logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿದ್ಯುತ್ ಪೂರೈಕೆ ಸಮರ್ಪಕ ನಿರ್ವಹಣೆಗೆ ನಿಗಾವಹಿಸಿ : ಎಂ.ಎಸ್. ಅರ್ಚನಾ ಸೂಚನೆ ವರದಿ: ಹೊಮ್ಮನಂಜುಂಡನಾಯಕ ವಿದ್ಯುತ್ ಪೂರೈಕೆ ಸಮರ್ಪಕ ನಿರ್ವಹಣೆಗೆ ನಿಗಾವಹಿಸಿ : ಎಂ.ಎಸ್. ಅರ್ಚನಾ ಸೂಚನೆ ಚಾಮರಾಜನಗರ: ಗ್ರಾಹಕರಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಕಟ್ಟುನಿಟ್ಟಿನ ನಿಗಾವಹಿಸಿ, ಲಭ್ಯವಿರುವ ವಿದ್ಯುತ್ ಅನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಗ್ರಾಹಕರು ಹಾಗೂ ರೈತರಿಗೆ ಸಾಧ್ಯವಾದಷ್ಟು ಅಡಚಣೆ ರಹಿತ ವಿದ್ಯುತ್ ಪೂರೈಕೆ ಮಾಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕರಾದ ಎಂ.ಎಸ್. ಅರ್ಚನಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕೊಳ್ಳೇಗಾಲ ಉಪ ವಿಭಾಗಕ್ಕೆ ಭೇಟಿ ನೀಡಿದ ಅವರು ಕೊಳ್ಳೇಗಾಲ, ಹನೂರು ಹಾಗೂ ಯಳಂದೂರು ತಾಲೂಕುಗಳು ಒಳಪಡುವ ಕೊಳ್ಳೇಗಾಲ ಉಪ ವಿಭಾಗದ ವಿದ್ಯುತ್ ಪೂರೈಕೆ ಪರಿಸ್ಥಿತಿ ಹಾಗೂ ನಿರ್ವಹಣೆ, ಐಪಿ ಫೀಡರ್‍ಗಳಿಗೆ ವಿದ್ಯುತ್ ಪೂರೈಕೆ ಮತ್ತು ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮಾಹಿತಿ ಸಂಗ್ರಹಣೆ ಕುರಿತ ಪ್ರಗತಿ ಪರಿಶೀಲನೆ ನಡೆಸಿ, ಮಾಹಿತಿಗಳನ್ನು ಪಡೆದರು. ರಾಜ್ಯದಲ್ಲಿ ವಿದ್ಯುತ್ ಲಭ್ಯತೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ, ಪ್ರಸ್ತುತ ಎದುರಾಗಿರುವ ವಿದ್ಯುತ್ ಲಭ್ಯತೆಯ ಕೊರತೆಯ ನಡುವೆಯೂ ಗ್ರಾಹಕರಿಗೆ ನೀಡುವ ವಿದ್ಯುತ್ ಸೇವೆಯಲ್ಲಿ ಹೆಚ್ಚಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಅಲ್ಲದೇ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಅಥವಾ ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ಅವುಗಳನ್ನು ತ್ವರಿತವಾಗಿ ಗುರುತಿಸಿ ಪರಿಹರಿಸಬೇಕು. ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯುತ್ ವ್ಯವಸ್ಥೆಯ ಮೇಲೂ ನಿರಂತರ ನಿಗಾವಹಿಸುವಂತೆ ವ್ಯವಸ್ಥಾಪಕ ನಿರ್ದೇಶಕರು ಸೂಚಿಸಿದರು. ಪ್ರಸ್ತುತ ವಿದ್ಯುತ್ ಪೂರೈಕೆ ನಿರ್ವಹಣೆಯಲ್ಲಿ ಎದುರಾಗಿರುವ ಸವಾಲುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಸಮರ್ಥವಾಗಿ ನಿಭಾಯಿಸಬೇಕು. ಗ್ರಾಹಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವುದರ ಜೊತೆಗೆ ವಿದ್ಯುತ್ ಪೂರೈಕೆಯ ಗುಣಮಟ್ಟದ ಬಗ್ಗೆ ನಿರಂತರ ಪರಿಶೀಲನೆ ನಡೆಸುವಂತೆ ಅವರು ತಿಳಿಸಿದರು. ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹಣೆ ಕಾರ್ಯದ ಪ್ರಗತಿ ಪರಿಶೀಲಿಸಿದ ವ್ಯವಸ್ಥಾಪಕ ನಿರ್ದೇಶಕರು, ಮಾಹಿತಿ ಸಂಗ್ರಹಣೆಯನ್ನು ಇದೇ ತಿಂಗಳ ಅಂತ್ಯದೊಳಗೆ ತಪ್ಪದೇ ಪೂರ್ಣಗೊಳಿಸುವಂತೆ ಸೂಚಿಸಿದರು. ಬಾಕಿ ಉಳಿದಿರುವ ಕಾಮಗಾರಿಗಳು ಹಾಗೂ ಇತರೆ ಕೆಲಸಗಳನ್ನು ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡದೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಎಸ್. ಅರ್ಚನಾ ಅವರು ನಿರ್ದೇಶನ ನೀಡಿದರು. ಕೊಳ್ಳೇಗಾಲ ಉಪ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ತಬ್ಸುಮ್ ಸೇರಿದಂತೆ ಸೆಸ್ಕ್‍ನ ವಿವಿಧ ಅಧಿಕಾರಿಗಳು ಹಾಗೂ ರೈತ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

4 hrs ago
user_Nanjunda Nayak
Nanjunda Nayak
Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
4 hrs ago
d0f8da97-0734-4a65-b95f-a4ea0459161c

