logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಳವಳ್ಳಿ: ಸರ್ವರ ಸಹಕಾರದಿಂದ ಜಯಂತಿ ಮಹೋತ್ಸವವು ಯಶಸ್ವಿಯಾಗಿದೆ_ ಸುತ್ತೂರು ಶ್ರೀಗಳ ನುಡಿ • ೧೦೬೬ನೇ ಜಯಂತಿ ಮಹೋತ್ಸವದ ಯಶಸ್ವಿಗೆ ಶ್ರಮಿಸಿದ ಸರ್ವರಿಗೂ ಪೂಜ್ಯರಿಂದ ಅರ್ಶೀವಾದ ಮಳವಳ್ಳಿ: ಸರ್ವರ ಸಹಕಾರದಿಂದ ಮಳವಳ್ಳಿಯಲ್ಲಿ ನಡೆದ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ೧೦೬೬ನೆಯ ಜಯಂತಿ ಮಹೋತ್ಸವವು ಯಶಸ್ವಿಯಾಗಿದೆ ಎಂದು ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರು ನುಡಿದರು. ೧೦೬೬ನೇ ಜಯಂತಿ ಮಹೋತ್ಸವದ ಸಮಿತಿ ಹಾಗೂ ಕಾರ್ಯಕರ್ತರಿಗೆ ಸುತ್ತೂರು ಶ್ರೀಕ್ಷೇತ್ರದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಪರಮಪೂಜ್ಯರು, ಈ ಜಯಂತಿ ಮಹೋತ್ಸವವು ಇತಿಹಾಸದ ಪುಟಗಳಲ್ಲಿ ಸೇರಿದೆ. ಎಂದೂ ಮಾತನಾಡಿಸದಂತಹ ರಾಜಕೀಯ ವ್ಯಕ್ತಿಗಳು ಜಯಂತಿಯ ಕಾರ್ಯಕ್ರಮದಲ್ಲಿ ಪರಸ್ಪರ ಮುಖಾಮುಖಿಯಾಗಿ ಮಾತನಾಡಿಸಿದ್ದಾರೆ. ಪ್ರತಿದಿನ ಬೆಳಗಿನ ಜಾವದಲ್ಲಿ ನಡೆಯುತ್ತಿದ್ದ ಪ್ರಭಾತ್‌ಪೇರಿ ಕಾರ್ಯಕ್ರಮದಲ್ಲಿ ಬಡಾವಣೆಗಳ ಜನರು ತಮ್ಮ ಮನೆಯ ಕಾರ್ಯಕ್ರಮದಂತೆ ಶ್ರದ್ಧಾ ಭಕ್ತಿ, ಶಿಸ್ತು ಮತ್ತು ಆಸಕ್ತಿಯಿಂದ ಭಾಗವಹಿಸಿ ಸಂಭ್ರಮಿಸಿ, ಹೃದಯ ಶ್ರೀಮಂತಿಕೆಯನ್ನು ಮೆರೆದಿದ್ದಾರೆ ಎಂದು ತಿಳಿಸಿದರು. ಕನಕಪುರ ಶ್ರೀ ದೇಗುಲಮಠದ ಕಿರಿಯ ಶ್ರೀಗಳಾದ ನಿ.ಪ್ರ.ಸ್ವ ಪೂಜ್ಯ ಡಾ. ಶ್ರೀ ಚನ್ನಬಸವಸ್ವಾಮಿಗಳವರು ಶುಭಸಂದೇಶ ನೀಡಿ, ಪ್ರತಿಯೊಬ್ಬರ ಶ್ರಮದಿಂದ ಈ ಜಯಂತಿ ಮಹೋತ್ಸವವು ಅತ್ಯಂತ ಅರ್ಥಪೂರ್ಣವಾಗಿ, ಅಚ್ಚುಕಟ್ಟಾಗಿ ಎಲ್ಲರ ಪರಿಶ್ರಮದಿಂದ ನಡೆದಿರುವುದರ ಹಿಂದೆ ಪ್ರತಿಯೊಬ್ಬ ಸಹಕಾರ ಅತ್ಯಮೂಲ್ಯವಾಗಿದೆ ಎಂದರು. ಬೆಂಗಳೂರಿನ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮಿಗಳು ಶುಭಸಂದೇಶ ನೀಡಿ, ಭಾರತ ದೇಶವು ಪವಿತ್ರ ದೇಶವಾಗಿದೆ. ಮನುಕುಲದಲ್ಲಿ ಸಾರ್ಥಕ ಪಡೆಯಬೇಕಾದರೆ ಮಠಮಾನ್ಯಗಳ ಸೇವೆ ಅನನ್ಯ. ಜಾತ್ಯಾತೀತವಾಗಿ ಮಠಗಳು ಸೇವೆಯನ್ನು ನೀಡುತ್ತಿವೆ. ಸಂಸ್ಕೃತಿ, ಧಾರ್ಮಿಕತೆ ಉಳಿಸಿ ಬೆಳೆಸುವಲ್ಲಿ ಮಠಗಳ ಪಾತ್ರ ಅತ್ಯಮೂಲ್ಯವಾಗಿವೆ. ಆದರೆ ಯುವಕರು ಇಂದಿನ ದಿನಗಳಲ್ಲಿ ಸಂಸ್ಕೃತಿ, ಮಾನವೀಯ ಮೌಲ್ಯಗಳನ್ನು ಮರೆಯುತ್ತಿದ್ದಾರೆ. ಈ ಜಯಂತಿಯ ಮೂಲಕ ಸುತ್ತೂರು ಶ್ರೀಮಠವು ಮಾನವ ಜನಾಂಗಕ್ಕೆ ಉತ್ತಮ ಸಂದೇಶಗಳನ್ನು ನೀಡುತ್ತಿದೆ. ಅಧಿಕಾರ, ಹಣ, ಐಶ್ವರ್ಯ ಇವು ಯಾವುವು ಕೂಡ ಶಾಶÀ್ವತವಲ್ಲ. ಸಮಾಜಕ್ಕೆ ನೀಡಿದಂತಹ ನಿಸ್ವಾರ್ಥ ಸೇವೆಯು ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಉತ್ತಮ ಕೆಲಸಗಳನ್ನು ಮಾಡಿದರೆ, ದೇವರೆ ನಮ್ಮನ್ನು ಹುಡಿಕಿಕೊಂಡು ಬರುತ್ತಾರೆ. ಸುತ್ತೂರು ಶ್ರೀಮಠವು ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯನ್ನೆ ಮಾಡಿದೆ ಎಂದರು. ಮಾಜಿ ಸಚಿವರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು, ಶಾಸಕರಾದ ಶ್ರೀ ಪಿ.ಎಂ. ನರೇಂದ್ರಸ್ವಾಮಿರವರು ಮಾತನಾಡಿ, ತಮಗೆ ಹಂಚಿದAತಹ ಕಾರ್ಯಗಳನ್ನು ಪ್ರಾಮಾಣಿಕತೆ, ಶ್ರದ್ಧೆಯಿಂದ ನಿರ್ವಹಿಸಿದ್ದಾರೆ. ಮಳವಳ್ಳಿ ತಾಲ್ಲೂಕಿನಲ್ಲಿ ಇಂತಹ ಕಾರ್ಯಕ್ರಮಗಳು ಮುಂದೆ ನಡೆಯುತ್ತದೆಯೊ ಗೊತ್ತಿಲ್ಲ ಎಂಬAತೆ ಬಹಳ ಅಚ್ಚುಕಟ್ಟಾಗಿ ಪರಮಪೂಜ್ಯರ ಆಶೀರ್ವಾದದಿಂದ ಅರ್ಥಪೂರ್ಣವಾಗಿ ಜರುಗಿದೆ. ಇಂತಹ ಕಾರ್ಯಕ್ರಮಗಳು ನಡೆಯುವುದರಿಂದ, ಜನರಲ್ಲಿ ಹೊಂದಾಣಿಕೆ, ಸಮಾನತೆ, ಸಂಸ್ಕೃತಿ, ಮಾನವೀಯ ಮೌಲ್ಯಗಳು ಬೆಳೆಯುವಲ್ಲಿ ಸಹಕಾರಿಯಾಗಿವೆ. ಪರಮ ಪೂಜ್ಯರ ಆಶೀರ್ವಾದವಿದ್ದರೆ, ಒಣಹುಲ್ಲು ಕೂಡ ಚಿಗುರುತ್ತದೆ ಎಂಬುದಕ್ಕೆ ಈ ಜಯಂತಿ ಮಹೋತ್ಸವವು ಸಾಕ್ಷಿಯಾಗಿದೆ. ಶ್ರೀಗಳವರ ದೂರದೃಷ್ಟಿ ಮತ್ತು ದಣಿವರಿಯದ ಕಾಯಕದಿಂದ ಶ್ರೀಮಠವು ವಿಶ್ವವಿಖ್ಯಾತಿ ಪಡೆದಿದೆ. ಜಯಂತಿ ಮಹೋತ್ಸವದ ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆಮಾಡಿ, ಸೇವೆ ಮಾಡಿರುವುದಕ್ಕೆ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ ಎಂದು ನುಡಿದರು. ಮಾಜಿ ಉಪಸಭಪಾತಿ ಮರಿತಿಬ್ಬೆಗೌಡರು ಹಾಗೂ ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜುರವರು ಮಾತನಾಡಿ, ಸುತ್ತೂರು ಮಠಕ್ಕೂ ನನಗೂ ಅವಿನಾಭಾವ ಸಂಬAಧವಿದೆ. ತನ್ನ ಕ್ಷೇತ್ರದಲ್ಲಿ ಮಾತ್ರ ಜಯಂತಿ ಮಹೋತ್ಸವವನ್ನು ಆಚರಿಕೊಂಡರು ಎಂದು ಜನರು ಹೇಳುತ್ತಿದ್ದರು. ಆದರೆ ಜಯಂತಿ ಮಹೋತ್ಸವವು ಮಳವಳ್ಳಿಯಲ್ಲಿ ಅದ್ದೂರಿಯಾಗಿ ನಡೆದಿರುವುದು ನನಗೆ ತುಂಬಾ ಸಂತೋಷವನ್ನುAಟು ಮಾಡಿದೆ ಎಂದು ಮನದಾಳದಿಂದ ಮಾತನ್ನಾಡಿದರು. ಮಾಜಿ ಶಾಸಕರಾದ ಡಾ.ಕೆ ಅನ್ನದಾನಿರವರು ಮಾತನಾಡಿ, ಮಳವಳ್ಳಿಗೆ ರಾಷ್ಟçಪತಿಗಳು ಆಗಮಿಸಿದ್ದುದು ಇತಿಹಾಸವನ್ನು ಸೃಷ್ಟಿಸಿದೆ. ಈ ಜಯಂತಿ ಮಹೋತ್ಸವವು ಯಶಸ್ವಿಯಾಗಿ ನಡೆದಿರುವುದಕ್ಕೆ ಅಭಿನಂದನಾ ಸಮಾರಂಭವನ್ನು ಆಯೋಜನೆ ಮಾಡಿರುವುದು ಪರಮಪೂಜ್ಯರಲ್ಲಿರುವ ಹೃದಯ ಶ್ರೀಮಂತಿಕೆಯನ್ನು ತಿಳಿಸುತ್ತದೆ. ಇಂತಹ ಕಾರ್ಯಕ್ರಮಗಳು ದೇಶದಾದ್ಯಂತ ನಡೆಯಬೇಕೆಂಬುದು ನನ್ನ ಆಶಯ ಎಂದರು. ಮAಡ್ಯ ಜಿಲ್ಲಾಧಿಕಾರಿಗಳಾದ ಶ್ರೀ ಕುಮಾರ್‌ರವರು ಮಾತನಾಡಿ, ಮಳೆ ನಿಂತರೂ ಮಳೆ ಹನಿ ನಿಂತಿಲ್ಲ ಎಂಬ ನುಡಿಯಂತೆ ಇಂದಿಗೂ ತಾಲ್ಲೂಕಿನಾದ್ಯಂತ ಜನರು ಜಯಂತಿ ಕಾರ್ಯಕ್ರಮದ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದ ಯಶಸ್ಸಿನ ಹಿಂದೆ ಬಹಳಷ್ಟು ಜನರ ಪರಿಶ್ರಮವಿದೆ. ಪೂಜ್ಯ ಶ್ರೀಗಳವರ ಸಲಹೆ ಮತ್ತು ಮಾರ್ಗದರ್ಶನದಂತೆ ಅಚ್ಚುಕಟ್ಟಾಗಿ ನಡೆದಿದೆ. ಮಂಡ್ಯ ಜಿಲ್ಲೆಯ ಜನರು ನೀರು ಕೇಳಿದರೆ, ಪಾನಕ ಕೊಡುವಂತವರು ಎನ್ನುವಂತೆ ಮಳವಳ್ಳಿಯಲ್ಲಿ ಜಯಂತಿ ಮಹೋತ್ಸವವನ್ನು ಆಚರಿಸಿ ಸೈ ಎನಿಸಿಕೊಂಡಿದ್ದಾರೆ. ಸಮಾಜಕ್ಕೆ ಜ್ಞಾನದ ಬೆಳಕು, ಶಾಂತಿಯನ್ನು ಭೋದಿಸಿದಂತಹ ಮಹಾನ್ ಸಂತರು ಶಿವರಾತ್ರೀಶ್ವರರು ಎಂದು ನುಡಿದರು. ಕಾರ್ಯಕ್ರಮದಲ್ಲಿ ಮಳವಳ್ಳಿ ತಾಲ್ಲೂಕಿನ ಹರಗುರು ಚರಮೂರ್ತಿಗಳು, ಮಾಜಿ ಉಪಸಭಾಪತಿಗಳಾದ ಶ್ರೀ ಮರಿತಿಬ್ಬೇಗೌಡ, ಮಾಜಿ ಜಿಲ್ಲಾ ಪಂಚಾಯತ್‌ನ ಅಧ್ಯಕ್ಷರಾದ ಶ್ರೀ ಮರಿಗೌಡ, ಉದ್ಯಮಿಗಳಾದ ಎಂ.ಆರ್. ಉಮಾಪತಿ ಎಸ್. ನಿಶಾಂತ್, ಬಿಜೆಪಿ ಮುಖಂಡರಾದ ಎಸ್. ಸಚ್ಚಿದಾನಂದ, ಎಡಿಜಿಪಿ ನಂಜುAಡಸ್ವಾಮಿ, ಎ.