Shuru
Apke Nagar Ki App…
ಬಿ ಎಸ್ ವೈ ಅಭಿಮಾನೋತ್ಸವ ಕಾರ್ಯಕ್ರಮದ ವೇಧಿಕೆ ನಿರ್ಮಾಣ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಬೇಟಿ ನೀಡಿ ಬಿ ಎಸ್ ವೈ ಅಭಿಮಾನೋತ್ಸವ ಕಾರ್ಯಕ್ರಮದ ವೇಧಿಕೆ ನಿರ್ಮಾಣ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಹೊರ ವಲಯದ ಮಾದಾರ ಚನ್ನಯ್ಯ ಮಠದ ಬಳಿ ಬಿ ಎಸ್ ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಪೆಂಡಾಲ್ ನಿರ್ಮಾಣ ಹಾಗೂ ಸ್ಥಳ ವೀಕ್ಷಣೆಯನ್ನು ಎಸ್ಪಿ ರಂಜಿತ್ ಕುಮಾರ್ ಬಂಡಾರು ಹಾಗೂ ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಹೆಚ್ಚಿನ ಮಾಹಿತಿಯನ್ನ ಪಡೆದಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಅಭಿಮಾನೋತ್ಸವ ಉಸ್ತುವಾರಿ ತಮೇಶ ಗೌಡ ಮಾಯಿತಿ ನೀಡಿ ಮಾದ್ಯಮರೊಂದಿಗೆ ಮಾತನಾಡಿದರು.
Vinay P palekar
ಬಿ ಎಸ್ ವೈ ಅಭಿಮಾನೋತ್ಸವ ಕಾರ್ಯಕ್ರಮದ ವೇಧಿಕೆ ನಿರ್ಮಾಣ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಬೇಟಿ ನೀಡಿ ಬಿ ಎಸ್ ವೈ ಅಭಿಮಾನೋತ್ಸವ ಕಾರ್ಯಕ್ರಮದ ವೇಧಿಕೆ ನಿರ್ಮಾಣ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಹೊರ ವಲಯದ ಮಾದಾರ ಚನ್ನಯ್ಯ ಮಠದ ಬಳಿ ಬಿ ಎಸ್ ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಪೆಂಡಾಲ್ ನಿರ್ಮಾಣ ಹಾಗೂ ಸ್ಥಳ ವೀಕ್ಷಣೆಯನ್ನು ಎಸ್ಪಿ ರಂಜಿತ್ ಕುಮಾರ್ ಬಂಡಾರು ಹಾಗೂ ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಹೆಚ್ಚಿನ ಮಾಹಿತಿಯನ್ನ ಪಡೆದಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಅಭಿಮಾನೋತ್ಸವ ಉಸ್ತುವಾರಿ ತಮೇಶ ಗೌಡ ಮಾಯಿತಿ ನೀಡಿ ಮಾದ್ಯಮರೊಂದಿಗೆ ಮಾತನಾಡಿದರು.
More news from ಕರ್ನಾಟಕ and nearby areas
- ಚಿತ್ರದುರ್ಗದ ಅಂಬೇಡ್ಕರ್ ವೃತ್ತದಲ್ಲಿ ಭಗವಾನ್ ಬುದ್ದನ ಜಯಂತಿ ಹಿನ್ನೆಲೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮೆರವಣಿಗೆ ಹಮ್ಮಿಕೊಂಡಿದ್ದು ಅಪರ ಜಿಲ್ಲಾಧಿಕಾರಿ ಬಿ ಟಿ ಕುಮಾರಸ್ವಾಮಿ ಅವರು ಆಗಮಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಭಗವಾನ್ ಬುದ್ದನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.1
