logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದಕ್ಷಿಣ ಕನ್ನಡ ಜಿಲ್ಲೆಯ ಕೆಮ್ಮಾರದಲ್ಲಿ ಪಲ್ಟಿಯಾಗಿ ಬಿದ್ದ ಜೀಪು; ಅಪಾಯದಿಂದ ವ್ಯಕ್ತಿ ಪಾರು ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೆಮ್ಮಾರದಲ್ಲಿ ಜೀಪು ಪಲ್ಟಿಯಾಗಿ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಜೀಪು ಚಾಲಕ ದೇವಿಪ್ರಸಾದ್ ಗಾಯಗೊಂಡವರಾಗಿದ್ದಾರೆ. ಇವರು ಉಪ್ಪಿನಂಗಡಿಯಿಂದ ಕೊಯಿಲ ಕಡೆಗೆ ಬರುತ್ತಿದ್ದ ವೇಳೆ ಕೆಮ್ಮಾರದಲ್ಲಿ ನಿಯಂತ್ರಣ ತಪ್ಫಿ ರಸ್ತೆ ಬದಿಯ ಗುಂಡಿಗೆ ಬಿದ್ದಿದೆ ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಸ್ಥಳೀಯ ಯುವಕರಾದ ಹನೀಫ್ ಅಳಕೆ, ನವಾಝ್, ಝುಬೈರ್ ಹಾಗೂ ಹಬೀಬ್‌ರವರು ಗಾಯಾಳುವನ್ನು ಮೇಲೆತ್ತಿ, ಹನೀಫ್‌ರವರ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ದೇವಿಪ್ರಸಾದ್‌ರವರು ಉಪ್ಪಿನಂಗಡಿ ಸೂರ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

19 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
19 hrs ago

ದಕ್ಷಿಣ ಕನ್ನಡ ಜಿಲ್ಲೆಯ ಕೆಮ್ಮಾರದಲ್ಲಿ ಪಲ್ಟಿಯಾಗಿ ಬಿದ್ದ ಜೀಪು; ಅಪಾಯದಿಂದ ವ್ಯಕ್ತಿ ಪಾರು ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೆಮ್ಮಾರದಲ್ಲಿ ಜೀಪು ಪಲ್ಟಿಯಾಗಿ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಜೀಪು ಚಾಲಕ ದೇವಿಪ್ರಸಾದ್ ಗಾಯಗೊಂಡವರಾಗಿದ್ದಾರೆ. ಇವರು ಉಪ್ಪಿನಂಗಡಿಯಿಂದ ಕೊಯಿಲ ಕಡೆಗೆ ಬರುತ್ತಿದ್ದ ವೇಳೆ ಕೆಮ್ಮಾರದಲ್ಲಿ ನಿಯಂತ್ರಣ ತಪ್ಫಿ ರಸ್ತೆ ಬದಿಯ ಗುಂಡಿಗೆ ಬಿದ್ದಿದೆ ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಸ್ಥಳೀಯ ಯುವಕರಾದ ಹನೀಫ್ ಅಳಕೆ, ನವಾಝ್, ಝುಬೈರ್ ಹಾಗೂ ಹಬೀಬ್‌ರವರು ಗಾಯಾಳುವನ್ನು ಮೇಲೆತ್ತಿ, ಹನೀಫ್‌ರವರ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ದೇವಿಪ್ರಸಾದ್‌ರವರು ಉಪ್ಪಿನಂಗಡಿ ಸೂರ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

More news from ಕರ್ನಾಟಕ and nearby areas
  • ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೆಮ್ಮಾರದಲ್ಲಿ ಜೀಪು ಪಲ್ಟಿಯಾಗಿ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಜೀಪು ಚಾಲಕ ದೇವಿಪ್ರಸಾದ್ ಗಾಯಗೊಂಡವರಾಗಿದ್ದಾರೆ. ಇವರು ಉಪ್ಪಿನಂಗಡಿಯಿಂದ ಕೊಯಿಲ ಕಡೆಗೆ ಬರುತ್ತಿದ್ದ ವೇಳೆ ಕೆಮ್ಮಾರದಲ್ಲಿ ನಿಯಂತ್ರಣ ತಪ್ಫಿ ರಸ್ತೆ ಬದಿಯ ಗುಂಡಿಗೆ ಬಿದ್ದಿದೆ ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಸ್ಥಳೀಯ ಯುವಕರಾದ ಹನೀಫ್ ಅಳಕೆ, ನವಾಝ್, ಝುಬೈರ್ ಹಾಗೂ ಹಬೀಬ್‌ರವರು ಗಾಯಾಳುವನ್ನು ಮೇಲೆತ್ತಿ, ಹನೀಫ್‌ರವರ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ದೇವಿಪ್ರಸಾದ್‌ರವರು ಉಪ್ಪಿನಂಗಡಿ ಸೂರ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    1
    ಕಡಬ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೆಮ್ಮಾರದಲ್ಲಿ ಜೀಪು ಪಲ್ಟಿಯಾಗಿ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಜೀಪು ಚಾಲಕ ದೇವಿಪ್ರಸಾದ್ ಗಾಯಗೊಂಡವರಾಗಿದ್ದಾರೆ. ಇವರು ಉಪ್ಪಿನಂಗಡಿಯಿಂದ ಕೊಯಿಲ ಕಡೆಗೆ ಬರುತ್ತಿದ್ದ ವೇಳೆ ಕೆಮ್ಮಾರದಲ್ಲಿ ನಿಯಂತ್ರಣ ತಪ್ಫಿ ರಸ್ತೆ ಬದಿಯ ಗುಂಡಿಗೆ ಬಿದ್ದಿದೆ ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಸ್ಥಳೀಯ ಯುವಕರಾದ ಹನೀಫ್ ಅಳಕೆ, ನವಾಝ್, ಝುಬೈರ್ ಹಾಗೂ ಹಬೀಬ್‌ರವರು ಗಾಯಾಳುವನ್ನು ಮೇಲೆತ್ತಿ, ಹನೀಫ್‌ರವರ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ದೇವಿಪ್ರಸಾದ್‌ರವರು ಉಪ್ಪಿನಂಗಡಿ ಸೂರ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    19 hrs ago
  • Post by Dr CP Patel 8302083835 आयुष हॉस्पिटल
    1
    Post by Dr CP Patel 8302083835 आयुष हॉस्पिटल
    user_Dr CP Patel 8302083835 आयुष हॉस्पिटल
    Dr CP Patel 8302083835 आयुष हॉस्पिटल
    Doctor Shivamogga, Karnataka•
    7 hrs ago