ಡಿ.ಸಿ ಶಿವಾನಂದಮೂರ್ತಿ, ತಹಶೀಲ್ದಾರ್ ಲೋಕೇಶ್, ಪುರಸಭೆಯ ನಾಗರತ್ನ ಮತ್ತು ಅಧಿಕಾರಿಗಳು, ಚೆಸ್ಕಾಂ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಜೆಎಸ್‌ಎಸ್ ಮಹಾವಿದ್ಯಾಪೀಠದ ಅಧಿಕಾರಿಗಳು, ಮಳವಳ್ಳಿ ತಾಲ್ಲೂಕಿನ ಸಾವಿರಾರು ಕಾರ್ಯಕರ್ತರು, ಸಮಿತಿಯ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಸಿ. ಸೋಮಶೇಖರ್ ಅಭಿನಂದನಾ ನುಡಿಗಳನ್ನಾಡಿದರು. ಶಾಲಾ ಮಕ್ಕಳು ಹಾಗೂ ಸಂಗೀತ ಶಿಕ್ಷಕರು ಪಾರ್ಥನೆ ಸಲ್ಲಿಸಿದÀರು. ಶ್ರೀ ಪಿ.ಎಂ. ಮಹದೇವಸ್ವಾಮಿ ಸ್ವಾಗತಿಸಿದರು. ಶ್ರೀ ಬಿ. ನಿರಂಜನಮೂರ್ತಿ ವಂದಿಸಿದರು. ಡಾ. ರೇಚಣ್ಣ ನಿರೂಪಿಸಿದರು.

1 day ago
user_ಮಾಗನೂರು ಎಂ ಶಿವಕುಮಾರ್
ಮಾಗನೂರು ಎಂ ಶಿವಕುಮಾರ್
Journalist Malavalli, Mandya•

More news from ಕರ್ನಾಟಕ and nearby areas
  • ಹನೂರು: ತಾಲೂಕಿನ ಬೂದಿಪಡಗ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಉಂಟಾಗಿ, ಪೊಲೀಸ್ ಪೇದೆಯೊಬ್ಬರ ಪುತ್ರನಿಂದ ಜಿಲ್ಲಾ ಬುಡಕಟ್ಟು ಗಿರಿಜನ ಸಂಘದ ಅಧ್ಯಕ್ಷ ರಂಗೇಗೌಡ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾದ ಘಟನೆ ಖಂಡಿಸಿ, ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಡಕಟ್ಟು ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಲೋಕನಹಳ್ಳಿ ಹೋಬಳಿಯ ಬೂದಿಪಡಗ ಗ್ರಾಮದಲ್ಲಿ ಕಳೆದ ಎರಡು–ಮೂರು ವರ್ಷಗಳಿಂದ ಅಕ್ರಮವಾಗಿ ಸಾರಾಯಿ ಮಾರಾಟ ನಡೆಯುತ್ತಿದೆ ಎನ್ನಲಾಗಿದ್ದು, ಇದರಿಂದ ಗ್ರಾಮದಲ್ಲಿ ಅಹಿತಕರ ಘಟನೆಗಳು ಹೆಚ್ಚಾಗುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಹಾಗೂ ವಿವಿಧ ಸಮುದಾಯದ ಯಜಮಾನರು ಸಭೆ ನಡೆಸಿ, ಅಕ್ರಮ ಮದ್ಯ ಮಾರಾಟ ಮಾಡುವವರಿಗೆ ಎಚ್ಚರಿಕೆ ನೀಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ತೀಟೆ ಜಗಳದ ವೇಳೆ, ಬೂದಿಪಡಗ ಗ್ರಾಮದ ಪೊಲೀಸ್ ಪೇದೆಯೊಬ್ಬರ ಪುತ್ರ ಕಿಶೋರ್ ಎಂಬಾತನು, ಗ್ರಾಮದ ಮುಖಂಡ, ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಜಿಲ್ಲಾ ಬುಡಕಟ್ಟು ಗಿರಿಜನ ಸಂಘದ ಅಧ್ಯಕ್ಷ ರಂಗೇಗೌಡ ಅವರ ಮನೆಗೆ ನುಗ್ಗಿ ಗಲಾಟೆ ನಡೆಸಿ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ರಂಗೇಗೌಡ ಅವರು ಹನೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದರು. ಆದರೆ ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆ ಬೇಸತ್ತ ಬುಡಕಟ್ಟು ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಬುಡಕಟ್ಟು ಕಾರ್ಯದರ್ಶಿ ಮಾದೇಗೌಡ, ಆಧಿವಾಡಿ ಪೋಡುಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಿ, ನಮ್ಮ ಅದ್ಯಕ್ಷರ ಮೇಲೆ ಹಲ್ಲೆ ನಡೆಸಿದ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವವರ ಕುಟುಂಬದವರಿಂದಲೇ ಕಾನೂನು ಉಲ್ಲಂಘನೆ ನಡೆಯುತ್ತಿರುವುದು ಖಂಡನೀಯ ಎಂದು ಹೇಳಿದರು.
