Shuru
Apke Nagar Ki App…
ಸೆತುವೆ ಮರು ನಿರ್ಮಾಣಕ್ಕೆ ಭೂಮಿ ಪೂಜೆ ನೇರವೇರಿಸಿದ ಶಾಸಕ ಇಕ್ಬಾಲ್ ಹುಸೇನ್ ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ಹೊನ್ನಾಲಗಾನದೊಡ್ಡಿ ಮತ್ತು ಕೊಳ್ಳಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಹಾರೋಹಳ್ಳಿ-ಬಿಡದಿ ಅಡ್ಡ ರಸ್ತೆಯಿಂದ ಉಳಗೊಂಡನಹಳ್ಳಿ, ನಾರಾಯಣಪುರ, ಕಡಸಿಕೊಪ್ಪ ಮಾರ್ಗವಾಗಿ ದೊಂಬರದೊಡ್ಡಿ ಸೇರುವ ರಸ್ತೆಯ ಸರಪಳಿ 2.50 ಕಿ.ಮೀ ನಲ್ಲಿ ಶಿಥಿಲಗೊಂಡಿರುವ ಸೇತುವೆಯ ಮರು ನಿರ್ಮಾಣ ಕಾಮಗಾರಿಗೆ ಶಾಸಕ ಹೆಚ್ ಎ ಇಕ್ಬಾಲ್ ಹುಸೇನ್ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಇಕ್ಬಾಲ್ ಹುಸೇನ್ ಅವರು, "ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗಿದ್ದ ಈ ಶಿಥಿಲಗೊಂಡ ಸೇತುವೆಯನ್ನು ಆದಷ್ಟು ಬೇಗ ಗುಣಮಟ್ಟದಿಂದ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ" ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ರಮೇಶ್.ಆರ್
ಸೆತುವೆ ಮರು ನಿರ್ಮಾಣಕ್ಕೆ ಭೂಮಿ ಪೂಜೆ ನೇರವೇರಿಸಿದ ಶಾಸಕ ಇಕ್ಬಾಲ್ ಹುಸೇನ್ ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ಹೊನ್ನಾಲಗಾನದೊಡ್ಡಿ ಮತ್ತು ಕೊಳ್ಳಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಹಾರೋಹಳ್ಳಿ-ಬಿಡದಿ ಅಡ್ಡ ರಸ್ತೆಯಿಂದ ಉಳಗೊಂಡನಹಳ್ಳಿ, ನಾರಾಯಣಪುರ, ಕಡಸಿಕೊಪ್ಪ ಮಾರ್ಗವಾಗಿ ದೊಂಬರದೊಡ್ಡಿ ಸೇರುವ ರಸ್ತೆಯ ಸರಪಳಿ 2.50 ಕಿ.ಮೀ ನಲ್ಲಿ ಶಿಥಿಲಗೊಂಡಿರುವ ಸೇತುವೆಯ ಮರು ನಿರ್ಮಾಣ ಕಾಮಗಾರಿಗೆ ಶಾಸಕ ಹೆಚ್ ಎ ಇಕ್ಬಾಲ್ ಹುಸೇನ್ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಇಕ್ಬಾಲ್ ಹುಸೇನ್ ಅವರು, "ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗಿದ್ದ ಈ ಶಿಥಿಲಗೊಂಡ ಸೇತುವೆಯನ್ನು ಆದಷ್ಟು ಬೇಗ ಗುಣಮಟ್ಟದಿಂದ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ" ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಗೆ ಲ್ಯಾಪ್ ಟಾಪ್ ಕೊಡುಗೆ ಚನ್ನಪಟ್ಟಣ--ತಂತ್ರಜ್ಞಾನದ ಯುಗದಲ್ಲಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಅವರಿಗೆ ಜಾಗತಿಕ ಮಟ್ಟದ ಶಿಕ್ಷಣ ತಲುಪಬೇಕು ಎಂಬ ಉದ್ದೇಶದಿಂದ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬೇವೂರಿನ ಶ್ರೀ ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಯ ಮಕ್ಕಳಿಗಾಗಿ ಉಚಿತ ಕಂಪ್ಯೂಟರ್ ಶಿಕ್ಷಣ" ಕಾರ್ಯಕ್ರಮದ ಉದ್ಘಾಟನೆ ಹಾಗೂ ವಿಶೇಷ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ 'ಮಾ ಕಾಮಾಖ್ಯ ಇನೋವೇಟಿವ್ ಫೌಂಡೇಶನ್' ಸಂಸ್ಥಾಪಕ ಅಧ್ಯಕ್ಷರಾದ ದಿಲೀಪ್‌ಕುಮಾರ್ ಭಾರತಿ ಹಾಗೂ ಶ್ರೀಮತಿ ಅರ್ಚನ ದಿಲೀಪ್‌ಕುಮಾರ್ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಬಳಕೆಗೆ ಅಗತ್ಯವಾದ ಲ್ಯಾಪ್ಟಾಪ್ ಅನ್ನು ಸಂಸ್ಥೆಯ ಕಾರ್ಯ ದರ್ಶಿಗಳಾದ ಬೇವೂರು ಯೋಗೀಶ್ ಗೌಡ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿ, ಉಚಿತ ಕಂಪ್ಯೂಟರ್ ಶಿಕ್ಷಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.1
- ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ. ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ. ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಆರೋಪಿಗಳ ಬಂಧನಕ್ಕೆ ಪ್ರತಿಭಟನೆ ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು. ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.3
- ಪಟ್ಟಣದಲ್ಲಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನಿವೇಶನಗಳ ಹಂಚಿಕೆ ಕಾರ್ಯಕ್ಕೆ ಸಚಿವ ನರೇಂದ್ರಸ್ವಾಮಿ ಚಾಲನೆ ಮಳವಳ್ಳಿ ; ಕಳೆದ 45 ವರ್ಷಗ ಳಿಂದ ನೆನೆಗುದಿಗೆ ಬಿದ್ದಿದ್ದ ಪಟ್ಟ ಣದ ಶಾಂತಿ ಕಾಲೇಜು ಮುಂಭಾ ಗದ 33 ಎಕರೆ ನಿವೇಶನ ಹಂಚಿಕೆ ಕಾರ್ಯಕ್ಕೆ ಮುಕ್ತಿ ದೊರಕಿದ್ದು ನಿವೇಶನ ಹಂಚಿಕೆ ಕಾರ್ಯಕ್ಕೆ ಕೃಷಿ ಸಚಿವರೂ ಅದ ಶಾಸಕ ಪಿ ಎಂ ನರೇಂದ್ರಸ್ವಾಮಿ ವಿದ್ಯುಕ್ತ ಚಾಲನೆ ನೀಡಿದರು. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ನಿವೇಶನ ಆವರಣದಲ್ಲಿ ಮಂಗಳವಾರ ಸಾಯಂಕಾಲ 5.30 ರ ಸಮಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಲಾಟರಿ ಮೂಲಕ ಫಲಾನುಭವಿಗಳ ಸೈಟ್ ಸಂಖ್ಯೆಯನ್ನು ಅವರೇ ಆಯ್ಕೆ ಮಾಡಿಕೊಳ್ಳುವ ಸಚಿವ ನರೇಂದ್ರಸ್ವಾಮಿ ನಿವೇಶನ ಹಂಚಿಕೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಕಳೆದ 45 ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಗುಂಡುರಾವ್ ಅವರ ಕಾಲದಲ್ಲಿ ಭೂಸ್ವಾಧೀನ ವಾಗಿದ್ದ ಈ ನಿವೇಶನ ಜಮೀನಿನ ಮಾಲೀಕರು ಹಾಗೂ ಪುರಸಭೆ ನಡುವಿನ ವ್ಯಾಜ್ಯ ಹೈಕೋಟ್೯ ಮೆಟ್ಟಲೇ ರಿದ ಪರಿಣಾಮ ಅಂದಿನಿಂ ದಲೂ ನೆನೆಗುದಿಗೆ ಬಿದ್ದಿತ್ತಾ ದರೂ ತಾವು 2 ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ವೇಳೆ ಈ ಹಂಚಿಕೆ ಕಾರ್ಯಕ್ಕೆ ಚಾಲನೆ ನೀಡಿದ್ದಾಗಿ ತಿಳಿಸಿದರು. ಅಂದು ಜಮೀನಿನ ಮಾಲೀಕರ ಜೊತೆ ಚೆರ್ಚೆ ನಡೆಸಿ ವಿವಾದ ಬಗೆಹರಿಸಿದ್ದರ ಜೊತೆಗೆ ನ್ಯಾಯಾಲಯದ ತಡೆಯಾಜ್ಞೆ ತೆರೆವು ಗೊಳಿಸಿ ಜನರಿಗೆ ನೀಡಿದ ಭರವಸೆಯಂತೆ ಇದೀಗ ನಿವೇಶ ನಗಳ ಹಂಚಿಕೆಗೆ ಇಂದು ಚಾಲನೆ ನೀಡುತ್ತಿರುವುದಾಗಿ ಹೇಳಿದರು. ಇಂದು ಸೈಟ್ ನಂಬರ್ ಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದ್ದು ಸಧ್ಯದಲ್ಲಿ ಮುಖ್ಯಮಂತ್ರಿಗಳಿಂದ ಹಕ್ಕು ಪತ್ರ ವಿತರಿಸುವುದಾಗಿ ತಿಳಿಸಿದ ಅವರು ನಿವೇಶ ಹಂಚಿಕೆ ವಿಚಾರದಲ್ಲಿ ಹಿಂದಿನವರಂತೆ ರಾಜಕಾರಣ ಮಾಡದೆ ಬಡ ಪಲಾನುಭವಿಗಳಿಗೆ ಪ್ರಾಮಾಣಿ ಕವಾಗಿ ನಿವೇಶನ ದೊರಕಿಸಿ ಕೊಡುತ್ತಿರುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ 45 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ನಿವೇಶನ ಹಂಚಿಕೆ ಯನ್ನು ಪಾರದರ್ಶಕವಾಗಿ ನಡೆಸುತ್ತಿರುವ ಸಚಿವ ಪಿ ಎಂ ನರೇಂದ್ರಸ್ವಾಮಿ ಅವರ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಜಿ ಪಂ ಸಿಇಒ ನಂದಿನಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ , ನಗರಾಭಿವೃದ್ದಿ ಇಲಾಖೆ ಯೋಜನಾಧಿಕಾರಿ ಚಂದ್ರ ಶೇಖರ್. ಮುಖ್ಯಾಧಿ ಕಾರಿ ನಾಗರತ್ನ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿ ದ್ದರು.1
- ಗೌರಿ ಗಣೇಶ ಹಬ್ಬಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ: ಕೃಷಿ ಸಚಿವ ನರೇಂದ್ರಸ್ವಾಮಿ ಗೌರಿ ಗಣೇಶ ಹಬ್ಬ ಅಂಗವಾಗಿ ನಿಮ್ಮೆಲ್ಲರಿಗೂ ಕೊಡುಗೆಯಾಗಿ ನಿವೇಶನ ನೀಡುತ್ತಿದ್ದೇವೆ ಎಂದು ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದರು. ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನದ ಆವರಣದಲ್ಲಿ ನಗರಾಭಿವೃದ್ದಿ ಇಲಾಖೆ , ರಾಜೀವ್ ಗಾಂಧಿ ವಸತಿ ನಿಗಮ , ಜಿಲ್ಲಾಢಳಿತ, ಪುರಸಭೆ ವತಿಯಿಂದ ಆರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜಕೀಯ ವಿರೋಧವಿದ್ದರೂ ನಾನು ಅಂಜದೆ ಛಲ ಬಿಡದೆ ನಿವೇಶನ ಹಂಚಿಕೆ ಮಾಡುತ್ತಿದ್ದೇನೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು ಇದೇ ನಿವೇಶನಕ್ಕೆ ಕರೆಸಿ ವಿವಿಧ ಕಾಮಗಾರಿಗಳ ಜೊತೆಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು. ಈ ವೇಳೆ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಸೇರಿದಂತೆ ಹಲವರು ಇದ್ದರು.1
- ರಾಜಕಾರಣ ಮಾಡಲು ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿದ್ದಾರೆ - ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ಮಂಡ್ಯ-ಮದ್ದೂರಿನಲ್ಲಿ ನಡೆಯುತ್ತಿರುವ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸುತ್ತಿರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಉಸ್ತುವಾರಿ ಸಚಿವ ಚಲುವಾರಾಯಸ್ವಾಮಿ, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಬಾರದ ಬಿಜೆಪಿ ನಾಯಕರು, ಗಣೇಶ ವಿಸರ್ಜನೆ ನೆಪದಲ್ಲಿ ರಾಜಕಾರಣ ಮಾಡಲು ಮಂಡ್ಯಕ್ಕೆ ಬರುತ್ತಿದ್ದಾರೆ ಬರುತ್ತಿದ್ದಾರೆ. ನಮ್ಮ ಜಿಲ್ಲೆಯ ಜನರಿಗೆ ಗಣೇಶನನ್ನು ಹೇಗೆ ವಿಸರ್ಜಿಸಬೇಕು ಎಂಬುದು ಗೊತ್ತಿದೆ, ಬಿಜೆಪಿಯವರಿಂದ ಕಲಿಯ ಬೇಕಿಲ್ಲ ರಾಜಕೀಯವಾಗಿ ಮಾತನಾಡಲು ಬೇರೆ ವಿಷಯವಿಲ್ಲದ ಕಾರಣ ಬಿಜೆಪಿ ಇಲ್ಲಿ ರಾಜಕೀಯ ಮಾಡಲು ಬರುತ್ತಿದೆ, ಅವರು ಜಿಲ್ಲೆ ಪ್ರವೇಶಿಸದಂತೆ ಪೊಲೀಸ್ ಭದ್ರತೆ ಒದಗಿಸಿ ವಾಪಸ್ ಕಳುಹಿಸಲಾಗುವುದು ಎಂದುಚಲುವರಾಯಸ್ವಾಮಿ ಗಣೇಶ ವಿಸರ್ಜನೆಗೆ ಬರುತ್ತಿರುವ ಬಾಜಪಾ ನಾಯಕರಿಗೆ ಎಚ್ಚರಿಕೆ ನೀಡಿದರು.1
- ಕುಮಾರಸ್ವಾಮಿ ಏನಾದರೂ ಮಾತನಾಡಲಿ, ಏನು ಬೇಕಾದರೂ ಬಿಡುಗಡೆ ಮಾಡಲಿ: ಸಿಎಂ ಡಿ ಕೆ ಶಿವಕುಮಾರ್ #ವಿಧಾನಸೌಧ ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು. ಬೆಂಗಳೂರು:ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಅವರು ಮಂಗಳವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.1
- ವಂದೇ ಮಾತರಂ ಎರಡೇ ಚರಣ ಹಾಡಿದಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ| Veega News Kannada ವಂದೇ ಮಾತರಂ ಎರಡೇ ಚರಣ ಹಾಡಿದಕ್ಕೆ ಶಾಸಕ ಚನ್ನಬಸಪ್ಪ ಆಕ್ರೋಶ1
- ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಹೆಚ್.ಸಿ.ಬಾಲಕೃಷ್ಣ ನಗರದ ಜಿಲ್ಲಾ ಪಂಚಾಯತ್ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಪೌರಾಢಳಿತ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಚ್.ಸಿ.ಬಾಲಕೃಷ್ಣ ಉದ್ಘಾಟನೆ ನೇರವೇರಿಸಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು , ನಮ್ಮ ಯುವ ಜನಾಂಗ ಸಂಸತ್ತು ಹಾಗೂ ವಿಧಾನ ಸಭೆ ಕಲಾಪಗಳಲ್ಲಿ ಯಾವ ರೀತಿ ಚರ್ಚೆ ಮಾಡಬೇಕು, ಯಾವ ರೀತಿ ಪಾಲ್ರ್ಗೊಳ್ಳಬೇಕು ಹಾಗೂ ರಾಷ್ಟ್ರೀಯ ಸಮಸ್ಯೆಗಳನ್ನು ಯಾವ ರೀತಿ ಪ್ರಸ್ತಾಪ ಮಾಡಬೇಕು ಎಂಬುದರ ಅರಿವು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಇನ್ನೂ ತಿಂಗಳ ಕಾಲಾವಕಾಶದಲ್ಲಿ ಪ್ರತಿ ತಾಲ್ಲೂಕು ಮಟ್ಟದಲ್ಲಿ ಮಕ್ಕಳ ಸಂಸತ್ತ ಕಾರ್ಯಕ್ರಮ ಅಯೋಜಿಸಿ ನಂತರ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸರ್ಕಾರ ಆದೇಶ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಬಾಲಕೃಷ್ಣ, ರಾಮನಗರ ಶಾಸಕ ಹೆಚ್.ಎ.ಇಕ್ಬಾಲ್ ಹುಸೇನ್, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕಾರ್, ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಮಕ್ಕಳು ಪಾಲ್ಗೊಂಡಿದ್ದರು1