಪದ ಅವರು ರಾಜ್ಯ ಸಂಘದ ಸದಸ್ಯತ್ವದ ಕುರಿತು ಸಭೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ತಾಲೂಕು ಉಪಾಧ್ಯಕ್ಷರಾದ ಈರಪ್ಪ ಕ್ಷವರದ ಮತ್ತು ವಿರೇಶ್ ಹಡಪದ, ತಾಲೂಕು ಕಮಿಟಿ ನಿರ್ದೇಶಕರಾದ ಬಸವರಾಜ್ ಕ್ಷವರದ, ಬಂಕಾಪುರ ವಲಯ ಮಟ್ಟದ ಗೌರವಾಧ್ಯಕ್ಷರಾದ ಬಸವನ್ನೇಪ್ಪ ಕ್ಷವರದ ಮತ್ತು ಈರಪ್ಪಜ್ಜ ಕ್ಷವರದ್, ಕಾರ್ಯಧ್ಯಕ್ಷರಾದ ಬಸವರಾಜ್ ಹಡಪದ, ವೃತ್ತಿ ಬಾಂಧವರ ಗೌರವಾಧ್ಯಕ್ಷರಾದ ಪರಮೇಶಪ್ಪ ಹಡಪದ್, ಅಧ್ಯಕ್ಷರಾದ ಮಾರುತಿ ಹಡಪದ, ಉಪಾಧ್ಯಕ್ಷರಾದ ಬಸವರಾಜ್ ಹಡಪದ ಹಾಗೂ ಸಮಾಜದ ಮುಖಂಡರಾದ ಜಗದೀಶ್ ಕ್ಷವರದ, ಸುಧೀರ್ ಕ್ಷವರದ, ಶರಣಪ್ಪ ಕ್ಷವರದ, ಸಂಗಪ್ಪ ಹಡಪದ ಅವರು ಸಭೆಯಲ್ಲಿ ಭಾಗವಹಿಸಿದ್ದರು. ತಾಲೂಕು ಅಧ್ಯಕ್ಷ ಮಂಜುನಾಥ್ ಮಾ ಕ್ಷವರದ ಅವರಿಂದ ಬಂಕಾಪುರ ವಲಯ ಮಟ್ಟದಲ್ಲಿ ಹಡಪದ ರಾಜ್ಯ ಸಂಘದ ಸದಸ್ಯತ್ವ ಮತ್ತು ಜನಗಣತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ, ತಾಲೂಕು ಅಧ್ಯಕ್ಷ ಮಂಜುನಾಥ್ ಮಾ ಕ್ಷವರದ ಮತ್ತು ರಾಜ್ಯ ಮಾಧ್ಯಮ ಪ್ರತಿನಿಧಿ ಮಲ್ಲಿಕಾರ್ಜುನ ಹಡಪದ ಅವರಿಗೆ ಸನ್ಮಾನಿಸಲಾಯಿತು. ನೂತನ ವಲಯ ಮಟ್ಟದ ಅಧ್ಯಕ್ಷರಾದ ಶಿವಶಂಕರ ಕ್ಷವರದ ಅವರಿಗೂ ಸಹ ಸನ್ಮಾನಿಸಿ ಶುಭ ಕೋರಲಾಯಿತು.

3 hrs ago
user_H M ಹರಕುಣಿ
H M ಹರಕುಣಿ
Local News Reporter Haveri, Karnataka•
3 hrs ago
aa4f1e45-755f-4a61-984c-9c406aabec33

ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ತಾಲೂಕು ಅಧ್ಯಕ್ಷ ಮಂಜುನಾಥ್ ಮಾ ಕ್ಷವರದ ಅವರ ಅಧ್ಯಕ್ಷತೆಯಲ್ಲಿ ಬಂಕಾಪುರ ವಲಯ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಶಂಕರ ಕ್ಷವರದ ಅವರನ್ನು ಬಂಕಾಪುರ ವಲಯ ಮಟ್ಟದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ರಾಜ್ಯ ಮಾಧ್ಯಮ ಪ್ರತಿನಿಧಿ ಮಲ್ಲಿಕಾರ್ಜುನ ಹಡಪದ ಅವರು ರಾಜ್ಯ ಸಂಘದ ಸದಸ್ಯತ್ವದ ಕುರಿತು ಸಭೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ತಾಲೂಕು ಉಪಾಧ್ಯಕ್ಷರಾದ

e62d0824-61f9-4fab-b4c9-ffaa70767d99

ಈರಪ್ಪ ಕ್ಷವರದ ಮತ್ತು ವಿರೇಶ್ ಹಡಪದ, ತಾಲೂಕು ಕಮಿಟಿ ನಿರ್ದೇಶಕರಾದ ಬಸವರಾಜ್ ಕ್ಷವರದ, ಬಂಕಾಪುರ ವಲಯ ಮಟ್ಟದ ಗೌರವಾಧ್ಯಕ್ಷರಾದ ಬಸವನ್ನೇಪ್ಪ ಕ್ಷವರದ ಮತ್ತು ಈರಪ್ಪಜ್ಜ ಕ್ಷವರದ್, ಕಾರ್ಯಧ್ಯಕ್ಷರಾದ ಬಸವರಾಜ್ ಹಡಪದ, ವೃತ್ತಿ ಬಾಂಧವರ ಗೌರವಾಧ್ಯಕ್ಷರಾದ ಪರಮೇಶಪ್ಪ ಹಡಪದ್, ಅಧ್ಯಕ್ಷರಾದ ಮಾರುತಿ ಹಡಪದ, ಉಪಾಧ್ಯಕ್ಷರಾದ ಬಸವರಾಜ್ ಹಡಪದ ಹಾಗೂ ಸಮಾಜದ ಮುಖಂಡರಾದ ಜಗದೀಶ್ ಕ್ಷವರದ, ಸುಧೀರ್ ಕ್ಷವರದ, ಶರಣಪ್ಪ ಕ್ಷವರದ, ಸಂಗಪ್ಪ ಹಡಪದ ಅವರು