    1
    ಹನೂರು: ತಾಲೂಕಿನ ಬೂದಿಪಡಗ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಉಂಟಾಗಿ, ಪೊಲೀಸ್ ಪೇದೆಯೊಬ್ಬರ ಪುತ್ರನಿಂದ ಜಿಲ್ಲಾ ಬುಡಕಟ್ಟು ಗಿರಿಜನ ಸಂಘದ ಅಧ್ಯಕ್ಷ ರಂಗೇಗೌಡ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾದ ಘಟನೆ ಖಂಡಿಸಿ, ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಡಕಟ್ಟು ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಲೋಕನಹಳ್ಳಿ ಹೋಬಳಿಯ ಬೂದಿಪಡಗ ಗ್ರಾಮದಲ್ಲಿ ಕಳೆದ ಎರಡು–ಮೂರು ವರ್ಷಗಳಿಂದ ಅಕ್ರಮವಾಗಿ ಸಾರಾಯಿ ಮಾರಾಟ ನಡೆಯುತ್ತಿದೆ ಎನ್ನಲಾಗಿದ್ದು, ಇದರಿಂದ ಗ್ರಾಮದಲ್ಲಿ ಅಹಿತಕರ ಘಟನೆಗಳು ಹೆಚ್ಚಾಗುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಹಾಗೂ ವಿವಿಧ ಸಮುದಾಯದ ಯಜಮಾನರು ಸಭೆ ನಡೆಸಿ, ಅಕ್ರಮ ಮದ್ಯ ಮಾರಾಟ ಮಾಡುವವರಿಗೆ ಎಚ್ಚರಿಕೆ ನೀಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ತೀಟೆ ಜಗಳದ ವೇಳೆ, ಬೂದಿಪಡಗ ಗ್ರಾಮದ ಪೊಲೀಸ್ ಪೇದೆಯೊಬ್ಬರ ಪುತ್ರ ಕಿಶೋರ್ ಎಂಬಾತನು, ಗ್ರಾಮದ ಮುಖಂಡ, ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಜಿಲ್ಲಾ ಬುಡಕಟ್ಟು ಗಿರಿಜನ ಸಂಘದ ಅಧ್ಯಕ್ಷ ರಂಗೇಗೌಡ ಅವರ ಮನೆಗೆ ನುಗ್ಗಿ ಗಲಾಟೆ ನಡೆಸಿ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆಯ ನಂತರ ರಂಗೇಗೌಡ ಅವರು ಹನೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದರು. ಆದರೆ ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆ ಬೇಸತ್ತ ಬುಡಕಟ್ಟು ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಬುಡಕಟ್ಟು ಕಾರ್ಯದರ್ಶಿ ಮಾದೇಗೌಡ,  ಆಧಿವಾಡಿ ಪೋಡುಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಿ, 
ನಮ್ಮ ಅದ್ಯಕ್ಷರ ಮೇಲೆ ಹಲ್ಲೆ ನಡೆಸಿದ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವವರ ಕುಟುಂಬದವರಿಂದಲೇ ಕಾನೂನು ಉಲ್ಲಂಘನೆ ನಡೆಯುತ್ತಿರುವುದು ಖಂಡನೀಯ ಎಂದು ಹೇಳಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    8 min ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    50 min ago
  • ಸ್ಮಶಾನಕ್ಕೆ ರಸ್ತೆ ಕಲ್ಪಿಸಿ ಕೊಡದಿದ್ದರೆ ಉಗ್ರ ಹೋರಾಟ -  ಗ್ರಾಮರಸ್ಥರು ಎಚ್ಚರಿಕೆ. ಹನೂರು: ತಾಲೂಕಿನ ಭೈರನತ್ತ ಗ್ರಾಮದ ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಸ್ಮಶಾನಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡಿರುವ ರಸ್ತೆ ತೆರವು ಮಾಡದಿದ್ದರೆ ತಾಲೂಕು ಮಾದಿಗ ಸಮುದಾಯದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದರು. ತಾಲ್ಲೂಕಿನ ಭೈರನತ್ತ ಗ್ರಾಮದ ಪರಿಶಿಷ್ಟ ಜಾತಿ ಮಾದಿಗ ಸಮುದಾಯದ ಸ್ಮಶಾನಕ್ಕೆ ತೆರಳುವ ರಸ್ತೆಯನ್ನು ಇದೇ ಗ್ರಾಮದ ಲೋಕೇಶ್ ಎಂಬವರು ಒತ್ತುವರಿ ಮಾಡಿಕೊಂಡಿದ್ದರು. ಈ ಸಂಬಂಧ ಒತ್ತುವರಿಯನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಸಂಬಂಧ ತಹಶೀಲ್ದಾರ್ ಕೆಎಸ್ ಚೈತ್ರ ರವರ ಸಮ್ಮುಖದಲ್ಲಿ ಸರ್ವೆ ಅಧಿಕಾರಿಗಳು ಸ್ಥಳಕ್ಕೆ ಬಂದು ಸರ್ವೆಮಾಡಿದರು. ಆ ಪ್ರಕಾರ ಹಿಂದೆ ಇದ್ದ ರೂಢಿಗತ ದಾರಿಯು ಖಾಸಗಿ ವ್ಯಕ್ತಿಗೆ ಸೇರಿದ ಪಟ್ಟಾ ಭೂಮಿಯಾಗಿದೆ. ಅದರ ಪಕ್ಕದಲ್ಲಿರುವ ಹಳ್ಳದಲ್ಲಿ ನಿಮಗೆ ದಾರಿ ಬಿಡಿಸಬೇಕು ಎಂದು ಭೂಮಾಪನ ಇಲಾಖೆ ಅಧಿಕಾರಿ ನಟರಾಜು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಅರಿತ ತಹಶೀಲ್ದಾರ್ ರವರು ಗ್ರಾಮಸ್ಥರು ಧೃತಿಗೆಡಬೇಡಿ. ನಿಮಗೆ ರಸ್ತೆ ಕಲ್ಪಿಸಿಕೊಡುವ ಜವಾಬ್ದಾರಿ ನಮ್ಮದು. ಒಂದು ವಾರ ಗಡುವು ನೀಡಿ, ಜಮೀನು ಮಾಲೀಕರ ಜೊತೆ ಮಾತನಾಡಿ ರಸ್ತೆಗೆ ಅಗತ್ಯವಾಗಿರುವ ಜಾಗ ಬಿಡಿಸಲು ಮನವೊಲಿಸಲಾಗುವುದು ಎಂದು ಭರವಸೆ ನೀಡಿದರು.