- Post by Karibasava Balal1
- ತಾಳುಬೆಟ್ಟ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ ಹನೂರು ತಾಲೂಕಿನಲ್ಲಿ ತಾಳುಬೆಟ್ಟ ಸಮೀಪ ಇಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೌದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತಾದರೂ, ಸಮಯಕ್ಕೆ ಆಂಬುಲೆನ್ಸ್ ಹಾಗೂ ಸಮರ್ಪಕ ವೈದ್ಯಕೀಯ ಸೇವೆ ಲಭ್ಯವಾಗದ ಕಾರಣ ಗಾಯಾಳುಗಳು ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಕಳೆದ ಒಂದು ವಾರದಲ್ಲಿ ಹನೂರು ತಾಲೂಕಿನಲ್ಲಿ ನಡೆದ ನಾಲ್ಕನೇ ಅಪಘಾತ ಇದಾಗಿದೆ. ತಾಲೂಕಿನಲ್ಲಿ ಆರೋಗ್ಯ ಸೇವೆಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ. ವೈದ್ಯಾಧಿಕಾರಿಗಳ ನಿರ್ಲಕ್ಷ್ಯ ಕುರಿತು ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ. “ಮಾದಪ್ಪ, ನಿನ್ನ ಭಕ್ತರನ್ನು ನೀನೇ ಕಾಪಾಡಪ್ಪ” ಎಂದು ಸ್ಥಳೀಯರು ಬೇಡಿಕೊಂಡರು.1
- ಕನ್ನಡದ ವರನಟ Dr. Rajkumar ಅವರ ಪುಣ್ಯಭೂಮಿ ಕುರಿತಾಗಿ ನಟ Chetan Kumar ನೀಡಿದ್ದಾರೆನ್ನಲಾದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಬಳ್ಳಾರಿಯಲ್ಲಿ ಅಭಿಮಾನಿಗಳು ಮತ್ತು Karnataka Rakshana Vedike ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ G. Parameshwara ಅವರಿಗೆ ಮನವಿ ಸಲ್ಲಿಸಿದ್ದು, ಚೇತನ್ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ರಾಜಕುಮಾರ್ ಅವರ ನಾಡಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿ, ಇಂತಹ ಹೇಳಿಕೆಗಳನ್ನು ಖಂಡಿಸಲಾಗಿದೆ.1
- ಕಡೂರು : ತಾಲ್ಲೂಕಿನ ಸಿಂಗಟಗೆರೆ ಗ್ರಾಮದ ಇತಿಹಾಸ ಪ್ರಸಿದ್ದ ಶ್ರೀ ಕಲ್ಲೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವವು ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ರುದ್ರಾಭಿಷೇಕ ನಿತ್ಯಹೋಮ, ರಥಾಧಿದೇವತಾ ಹೋಮ, ರಥಸಂಪ್ರೋಕ್ಷಣೆ ನಂತರ ಬಳಿಕ ಶ್ರೀ ಕಲ್ಲೇಶ್ವರ ಸ್ವಾಮಿ ಮತ್ತು ಪಾರ್ವತಿದೇವಿಯ ಉತ್ಸವ ಮೂರ್ತಿಯೊಂದಿಗೆ ಗ್ರಾಮದ ಮೂಲದೇವಾಲಯ ದಿಂದ ಪ್ರಮುಖ ರಾಜಬೀದಿಗಳಲ್ಲಿ ಅದ್ದೂರಿಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಆಂಜನೇಯಸ್ವಾಮಿ ಉತ್ಸವದಲ್ಲಿ ಸಾಗಿತು. ಜಾನಪದ ವೀರಗಾಸೆ ಕಲಾತಂಡಗಳ ಪ್ರದರ್ಶನ ನಡೆಸಲಾಯಿತು. ಬಳಿಕ ರಥದ ಮಂಟಪದ ಬಳಿ ಕರೆತಂದ ಸ್ವಾಮಿಯ ಉತ್ಸವಮೂರ್ತಿಯನ್ನು ಮೂರು ಬಾರಿ ಪ್ರದಕ್ಷಿಣಿ ಹಾಕಿ ಬಳಿಕ ಅಲಂಕೃತ ಗೊಂಡ ರಥದಲ್ಲಿ ಪ್ರತಿಷ್ಟಾಪಿಸಿ ಬಲಿಪ್ರಧಾನ ಪೂಜೆ ನೆರವೇರಿಸಲಾಯಿತು. ನಂತರ ನೆರೆದಿದ್ದ ಭಕ್ತರು ಸ್ವಾಮಿಯ ರಥವನ್ನು ಜಯಘೋಷಗಳೊಂದಿಗೆ ಎಳೆದು ಸಂಭ್ರಮಿಸಿದರು. ರಥದ ಕಳಶಕ್ಕೆ ಬಾಳೆಹಣ್ಣು ಎಸೆದು ಭಕ್ತರು ತಮ್ಮ ಭಕ್ತಿ ಸಮರ್ಪಿಸಿದರು. ಈ ಸಂದರ್ಭದಲ್ಲಿ ರಥಕ್ಕೆ ಎಸೆದಿದ್ದ ಮೆಣಸಿನ ಕಾಳನ್ನು ಭಕ್ತರು ಸಂಗ್ರಹಿಸಿದರು. ಜಾತ್ರಾಮಹೋತ್ಸವದ ಧಾರ್ಮಿಕ ಮಹೋತ್ಸವವನ್ನು ಸೀತಾರಾಮಶರ್ಮ ಮತ್ತು ನಾಗೇಶ್ ಶರ್ಮಾ ತಂಡದವರಿಂದ ನೆರವೇರಿಸಲಾಯಿತು. ಸಂಜೆ 4ಗಂಟೆಗೆ ನಡೆದ ರಥೋತ್ಸವದ ಅಂಗವಾಗಿ ಬಿಸಿಲಿನ ತಾಪವನ್ನು ಲೆಕ್ಕಿಸದೆ ಸಾವಿರಾರು ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದರೆ, ದೇವಾಲಯದ ರಥದ ಬೀದಿಗಳಲ್ಲಿ ಸಾಂಪ್ರಾದಾಯಿಕ ಪದ್ದತಿಯಂತೆ ಬರಿಗಾಲಲ್ಲೇ ಭಕ್ತಾದಿಗಳು ಹೆಜ್ಜೆ ಹಾಕಿದ್ದು ಗಮನಸೆಳೆಯಿತು. ಜಾತ್ರಾಮಹೋತ್ಸವದ ಅಂಗವಾಗಿ ವಾಹನಗಳ ಸಂಚಾರದ ದಟ್ಟಣೆ ಹೆಚ್ಚಾಗಿತ್ತು. ಸಿಂಗಟಗೆರೆ ಪೊಲೀಸರು ಬಿಗಿ ಭದ್ರತೆಯನ್ನು ಒದಗಿಸಿದ್ದರು. ರಥದ ಸುತ್ತ ಅಲಂಕೃತ ಎತ್ತಿನಗಾಡಿಗಳ ಓಟ ನಡೆಸಿದರೆ, ಇನ್ನ ಕೆಲ ಭಕ್ತರು ತಣ್ಣೀರುಸ್ನಾನದೊಂದಿಗೆ ರಥದ ಬಳಿ ದಿಂಡು ಉರುಳು ಸೇವೆ ನೆರವೇರಿಸಿ ಹರಕೆಯನ್ನು ಸಮರ್ಪಿಸಿದರು. ಗ್ರಾಮದ ಸ್ನೇಹ ಜೀವಿ ಬಳಗದ ವತಿಯಿಂದ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಿದ್ದರು. ಹಾಸನ ಕೆಎಂಎಫ್ ಹಾಗೂ ಸ್ಥಳೀಯ ಹಾಲು ಒಕ್ಕೂಟಗಳ ವತಿಯಿಂದ ಭಕ್ತಾದಿಗಳಿಗೆ ಮಜ್ಜಿಗೆ ವಿತರಿಸಿದರು. ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಬಿ.ಕೆ. ನಾಗರಾಜಪ್ಪ ಮಾತನಾಡಿ, ದೇವಾಲಯದ ಸಮಿತಿಯ ವತಿಯಿಂದ ವಿಶೇಷವಾದ ಕಲ್ಲಿನ ರಾಜಗೋಪುರ ನಿರ್ಮಾಣ ಕಾರ್ಯವು ಸುಮಾರು 10 ಕೋಟಿ ವೆಚ್ಚದಲ್ಲಿ ಕಾಮಗಾರಿಯು ಪ್ರಗತಿಯಲ್ಲಿದ್ದು. ಈಗಾಗಲೇ ಶೇ.30ರಷ್ಟು ಕಾಮಗಾರಿ ನಡೆಸಲಾಗಿದ್ದು, 2 ವರ್ಷದೊಳಗಾಗಿ ಗೋಪುರವನ್ನು ಲೋಕಾರ್ಪಣೆಗೊಳಿಸುವ ಗುರಿಹೊಂದಲಾಗಿದೆ. ಭಕ್ತರು ಹೆಚ್ಚಿನ ರೀತಿಯಲ್ಲಿ ಸಹಕರಿಸುವಂತೆ ಮನವಿ ಮಾಡಿದರು. ದೇವಾಲಯ ಸಮಿತಿಯ ಕಾರ್ಯದರ್ಶಿ ರಮೇಶ್, ಪದಾಧಿಕಾರಿಗಳಾದ ಕೆ.