  • ಶಿವಮೊಗ್ಗ: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮಹಾಸಭಾ ಜಿಲ್ಲಾ ಸಮಿತಿ ಹಾಗೂ ಜಿಲ್ಲೆಯ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮ ವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡ ಲಾಯಿತು. ಒಳ ಮೀಸಲಾತಿ ಜಾರಿಗೊಳಿ ಸದೇ ಸರ್ಕಾರ ಮುಂದುವರಿದರೆ ರಾಜ್ಯಾ ದ್ಯಂತ ಉಗ್ರ ಹೋರಾಟ ನಡೆಸಲಾಗು ವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನೆ ಬಳಿಕ ಪ್ರತಿಭಟನಾಕಾ ರರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಂಘಟನೆ ಗಳ ಮುಖಂಡರು, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಯನ್ನು ಜಾರಿಗೆ ತರುವುದು ಸರ್ಕಾರದ ಚುನಾವಣಾ ಪ್ರಣಾಳಿಕೆ ಯಲ್ಲಿ ನೀಡಿದ ಪ್ರಮುಖ ಭರವಸೆ ಯಾಗಿತ್ತು. ಆದರೆ ಸರ್ಕಾರ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಳ್ಳದೆ ಕಾಲಹರಣ ಮಾಡುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾದಿಗ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ತಲತಲಾಂತರಗಳಿಂದ ಅನ್ಯಾಯ ಮತ್ತು ಶೋಷಣೆಗೆ ಒಳಗಾಗಿದ್ದು, ಸಮುದಾಯದ ಜನಸಂಖ್ಯೆಗೆ ಅನುಗುಣ ವಾಗಿ ಒಳ ಮೀಸಲಾತಿ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಕಳೆದ 35 ವರ್ಷಗಳಿಂದ ಹೋರಾಟದ ಮೂಲಕ ಮುಂದಿಟ್ಟು ಕೊಂಡು ಬಂದಿದೆ. ಈ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಕೂಡ ಮಾನ್ಯತೆ ನೀಡಿದ್ದು, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂಬ ಐತಿಹಾಸಿಕ ತೀರ್ಪನ್ನು 2024ರ ಆಗಸ್ಟ್ 1 ರಂದು ನೀಡಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಆದರೆ ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರವೂ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ವಿಷಯದಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರದೆ ಮೀನಾಮೇಷ ಎಣಿಸುತ್ತಿ ರುವುದು ಸಾಮಾಜಿಕ ನ್ಯಾಯದ ಪರವಾಗಿ ಹೋರಾಡುತ್ತಿರುವ ಸಮುದಾಯಗಳಿಗೆ ದೊಡ್ಡ ನಿರಾಶೆ ಯನ್ನುಂಟು ಮಾಡಿದೆ ಎಂದು ಮುಖಂಡರು ದೂರಿದರು. ಜಸ್ಟೀಸ್ ನಾಗಮೋಹನ್ ದಾಸ್ ಅವರ ವರದಿಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ಸ್ಪಷ್ಟ ಶಿಫಾರಸುಗಳು ನೀಡಲಾಗಿದೆ. ಶೇ.17ರಷ್ಟು ಮೀಸಲಾತಿ ಸಂಬಂಧಿಸಿದ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಇರುವುದನ್ನು ಉಲ್ಲೇಖಿಸಿದರೂ, ಈಗಿರುವ ಶೇ.15ರಷ್ಟು ಮೀಸಲಾತಿ ಯಲ್ಲಿಯೇ ಒಳ ಮೀಸಲಾತಿ ಜಾರಿಗೆ ಯಾವುದೇ ಕಾನೂನು ಅಡ್ಡಿಯಿಲ್ಲ ಎಂದು ರಾಜ್ಯದ ಅಡ್ವಕೇಟ್ ಜನರಲ್ ಕೂಡ ಸ್ಪಷ್ಟಪಡಿಸಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು. ಇಂತಹ ಪರಿಸ್ಥಿತಿಯಲ್ಲಿಯೇ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಗೊಳಿಸದೇ ಸುಮಾರು 56,342 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಮುಂದಾಗಿ ರುವುದು ಪರಿಶಿಷ್ಟ ಜಾತಿಗಳಲ್ಲಿನ ಅಸ್ಪೃಶ್ಯ ಸಮುದಾಯಗಳ ಪಾಲಿಗೆ ಮರಣ ಶಾಸನದಂತಾಗಿದೆ ಎಂದು ಅವರು ಆರೋಪಿಸಿದರು. ಒಳ ಮೀಸಲಾತಿ ಇಲ್ಲದ ಮೀಸಲಾತಿ ವ್ಯರ್ಥವಾಗುತ್ತದೆ ಮತ್ತು ಅದು ಘೋರ ಸಾಮಾಜಿಕ ಅನ್ಯಾಯ ವಾಗುತ್ತದೆ ಎಂದು ಪ್ರತಿಭಟನಾ ಕಾರರು ಹೇಳಿದರು. ಈ ಹಿನ್ನೆಲೆಯಲ್ಲಿ ಮಾ: 27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ಸ್ಪಷ್ಟ ನಿರ್ಧಾರ ಕೈಗೊಳ್ಳ ಬೇಕು. ಯಾವುದೇ ಉಪಸಮಿತಿ ಅಥವಾ ಹೊಸ ಸಮಿತಿ ರಚಿಸುವ ಅವಶ್ಯಕತೆ ಇಲ್ಲ, ಏಕೆಂದರೆ ಜಸ್ಟೀಸ್ ನಾಗಮೋಹನ್ ದಾಸ್ ವರದಿಯಲ್ಲಿ ಎಲ್ಲ ವಿಷಯಗಳು ಸ್ಪಷ್ಟವಾಗಿ ಉಲ್ಲೇಖಗೊಂಡಿವೆ ಎಂದು ಮುಖಂಡರು ಒತ್ತಾಯಿಸಿದರು. ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ತೀರ್ಮಾನ ಕೈಗೊಂಡು, ಒಳ ಮೀಸಲಾತಿಯ ಅನ್ವಯವೇ 56,342 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಇಲ್ಲವಾದರೆ ಮಾದಿಗ ಮಹಾಸಭಾ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟಗಳು ರಾಜ್ಯಾದ್ಯಂತ ತೀವ್ರ ಉಗ್ರ ಹೋರಾಟ ನಡೆಸಲು ತಯಾರಾಗಿವೆ ಎಂದು ಅವರು ಎಚ್ಚರಿಸಿದರು. ಪ್ರತಿಭಟನೆ ಸಂದರ್ಭದಲ್ಲಿ ಕೆಲ ಹೋರಾಟ ಗಾರರು ಜಿಲ್ಲಾಧಿಕಾರಿ ಕಚೇರಿಯ ಒಳಗೆ ನುಗ್ಗಲು ಪ್ರಯತ್ನಿಸಿದರು.ಆದರೆ ಪೊಲೀಸರು ತಕ್ಷಣವೇ ಅವರನ್ನು ತಡೆದು ಪರಿಸ್ಥಿತಿಯನ್ನು ನಿಯಂತ್ರಿ ಸಿದರು. ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದರೂ ನಂತರ ಪರಿಸ್ಥಿತಿ ಶಾಂತಗೊಂಡಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಚ್. ಶಿವಾಜಿ, ಉಪಾಧ್ಯಕ್ಷ ರಮೇಶ್ ಇ,ಪ್ರಧಾನ ಕಾರ್ಯದರ್ಶಿ ತೇಜಸ್ ಆರ್, ಖಜಾಂಚಿ ಎಂ. ಶಿವಲಿಂಗಪ್ಪ, ಜಿಲ್ಲಾ ಮುಖಂಡ ತಿಮ್ಲಾಪುರ ಲೋಕೇಶಪ್ಪ, ಮಾಜಿ ನಗರಸಭಾ ಸದಸ್ಯ ಆರ್. ಶಿವಣ್ಣ, ಡಿಎಸ್ ಎಸ್ ಸಂಚಾಲಕ ಚಿನ್ನಯ್ಯ, ಸಮಾಜದ ಪ್ರಮುಖರಾದ ಮಂಜುನಾಥ ಎಸ್, ಸೂಲಯ್ಯ, ಅಣ್ಣಪ್ಪ ಪಿ, ಟಿ.ಹೆಚ್. ಹಾಲೇಶಪ್ಪ, ಅಣ್ಣಪ್ಪ ಎ.ಕೆ, ಹೆಚ್.ಎನ್. ಪ್ರಭು, ಮಂಜಪ್ಪ ಬೀರನಕೆರೆ, ನಗರಾಧ್ಯಕ್ಷ ಅಣ್ಣಪ್ಪ ಕೆ, ಶಿಕಾರಿಪುರ ಅಧ್ಯಕ್ಷ ಮುಗಳಗೆರೆ ಬಸವರಾಜ್, ಗ್ರಾಮಾಂತರ ಅಧ್ಯಕ್ಷ ನೀಲಪ್ಪ, ರಘು, ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ನಾಗರಾಜ್, ಭದ್ರಾವತಿ ತಾಲೂಕು ಅಧ್ಯಕ್ಷ ಮೈಲಾರಪ್ಪ, ಸೊರಬ ತಾಲೂಕು ಅಧ್ಯಕ್ಷ ಗಿಡ್ಡಪ್ಪ, ಯುವ ಘಟಕ ಜಿಲ್ಲಾಧ್ಯಕ್ಷ ನಿಖಿಲ್ ಮೂರ್ತಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಕೆಂಪಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    1
    ಶಿವಮೊಗ್ಗ: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮಹಾಸಭಾ ಜಿಲ್ಲಾ ಸಮಿತಿ ಹಾಗೂ  ಜಿಲ್ಲೆಯ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮ ವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡ ಲಾಯಿತು. ಒಳ ಮೀಸಲಾತಿ ಜಾರಿಗೊಳಿ ಸದೇ ಸರ್ಕಾರ ಮುಂದುವರಿದರೆ ರಾಜ್ಯಾ ದ್ಯಂತ ಉಗ್ರ ಹೋರಾಟ ನಡೆಸಲಾಗು ವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಪ್ರತಿಭಟನೆ ಬಳಿಕ ಪ್ರತಿಭಟನಾಕಾ ರರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಂಘಟನೆ ಗಳ ಮುಖಂಡರು, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಯನ್ನು ಜಾರಿಗೆ ತರುವುದು ಸರ್ಕಾರದ ಚುನಾವಣಾ ಪ್ರಣಾಳಿಕೆ ಯಲ್ಲಿ ನೀಡಿದ ಪ್ರಮುಖ ಭರವಸೆ ಯಾಗಿತ್ತು. ಆದರೆ ಸರ್ಕಾರ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಳ್ಳದೆ ಕಾಲಹರಣ ಮಾಡುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾದಿಗ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ತಲತಲಾಂತರಗಳಿಂದ ಅನ್ಯಾಯ ಮತ್ತು ಶೋಷಣೆಗೆ ಒಳಗಾಗಿದ್ದು, ಸಮುದಾಯದ ಜನಸಂಖ್ಯೆಗೆ ಅನುಗುಣ ವಾಗಿ ಒಳ ಮೀಸಲಾತಿ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಕಳೆದ 35 ವರ್ಷಗಳಿಂದ ಹೋರಾಟದ ಮೂಲಕ ಮುಂದಿಟ್ಟು ಕೊಂಡು ಬಂದಿದೆ. ಈ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಕೂಡ ಮಾನ್ಯತೆ ನೀಡಿದ್ದು, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂಬ ಐತಿಹಾಸಿಕ ತೀರ್ಪನ್ನು 2024ರ ಆಗಸ್ಟ್ 1 ರಂದು ನೀಡಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಆದರೆ ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರವೂ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ವಿಷಯದಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರದೆ ಮೀನಾಮೇಷ ಎಣಿಸುತ್ತಿ ರುವುದು ಸಾಮಾಜಿಕ ನ್ಯಾಯದ ಪರವಾಗಿ ಹೋರಾಡುತ್ತಿರುವ ಸಮುದಾಯಗಳಿಗೆ ದೊಡ್ಡ ನಿರಾಶೆ ಯನ್ನುಂಟು ಮಾಡಿದೆ ಎಂದು ಮುಖಂಡರು ದೂರಿದರು.
ಜಸ್ಟೀಸ್ ನಾಗಮೋಹನ್ ದಾಸ್ ಅವರ ವರದಿಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ಸ್ಪಷ್ಟ ಶಿಫಾರಸುಗಳು ನೀಡಲಾಗಿದೆ. ಶೇ.17ರಷ್ಟು ಮೀಸಲಾತಿ ಸಂಬಂಧಿಸಿದ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಇರುವುದನ್ನು ಉಲ್ಲೇಖಿಸಿದರೂ, ಈಗಿರುವ ಶೇ.15ರಷ್ಟು ಮೀಸಲಾತಿ ಯಲ್ಲಿಯೇ ಒಳ ಮೀಸಲಾತಿ ಜಾರಿಗೆ ಯಾವುದೇ ಕಾನೂನು ಅಡ್ಡಿಯಿಲ್ಲ ಎಂದು ರಾಜ್ಯದ ಅಡ್ವಕೇಟ್ ಜನರಲ್ ಕೂಡ ಸ್ಪಷ್ಟಪಡಿಸಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಇಂತಹ ಪರಿಸ್ಥಿತಿಯಲ್ಲಿಯೇ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಗೊಳಿಸದೇ ಸುಮಾರು 56,342 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಮುಂದಾಗಿ ರುವುದು ಪರಿಶಿಷ್ಟ ಜಾತಿಗಳಲ್ಲಿನ ಅಸ್ಪೃಶ್ಯ ಸಮುದಾಯಗಳ ಪಾಲಿಗೆ ಮರಣ ಶಾಸನದಂತಾಗಿದೆ ಎಂದು ಅವರು ಆರೋಪಿಸಿದರು. ಒಳ ಮೀಸಲಾತಿ ಇಲ್ಲದ ಮೀಸಲಾತಿ ವ್ಯರ್ಥವಾಗುತ್ತದೆ ಮತ್ತು ಅದು ಘೋರ ಸಾಮಾಜಿಕ ಅನ್ಯಾಯ ವಾಗುತ್ತದೆ ಎಂದು ಪ್ರತಿಭಟನಾ ಕಾರರು ಹೇಳಿದರು.