    4
    ಸ್ಮಶಾನಕ್ಕೆ ರಸ್ತೆ ಕಲ್ಪಿಸಿ ಕೊಡದಿದ್ದರೆ ಉಗ್ರ ಹೋರಾಟ -  ಗ್ರಾಮರಸ್ಥರು ಎಚ್ಚರಿಕೆ.
ಹನೂರು: ತಾಲೂಕಿನ ಭೈರನತ್ತ ಗ್ರಾಮದ ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಸ್ಮಶಾನಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಖಾಸಗಿ ವ್ಯಕ್ತಿ ಒತ್ತುವರಿ ಮಾಡಿಕೊಂಡಿರುವ ರಸ್ತೆ ತೆರವು ಮಾಡದಿದ್ದರೆ ತಾಲೂಕು ಮಾದಿಗ ಸಮುದಾಯದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದರು.
ತಾಲ್ಲೂಕಿನ ಭೈರನತ್ತ ಗ್ರಾಮದ ಪರಿಶಿಷ್ಟ ಜಾತಿ ಮಾದಿಗ ಸಮುದಾಯದ ಸ್ಮಶಾನಕ್ಕೆ ತೆರಳುವ ರಸ್ತೆಯನ್ನು ಇದೇ ಗ್ರಾಮದ ಲೋಕೇಶ್ ಎಂಬವರು ಒತ್ತುವರಿ ಮಾಡಿಕೊಂಡಿದ್ದರು. ಈ ಸಂಬಂಧ ಒತ್ತುವರಿಯನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಸಂಬಂಧ ತಹಶೀಲ್ದಾರ್ ಕೆಎಸ್ ಚೈತ್ರ ರವರ ಸಮ್ಮುಖದಲ್ಲಿ ಸರ್ವೆ ಅಧಿಕಾರಿಗಳು ಸ್ಥಳಕ್ಕೆ ಬಂದು ಸರ್ವೆಮಾಡಿದರು. ಆ ಪ್ರಕಾರ ಹಿಂದೆ ಇದ್ದ ರೂಢಿಗತ ದಾರಿಯು ಖಾಸಗಿ ವ್ಯಕ್ತಿಗೆ ಸೇರಿದ ಪಟ್ಟಾ ಭೂಮಿಯಾಗಿದೆ. ಅದರ ಪಕ್ಕದಲ್ಲಿರುವ ಹಳ್ಳದಲ್ಲಿ ನಿಮಗೆ ದಾರಿ ಬಿಡಿಸಬೇಕು ಎಂದು ಭೂಮಾಪನ ಇಲಾಖೆ ಅಧಿಕಾರಿ ನಟರಾಜು ತಿಳಿಸಿದ್ದಾರೆ.
ಪರಿಸ್ಥಿತಿಯನ್ನು ಅರಿತ ತಹಶೀಲ್ದಾರ್ ರವರು ಗ್ರಾಮಸ್ಥರು ಧೃತಿಗೆಡಬೇಡಿ. ನಿಮಗೆ ರಸ್ತೆ ಕಲ್ಪಿಸಿಕೊಡುವ ಜವಾಬ್ದಾರಿ ನಮ್ಮದು. ಒಂದು ವಾರ ಗಡುವು ನೀಡಿ, ಜಮೀನು ಮಾಲೀಕರ ಜೊತೆ ಮಾತನಾಡಿ ರಸ್ತೆಗೆ ಅಗತ್ಯವಾಗಿರುವ ಜಾಗ ಬಿಡಿಸಲು ಮನವೊಲಿಸಲಾಗುವುದು ಎಂದು ಭರವಸೆ ನೀಡಿದರು.