b0282168-1de8-472e-9d15-7d2296d34ace

ಸಭೆಯಲ್ಲಿ ಭಾಗವಹಿಸಿದ್ದರು. ತಾಲೂಕು ಅಧ್ಯಕ್ಷ ಮಂಜುನಾಥ್ ಮಾ ಕ್ಷವರದ ಅವರಿಂದ ಬಂಕಾಪುರ ವಲಯ ಮಟ್ಟದಲ್ಲಿ ಹಡಪದ ರಾಜ್ಯ ಸಂಘದ ಸದಸ್ಯತ್ವ ಮತ್ತು ಜನಗಣತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ, ತಾಲೂಕು ಅಧ್ಯಕ್ಷ ಮಂಜುನಾಥ್ ಮಾ ಕ್ಷವರದ ಮತ್ತು ರಾಜ್ಯ ಮಾಧ್ಯಮ ಪ್ರತಿನಿಧಿ ಮಲ್ಲಿಕಾರ್ಜುನ ಹಡಪದ ಅವರಿಗೆ ಸನ್ಮಾನಿಸಲಾಯಿತು. ನೂತನ ವಲಯ ಮಟ್ಟದ ಅಧ್ಯಕ್ಷರಾದ ಶಿವಶಂಕರ ಕ್ಷವರದ ಅವರಿಗೂ ಸಹ ಸನ್ಮಾನಿಸಿ ಶುಭ ಕೋರಲಾಯಿತು.