ಈ ಹಿನ್ನೆಲೆಯಲ್ಲಿ ಮಾ: 27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ಸ್ಪಷ್ಟ ನಿರ್ಧಾರ ಕೈಗೊಳ್ಳ ಬೇಕು. ಯಾವುದೇ ಉಪಸಮಿತಿ ಅಥವಾ ಹೊಸ ಸಮಿತಿ ರಚಿಸುವ ಅವಶ್ಯಕತೆ ಇಲ್ಲ, ಏಕೆಂದರೆ ಜಸ್ಟೀಸ್ ನಾಗಮೋಹನ್ ದಾಸ್ ವರದಿಯಲ್ಲಿ ಎಲ್ಲ ವಿಷಯಗಳು ಸ್ಪಷ್ಟವಾಗಿ ಉಲ್ಲೇಖಗೊಂಡಿವೆ ಎಂದು ಮುಖಂಡರು ಒತ್ತಾಯಿಸಿದರು.
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ತೀರ್ಮಾನ ಕೈಗೊಂಡು, ಒಳ ಮೀಸಲಾತಿಯ ಅನ್ವಯವೇ 56,342 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು. ಇಲ್ಲವಾದರೆ ಮಾದಿಗ ಮಹಾಸಭಾ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟಗಳು ರಾಜ್ಯಾದ್ಯಂತ ತೀವ್ರ ಉಗ್ರ ಹೋರಾಟ ನಡೆಸಲು ತಯಾರಾಗಿವೆ ಎಂದು ಅವರು ಎಚ್ಚರಿಸಿದರು.
ಪ್ರತಿಭಟನೆ ಸಂದರ್ಭದಲ್ಲಿ ಕೆಲ ಹೋರಾಟ ಗಾರರು ಜಿಲ್ಲಾಧಿಕಾರಿ ಕಚೇರಿಯ ಒಳಗೆ ನುಗ್ಗಲು ಪ್ರಯತ್ನಿಸಿದರು.ಆದರೆ ಪೊಲೀಸರು ತಕ್ಷಣವೇ ಅವರನ್ನು ತಡೆದು ಪರಿಸ್ಥಿತಿಯನ್ನು ನಿಯಂತ್ರಿ ಸಿದರು. ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದರೂ ನಂತರ ಪರಿಸ್ಥಿತಿ ಶಾಂತಗೊಂಡಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಚ್. ಶಿವಾಜಿ, ಉಪಾಧ್ಯಕ್ಷ ರಮೇಶ್ ಇ,ಪ್ರಧಾನ ಕಾರ್ಯದರ್ಶಿ ತೇಜಸ್ ಆರ್, ಖಜಾಂಚಿ ಎಂ. ಶಿವಲಿಂಗಪ್ಪ, ಜಿಲ್ಲಾ ಮುಖಂಡ ತಿಮ್ಲಾಪುರ ಲೋಕೇಶಪ್ಪ, ಮಾಜಿ ನಗರಸಭಾ ಸದಸ್ಯ ಆರ್. ಶಿವಣ್ಣ, ಡಿಎಸ್ ಎಸ್ ಸಂಚಾಲಕ ಚಿನ್ನಯ್ಯ, ಸಮಾಜದ ಪ್ರಮುಖರಾದ ಮಂಜುನಾಥ ಎಸ್, ಸೂಲಯ್ಯ, ಅಣ್ಣಪ್ಪ ಪಿ, ಟಿ.ಹೆಚ್. ಹಾಲೇಶಪ್ಪ, ಅಣ್ಣಪ್ಪ ಎ.ಕೆ, ಹೆಚ್.ಎನ್. ಪ್ರಭು, ಮಂಜಪ್ಪ ಬೀರನಕೆರೆ, ನಗರಾಧ್ಯಕ್ಷ ಅಣ್ಣಪ್ಪ ಕೆ, ಶಿಕಾರಿಪುರ ಅಧ್ಯಕ್ಷ ಮುಗಳಗೆರೆ ಬಸವರಾಜ್, ಗ್ರಾಮಾಂತರ ಅಧ್ಯಕ್ಷ ನೀಲಪ್ಪ, ರಘು, ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ನಾಗರಾಜ್, ಭದ್ರಾವತಿ ತಾಲೂಕು ಅಧ್ಯಕ್ಷ ಮೈಲಾರಪ್ಪ, ಸೊರಬ ತಾಲೂಕು ಅಧ್ಯಕ್ಷ ಗಿಡ್ಡಪ್ಪ, ಯುವ ಘಟಕ ಜಿಲ್ಲಾಧ್ಯಕ್ಷ ನಿಖಿಲ್ ಮೂರ್ತಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಕೆಂಪಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    22 hrs ago
  • ಸೊರಬ ತಾಲ್ಲೂಕು ಶಾಂತಪುರ ಮಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಹಾಗೂ ರಂಬಾಪುರಿ ಪೀಠದ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ|| ವೀರ ಸೋಮೇಶ್ವರ ಶಿವಾಚಾರ್ಯ ಮಹಾ ಭಗವದ್ಪಾದಂಗಳವರ ಇಷ್ಟಲಿಂಗ ಪೂಜಾ ನಿಮಿತ್ಯ ಶ್ರೀ ಜಗದ್ಗುರು ಪಂಚಾಚಾರ್ಯರ ಧ್ವಜಾರೋಹಣ ಕಾರ್ಯಕ್ರಮವು ನೆರವೇರಿತು ಧ್ವಜಾರೋಹಣವನ್ನು ಷ ಬ್ರ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಶಾಂತಪುರ ಮಠ ನೆರೆವೇರಿಸಿದರು ಸಂಗೊಳ್ಳಿ ಶ್ರೀಗಳು. ಹಾರನಹಳ್ಳಿ ಶ್ರೀಗಳು. ಕುರುವತ್ತಿ ಶ್ರೀಗಳು. ಉಪಸ್ಥಿತರಿದ್ದರು ಸುತ್ತಮುತ್ತಲಿನ ಗ್ರಾಮದ ಸದ್ಭಕ್ತರು ಭಾಗಿಯಾಗಿದ್ದರು ದಿನಾಂಕ 17-03-2026ನೇ ಮಂಗಳವಾರ ಬೆಳಿಗ್ಗೆ 9 ಕ್ಕೆ ಜಗದ್ಗುರುಗಳವರ ಸಾಮೂಹಿಕ ಇಷ್ಟ ಲಿಂಗಪೂಜಾ ಕಾರ್ಯಕ್ರಮವು ನೆರವೇರುವುದು ಸದ್ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಜಗದ್ಗುರುಗಳವರ ಕೃಪ ಆಶೀರ್ವಾದ ಪಡೆದುಕೊಳ್ಳಬಹುದು
    1
