Shuru
Apke Nagar Ki App…
ಲಕ್ಷ್ಮಮ್ಮ ಬಡಾವಣೆಯಲ್ಲಿ ಶ್ರೀ ವಿದ್ಯಾ ಗಣಪತಿ ಯೂತ್ ಟ್ರಸ್ಟ್ ವತಿಯಿಂದ ಭರತ ನಾಟ್ಯ ಕಾರ್ಯಕ್ರಮ... ಹಿರಿಯೂರಿನ ಶ್ರೀ ಲಕ್ಷ್ಮಮ್ಮ ಬಡಾವಣೆಯಲ್ಲಿ ಶ್ರೀ ವಿದ್ಯಾ ಗಣಪತಿ ಯೂತ್ ಸೇವಾ ಟ್ರಸ್ಟ್ (ರಿ ) ವತಿಯಿಂದ ಸಾದ್ವಿ ನೃತ್ಯ ಶಾಲೆಯವರು ಭರತ ನಾಟ್ಯ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.. ಸುಮಾರು 10 ಕ್ಕೂ ಹೆಚ್ಚು ನೃತ್ಯಗಳನ್ನು ವಿದ್ಯಾರ್ಥಿ ಗಳು ನಡೆಸಿಕೊಟ್ಟರು.. ಕಾರ್ಯಕ್ರಮವನ್ನು ರೂಪ ಶಿಕ್ಷಕಿಯವರು ನಡೆಸಿಕೊಟ್ಟರು
ಅಪ್ಪಾಜಿ ಬಂಡೆ
ಲಕ್ಷ್ಮಮ್ಮ ಬಡಾವಣೆಯಲ್ಲಿ ಶ್ರೀ ವಿದ್ಯಾ ಗಣಪತಿ ಯೂತ್ ಟ್ರಸ್ಟ್ ವತಿಯಿಂದ ಭರತ ನಾಟ್ಯ ಕಾರ್ಯಕ್ರಮ... ಹಿರಿಯೂರಿನ ಶ್ರೀ ಲಕ್ಷ್ಮಮ್ಮ ಬಡಾವಣೆಯಲ್ಲಿ ಶ್ರೀ ವಿದ್ಯಾ ಗಣಪತಿ ಯೂತ್ ಸೇವಾ ಟ್ರಸ್ಟ್ (ರಿ ) ವತಿಯಿಂದ ಸಾದ್ವಿ ನೃತ್ಯ ಶಾಲೆಯವರು ಭರತ ನಾಟ್ಯ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.. ಸುಮಾರು 10 ಕ್ಕೂ ಹೆಚ್ಚು ನೃತ್ಯಗಳನ್ನು ವಿದ್ಯಾರ್ಥಿ ಗಳು ನಡೆಸಿಕೊಟ್ಟರು.. ಕಾರ್ಯಕ್ರಮವನ್ನು ರೂಪ ಶಿಕ್ಷಕಿಯವರು ನಡೆಸಿಕೊಟ್ಟರು
More news from ಕರ್ನಾಟಕ and nearby areas
- ಲಕ್ಷ್ಮಮ್ಮ ಬಡಾವಣೆಯಲ್ಲಿ ಶ್ರೀ ವಿದ್ಯಾ ಗಣಪತಿ ಯೂತ್ ಟ್ರಸ್ಟ್ ವತಿಯಿಂದ ಭರತ ನಾಟ್ಯ ಕಾರ್ಯಕ್ರಮ... ಹಿರಿಯೂರಿನ ಶ್ರೀ ಲಕ್ಷ್ಮಮ್ಮ ಬಡಾವಣೆಯಲ್ಲಿ ಶ್ರೀ ವಿದ್ಯಾ ಗಣಪತಿ ಯೂತ್ ಸೇವಾ ಟ್ರಸ್ಟ್ (ರಿ ) ವತಿಯಿಂದ ಸಾದ್ವಿ ನೃತ್ಯ ಶಾಲೆಯವರು ಭರತ ನಾಟ್ಯ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.. ಸುಮಾರು 10 ಕ್ಕೂ ಹೆಚ್ಚು ನೃತ್ಯಗಳನ್ನು ವಿದ್ಯಾರ್ಥಿ ಗಳು ನಡೆಸಿಕೊಟ್ಟರು.. ಕಾರ್ಯಕ್ರಮವನ್ನು ರೂಪ ಶಿಕ್ಷಕಿಯವರು ನಡೆಸಿಕೊಟ್ಟರು2
- ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ ಚಳ್ಳಕೆರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು. ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ 15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು.. ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ. ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು. ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು . ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು. ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು. ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..2
- ಗೋನೂರಿನಲ್ಲಿ ಗಂಗಾಪೂಜೆ: ಭದ್ರೆಯನ್ನು ಸ್ವಾಗತಿಸಿದ ಹೋರಾಟಗಾರರು" 🚩 #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಭದ್ರಾಮೇಲ್ದಂಡೆ #ಸಮಗ್ರನೀರಾವರಿ #ಬರಡುನೆಲಹಸಿರು #ಕೋದಂಡರಾಮಯ್ಯ #ಎಂಜಯಣ್ಣ #ಮುರುಘರಾಜೇಂದ್ರಒಡೆಯರ್ #ಚಿತ್ರದುರ್ಗಜಿಲ್ಲೆ #ಮೊಳಕಾಲ್ಮೂರು #ಚಳ್ಳಕೆರೆ #ಈಚಘಟ್ಟ #ಬೇಡರರೆಡ್ಡಿಹಳ್ಳಿ #ಕಬೀರಾನಂದಮಠ #ಗೋನೂರುಭದ್ರಾ #ನೀರಾವರಿ #ರೈತಹೋರಾಟ #ಕೆರೆಕಟ್ಟೆ #ಅಣೆಕಟ್ಟು #ನೀರುಸ್ವಾಗತ #ಎರಡನೇಹಂತದಹೋರಾಟ #ಅರ್ಧಗೆಲುವು #ದಶಕಗಳಕನಸು #ರೋಮಾಂಚನದಕ್ಷ #ಪಿಕೋದಂಡರಾಮಯ್ಯ #ಬೇಡರರೆಡ್ಡಿಹಳ್ಳಿಬಸವರೆಡ್ಡಿ #ಕೆಎಸ್ನವೀನ್ #ಚಳ್ಳಕೆರೆಬಸವರಾಜ್ #ನರೇನಹಳ್ಳಿಅರುಣಕುಮಾರ್ #ಜೋಗಿಮಟ್ಟಿಮಹೇಶ್ಬಾಬು #ಗೌನಹಳ್ಳಿಗೋವಿಂದಪ್ಪ #ಶಿವಾಲಿಂಗಾನಂದಸ್ವಾಮೀಜಿ #ಹೋರಾಟಗಾರರಿಗೆನಮನ #ನೀರಿಗಾಗಿಬದುಕು #ಬರಡುನೆಲಕ್ಕೆಜೀವ #ಹಸಿರುಕ್ರಾಂತಿ #ನ್ಯಾಯಕ್ಕಾಗಿಹೋರಾಟ #ಸಂಕಲ್ಪ #BhadraWater #Chitradurga #IrrigationStruggle #Karnataka #BhadraUpperBank #WaterForAll #FarmersFight #GangaPooja #Gonuru #Molakalmuru #SaveFarmers #WaterRevolution #ಭದ್ರಾನೀರು #ಚಿತ್ರದುರ್ಗ #ನೀರಾವರಿಹೋರಾಟ #ಗೋನೂರು #ಗಂಗಾಪೂಜೆ #ಬರಡುನೆಲಹಸಿರು #ಕೋದಂಡರಾಮಯ್ಯ #ಎರಡನೇಹಂತದಹೋರಾಟ #BhadraWater #Chitradurga #Karnataka #IrrigationStruggle1
- ಪಾವಗಡ: ತಾಲೂಕಿನಾದ್ಯಂತ ಸಂಭ್ರಮದ ಗಣೇಶೋತ್ಸವ – ಶ್ರದ್ಧಾ-ಭಕ್ತಿಯಿಂದ ಪೂಜೆ, ಪ್ರಸಾದ ವಿನಿಯೋಗ ಪಾವಗಡ: ತಾಲೂಕಿನಾದ್ಯಂತ ಸಂಭ್ರಮದ ಗಣೇಶೋತ್ಸವ – ಶ್ರದ್ಧಾ-ಭಕ್ತಿಯಿಂದ ಪೂಜೆ, ಪ್ರಸಾದ ವಿನಿಯೋಗ ಪಾವಗಡ: ತಾಲೂಕಿನಾದ್ಯಂತ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ವಿವಿಧ ಗ್ರಾಮಗಳು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ನೂರಾರು ಗಣಪತಿ ಮೂರ್ತಿಗಳನ್ನು ಅತ್ಯಂತ ವಿಜೃಂಭಣೆಯಿಂದ ಪ್ರತಿಷ್ಠಾಪಿಸಲಾಯಿತು. ಭಕ್ತಾದಿಗಳು ಧಾರ್ಮಿಕ ವಿಧಿ-ವಿಧಾನಗಳ ಮೂಲಕ ಗಣೇಶನಿಗೆ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿಸಿದರು. ವಿಶೇಷ ಪೂಜೆ ಹಾಗೂ ದರ್ಶನ: ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ಸುಂದರವಾಗಿ ಅಲಂಕೃತಗೊಂಡ ಪಂಡಾಲ್‌ಗಳಲ್ಲಿ ಗಣೇಶ ಮೂರ್ತಿಗಳನ್ನು ಕೂಡಿಸಿ, ಬೆಳಗಿನಿಂದಲೇ ಸಾರ್ವಜನಿಕರು ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು. ಭಕ್ತರ ಸಮ್ಮುಖದಲ್ಲಿ ಗಣಪತಿಗೆ ಸಹಸ್ರನಾಮಾರ್ಚನೆ, ಹೋಮ-ಹವನ ಹಾಗೂ ವಿಶೇಷ ಪುಷ್ಪಾಲಂಕಾರ ಸೇವೆಗಳು ಜರುಗಿದವು. ಬೃಹತ್ ಪ್ರಸಾದ ವಿನಿಯೋಗ: ಪೂಜಾ ಕಾರ್ಯಕ್ರಮದ ನಂತರ ಪ್ರತಿಷ್ಠಾಪನಾ ಸಮಿತಿಗಳು ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಆಗಮಿಸಿದ್ದ ಸಾವಿರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಹಾಗೂ ಮಹಾಪ್ರಸಾದ ವಿನಿಯೋಗ ಮಾಡಲಾಯಿತು. ಹಬ್ಬದ ವಾತಾವರಣದಿಂದ ತಾಲೂಕಿನಾದ್ಯಂತ ಭಕ್ತಿರಸ ಪ್ರವಾಹ ಹರಿದಂತಾಗಿತ್ತು. ಪಾವಗಡ ವರದಿ4