More news from Karnataka and nearby areas
  • ಶಾಸಕ ಶ್ರೀ ಶ್ರೀನಿವಾಸ ಮಾನೆ ಅವರು ಅನಾರೋಗ್ಯದಿಂದ ಬಳಲುತ್ತಿರುವ ವಯೋವೃದ್ಧರಿಗೆ ಸಹಾಯ ಹಸ್ತ ಚಾಚಿದ್ದಾರೆ. ಅವರ ಈ ಸಹಾಯ ಕಾರ್ಯದ ಮೂಲಕ ವೃದ್ಧರಿಗೆ ಆಸರೆಯಾಗಿದ್ದಾರೆ.
    1
    ಶಾಸಕ ಶ್ರೀ ಶ್ರೀನಿವಾಸ ಮಾನೆ ಅವರು ಅನಾರೋಗ್ಯದಿಂದ ಬಳಲುತ್ತಿರುವ ವಯೋವೃದ್ಧರಿಗೆ ಸಹಾಯ ಹಸ್ತ ಚಾಚಿದ್ದಾರೆ. ಅವರ ಈ ಸಹಾಯ ಕಾರ್ಯದ ಮೂಲಕ ವೃದ್ಧರಿಗೆ ಆಸರೆಯಾಗಿದ್ದಾರೆ.
    user_H M ಹರಕುಣಿ
    H M ಹರಕುಣಿ
    Local News Reporter Haveri, Karnataka•
    1 hr ago
  • ಶಿಗ್ಗಾವಿ-ಸವಣೂರ ವಿಧಾನಸಭಾ ಕ್ಷೇತ್ರದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರು ಹಾವೇರಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಆರು ಕಾಂಗ್ರೆಸ್ ಶಾಸಕರಿದ್ದು, ಬಿಜೆಪಿಯ ಬಸವರಾಜ್ ಬೊಮ್ಮಾಯಿಯವರು ಪ್ರಸ್ತುತ ಹಾವೇರಿ ಜಿಲ್ಲೆಯ ಸಂಸದರಾಗಿದ್ದಾರೆ ಎಂದು ಪಠಾಣ್ ವಿವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್‌ನಿಂದ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಇದೇ ವೇಳೆ, ಸಚಿವ ಸ್ಥಾನದ ಲಾಬಿಯಲ್ಲಿರುವ ಶಾಸಕರ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟ ರಚನೆಯು ಯಾವುದೇ ತೊಂದರೆಯಿಲ್ಲದೆ ಸುಗಮವಾಗಿ ನಡೆಯಲಿದೆ ಎಂದು ಭರವಸೆ ನೀಡಿದ್ದಾರೆ.
    1
    ಶಿಗ್ಗಾವಿ-ಸವಣೂರ ವಿಧಾನಸಭಾ ಕ್ಷೇತ್ರದ ಶಾಸಕ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರು ಹಾವೇರಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಆರು ಕಾಂಗ್ರೆಸ್ ಶಾಸಕರಿದ್ದು, ಬಿಜೆಪಿಯ ಬಸವರಾಜ್ ಬೊಮ್ಮಾಯಿಯವರು ಪ್ರಸ್ತುತ ಹಾವೇರಿ ಜಿಲ್ಲೆಯ ಸಂಸದರಾಗಿದ್ದಾರೆ ಎಂದು ಪಠಾಣ್ ವಿವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್‌ನಿಂದ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಇದೇ ವೇಳೆ, ಸಚಿವ ಸ್ಥಾನದ ಲಾಬಿಯಲ್ಲಿರುವ ಶಾಸಕರ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟ ರಚನೆಯು ಯಾವುದೇ ತೊಂದರೆಯಿಲ್ಲದೆ ಸುಗಮವಾಗಿ ನಡೆಯಲಿದೆ ಎಂದು ಭರವಸೆ ನೀಡಿದ್ದಾರೆ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 hr ago
  • ರಾಜ್ಯ ಸರ್ಕಾರ ಸಚಿವ ಸಂಪುಟ ಪುನರ್‌ರಚನೆಗೆ ಮುಂದಾದಲ್ಲಿ, ಬಂಜಾರಾ ಸಮಾಜದಿಂದ ಕಾಂಗ್ರೆಸ್‌ನ ಏಕೈಕ ಶಾಸಕರಾಗಿರುವ ಹಾವೇರಿ ಶಾಸಕ ಹಾಗೂ ವಿಧಾನ ಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಸಮಾಜದ ಯುವ ಮುಖಂಡ ಸುಧೀರ ಲಮಾಣಿ ಒತ್ತಾಯಿಸಿದ್ದಾರೆ. ಶಿಗ್ಗಾವಿಯಲ್ಲಿ ಈ ಕುರಿತು ಪ್ರಕಟಣೆ ನೀಡಿರುವ ಸುಧೀರ ಲಮಾಣಿ, ರಾಜ್ಯದ ಪರಿಶಿಷ್ಟ ಜಾತಿಯ ೩೬ ಮೀಸಲು ಮತಕ್ಷೇತ್ರಗಳು ಹಾಗೂ ಪರಿಶಿಷ್ಟ ಪಂಗಡದ ೧೫ ಮೀಸಲು ಮತಕ್ಷೇತ್ರಗಳಲ್ಲಿ ಬಂಜಾರ ಸಮುದಾಯದ ಮತ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ. ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ, ಕಳೆದ ಬಿಜೆಪಿ ಸರ್ಕಾರದ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣ ಮತ್ತು ಶಿಫಾರಸುಗಳನ್ನು ಖಂಡಿಸಿ, "ಬಿಜೆಪಿ ಹಠಾವೋ-ತಾಂಡಾ ಬಚಾವೋ" ಘೋಷಣೆಯೊಂದಿಗೆ ರಾಜ್ಯದ ೪೦ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಸಮುದಾಯ ಪ್ರಮುಖ ಪಾತ್ರ ವಹಿಸಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ರಾಜ್ಯದ ೩೦ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಬಂಜಾರ ಸಮುದಾಯದವರು, ಏಕೈಕ ಶಾಸಕರಾದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆಯಲ್ಲಿದ್ದರು. ಆದರೆ, ಕೆಲವು ರಾಜಕೀಯ ಕಾರಣಗಳಿಂದ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೂರು ಬಾರಿ ಶಾಸಕರಾಗಿರುವ ರುದ್ರಪ್ಪ ಲಮಾಣಿ ಅವರು ೨೦೧೪ರಿಂದ ಸಂತ ಸೇವಾಲಾಲ್ ಗುರೂಜಿ ಜನ್ಮಸ್ಥಳವಾದ ಸೂರಗೊಂಡನಕೊಪ್ಪ ಮಹಾಮಠ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಮಹಾಮಠದ ಅಭಿವೃದ್ಧಿಗಾಗಿ ಸರ್ಕಾರದಿಂದ ₹೫೦ ಕೋಟಿ ಅನುದಾನ ತಂದು, ೧೫ ಎಕರೆ ಜಾಗವನ್ನು ೨೮ ಎಕರೆಗೆ ವಿಸ್ತರಿಸಿ, ಅದನ್ನು ಧಾರ್ಮಿಕ ಹಾಗೂ ಶೈಕ್ಷಣಿಕ ಉದ್ದೇಶಗಳಿಗಾಗಿ ಮೀಸಲಿಟ್ಟಿದ್ದಾರೆ. ಸರ್ಕಾರ ಬಂದು ಈಗಾಗಲೇ ಮೂರು ವರ್ಷಗಳು ಕಳೆದಿವೆ ಎಂದು ಸುಧೀರ ಲಮಾಣಿ ಉಲ್ಲೇಖಿಸಿದ್ದಾರೆ. ಹೈಕಮಾಂಡ್ ನಿರ್ದೇಶನದ ಮೇರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ಹೇಳಿರುವ ಅವರು, ಮುಂದಿನ ಸಂಪುಟ ಪುನರ್‌ರಚನೆ ಸಂದರ್ಭದಲ್ಲಿ ರುದ್ರಪ್ಪ ಲಮಾಣಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ಪುನರುಚ್ಚರಿಸಿದ್ದಾರೆ.
    1
    ರಾಜ್ಯ ಸರ್ಕಾರ ಸಚಿವ ಸಂಪುಟ ಪುನರ್‌ರಚನೆಗೆ ಮುಂದಾದಲ್ಲಿ, ಬಂಜಾರಾ ಸಮಾಜದಿಂದ ಕಾಂಗ್ರೆಸ್‌ನ ಏಕೈಕ ಶಾಸಕರಾಗಿರುವ ಹಾವೇರಿ ಶಾಸಕ ಹಾಗೂ ವಿಧಾನ ಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಸಮಾಜದ ಯುವ ಮುಖಂಡ ಸುಧೀರ ಲಮಾಣಿ ಒತ್ತಾಯಿಸಿದ್ದಾರೆ. ಶಿಗ್ಗಾವಿಯಲ್ಲಿ ಈ ಕುರಿತು ಪ್ರಕಟಣೆ ನೀಡಿರುವ ಸುಧೀರ ಲಮಾಣಿ, ರಾಜ್ಯದ ಪರಿಶಿಷ್ಟ ಜಾತಿಯ ೩೬ ಮೀಸಲು ಮತಕ್ಷೇತ್ರಗಳು ಹಾಗೂ ಪರಿಶಿಷ್ಟ ಪಂಗಡದ ೧೫ ಮೀಸಲು ಮತಕ್ಷೇತ್ರಗಳಲ್ಲಿ ಬಂಜಾರ ಸಮುದಾಯದ ಮತ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ.

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ, ಕಳೆದ ಬಿಜೆಪಿ ಸರ್ಕಾರದ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣ ಮತ್ತು ಶಿಫಾರಸುಗಳನ್ನು ಖಂಡಿಸಿ, "ಬಿಜೆಪಿ ಹಠಾವೋ-ತಾಂಡಾ ಬಚಾವೋ" ಘೋಷಣೆಯೊಂದಿಗೆ ರಾಜ್ಯದ ೪೦ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಸಮುದಾಯ ಪ್ರಮುಖ ಪಾತ್ರ ವಹಿಸಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ರಾಜ್ಯದ ೩೦ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಬಂಜಾರ ಸಮುದಾಯದವರು, ಏಕೈಕ ಶಾಸಕರಾದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆಯಲ್ಲಿದ್ದರು. ಆದರೆ, ಕೆಲವು ರಾಜಕೀಯ ಕಾರಣಗಳಿಂದ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೂರು ಬಾರಿ ಶಾಸಕರಾಗಿರುವ ರುದ್ರಪ್ಪ ಲಮಾಣಿ ಅವರು ೨೦೧೪ರಿಂದ ಸಂತ ಸೇವಾಲಾಲ್ ಗುರೂಜಿ ಜನ್ಮಸ್ಥಳವಾದ ಸೂರಗೊಂಡನಕೊಪ್ಪ ಮಹಾಮಠ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಮಹಾಮಠದ ಅಭಿವೃದ್ಧಿಗಾಗಿ ಸರ್ಕಾರದಿಂದ ₹೫೦ ಕೋಟಿ ಅನುದಾನ ತಂದು, ೧೫ ಎಕರೆ ಜಾಗವನ್ನು ೨೮ ಎಕರೆಗೆ ವಿಸ್ತರಿಸಿ, ಅದನ್ನು ಧಾರ್ಮಿಕ ಹಾಗೂ ಶೈಕ್ಷಣಿಕ ಉದ್ದೇಶಗಳಿಗಾಗಿ ಮೀಸಲಿಟ್ಟಿದ್ದಾರೆ.