    user_Vijay kumar
    Vijay kumar
    Journalist ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    12 hrs ago
  • ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೋಲೀಸ್ ಠಾಣೆಯ ಪಿಎಸ್ಐ ಶ್ಯಾಮಲಾ ರವರಿಂದ ಪತ್ರಕರ್ತರಿಗೆ ಹೆಲ್ಮೆಟ್ ವಿತರಣೆ
    1
    ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೋಲೀಸ್ ಠಾಣೆಯ ಪಿಎಸ್ಐ ಶ್ಯಾಮಲಾ ರವರಿಂದ ಪತ್ರಕರ್ತರಿಗೆ ಹೆಲ್ಮೆಟ್ ವಿತರಣೆ
    user_Venu Gopal
    Venu Gopal
    Journalist Sidlaghatta, Chikkaballapura•
    9 hrs ago
  • ವಿಬಿ-ಜಿ ರಾಮ್ ಜಿ ಮಸೂದೆ ಕೇಂದ್ರ ಸರಕಾರ ಹಿಂದಕ್ಕೆ ಪಡೆಯದಿದ್ದರೆ ಪ್ರಬಲ ಹೋರಾಟ: ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ' (ನರೇಗಾ) ಹೆಸರಿನಲ್ಲಿ ಗಾಂಧಿ ಹೆಸರನ್ನು ಕೈಬಿಟ್ಟು 'ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025'ಯನ್ನು ಮಂಡಿಸುವ ಮೊದಲು ಯಾವುದೇ ಚರ್ಚೆಯನ್ನು ನಡೆಸದೇ ತನ್ನ ಬುಲ್ಡೋಜರ್ ಸರ್ವಾಧಿಕಾರ ನೀತಿಯಿಂದ ಮಸೂದೆಯನ್ನು ಪಾಸ್ ಮಾಡಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಮಸೂದೆಯಿಂದ ಗಾಂಧಿ ಹೆಸರನ್ನು ತೆಗೆದು ಹಾಕುವ ಹುನ್ನಾರವನ್ನು ಸರಕಾರ ಮಾಡುತ್ತಾ ಇದೆ. ಜನರು ಇದನ್ನು ಒಪ್ಪುವುದಿಲ್ಲ ಎಂದು ಗೊತ್ತಿದ್ದರೂ ಸಹ ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ. ಈ ಮೊದಲಿದ್ದ ಉದ್ಯೋಗ ಖಾತರಿ ಯೋಜನೆಯನ್ನು ಹೊಸ ಕಾನೂನಿನ ಮೂಲಕ ದುರ್ಬಲ ಮಾಡಲಾಗಿದೆ . ಆರ್ ಎಸ್ ಎಸ್, ಬಿಜೆಪಿಗರಿಗೆ ದೇಶದ ಅಭಿವೃದ್ಧಿಗೆ ಮಹತ್ವವನ್ನು ನೀಡುವ ಬದಲು ಈ ಮೊದಲು ಜನರ ಕಲ್ಯಾಣವನ್ನು ಮಾಡುತ್ತಿದ್ದ ಯೋಜನೆಯನ್ನು ನಿಷ್ತ್ರೀಯ ಮಾಡುವ ಉದ್ದೇಶವನ್ನು ಹೊಂದಿದ್ದಾರೆ. ಈ ಕ್ರಮಕ್ಕೆ ಕಾಂಗ್ರೆಸ್ ತೀವ್ರವಾಗಿ ಖಂಡನೆಯನ್ನು ವ್ಯಕ್ತಪಡಿಸುತ್ತಿದೆ. ನರೇಗಾ ಹೋಗಿ ವಿಬಿ-ಜಿ ರಾಮ್ ಜಿ ಎಂದು ಮಾಡಲಾಗಿದ್ದು ಇದರಲ್ಲಿ ರಾಮನ ಹೆಸರನ್ನು ಯಾಕೆ ಸೇರಿಸಲಾಗಿದೆಯೋ ತಿಳಿಯದು ಎಂದು ಪ್ರಶ್ನೆ ಮಾಡಿದರು. ವಿಬಿ-ಜಿ ರಾಮ್ ಜಿ ಯೋಜನೆ ಕೇಂದ್ರ ಸರಕಾರದ್ದು ಆದರೆ ಅದರಲ್ಲಿ ರಾಜ್ಯ ಸರಕಾರದ ಪಾಲು ಹೆಚ್ಚಿಗೆ ಇದೆ. ಆರ್ಥಿಕವಾಗಿ ಬಡವಾದ ದೇಶಗಳಿಗೆ ಅವುಗಳನ್ನು ಭರಿಸುವ ಶಕ್ತಿ ಇದೆಯೇ? ಇದು ಉದ್ಯೋಗ ಗ್ಯಾರಂಟಿ ಯೋಜನೆಯಲ್ಲ ಇದು ಉದ್ಯೋಗ ಬೋಗಸ್ ಯೋಜನೆ ಎಂದು ಅವರು ಕಿಡಿಕಾರಿದರು. ಉತ್ತಮ ಕಾನೂನನ್ನು ಯಾಕೆ ವಿಸರ್ಜನೆ ಮಾಡಲಾಗಿದೆ ಎಂಬುದೇ ತಿಳಿತಾ ಇಲ್ಲ. ಇದು ಪಂಚಾಯತ್ ರಾಜ್ ವ್ಯವಸ್ಥೆಯ ಮೇಲೆ ಚಪ್ಪಡಿ ಕಲ್ಲುಹಾಕಿದ ಹಾಗೆ ಆಗಿದೆ. ಇದರಿಂದ ವಿಕೇಂದ್ರೀಕರಣ ಆಡಳಿತ ಸಂಪೂರ್ಣವಾಗಿ ಹದಗೆಟ್ಟು ಕೇಂದ್ರೀಕರಣ ನೀತಿಗೆ ಅಡಿಪಾಯ ಹಾಕಲಿದೆ ಎಂದರು. ಈ ಮಸೂದೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಇಲ್ಲದಿದ್ದರೆ ಕಾಂಗ್ರೆಸ್ ಸರಕಾರ ದೊಡ್ಡ ಮಟ್ಟದ ಹೋರಾಟವನ್ನು ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು . ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ, ಪಕ್ಷದ ಮುಖಂಡರಾದ ಪದ್ಮರಾಜ್ ಪೂಜಾರಿ, ವಿಶ್ವಾಸ್ ಕುಮಾರ್, ವಿನಯ್ ರಾಜ್, ಶುಭೋದಯ ಆಳ್ವ , ಲಾವಣ್ಯ ಬಲ್ಲಾಳ್ ಸಹಿತ ಮುಂತಾದವರು ಉಪಸ್ಥಿತರಿದ್ದರು. ವರದಿ: ಶಂಶೀರ್ ಬುಡೋಳಿ