- ಸರಕಾರ ಕೂಡಲೇ ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಬೇಕು ತುಮಕೂರು:ಜಿಲ್ಲೆಯಲ್ಲಿ ತೀವ್ರ ಬರಗಾಲ ಕಾಣಿಸಿಕೊಂಡಿದ್ದು,ಜಿಲ್ಲೆಯ ತಿಪಟೂರು ಹೊರತು ಪಡಿಸಿ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರಕಾರ ಘೋಷಣೆ ಮಾಡಿದ್ದರೂ ಇದುವರೆಗೂ ಬರಪರಿಹಾರ ಕಾಮಗಾರಿಗಳನ್ನು ಕೈಗೆತ್ತಿ ಕೊಂಡಿಲ್ಲ.ಇದರಿAದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಕಾಣಿಸಿಕೊಂಡಿದ್ದು, ಕೂಡಲೇ ಜಿಲ್ಲಾಡಳಿತ ಬರಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಮಳೆಯಿಲ್ಲದ ಕಾರಣ ಜಿಲ್ಲೆಯ ಶೇ70 ರಷ್ಟು ಭೂಮಿಯಲ್ಲಿ ಭಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬಿತ್ತನೆ ಮಾಡಿದ ಶೇ30ರಷ್ಟು ಭೂಮಿಯಲ್ಲಿನ ಫಸಲು ಸಹ ಸಕಾಲಕ್ಕೆ ಮಳೆಯಿಲ್ಲದೆ ಒಣಗಿದ್ದು,ದಿನದಿಂದ ದಿನಕ್ಕೆ ಅಂತರಜಲ ಕುಸಿಯುತ್ತಿದ್ದು,ಮುಂದಿನ 15-20 ದಿನಗಳಲ್ಲಿ ತೀವ್ರ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ತಕ್ಷಣವೇ ಕುಡಿಯುವ ನೀರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೆಯೇ ಜಾನುವಾರುಗಳ ಮೇವಿಗೆ ಗೋಶಾಲೆ ತೆರೆಯುವುದು.ಎಕರೆಗೆ ತಲಾ 50 ಸಾವಿರ ಬೆಳೆ ಪರಿಹಾರ,ಕೃಷಿಕರು ಮತ್ತು ಕೃಷಿ ಕೂಲಿ ಕಾರ್ಮಿಕರು ಗುಳೆ ಹೋಗದಂತೆ ವಿಬಿಜಿ ರಾಮಜಿ ಅಡಿಯಲ್ಲಿ ಕೆಲಸ ನೀಡಿ ಜನರ ನೆರವಿಗೆ ಬರಬೇಕೆಂದು ಆಗ್ರಹಿಸಿದರು. ಈ ಬಾರಿ ಹೇಮಾವತಿ ಜಲಾಶಯದಲ್ಲಿ ಶೇ75ರಷ್ಟು ನೀರಿನ ಸಂಗ್ರಹವಿತ್ತು. ಆಗ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರುಗಳು ಎಚ್ಚೆತ್ತುಕೊಂಡು ನಮ್ಮ ಕೆರೆ, ಕೆಟ್ಟೆಗಳಿಗೆ ನೀರು ಹರಿಸಿಕೊಂಡಿದ್ದರೆ ಅಂತರ ಜಲ ಕುಸಿತ ತಡೆಯಬಹುದಿತ್ತು. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ನಿರ್ಲಕ್ಷದ ಫಲವಾಗಿ ನಮ್ಮ ಜಿಲ್ಲೆಗೆ ಬರಬೇಕಾದ ನೀರು ತೆಮಿಳು ನಾಡಿಗೆ ಹರಿಸಿ,ಸರಕಾರ ತನ್ನ ಖರ್ಚಿ ಉಳಿಸಿಕೊಂಡಿದೆ.ನಮ್ಮ ತೋಟ, ತುಡಿಕೆಗಳು ಒಣಗಿ, ರೈತರು ಕಂಗಾಲಾಗಿದ್ದಾರೆ.ಈಗಲಾದರೂ ಜಿಲ್ಲಾಡಳಿತ ಎಲ್ಲಾ ಕೆರೆ, ಕಟ್ಟೆಗಳಿಗೆ ನೀರು ಹರಿಸುವ ಕೆಲಸ ಮಾಡಬೇಕು ಎಂದು ಎ.ಗೋವಿಂದರಾಜು ನುಡಿದರು. ಈಲ್ಲೆಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಶುರುವಾಗಿದ್ದು, ದಿನದಲ್ಲಿ ಒಂದು ಗಂಟೆ ರೈತರ ಪಂಪ್‌ಸೆಟ್‌ಗಳಿಗೆ ಗುಣಮಟ್ಟದ ವಿದ್ಯುತ್ ದೊರೆಯುತ್ತಿಲ್ಲ.ನಿರ್ಮಾಣವಾಗಿರುವ 220 ಕೆ.ವಿ.ಉಪಸ್ಥಾವರಗಳು ಕಾರ್ಯಾರಂಭಗೊAಡಿಲ್ಲ.ಬೇಸ್ಕಾA ಅಧಿಕಾರಿಗಳು ಅಸಹಾಯಕರಾಗಿದ್ದಾರೆ.ಹಾಗಾಗಿ ಬೆಸ್ಕಾಂ ಸೂಪರಿಂಡೆAಟ್ ಇಂಜಿನಿಯರ್, ಮುಖ್ಯ ಇಂಜಿನಿಯರ್ ಹಾಗೂ ಕಾರ್ಯಪಾಲಕ ಇಂಜಿನಿಯರ್‌ಗಳು ಸೆಪ್ಟಂಬರ್ 21ರೊಳಗೆ ರೈತರು,ರೈತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, ಸಮಸ್ಯೆಗೆ ಪರಿಹಾರ ಒದಗಿಸದಿದ್ದರೆ ಸೆಪ್ಟಂಬರ್ 23 ರಿಂದ ಹಂತ ಹಂತವಾಗಿ ಎಲ್ಲಾ ತಾಲೂಕು ಬೆಸ್ಕಾಂ ಕಚೇರಿ ಮತ್ತು ತಹಶೀಲ್ದಾರರ ಕಚೇರಿಯ ಮುಂದೆ ಪಿಕೇಟಿಗ್ ನಡೆಸಲಾಗುವುದು. ಮಧುಗಿರಿ ಉಪವಿಭಾಗಕ್ಕೆ ಸಂಬAಧಿಸಿ ದಂತೆ ಸೆಪ್ಟಂಬರ್ 23 ರಂದು ಮಧುಗಿರಿ ಎ.ಸಿ.ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದರು. ಈಲ್ಲೆಯಲ್ಲಿ ಸರಕಾರದ ಯೋಜನೆಗಳಾದ ಹೇಮಾವತಿ ನಾಲೆ, ಎತ್ತಿನಹೊಳೆ ಯೋಜನೆ, ರೈಲ್ವೆಗೆ ಸೇರಿ ರೈತರ ಸಾಕಷ್ಟು ಫಲವತ್ತಾ ಭೂಮಿಯನ್ನು ವಶಪಡಿಸಿಕೊಂಡು 20-30 ವರ್ಷಗಳು ಕಳೆದರು ವೈಜ್ಞಾನಿಕ ಪರಿಹಾರ ನೀಡಿಲ್ಲ. ನ್ಯಾಯಾಲಯಕ್ಕೆ ಹೋದ ರೈತರಿಗೆ ಕೋರ್ಟ್ ಆದೇಶದಂತೆ ಸುಮಾರು 500 ಕೋಟಿ ರೂಗಳಿಗೆ ಹೆಚ್ಚಿನ ಬಾಕಿ ನೀಡಬೇಕಿದೆ.ಆದರೆ ಇದುವರೆಗೂ ಒಂದು ನೈಯಾಫೈಸೆ ನೀಡಿಲ್ಲ. ಹಲವು ಮೂಲ ಜಮೀನುದಾರರು ಸಾವನ್ನಪ್ಪಿದ್ದಾರೆ.