ವಿದ್ಯುತ್ ಪೂರೈಕೆ ಸಮರ್ಪಕ ನಿರ್ವಹಣೆಗೆ ನಿಗಾವಹಿಸಿ : ಎಂ.ಎಸ್. ಅರ್ಚನಾ ಸೂಚನೆ ವರದಿ: ಹೊಮ್ಮನಂಜುಂಡನಾಯಕ ವಿದ್ಯುತ್ ಪೂರೈಕೆ ಸಮರ್ಪಕ ನಿರ್ವಹಣೆಗೆ ನಿಗಾವಹಿಸಿ : ಎಂ.ಎಸ್. ಅರ್ಚನಾ ಸೂಚನೆ ಚಾಮರಾಜನಗರ: ಗ್ರಾಹಕರಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಕಟ್ಟುನಿಟ್ಟಿನ ನಿಗಾವಹಿಸಿ, ಲಭ್ಯವಿರುವ ವಿದ್ಯುತ್ ಅನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಗ್ರಾಹಕರು ಹಾಗೂ ರೈತರಿಗೆ ಸಾಧ್ಯವಾದಷ್ಟು ಅಡಚಣೆ ರಹಿತ ವಿದ್ಯುತ್ ಪೂರೈಕೆ ಮಾಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕರಾದ ಎಂ.ಎಸ್. ಅರ್ಚನಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕೊಳ್ಳೇಗಾಲ ಉಪ ವಿಭಾಗಕ್ಕೆ ಭೇಟಿ ನೀಡಿದ ಅವರು ಕೊಳ್ಳೇಗಾಲ, ಹನೂರು ಹಾಗೂ ಯಳಂದೂರು ತಾಲೂಕುಗಳು ಒಳಪಡುವ ಕೊಳ್ಳೇಗಾಲ ಉಪ ವಿಭಾಗದ ವಿದ್ಯುತ್ ಪೂರೈಕೆ ಪರಿಸ್ಥಿತಿ ಹಾಗೂ ನಿರ್ವಹಣೆ, ಐಪಿ ಫೀಡರ್‍ಗಳಿಗೆ ವಿದ್ಯುತ್ ಪೂರೈಕೆ ಮತ್ತು ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮಾಹಿತಿ ಸಂಗ್ರಹಣೆ ಕುರಿತ ಪ್ರಗತಿ ಪರಿಶೀಲನೆ ನಡೆಸಿ, ಮಾಹಿತಿಗಳನ್ನು ಪಡೆದರು. ರಾಜ್ಯದಲ್ಲಿ ವಿದ್ಯುತ್ ಲಭ್ಯತೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ, ಪ್ರಸ್ತುತ ಎದುರಾಗಿರುವ ವಿದ್ಯುತ್ ಲಭ್ಯತೆಯ ಕೊರತೆಯ ನಡುವೆಯೂ ಗ್ರಾಹಕರಿಗೆ ನೀಡುವ ವಿದ್ಯುತ್ ಸೇವೆಯಲ್ಲಿ ಹೆಚ್ಚಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ

1055410e-12e2-42ff-afb2-c99e3d0b3d7c

ನಿರ್ದೇಶನ ನೀಡಿದರು. ಅಲ್ಲದೇ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಅಥವಾ ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ಅವುಗಳನ್ನು ತ್ವರಿತವಾಗಿ ಗುರುತಿಸಿ ಪರಿಹರಿಸಬೇಕು. ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯುತ್ ವ್ಯವಸ್ಥೆಯ ಮೇಲೂ ನಿರಂತರ ನಿಗಾವಹಿಸುವಂತೆ ವ್ಯವಸ್ಥಾಪಕ ನಿರ್ದೇಶಕರು ಸೂಚಿಸಿದರು. ಪ್ರಸ್ತುತ ವಿದ್ಯುತ್ ಪೂರೈಕೆ ನಿರ್ವಹಣೆಯಲ್ಲಿ ಎದುರಾಗಿರುವ ಸವಾಲುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಸಮರ್ಥವಾಗಿ ನಿಭಾಯಿಸಬೇಕು. ಗ್ರಾಹಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವುದರ ಜೊತೆಗೆ ವಿದ್ಯುತ್ ಪೂರೈಕೆಯ ಗುಣಮಟ್ಟದ ಬಗ್ಗೆ ನಿರಂತರ ಪರಿಶೀಲನೆ ನಡೆಸುವಂತೆ ಅವರು ತಿಳಿಸಿದರು. ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹಣೆ ಕಾರ್ಯದ ಪ್ರಗತಿ ಪರಿಶೀಲಿಸಿದ ವ್ಯವಸ್ಥಾಪಕ ನಿರ್ದೇಶಕರು, ಮಾಹಿತಿ ಸಂಗ್ರಹಣೆಯನ್ನು ಇದೇ ತಿಂಗಳ ಅಂತ್ಯದೊಳಗೆ ತಪ್ಪದೇ ಪೂರ್ಣಗೊಳಿಸುವಂತೆ ಸೂಚಿಸಿದರು. ಬಾಕಿ ಉಳಿದಿರುವ ಕಾಮಗಾರಿಗಳು ಹಾಗೂ ಇತರೆ ಕೆಲಸಗಳನ್ನು ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡದೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಎಸ್. ಅರ್ಚನಾ ಅವರು ನಿರ್ದೇಶನ ನೀಡಿದರು. ಕೊಳ್ಳೇಗಾಲ ಉಪ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ತಬ್ಸುಮ್ ಸೇರಿದಂತೆ ಸೆಸ್ಕ್‍ನ ವಿವಿಧ ಅಧಿಕಾರಿಗಳು ಹಾಗೂ ರೈತ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ದಸರಾ ಮಾಡದಿದ್ದರೆ ಉಪವಾಸ ಸತ್ಯಾಗ್ರಹ : ಕಲಾವಿದ ಶಿವಶಂಕರ ಚೆಟ್ಟು ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಯುವ ಕಲಾವಿದ ಶಿವಶಂಕರ ಚೆಟ್ಟು ಮಾತನಾಡಿ ಈ ಬಾರಿ ಚಾಮರಾಜನಗರ ದಸರಾ ಮಹೋತ್ಸವ ನಡೆಸದಿದ್ದರೆ ಜಿಲ್ಲೆಯ ಕಲಾವಿದರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.