    1
    ವಿಬಿ-ಜಿ ರಾಮ್ ಜಿ  ಮಸೂದೆ ಕೇಂದ್ರ ಸರಕಾರ ಹಿಂದಕ್ಕೆ ಪಡೆಯದಿದ್ದರೆ ಪ್ರಬಲ ಹೋರಾಟ: ಸಚಿವ ದಿನೇಶ್ ಗುಂಡೂರಾವ್ 
ಕೇಂದ್ರ ಸರ್ಕಾರ  ಲೋಕಸಭೆಯಲ್ಲಿ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ' (ನರೇಗಾ) ಹೆಸರಿನಲ್ಲಿ ಗಾಂಧಿ ಹೆಸರನ್ನು ಕೈಬಿಟ್ಟು 'ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025'ಯನ್ನು ಮಂಡಿಸುವ ಮೊದಲು ಯಾವುದೇ ಚರ್ಚೆಯನ್ನು ನಡೆಸದೇ ತನ್ನ ಬುಲ್ಡೋಜರ್  ಸರ್ವಾಧಿಕಾರ ನೀತಿಯಿಂದ ಮಸೂದೆಯನ್ನು ಪಾಸ್ ಮಾಡಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಮಸೂದೆಯಿಂದ  ಗಾಂಧಿ ಹೆಸರನ್ನು ತೆಗೆದು ಹಾಕುವ ಹುನ್ನಾರವನ್ನು ಸರಕಾರ ಮಾಡುತ್ತಾ ಇದೆ. ಜನರು ಇದನ್ನು ಒಪ್ಪುವುದಿಲ್ಲ ಎಂದು ಗೊತ್ತಿದ್ದರೂ ಸಹ  ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ. ಈ ಮೊದಲಿದ್ದ  ಉದ್ಯೋಗ ಖಾತರಿ ಯೋಜನೆಯನ್ನು ಹೊಸ ಕಾನೂನಿನ ಮೂಲಕ ದುರ್ಬಲ ಮಾಡಲಾಗಿದೆ . ಆರ್ ಎಸ್ ಎಸ್, ಬಿಜೆಪಿಗರಿಗೆ ದೇಶದ ಅಭಿವೃದ್ಧಿಗೆ ಮಹತ್ವವನ್ನು ನೀಡುವ ಬದಲು ಈ ಮೊದಲು ಜನರ ಕಲ್ಯಾಣವನ್ನು ಮಾಡುತ್ತಿದ್ದ ಯೋಜನೆಯನ್ನು ನಿಷ್ತ್ರೀಯ ಮಾಡುವ ಉದ್ದೇಶವನ್ನು ಹೊಂದಿದ್ದಾರೆ. ಈ ಕ್ರಮಕ್ಕೆ ಕಾಂಗ್ರೆಸ್ ತೀವ್ರವಾಗಿ ಖಂಡನೆಯನ್ನು ವ್ಯಕ್ತಪಡಿಸುತ್ತಿದೆ. ನರೇಗಾ ಹೋಗಿ  ವಿಬಿ-ಜಿ ರಾಮ್ ಜಿ ಎಂದು ಮಾಡಲಾಗಿದ್ದು ಇದರಲ್ಲಿ ರಾಮನ ಹೆಸರನ್ನು ಯಾಕೆ ಸೇರಿಸಲಾಗಿದೆಯೋ ತಿಳಿಯದು  ಎಂದು ಪ್ರಶ್ನೆ ಮಾಡಿದರು. ವಿಬಿ-ಜಿ ರಾಮ್ ಜಿ ಯೋಜನೆ ಕೇಂದ್ರ ಸರಕಾರದ್ದು ಆದರೆ ಅದರಲ್ಲಿ ರಾಜ್ಯ ಸರಕಾರದ ಪಾಲು ಹೆಚ್ಚಿಗೆ ಇದೆ. ಆರ್ಥಿಕವಾಗಿ ಬಡವಾದ ದೇಶಗಳಿಗೆ ಅವುಗಳನ್ನು ಭರಿಸುವ ಶಕ್ತಿ ಇದೆಯೇ?  ಇದು ಉದ್ಯೋಗ ಗ್ಯಾರಂಟಿ ಯೋಜನೆಯಲ್ಲ ಇದು ಉದ್ಯೋಗ ಬೋಗಸ್  ಯೋಜನೆ ಎಂದು  ಅವರು ಕಿಡಿಕಾರಿದರು. ಉತ್ತಮ ಕಾನೂನನ್ನು ಯಾಕೆ ವಿಸರ್ಜನೆ ಮಾಡಲಾಗಿದೆ ಎಂಬುದೇ ತಿಳಿತಾ ಇಲ್ಲ. ಇದು ಪಂಚಾಯತ್ ರಾಜ್ ವ್ಯವಸ್ಥೆಯ ಮೇಲೆ ಚಪ್ಪಡಿ ಕಲ್ಲುಹಾಕಿದ ಹಾಗೆ ಆಗಿದೆ. ಇದರಿಂದ  ವಿಕೇಂದ್ರೀಕರಣ ಆಡಳಿತ ಸಂಪೂರ್ಣವಾಗಿ ಹದಗೆಟ್ಟು ಕೇಂದ್ರೀಕರಣ ನೀತಿಗೆ ಅಡಿಪಾಯ ಹಾಕಲಿದೆ ಎಂದರು. ಈ ಮಸೂದೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಇಲ್ಲದಿದ್ದರೆ ಕಾಂಗ್ರೆಸ್ ಸರಕಾರ ದೊಡ್ಡ ಮಟ್ಟದ ಹೋರಾಟವನ್ನು ಮಾಡಲಾಗುವುದೆಂದು  ಎಚ್ಚರಿಕೆ ನೀಡಿದರು . 
ಪತ್ರಿಕಾಗೋಷ್ಠಿಯಲ್ಲಿ  ವಿಧಾನ ಪರಿಷತ್ ಶಾಸಕರಾದ  ಐವನ್ ಡಿಸೋಜಾ, ಪಕ್ಷದ ಮುಖಂಡರಾದ ಪದ್ಮರಾಜ್ ಪೂಜಾರಿ, ವಿಶ್ವಾಸ್ ಕುಮಾರ್, ವಿನಯ್ ರಾಜ್, ಶುಭೋದಯ ಆಳ್ವ ,  ಲಾವಣ್ಯ ಬಲ್ಲಾಳ್ ಸಹಿತ ಮುಂತಾದವರು ಉಪಸ್ಥಿತರಿದ್ದರು.
