logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ. ಕಲ್ಲೋಳಿ ಗ್ರಾಮದ ರಮೇಶ ಬಂಟ್ರೋಳಿ ಕೊಲೆಯಾದ ವ್ಯಕ್ತಿ. ಬನಪ್ಪ ಒಡೆಯರ್ ಹಾಗೂ ಆತನ ಪತ್ನಿ ಲಕ್ಷ್ಮೀ ಒಡೆಯರ್ ಕೊಲೆ ಆರೋಪಿಗಳಾಗಿದ್ದು, ಘಟನೆ ಸಂಬಂಧ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ರಮೇಶ ಹಾಗೂ ಲಕ್ಷ್ಮೀ ಒಡೆಯರ್ ಜೊತೆಯಾಗಿ ಫೋಟೋ ತೆಗೆಸಿಕೊಂಡಿದ್ದರು ಎನ್ನಲಾಗಿದೆ. ಈ ಫೋಟೋವನ್ನು ರಮೇಶ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿದ್ದ. ಇದರಿಂದ ರಮೇಶ ಹಾಗೂ ಲಕ್ಷ್ಮೀ ನಡುವೆ ಅನೈತಿಕ ಸಂಬಂಧವಿದೆ ಎಂದು ಬನಪ್ಪ ಒಡೆಯರ್ ದಂಪತಿಗೆ ಅನುಮಾನ ಮೂಡಿತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶನನ್ನು ಜಮೀನಿಗೆ ಕರೆಸಿಕೊಂಡು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

1 hr ago
user_YSRmedia vijayanagaraupsates
YSRmedia vijayanagaraupsates
Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
1 hr ago
c89563c3-440d-4595-be58-5f65f9f134a5
6c966417-a1a0-4e5d-b117-1e37e9d7f87a
f920e505-5031-41f3-a8a7-7e43da5a6483

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ನಡೆದಿದೆ. ಕಲ್ಲೋಳಿ ಗ್ರಾಮದ ರಮೇಶ ಬಂಟ್ರೋಳಿ ಕೊಲೆಯಾದ ವ್ಯಕ್ತಿ. ಬನಪ್ಪ ಒಡೆಯರ್ ಹಾಗೂ ಆತನ ಪತ್ನಿ ಲಕ್ಷ್ಮೀ ಒಡೆಯರ್ ಕೊಲೆ ಆರೋಪಿಗಳಾಗಿದ್ದು, ಘಟನೆ ಸಂಬಂಧ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ರಮೇಶ ಹಾಗೂ ಲಕ್ಷ್ಮೀ ಒಡೆಯರ್ ಜೊತೆಯಾಗಿ ಫೋಟೋ ತೆಗೆಸಿಕೊಂಡಿದ್ದರು ಎನ್ನಲಾಗಿದೆ. ಈ ಫೋಟೋವನ್ನು ರಮೇಶ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿದ್ದ. ಇದರಿಂದ ರಮೇಶ ಹಾಗೂ ಲಕ್ಷ್ಮೀ ನಡುವೆ ಅನೈತಿಕ ಸಂಬಂಧವಿದೆ ಎಂದು ಬನಪ್ಪ ಒಡೆಯರ್ ದಂಪತಿಗೆ ಅನುಮಾನ ಮೂಡಿತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶನನ್ನು ಜಮೀನಿಗೆ ಕರೆಸಿಕೊಂಡು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

More news from ಕರ್ನಾಟಕ and nearby areas
  • ಬಳ್ಳಾರಿ ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಬಳ್ಳಾರಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಈ ಕುರಿತು ಬಳ್ಳಾರಿ ಎಸ್ಪಿ ಸುಮನ್ ಡಿ.ಪನ್ನೇಕರ್ ಅವರಿಂದ ಸುದ್ದಿಗೋಷ್ಠಿ ಕೌಲ್ಬಜಾರ್ ಕರಿಮಾರೆಮ್ಮ ದೇವಸ್ಥಾನದ ನಿವಾಸಿ ಹನುಮಂತಪ್ಪ ಎಂಬ (28) ಮನೆಗಳ್ಳನ ಬಂಧನ ಇವನು ಬಳ್ಳಾರಿ, ವಿಜಯನಗರ, ದಾವಣಗೇರಿ,ಕೊಪ್ಪಳ, ದೊಡ್ಡ ಬಳ್ಳಾಪುರ,ಬೆಂಗಳೂರು ಹಾಗೂ ಗದಗನಲ್ಲಿ ಕಳ್ಳತನ ರಾಡ್ ಬಳಸಿ ಮನೆಗಳ್ಳತ ಮಾಡುತ್ತಿದ್ದ ಆರೋಪಿ ಹನುಮಂತ.... ಕಳ್ಳತನ ಮಾಡಿದ ಮಾಲನ್ನು ವಿವಿಧ ಶಾಪ್ಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಆರೋಪಿಯನ್ನು ವಶಕ್ಕೆ ಪಡೆದು ಬಂಗಾರದ ಒಡವೆ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ ಒಟ್ಟು ನಾಲ್ಕು ಕೇಸ್ಗಳಲ್ಲಿ ಆರೋಪಿಯಿಂದ 13,20,000 ಮೌಲ್ಯದ 110 ಗ್ರಾಂ ಬಂಗಾರ ಹಾಗೂ 10 ಲಕ್ಷ ನಗದು ವಶ ಆರೋಪಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರಗಿದ್ರು, ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ ಇವನ ವಿರುದ್ದ ರಾಜ್ಯದಾದ್ಯಂತ ಒಟ್ಟು 9 ಜಿಲ್ಲೆಗಳಲ್ಲಿ 40 ಪ್ರಕರಣಗಳು ಬೆಳಕಿಗೆ ಬಂದಿದೆ. -----------------