ಎನ್, ಮೂರ್ತಿ, ದೇವರಾಜ್ ಸಿಂಗಟಗೆರೆ ನಾಗರಾಜ್, ದಕ್ಷಿಣಮೂರ್ತಿ, ಬಿ.ಜೆ.ಕುಮಾರ್, ಕುಮಾರಪ್ಪ, ಎಸ್.ಕೆ. ರಘು, ಎಸ್.ಕೆ. ಲೋಕೇಶಪ್ಪ, ಮಾಜಿ ಶಾಸಕ ಬೆಳ್ಳಿಪ್ರಕಾಶ್, ಬಿದರೆ ಜಗದೀಶ್, ಗಿರೀಶ್ ಉಪ್ಪಾರ್ ಮತ್ತು ಏಳು ಹಳ್ಳಿ ಪಿರ್ಕಾ ಗ್ರಾಮಸ್ಥರು ಇದ್ದರು.3
- ಕಡೂರು: ಎಚ್.ಡಿ.ದೇವೇಗೌಡರು ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಸಮರ್ಥ ನಾಯಕತ್ವದಲ್ಲಿ ಜೆಡಿಎಸ್ ಪಕ್ಷ ಸಧೃಢ ಪ್ರಾದೇಶಿಕ ಪಕ್ಷವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು. ಕಡೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದೇವರಾಜ ಅರಸರು,ಯಡಿಯೂರಪ್ಪ,ಬಂಗಾರಪ್ಪ ಮುಂತಾದವರು ಪ್ರಾದೇಶಿಕ ಪಕ್ಷಗಳನ್ನು ಕಟ್ಟಿದರೂ ರಾಜ್ಯದಲ್ಲಿ ಗಟ್ಟಿಯಾಗಿ ನಿಂತದ್ದು ಜನತಾದಳ ಪಕ್ಷ. ಎಚ್.ಡಿ.ದೇವೇಗೌಡರ ದಿಟ್ಟ ಹೋರಾಟದಿಂದ ರಾಜ್ಯದಲ್ಲಿ ಜನತಾದಳ ಪ್ರಾದೇಶಿಕ ಪಕ್ಷವಾಗಿ 25 ವರ್ಷಗಳು ತುಂಬಿವೆ.ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದಲ್ಲಿ ಜನರ ಜೊತೆಯೇ ಸದಾ ಇರುವ ಜನತಾದಳ ಪಕ್ಷದ ಸಂಘಟನೆಗಾಗಿ" ಜನರೊಂದಿಗೆ ಜನತಾದಳ" ಎಂಬ ಕಾರ್ಯಕ್ರಮ ಆಯೋಜಿಸಲಾಗಿದ್ದು, ಏಪ್ರಿಲ್ 19 ರಂದು ಕಡೂರು ಎಪಿಎಂಸಿ ಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಕಡೂರಿಗೆ ಆಗಮಿಸುತ್ತಿದ್ದಾರೆ. ಜನತಾದಳದ ಜೀವಾಳವಾಗಿರುವ ಕಾರ್ಯಕರ್ತರ ಸಮಾವೇಶ ಮತ್ತು ಪಕ್ಷದ ಸದಸ್ಯತ್ವ ಅಭಿಯಾನದ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಯಲಿದೆ.ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಇದು ಮಹತ್ವದ ಕಾರ್ಯಕ್ರಮ. ಮುಂದಿನ ದಿನಗಳಲ್ಲಿ ಎಚ್.ಡಿ.ಕುಮಾರಸ್ವಾಮಿಯವರೂ ಸಹ ಆಗಮಿಸಲಿದ್ದಾರೆ ಎಂದರು. ಈ ಕಾರ್ಯಕ್ರಮದ ಕುರಿತು ಕೆಲ ಗೊಂದಲಗಳು ಇದ್ದವಾದರೂ ಈಗ ಅವೆಲ್ಲವೂ ಬಗೆಹರಿದಿವೆ. ಜೆಡಿಎಸ್ ನಾಯಕರಾದ ವೈ.ಎಸ್.ವಿ.ದತ್ತ ಅವರೂ ಸಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಈ ಮೊದಲೇ ಈ ಕಾರ್ಯಕ್ರಮ ಏರ್ಪಾಡಾಗುತ್ತಾದರೂ ದತ್ತ ಅವರ ಅಪೇಕ್ಷೆಯಂತೆ ಮುಂದೂಡಲಾಗಿತ್ತು. ಈಗ ದೇವೇಗೌಡರು, ಕುಮಾರಸ್ವಾಮಿಯವರ ಆದೇಶದಂತೆ ಈ ಕಾರ್ಯಕ್ರಮ ಏರ್ಪಾಡಾಗಿದೆ.10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸಮಾವೇಶಗೊಳ್ಳಲಿದ್ದಾರೆ. ವೈ.