ಕೆಲಸ ಮಾಡಲು ಇಷ್ಟವಿರದಿದ್ದರೆ ಬಿಟ್ಟುಬಿಡಿ : ಚಿತ್ರದುರ್ಗ ಜಿಲ್ಲಾಸ್ಪತ್ರೆ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಎಚ್ಚರಿಕೆ *ಕೆಲಸ ಮಾಡಲು ಇಷ್ಟವಿರದಿದ್ದರೆ ಬಿಟ್ಟುಬಿಡಿ : ಚಿತ್ರದುರ್ಗ ಜಿಲ್ಲಾಸ್ಪತ್ರೆ ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಎಚ್ಚರಿಕೆ* ಚಿತ್ರದುರ್ಗ. ಸೆ.15: ಕಳೆದ ನಾಲ್ಕೈದು ತಿಂಗಳಿಂದ ಸಿಟಿ ಸ್ಕ್ಯಾನ್ ಯಂತ್ರ ಕೆಟ್ಟು ನಿಂತು ರೋಗಿಗಳು ಪರದಾಡುವಂತಾಗಿದೆ. ವೈದ್ಯಾಧಿಕಾರಿಗಳ ಬೇಜಬ್ದಾರಿಯಿಂದ ಸರ್ಕಾರ ಹಾಗೂ ಜಿಲ್ಲಾಡಳಿತ ಟೀಕೆ ಎದುರಿಸುವಂತಾಗಿದೆ. ಕೂಡಲೇ ಸಿ.ಟಿ.ಸ್ಕ್ಯಾನ್ ದುರಸ್ತಿ ಪಡಿಸಿ ಸೇವೆ ಆರಂಭಿಸಬೇಕು. ಡೀನ್ ಹಾಗೂ ಜಿಲ್ಲಾಶಸ್ತ್ರಚಿಕಿತ್ಸಕರು ಸಮನ್ವಯಿಂದ ಕಾರ್ಯನಿರ್ವಹಿಸುವ ಮೂಲಕ, ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ದೊರೆಯವಂತೆ ನೋಡಿಕೊಳ್ಳಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಸೂಚಿಸಿದರು. ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಚಿತ್ರದುರ್ಗ ವೈದ್ಯಕೀಯ ಕಾಲೇಜು ಹಾಗೂ ಬೋಧನಾ ಆಸ್ಪತ್ರೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂಬ ಕಾರಣ ನೀಡಿ ಜಿಲ್ಲಾಶಸ್ತ್ರಚಿಕಿತ್ಸಕರು ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಕಳೆದ ಫೆಬ್ರವರಿಯಲ್ಲಿಯೇ ಆಸ್ಪತ್ರೆಯ ಹೊಣೆ ಹೊತ್ತಿದ್ದರು, ಡೀನ್ ಸಿಟಿ ಸ್ಕ್ಯಾನ್ ದುರಸ್ತಿಗೆ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರು ಆಸ್ಪತ್ರೆಗೆ ಬಂದು ಸಿಟಿ ಸ್ಕ್ಯಾನ್ ಸೌಲಭ್ಯ ಸಿಗದೆ ಪರದಾಡುತ್ತಿದ್ದರೆ, ಕೇವಲ ಪತ್ರ ವ್ಯವಹಾರ ಹಾಗೂ ನೆಪಗಳನ್ನು ಹೇಳಿಕೊಂಡು ಕಾಲ ಕಳೆಯುತ್ತಿದ್ದೀರಿ. ಸಮಸ್ಯೆ ಕಂಡುಬಂದ ತಕ್ಷಣ ಪರಿಹಾರ ಕಂಡುಕೊಳ್ಳಬೇಕು. ಅದನ್ನು ಬಿಟ್ಟು ಸುಮ್ಮನೆ ಕುಳಿತರೆ ಸಾರ್ವಜನಿಕರಿಗೆ ಉತ್ತರ ಕೊಡುವವರು ಯಾರು? ಇಬ್ಬರಿಗೂ ಕೆಲಸ ಮಾಡಲು ಇಷ್ಟವಿರದಿದ್ದರೆ ಬಿಟ್ಟುಬಿಡಿ ಎಂದು ಸಚಿವ ಟಿ.ರಘುಮೂರ್ತಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಿ.ಟಿ.ಸ್ಕ್ಯಾನ್ ಸೇವೆ ನೀಡಲು ಅಟಾಮಿಕ್ ಎನರ್ಜಿ ರೆಗ್ಯುಲೇಟರಿ ಬೋರ್ಡ್ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಈ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಸಿ.ಟಿ.ಸ್ಕ್ಯಾನ್ ಅಳವಡಿಸುವಾಗ ಅನುಮತಿ ಪಡೆದಿರಲಿಲ್ಲ. ಸದ್ಯ ಅನುಮತಿ ದೊರತಿದೆ. ಸಿ.ಟಿ.ಸ್ಕ್ಯಾನ್ ದುರಸ್ತಿ ಕಾರ್ಯ ನಡೆಯುತ್ತಿದ್ದು, ನಾಳೆಯಿಂದಲೇ ಸಿ.