    ಸೊರಬ ತಾಲ್ಲೂಕು ಶಾಂತಪುರ ಮಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ   ಹಾಗೂ ರಂಬಾಪುರಿ ಪೀಠದ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ|| ವೀರ ಸೋಮೇಶ್ವರ ಶಿವಾಚಾರ್ಯ ಮಹಾ ಭಗವದ್ಪಾದಂಗಳವರ ಇಷ್ಟಲಿಂಗ ಪೂಜಾ ನಿಮಿತ್ಯ ಶ್ರೀ ಜಗದ್ಗುರು ಪಂಚಾಚಾರ್ಯರ ಧ್ವಜಾರೋಹಣ ಕಾರ್ಯಕ್ರಮವು ನೆರವೇರಿತು ಧ್ವಜಾರೋಹಣವನ್ನು ಷ ಬ್ರ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಶಾಂತಪುರ ಮಠ ನೆರೆವೇರಿಸಿದರು ಸಂಗೊಳ್ಳಿ ಶ್ರೀಗಳು. ಹಾರನಹಳ್ಳಿ ಶ್ರೀಗಳು. ಕುರುವತ್ತಿ ಶ್ರೀಗಳು. ಉಪಸ್ಥಿತರಿದ್ದರು ಸುತ್ತಮುತ್ತಲಿನ ಗ್ರಾಮದ ಸದ್ಭಕ್ತರು ಭಾಗಿಯಾಗಿದ್ದರು ದಿನಾಂಕ 17-03-2026ನೇ ಮಂಗಳವಾರ ಬೆಳಿಗ್ಗೆ 9 ಕ್ಕೆ ಜಗದ್ಗುರುಗಳವರ ಸಾಮೂಹಿಕ ಇಷ್ಟ ಲಿಂಗಪೂಜಾ ಕಾರ್ಯಕ್ರಮವು ನೆರವೇರುವುದು ಸದ್ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಜಗದ್ಗುರುಗಳವರ ಕೃಪ ಆಶೀರ್ವಾದ ಪಡೆದುಕೊಳ್ಳಬಹುದು
    user_ಶ್ರೀ.ವೇ.ಶಿವಾನಂದಯ್ಯ ಶಾಸ್ತ್ರೀಜಿ
    ಶ್ರೀ.ವೇ.ಶಿವಾನಂದಯ್ಯ ಶಾಸ್ತ್ರೀಜಿ
    ಸೊರಬ, ಶಿವಮೊಗ್ಗ, ಕರ್ನಾಟಕ•
    22 hrs ago
  • #ವಿರಾಟ್ ಹಿಂದೂ ಸಮಾಜೋತ್ಸವ.
    1
    #ವಿರಾಟ್ ಹಿಂದೂ ಸಮಾಜೋತ್ಸವ.
    user_Narayan P.
    Narayan P.
    Kumta, Uttara Kannada, Karnataka•
    1 hr ago
  • ಕೆ.ಆರ್.ಪೇಟೆ,ಮಾ.16: ತಾಲ್ಲೂಕಿನ ಬೂಕನಕೆರೆ ಮತ್ತು ಶೀಳನೆರೆ ಹೋಬಳಿಗಳಿಗೆ ನೀರಾವರಿ ಸೌಲಭ್ಯ ಸೌಲಭ್ಯವನ್ನು ಒದಗಿಸುವ ಕಟ್ಟಹಳ್ಳಿ ಬಳಿ ನಿರ್ಮಿಸಲಾಗಿರುವ ಸುಮಾರು 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ಐಚನಹಳ್ಳಿ ಏತ ನೀರಾವರಿ ಯೋಜನೆಯ ಎರಡನೇ ಹಂತದ ನೀರು ಪೂರೈಸುವ ಪಂಪ್‌ಹೌಸ್ ಕೇಂದ್ರವನ್ನು ಮೊಸಳೆಕೊಪ್ಪಲು ಬಳಿ ಶಾಸಕ ಹೆಚ್.ಟಿ.ಮಂಜು ವೀಕ್ಷಣೆ ಮಾಡಿ ಆದಷ್ಟು ಬೇಗ ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾಲ್ಲೂಕಿನ ಮೊಸಳೇಕೊಪ್ಪಲು ಗ್ರಾಮದ ಬಳಿ ನಿರ್ಮಿಸಿರುವ ಎರಡನೇ ಹಂತದ ಏತ ನೀರಾವರಿ ಯೋಜನೆಯ ಪಂಪ್ ಹೌಸ್ ಕೇಂದ್ರವನ್ನು ವೀಕ್ಷಣೆ ಮಾಡಿ ನಂತರ ಶೀಳನೆರೆ ಹೋಬಳಿಯ ಭೈರಾಪುರ ಕೆರೆಗೆ ಪ್ರಾಯೋಗಿಕವಾಗಿ ನೀರು ತುಂಬಿಸುವ ಕಾರ್ಯವನ್ನು ಸಣ್ಣ ನೀರಾವರಿ ಅಧಿಕಾರಿಗಳು ಮತ್ತು ಭೈರಾಪುರ ಗ್ರಾಮಸ್ಥರೊಂದಿಗೆ ವೀಕ್ಷಣೆ ಮಾಡಿ ನೀರನ್ನು ಪೋಲು ಮಾಡದಂತೆ ಸಂರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು. ಐಚನಹಳ್ಳಿ ಏತನೀರಾವರಿ ಯೋಜನೆಯನ್ನು ನಮ್ಮ ತಾಲ್ಲೂಕಿನ ಬೂಕನಕೆರೆ ಗ್ರಾಮದ ಸುಪುತ್ರರಾದ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ತವರೂರಿಗೆ ವಿಶೇಷ ಯೋಜನೆ ರೂಪಿಸಬೇಕೆಂಬ ಮಹದಾಸೆಯಿಂದ 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಟ್ಟಹಳ್ಳಿ ಬಳಿ ಏತ ನೀರಾವರಿ ಯೋಜನೆಗೆ ತಮ್ಮ ಅಧಿಕಾರದ ಅವಧಿಯಲ್ಲಿ 2020ರಲ್ಲಿ ಚಾಲನೆ ನೀಡಿದ್ದರು. ಇದರ ಮೊದಲ ಅಂತದ ಕಾಮಗಾರಿಯು ಮುಗಿದು ಬೂಕನಕೆರೆ ಹೋಬಳಿಯ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಕಳೆದ ವರ್ಷ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಮತ್ತು ಕ್ಷೇತ್ರದ ಶಾಸಕನಾದ ನಾನು ಸೇರಿ ಉದ್ಘಾಟನೆ ಮಾಡಿದ್ದೆವು. ಈಗ ಎರಡನೇ ಹಂತದ ಏತನೀರಾವರಿ ಯೋಜನೆಯ ಕಾಮಗಾರಿಯು ಮುಕ್ತಾಯಗೊಂಡಿದ್ದು ಉದ್ಘಾಟನೆಗೆ ಸಿದ್ದವಾಗಿದೆ. ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ ಮತ್ತು ಸಂಬAಧಪಟ್ಟ ಸಚಿವರು ಉದ್ಘಾಟನೆಗೆ ಹಸಿರು ನಿಶಾನೆ ತೋರಿದ ಕೂಡಲೇ ದಿನಾಂಕ ನಿಗಧಿಪಡಿಸಿದ ಎರಡನೇ ಹಂತದ ಏತನೀರಾವರಿ ಯೋಜನೆಯನ್ನು ಉದ್ಘಾಟಿಸಲಾಗುವುದು. ಇದರ ಪ್ರಾಯೋಗಿಕ ನೀರು ಹರಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ. ಅಧಿಕೃತ ಉದ್ಘಾಟನೆಯ ನಂತರ ಶೀಳನೆರೆ ಹೋಬಳಿಯ ಎಲ್ಲಾ ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಕ್ರಮ ವಹಿಸಲಾಗುವುದು. ಮಳೆಯಾಶ್ರಿತ ಪ್ರದೇಶವಾಗಿರುವ ಶೀಳನೆರೆ ಮತ್ತು ಬೂಕನಕೆರೆ ಹೋಬಳಿಗಳಿಗೆ ಈ ಏತ ನೀರಾವರಿ ಯೋಜನೆ ವರಧಾನವಾದ ಯೋಜನೆಯಾಗಿದೆ. ಅಂತರ್ಜಲ ಮಟ್ಟ ವೃದ್ದಿಯಾಗಲಿದೆ. ರೈತರ ಕೃಷಿ ಕೊಳವೆ ಬಾವಿಗಳು, ರೈತರ ತೆರೆದ ಬಾವಿಗಳು, ಕುಡಿಯುವ ನೀರಿನ ಮೂಲಗಳಲ್ಲಿ ಅಂತರ್ಜಲ ಮಟ್ಟದ ಹೆಚ್ಚಲಿದೆ. ಕುಡಿಯುವ ನೀರಿಗೆ ಹಾಗೂ ಜನ-ಜಾನುವಾರುಗಳಿಗೆ ಅನುಕೂಲವಾಗಲಿದೆ. ಈ ಏತ ಯೋಜನೆಗೆ ಕಾರಣಕರ್ತರಾದ ಮಾಜಿ ಸಿ.ಎಂ.ಯಡಿಯೂರಪ್ಪ ಹಾಗೂ ಮಾಜಿ ಸಚಿವ ನಾರಾಯಣಗೌಡ ಅವರಿಗೆ ಎರಡೂ ಹೋಬಳಿಯ ಜನತೆಯ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಶಾಸಕ ಹೆಚ್.ಟಿ.ಮಂಜು ಹೇಳಿದರು. ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಿರ್ಮಲೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭೈರಾಪುರ ಹರೀಶ್, ತಾಲ್ಲೂಕು ಜೆಡಿಎಸ್ ರೈತ ಮೋರ್ಚಾ ಅಧ್ಯಕ್ಷ ಹೆಳವೇಗೌಡ, ಮೊಸಳೇಕೊಪ್ಪಲು ಗ್ರಾಮದ ಯಜಮಾನರುಗಳಾದ ಪಟೇಲ್ ನಿಂಗೇಗೌಡ, ಯಜಮಾನ್ ರಾಮಕೃಷ್ಣೇಗೌಡ, ರಮೇಶ್, ಬಸವೇಗೌಡ, ರಂಗೇಗೌಡ, ಕೆಂಪಣ್ಣ ರವಿ, ಡೇರಿ ತಿಮ್ಮೇಗೌಡ, ನಗುವನಹಳ್ಳಿ ರಾಮಕೃಷ್ಣೇಗೌಡ, ನಾಗೇಗೌಡ, ಅರೆ ರಮೇಶ್, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಮಂಜುನಾಥ್, ಶೀಳನೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಸ್ವಾಮೀಗೌಡ, ಜಿಲ್ಲಾ ಜೆಡಿಎಸ್ ಕರ‍್ಯಕಾರಣಿ ಸದಸ್ಯ ಕುರುಬಹಳ್ಳಿ ಕೆ.ಬಿ.ನಾಗೇಶ್, ಜೈನ್ನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಧರಣೇಶ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಚಿಕ್ಕಗಾಡಿಗನಹಳ್ಳಿ ಸೋಮಶೇಖರ್, ಗಂಜಿಗೆರೆಕೊಪ್ಪಲು ರಾಮಕೃಷ್ಣೇಗೌಡ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಚಿತ್ರಶೀರ್ಷಿಕೆ:16.ಕೆ.ಆರ್.ಪಿ-02: ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಮತ್ತು ಶೀಳನೆರೆ ಹೋಬಳಿಗಳಿಗೆ ನೀರಾವರಿ ಸೌಲಭ್ಯ ಸೌಲಭ್ಯವನ್ನು ಒದಗಿಸುವ ಕಟ್ಟಹಳ್ಳಿ ಬಳಿ ನಿರ್ಮಿಸಲಾಗಿರುವ ಸುಮಾರು 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಐಚನಹಳ್ಳಿ ಏತ ನೀರಾವರಿ ಯೋಜನೆಯ ಎರಡನೇ ಹಂತದ ನೀರು ಪೂರೈಸುವ ಪಂಪ್‌ಹೌಸ್ ಕೇಂದ್ರವನ್ನು ಶಾಸಕ ಹೆಚ್.ಟಿ.ಮಂಜು ವೀಕ್ಷಣೆ ಮಾಡಿ ಆದಷ್ಟು ಬೇಗ ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ==================================
    4
    ಕೆ.ಆರ್.ಪೇಟೆ,ಮಾ.16: ತಾಲ್ಲೂಕಿನ ಬೂಕನಕೆರೆ ಮತ್ತು ಶೀಳನೆರೆ ಹೋಬಳಿಗಳಿಗೆ ನೀರಾವರಿ ಸೌಲಭ್ಯ ಸೌಲಭ್ಯವನ್ನು ಒದಗಿಸುವ ಕಟ್ಟಹಳ್ಳಿ ಬಳಿ ನಿರ್ಮಿಸಲಾಗಿರುವ ಸುಮಾರು 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ಐಚನಹಳ್ಳಿ ಏತ ನೀರಾವರಿ ಯೋಜನೆಯ ಎರಡನೇ ಹಂತದ ನೀರು ಪೂರೈಸುವ ಪಂಪ್‌ಹೌಸ್ ಕೇಂದ್ರವನ್ನು ಮೊಸಳೆಕೊಪ್ಪಲು ಬಳಿ ಶಾಸಕ ಹೆಚ್.ಟಿ.ಮಂಜು ವೀಕ್ಷಣೆ ಮಾಡಿ ಆದಷ್ಟು ಬೇಗ ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಾಲ್ಲೂಕಿನ ಮೊಸಳೇಕೊಪ್ಪಲು ಗ್ರಾಮದ ಬಳಿ ನಿರ್ಮಿಸಿರುವ ಎರಡನೇ ಹಂತದ ಏತ ನೀರಾವರಿ ಯೋಜನೆಯ ಪಂಪ್ ಹೌಸ್ ಕೇಂದ್ರವನ್ನು ವೀಕ್ಷಣೆ ಮಾಡಿ ನಂತರ ಶೀಳನೆರೆ ಹೋಬಳಿಯ ಭೈರಾಪುರ ಕೆರೆಗೆ ಪ್ರಾಯೋಗಿಕವಾಗಿ ನೀರು ತುಂಬಿಸುವ ಕಾರ್ಯವನ್ನು ಸಣ್ಣ ನೀರಾವರಿ ಅಧಿಕಾರಿಗಳು ಮತ್ತು ಭೈರಾಪುರ ಗ್ರಾಮಸ್ಥರೊಂದಿಗೆ ವೀಕ್ಷಣೆ ಮಾಡಿ ನೀರನ್ನು ಪೋಲು ಮಾಡದಂತೆ ಸಂರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು.