ಸರಕಾರ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು. ಹಾಗೆಯೇ ಕಳೆದ ಸಾಲಿನಲ್ಲಿ ನ್ಯಾಫೇಡ್ ಮೂಲಕ ಖರೀದಿಸಿದ್ದ ರಾಗಿಯ ಬಾಬ್ತು ಸುಮಾರು 400 ಕೋಟಿ ರೂ ಬಾಕಿ ಬರಬೇಕಾಗಿದೆ. ಸರಕಾರ ಕೂಡಲೇ ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಎ.ಗೋವಿಂದರಾಜು ಆಗ್ರಹಿಸಿದರು. ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದೆ.ಡಾ.ಎಂ.ಎಸ್.ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರದ ಕಾರಣ, ಉತ್ಪಾಧನಾ ವೆಚ್ಚ ಹೆಚ್ಚಾಗಿ,ನಷ್ಟಕ್ಕೆ ಒಳಗಾಗಿ ಆತ್ಮಹತ್ಯೆಯ ದಾರಿ ತುಳಿಯುತ್ತಿದ್ದಾನೆ.ಇದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಂಸದರು ಒಂದು ಬಾರಿಗೆ ರೈತರ ಸಾಲಮನ್ನಾಕ್ಕೆ ಕೇಂದ್ರ ಸರಕಾರವನ್ನು ಒತ್ತಾಯಿಸಬೇಕು.ಹಾಗೆಯೇ ಬ್ಯಾಂಕುಗಳು, ಕಿರು ಹಣಕಾಸು ಸಂಸ್ಥೆಗಳು ಬಲವಂತದ ವಸೂಲಿ ಮಾಡದಂತೆ ಸುತ್ತೋಲೆ ಹೊರಡಿಸಬೇಕೆಂದು ಆಗ್ರಹಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ ಮಾತನಾಡಿ,ಬರದಿಂದ ಬೆಳೆ ನಷ್ಟದಿಂದ ಜನರು ಸಂಕಷ್ಟದಲ್ಲಿದ್ದು,ಸರಕಾರ ಕೇರಳ ಮಾದರಿಯಲ್ಲಿ ಪಡಿತರ ಅಕ್ಕಿಯ ಜೊತೆಗೆ, ಬೇಳೆ, ಬೆಲ್ಲ ಸೇರಿದಂತೆ ದಿನ ಬಳಕೆಯ ವಸ್ತುಗಳನ್ನು ರಿಯಾಯತಿ ದರದಲ್ಲಿ ನೀಡಬೇಕು.ಹಾಗೆಯೇ ಪಶುಸಂಗೋಪನೆಗೆ ಪೂರಕವಾಗಿ ಬೂಸ್ ಮತ್ತು ಹಿಂಡಿಯನ್ನು ಶೇ50ರ ರಿಯಾಯಿತಿ ದರದಲ್ಲಿ ನೀಡಬೇಕು. ಲೀಟರ್ ಹಾಲಿಗೆ 40 ರೂ ನೀಡಬೇಕೆಂದು ಒತ್ತಾಯಿಸಿದರು. ನಂದಿಹಳ್ಳಿ-ಮಲ್ಲಸAದ್ರ-ವಸAತನರಸಾಪುರ ಔಟರ್ ರಿಂಗ್ ರಸ್ತೆಗೆ ರೈತರ ವಿರೋಧದ ನಡುವೆಯೂ ಭೂಸ್ವಾಧೀನಕ್ಕೆ ಅಧಿಕಾರಿಗಳು ಮುಂದಾಗುತ್ತಲೇ ಇದ್ದಾರೆ.ಜನರಿಗೆ ಹೆಚ್ಚು ಉಪಯೋಗವಿಲ್ಲದ ಔಟರ್‌ರಿಂಗ್ ರಸ್ತೆ ಯೋಜನೆಯನ್ನು ಕೈಬಿಡಬೇಕು.