ಸರ್ಕಾರ ಬಂದು ಈಗಾಗಲೇ ಮೂರು ವರ್ಷಗಳು ಕಳೆದಿವೆ ಎಂದು ಸುಧೀರ ಲಮಾಣಿ ಉಲ್ಲೇಖಿಸಿದ್ದಾರೆ. ಹೈಕಮಾಂಡ್ ನಿರ್ದೇಶನದ ಮೇರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ಹೇಳಿರುವ ಅವರು, ಮುಂದಿನ ಸಂಪುಟ ಪುನರ್‌ರಚನೆ ಸಂದರ್ಭದಲ್ಲಿ ರುದ್ರಪ್ಪ ಲಮಾಣಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ಪುನರುಚ್ಚರಿಸಿದ್ದಾರೆ.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    16 hrs ago
  • ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಚಟುವಟಿಕೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಶಿವಮೊಗ್ಗದ ಭದ್ರಾವತಿಯಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಭದ್ರಾವತಿಯ ಶಾಸಕ ಸಂಗಮೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಸಹೋದರ ಹಾಗೂ ಭದ್ರಾವತಿ ಪಿಎಲ್‌ಡಿ ಅಧ್ಯಕ್ಷ ಬಿ.ಕೆ. ಶಿವಕುಮಾರ್ ಅವರು ಹೈಕಮಾಂಡ್‌ಗೆ ಬಲವಾಗಿ ಆಗ್ರಹಿಸಿದ್ದಾರೆ. ನಗರದ ಹುತ್ತಾ ಕಾಲೋನಿಯಲ್ಲಿರುವ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬಿ.ಕೆ. ಶಿವಕುಮಾರ್, ಶಾಸಕ ಸಂಗಮೇಶ್ ಅವರು ಭದ್ರಾವತಿಯಿಂದ ನಾಲ್ಕು ಬಾರಿ ಗೆದ್ದಿದ್ದಾರೆ ಎಂದು ತಿಳಿಸಿದರು. ಭದ್ರಾವತಿಯ ಸಮಗ್ರ ಅಭಿವೃದ್ಧಿಗೆ ಸಚಿವ ಸ್ಥಾನವು ಅತ್ಯಂತ ಮುಖ್ಯವಾಗಿದ್ದು, ಜಿಲ್ಲೆಯಲ್ಲಿ ಸಂಗಮೇಶ್ ಹಿರಿಯ ಶಾಸಕರಾಗಿದ್ದಾರೆ ಎಂದು ಅವರು ಪ್ರತಿಪಾದಿಸಿದರು. ನಮ್ಮಂತೆ ಬೇರೆಯವರೂ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರೂ, ನಮ್ಮ ಶಾಸಕರು ಹಿರಿಯರಾಗಿರುವುದರಿಂದ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಪ್ರಸ್ತುತ ಭದ್ರಾವತಿ ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದು, ಸಚಿವ ಸ್ಥಾನ ಸಿಕ್ಕರೆ ನಗರ ಇನ್ನಷ್ಟು ವೇಗವಾಗಿ ಪ್ರಗತಿ ಸಾಧಿಸುತ್ತದೆ ಎಂದು ಬಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ರಾಜ್ಯದ ಏಳು ತಾಲೂಕುಗಳಲ್ಲಿ ಎಲ್ಲ ತಾಲೂಕುಗಳಿಗೆ ಸಚಿವ ಸ್ಥಾನ ದೊರೆತಿದ್ದರೂ, ನಾಲ್ಕು ಬಾರಿ ಶಾಸಕರಾದ ಸಂಗಮೇಶ್ ಅವರಿಗೆ ಭದ್ರಾವತಿಯಿಂದ ಇದುವರೆಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬುದನ್ನು ಅವರು ಗಮನ ಸೆಳೆದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕೆಂದು ಬಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
    1
    ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಚಟುವಟಿಕೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಶಿವಮೊಗ್ಗದ ಭದ್ರಾವತಿಯಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಭದ್ರಾವತಿಯ ಶಾಸಕ ಸಂಗಮೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಸಹೋದರ ಹಾಗೂ ಭದ್ರಾವತಿ ಪಿಎಲ್‌ಡಿ ಅಧ್ಯಕ್ಷ ಬಿ.ಕೆ. ಶಿವಕುಮಾರ್ ಅವರು ಹೈಕಮಾಂಡ್‌ಗೆ ಬಲವಾಗಿ ಆಗ್ರಹಿಸಿದ್ದಾರೆ.

ನಗರದ ಹುತ್ತಾ ಕಾಲೋನಿಯಲ್ಲಿರುವ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬಿ.ಕೆ. ಶಿವಕುಮಾರ್, ಶಾಸಕ ಸಂಗಮೇಶ್ ಅವರು ಭದ್ರಾವತಿಯಿಂದ ನಾಲ್ಕು ಬಾರಿ ಗೆದ್ದಿದ್ದಾರೆ ಎಂದು ತಿಳಿಸಿದರು. ಭದ್ರಾವತಿಯ ಸಮಗ್ರ ಅಭಿವೃದ್ಧಿಗೆ ಸಚಿವ ಸ್ಥಾನವು ಅತ್ಯಂತ ಮುಖ್ಯವಾಗಿದ್ದು, ಜಿಲ್ಲೆಯಲ್ಲಿ ಸಂಗಮೇಶ್ ಹಿರಿಯ ಶಾಸಕರಾಗಿದ್ದಾರೆ ಎಂದು ಅವರು ಪ್ರತಿಪಾದಿಸಿದರು. ನಮ್ಮಂತೆ ಬೇರೆಯವರೂ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರೂ, ನಮ್ಮ ಶಾಸಕರು ಹಿರಿಯರಾಗಿರುವುದರಿಂದ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಸ್ತುತ ಭದ್ರಾವತಿ ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದು, ಸಚಿವ ಸ್ಥಾನ ಸಿಕ್ಕರೆ ನಗರ ಇನ್ನಷ್ಟು ವೇಗವಾಗಿ ಪ್ರಗತಿ ಸಾಧಿಸುತ್ತದೆ ಎಂದು ಬಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ರಾಜ್ಯದ ಏಳು ತಾಲೂಕುಗಳಲ್ಲಿ ಎಲ್ಲ ತಾಲೂಕುಗಳಿಗೆ ಸಚಿವ ಸ್ಥಾನ ದೊರೆತಿದ್ದರೂ, ನಾಲ್ಕು ಬಾರಿ ಶಾಸಕರಾದ ಸಂಗಮೇಶ್ ಅವರಿಗೆ ಭದ್ರಾವತಿಯಿಂದ ಇದುವರೆಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬುದನ್ನು ಅವರು ಗಮನ ಸೆಳೆದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕೆಂದು ಬಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    1 hr ago
  • ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ (ಕೆಪಿಎಸ್) ಮಕ್ಕಳನ್ನು ದಾಖಲಿಸಲು ಪೋಷಕರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿದೆ. ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳತ್ತ ಜನರು ಹೆಚ್ಚು ಒಲವು ತೋರಿಸುತ್ತಿದ್ದರೂ, ಈಗ ಸರ್ಕಾರಿ ಶಾಲೆಗಳತ್ತ ಗಮನ ಹರಿಸುತ್ತಿರುವುದು ಅವುಗಳ ಬೇಡಿಕೆಯನ್ನು ಹೆಚ್ಚಿಸಿದೆ. ಸರ್ಕಾರಿ ಶಾಲೆಯ ಬೇಡಿಕೆಗೆ ಸಾಕ್ಷಿಯಾಗಿ, ಪೋಷಕರು ತಮ್ಮ ಮಕ್ಕಳನ್ನು ದಾಖಲಿಸಿಕೊಳ್ಳಲು ಹಗಲು-ರಾತ್ರಿ ಎನ್ನದೆ ಅರ್ಜಿ ಹಿಡಿದು ಶಾಲೆಯಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. 2009ರಲ್ಲಿ ಮೇಲ್ದರ್ಜೆಗೇರಿದ ಈ ಕೆಪಿಎಸ್ ಶಾಲೆಯಲ್ಲಿ ಕಳೆದ ವರ್ಷ 800ಕ್ಕೂ ಹೆಚ್ಚು ಮಕ್ಕಳು ಅಧ್ಯಯನಕ್ಕೆ ದಾಖಲಾಗಿದ್ದರು. ಈ ವರ್ಷವೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಶಾಲಾ ಶಿಕ್ಷಕರು ತಿಳಿಸಿದ್ದಾರೆ. ಕೆಪಿಎಸ್ ಶಾಲೆಯಲ್ಲಿ ಎಲ್‌ಕೆಜಿಯಿಂದ ಪಿಯುಸಿಯವರೆಗೂ ಒಂದೇ ಸೂರಿನಡಿ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕೆಪಿಎಸ್ ಪಠ್ಯಕ್ರಮದ ಜೊತೆಗೆ, ಎಲ್‌ಕೆಜಿ ಹಾಗೂ ಯುಕೆಜಿಗೆ ಪೂರಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಕೆಪಿಎಸ್ ಪ್ರಭಾರಿ ಶಿಕ್ಷಕ, ಪ್ರಾಥಮಿಕ ವಿಭಾಗದ ಸುರೇಶ ಯಲ್ಲಾರಿ ಮಾಹಿತಿ ನೀಡಿದ್ದಾರೆ.
    1
    ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ (ಕೆಪಿಎಸ್) ಮಕ್ಕಳನ್ನು ದಾಖಲಿಸಲು ಪೋಷಕರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿದೆ. ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳತ್ತ ಜನರು ಹೆಚ್ಚು ಒಲವು ತೋರಿಸುತ್ತಿದ್ದರೂ, ಈಗ ಸರ್ಕಾರಿ ಶಾಲೆಗಳತ್ತ ಗಮನ ಹರಿಸುತ್ತಿರುವುದು ಅವುಗಳ ಬೇಡಿಕೆಯನ್ನು ಹೆಚ್ಚಿಸಿದೆ.

ಸರ್ಕಾರಿ ಶಾಲೆಯ ಬೇಡಿಕೆಗೆ ಸಾಕ್ಷಿಯಾಗಿ, ಪೋಷಕರು ತಮ್ಮ ಮಕ್ಕಳನ್ನು ದಾಖಲಿಸಿಕೊಳ್ಳಲು ಹಗಲು-ರಾತ್ರಿ ಎನ್ನದೆ ಅರ್ಜಿ ಹಿಡಿದು ಶಾಲೆಯಲ್ಲಿಯೇ ವಾಸ್ತವ್ಯ ಹೂಡಿದ್ದಾರೆ. 2009ರಲ್ಲಿ ಮೇಲ್ದರ್ಜೆಗೇರಿದ ಈ ಕೆಪಿಎಸ್ ಶಾಲೆಯಲ್ಲಿ ಕಳೆದ ವರ್ಷ 800ಕ್ಕೂ ಹೆಚ್ಚು ಮಕ್ಕಳು ಅಧ್ಯಯನಕ್ಕೆ ದಾಖಲಾಗಿದ್ದರು. ಈ ವರ್ಷವೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಶಾಲಾ ಶಿಕ್ಷಕರು ತಿಳಿಸಿದ್ದಾರೆ.