ಐಚನಹಳ್ಳಿ ಏತನೀರಾವರಿ ಯೋಜನೆಯನ್ನು ನಮ್ಮ ತಾಲ್ಲೂಕಿನ ಬೂಕನಕೆರೆ ಗ್ರಾಮದ ಸುಪುತ್ರರಾದ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ತವರೂರಿಗೆ ವಿಶೇಷ ಯೋಜನೆ ರೂಪಿಸಬೇಕೆಂಬ ಮಹದಾಸೆಯಿಂದ 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಟ್ಟಹಳ್ಳಿ ಬಳಿ ಏತ ನೀರಾವರಿ ಯೋಜನೆಗೆ ತಮ್ಮ ಅಧಿಕಾರದ ಅವಧಿಯಲ್ಲಿ 2020ರಲ್ಲಿ ಚಾಲನೆ ನೀಡಿದ್ದರು. ಇದರ ಮೊದಲ ಅಂತದ ಕಾಮಗಾರಿಯು ಮುಗಿದು ಬೂಕನಕೆರೆ ಹೋಬಳಿಯ ಎಲ್ಲಾ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಕಳೆದ ವರ್ಷ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಮತ್ತು ಕ್ಷೇತ್ರದ ಶಾಸಕನಾದ ನಾನು ಸೇರಿ ಉದ್ಘಾಟನೆ ಮಾಡಿದ್ದೆವು. ಈಗ ಎರಡನೇ ಹಂತದ ಏತನೀರಾವರಿ ಯೋಜನೆಯ ಕಾಮಗಾರಿಯು ಮುಕ್ತಾಯಗೊಂಡಿದ್ದು ಉದ್ಘಾಟನೆಗೆ ಸಿದ್ದವಾಗಿದೆ. ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯಸ್ವಾಮಿ ಮತ್ತು ಸಂಬAಧಪಟ್ಟ ಸಚಿವರು ಉದ್ಘಾಟನೆಗೆ ಹಸಿರು ನಿಶಾನೆ ತೋರಿದ ಕೂಡಲೇ ದಿನಾಂಕ ನಿಗಧಿಪಡಿಸಿದ ಎರಡನೇ ಹಂತದ ಏತನೀರಾವರಿ ಯೋಜನೆಯನ್ನು ಉದ್ಘಾಟಿಸಲಾಗುವುದು. ಇದರ ಪ್ರಾಯೋಗಿಕ ನೀರು ಹರಿಸುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ. ಅಧಿಕೃತ ಉದ್ಘಾಟನೆಯ ನಂತರ ಶೀಳನೆರೆ ಹೋಬಳಿಯ ಎಲ್ಲಾ ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಕ್ರಮ ವಹಿಸಲಾಗುವುದು. ಮಳೆಯಾಶ್ರಿತ ಪ್ರದೇಶವಾಗಿರುವ ಶೀಳನೆರೆ ಮತ್ತು ಬೂಕನಕೆರೆ ಹೋಬಳಿಗಳಿಗೆ ಈ ಏತ ನೀರಾವರಿ ಯೋಜನೆ ವರಧಾನವಾದ ಯೋಜನೆಯಾಗಿದೆ. ಅಂತರ್ಜಲ ಮಟ್ಟ ವೃದ್ದಿಯಾಗಲಿದೆ. ರೈತರ ಕೃಷಿ ಕೊಳವೆ ಬಾವಿಗಳು, ರೈತರ ತೆರೆದ ಬಾವಿಗಳು, ಕುಡಿಯುವ ನೀರಿನ ಮೂಲಗಳಲ್ಲಿ ಅಂತರ್ಜಲ ಮಟ್ಟದ ಹೆಚ್ಚಲಿದೆ. ಕುಡಿಯುವ ನೀರಿಗೆ ಹಾಗೂ ಜನ-ಜಾನುವಾರುಗಳಿಗೆ ಅನುಕೂಲವಾಗಲಿದೆ. ಈ ಏತ ಯೋಜನೆಗೆ ಕಾರಣಕರ್ತರಾದ ಮಾಜಿ ಸಿ.ಎಂ.ಯಡಿಯೂರಪ್ಪ ಹಾಗೂ ಮಾಜಿ ಸಚಿವ ನಾರಾಯಣಗೌಡ ಅವರಿಗೆ ಎರಡೂ ಹೋಬಳಿಯ ಜನತೆಯ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಶಾಸಕ ಹೆಚ್.ಟಿ.ಮಂಜು ಹೇಳಿದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಿರ್ಮಲೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭೈರಾಪುರ ಹರೀಶ್, ತಾಲ್ಲೂಕು ಜೆಡಿಎಸ್ ರೈತ ಮೋರ್ಚಾ ಅಧ್ಯಕ್ಷ ಹೆಳವೇಗೌಡ, ಮೊಸಳೇಕೊಪ್ಪಲು ಗ್ರಾಮದ ಯಜಮಾನರುಗಳಾದ ಪಟೇಲ್ ನಿಂಗೇಗೌಡ, ಯಜಮಾನ್ ರಾಮಕೃಷ್ಣೇಗೌಡ, ರಮೇಶ್, ಬಸವೇಗೌಡ, ರಂಗೇಗೌಡ, ಕೆಂಪಣ್ಣ ರವಿ, ಡೇರಿ ತಿಮ್ಮೇಗೌಡ, ನಗುವನಹಳ್ಳಿ ರಾಮಕೃಷ್ಣೇಗೌಡ, ನಾಗೇಗೌಡ, ಅರೆ ರಮೇಶ್, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಮಂಜುನಾಥ್, ಶೀಳನೆರೆ ಹೋಬಳಿ ಜೆಡಿಎಸ್ ಅಧ್ಯಕ್ಷ ಸ್ವಾಮೀಗೌಡ, ಜಿಲ್ಲಾ ಜೆಡಿಎಸ್ ಕರ‍್ಯಕಾರಣಿ ಸದಸ್ಯ ಕುರುಬಹಳ್ಳಿ ಕೆ.ಬಿ.ನಾಗೇಶ್, ಜೈನ್ನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಧರಣೇಶ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಚಿಕ್ಕಗಾಡಿಗನಹಳ್ಳಿ ಸೋಮಶೇಖರ್, ಗಂಜಿಗೆರೆಕೊಪ್ಪಲು ರಾಮಕೃಷ್ಣೇಗೌಡ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಚಿತ್ರಶೀರ್ಷಿಕೆ:16.