ಬಳ್ಳಾರಿ ಜಿಲ್ಲೆಯು ಅಭಿವೃದ್ಧಿಯತ್ತ ಸಾಗುತ್ತಿದೆ: ಸಚಿವ ರಹೀಂ ಖಾನ್ ಬಳ್ಳಾರಿ,ಆ.15: ಬಳ್ಳಾರಿ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಪೂರಕವಾಗಿ ಸಾಕಷ್ಟು ಯೋಜನೆ-ಕಾರ್ಯಗಳು ನಡೆಯುತ್ತಿವೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ವಿವಿಧ ಅನುದಾನಗಳಡಿ ಸುಮಾರು 2 ಸಾವಿರ ಕೋಟಿ ರೂ.ಗಳಷ್ಟು ಕಾಮಗಾರಿಗಳು ನಡೆದಿದ್ದು, ಜಿಲ್ಲೆಯು ಅಭಿವೃದ್ಧಿಯತ್ತ ಸಾಗುತ್ತಿದೆ ಎಂದರು. ಜಿಲ್ಲೆಯಲ್ಲಿ ಈಗಾಗಲೇ 227 ಕೋಟಿ ರೂ. ವೆಚ್ಚದಲ್ಲಿ 24*7 ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸುಮಾರು 135 ರಿಂದ 150 ಕೋಟಿ ರೂ. ವೆಚ್ಚದಲ್ಲಿ ಬಳ್ಳಾರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಮೆಗಾಡೇರಿ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಪ್ರತ್ಯೇಕವಾಗಿ ಮೀಸಲಿಟ್ಟಿದ್ದು, ಆ ಜಿಲ್ಲೆಗಳಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಕಟ್ಟಡ ಕಾಮಗಾರಿಗಳಿಗೆ ವ್ಯಯಿಸಲಾಗುತ್ತಿದೆ ಎಂದು ತಿಳಿಸಿದರು. ನಮ್ಮ ಸರ್ಕಾರವು ಜನ ಸಾಮಾನ್ಯರಿಗೆ ಅತ್ಯುತ್ತಮ ಆಡಳಿತ ನೀಡಲು ಮುಂದಾಗಿದ್ದು, ಈ ಕುರಿತು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದರು. ರಾಜ್ಯದಲ್ಲಿ ಇ-ಖಾತಾ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ಶೇ.50 ರಷ್ಟು ಪ್ರಗತಿ ಸಾಧಿಸಲಾಗಿದೆ. ಬಳ್ಳಾರಿಯಲ್ಲಿಯೇ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು. ಈ ಭಾಗದ ತುಂಗಭದ್ರಾ ಅಣೆಕಟ್ಟಿನ 19 ನೇ ಕ್ರಸ್ಟ್ ಗೇಟ್ ಅಳವಡಿಕೆ ಕುರಿತಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದರು. ಈ ವೇಳೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಉಪಸ್ಥಿತರಿದ್ದರು.
ಬಳ್ಳಾರಿ ಜಿಲ್ಲೆಯು ಅಭಿವೃದ್ಧಿಯತ್ತ ಸಾಗುತ್ತಿದೆ: ಸಚಿವ ರಹೀಂ ಖಾನ್ ಬಳ್ಳಾರಿ,ಆ.15: ಬಳ್ಳಾರಿ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಪೂರಕವಾಗಿ ಸಾಕಷ್ಟು ಯೋಜನೆ-ಕಾರ್ಯಗಳು ನಡೆಯುತ್ತಿವೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ವಿವಿಧ ಅನುದಾನಗಳಡಿ ಸುಮಾರು 2 ಸಾವಿರ ಕೋಟಿ ರೂ.