    1
    ಬಳ್ಳಾರಿ ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....!
ಬಳ್ಳಾರಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....!
ಈ ಕುರಿತು ಬಳ್ಳಾರಿ ಎಸ್ಪಿ ಸುಮನ್ ಡಿ.ಪನ್ನೇಕರ್ ಅವರಿಂದ ಸುದ್ದಿಗೋಷ್ಠಿ
ಕೌಲ್ಬಜಾರ್ ಕರಿಮಾರೆಮ್ಮ ದೇವಸ್ಥಾನದ ನಿವಾಸಿ ಹನುಮಂತಪ್ಪ ಎಂಬ (28) ಮನೆಗಳ್ಳನ ಬಂಧನ
ಇವನು ಬಳ್ಳಾರಿ, ವಿಜಯನಗರ, ದಾವಣಗೇರಿ,ಕೊಪ್ಪಳ, ದೊಡ್ಡ ಬಳ್ಳಾಪುರ,ಬೆಂಗಳೂರು ಹಾಗೂ ಗದಗನಲ್ಲಿ ಕಳ್ಳತನ
ರಾಡ್ ಬಳಸಿ ಮನೆಗಳ್ಳತ ಮಾಡುತ್ತಿದ್ದ ಆರೋಪಿ ಹನುಮಂತ....
ಕಳ್ಳತನ ಮಾಡಿದ ಮಾಲನ್ನು ವಿವಿಧ ಶಾಪ್ಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ
ಆರೋಪಿಯನ್ನು ವಶಕ್ಕೆ ಪಡೆದು ಬಂಗಾರದ ಒಡವೆ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ
ಒಟ್ಟು ನಾಲ್ಕು ಕೇಸ್ಗಳಲ್ಲಿ ಆರೋಪಿಯಿಂದ 13,20,000 ಮೌಲ್ಯದ 110 ಗ್ರಾಂ ಬಂಗಾರ ಹಾಗೂ 10 ಲಕ್ಷ ನಗದು ವಶ
ಆರೋಪಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರಗಿದ್ರು, ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ
ಇವನ ವಿರುದ್ದ ರಾಜ್ಯದಾದ್ಯಂತ ಒಟ್ಟು 9 ಜಿಲ್ಲೆಗಳಲ್ಲಿ 40 ಪ್ರಕರಣಗಳು ಬೆಳಕಿಗೆ ಬಂದಿದೆ.
-----------------
    user_Channakeshava Press ಗಡಿ ವಾಣಿ
    Channakeshava Press ಗಡಿ ವಾಣಿ
    ಕಂಪ್ಲಿ, ಬಳ್ಳಾರಿ, ಕರ್ನಾಟಕ•
    19 hrs ago
  • ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
    1
    ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ
ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    1 hr ago
  • ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ
    1
    ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ 
ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    1 hr ago
  • ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ "ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!" ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ. 550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ. 📍ಸ್ಥಳ: ಬಳ್ಳಾರಿ 🎥 ASN News24 Kannada #Hashtags #FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    1
    ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ
"ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!"
ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ.
550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ.
📍ಸ್ಥಳ: ಬಳ್ಳಾರಿ
🎥 ASN News24 Kannada
#Hashtags
#FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    user_Aslam Basha
    Aslam Basha
    Local News Reporter Ballari, Karnataka•
    1 hr ago
  • ಅದಾನಿ-ಅಂಬಾನಿ ಮದುವೆಗೆ ಸಮಯ ಇದೆ, ರೈತರ ಸಾವಿಗೆ ಸಮಯ ಇಲ್ಲ!ಸರ್ಕಾರದ ವಿರುದ್ಧ ರೈತ ಮುಖಂಡರು ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ‘ರೈತ ಸಂತೆ’ ಕಾರ್ಯಕ್ರಮದಲ್ಲಿ ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆಗಳ ಬಗ್ಗೆ ಚರ್ಚಿಸಲು ಸಮಯವಿಲ್ಲ" ಎಂದು ಆರೋಪಿಸಿದರು. ರೈತರ ಆತ್ಮಹತ್ಯೆಗೆ ಸಾಮಾಜಿಕ ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಬೆಳೆದ ಬೆಳೆಗೆ ಬೆಲೆ ಇಲ್ಲ, ಕೀಟಬಾಧೆ ಹೆಚ್ಚಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ ಅವರು, ರೈತ ಸಂತೆಯ ಮೂಲಕ ಅನೇಕ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ. 📍ಸ್ಥಳ: ಬಳ್ಳಾರಿ 📺 ASN News24 Kannada #Hashtags #Farmers #Ballari #RaitaSante #KarnatakaFarmers #FarmerSuicide #Adani #Ambani #BreakingNews #ASNNews24Kannada #KarnatakaNews #RaitaSangha #KannadaNews #TrendingNews #ViralNews #Agriculture #FarmersProtest
    1
    ಅದಾನಿ-ಅಂಬಾನಿ ಮದುವೆಗೆ ಸಮಯ ಇದೆ, ರೈತರ ಸಾವಿಗೆ ಸಮಯ ಇಲ್ಲ!ಸರ್ಕಾರದ ವಿರುದ್ಧ ರೈತ ಮುಖಂಡರು
ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ‘ರೈತ ಸಂತೆ’ ಕಾರ್ಯಕ್ರಮದಲ್ಲಿ ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆಗಳ ಬಗ್ಗೆ ಚರ್ಚಿಸಲು ಸಮಯವಿಲ್ಲ" ಎಂದು ಆರೋಪಿಸಿದರು.
ರೈತರ ಆತ್ಮಹತ್ಯೆಗೆ ಸಾಮಾಜಿಕ ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಬೆಳೆದ ಬೆಳೆಗೆ ಬೆಲೆ ಇಲ್ಲ, ಕೀಟಬಾಧೆ ಹೆಚ್ಚಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ ಅವರು, ರೈತ ಸಂತೆಯ ಮೂಲಕ ಅನೇಕ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ.
📍ಸ್ಥಳ: ಬಳ್ಳಾರಿ
📺 ASN News24 Kannada
#Hashtags