ವರದಿ: ಶಂಶೀರ್ ಬುಡೋಳಿ
    user_Shamsheer Budoli
    Shamsheer Budoli
    Journalist Dakshina Kannada, Karnataka•
    16 min ago
  • ಭೀಕರ ಅಪಘಾತ: ಬಾಲಕಿ ಸೇರಿ ನಾಲ್ವರು ಸ್ವಾಮಿ ಅಯ್ಯಪ್ಪ ಭಕ್ತರು ಸಾವು ತುಮಕೂರಿನ :ಜಿಲ್ಲೆಯ ಕೋರ ಬಳಿ ಶುಕ್ರವಾರ ಬೆಳಗಿನ ವೇಳೆ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ (30), ಗವಿಸಿದ್ದಪ್ಪ (28)ಮೃತರು. ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    1
    ಭೀಕರ ಅಪಘಾತ: ಬಾಲಕಿ ಸೇರಿ ನಾಲ್ವರು  ಸ್ವಾಮಿ ಅಯ್ಯಪ್ಪ ಭಕ್ತರು ಸಾವು
ತುಮಕೂರಿನ :ಜಿಲ್ಲೆಯ ಕೋರ ಬಳಿ ಶುಕ್ರವಾರ ಬೆಳಗಿನ ವೇಳೆ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ  ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಿ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಸಾಕ್ಷಿ (7), ಮಾರುತಪ್ಪ, (45), ವೆಂಕಟೇಶ  (30), ಗವಿಸಿದ್ದಪ್ಪ (28)ಮೃತರು. ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಹೊಳಲ್ಕೆರೆ ಪಟ್ಟಣದಲ್ಲಿ ಇದೇ ಜನವರಿ 14 ರಂದು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ಶಾಸಕ ಎಂ ಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಂ ಚಂದ್ರಪ್ಪ ಅವರು ಮಾತನಾಡಿದ್ದು ಇದೇ 14 ರಂದು ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎರಡು ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ
    1
    ಹೊಳಲ್ಕೆರೆ ಪಟ್ಟಣದಲ್ಲಿ ಇದೇ ಜನವರಿ 14 ರಂದು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗಿ ಶಾಸಕ ಎಂ ಚಂದ್ರಪ್ಪ ತಿಳಿಸಿದ್ದಾರೆ. ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಂ ಚಂದ್ರಪ್ಪ ಅವರು ಮಾತನಾಡಿದ್ದು ಇದೇ 14 ರಂದು ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎರಡು ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಏಳು ಅಂಗಡಿಗಳು ಸಂಪೂರ್ಣವಾಗಿ ಭಸ್ಮವಾಗಿವೆ. ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಿರುವ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ ಬೆಳಗಿನ ಜಾವ ಸುಮಾರು 3.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಬಿಳಿಗಿರಿರಂಗನ ಬೆಟ್ಟದ ಸರ್ಕಲ್ ಪ್ರದೇಶದಲ್ಲಿರುವ ಅಂಗಡಿಗಳಿಗೆ ಈ ಬೆಂಕಿ ವ್ಯಾಪಿಸಿದ್ದು, ಏಳು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಅಂಗಡಿಗಳಲ್ಲಿ ಅನಿಲ ಸಿಲಿಂಡರ್‌ಗಳು ಇದ್ದ ಕಾರಣ ಬೆಂಕಿಯನ್ನು ತಕ್ಷಣ ನಂದಿಸಲು ಸಾಧ್ಯವಾಗಲಿಲ್ಲ. ಜೊತೆಗೆ ರಾತ್ರಿ ಸಮಯದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವಿದ್ದರಿಂದ ನೀರು ತರಲು ಸಾಧ್ಯವಾಗದೆ, ಬೆಂಕಿ ಇನ್ನಷ್ಟು ವ್ಯಾಪಿಸಲು ಕಾರಣವಾಯಿತು. ಬೆಂಕಿಯ ಕೆನ್ನಾಲಿಗೆಗೆ ಅಂಗಡಿಗಳಲ್ಲಿದ್ದ ಎಲ್ಲಾ ವಸ್ತುಗಳು ನಾಶವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
    2
    ಚಾಮರಾಜನಗರ ಜಿಲ್ಲೆಯ
ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಏಳು ಅಂಗಡಿಗಳು ಸಂಪೂರ್ಣವಾಗಿ ಭಸ್ಮವಾಗಿವೆ.
ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಿರುವ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ ಬೆಳಗಿನ ಜಾವ ಸುಮಾರು 3.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಬಿಳಿಗಿರಿರಂಗನ ಬೆಟ್ಟದ ಸರ್ಕಲ್ ಪ್ರದೇಶದಲ್ಲಿರುವ ಅಂಗಡಿಗಳಿಗೆ ಈ ಬೆಂಕಿ ವ್ಯಾಪಿಸಿದ್ದು, ಏಳು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ.
ಅಂಗಡಿಗಳಲ್ಲಿ ಅನಿಲ ಸಿಲಿಂಡರ್‌ಗಳು ಇದ್ದ ಕಾರಣ ಬೆಂಕಿಯನ್ನು ತಕ್ಷಣ ನಂದಿಸಲು ಸಾಧ್ಯವಾಗಲಿಲ್ಲ. ಜೊತೆಗೆ ರಾತ್ರಿ ಸಮಯದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವಿದ್ದರಿಂದ ನೀರು ತರಲು ಸಾಧ್ಯವಾಗದೆ, ಬೆಂಕಿ ಇನ್ನಷ್ಟು ವ್ಯಾಪಿಸಲು ಕಾರಣವಾಯಿತು.
ಬೆಂಕಿಯ ಕೆನ್ನಾಲಿಗೆಗೆ ಅಂಗಡಿಗಳಲ್ಲಿದ್ದ ಎಲ್ಲಾ ವಸ್ತುಗಳು ನಾಶವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.