ಕೊಪ್ಪಳ ಜಿಲ್ಲೆಯಾದ್ಯಂತ ವಿಶೇಷ ರಕ್ತದಾನ ಶಿಬಿರಕ್ಕೆ ಚಾಲನೆ ಸ್ವತಃ ರಕ್ತದಾನ ಮಾಡಿ ಅಧಿಕಾರಿಗಳು, ಸಿಬ್ಬಂದಿಗೆ ಪ್ರೇರಣೆಯಾದ ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ಕೊಪ್ಪಳ : ಕೊಪ್ಪಳ ಜಿಲ್ಲೆಯಾದ್ಯಂತ ಆಯೋಜನೆ ಮಾಡಲಾದ ವಿಶೇಷ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಸೆ. 16ರಂದು ಜಿಲ್ಲಾಡಳಿತ ಭವನದಲ್ಲಿ ರಿಬ್ಬನ್ ಕತ್ತರಿಸುವ ಮೂಲಕ ಅಧಿಕೃತ ಚಾಲನೆ ನೀಡಿದ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ಸ್ವತಃ ತಾವೇ ರಕ್ತದಾನ ಮಾಡುವ ಮೂಲಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಹಾಗೂ ಯುವ ಸಮುದಾಯಕ್ಕೆ ಪ್ರೇರಣೆಯಾದರು. ರಕ್ತದಾನವು ಜೀವ ಉಳಿಸುವ ಪವಿತ್ರ ಕಾರ್ಯವಾಗಿದ್ದು, ಜಿಲ್ಲೆಯ ಅರ್ಹ ನಾಗರಿಕರು ಮತ್ತು ಯುವಕರು ಸ್ವಯಂಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ಅವರು ಇದೆ ವೇಳೆ ಸಲಹೆ ಮಾಡಿದರು. ಅಪರ ಜಿಲ್ಲಾಧಿಕಾರಿಗಳಿಂದ ರಕ್ತ ದಾನ: ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಸಹ ಬೆಳಗ್ಗೆ ಜಿಲ್ಲಾಡಳಿತ ಭವನದಲ್ಲಿ ಬೆಳಗ್ಗೆ ರಕ್ತದಾನ ಮಾಡಿದರು. ಇದೆ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಡಾ.ಸವಡಿ ಅವರು ಸಹ ರಕ್ತದಾನ ಮಾಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾ ಘಟಕ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಈ ವಿಶೇಷ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತರಾದ ಮಹೇಬೂಬ್ ಜೀಲಾನಿ ಖುರೇಶಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ. ಪ್ರಕಾಶ ವಿ., ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಎ.ಶಶೀಧರ, ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮಣ್ಣನವರ, ತಾಲ್ಲೂಕ ಆರೋಗ್ಯಾಧಿಕಾರಿ ಡಾ. ವೆಂಕಟೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕೊಪ್ಪಳ ಜಿಲ್ಲೆಯಾದ್ಯಂತ ವಿಶೇಷ ರಕ್ತದಾನ ಶಿಬಿರಕ್ಕೆ ಚಾಲನೆ ಸ್ವತಃ ರಕ್ತದಾನ ಮಾಡಿ ಅಧಿಕಾರಿಗಳು, ಸಿಬ್ಬಂದಿಗೆ ಪ್ರೇರಣೆಯಾದ ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ಕೊಪ್ಪಳ : ಕೊಪ್ಪಳ ಜಿಲ್ಲೆಯಾದ್ಯಂತ ಆಯೋಜನೆ ಮಾಡಲಾದ ವಿಶೇಷ ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಸೆ. 16ರಂದು ಜಿಲ್ಲಾಡಳಿತ ಭವನದಲ್ಲಿ ರಿಬ್ಬನ್ ಕತ್ತರಿಸುವ ಮೂಲಕ ಅಧಿಕೃತ ಚಾಲನೆ ನೀಡಿದ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ಸ್ವತಃ ತಾವೇ ರಕ್ತದಾನ ಮಾಡುವ ಮೂಲಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಹಾಗೂ ಯುವ ಸಮುದಾಯಕ್ಕೆ ಪ್ರೇರಣೆಯಾದರು. ರಕ್ತದಾನವು ಜೀವ ಉಳಿಸುವ ಪವಿತ್ರ ಕಾರ್ಯವಾಗಿದ್ದು, ಜಿಲ್ಲೆಯ ಅರ್ಹ ನಾಗರಿಕರು ಮತ್ತು ಯುವಕರು ಸ್ವಯಂಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ಅವರು ಇದೆ ವೇಳೆ ಸಲಹೆ ಮಾಡಿದರು. ಅಪರ ಜಿಲ್ಲಾಧಿಕಾರಿಗಳಿಂದ ರಕ್ತ ದಾನ: ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಸಹ ಬೆಳಗ್ಗೆ ಜಿಲ್ಲಾಡಳಿತ ಭವನದಲ್ಲಿ ಬೆಳಗ್ಗೆ ರಕ್ತದಾನ ಮಾಡಿದರು. ಇದೆ ವೇಳೆ ಜಿಲ್ಲಾ ಆರೋಗ್ಯ ಮತ್ತು
ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಡಾ.ಸವಡಿ ಅವರು ಸಹ ರಕ್ತದಾನ ಮಾಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾ ಘಟಕ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಈ ವಿಶೇಷ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತರಾದ ಮಹೇಬೂಬ್ ಜೀಲಾನಿ ಖುರೇಶಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ. ಪ್ರಕಾಶ ವಿ., ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಎ.ಶಶೀಧರ, ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮಣ್ಣನವರ, ತಾಲ್ಲೂಕ ಆರೋಗ್ಯಾಧಿಕಾರಿ ಡಾ. ವೆಂಕಟೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
- 🌾ಗಜೇಂದ್ರಗಡ ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ನಿರಂತರ ಶ್ರಮ… ನನ್ನನ್ನು ಕೆಲವರು ವಿರೋಧಿಸಿದ್ದು ನನ್ನ ವ್ಯಕ್ತಿತ್ವವನ್ನಲ್ಲ… ನನ್ನ ಸಾಮರ್ಥ್ಯವನ್ನು. ಅವರಲ್ಲಿ ಕೆಲವರು ನನ್ನಿಂದ ಅಧಿಕಾರದ ಲಾಭ ಪಡೆದವರೇ ಆಗಿದ್ದರು. “ಸ್ವತಂತ್ರವಾಗಿ ಇದ್ದು ಕೆಲಸ ಮಾಡಿ ತೋರಿಸು” ಎಂದು ನನಗೆ ಸವಾಲು. ಹಾಕಿದವರೂ ಇದ್ದಾರೆ. ನನ್ನಿಂದ ಉಚಿತವಾಗಿ ಸೇವೆ ಪಡೆದವರೂ ಇದ್ದಾರೆ. ನಾನು ಸಲ್ಲಿಸಿದ ಮನವಿಗಳನ್ನು “ಕಸದ ಬುಟ್ಟಿಗೆ ಹಾಕುತ್ತಾರೆ” ಎಂದು ವ್ಯಂಗ್ಯವಾಡಿದವರೂ ಇದ್ದಾರೆ. ಆದರೆ ಇಂದು ಅದೇ ಮನವಿಗಳು ಅಭಿವೃದ್ಧಿಯ ದಿಕ್ಕಿನಲ್ಲಿ ಹಾರುವ ಗಾಳಿಪಟಗಳಾಗಿವೆ. 🪁 ನನಗೆ ಸಾಕಷ್ಟು ತೊಂದರೆ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು. ಆದರೂ ಯಾವುದಕ್ಕೂ ಕುಗ್ಗದೆ, ಯಾರ ಮೇಲೂ ಅವಲಂಬಿತನಾಗದೆ, ನಿಷ್ಠೆಯಿಂದ… ಪ್ರಾಮಾಣಿಕವಾಗಿ…24 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದೆ. ಇಂದು ನನ್ನ ಮಾತಿಗಿಂತ ನನ್ನ ಕೆಲಸಗಳೇ ಉತ್ತರ ನೀಡುತ್ತಿವೆ. ಜನರ ಸಮಸ್ಯೆಗಳನ್ನು ಹೇಳುವುದು ಮಾತ್ರ ನನ್ನ ಕೆಲಸವಲ್ಲ; ಪರಿಹಾರ ಸಿಗುವವರೆಗೂ ಹೋರಾಡುವುದು ನನ್ನ ಜವಾಬ್ದಾರಿ. 🔥ನನ್ನನ್ನು ಎಷ್ಟೇ ತುಳಿದರೂ, ನನ್ನ ಶ್ರಮವನ್ನು ತಡೆಯಲು ಸಾಧ್ಯವಾಗಲಿಲ್ಲ. ಮಾತಿಗಿಂತ ಕೆಲಸವೇ ಮುಖ್ಯ — ಅದನ್ನು ನನ್ನ ಕಾರ್ಯಗಳ ಮೂಲಕ ತೋರಿಸುತ್ತಿದ್ದೇನೆ. — @Anil Karne Gajendragad1
- *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!* ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ. ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. *ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ: ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ. ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ. ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ. ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.2
- ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...2
- ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.1
- *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶನ ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶ ಚತುರ್ಥಿಯ ಪಾವನ ಸಂದರ್ಭದಲ್ಲಿ ಕಸಬಾ ಗಣಪತಿ ಹಾಗೂ ಆಜುಭಾ ಗಣಪತಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ವಿಜಯಾನಂದ ಎಸ್ ಕಾಶಪ್ಪನವರ ಭೇಟಿ ನೀಡಿ, ವಿಘ್ನವಿನಾಶಕನ ದರ್ಶನ ಪಡೆದು ನಾಡಿನ ಸುಭಿಕ್ಷೆ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.3
- ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು2
- ಕಾರಟಗಿಯ ಸ್ಥಳೀಯ ಕಲಾವಿದರಿಂದ ಗಣೇಶ ಚತುರ್ಥಿ ಅಂಗವಾಗಿ ಜನಪದ ಸಂಭ್ರಮ ಕಾರ್ಯಕ್ರಮ4