#Farmers #Ballari #RaitaSante #KarnatakaFarmers #FarmerSuicide #Adani #Ambani #BreakingNews #ASNNews24Kannada #KarnatakaNews #RaitaSangha #KannadaNews #TrendingNews #ViralNews #Agriculture #FarmersProtest
    user_AsnNews24Kannada
    AsnNews24Kannada
    Local News Reporter Ballari, Karnataka•
    1 hr ago
  • ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ
    1
    ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ 
ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    4 hrs ago
  • ಬ್ರೇಕಿಂಗ್ ನ್ಯೂಸ್ ಸೂರ್ಯಪೇಟೆ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಖಾಸಗಿ ಟ್ರಾವೆಲ್ಸ್ ಬಸ್ (ತಾಜಾ ಬಸ್) ಸ್ಟೇಷನರಿ ಲಾರಿಗೆ ಡಿಕ್ಕಿ.. ಆರು ಸಾವು, 20 ಜನರಿಗೆ ಗಾಯ ಹೈದರಾಬಾದ್ ನಿಂದ ಏಲೂರಿಗೆ ಪ್ರಯಾಣಿಸುತ್ತಿದ್ದಾಗ ಕೊಡಡ ಮಂಡಲದ ದ್ವಾರಕುಂಟ್ ಬಳಿ ಅಪಘಾತ ಸಂಭವಿಸಿದೆ ಅಪಘಾತದ ಸಮಯದಲ್ಲಿ 42 ಪ್ರಯಾಣಿಕರು ಬಸ್ಸಿನಲ್ಲಿದ್ದರು ಎಂದು ಗುರುತಿಸಲಾಗಿದೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಪೊಲೀಸ್ ಪ್ರಕರಣ ದಾಖಲಿಸಿ, ಸ್ಥಳದಿಂದ ಪರಾರಿಯಾಗಿದ್ದ ಚಾಲಕ ಮತ್ತು ಕ್ಲೀನರ್‌ಗಾಗಿ ಹುಡುಕಾಟ
    1
    ಬ್ರೇಕಿಂಗ್ ನ್ಯೂಸ್

ಸೂರ್ಯಪೇಟೆ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ

ಖಾಸಗಿ ಟ್ರಾವೆಲ್ಸ್ ಬಸ್ (ತಾಜಾ ಬಸ್) ಸ್ಟೇಷನರಿ ಲಾರಿಗೆ ಡಿಕ್ಕಿ.. ಆರು ಸಾವು, 20 ಜನರಿಗೆ ಗಾಯ

ಹೈದರಾಬಾದ್ ನಿಂದ ಏಲೂರಿಗೆ ಪ್ರಯಾಣಿಸುತ್ತಿದ್ದಾಗ ಕೊಡಡ ಮಂಡಲದ ದ್ವಾರಕುಂಟ್ ಬಳಿ ಅಪಘಾತ ಸಂಭವಿಸಿದೆ

ಅಪಘಾತದ ಸಮಯದಲ್ಲಿ 42 ಪ್ರಯಾಣಿಕರು ಬಸ್ಸಿನಲ್ಲಿದ್ದರು ಎಂದು ಗುರುತಿಸಲಾಗಿದೆ

ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಪೊಲೀಸ್ ಪ್ರಕರಣ ದಾಖಲಿಸಿ, ಸ್ಥಳದಿಂದ ಪರಾರಿಯಾಗಿದ್ದ ಚಾಲಕ ಮತ್ತು ಕ್ಲೀನರ್‌ಗಾಗಿ ಹುಡುಕಾಟ
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    2 hrs ago
  • ರಾಯಚೂರು ಜಿಲ್ಲೆಯ ದಲಿತ ಮುಖಂಡ ಭೂಮಾನಂದನ ಕೊಲೆ ಮತ್ತು ಅಶ್ವಿನಿಅತ್ಯಾಚಾರ ಕೊಲೆ ಖಂಡಿಸಿ ನಗರದಲ್ಲಿ ಪ್ರತಿಭಟನೆ ಬಳ್ಳಾರಿ / ಕಂಪ್ಲಿ : ರಾಯಚೂರು ಜಿಲ್ಲೆಯ ದಲಿತ ಮುಖಂಡ ಭೂಮಾನಂದನ ಕೊಲೆ ಮತ್ತು ಅಶ್ವಿನಿ ಅತ್ಯಾಚಾರ ಕೊಲೆ ಖಂಡಿಸಿ, ಸಮಾನ ಮನಸ್ಕರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಕಂದಾಯ ಅಧಿಕಾರಿ ಸುರೇಶ್‌ಗೆ ಮನವಿ ಪತ್ರ ಸಲ್ಲಿಸುವ ಮೂಲಕ ಸರ್ಕಾರಕ್ಕೆ ರವಾನಿಸಿದರು. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದ ಯುವಕ ಭೂಮಾನಂದನ ಕೊಲೆ ಮತ್ತು ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಯುವತಿ ಅಶ್ವಿನಿ ಅತ್ಯಾಚಾರ ಮತ್ತು ಕೊಲೆಯನ್ನು ತೀವ್ರವಾಗಿ ಖಂಡಿಸಿದ್ದು ದಿನೇ ದಿನೇ ದಲಿತರ ಮೇಲೆ ದೌರ್ಜನ್ಯಗಳು, ಕೊಲೆಗಳು, ಅತ್ಯಾಚಾರಗಳು ಸಂಭವಿಸುತ್ತಿದ್ದು ಇದಕ್ಕೆ ನೇರ ಸರ್ಕಾರವೇ ಹೊಣೆ ಹಾಗೂ ನೊಂದ ದಲಿತ ಕುಟುಂಬಗಳಿಗೆ ಸೂಕ್ತ ರಕ್ಷಣೆ ಮತ್ತು ಸರ್ಕಾರವು ಉದ್ಯೋಗ ಮತ್ತು ಪರಿಹಾರ ಕೊಡಬೇಕು. ಹಾಗೂ ಆರೋಪಿಗಳನ್ನು ಕೂಡಲೆ ಬಂಧಿಸಿ ಕಾನೂನಾತ್ಮಕವಾಗಿ ತನಿಖೆ ನಡೆಸಿ, ಈ ಕೃತ್ಯವನ್ನು ಮಾಡಿದವರಿಗೆ ಸಂಪೂರ್ಣ ವಿಚಾರಣೆ ನಡೆಸಿ ಆದಷ್ಟು ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಒತ್ತಾಯ ಮಾಡುತ್ತೇವೆ |
    1
    ರಾಯಚೂರು ಜಿಲ್ಲೆಯ ದಲಿತ
ಮುಖಂಡ ಭೂಮಾನಂದನ ಕೊಲೆ ಮತ್ತು ಅಶ್ವಿನಿಅತ್ಯಾಚಾರ ಕೊಲೆ ಖಂಡಿಸಿ ನಗರದಲ್ಲಿ ಪ್ರತಿಭಟನೆ 
ಬಳ್ಳಾರಿ / ಕಂಪ್ಲಿ : ರಾಯಚೂರು ಜಿಲ್ಲೆಯ ದಲಿತ
ಮುಖಂಡ ಭೂಮಾನಂದನ ಕೊಲೆ ಮತ್ತು ಅಶ್ವಿನಿ
ಅತ್ಯಾಚಾರ ಕೊಲೆ ಖಂಡಿಸಿ, ಸಮಾನ ಮನಸ್ಕರ
ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು
ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಕಂದಾಯ
ಅಧಿಕಾರಿ ಸುರೇಶ್‌ಗೆ ಮನವಿ ಪತ್ರ ಸಲ್ಲಿಸುವ ಮೂಲಕ
ಸರ್ಕಾರಕ್ಕೆ ರವಾನಿಸಿದರು.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ
ಸುಂಕೇಶ್ವರಹಾಳ ಗ್ರಾಮದ ಯುವಕ ಭೂಮಾನಂದನ
ಕೊಲೆ ಮತ್ತು ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ
ಯುವತಿ ಅಶ್ವಿನಿ ಅತ್ಯಾಚಾರ ಮತ್ತು ಕೊಲೆಯನ್ನು
ತೀವ್ರವಾಗಿ ಖಂಡಿಸಿದ್ದು ದಿನೇ ದಿನೇ ದಲಿತರ ಮೇಲೆ
ದೌರ್ಜನ್ಯಗಳು, ಕೊಲೆಗಳು, ಅತ್ಯಾಚಾರಗಳು
ಸಂಭವಿಸುತ್ತಿದ್ದು ಇದಕ್ಕೆ ನೇರ ಸರ್ಕಾರವೇ ಹೊಣೆ ಹಾಗೂ
ನೊಂದ ದಲಿತ ಕುಟುಂಬಗಳಿಗೆ ಸೂಕ್ತ ರಕ್ಷಣೆ ಮತ್ತು
ಸರ್ಕಾರವು ಉದ್ಯೋಗ ಮತ್ತು ಪರಿಹಾರ ಕೊಡಬೇಕು.
ಹಾಗೂ ಆರೋಪಿಗಳನ್ನು ಕೂಡಲೆ ಬಂಧಿಸಿ
ಕಾನೂನಾತ್ಮಕವಾಗಿ ತನಿಖೆ ನಡೆಸಿ, ಈ ಕೃತ್ಯವನ್ನು
ಮಾಡಿದವರಿಗೆ ಸಂಪೂರ್ಣ ವಿಚಾರಣೆ ನಡೆಸಿ ಆದಷ್ಟು ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಒತ್ತಾಯ ಮಾಡುತ್ತೇವೆ 
|
    user_Channakeshava Press ಗಡಿ ವಾಣಿ
    Channakeshava Press ಗಡಿ ವಾಣಿ
    ಕಂಪ್ಲಿ, ಬಳ್ಳಾರಿ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.