    1
    ದಸರಾ ಮಾಡದಿದ್ದರೆ ಉಪವಾಸ ಸತ್ಯಾಗ್ರಹ : ಕಲಾವಿದ ಶಿವಶಂಕರ ಚೆಟ್ಟು

ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಯುವ ಕಲಾವಿದ ಶಿವಶಂಕರ ಚೆಟ್ಟು ಮಾತನಾಡಿ ಈ ಬಾರಿ ಚಾಮರಾಜನಗರ ದಸರಾ ಮಹೋತ್ಸವ ನಡೆಸದಿದ್ದರೆ ಜಿಲ್ಲೆಯ ಕಲಾವಿದರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.
    user_ಚಾಮರಾಜನಗರ ಸುದ್ದಿ ಮನೆ
    ಚಾಮರಾಜನಗರ ಸುದ್ದಿ ಮನೆ
    ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    5 hrs ago
  • All About,State of affairs of Congress Party organization members in #NRConstituency #Mysuru *ಭಾರತ ನಲ್ಲಿ ವೈರಲ್*
    1
    All About,State of affairs of Congress Party organization members in #NRConstituency #Mysuru 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    6 hrs ago
  • 33 ಎಕರೆಯ 896 ನಿವೇಶನವನ್ನು ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮ ಮಳವಳ್ಳಿ: 44 ವರ್ಷಗಳಿಂದ ನೆನೆಗುಂದಿ ಬಿದ್ದಿದ್ದ 33 ಎಕರೆಯ 896 ನಿವೇಶನವನ್ನು ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಕಾರ್ಯಕ್ರಮ ಮಳವಳ್ಳಿ ಪಟ್ಟಣದ 33 ಎಕರೆ ನಿವೇಶನ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಕೃಷಿ ಸಚಿವ ನರೇಂದ್ರಸ್ವಾಮಿ ಉದ್ಘಾಟಿಸಿದರು. ಈ ವೇಳೆ 23 ವಾರ್ಡುನ 896 ನಿವೇಶನ ಫಲಾನುಭವಿಗಳಿಗೆ ತಮ್ಮ ತಮ್ಮ ನಿವೇಶನದ ಆಯ್ಕೆ ಮಾಡಲು ಫಲಾನುಭವಿಗಳು ಲಾಟರಿ ಮೂಲಕ ಅವಕಾಶ ಕಲ್ಪಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಡಾ.ಕುಮಾರ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.
    1
    33  ಎಕರೆಯ 896 ನಿವೇಶನವನ್ನು  ಅರ್ಹ ಬಿಪಿಎಲ್  ಫಲಾನುಭವಿಗಳಿಗೆ  ನಿವೇಶನ ಹಂಚಿಕೆ ಕಾರ್ಯಕ್ರಮ 
ಮಳವಳ್ಳಿ: 44 ವರ್ಷಗಳಿಂದ ನೆನೆಗುಂದಿ ಬಿದ್ದಿದ್ದ  33  ಎಕರೆಯ 896 ನಿವೇಶನವನ್ನು  ಅರ್ಹ ಬಿಪಿಎಲ್  ಫಲಾನುಭವಿಗಳಿಗೆ  ನಿವೇಶನ ಹಂಚಿಕೆ ಕಾರ್ಯಕ್ರಮ  ಮಳವಳ್ಳಿ ಪಟ್ಟಣದ  33 ಎಕರೆ ನಿವೇಶನ ಆವರಣದಲ್ಲಿ  ನಡೆಸಲಾಯಿತು.
ಕಾರ್ಯಕ್ರಮವನ್ನು  ಕೃಷಿ ಸಚಿವ ನರೇಂದ್ರಸ್ವಾಮಿ  ಉದ್ಘಾಟಿಸಿದರು.
ಈ ವೇಳೆ  23 ವಾರ್ಡುನ   896 ನಿವೇಶನ ಫಲಾನುಭವಿಗಳಿಗೆ  ತಮ್ಮ ತಮ್ಮ ನಿವೇಶನದ ಆಯ್ಕೆ ಮಾಡಲು  ಫಲಾನುಭವಿಗಳು ಲಾಟರಿ ಮೂಲಕ   ಅವಕಾಶ ಕಲ್ಪಿಸಲಾಯಿತು. 