ಕೆಪಿಎಸ್ ಶಾಲೆಯಲ್ಲಿ ಎಲ್‌ಕೆಜಿಯಿಂದ ಪಿಯುಸಿಯವರೆಗೂ ಒಂದೇ ಸೂರಿನಡಿ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕೆಪಿಎಸ್ ಪಠ್ಯಕ್ರಮದ ಜೊತೆಗೆ, ಎಲ್‌ಕೆಜಿ ಹಾಗೂ ಯುಕೆಜಿಗೆ ಪೂರಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಕೆಪಿಎಸ್ ಪ್ರಭಾರಿ ಶಿಕ್ಷಕ, ಪ್ರಾಥಮಿಕ ವಿಭಾಗದ ಸುರೇಶ ಯಲ್ಲಾರಿ ಮಾಹಿತಿ ನೀಡಿದ್ದಾರೆ.
    user_Kallappa m mirji
    Kallappa m mirji
    Farmer ಕಳಘಟಗಿ, ಧಾರವಾಡ, ಕರ್ನಾಟಕ•
    13 hrs ago
  • ಧಾರವಾಡದಲ್ಲಿ ತಡಸಿನಕೊಪ್ಪ ಬಳಿ ಇತ್ತೀಚೆಗೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಗಾಯಗೊಂಡ ವಿಠಲ ವಾಲೀಕಾರನ ಆರೋಗ್ಯ ವಿಚಾರಿಸಲು ಎಸ್‌ಡಿಎಂ ಆಸ್ಪತ್ರೆಗೆ ಬಂದಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಥಳಕ್ಕೆ ಆಗಮಿಸದ ಕಾರಣ ತೀವ್ರವಾಗಿ ಗರಂ ಆಗಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಸಚಿವರು ಆಸ್ಪತ್ರೆಗೆ ಬರುವ ಬಗ್ಗೆ ಮಾಹಿತಿ ಇದ್ದರೂ ಆಯುಕ್ತರು ಗೈರುಹಾಜರಾಗಿದ್ದರು. ಈ ಘಟನೆಯಿಂದ ಕೋಪಗೊಂಡ ಜೋಶಿ, ಗುಂಡಿನ ದಾಳಿ ಪ್ರಕರಣದಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಗುಂಡಿನ ದಾಳಿ ನಡೆದು ನಾಲ್ಕು ದಿನಗಳಾದರೂ ಮುಖ್ಯ ಆರೋಪಿಯನ್ನು ಬಂಧಿಸಲು ಸಾಧ್ಯವಾಗದಿರುವುದು ವಿಚಿತ್ರ ಎಂದ ಅವರು, ಅಲ್ಲಿ ಉಪಸ್ಥಿತರಿದ್ದ ಡಿಸಿಪಿ ಶ್ರುತಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು, "ನಿಮ್ಮ ಕಮಿಷನರ್ ಎಲ್ಲಿ? ಇಲ್ಲಿಗೆ ಬರುವುದು ಅವರ ಕೆಲಸ ಅಲ್ಲವೇ?" ಎಂದು ಪ್ರಶ್ನಿಸಿದರು.
    1
    ಧಾರವಾಡದಲ್ಲಿ ತಡಸಿನಕೊಪ್ಪ ಬಳಿ ಇತ್ತೀಚೆಗೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಗಾಯಗೊಂಡ ವಿಠಲ ವಾಲೀಕಾರನ ಆರೋಗ್ಯ ವಿಚಾರಿಸಲು ಎಸ್‌ಡಿಎಂ ಆಸ್ಪತ್ರೆಗೆ ಬಂದಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಥಳಕ್ಕೆ ಆಗಮಿಸದ ಕಾರಣ ತೀವ್ರವಾಗಿ ಗರಂ ಆಗಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಸಚಿವರು ಆಸ್ಪತ್ರೆಗೆ ಬರುವ ಬಗ್ಗೆ ಮಾಹಿತಿ ಇದ್ದರೂ ಆಯುಕ್ತರು ಗೈರುಹಾಜರಾಗಿದ್ದರು.