ಹಾಗೆಯೇ ಜಿಲ್ಲೆಯ 7-8 ತಾಲೂಕುಗಳಿಗೆ ಮರಣ ಶಾಸನವಾಗಿರುವ ಏಕ್ಸ್ಪ್ರೆಸ್ ಕೇನಾಲ್ ಯೋಜನೆಯನ್ನು ಸರಕಾರ ರದ್ದು ಮಾಡಬೇಕು. ಕುಣಿಗಲ್ ನೆಪದಲ್ಲಿ ಬಿಡದಿಯೇ ಎಐ ಡೇಟಾ ಸೆಂಟರ್‌ಗೆ ನೀರು ತೆಗೆದುಕೊಂಡು ಹೋಗಲು ಅವಕಾಶ ನೀಡುವುದಿಲ್ಲ ಎಂದು ಜಿ.ಸಿ.ಶಂಕರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ವಿವಿಧ ತಾಲೂಕುಗಳ ಅಧ್ಯಕ್ಷರಾದ ಚಿಕ್ಕಬೋರೇಗೌಡ, ಲೋಕೇಶ್, ರಂಗಹನುಮಯ್ಯ, ಷಬ್ಬೀರ್ ಪಾಷ, ಯುವಘಟಕದ ಮಂಜುನಾಥ್, ಜಟ್ಟಿ, ತಿಮ್ಮೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.1
- ಬೇಸಿಗೆ ಬಂದರೆ ನಮ್ಮಲ್ಲಿ ಜಾನುವಾರುಗಳಿಗೆ ಹುಲ್ಲು ಸಿಗುವುದೇಲ ಕಷ್ಟ ಹೊರ ರಾಷ್ಟ್ರದಲ್ಲಿ ಇಂತಹ ಆಹಾರ ನೀಡುತ್ತಿದ್ದಾರೆ.1
- ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕೃತ ವೀರ ಸೈನಿಕ ಶಬ್ಬೀರ್ ನಿಧನ ತರೀಕೆರೆ, ಸೆ.14: ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ಸೈನಿಕ, ಚಾಲಕ ಹಾಗೂ ಮೆಕಾನಿಕ್ ಆಗಿ ಸೇವೆ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲಿಯೂ ಭಾಗವಹಿಸಿದ್ದ ವೀರ ಸೈನಿಕ ಶಬ್ಬೀರ್ ಅವರು ನಿಧನರಾದರು. ಶಬ್ಬೀರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಿಲಿಟರಿ ಶ್ರೀನಿವಾಸ್ ಅವರು, ದೇಶ ಸೇವೆ ಸಲ್ಲಿಸಿದ ವೀರ ಯೋಧನ ಅಗಲಿಕೆಯಿಂದ ಅಪಾರ ನೋವುಂಟಾಗಿದೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಹಾಗೂ ಅಲ್ಲಾಹ ಕರುಣಿಸಲಿ ಎಂದು ಹೇಳಿದರು. ಅವರು ಪಟ್ಟಣದಲ್ಲಿರುವ ಶಬ್ಬೀರ್ ಅವರ ಸ್ವಗೃಹಕ್ಕೆ ತೆರಳಿ ಮಾತನಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಶಬ್ಬೀರ್ ಅವರು ಭಾರತೀಯ ಸೇನೆಯಲ್ಲಿ ನಾಯಕ್ ಹುದ್ದೆಯವರೆಗೆ ಸೇವೆ ಸಲ್ಲಿಸಿದ್ದರು. 