ಈ ವೇಳೆ  ಜಿಲ್ಲಾಧಿಕಾರಿ ಡಾ.ಕುಮಾರ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಚಂದ್ರಶೇಖರ್ ಸೇರಿದಂತೆ  ಹಲವರು ಇದ್ದರು.
    user_ಸುಮಿತ್ರ‌ ಹೆಚ್‌ ಪಿ
    ಸುಮಿತ್ರ‌ ಹೆಚ್‌ ಪಿ
    ವರದಿಗಾರರು ಮಳವಳ್ಳಿ, ಮಂಡ್ಯ, ಕರ್ನಾಟಕ•
    7 hrs ago
  • ಕುಡಿದ ಮತ್ತಿನಲ್ಲಿ ಜಗಳ, ದಿಕ್ಕು ತಪ್ಪಿಸಲು ಹೋದ ದಂಪತಿಗೆ ಬುದ್ಧಿಹೇಳಿದ ಪೊಲೀಸರು! ಮೈಸೂರು: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದು, ದಿಕ್ಕು ತಪ್ಪಿಸಲು ಹೋದ ಮಹಿಳೆಗೆ ಪೊಲೀಸರು ಬುದ್ಧಿ ಹೇಳಿದ ಘಟನೆ ಎಚ್‌.ಡಿ.ಕೋಟೆ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಬಂಕಹಳ್ಳಿ ಗ್ರಾಮದ ಗೋಪಮ್ಮ ಅಲಿಯಾಸ್ ಗೌರಮ್ಮ(52) ಹಾಗೂ ಪತಿ ಚೆಲುವ ಕುಡಿದ ಮತ್ತಿನಲ್ಲಿ ಸೋಮವಾರ ರಾತ್ರಿ ಜಗಳ ಮಾಡಿದ್ದಾರೆ. ಇದರಿಂದ ಕೋಪಗೊಂಡ ಪತಿ, ಪತ್ನಿ ಗೌರಮ್ಮರಿಗೆ ಮುಖಕ್ಕೆ ಜೋರಾಗಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ನಂತರ ರಾತ್ರಿ ಹೆಡಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ‌ ಚಿಕಿತ್ಸೆಗಾಗಿ ಎಚ್.ಡಿ.ಕೋಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮಹಿಳೆ ಗುಣಮುಖರಾಗುತ್ತಿದ್ದಾರೆ. ಕಥೆಕಟ್ಟಿದ ಮಹಿಳೆ: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದಿದೆ.ಆದರೆ,ಜಮೀನಿಗೆ ಕೆಲಸಕ್ಕೆ ಬಂದಿಲ್ಲವೆಂದು ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಮುಂದೆ ಗೌರಮ್ಮ ಹೇಳಿದ್ದಾರೆ. ಪೊಲೀಸರು ವಿಚಾರಣೆ ಮಾಡಿದಾಗ, ಕುಡಿದ ಮತ್ತಿ ಇಬ್ಬರ ಜಗಳ ನಡೆದು, ಪತಿ ಹಲ್ಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪತ್ನಿ-ಪತಿ ಇಬ್ಬರಿಗೂ ಪೊಲೀಸರು ಬುದ್ಧಿ ಹೇಳಿ ರೀತಿ, ಸುಳ್ಳು ಹೇಳಬಾರದು ಎಂದು ತಿಳಿ ಹೇಳಿದ್ದಾರೆ.
    3
    ಕುಡಿದ ಮತ್ತಿನಲ್ಲಿ ಜಗಳ, ದಿಕ್ಕು ತಪ್ಪಿಸಲು ಹೋದ ದಂಪತಿಗೆ ಬುದ್ಧಿಹೇಳಿದ  ಪೊಲೀಸರು!
ಮೈಸೂರು: ಕುಡಿದ ಮತ್ತಿನಲ್ಲಿ ಪತಿ-ಪತ್ನಿ   ಜಗಳ ನಡೆದು,  ದಿಕ್ಕು ತಪ್ಪಿಸಲು ಹೋದ ಮಹಿಳೆಗೆ ಪೊಲೀಸರು ಬುದ್ಧಿ ಹೇಳಿದ ಘಟನೆ ಎಚ್‌.ಡಿ.ಕೋಟೆ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಬಂಕಹಳ್ಳಿ ಗ್ರಾಮದ ಗೋಪಮ್ಮ ಅಲಿಯಾಸ್ ಗೌರಮ್ಮ(52) ಹಾಗೂ ಪತಿ ಚೆಲುವ ಕುಡಿದ ಮತ್ತಿನಲ್ಲಿ ಸೋಮವಾರ ರಾತ್ರಿ ಜಗಳ ಮಾಡಿದ್ದಾರೆ. ಇದರಿಂದ ಕೋಪಗೊಂಡ ಪತಿ, ಪತ್ನಿ ಗೌರಮ್ಮರಿಗೆ ಮುಖಕ್ಕೆ ಜೋರಾಗಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ.
ನಂತರ ರಾತ್ರಿ ಹೆಡಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ‌ ಚಿಕಿತ್ಸೆಗಾಗಿ ಎಚ್.ಡಿ.ಕೋಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮಹಿಳೆ ಗುಣಮುಖರಾಗುತ್ತಿದ್ದಾರೆ.
ಕಥೆಕಟ್ಟಿದ ಮಹಿಳೆ: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದಿದೆ.ಆದರೆ,ಜಮೀನಿಗೆ ಕೆಲಸಕ್ಕೆ ಬಂದಿಲ್ಲವೆಂದು ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಮುಂದೆ ಗೌರಮ್ಮ ಹೇಳಿದ್ದಾರೆ.