ಟಿ.ಸ್ಕ್ಯಾನ್ ಸೇವೆಯನ್ನು ಆರಂಭಿಸುವುದಾಗಿ ವೈದ್ಯಕೀಯ ಕಾಲೇಜು ಡೀನ್ ಡಾ.ಯುವರಾಜ್ ತಿಳಿಸಿದರು. ಬ್ಲೂ ಸ್ಟಾರ್ ಕಂಪನಿಯ ಸಿ.ಟಿ.ಸ್ಕ್ಯಾನ್ ಟ್ಯೂಬ್ ಹಾಳಾಗಿದ್ದು, ದುರಸ್ತಿಗೆ ರೂ.57 ಲಕ್ಷ ವೆಚ್ಚವಾಗಲಿದೆ ಎಂದು ಜಿಲ್ಲಾಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮಾಹಿತಿ ನೀಡಿದರು. ಬಡ ಜನರು ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಿರುವ ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ಕಾಲೇಜು ಸಹ ಜಿಲ್ಲಾಸ್ಪತ್ರೆಯೊಂದಿಗೆ ಸಮ್ಮಿಳಿತವಾಗಿದೆ. ಆದರೂ ಸೂಕ್ತ ಚಿಕಿತ್ಸೆ ನೀಡದೇ, ರೋಗಿಗಳನ್ನು ಖಾಸಗಿ ಆಸ್ಪತ್ರೆ ಅಥವಾ ಬೇರೆಕಡೆ ಶಿಫಾರಸ್ಸು ಮಾಡಲಾಗುತ್ತಿದೆ. ಸೂಕ್ತ ರೀತಿಯಲ್ಲಿ ಔಷಧಗಳನ್ನು ನೀಡದೇ, ಹೊರಗಡೆ ತರಲು ಬರೆದುಕೊಡಲಾಗುತ್ತಿದೆ. ಇಂತಹ ಪರಿಸ್ಥಿತಿ ಬದಲಾಗಬೇಕು. ಆಸ್ಪತ್ರೆ ವ್ಯವಸ್ಥೆ ಸುಧಾರಿಸಬೇಕು. ಸಾಕಷ್ಟು ಉಪಕರಣಗಳು ಇದ್ದರೂ ಅವುಗಳನ್ನು ಬಳಸುತ್ತಿಲ್ಲ ಎನ್ನುವ ದೂರು ಕೇಳಿಬಂದಿದೆ. ಲ್ಯಾಕ್ರೋಸ್ಕೊಫಿ, ಎಂಡೋಸ್ಕೊಪಿ ಅಂತಹ ಚಿಕಿತ್ಸೆಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಾರಂಭಿಸಬೇಕು. ಆಸ್ಪತ್ರೆಯಲ್ಲಿ ದೊರಕುವ ಎಲ್ಲಾ ವಿವಿಧ ಚಿಕಿತ್ಸೆಗಳ ಮಾಹಿತಿ ಫಲಕವನ್ನು ಅಳವಡಿಸಿ, ಹೊರಗಡೆ ಶಿಫಾರಸ್ಸು ಮಾಡುವ ಪ್ರಕರಣಗಳ ಆಡಿಟ್ ನಡೆಸಿ, ವಿನಾಕಾರಣ ರೋಗಿಗಳನ್ನು ಅಳೆದಾಡಿಸಬೇಡಿ ಎಂದು ಸಚಿವ ಟಿ.ರಘಮೂರ್ತಿ ತಾಕೀತು ಮಾಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ರಮ್ಯ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್, ಜಿ.ಪಂ.ಸಿಪಿಓ ಗಾಯಿತ್ರಿ, ನಗರಸಭೆ ಆಯುಕ್ತೆ ಲಕ್ಷ್ಮಿ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

- ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.1
- *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಗೌರಸಮುದ್ರ ಮಾರೆಮ್ಮ ಜಾತ್ರೆಯಲ್ಲಿ ಶಾಸಕರು ಎನ್. ವೈ. ಗೋಪಾಲಕೃಷ್ಣ ಭಾಗಿ .ಗೌರಸಮುದ್ರ ಜಾತ್ರೆಯಲ್ಲಿ ಶಾಸಕ ಎನ್. ವೈ. ಗೋಪಾಲಕೃಷ್ಣ ಭಾಗಿ ಮೊಳಕಾಲ್ಮುರು ಸುದ್ದಿ. ಗೌರಸಮುದ್ರ ಗ್ರಾಮದಲ್ಲಿ ನಡೆಯುತ್ತಿರುವ ಗೌರಸಮುದ್ರ ಜಾತ್ರೆ ಅದ್ದೂರಿಯಾಗಿ ನಡೆಯುತ್ತಿದ್ದು, ಮೊಳಕಾಲ್ಮುರು ಕ್ಷೇತ್ರದ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅವರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಾತ್ರೆಯ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳು ಹಾಗೂ ಆಯೋಜಕರಿಂದ ಮಾಹಿತಿ ಪಡೆದ ಶಾಸಕರು, ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕುರಿತು ಪರಿಶೀಲಿಸಿದರು. ವಿಶೇಷವಾಗಿ ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ನೆರವು ಹಾಗೂ ಮೆಡಿಕಲ್ ಕಿಟ್‌ಗಳ ಲಭ್ಯತೆ, ಪೊಲೀಸ್ ಭದ್ರತಾ ವ್ಯವಸ್ಥೆ ಮತ್ತು ಜಾತ್ರಾ ಸ್ಥಳದ ಶುಚಿತ್ವದ ಬಗ್ಗೆ ಮಾಹಿತಿ ಪಡೆದುಕೊಂಡರು. ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಹಾಗೂ ಸ್ವಚ್ಛತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಜಾತ್ರೆಯು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಅಧಿಕಾರಿಗಳು ಮತ್ತು ಆಯೋಜಕರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಶಾಸಕರು ತಿಳಿಸಿದರು. ಜಾತ್ರೆಯಲ್ಲಿ ತಳಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನಾಗೇಶ್ ರೆಡ್ಡಿ, ಹಿರೇಹಳ್ಳಿ ವಕೀಲರು ಮಲ್ಲೇಶಿ ರಾಂಪುರ ಸಿದ್ದಬಸಪ್ಪ, ಶ್ರೀಕಾಂತ, ಪೊಲೀಸ್ ಇಲಾಖೆ ಸಾವಿರಾರು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ದೇವಿಯ ಧರ್ಶನ ಪಡೆದರು.1
- ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಹುಟ್ಟುಹಬ್ಬ ಸಂಭ್ರಮ: ಬಿಮ್ಸ್‌ನಲ್ಲಿ ಅನ್ನದಾನ! ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಬಿಮ್ಸ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಸಮಾಜಸೇವಕ ಡಿ.ಅಯಾಜ್ ಅಹ್ಮದ್ ನೇತೃತ್ವದಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಅನ್ನದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕರ ಸಹೋದರ ಬಿ.ವೆಂಕಟೇಶ್ ಪ್ರಸಾದ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪಾಲಿಕೆ ಮೇಯರ್, ಸದಸ್ಯರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಾಗೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಜವಾಬ್ದಾರಿ ಹಾಗೂ ಉನ್ನತ ಸ್ಥಾನ ದೊರೆಯಲಿ ಎಂದು ಮುಖಂಡರು ಆಶಿಸಿದರು. 📍 ಬಳ್ಳಾರಿ | ASN News24 ಕನ್ನಡ #BNagendra #ಬಿನಾಗೇಂದ್ರ #Ballari #ಬಳ್ಳಾರಿ #BallariNews #ಬಳ್ಳಾರಿನ್ಯೂಸ್ #KarnatakaNews #KannadaNews #Congress #CongressKarnataka #BirthdayCelebration #Annadana #ಅನ್ನದಾನ #BIMS #BallariUpdates #ASNNews24Kannada #KannadaNewsToday #KarnatakaPolitics1