ಈ ಘಟನೆಯಿಂದ ಕೋಪಗೊಂಡ ಜೋಶಿ, ಗುಂಡಿನ ದಾಳಿ ಪ್ರಕರಣದಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಗುಂಡಿನ ದಾಳಿ ನಡೆದು ನಾಲ್ಕು ದಿನಗಳಾದರೂ ಮುಖ್ಯ ಆರೋಪಿಯನ್ನು ಬಂಧಿಸಲು ಸಾಧ್ಯವಾಗದಿರುವುದು ವಿಚಿತ್ರ ಎಂದ ಅವರು, ಅಲ್ಲಿ ಉಪಸ್ಥಿತರಿದ್ದ ಡಿಸಿಪಿ ಶ್ರುತಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು, "ನಿಮ್ಮ ಕಮಿಷನರ್ ಎಲ್ಲಿ? ಇಲ್ಲಿಗೆ ಬರುವುದು ಅವರ ಕೆಲಸ ಅಲ್ಲವೇ?" ಎಂದು ಪ್ರಶ್ನಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    11 hrs ago
  • ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಸಿಂಹಧಾಮದಲ್ಲಿ ಗರ್ಭಿಣಿಯಾಗಿದ್ದ ಹಂಸಿಣಿ ನೀರಾನೆಗೆ ಚಿಕಿತ್ಸೆ ನೀಡುತ್ತಿದ್ದಾಗ ನೀರಾನೆ ದಾಳಿಗೆ ಒಳಗಾಗಿ ದುರಂತವಾಗಿ ಮೃತಪಟ್ಟಿದ್ದ ಯುವ ಪಶುವೈದ್ಯೆ ಡಾಕ್ಟರ್ ಸಮೀಕ್ಷಾ ರೆಡ್ಡಿ ಅವರ ಸೇವೆ ಮತ್ತು ತ್ಯಾಗವನ್ನು ಸ್ಮರಿಸುವ ಸಲುವಾಗಿ ರಾಜ್ಯ ಅರಣ್ಯ ಇಲಾಖೆ ಅಪರೂಪದ ಗೌರವ ಸಲ್ಲಿಸಲು ಮುಂದಾಗಿದೆ. ಈ ಗೌರವದ ಭಾಗವಾಗಿ, ನವಜಾತ ನೀರಾನೆ ಮರಿಯೊಂದಕ್ಕೆ ಡಾ. ಸಮೀಕ್ಷಾ ರೆಡ್ಡಿ ಅವರ ಹೆಸರನ್ನು ಇಡಲು ನಿರ್ಧರಿಸಲಾಗಿದೆ. ಡಾ. ಸಮೀಕ್ಷಾ ರೆಡ್ಡಿ ಅವರ ನಿಧನದ ಬಳಿಕ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲು ತೆರಳಿದ್ದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು, ವನ್ಯಜೀವಿ ಸೇವೆಯಲ್ಲಿ ತೊಡಗಿದ್ದ ಯುವ ವೈದ್ಯೆಯ ಸ್ಮರಣಾರ್ಥ ಒಂದು ನವಜಾತ ವನ್ಯಜೀವಿಗೆ ಅವರ ಹೆಸರಿಡುವ ಭರವಸೆ ನೀಡಿದ್ದರು. ಇದೀಗ ಸಚಿವರು ತಮ್ಮ ಆ ಭರವಸೆಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿದ್ದಾರೆ. ಬನ್ನೇರುಘಟ್ಟ ಮೃಗಾಲಯದಲ್ಲಿ ಇತ್ತೀಚೆಗೆ ರಾತ್ರಿ ಜನಿಸಿರುವ ನವಜಾತ ನೀರಾನೆ ಮರಿಯ ಆರೋಗ್ಯದ ಬಗ್ಗೆ ವಿಶೇಷ ನಿಗಾ ವಹಿಸುವಂತೆ ಸಚಿವರು ಸೂಚಿಸಿದ್ದು, ಆ ಮರಿ ಹೆಣ್ಣಾಗಿದ್ದಲ್ಲಿ ಅದಕ್ಕೆ ‘ಸಮೀಕ್ಷಾ’ ಎಂದು ಹೆಸರಿಡುವಂತೆ ಆದೇಶಿಸಿದ್ದಾರೆ. ಈ ಮೂಲಕ, ವನ್ಯಜೀವಿಗಳ ಆರೈಕೆ ಮತ್ತು ಸಂರಕ್ಷಣೆಗೆ ತಮ್ಮ ಜೀವನವನ್ನೇ ಅರ್ಪಿಸಿದ್ದ ಡಾ. ಸಮೀಕ್ಷಾ ರೆಡ್ಡಿ ಅವರ ಸೇವೆಯನ್ನು ಚಿರಸ್ಥಾಯಿಯಾಗಿ ಸ್ಮರಿಸುವ ಪ್ರಯತ್ನಕ್ಕೆ ಸರ್ಕಾರ ಮುಂದಾಗಿದೆ. ಯುವ ವಯಸ್ಸಿನಲ್ಲೇ ವನ್ಯಜೀವಿ ಚಿಕಿತ್ಸೆಯಲ್ಲಿ ತೊಡಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪ್ರಾಣ ಕಳೆದುಕೊಂಡ ಡಾ. ಸಮೀಕ್ಷಾ ರೆಡ್ಡಿ ಅವರ ಹೆಸರು ಇದೀಗ ನವಜಾತ ನೀರಾನೆ ಮರಿಯ ಮೂಲಕ ಜೀವಂತವಾಗಿರಲಿದೆ. ಈ ನಿರ್ಧಾರಕ್ಕೆ ಸಾರ್ವಜನಿಕರು ಹಾಗೂ ವನ್ಯಜೀವಿ ಪ್ರೇಮಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಇದು ಕೇವಲ ಒಂದು ಹೆಸರಿಡುವ ಕಾರ್ಯಕ್ರಮವಲ್ಲದೆ, ಕರ್ತವ್ಯನಿಷ್ಠೆಯೊಂದಿಗೆ ಸೇವೆ ಸಲ್ಲಿಸಿದ ವೈದ್ಯೆಗೆ ಸಲ್ಲಿಸಿದ ಹೃದಯಸ್ಪರ್ಶಿ ಗೌರವವಾಗಿದೆ.
    1
    ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಸಿಂಹಧಾಮದಲ್ಲಿ ಗರ್ಭಿಣಿಯಾಗಿದ್ದ ಹಂಸಿಣಿ ನೀರಾನೆಗೆ ಚಿಕಿತ್ಸೆ ನೀಡುತ್ತಿದ್ದಾಗ ನೀರಾನೆ ದಾಳಿಗೆ ಒಳಗಾಗಿ ದುರಂತವಾಗಿ ಮೃತಪಟ್ಟಿದ್ದ ಯುವ ಪಶುವೈದ್ಯೆ ಡಾಕ್ಟರ್ ಸಮೀಕ್ಷಾ ರೆಡ್ಡಿ ಅವರ ಸೇವೆ ಮತ್ತು ತ್ಯಾಗವನ್ನು ಸ್ಮರಿಸುವ ಸಲುವಾಗಿ ರಾಜ್ಯ ಅರಣ್ಯ ಇಲಾಖೆ ಅಪರೂಪದ ಗೌರವ ಸಲ್ಲಿಸಲು ಮುಂದಾಗಿದೆ. ಈ ಗೌರವದ ಭಾಗವಾಗಿ, ನವಜಾತ ನೀರಾನೆ ಮರಿಯೊಂದಕ್ಕೆ ಡಾ. ಸಮೀಕ್ಷಾ ರೆಡ್ಡಿ ಅವರ ಹೆಸರನ್ನು ಇಡಲು ನಿರ್ಧರಿಸಲಾಗಿದೆ.