ಎಸ್.ವಿ.ದತ್ತ ಸಕ್ರಿಯವಾಗಿ ಪಾಲ್ಗೊಳ್ಳುತ್ತಾರೆ. ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲ ಎಂದರು. ಜಿಲ್ಲಾ ಘಟಕದ ಅಧ್ಯಕ್ಷರ ಸ್ಥಾನ ಕಾಲಿಯಿದೆ. ಈ ಕಾರಣದಿಂದ ತಾಲ್ಕೂಕು ಘಟಕಗಳ ಪದಾಧಿಕಾರಿಗಳ ನೇಮಕಾತಿ ವಿಳಂಬವಾಗಿದೆ.ಎಷ್ಟೋ ಜನ ಕಾರ್ಯಕರ್ತರಾಗಿದ್ದವರೂ ಇನ್ನೂ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ಪಡೆದಿಲ್ಲ. ಹಾಗಾಗಿ ಪಕ್ಷದ ಸದಸ್ಯತ್ವದ ನೊಂದಣಿಯೂ ನಡೆಯಲಿದೆ. ಶೀಘ್ರದಲ್ಲೆ ಪದಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದರು. ಮುಂದಿನ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಅಥವಾ ಬಿಜೆಪಿ ಯವರಿರುತ್ತಾರೆಯೇ ಎಂಬ ಪ್ರಶ್ನೆ ಈಗ ಅಪ್ರಸ್ತುತ. ಅದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ. ಎರಡೂ ಪಕ್ಷಗಳ ಒಮ್ಮತದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ. ಪಕ್ಷ ಸಂಘಟನೆಯ ವಿಚಾರದಲ್ಲಿಯೂ ಗೊಂದಲವಿಲ್ಲ. ಜೆಡಿಎಸ್ ಪಕ್ಷದ ಸಂಘಟನೆ ನಿರಂತರವಾಗಿ ನಡೆಯುತ್ತಿದೆ. ಎನ್.ಡಿ.ಎ ಭಾಗವಾಗಿ ಜೆಡಿಎಸ್ ಪಕ್ಷ ರಾಜ್ಯದ ಅಭಿವೃದ್ಧಿಗಾಗಿ ಸದಾ ಯೋಚಿಸುವ ಪ್ರಬಲ ಪ್ರಾದೇಶಿಕ ಪಕ್ಷವಾಗಿದೆ.ಕಡೂರಿನಲ್ಲಿ ಬಿಜೆಪಿ- ಜೆಡಿಎಸ್ ಎರಡೂ ಪಕ್ಷಗಳು ಒಟ್ಟಾಗಿಯೇ ಕಾಂಗ್ರೆಸ್ ವಿರುದ್ಧ ಹೋರಾಡುತ್ತದೆ ಎಂದರು. ಜೆಡಿಎಸ್ ಯುವ ಮುಖಂಡ ಚೇತನ್ ಕೆಂಪರಾಜು, ರಘು ಎರೇಹಳ್ಳಿ, ಹಳೇಹಟ್ಟಿ ಆನಂದನಾಯ್ಕ ಮತ್ತಿತರರು ಇದ್ದರು.3
- ಚಿತ್ರದುರ್ಗದ ಸ್ಟೇಡಿಯಂ ಬಳಿ ಬುದ್ದ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣ ಎದುರಿನ ಬುದ್ಧ ಮೂರ್ತಿ ಬಳಿ ಭಗವಾನ್ ಬುದ್ದ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ಕ್ರಿಸ್ತಪೂರ್ವದಲ್ಲೇ ಭಗವಾನ್ ಬುದ್ಧರು ಸಾರಿದ ಶಾಂತಿ ಮತ್ತು ಸಮಾನತೆಯ ತತ್ವಗಳು ಇಂದಿಗೂ ಅತ್ಯಂತ ಪ್ರಸ್ತುತವಾಗಿವೆ. ಯುದ್ಧ ಮತ್ತು ಸಂಘರ್ಷಗಳ ನಡುವೆ ಬದುಕುತ್ತಿರುವ ನಮಗೆ ಬುದ್ಧನ ಸಂದೇಶಗಳು ದಾರಿದೀಪವಾಗಿವೆ ಎಂದು ಹೇಳಿದರು.1
- Post by Suresh Belagere1
- Post by Karibasava Balal1