2026–27ನೇ ಸಾಲಿನ ಮುಖ್ಯಮಂತ್ರಿಗಳ ಬಂಗಾರದ ಪದಕ ಪುರಸ್ಕಾರಕ್ಕೂ ಅವರು ಭಾಜನರಾಗಿದ್ದರು ಎಂದು ತಿಳಿಸಿದರು. ದೇಶ ಸೇವೆಯ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದ ಶಬ್ಬೀರ್ ಅವರು, ಖಾಜಿ ಬೀದಿಯಲ್ಲಿರುವ ತಮ್ಮ ಸ್ವಂತ ಮನೆಯನ್ನು ಸರ್ಕಾರದ ‘ನಮ್ಮ ಕ್ಲಿನಿಕ್’ ಆಸ್ಪತ್ರೆ ತೆರೆಯಲು ನೀಡಿದ್ದರು. ನಂತರ ತರೀಕೆರೆ ಅಗ್ನಿಶಾಮಕ ದಳದಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು. ಅವರ ನಿಧನದಿಂದ ದೇಶ ಸೇವೆ ಸಲ್ಲಿಸಿದ ವೀರ ಸೈನಿಕನೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ವಿಷಾದಿಸಿದರು. ಶಬ್ಬೀರ್ ಅವರು ಪತ್ನಿ ಜೈದಾ ಬಾನು, ಪುತ್ರ ಫಿದಾ ಮೊಹಮ್ಮದ್ ಹಾಗೂ ಪುತ್ರಿ ನೌಶಾಧಿಕಾ ಅವರನ್ನು ಅಗಲಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಕೆ.ವಿ., ಠಾಣಾಧಿಕಾರಿ ತಿಪ್ಪೇಸ್ವಾಮಿ ಆರ್., ಸಹಾಯಕ ಠಾಣಾಧಿಕಾರಿ ಡಿ.ಜಿ. ನಾಗೇಂದ್ರ ಹಾಗೂ ಅಗ್ನಿಶಾಮಕ ಸಿಬ್ಬಂದಿ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ, ಸಂತಾಪ ಸೂಚಿಸಿದರು. ಮಾಜಿ ಸೈನಿಕರಾದ ಎಸ್.ಎಚ್. ಕುಮಾರ್, ದೇವೇಂದ್ರ, ಗೋವಿಂದಪ್ಪ, ಸೋಮಶೇಖರ್ ಸೇರಿದಂತೆ ಲಿಂಗದಹಳ್ಳಿ ಹಾಗೂ ಕಡೂರು ಭಾಗದ ಮಾಜಿ ಸೈನಿಕರು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು. ವರದಿ: ಪ್ರದೀಪ್ ಹೆಚ್ ಈ. ತರೀಕೆರೆ4
- ಹಿರಿಯೂರಿನ ಲಕ್ಷ್ಮಮ್ಮ ಬಡಾವಣೆಯಲ್ಲಿ ಗಣಪತಿ ಹಬ್ಬ ಕಾರ್ಯಕ್ರಮದಲ್ಲಿ ಇಂದು ಭರತ ನಾಟ್ಯ ಪ್ರದರ್ಶನ ಹಿರಿಯೂರಿನ ಲಕ್ಷ್ಮಮ್ಮ ಬಡಾವಣೆಯಲ್ಲಿ ಶ್ರೀ ವಿದ್ಯಾ ಗಣಪತಿ ಯೂತ್ ಸೇವಾ ಟ್ರಸ್ಟ್ (ರಿ )ವತಿಯಿಂದ ಇಂದು ಸಾದ್ವಿ ನಾಟ್ಯ ಶಾಲೆವತಿಯಿಂದ ಭರತ ನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ಸುಮಾರು 10 ಕ್ಕೂ ಹೆಚ್ಚು ನೃತ್ಯಗಳನ್ನು ನಡೆಸಿಕೊಡಲಾಯಿತು... ಕಾರ್ಯಕ್ರಮದಲ್ಲಿ ಪೋಷಕರು ಸಾಹಿತ್ಯಸಕ್ತರು ಭಾಗವಹಿಸಿದ್ದರು... ಶಿಕ್ಷಕಿ ರೂಪಾ ಮೇಡಂರವರು ನಿರೂಪಣೆ ನಡೆಸಿಕೊಟ್ಟರು... ಕಾರ್ಯಕ್ರಮ ಉತ್ತಮವಾಗಿ ಮೂಡಿಬಂದಿತು....1