ಕೆ.ಆರ್.ಪಿ-02: ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಮತ್ತು ಶೀಳನೆರೆ ಹೋಬಳಿಗಳಿಗೆ ನೀರಾವರಿ ಸೌಲಭ್ಯ ಸೌಲಭ್ಯವನ್ನು ಒದಗಿಸುವ ಕಟ್ಟಹಳ್ಳಿ ಬಳಿ ನಿರ್ಮಿಸಲಾಗಿರುವ ಸುಮಾರು 165ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಐಚನಹಳ್ಳಿ ಏತ ನೀರಾವರಿ ಯೋಜನೆಯ ಎರಡನೇ ಹಂತದ ನೀರು ಪೂರೈಸುವ ಪಂಪ್‌ಹೌಸ್ ಕೇಂದ್ರವನ್ನು ಶಾಸಕ ಹೆಚ್.ಟಿ.ಮಂಜು ವೀಕ್ಷಣೆ ಮಾಡಿ ಆದಷ್ಟು ಬೇಗ ಉದ್ಘಾಟನೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
==================================
    user_Srinivas k.r.pete
    Srinivas k.r.pete
    Citizen Reporter ಕೃಷ್ಣರಾಜಪೇಟೆ, ಮಂಡ್ಯ, ಕರ್ನಾಟಕ•
    18 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    15 hrs ago
  • ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.10ರಿಂದ ನಡೆಯುವ ಜಾತ್ರೋತ್ಸವ ಸೇರಿದಂತೆ ಏ.17ರ ಬ್ರಹ್ಮರಥೋತ್ಸವಕ್ಕೆ ಸಿದ್ಧತೆಗಾಗಿ ಮಾ.16ರಂದು ಬೆಳಿಗ್ಗೆ ಬ್ರಹ್ಮರಥ ಮಂದಿರದಿಂದ ಬ್ರಹ್ಮರಥವನ್ನು ರಥ ಬೀದಿಗೆ ತರುವ ಮುಹೂರ್ತದೊಂದಿಗೆ ಜಾತ್ರೆಗೆ ಕ್ಷಣಗಣನೆ ನಡೆದಿದೆ. ಪ್ರತಿ ಬಾರಿ ರಥ ಕಟ್ಟುವ ಸ್ಥಳದಲ್ಲಿ ಒಂದಲ್ಲ ಒಂದು ಬಿಲ್ವಪತ್ರೆ, ತುಳಸಿ, ಹೂವುಗಳು ಭೂಸ್ಪರ್ಶ ಮಾಡುತ್ತಿದ್ದು ಈ ಬಾರಿ ಮಲ್ಲಿಗೆ ಮತ್ತು ಬಿಲ್ವಪತ್ರೆಯೊಂದು ಭೂ ಸ್ಪರ್ಶ ಮಾಡಿ ಜಾತ್ರೆಗೆ ಪೂರ್ಣಾನುಗ್ರಹ ಸೂಚಿಸಿದೆ. ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು ಬ್ರಹ್ಮರಥಕ್ಕೆ ಮಲ್ಲಿಗೆ ಪುಷ್ಪ, ಗಂಧ, ಬಿಲ್ವಪತ್ರೆ ಸಮರ್ಪಣೆ ಮಾಡಿ ವಿಜೃಂಭಣೆಯಿಂದ ಜಾತ್ರೆ ನಡೆಯುವಂತೆ ಪ್ರಾರ್ಥಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಅರ್ಚಕರು ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.
    1
    ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.10ರಿಂದ ನಡೆಯುವ ಜಾತ್ರೋತ್ಸವ ಸೇರಿದಂತೆ ಏ.17ರ ಬ್ರಹ್ಮರಥೋತ್ಸವಕ್ಕೆ ಸಿದ್ಧತೆಗಾಗಿ ಮಾ.16ರಂದು ಬೆಳಿಗ್ಗೆ ಬ್ರಹ್ಮರಥ ಮಂದಿರದಿಂದ ಬ್ರಹ್ಮರಥವನ್ನು ರಥ ಬೀದಿಗೆ ತರುವ ಮುಹೂರ್ತದೊಂದಿಗೆ ಜಾತ್ರೆಗೆ ಕ್ಷಣಗಣನೆ ನಡೆದಿದೆ. ಪ್ರತಿ ಬಾರಿ ರಥ ಕಟ್ಟುವ ಸ್ಥಳದಲ್ಲಿ ಒಂದಲ್ಲ ಒಂದು ಬಿಲ್ವಪತ್ರೆ, ತುಳಸಿ, ಹೂವುಗಳು ಭೂಸ್ಪರ್ಶ ಮಾಡುತ್ತಿದ್ದು ಈ ಬಾರಿ ಮಲ್ಲಿಗೆ ಮತ್ತು ಬಿಲ್ವಪತ್ರೆಯೊಂದು ಭೂ ಸ್ಪರ್ಶ ಮಾಡಿ ಜಾತ್ರೆಗೆ ಪೂರ್ಣಾನುಗ್ರಹ ಸೂಚಿಸಿದೆ.
ಬೆಳಿಗ್ಗೆ ಶುಭ ಮುಹೂರ್ತದಲ್ಲಿ ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯ ಅವರು ಬ್ರಹ್ಮರಥಕ್ಕೆ ಮಲ್ಲಿಗೆ ಪುಷ್ಪ, ಗಂಧ, ಬಿಲ್ವಪತ್ರೆ ಸಮರ್ಪಣೆ ಮಾಡಿ ವಿಜೃಂಭಣೆಯಿಂದ ಜಾತ್ರೆ ನಡೆಯುವಂತೆ ಪ್ರಾರ್ಥಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಅರ್ಚಕರು ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.