ಗಳಷ್ಟು ಕಾಮಗಾರಿಗಳು ನಡೆದಿದ್ದು, ಜಿಲ್ಲೆಯು ಅಭಿವೃದ್ಧಿಯತ್ತ ಸಾಗುತ್ತಿದೆ ಎಂದರು. ಜಿಲ್ಲೆಯಲ್ಲಿ ಈಗಾಗಲೇ 227 ಕೋಟಿ ರೂ. ವೆಚ್ಚದಲ್ಲಿ 24*7 ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸುಮಾರು 135 ರಿಂದ 150 ಕೋಟಿ ರೂ. ವೆಚ್ಚದಲ್ಲಿ ಬಳ್ಳಾರಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಮೆಗಾಡೇರಿ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಪ್ರತ್ಯೇಕವಾಗಿ ಮೀಸಲಿಟ್ಟಿದ್ದು, ಆ ಜಿಲ್ಲೆಗಳಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಕಟ್ಟಡ ಕಾಮಗಾರಿಗಳಿಗೆ ವ್ಯಯಿಸಲಾಗುತ್ತಿದೆ ಎಂದು ತಿಳಿಸಿದರು. ನಮ್ಮ
ಸರ್ಕಾರವು ಜನ ಸಾಮಾನ್ಯರಿಗೆ ಅತ್ಯುತ್ತಮ ಆಡಳಿತ ನೀಡಲು ಮುಂದಾಗಿದ್ದು, ಈ ಕುರಿತು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದರು. ರಾಜ್ಯದಲ್ಲಿ ಇ-ಖಾತಾ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ಶೇ.50 ರಷ್ಟು ಪ್ರಗತಿ ಸಾಧಿಸಲಾಗಿದೆ. ಬಳ್ಳಾರಿಯಲ್ಲಿಯೇ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು. ಈ ಭಾಗದ ತುಂಗಭದ್ರಾ ಅಣೆಕಟ್ಟಿನ 19 ನೇ ಕ್ರಸ್ಟ್ ಗೇಟ್ ಅಳವಡಿಕೆ ಕುರಿತಂತೆ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದರು. ಈ ವೇಳೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಉಪಸ್ಥಿತರಿದ್ದರು.
- *ಭಾರತ ನಲ್ಲಿ ವೈರಲ್*1
- ಚಳ್ಳಕೆರೆ ತಾಲುಕಿನ ಕಾಲುವೇಹಳ್ಳಿ ಗ್ರಾಮದಲ್ಲಿ ಶ್ರೀಬಂಡೆ ಬಸವೇಶ್ವರ ಸ್ವಾಮಿಯ ಕಾರ್ತಿಕೋತ್ಸವದ ಎರಡನೇ ದಿನವಾದ ಶುಕ್ರವಾರ ಹೂವಿನ ಪಲ್ಲಕ್ಕಿ ಮತ್ತು ಎತ್ತುಗಳಿಂದ ಕಲ್ಲುಕಂಭ ಎಳೆಯುವ ಭಕ್ತಿಭಾವ ಸ್ವರ್ಧೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಬಂಡೆ ಎಳೆಯುವ ಸ್ಪರ್ಧೆ: ಜಾತ್ರೆಯ ಭಕ್ತಿ ಪ್ರಧಾನ ಕಲ್ಲು ಬಂಡೆ ಎಳೆಯುವ ಸ್ಪರ್ಧೆ ಕುತೂಹಲದ ಭಕ್ತರ ಸಮ್ಮುಖದಲ್ಲಿ ಜರುಗಿತು. ಸುಮಾರು 15 ಟನ್ ತೂಕದ ಕಲ್ಲು ಬಂಡೆಯನ್ನು ಜೋಡು ಎತ್ತುಗಳಿಂದ 20 ಮೀಟರ್ ದೂರಕ್ಕೆ ಎಳೆಯುವ ವಿಶೇಷ ಸ್ವರ್ಧೆ ಇದು. ಮೊದಲ ಬಹುಮಾನ ಪಡೆಯಲು ನಿಗದಿತ ಸಮಯಕ್ಕೆ 26 