- ಗೌರಸಮುದ್ರ ಮಾರಮ್ಮ ಜಾತ್ರೆ ಕುರಿತು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ .ಓಬಣ್ಣ ಏನ್ ಹೇಳಿದ್ರು ಗೊತ್ತೇ.1
- ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ಐತಿಹಾಸಿಕ ಶ್ರೀ ಗೌರಸಮುದ್ರ ಮಾರಮ್ಮ ದೇವರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರು ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದೆ. ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ. ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ. ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.1
- ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು2
- ಬಳ್ಳಾರಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಂಜೆ ತರಗತಿ! ಗಣೇಶೋತ್ಸವದಂದು ಊಟ–ಪ್ರಸಾದ ವಿತರಣೆ ಬಳ್ಳಾರಿ ಸಮೀಪದ ಸಂಗನಕಲ್ಲು ಗ್ರಾಮದ ಅಂಬೇಡ್ಕರ್ ನಗರದಲ್ಲಿ ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗಾಗಿ ಉಚಿತ ಸಂಜೆ ತರಗತಿ ಹಾಗೂ ಊಟ/ತಿಂಡಿ ವ್ಯವಸ್ಥೆ ಮಾಡಲಾಯಿತು. ಗಣೇಶ ಚತುರ್ಥಿ ಅಂಗವಾಗಿ ಟ್ಯೂಷನ್ ಕೇಂದ್ರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಮಕ್ಕಳಿಂದ ಸಾಮೂಹಿಕ ಪ್ರಾರ್ಥನೆ ಹಾಗೂ ಶಾಂತಿ ಮಂತ್ರ ಪಠಣ ನಡೆಸಲಾಯಿತು. ಬಳಿಕ ಮಕ್ಕಳಿಗೆ ಸಿಹಿ ಪ್ರಸಾದ ವಿತರಿಸಲಾಯಿತು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಸಾಮಾಜಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯ ನಡೆಯುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಟಿ.ನಾಗರಾಜ್ ತಿಳಿಸಿದ್ದಾರೆ. 📍 ಸಂಗನಕಲ್ಲು, ಬಳ್ಳಾರಿ 📅 15-09-2026 ASN NEWS24 ಕನ್ನಡ — ಸುತ್ತಮುತ್ತ ನಡೆಯುವ ಸುದ್ದಿ, ಸಾರ್ವಜನಿಕ ಸಮಸ್ಯೆಗಳು ಮತ್ತು ಜನರ ಧ್ವನಿ. #Ballari #Bellary #Karnataka #KannadaNews #BreakingNews #Education #GovernmentSchool #GovernmentSchoolStudents #FreeEducation #FreeTuition #GaneshChaturthi #GaneshFestival #Ganeshotsav #SocialService #StudentSupport #Sanganakallu #BallariNews #KarnatakaNews #ASNNews24 #ASNNews24Kannada #ಕರ್ನಾಟಕ #ಬಳ್ಳಾರಿ #ಕನ್ನಡಸುದ್ದಿ #ಗಣೇಶೋತ್ಸವ1