ಪೊಲೀಸರು ವಿಚಾರಣೆ ಮಾಡಿದಾಗ, ಕುಡಿದ ಮತ್ತಿ ಇಬ್ಬರ ಜಗಳ ನಡೆದು, ಪತಿ ಹಲ್ಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪತ್ನಿ-ಪತಿ ಇಬ್ಬರಿಗೂ ಪೊಲೀಸರು ಬುದ್ಧಿ ಹೇಳಿ ರೀತಿ, ಸುಳ್ಳು ಹೇಳಬಾರದು ಎಂದು ತಿಳಿ ಹೇಳಿದ್ದಾರೆ.
    user_Mysore update
    Mysore update
    Voice of people Mysuru, Karnataka•
    7 hrs ago
  • ರಾಜಕಾರಣ ಮಾಡಲು ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿದ್ದಾರೆ - ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ಮಂಡ್ಯ-ಮದ್ದೂರಿನಲ್ಲಿ ನಡೆಯುತ್ತಿರುವ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸುತ್ತಿರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಉಸ್ತುವಾರಿ ಸಚಿವ ಚಲುವಾರಾಯಸ್ವಾಮಿ, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಬಾರದ ಬಿಜೆಪಿ ನಾಯಕರು, ಗಣೇಶ ವಿಸರ್ಜನೆ ನೆಪದಲ್ಲಿ ರಾಜಕಾರಣ ಮಾಡಲು ಮಂಡ್ಯಕ್ಕೆ ಬರುತ್ತಿದ್ದಾರೆ ಬರುತ್ತಿದ್ದಾರೆ. ನಮ್ಮ ಜಿಲ್ಲೆಯ ಜನರಿಗೆ ಗಣೇಶನನ್ನು ಹೇಗೆ ವಿಸರ್ಜಿಸಬೇಕು ಎಂಬುದು ಗೊತ್ತಿದೆ, ಬಿಜೆಪಿಯವರಿಂದ ಕಲಿಯ ಬೇಕಿಲ್ಲ ರಾಜಕೀಯವಾಗಿ ಮಾತನಾಡಲು ಬೇರೆ ವಿಷಯವಿಲ್ಲದ ಕಾರಣ ಬಿಜೆಪಿ ಇಲ್ಲಿ ರಾಜಕೀಯ ಮಾಡಲು ಬರುತ್ತಿದೆ, ಅವರು ಜಿಲ್ಲೆ ಪ್ರವೇಶಿಸದಂತೆ ಪೊಲೀಸ್ ಭದ್ರತೆ ಒದಗಿಸಿ ವಾಪಸ್ ಕಳುಹಿಸಲಾಗುವುದು ಎಂದುಚಲುವರಾಯಸ್ವಾಮಿ ಗಣೇಶ ವಿಸರ್ಜನೆಗೆ ಬರುತ್ತಿರುವ ಬಾಜಪಾ ನಾಯಕರಿಗೆ ಎಚ್ಚರಿಕೆ ನೀಡಿದರು.
    1
    ರಾಜಕಾರಣ ಮಾಡಲು ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿದ್ದಾರೆ - ಸಚಿವ ಚಲುವರಾಯಸ್ವಾಮಿ ವಾಗ್ದಾಳಿ
ಮಂಡ್ಯ-ಮದ್ದೂರಿನಲ್ಲಿ ನಡೆಯುತ್ತಿರುವ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸುತ್ತಿರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಉಸ್ತುವಾರಿ ಸಚಿವ ಚಲುವಾರಾಯಸ್ವಾಮಿ, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಬಾರದ ಬಿಜೆಪಿ ನಾಯಕರು, ಗಣೇಶ ವಿಸರ್ಜನೆ ನೆಪದಲ್ಲಿ ರಾಜಕಾರಣ ಮಾಡಲು ಮಂಡ್ಯಕ್ಕೆ ಬರುತ್ತಿದ್ದಾರೆ ಬರುತ್ತಿದ್ದಾರೆ. 
ನಮ್ಮ ಜಿಲ್ಲೆಯ ಜನರಿಗೆ ಗಣೇಶನನ್ನು ಹೇಗೆ ವಿಸರ್ಜಿಸಬೇಕು ಎಂಬುದು ಗೊತ್ತಿದೆ, ಬಿಜೆಪಿಯವರಿಂದ ಕಲಿಯ ಬೇಕಿಲ್ಲ ರಾಜಕೀಯವಾಗಿ  ಮಾತನಾಡಲು ಬೇರೆ ವಿಷಯವಿಲ್ಲದ ಕಾರಣ ಬಿಜೆಪಿ ಇಲ್ಲಿ ರಾಜಕೀಯ ಮಾಡಲು ಬರುತ್ತಿದೆ, ಅವರು ಜಿಲ್ಲೆ ಪ್ರವೇಶಿಸದಂತೆ  ಪೊಲೀಸ್ ಭದ್ರತೆ ಒದಗಿಸಿ ವಾಪಸ್ ಕಳುಹಿಸಲಾಗುವುದು ಎಂದುಚಲುವರಾಯಸ್ವಾಮಿ ಗಣೇಶ ವಿಸರ್ಜನೆಗೆ ಬರುತ್ತಿರುವ ಬಾಜಪಾ ನಾಯಕರಿಗೆ ಎಚ್ಚರಿಕೆ  ನೀಡಿದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    9 hrs ago
  • ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ. ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ. ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಆರೋಪಿಗಳ ಬಂಧನಕ್ಕೆ ಪ್ರತಿಭಟನೆ ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು. ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.
    3
    ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ
ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ.
ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ.
ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಆರೋಪಿಗಳ ಬಂಧನಕ್ಕೆ ಪ್ರತಿಭಟನೆ
ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು.
ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.
    user_ಶಿವು.ಎಸ್ ದೊಡ್ಡಆಲಹಳ್ಳಿ
    ಶಿವು.ಎಸ್ ದೊಡ್ಡಆಲಹಳ್ಳಿ
    Local News Reporter ಕನಕಪುರ, ರಾಮನಗರ, ಕರ್ನಾಟಕ•
    3 hrs ago
  • ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಬಲಿ: ಸ್ಥಳಕ್ಕೆ ಸಚಿವ ಪುಟ್ಟರಂಗಶೆಟ್ಟಿ ಭೇಟಿ, ಪರಿಶೀಲನೆ ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಬಲಿಯಾದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವರು, ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಉಳಿದ 15 ಲಕ್ಷ ಪರಿಹಾರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ಮಾತನಾಡಿದ ಸಚಿವ ಸಿ.ಪುಟ್ಟರಂಗಶೆಟ್ಟಿ, 20 ಲಕ್ಷ ಪರಿಹಾರವೂ ಸಾಕಾಗುವುದಿಲ್ಲ. ಪರಿಹಾರದ ಮೊತ್ತವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು. ಹುಲಿಯನ್ನು ಸೆರೆಹಿಡಿಯಲು ಇಂದಿನಿಂದಲೇ ಕಾರ್ಯಾಚರಣೆ ಆರಂಭಿಸಲಾಗುವುದು. ಸಾಕಾನೆಗಳ ಸಹಾಯದೊಂದಿಗೆ ಅರವಳಿಕೆ ತಜ್ಞರನ್ನು ಕರೆಸಿ ಹುಲಿ ಸೆರೆ ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದರು.
    1
    ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಬಲಿ: ಸ್ಥಳಕ್ಕೆ ಸಚಿವ ಪುಟ್ಟರಂಗಶೆಟ್ಟಿ ಭೇಟಿ, ಪರಿಶೀಲನೆ 
ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಬಲಿಯಾದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವರು, ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಉಳಿದ  15 ಲಕ್ಷ ಪರಿಹಾರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವ ಸಿ.ಪುಟ್ಟರಂಗಶೆಟ್ಟಿ, 20 ಲಕ್ಷ ಪರಿಹಾರವೂ ಸಾಕಾಗುವುದಿಲ್ಲ. ಪರಿಹಾರದ ಮೊತ್ತವನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು.
ಹುಲಿಯನ್ನು ಸೆರೆಹಿಡಿಯಲು ಇಂದಿನಿಂದಲೇ ಕಾರ್ಯಾಚರಣೆ ಆರಂಭಿಸಲಾಗುವುದು. ಸಾಕಾನೆಗಳ ಸಹಾಯದೊಂದಿಗೆ ಅರವಳಿಕೆ ತಜ್ಞರನ್ನು ಕರೆಸಿ ಹುಲಿ ಸೆರೆ ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದರು.
    user_ಚಾಮರಾಜನಗರ ಸುದ್ದಿ ಮನೆ
    ಚಾಮರಾಜನಗರ ಸುದ್ದಿ ಮನೆ
    ಪತ್ರಕರ್ತ ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    5 hrs ago
  • ಹುಲಿದಾಳಿಯಿಂದ ಮೃತಪಟ್ಟ ಬಡಗಲಪುರ ರೈತ ಬಸವಣ್ಣ ನಿವಾಸಕ್ಕೆ ಎಂಎಲ್ಸಿ ಡಾ.ತಿಮ್ಮಯ್ಯ ಭೇಟಿ, ವರದಿ: ಹೊಮ್ಮನಂಜುಂಡನಾಯಕ ಹುಲಿದಾಳಿಯಿಂದ ಮೃತಪಟ್ಟ ಬಡಗಲಪುರ ರೈತ ಬಸವಣ್ಣ ನಿವಾಸಕ್ಕೆ ಎಂಎಲ್ಸಿ ಡಾ.ತಿಮ್ಮಯ್ಯ ಭೇಟಿ, ಚಾಮರಾಜನಗರ: ಹುಲಿದಾಳಿಯಿಂದ ಮೃತಪಟ್ಟ ರೈತ ತಾಲೂಕಿನ ಬಡಗಲಪುರದ ಬಸವಣ್ಣ ನಿವಾಸಕ್ಕೆ ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ಭೇಟಿ ನೀಡಿ ಮೃತ ಕುಟುಂಬದವರಿಗೆ ಸಾಂತ್ವನ ಹೇಳಿ ಧನಸಹಾಯ ಮಾಡಿದರು. ನಂತರ ಮಾತನಾಡಿ, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ  ದಲಿತ ಸಮುದಾಯದ  ರೈತ ಬಸವಣ್ಣ ಅವರ ಮೇಲೆ ಹುಲಿ ದಾಳಿ ನಡೆಸಿ ತಿಂದು ಹಾಕಿರುವುದು ಒಂದು ದುರಂತವೇ ಸರಿ. ಜಿಲ್ಲಾ ಉಸ್ತುವಾರಿ ಸಚಿವರು, ಸಮಾಜ ಕಲ್ಯಾಣ ಸಚಿವರೊಡನೆ ಮಾತನಾಡಿ, ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಕೊಡಿಸಿಕೊಡುವುದಾಗಿ ತಿಳಿಸಿದರು. ಹುಲಿದಾಳಿಯಿಂದ ಗ್ರಾಮಸ್ಥರು ಆತಂಕದಲ್ಲಿದ್ದು, ಗ್ರಾಮಸ್ಥರು ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆ ಮಾಡುವುದು ಕಷ್ಟ ವಾಗಿದೆ. ಅರಣ್ಯ ಅಧಿಕಾರಿಗಳು ಹುಲಿ ಸೆರೆಹಿಡಿಯಬೇಕು. ಇಂತಹ ಘಟನೆ .ಮರುಕಲಿಸದಂತೆ  ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಂ.ಶಿವಮೂರ್ತಿ, ಹರವೆ ನಾಗೇಶ್, ಪ್ರಕಾಶ್ ಇತರರು ಹಾಜರಿದ್ದರು. ವರದಿ: ಹೊಮ್ಮನಂಜುಂಡನಾಯಕ ಪ್ರಜಾಪವರ್ ಟಿವಿ ಚಾಮರಾಜನಗರ.