ರೌಂಡ್, ದ್ವಿತಿಯ 20, ತೃತೀಯ 17, ನಾಲ್ಕನೇ ಬಹುಮಾನಕ್ಕೆ 17 ರೌಂಡಗೆ ಕಲ್ಲುಕಂಭವನ್ನು ಎಳೆಯಬೇಕು. ಈ ಸಲದ ಮೊದಲ ಸ್ಥಾನದಲ್ಲಿ 20 ಸಾವಿರ ಬಹುಮಾನ ಆಂಧ್ರ ಪ್ರದೇಶದ ಕರ್ನೂಲ್ ತಾಲುಕಿನವರು, ಎರಡನೇ ಸ್ಥಾನದಲ್ಲಿ 10 ಸಾವಿರ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆ ಮೂರನೇ ಸ್ಥಾನದಲ್ಲಿ 5 ಸಾವಿರ ಆಂಧ್ರ ಪ್ರದೇಶದ ರಾಯದುರ್ಗ, ನಾಲ್ಕನೇ ಸ್ಥಾನದಲ್ಲಿ 3 ಸಾವಿರ ಬಹುಮಾನವನ್ನು ಕಾಲುವೇಹಳ್ಳಿ ಗ್ರಾಮದ ಗೌಡರ ಗಾದ್ರಿ ಪಾಲನಾಯಕ ಎಂಬುವರು ಸ್ಪರ್ಧೆಯಲ್ಲಿ ಬಹುಮಾನ ತನ್ನದಾಗಿಸಿಕೊಂಡಿದ್ದಾರೆ. ರಾಜ್ಯದ ವಿವಿಧ ಜೆಲ್ಲೆ ಮತ್ತು ಆಂಧ್ರ ಪ್ರದೇಶದಿಂದಲು ಬಂಡೆ ಎಳೆಯುವ ಸ್ವರ್ಧೆಯಲ್ಲಿ ಭಾಗವಹಿಸಿದ್ದು, ಜಾತ್ರೆಯ ಸಂಭ್ರಮವನ್ನು ಇನ್ನಷ್ಟು ಮೆರೆಗುಗೊಳಿಸಿದತ್ತು.1
- Post by User104492
- *ಭಾರತ ನಲ್ಲಿ ವೈರಲ್*1
- *ಭಾರತ ನಲ್ಲಿ ವೈರಲ್*1
- *ಭಾರತ ನಲ್ಲಿ ವೈರಲ್*1
- ಸರಣಿ ಕಳ್ಳತನ . ಬೆಚ್ಚಿ ಬಿದ್ದ ಜನ... ಚಳ್ಳಕೆರೆ:ಒಂದೇ ಗ್ರಾಮದಲ್ಲಿ ಮನೆಯ ಬೇಗ ಮುರಿದು 6 ಮನೆ ಸರಣಿ ಕಳ್ಳತನವಾಗಿದ್ದ ಈ ಘಟನೆ ಗ್ರಾಮಸ್ಥರನ್ನು ಬೆಚ್ಚಿ ಬೀಳುವಂತೆ ಮಾಡಿದೆ.. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಒಟ್ಟು 6 ಮನೆಯ ಬೀಗಗಳನ್ನು ಮುರಿದು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ ಹೊನ್ನೂರು ಗ್ರಾಮದ ಹನುಮಂತರೆಡ್ಡಿ, ಲಕ್ಷ್ಮಣ್ ರೆಡ್ಡಿ , ಮಾರುತಿ ಮಂಜುನಾಥ ರೆಡ್ಡಿ ಸೇರಿದಂತೆ ಒಟ್ಟು 6 ಮನೆಯಲ್ಲಿ ಸರಣಿ ಕಳ್ಳತನವಾಗಿದೆ. ಮನೆಯಲ್ಲಿ ಯಾರು ಇಲ್ಲದಿರುವುದನ್ನ ಗಮನಿಸಿ ಬೈಕಿನಲ್ಲಿ ಬಂದ 5 ಜನ ಕಳ್ಳರು ಮನೆಯಲ್ಲಿದ್ದ ಚಿನ್ನ ನಗದು ದೋಚಿ ಪರಾರಿಯಾಗಿದ್ದಾರೆ.. ತಡುರಾತ್ರಿ ಗ್ರಾಮಕ್ಕೆ ಬಂದ ಕಳ್ಳರ ತಂಡ ಮಾರಕಾಸ್ತ್ರಗಳನ್ನು ಹಿಡಿದು ಗ್ರಾಮದಲ್ಲಿ ಓಡಾಡಿರುವಂತಹ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ಎಂಜಿ, ಸತ್ಯನಾರಾಯಣರಾವ್, ಬೆರಳಚ್ಚು ತಜ್ಞರು ಹಾಗೂ ತಳುಕು ವೃತ್ತ ನಿರೀಕ್ಷಕ ಹನುಂಮತಪ್ಪ ಶಿರೆಹಳ್ಳಿ, ಪಿಎಸ್ಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ತಳಕು ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ...1