ಡಾ. ಸಮೀಕ್ಷಾ ರೆಡ್ಡಿ ಅವರ ನಿಧನದ ಬಳಿಕ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲು ತೆರಳಿದ್ದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು, ವನ್ಯಜೀವಿ ಸೇವೆಯಲ್ಲಿ ತೊಡಗಿದ್ದ ಯುವ ವೈದ್ಯೆಯ ಸ್ಮರಣಾರ್ಥ ಒಂದು ನವಜಾತ ವನ್ಯಜೀವಿಗೆ ಅವರ ಹೆಸರಿಡುವ ಭರವಸೆ ನೀಡಿದ್ದರು. ಇದೀಗ ಸಚಿವರು ತಮ್ಮ ಆ ಭರವಸೆಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿದ್ದಾರೆ.

ಬನ್ನೇರುಘಟ್ಟ ಮೃಗಾಲಯದಲ್ಲಿ ಇತ್ತೀಚೆಗೆ ರಾತ್ರಿ ಜನಿಸಿರುವ ನವಜಾತ ನೀರಾನೆ ಮರಿಯ ಆರೋಗ್ಯದ ಬಗ್ಗೆ ವಿಶೇಷ ನಿಗಾ ವಹಿಸುವಂತೆ ಸಚಿವರು ಸೂಚಿಸಿದ್ದು, ಆ ಮರಿ ಹೆಣ್ಣಾಗಿದ್ದಲ್ಲಿ ಅದಕ್ಕೆ ‘ಸಮೀಕ್ಷಾ’ ಎಂದು ಹೆಸರಿಡುವಂತೆ ಆದೇಶಿಸಿದ್ದಾರೆ. ಈ ಮೂಲಕ, ವನ್ಯಜೀವಿಗಳ ಆರೈಕೆ ಮತ್ತು ಸಂರಕ್ಷಣೆಗೆ ತಮ್ಮ ಜೀವನವನ್ನೇ ಅರ್ಪಿಸಿದ್ದ ಡಾ. ಸಮೀಕ್ಷಾ ರೆಡ್ಡಿ ಅವರ ಸೇವೆಯನ್ನು ಚಿರಸ್ಥಾಯಿಯಾಗಿ ಸ್ಮರಿಸುವ ಪ್ರಯತ್ನಕ್ಕೆ ಸರ್ಕಾರ ಮುಂದಾಗಿದೆ.

ಯುವ ವಯಸ್ಸಿನಲ್ಲೇ ವನ್ಯಜೀವಿ ಚಿಕಿತ್ಸೆಯಲ್ಲಿ ತೊಡಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪ್ರಾಣ ಕಳೆದುಕೊಂಡ ಡಾ. ಸಮೀಕ್ಷಾ ರೆಡ್ಡಿ ಅವರ ಹೆಸರು ಇದೀಗ ನವಜಾತ ನೀರಾನೆ ಮರಿಯ ಮೂಲಕ ಜೀವಂತವಾಗಿರಲಿದೆ. ಈ ನಿರ್ಧಾರಕ್ಕೆ ಸಾರ್ವಜನಿಕರು ಹಾಗೂ ವನ್ಯಜೀವಿ ಪ್ರೇಮಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಇದು ಕೇವಲ ಒಂದು ಹೆಸರಿಡುವ ಕಾರ್ಯಕ್ರಮವಲ್ಲದೆ, ಕರ್ತವ್ಯನಿಷ್ಠೆಯೊಂದಿಗೆ ಸೇವೆ ಸಲ್ಲಿಸಿದ ವೈದ್ಯೆಗೆ ಸಲ್ಲಿಸಿದ ಹೃದಯಸ್ಪರ್ಶಿ ಗೌರವವಾಗಿದೆ.
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Interior designer ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    11 hrs ago
  • ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡಿದರು. ಸೋಮವಾರ ಪ್ರಮಾಣ ವಚನ ಸ್ವೀಕರಿಸಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಡಿ.ಕೆ. ಶಿವಕುಮಾರ್ ಅವರಿಗೆ, ರಾಜ್ಯದಲ್ಲಿ ಸಾರಿಗೆ ಸೇರಿದಂತೆ ಹಲವಾರು ಸಮಸ್ಯೆಗಳಿದ್ದು, ಇವೆಲ್ಲದರ ನಡುವೆ ರಾಜ್ಯದ ಅಭಿವೃದ್ಧಿ ಮಾಡಬೇಕು ಎಂದು ಬೊಮ್ಮಾಯಿ ಹೇಳಿದರು. ಇದಕ್ಕಾಗಿ ದಕ್ಷ ಮತ್ತು ಪ್ರಾಮಾಣಿಕ ಆಡಳಿತ ನೀಡಬೇಕು ಎಂದು ಅವರು ಸೂಚಿಸಿದರು.
    1
    ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡಿದರು. ಸೋಮವಾರ ಪ್ರಮಾಣ ವಚನ ಸ್ವೀಕರಿಸಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಡಿ.ಕೆ. ಶಿವಕುಮಾರ್ ಅವರಿಗೆ, ರಾಜ್ಯದಲ್ಲಿ ಸಾರಿಗೆ ಸೇರಿದಂತೆ ಹಲವಾರು ಸಮಸ್ಯೆಗಳಿದ್ದು, ಇವೆಲ್ಲದರ ನಡುವೆ ರಾಜ್ಯದ ಅಭಿವೃದ್ಧಿ ಮಾಡಬೇಕು ಎಂದು ಬೊಮ್ಮಾಯಿ ಹೇಳಿದರು. ಇದಕ್ಕಾಗಿ ದಕ್ಷ ಮತ್ತು ಪ್ರಾಮಾಣಿಕ ಆಡಳಿತ ನೀಡಬೇಕು ಎಂದು ಅವರು ಸೂಚಿಸಿದರು.
    user_H M ಹರಕುಣಿ
    H M ಹರಕುಣಿ
    Local News Reporter Haveri, Karnataka•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.