Shuru
Apke Nagar Ki App…
ಕಾಂಗ್ರೆಸ್ ಶಾಸಕರಾದ ಎಸ್ ಎನ್ ಸುಬ್ಬಾರೆಡ್ಡಿ ಅವರು ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದ ಚೆಕ್ಡಾಂ ನಿರ್ಮಾಣಕ್ಕೆ ಎರಡು ಕೋಟಿ ಅನುದಾನ ನೀಡಿ ಗುದ್ದಲಿ ಪೂಜೆಯನ್ನು ಮಾಡಿದರು ಈ ವೇಳೆ ಶಾಸಕ ಸುಬ್ಬಾರೆಡ್ಡಿ ಮಾತನಾಡಿ, ದಪ್ಪರ್ತಿ ಗ್ರಾಮದಿಂದ ಕೊಂಡವಳಹಳ್ಳಿ ಹಾಗೂ ಗುಡಿಬಂಡೆ ಭಾಗಗಳಿಗೆ ಹೋಗಲು ಸರಿಯಾದ ಸೇತುವೆ ಇಲ್ಲದೆ ಇಲ್ಲಿನ ಜನರು ಸಂಕಷ್ಟ ಪಡುತ್ತಿದ್ದರು. ಅದರಲ್ಲೂ ಮಳೆಗಾಲದಲ್ಲಿ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತಿತ್ತು. ಇಲ್ಲಿ ಸೇತುವೆ ನಿರ್ಮಾಣ ಮಾಡಿಕೊಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದ್ದರು. ಅದರಂತೆ ಸರ್ಕಾರದ ಜೊತೆಗೆ ಚರ್ಚೆ ನಡೆಸಿ ಎರಡು ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದೇನೆ. ಸೇತುವೆ ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ನಿರ್ವಹಿಸುವಂತೆ ಸೂಚಿಸಿದ್ದೇನೆ. ಆರು ತಿಂಗಳ ಒಳಗೆ ಕಾಮಗಾರಿ ಪೂರ್ಣ ಗೊಳಿಸುವಂತೆ ತಿಳಿಸಿದ್ದೇನೆ. ಜೊತೆಗೆ ಕೆರೆಯನ್ನು ಸಹ ಸ್ವಚ್ಚಗೊಳಿಸಿ ಸ್ಥಳೀಯರಿಗೆ ಅನುಕೂಲವಾಗುವಂತೆ ಅಭಿವೃದ್ದಿಪಡಿಸುತ್ತೇನೆ. ಕಾಮಗಾರಿಯನ್ನು ಸ್ಥಳೀಯರು ಸಹ ಪರಿಶೀಲನೆ ನಡೆಸುತ್ತಿರಬೇಕು ಎಂದರು
Shashi Kumar

More news from ಕರ್ನಾಟಕ and nearby areas
- ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.4
- ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಪುರದಲ್ಲಿರುವ ಶ್ರೀ ಲಕ್ಷ್ಮೀದೇವಿ ರೈಸ್ ಕಾರ್ನರ್ ಅಂಗಡಿಯಲ್ಲಿ ಮಧ್ಯರಾತ್ರಿ ತೆಂಗಿನಕಾಯಿ ಕಳ್ಳತನ ನಡೆದಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಂಗಡಿ ಮುಚ್ಚಿದ್ದ ವೇಳೆ ಮಹಿಳೆಯೊಬ್ಬಳು ಬೆಳಗಿನ ಜಾವ ಸುಮಾರು 3 ಗಂಟೆಗೆ ಬಂದು ಸುಮಾರು 15 ತೆಂಗಿನಕಾಯಿಗಳನ್ನು ಕದ್ದೊಯ್ದಿರುವುದು ದೃಶ್ಯಗಳಲ್ಲಿ ಕಾಣಿಸಿದೆ. ಇದೇ ಅಂಗಡಿಯಲ್ಲಿ ಈ ಹಿಂದೆ ಹಲವು ಬಾರಿ ಕಳ್ಳತನ ನಡೆದಿದ್ದರಿಂದ ಅಂಗಡಿ ಮಾಲೀಕರು ಕಳೆದ ಒಂದು ವಾರದಿಂದ ಖದೀಮೆಯನ್ನು ಹಿಡಿಯಲು ಕಾಯುತ್ತಿದ್ದರು ಎಂದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.1
- Post by Chand Pasha1
- KOLAR KI.AWAAZ KOUSAR1
- Post by Shilpa3
- ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ...ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತಪಟ್ಟವರೆಲ್ಲರೂ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ.ಟ್ಯಾಂಕರ್ ಡಿಕ್ಕಿಯಾದ ರಭಸಕ್ಕೆ ಬೊಲೆರೊ ವಾಹನ ಅಪ್ಪಚ್ಚಿಯಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಗಿದೆ.1
- ಹೊಳಲ್ಕೆರೆ ಪಟ್ಟಣದ ಇಂಡೇನ್ ಏಜೆನ್ಸಿಯ ಗ್ರಾಹಕರು ಒಂದು ತಿಂಗಳ ಹಿಂದೆ ಗ್ಯಾಸ್ ಬುಕ್ ಮಾಡಿದರು ಸಹ ಏಜೆನ್ಸಿ ಅವರು ಗ್ರಾಮಗಳಿಗೆ ತೆರಳಿ ಸಿಲಿಂಡರ್ ಗಳನ್ನು ನೀಡುತ್ತಿಲ್ಲ, ದಿನನಿತ್ಯ ಹೊಳಲ್ಕೆರೆ ತಾಲೂಕಿನ ಗಡಿಭಾಗದ ಸಾಸಲುಹಳ್ಳ, ರಾಮೇನಹಳ್ಳಿ, ತುಪ್ಪದಹಳ್ಳಿ, ರಾಮಘಟ್ಟ,ಕೆಂಚಾಪುರ,ಬಿ,ಜಿ ಹಳ್ಳಿ,ತಾಳ್ಯ, ಅಂದನೂರು, ರಾಮಗಿರಿ, ಟಿ ,ನೂಲೆನೂರು, ಲಿಂಗದಹಳ್ಳಿ, ಹೊಳಲ್ಕೆರೆ ಪಟ್ಟಣ ಹೊರಕೆದೇವಪುರ,ಎಲ್ಲಾ ಗ್ರಾಮಗಳಿಂದ ಗ್ರಾಹಕರು ಅಡುಗೆಗೆ ಸಿಲಿಂಡರ್ ಇಲ್ಲದೇ ಅಖಿಲ್ ಇಂಡಿಯನ್ ಏಜೆನ್ಸಿ ಆಫೀಸ್ ಮುಂದೆ ಬರುತ್ತಿದ್ದಾರೆ.1
- ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.1