    4
    ಹುಲಿದಾಳಿಯಿಂದ ಮೃತಪಟ್ಟ ಬಡಗಲಪುರ ರೈತ ಬಸವಣ್ಣ ನಿವಾಸಕ್ಕೆ ಎಂಎಲ್ಸಿ ಡಾ.ತಿಮ್ಮಯ್ಯ ಭೇಟಿ, 
ವರದಿ: ಹೊಮ್ಮನಂಜುಂಡನಾಯಕ
ಹುಲಿದಾಳಿಯಿಂದ ಮೃತಪಟ್ಟ ಬಡಗಲಪುರ ರೈತ ಬಸವಣ್ಣ ನಿವಾಸಕ್ಕೆ ಎಂಎಲ್ಸಿ ಡಾ.ತಿಮ್ಮಯ್ಯ ಭೇಟಿ, 
ಚಾಮರಾಜನಗರ: ಹುಲಿದಾಳಿಯಿಂದ ಮೃತಪಟ್ಟ ರೈತ ತಾಲೂಕಿನ ಬಡಗಲಪುರದ ಬಸವಣ್ಣ ನಿವಾಸಕ್ಕೆ ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ಭೇಟಿ ನೀಡಿ ಮೃತ ಕುಟುಂಬದವರಿಗೆ ಸಾಂತ್ವನ ಹೇಳಿ ಧನಸಹಾಯ ಮಾಡಿದರು.
ನಂತರ ಮಾತನಾಡಿ, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ  ದಲಿತ ಸಮುದಾಯದ  ರೈತ ಬಸವಣ್ಣ ಅವರ ಮೇಲೆ ಹುಲಿ ದಾಳಿ ನಡೆಸಿ ತಿಂದು ಹಾಕಿರುವುದು ಒಂದು ದುರಂತವೇ ಸರಿ. ಜಿಲ್ಲಾ ಉಸ್ತುವಾರಿ ಸಚಿವರು, ಸಮಾಜ ಕಲ್ಯಾಣ ಸಚಿವರೊಡನೆ ಮಾತನಾಡಿ, ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಕೊಡಿಸಿಕೊಡುವುದಾಗಿ ತಿಳಿಸಿದರು.
ಹುಲಿದಾಳಿಯಿಂದ ಗ್ರಾಮಸ್ಥರು ಆತಂಕದಲ್ಲಿದ್ದು, ಗ್ರಾಮಸ್ಥರು ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆ ಮಾಡುವುದು ಕಷ್ಟ ವಾಗಿದೆ. ಅರಣ್ಯ ಅಧಿಕಾರಿಗಳು ಹುಲಿ ಸೆರೆಹಿಡಿಯಬೇಕು. ಇಂತಹ ಘಟನೆ .ಮರುಕಲಿಸದಂತೆ  ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದರು. 
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ
ಎಂ.ಶಿವಮೂರ್ತಿ, ಹರವೆ ನಾಗೇಶ್, ಪ್ರಕಾಶ್ ಇತರರು ಹಾಜರಿದ್ದರು.
ವರದಿ: ಹೊಮ್ಮನಂಜುಂಡನಾಯಕ
ಪ್ರಜಾಪವರ್ ಟಿವಿ ಚಾಮರಾಜನಗರ.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    6 hrs ago
  • ಪ್ರಜಾಪ್ರಭುತ್ವ ದಿನಾಚರಣೆಗೆ ಶಾಸಕರು, ತಹಶೀಲ್ದಾರ್ ಗೈರು.. ಅಧಿಕಾರಿಗಳ ಗೈರಿಗೆ ದಸಂಸ ಆಕ್ರೋಶ — ಕಾಟಾಚಾರದ ಆಚರಣೆ ಆರೋಪ ನಂಜನಗೂಡು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ತಹಶೀಲ್ದಾರ್ ಕಛೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಕಾರ್ಯಕ್ರಮಕ್ಕೆ ಶಾಸಕರು ಹಾಗೂ ತಹಶೀಲ್ದಾರ್ ಗೈರುಹಾಜರಾಗಿದ್ದಕ್ಕೆ ದಲಿತ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಂಗವಾಗಿ ಸಂವಿಧಾನದ ಪೀಠಿಕೆಯ ಭಾವಚಿತ್ರ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಸಭೆ ಆರಂಭವಾಗುತ್ತಿದ್ದಂತೆ ದಲಿತ ಸಂಘಟನೆಗಳ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ತಾಲ್ಲೂಕು ಮಟ್ಟದ ಹಲವು ಅಧಿಕಾರಿಗಳು ಕಾರ್ಯಕ್ರಮಕ್ಕೆ ಗೈರಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವ ದಿನಾಚರಣೆಗೆ ಸಮರ್ಪಕವಾಗಿ ಆಹ್ವಾನ ನೀಡದೆ ಕಾಟಾಚಾರಕ್ಕೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವದ ಪಿತಾಮಹರಿಗೆ ಗೌರವ ಸಲ್ಲಿಸುವ ದಿನದಂದೇ ಜವಾಬ್ದಾರಿಯುತ ಅಧಿಕಾರಿಗಳು ಗೈರಾಗಿರುವುದು ಖಂಡನೀಯ. ಗೈರುಹಾಜರಾದ ಅಧಿಕಾರಿಗಳಿಗೆ ಕೂಡಲೇ ನೋಟಿಸ್ ಜಾರಿ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಯೋಜಕ ಬಸವಣ್ಣ ಹಾಗೂ ಜನಸಂಗ್ರಾಮ ಪರಿಷತ್ ಗೌರವಾಧ್ಯಕ್ಷ ನಗರ್ಲೆ ವಿಜಯಕುಮಾರ್ ಆಗ್ರಹಿಸಿದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಗಳೇ ಕಾರ್ಯಕ್ರಮಕ್ಕೆ ಗೈರಾಗಿರುವುದು ಸರಿಯಲ್ಲ. ಇಂತಹ ನಡೆ ಪ್ರಜಾಪ್ರಭುತ್ವದ ಮೇಲಿನ ಅವರ ಬದ್ಧತೆಯನ್ನೇ ಪ್ರಶ್ನಿಸುವಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ತಹಶೀಲ್ದಾರ್ ಗ್ರೇಡ್–2 ನಂದಕಿಶೋರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗು, ಕಂದಾಯ ಆಡಳಿತ ಅಧಿಕಾರಿ ರಾಜು, ದಸಂಸ ಸಂಚಾಲಕ ಶಂಕರಪುರ ಸುರೇಶ್, ಹಗಿನವಾಳು ಚಿಕ್ಕಣ್ಣ, ದೇವರಸನಹಳ್ಳಿ ಪುಟ್ಟಸ್ವಾಮಿ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
    3
    ಪ್ರಜಾಪ್ರಭುತ್ವ ದಿನಾಚರಣೆಗೆ ಶಾಸಕರು, ತಹಶೀಲ್ದಾರ್ ಗೈರು.. ಅಧಿಕಾರಿಗಳ ಗೈರಿಗೆ ದಸಂಸ ಆಕ್ರೋಶ — ಕಾಟಾಚಾರದ ಆಚರಣೆ ಆರೋಪ
ನಂಜನಗೂಡು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ತಹಶೀಲ್ದಾರ್ ಕಛೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಕಾರ್ಯಕ್ರಮಕ್ಕೆ ಶಾಸಕರು ಹಾಗೂ ತಹಶೀಲ್ದಾರ್ ಗೈರುಹಾಜರಾಗಿದ್ದಕ್ಕೆ ದಲಿತ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಂಗವಾಗಿ ಸಂವಿಧಾನದ ಪೀಠಿಕೆಯ ಭಾವಚಿತ್ರ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಸಭೆ ಆರಂಭವಾಗುತ್ತಿದ್ದಂತೆ ದಲಿತ ಸಂಘಟನೆಗಳ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ತಾಲ್ಲೂಕು ಮಟ್ಟದ ಹಲವು ಅಧಿಕಾರಿಗಳು ಕಾರ್ಯಕ್ರಮಕ್ಕೆ ಗೈರಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಪ್ರಜಾಪ್ರಭುತ್ವ ದಿನಾಚರಣೆಗೆ ಸಮರ್ಪಕವಾಗಿ ಆಹ್ವಾನ ನೀಡದೆ ಕಾಟಾಚಾರಕ್ಕೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವದ ಪಿತಾಮಹರಿಗೆ ಗೌರವ ಸಲ್ಲಿಸುವ ದಿನದಂದೇ ಜವಾಬ್ದಾರಿಯುತ ಅಧಿಕಾರಿಗಳು ಗೈರಾಗಿರುವುದು ಖಂಡನೀಯ. ಗೈರುಹಾಜರಾದ ಅಧಿಕಾರಿಗಳಿಗೆ ಕೂಡಲೇ ನೋಟಿಸ್ ಜಾರಿ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಯೋಜಕ ಬಸವಣ್ಣ ಹಾಗೂ ಜನಸಂಗ್ರಾಮ ಪರಿಷತ್ ಗೌರವಾಧ್ಯಕ್ಷ ನಗರ್ಲೆ ವಿಜಯಕುಮಾರ್ ಆಗ್ರಹಿಸಿದರು.
ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಗಳೇ ಕಾರ್ಯಕ್ರಮಕ್ಕೆ ಗೈರಾಗಿರುವುದು ಸರಿಯಲ್ಲ. ಇಂತಹ ನಡೆ ಪ್ರಜಾಪ್ರಭುತ್ವದ ಮೇಲಿನ ಅವರ ಬದ್ಧತೆಯನ್ನೇ ಪ್ರಶ್ನಿಸುವಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ತಹಶೀಲ್ದಾರ್ ಗ್ರೇಡ್–2 ನಂದಕಿಶೋರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗು, ಕಂದಾಯ ಆಡಳಿತ ಅಧಿಕಾರಿ ರಾಜು, ದಸಂಸ ಸಂಚಾಲಕ ಶಂಕರಪುರ ಸುರೇಶ್, ಹಗಿನವಾಳು ಚಿಕ್ಕಣ್ಣ, ದೇವರಸನಹಳ್ಳಿ ಪುಟ್ಟಸ್ವಾಮಿ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
    user_Mysore update
    Mysore update
    Voice of people Mysuru, Karnataka•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.